Tag: ದೇವರ ಆಟ ಬಲ್ಲವರಾರು

  • ಗಿನ್ನಿಸ್ ಗಾಗಿ ‘ದೇವರ ಆಟ ಬಲ್ಲವರಾರು’ ಟೀಮ್ ಮಾಡಿದ್ದೇನು?

    ಗಿನ್ನಿಸ್ ಗಾಗಿ ‘ದೇವರ ಆಟ ಬಲ್ಲವರಾರು’ ಟೀಮ್ ಮಾಡಿದ್ದೇನು?

    ನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿರುತ್ತದೆ. ಇಂತಹ ಸಿನಿಮಾಗಳು ಯಶಸ್ವಿ ಕೂಡ ಆಗಿದೆ.  ದೇವರ ಆಟ ಬಲ್ಲವರಾರು (Devara Aata Ballavararu) ಸಿನಿಮಾ ಕೂಡ ಚಿತ್ರೀಕರಣ ಹಂತದಲ್ಲೇ ಸಾಕಷ್ಟು ಭರವಸೆ ಮೂಡಿಸಿದೆ. ಈ ಚಿತ್ರ  ವೇಗದ ಸೆಟ್ ವರ್ಕ್ ನಿರ್ಮಾಣ ಮಾಡಿ ಮೊದಲ ಹಂತ ಗಿನ್ನಿಸ್ (Guinness Record) ದಾಖಲಿಸಿದೆ. ಇಗ ಎರಡನೇ ಹಂತದ ಗಿನ್ನಿಸ್ ಸರದಿ.

    ಮಡಿಕೇರಿಯಲ್ಲಿ (Madikeri) ಮಳೆಯಲ್ಲೇ ರಾತ್ರಿಯಿಂದ ಚಿತ್ರೀಕರಣ ಆರಂಭಿಸಿದೆ ಚಿತ್ರತಂಡ. ಸಿ.ವಿ. ರಾಮನ್ ಅವರು ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಜನಾರ್ದನ್ ಪಿ ಜಾನು (Janardhan P Janu) ಗಿನ್ನಿಸ್ ಪ್ರಕ್ರಿಯೆಗೆ ಸಹಿ ಹಾಕಿದ್ದಾರೆ. ಇದನ್ನೂ ಓದಿ:ಕೋಟಿ ಕೊಟ್ರೂ ಸಿನಿಮಾದಲ್ಲಿ ಕಿಸ್‌ ಮಾಡಲ್ಲ- ಪ್ರಿಯಾಮಣಿ ಖಡಕ್‌ ಉತ್ತರ

    ಅತೀ ವೇಗದ ಕಮರ್ಷಿಯಿಲ್ ಮೂವಿ ನಿರ್ಮಾಣ ಮಾಡಿ ಗಿನ್ನಿಸ್ ದಾಖಲೆ ಬರೆಯಲು ಚಿತ್ರತಂಡ ಮುಂದಾಗಿದೆ.  ಚಿತ್ರೀಕರಣದ ಸ್ಥಳದಲ್ಲಿಯೇ 30 ದಿನಗಳ ಕಾಲ ಗಿನ್ನಿಸ್ ವೀಕ್ಷೆಣೆಯ ತಂಡದ ಸದಸ್ಯರು ಉಪಸ್ಥಿತರಿರುತ್ತಾರೆ. ಇಂದಿನಿಂದ 30 ದಿನಗಳಲ್ಲಿ  ಚಿತ್ರೀಕರಣ ಪೂರ್ಣಗೊಳಿಸಿ, ಚಿತ್ರವನ್ನು ತರೆಗೆ ತರುವ ಪ್ರಕ್ರಿಯೆ ಆರಂಭವಾಗಿದೆ.

    ಮಧ್ಯರಾತ್ರಿ 12ಗಂಟೆಯಿಂದ ಶೂಟಿಂಗ್ ಆರಂಭಿವಾಗಿದೆ. ದಿನದ 24 ಗಂಟೆಯೂ ಶೂಟಿಂಗ್, ಲೈವ್ ಎಡಿಟಿಂಗ್, ರೀರೆಕಾರ್ಡಿಂಗ್ ಎಲ್ಲಾ ಕಾರ್ಯಗಳು ಚಿತ್ರೀಕರಣ ಸ್ಥಳದಲ್ಲಿಯೇ ನಡೆಸಲು ಸಿದ್ಧತೆಯಾಗಿದೆ.  ಯಾವುದೇ ಅಡೆತಡೆ ಯಾಗದಂತೆ ಯೋಜನೆ ಹಾಕಿಕೊಂಡು ಚಿತ್ರಿಕರಣ ಆರಂಭಿಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಒಟ್ಟು 4 ಕ್ಯಾಮರಗಳು, 150 ಎಕರೆ ವಿಸ್ತೀರ್ಣದ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ವಿಶ್ವನಾಥ್

    ‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ವಿಶ್ವನಾಥ್

    ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ ‘ದೇವರ ಆಟ ಬಲ್ಲವರಾರು’ (Devara Aata Ballavaraaru) ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ ‘ಫಿರಂಗಿ ಪುರ ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ (Janardhan P Jani) ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಲು ಹೊರಟಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

    ನಾನು ಈ ಹಿಂದೆ ಫಿರಂಗಿ ಪುರ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ತಮ್ಮನ್ನು ಭೇಟಿ ಮಾಡಿದ್ದೆ. ಈಗ ದೇವರ ಆಟ ಬಲ್ಲವರಾರು ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಇದು 1975 ರ ಕಾಲಘಟ್ಟದಲ್ಲಿ ನಡೆಯುವ ಕಥೆ.  ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಎಲ್ಲಾ ಕೆಲಸಗಳನ್ನು ಒಂದು ತಿಂಗಳೊಳಗೆ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಚಿತ್ರವನ್ನು ತೆರೆಗೆ ತರಬೇಕು. ನಮ್ಮ ಚಿತ್ರ ಗಿನ್ನಿಸ್ ರೆಕಾರ್ಡ್ ಆಗಬೇಕು ಎಂಬುದು ನನ್ನ ಆಸೆ. ಈ ಕುರಿತು ನಾನು, ನನ್ನ ತಂಡ ಸುಮಾರು ಆರು ತಿಂಗಳಿನಿಂದ ಶ್ರಮ ಪಡುತ್ತಿದ್ದೇವೆ. ಇಡೀ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯಲಿದೆ. ಅಲ್ಲಿನ ವಿಶಾಲವಾದ ಜಾಗದಲ್ಲಿ ಸೆಟ್ ಗಳನ್ನು ನಿರ್ಮಿಸಿ ಅದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ದಿನ ಸುಮಾರು 160 ಕ್ಕೂ ಹೆಚ್ಚು ಜನ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

    ಜೂನ್ 16 ರಿಂದ ಐದು ದಿನಗಳ ಕಾಲ ಚಿತ್ರೀಕರಣ ನಡೆಯುವ ಸ್ಥಳದಲ್ಲಿಯೇ ತಾಲೀಮು ನಡೆಸಲಿದ್ದೇವೆ.‌ ಆನಂತರ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ. ಹದಿನಾರು ದಿನದೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಚಿತ್ರೀಕರಣವಾದ ನಂತರ ಎಲ್ಲಾ ಕಾರ್ಯಗಳನ್ನು ಪೂರೈಸಿ ಜುಲೈ 20ರಂದು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ‌. ನಮ್ಮ ಕಾರ್ಯವೈಖರಿ ವೀಕ್ಷಿಸಲು ಆರು ಜನ ತೀರ್ಪುಗಾರರು‌ ಆ ಸ್ಥಳದಲ್ಲೇ ಇರುತ್ತಾರೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಅರ್ಜುನ್ ರಮೇಶ್, ಸಿಂಧೂ ಲೋಕನಾಥ್, ವರ್ಷ ವಿಶ್ವನಾಥ್, ಸಂಪತ್ ರಾಮ್, ಅರ್ಜುನ್, ಮೇದಿನಿ ಕೇಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ನಿರ್ದೇಶಕ ಜನಾರ್ದನ್ ಪಿ ಜಾನಿ ತಿಳಿಸಿದರು.

    ನಾನು ಈ ಹಿಂದೆ ನಾಲ್ಕು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಈ ಚಿತ್ರದ ನಿರ್ದೇಶಕರ ಕಾರ್ಯವೈಖರಿ ಕಂಡು ಆಶ್ಚರ್ಯವಾಯಿತು‌. ಈ ಚಿತ್ರಕ್ಕಾಗಿ ಎರಡು ತಿಂಗಳಲ್ಲಿ ಹದಿನಾಲ್ಕು ಕೆಜಿ ತೂಕ ಇಳಿಸಿದ್ದೇನೆ. ನೋಡಿದವರು ಕಂಡು ಹಿಡಿಯದಷ್ಟು ಸಣ್ಣ ಆಗಿದ್ದೇನೆ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸೂರಿ ನನ್ನ ಪಾತ್ರದ ಹೆಸರು ಎಂದರು ನಾಯಕ ಶನಿ ಧಾರಾವಾಹಿ ಖ್ಯಾತಿಯ (Arjun Ramesh) ಅರ್ಜುನ್ ರಮೇಶ್. ಇದನ್ನೂ ಓದಿ:ಯಶ್ ಸಿನಿಮಾಗಾಗಿ ಬೆಂಗಳೂರಿನಲ್ಲಿ ಬೀಡು ಬಿಟ್ಟ ಡೈರೆಕ್ಟರ್- ಇಲ್ಲಿದೆ ಗುಡ್ ನ್ಯೂಸ್

    ಮೂರು ವರ್ಷಗಳ ನಂತರ ನಾನು ನಟಿಸುತ್ತಿರುವ ಚಿತ್ರವಿದು. ರಚನ ನನ್ನ ಪಾತ್ರದ ಹೆಸರು‌‌. ನಾನು ಈವರೆಗೂ ಮಾಡಿರದ ಪಾತ್ರ ಈ ಚಿತ್ರದಲ್ಲಿ ಮಾಡುತ್ತಿದ್ದೇನೆ ಎಂದರು ನಾಯಕಿ ಸಿಂಧೂ ಲೋಕನಾಥ್ (Sindhu Loknath). ಇಂತಹ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಖುಷಿ ನಮಗಿದೆ ಎಂದರು ನಿರ್ಮಾಪಕರಾದ ಹನುಮಂತರಾಜು, ಲತಾ ರಾಗ ಹಾಗೂ ಸಹ ನಿರ್ಮಾಪಕ ಅನಿಲ್ ಜೈನ್‌.

    ಚಿತ್ರದಲ್ಲಿ ನಟಿಸುತ್ತಿರುವ ವರ್ಷ ವಿಶ್ವನಾಥ್,  ಅರ್ಜುನ್, ಸಂಪತ್ ರಾಮ್,  ಸಂಗೀತ ನಿರ್ದೇಶಕ ಶ್ಯಾನ್ ಎಲ್ ರಾಜ್, ಸಾಹಸ ನಿರ್ದೇಶಕ ಕುಂಗ್ಫು ಚಂದ್ರು ಹಾಗೂ ಕಾರ್ಯಕಾರಿ ನಿರ್ಮಾಪಕ ಶ್ರೀಪಾದ್ ಹೆಗಡೆ ಚಿತ್ರದ ಕುರಿತು ಮಾತನಾಡಿದರು. ದೇವರ ಆಟ ಬಲವರಾರು ಚಿತ್ರಕ್ಕೆ ಪ್ರತಿಯೊಬ್ಬ ಮನುಷ್ಯನ ಒಳಗೆ ಒಂದು ಕ್ರೂರ ಮೃಗ ಇದ್ದೆ ಇರುತ್ತದೆ ಎಂಬ ಅಡಿಬರಹವಿದೆ.