Tag: ದೇವನಹಳ್ಳಿ

  • Bengaluru | ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು

    Bengaluru | ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು

    ಬೆಂಗಳೂರು: ಹಿಟ್ ಅಂಡ್ ರನ್‌ಗೆ (Hit And Run) ಫ್ಲೈಓವರ್ (Flyover) ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ (Devanahalli) ಸಮೀಪದ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ನಡೆದಿದೆ.

    ನೇತ್ರಾವತಿ (31) ಹಿಟ್ ಅಂಡ್ ರನ್‌ಗೆ ಬಲಿಯಾದ ಮಹಿಳೆ. ನೇತ್ರಾವತಿ ಹಾಗೂ ಪತಿ ಬೈಕಿನಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಹೋಗುತ್ತಿದ್ದರು. ಈ ವೇಳೆ ಒನ್ ವೇನಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿಯಾಗಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್‌ನಲ್ಲಿದ್ದ ನೇತ್ರಾವತಿ ಫ್ಲೈಓವರ್ ಕೆಳಗೆ ಬಿದ್ದಿದ್ದಾರೆ. ಫ್ಲೈಓವರ್ ಮೇಲಿಂದ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ನೇತ್ರಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಬೈಕ್‌ನ ಎಡಭಾಗಕ್ಕೆ ಬಿದ್ದು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಂಜುನಾಥಸ್ವಾಮಿಗೆ ಬೆದರಿಕೆ – ತುಮಕೂರಿನಲ್ಲಿ ಯೂಟ್ಯೂಬರ್‌ ಅರೆಸ್ಟ್‌

    ಅಪಘಾತ ಮಾಡಿ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ದೇವನಹಳ್ಳಿ ಸಂಚಾರಿ ಪೊಲೀಸರು ಕಾರು ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಸಂಬಂಧ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೆ.3-4ಕ್ಕೆ ಜಿಎಸ್‌ಟಿ ಕೌನ್ಸಿಲ್ ಸಭೆ; ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ ಸಭೆಯಲ್ಲಿ ಅಂತಿಮ ನಿರ್ಧಾರ

  • ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

    ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

    ಬೆಂಗಳೂರು: 3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ಅನ್ನು ರಾಜ್ಯ ಸರ್ಕಾರ ರದ್ದು ಮಾಡೋದಾಗಿ ಘೋಷಣೆ ಮಾಡಿದೆ.

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರು, ಹೋರಾಟಗಾರರು, ಸಂಘಟನೆಗಳ ಸಭೆಯಲ್ಲಿ ನೋಟಿಫಿಕೇಶನ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿತ್ತು. ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ರೈತರು ಹೋರಾಟ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಳು ಮುಂದುವರೆಸುವ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನ ರದ್ದು ಮಾಡುತ್ತಿರೋದಾಗಿ ತಿಳಿಸಿದರು.ಇದನ್ನೂ ಓದಿ: ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

    ಒಂದು ವೇಳೆ ರೈತರು ಸ್ವಯಂ ಪ್ರೇರಿತರಾಗಿ ಜಮೀನು ಕೊಟ್ಟರೆ ಆ ಭೂಮಿ ಸರ್ಕಾರ ಪಡೆಯಲಿದೆ. ಜೊತೆಗೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಅಭಿವೃದ್ಧಿಪಡಿಸಿದ 50% ಭೂಮಿಯನ್ನು ಜಮೀನು ಕೊಡುವ ರೈತರಿಗೆ ಕೊಡಲಾಗುತ್ತದೆ. ಸರ್ಕಾರದ ಈ ನಿರ್ಧಾರ ದೇವನಹಳ್ಳಿ ಜಮೀನಿಗೆ ಮಾತ್ರ ಅನ್ವಯ ಆಗಲಿದೆ ಎಂದು ಸ್ಪಷ್ಟಪಡಿಸಿದರು.

    ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್, ಇದು 3 ವರ್ಷಗಳ ಪ್ರತಿಭಟನೆಗೆ ಸಿಕ್ಕ ಜಯ. ಇದು ರೈತರ ಜಯ ಇದು. ಸಂಘಟನೆಗಳ ಜಯ. ಐತಿಹಾಸಿಕ ಚಳುವಳಿಯ ಜಯ ಇದು. ಸರ್ಕಾರಕ್ಕೆ, ಸಿಎಂಗೆ ಧನ್ಯವಾದಗಳನ್ನು ಹೇಳ್ತೀನಿ. ದೇವನಹಳ್ಳಿ ಹೋರಾಟಕ್ಕೆ ಜಯವಾಗಿದೆ. ಮುಂದಿನ ಹೋರಾಟದ ಬಗ್ಗೆ ಮುಂದೆ ನೋಡೋಣ ಎಂದರು.

    ರೈತ ನಾಯಕ ಬಡಗಲಪುರ ನಾಗೇಂದ್ರ ಮಾತಾಡಿ, ಇದೊಂದು ಸಂಘಟಿತ ಹೋರಾಟ. ಎಲ್ಲರು ಒಟ್ಟಾಗಿ ಹೋರಾಟ ಮಾಡಿದ್ವಿ. ಇದೊಂದು ಐತಿಹಾಸಿಕ ಜಯ. ಯಾವುದೇ ಕೃಷಿ ಭೂಮಿಗೆ ಸಮಸ್ಯೆ ಮಾಡಿದ್ರೆ ಹೋರಾಟ ಮಾಡ್ತೀವಿ. ಫಲವತ್ತಾದ ಭೂಮಿ ಸ್ವಾಧೀನ ಮಾಡಿಕೊಳ್ಳಬಾರದು. ಭೂಮಿ ಬಲಾತ್ಕಾರವಾಗಿ ವಶ ಮಾಡಿಕೊಂಡರೇ ಹೋರಾಟ ಮಾಡ್ತೀವಿ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ ಇದು. ಇಲ್ಲಿ ಯಾವುದೇ ಮಾಫಿಯಾದ ಕೈಗಳು ಇಲ್ಲ. ಇದು ರೈತರು, ಮಹಿಳೆಯರ ಹೋರಾಟಕ್ಕೆ ಸಿಕ್ಕ ಜಯ ಎಂದರು. ಇದನ್ನೂ ಓದಿ: ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

  • ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 30 ಲಕ್ಷ ದೋಚಿದ ಖದೀಮರು!

    ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 30 ಲಕ್ಷ ದೋಚಿದ ಖದೀಮರು!

    ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ (ATM) ಹಣ (Money) ಕದ್ದೋಯ್ದ ಘಟನೆ ಸೂಲಿಬೆಲೆಯ (Sulibele) ದೇವನಹಳ್ಳಿ ಕ್ರಾಸ್‍ನಲ್ಲಿ ನಡೆದಿದೆ.

    ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಕಳ್ಳತನ ನಡೆದಿದೆ. ಎಟಿಎಂನಲ್ಲಿ 30 ಲಕ್ಷ ರೂ.ಗೂ ಹೆಚ್ಚು ಹಣ ಕಳ್ಳತನ ಮಾಡಲಾಗಿದೆ. ಎಟಿಎಂನ ಶೆಟರ್‌ನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿ, ದುಷ್ಕರ್ಮಿಗಳು ಒಳಗೆ ನುಗ್ಗಿದ್ದಾರೆ.

    ಎಟಿಎಂ ಒಳಗೆ ತಮ್ಮ ಮುಖ ಕಾಣದಂತೆ ಸಿಸಿಟಿವಿಗೆ ಸ್ಪ್ರೇ ಬಳಸಿ ಬಣ್ಣ ಹಾಕಿದ್ದಾರೆ. ಬಳಿಕ ಕಾರಿನಿಂದಲೇ ಗ್ಯಾಸ್ ಕಟರ್ ಬಳಸಿ ಶೆಟರ್ ಕತ್ತರಿಸಲಾಗಿದೆ. ಆಂಧ್ರ ಪ್ರದೇಶದ ನೋಂದಣಿ ಸಂಖ್ಯೆಯ ಕಾರಿನಲ್ಲಿ ದುಷ್ಕರ್ಮಿಗಳು ಬಂದಿರುವುದು ತಿಳಿದು ಬಂದಿದೆ. ಎಟಿಎಂ ದರೋಡೆ ನಂತರ ಹೊಸಕೋಟೆ ಮಾರ್ಗದಲ್ಲಿ ದುಷ್ಕರ್ಮಿಗಳು ಭಾಗಿಯಾಗಿದ್ದಾರೆ.

    ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‍ಪಿ ಸಿ.ಕೆ ಬಾಬಾ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗಣೇಶ ಹಬ್ಬದಲ್ಲಿ ಡ್ಯಾನ್ಸ್ ವಿಚಾರಕ್ಕೆ ಗಲಾಟೆ – 3 ವರ್ಷಗಳ ದ್ವೇಷಕ್ಕೆ ಸೆಕ್ಯೂರಿಟಿ ಗಾರ್ಡ್ ಕೊಲೆ

    ಗಣೇಶ ಹಬ್ಬದಲ್ಲಿ ಡ್ಯಾನ್ಸ್ ವಿಚಾರಕ್ಕೆ ಗಲಾಟೆ – 3 ವರ್ಷಗಳ ದ್ವೇಷಕ್ಕೆ ಸೆಕ್ಯೂರಿಟಿ ಗಾರ್ಡ್ ಕೊಲೆ

    ಬೆಂಗಳೂರು: ಗಣೇಶ ಹಬ್ಬದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅದೇ ದ್ವೇಷವಿಟ್ಟುಕೊಂಡು ಸೆಕ್ಯೂರಿಟಿ ಗಾರ್ಡ್‌ನನ್ನು ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರದ (Bengaluru Rural) ದೇವನಹಳ್ಳಿಯಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ದೇವನಹಳ್ಳಿ (Devanahalli) ತಾಲೂಕಿನ ಬೋವಿಪಾಳ್ಯದ ನಿವಾಸಿ ಶ್ರೀನಿವಾಸ್ (32) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಮಂಗನಬಾವು ಸೋಂಕು 125ಕ್ಕೆ ಏರಿಕೆ – ಶಾಲೆಗೆ 3 ದಿನ ರಜೆ ಘೋಷಣೆ

    ಶ್ರೀನಿವಾಸ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಗೋವಿಂದ್ ಮತ್ತು ಶ್ರೀನಿವಾಸ್ ಮಧ್ಯೆ 3 ವರ್ಷಗಳಿಂದ ಗ್ಯಾಂಗ್ ವಾರ್ ನಡೆಯುತ್ತಿತ್ತು. ಗ್ರಾಮದಲ್ಲಿ ಹೆಸರು ಮಾಡಬೇಕು ಎಂಬ ಉದ್ದೇಶದಿಂದ ಗೋವಿಂದ್ ಗುಂಪೊಂದನ್ನು ಕಟ್ಟಿಕೊಂಡಿದ್ದ. ಕಳೆದ ವರ್ಷ ಗಣೇಶ ಹಬ್ಬದ ಸಂದರ್ಭದಲ್ಲಿ ಗೋವಿಂದ್ ಮತ್ತು ಶ್ರೀನಿವಾಸ್ ನಡುವೆ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗಲಾಟೆಯಾಗಿತ್ತು. ಇದೇ ವಿಚಾರ ಹಾಗೂ ಮೂರು ವರ್ಷಗಳ ದ್ವೇಷದಿಂದ ನಾಲ್ವರು ಸ್ನೇಹಿತರು ಸೇರಿ ಬೋವಿಪಾಳ್ಯ ಹೊರವಲಯದ ಎಂಬಾಸಿ ಕಂಪನಿ ಜಾಗದಲ್ಲಿ ಚಾಕು, ಮಚ್ಚಿನಿಂದ ಚುಚ್ಚಿ ಬರ್ಬರವಾಗಿ ಕೊಲೆಮಾಡಿದ್ದಾರೆ.

    ಕೊಲೆ ಮಾಡಿದ ನಾಲ್ವರಾದ ಗೋವಿಂದರಾಜು, ತಿಮ್ಮರಾಜು, ಮನೋಜ್ ಹಾಗೂ ಮಂಜುನಾಥ್ ಪೊಲೀಸರಿಗೆ ಶರಣಾಗಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: BBK 11: ಅವಾಚ್ಯ ಪದ ಬಳಸಿದ ರಜತ್‌ಗೆ ಕಳಪೆ ಪಟ್ಟ- ಇನ್ಮುಂದೆ ಆಟ ಶುರು ಎಂದ ಸ್ಪರ್ಧಿ

  • ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ಸಚಿವ ಮುನಿಯಪ್ಪ ಮನೆ ಮುಂದೆ ರೈತರ ಪ್ರತಿಭಟನೆ

    ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ಸಚಿವ ಮುನಿಯಪ್ಪ ಮನೆ ಮುಂದೆ ರೈತರ ಪ್ರತಿಭಟನೆ

    ಬೆಂಗಳೂರು: ದೇವನಹಳ್ಳಿಯ (Devanahalli) ಚನ್ನರಾಯಪಟ್ಟಣ (Channarayapatna) ಸೇರಿ ಸುತ್ತಮುತ್ತ 13 ಹಳ್ಳಿಗಳ 1,777 ಎಕರೆ ಭೂಸ್ವಾಧೀನ ವಿರೋಧಿಸಿ ದೇವನಹಳ್ಳಿ ರೈತರು ಬೆಂಗಳೂರಿನ ಸಂಜಯ್ ನಗರದಲ್ಲಿರುವ ಸಚಿವ ಮುನಿಯಪ್ಪ (Muniyappa) ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸಚಿವರ ಮನೆಯ ಮುಂದೆ ಚಾಪೆ ಹಾಕಿಕೊಂಡು ಧರಣಿ ಕೂತಿದ್ದಾರೆ.

    ದೇವನಹಳ್ಳಿಯ ಚನ್ನರಾಯಪಟ್ಟಣ ಸೇರಿ 13 ಹಳ್ಳಿಗಳಲ್ಲಿ 1,777 ಎಕರೆ ಜಾಗವನ್ನು ಕೆಐಎಡಿಬಿ ಭೂಸ್ವಾಧೀನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ರೈತರು 950 ದಿನಗಳಿಂದ ದೇವನಹಳ್ಳಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರು. ಲೋಕಸಭೆ ಚುನಾವಣೆ ವೇಳೆ ಭೂಸ್ವಾಧೀನ ಮಾಡುವುದಿಲ್ಲ ಎಂದು ಸಚಿವ ಮುನಿಯಪ್ಪ ರೈತರಿಗೆ ಭರವಸೆ ಕೊಟ್ಟಿದ್ದರು. ಆದರೆ ನಿನ್ನೆ (ನ.6) ಏಕಾಏಕಿಯಾಗಿ ರೈತರಿಗೆ ಕೆಐಎಡಿಬಿ ನೋಟಿಸ್ ನೀಡಿದೆ. ಇದರಿಂದ ಕೋಪಗೊಂಡ ರೈತರು ಸಚಿವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ವಿಷ್ಯ ಬೇಕಾದರೂ ಕೊಡಿ ಆದರೆ ನಾವು ಯಾವುದೇ ಕಾರಣಕ್ಕೂ ಜಮೀನು ಕೊಡುವುದಿಲ್ಲ ಎಂದು ಘೋಷಣೆ ಕೂಗಿದರು.ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

    ರೈತರ ಹೋರಾಟಕ್ಕೆ ಮಣಿದು ಮನೆಯಿಂದ ಹೊರಗೆ ಬಂದ ಸಚಿವ ಮುನಿಯಪ್ಪ ರೈತರ ಮನವೊಲಿಕೆ ಮಾಡಿದರು. ನೋಟಿಸ್ ಕೊಟ್ಟಿರುವುದು ನನ್ನ ಗಮನಕ್ಕೆ ಬಂದಿಲ್ಲ. ಕೂಡಲೇ ನೋಟಿಸ್ ವಾಪಸ್ ಪಡೆಯುತ್ತೇನೆ. ಈ ತಿಂಗಳ ಅಂತ್ಯದ ಒಳಗೆ ಸಮಸ್ಯೆ ಬಗೆಹರಿಸುತ್ತೇವೆ. ಅಲ್ಲಿಯವರೆಗೂ ಯಾವುದೇ ಪ್ರಕ್ರಿಯೆ ನಡೆಸುವುದಿಲ್ಲ ಎಂದು ಭರವಸೆ ನೀಡಿದರು.

    ಸಚಿವರ ಭರವಸೆಗೆ ಒಪ್ಪದ ರೈತರು ಲಿಖಿತ ರೂಪದಲ್ಲಿ ಭರವಸೆ ಕೊಡಬೇಕು ಎಂದು ಆಗ್ರಹಿಸಿ ಧರಣಿ ಮುಂದುವರೆಸಿದರು. ಬಳಿಕ ಕೆಐಎಡಿಬಿ ಅಧಿಕಾರಿಗಳು ಕೊಟ್ಟಿರುವ ನೋಟಿಸ್ ವಾಪಸ್ ಪಡೆದಿರುವುದಾಗಿ ಲಿಖಿತ ರೂಪದಲ್ಲಿ ರೈತರಿಗೆ ಭರವಸೆ ನೀಡಿದರು.ಇದನ್ನೂ ಓದಿ: ಪಿಜಿಸಿಇಟಿ ಆಪ್ಷನ್‌ ದಾಖಲಿಸಲು ನ.8 ಕೊನೆ ದಿನ – ಕೆಇಎ

  • ಚಿಕ್ಕಬಳ್ಳಾಪುರ| ಭಾರೀ ಮಳೆಗೆ ಕಾಲುವೆಯಲ್ಲಿ ಕೊಚ್ಚಿಹೋಯಿತು ಎರಡು ಕಾರು

    ಚಿಕ್ಕಬಳ್ಳಾಪುರ| ಭಾರೀ ಮಳೆಗೆ ಕಾಲುವೆಯಲ್ಲಿ ಕೊಚ್ಚಿಹೋಯಿತು ಎರಡು ಕಾರು

    ಚಿಕ್ಕಬಳ್ಳಾಪುರ: ಭಾರೀ ಮಳೆಗೆ ಎರಡು ಕಾರುಗಳು ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬೆಂಗಳೂರು-ಹೈದರಾಬಾದ್ (Bengaluru- Hyderabad) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಸೋಮವಾರ ರಾತ್ರಿ ಸುರಿದ ಮಳೆಗೆ ಕಾರುಗಳು ಕಾಲುವೆಯಲ್ಲಿ ಕೊಚ್ಚಿ ಹೋಗಿವೆ. ದೇವನಹಳ್ಳಿ (Devanahalli) ತಾಲೂಕಿನ ನಾಗಾರ್ಜುನಾ ಕಾಲೇಜು ಸಮೀಪದ ಅಂಡರ್ ಪಾಸ್‌ನಲ್ಲಿ ಒಂದು ಮಾರುತಿ ಆಸ್ಟರ್ ಕಾರು ಸಂಪೂರ್ಣ ಮುಳುಗಡೆಯಾಗಿದೆ. ಇನ್ನೊಂದು ಕಾರು ದಡದಲ್ಲಿ ಸಿಲುಕಿಕೊಂಡಿದೆ. ಇದನ್ನೂ ಓದಿ: ಪ್ರದೀಪ್ ಈಶ್ವರ್‌ಗೆ ಸಂತೆಯಲ್ಲಿ ಒಳ್ಳೆ ಬಳೆ ಕೊಡಿಸ್ತೀನಿ – ಸಂಸದ ಸುಧಾಕರ್

    ಭಾರಿ ಮಳೆಗೆ ರಸ್ತೆಯಲ್ಲಿ ನೀರು ತುಂಬಿತ್ತು. ಹುರಳಗುರ್ಕಿ ಗ್ರಾಮದ ಕಾರಿನ ಮಾಲೀಕ ಆಸ್ಪತ್ರೆಗೆ ತೆರಳುತ್ತಿದ್ದಾಗ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಷತ್ 6 ಜನ ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ದೇವನಹಳ್ಳಿ- ಚಿಕ್ಕಬಳ್ಳಾಪುರ (Chikkaballapura) ಗಡಿಯಲ್ಲಿ ಹರಿದು ಹೋಗುವ ಕಾಲುವೆಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಜಾಸೀಟ್ ಅಭಿವೃದ್ಧಿ ಹೆಸರಿನಲ್ಲಿ ಕೋಟಿ ಕೋಟಿ ಅವ್ಯವಹಾರ‌‌‌ ಆರೋಪ – ಖುದ್ದು ಫೀಲ್ಡಿಗಿಳಿದ ಲೋಕಾಯುಕ್ತ

  • ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

    ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

    ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಜನಪ್ರಿಯತೆಯಿಂದಾಗಿ ರಾಜಧಾನಿ ಬೆಂಗಳೂರಿನ ಹೊರಗೂ ಮೆಟ್ರೋ (Metro)  ರೈಲು ಸಂಪರ್ಕ ಸಾಧ್ಯತೆ ಮುನ್ನೆಲೆಗೆ ಬಂದಿದೆ.

    ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರು ಹೊಸ ಮೆಟ್ರೋ ಮಾರ್ಗಗಳನ್ನು ಆರಂಭಿಸಲು ಕರ‍್ಯಸಾಧ್ಯತಾ ವರದಿ ತಯಾರಿಗೆ ಮುಂದಾಗಿದ್ದಾರೆ. ಒಂದು ವೇಳೆ ಓಕೆ ಆದರೆ ಬೆಂಗಳೂರಿನ  (Benagluru) ಬಿಐಇಸಿಯಿಂದ ತುಮಕೂರಿಗೆ (Tumkuru)  ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಗೆ (Devanahaali) ಮೆಟ್ರೋ ಸಂಚಾರ ಶುರುವಾಗಬಹುದು. ಸರ‍್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕರ‍್ಯಸಾಧ್ಯತಾವರದಿ ತಯಾರಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ:  ಗ್ಯಾರಂಟಿ ಭಾರದ ನಡುವೆ ಸರ್ಕಾರಿ ಇಲಾಖೆಗಳಿಗೆ ಬಂಪರ್‌ – ಯಾವ ಇಲಾಖೆಗೆ ಎಷ್ಟು ಅನುದಾನ?

    ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟ್ರೋ ರೈಲು ಕರ‍್ಯಾಚರಣೆಯು ಲಾಭದಾಯಕವಾಗಿದ್ದು, ಹೆಮ್ಮೆಯ ಸಂಕೇತ ಎಂದು ಸಿಎಂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:  ಬೆಂಗಳೂರು ಸೇರಿ ಈ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟು

    ಪ್ರಸ್ತುತ ಕರ‍್ಯಾಚರಣೆಯಲ್ಲಿರುವ 74 ಕಿಲೋ ಮೀಟರ್‌ ಮಾರ್ಗದೊಂದಿಗೆ 2025ರ ಮಾರ್ಚ್‌  ವೇಳೆಗೆ ಹೆಚ್ಚುವರಿಯಾಗಿ 44 ಕಿಲೋ ಮೀಟರ್‌ ಮೆಟ್ರೋ ಮಾರ್ಗ  ಸರ‍್ಪಡೆಯಾಗಲಿದೆ ಎಂದರು. ಇದನ್ನೂ ಓದಿ:  Karnataka Budget 2024: ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ

  • ಪಟಾಕಿ ಕಿಡಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ

    ಪಟಾಕಿ ಕಿಡಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ

    ಚಿಕ್ಕಬಳ್ಳಾಪುರ: ಪಟಾಕಿ ಕಿಡಿಯಿಂದ ಗುಜರಿ ಅಂಗಡಿಯೊಂದು (Rummage Shop) ಹೊತ್ತಿ ಉರಿದ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

    ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯ ಮಂಡಿಬೆಲೆ ರೋಡ್ ಬಳಿ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಗುಜರಿ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಜಯಪುರ ಪಟ್ಟಣದ ಭರತ್ ನಗರದ ವಾಸಿ ಮುಬಾರಕ್ ಎಂಬವರಿಗೆ ಸೇರಿದ ಗುಜರಿ ಅಂಗಡಿ ಇದಾಗಿದ್ದು, ಪಟಾಕಿಯ ಕಿಡಿ ಗುಜರಿ ಅಂಗಡಿ ಮೇಲೆ ಬಿದ್ದು ಬೆಂಕಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಬೆಂಕಿ ಹಚ್ಚಿ ಲ್ಯಾಬ್ ಟೆಕ್ನಿಷಿಯನ್ ಹತ್ಯೆ ಪ್ರಕರಣ – ಇಬ್ಬರ ಬಂಧನ

    ದೀಪಾವಳಿ ಪ್ರಯುಕ್ತ ಪಟ್ಟಣದಾದ್ಯಂತ ಪಟಾಕಿ ಸಿಡಿಸುತ್ತಿದ್ದ ಸಂದರ್ಭ ಪಟಾಕಿ ಕಿಡಿ ಗುಜರಿ ಅಂಗಡಿಗೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಗುಜರಿ ಅಂಗಡಿಯ ಮಾಲೀಕ ಮುಬಾರಕ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಮಾಲೀಕರು, ರಾತ್ರಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದು, ಬೆಂಕಿ ಹೊತ್ತಿ ಉರಿಯುವ ಸಂದರ್ಭದಲ್ಲಿ ಬಂದು ನೋಡಿದಾಗ ಬೆಂಕಿ ಎಲ್ಲಾ ಕಡೆ ಆವರಿಸಿತ್ತು. ಸುಮಾರು ಎರಡರಿಂದ ಮೂರು ಲಕ್ಷ ಗುಜರಿ ಸಾಮಗ್ರಿಗಳು ನಷ್ಟವಾಗಿದೆ ಎಂದರು. ಸ್ಥಳಕ್ಕೆ ದೇವನಳ್ಳಿಯ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ MBBS ವಿದ್ಯಾರ್ಥಿನಿ ಆತ್ಮಹತ್ಯೆ

  • ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ – ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆ

    ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ – ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆ

    ಚಿಕ್ಕಬಳ್ಳಾಪುರ (ದೇವನಹಳ್ಳಿ): ದಿನೇ ದಿನೇ ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು (Love) ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ಬುಧವಾರ ತಡರಾತ್ರಿ ದೇವನಹಳ್ಳಿ (Devanahalli) ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.

    ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು (Vishwanathapura Police) ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ

    ಕೊಲೆ ಆರೋಪಿ ಮಂಜುನಾಥ್‌ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ತೀವ್ರಗೊಂಡ ವಿದ್ಯುತ್ ಅಭಾವ- ಸರ್ಕಾರದಿಂದ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್

    ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ- ಸಾವಿನ ಸಂಖ್ಯೆ 16ಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾತ್ರಿ ತಡವಾಗಿ ಬಂದ ಮಗನಿಗೆ ಬುದ್ಧಿವಾದ ಹೇಳಿದ ತಾಯಿ- ಮನನೊಂದು ಯುವಕ ಆತ್ಮಹತ್ಯೆ

    ರಾತ್ರಿ ತಡವಾಗಿ ಬಂದ ಮಗನಿಗೆ ಬುದ್ಧಿವಾದ ಹೇಳಿದ ತಾಯಿ- ಮನನೊಂದು ಯುವಕ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ (Devanahalli) ವಿಜಯಪುರ ಪಟ್ಟಣದಲ್ಲಿ ನಡೆದಿದೆ.

    ಮೃತ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ. ಯುವಕ ಮನೆಯಲ್ಲಿ ಮೌನವಾಗಿರುತ್ತಿದ್ದ. ಹೆಚ್ಚಾಗಿ ಮೊಬೈಲ್‍ನಲ್ಲೇ ಕಾಲ ಕಳೆಯುತ್ತಿದ್ದ. ಈ ವಿಚಾರವಾಗಿ ಅವನ ತಾಯಿ ಹಲವಾರು ಬಾರಿ ಬುದ್ಧಿವಾದ ಹೇಳಿದ್ದರು. ಅಲ್ಲದೇ ಬುಧವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದಾನೆ. ಇದಕ್ಕಾಗಿ ಯುವಕನ ತಾಯಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿ ಬುದ್ಧಿವಾದ ಹೇಳಿದ್ದರು. ಬಳಿಕ ರಾತ್ರಿ ಊಟ ಮಾಡಿ, ತನ್ನ ಕೋಣೆಯ ಒಳಗೆ ಹೋಗಿದ್ದ. ಇದನ್ನೂ ಓದಿ: ಸೇನೆಗೆ ಪ್ರಬಲ ಶಸ್ತ್ರಾಸ್ತ್ರಗಳ ಬಲ ನೀಡಿದ್ದ DRDO ಮಾಜಿ ಮುಖ್ಯಸ್ಥ ನಿಧನ

    ಬೆಳಗ್ಗೆ 7 ಗಂಟೆಯಾದರೂ ಬಾಗಿಲು ತೆರೆಯದಿದ್ದಾಗ ಯುವಕನ ಸಹೋದರ ಬಾಗಿಲು ಬಡಿದಿದ್ದಾನೆ. ಬಳಿಕ ಬೀಗ ಹಾಕುವ ರಂಧ್ರದಲ್ಲಿ ಇಣುಕಿ ನೋಡಿದಾಗ ನೇಣು ಬಿಗಿದು ಕೊಂಡಿರುವುದು ಕಂಡು ಬಂದಿದೆ. ತಕ್ಷಣ ತನ್ನ ಮಾವಂದಿರಿಗೆ ಮಾಹಿತಿ ನೀಡಿ, ಅಕ್ಕಪಕ್ಕದವರನ್ನು ಕರೆದು ಬಾಗಿಲು ತೆರೆಯಲು ಪ್ರಯತ್ನ ಮಾಡಿದ್ದಾರೆ. ಒಳಗಿನಿಂದ ಲಾಕ್ ಮಾಡಿದ್ದ ಕಾರಣ ತೆರೆಯಲು ಸಾಧ್ಯವಾಗಿಲ್ಲ. ಬಳಿಕ ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು – ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]