Tag: ದೇವರ ದರ್ಶನ

  • ಉಡುಪಿ ಕೃಷ್ಣನ ದರ್ಶನ ಪಡೆದ ಸಿಂಹಪ್ರಿಯ ಜೋಡಿ

    ಉಡುಪಿ ಕೃಷ್ಣನ ದರ್ಶನ ಪಡೆದ ಸಿಂಹಪ್ರಿಯ ಜೋಡಿ

    ವಾರದ ಹಿಂದೆ ಎಂಗೇಜ್ ಆದ ಸ್ಯಾಂಡ್ ವುಡ್ ನ ಜೋಡಿ ಧಾರ್ಮಿಕ ಪ್ರವಾಸ ಮಾಡುತ್ತಿದೆ. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ವಶಿಷ್ಠ ಸಿಂಹ ಮತ್ತು ಹರಿಪ್ರಿಯ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.

    ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್‌ವುಡ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿದರು. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ನಿಶ್ಚಿತಾರ್ಥ ನಂತರ ಕೆಲ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಸಿಂಹಪ್ರಿಯ ಸುತ್ತಾಡುತ್ತಿದ್ದಾರೆ. ಶೀಘ್ರ ಹಸೆಮಣೆ ಏರುವ ಬಗ್ಗೆ, ಮುಂದಿನ ಚಿತ್ರಗಳ ಬಗ್ಗೆ ಸ್ವಾಮೀಜಿ ಗೆ ವಶಿಷ್ಠಸಿಂಹ ಮಾಹಿತಿ ನೀಡಿದರು. ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ವೇಳೆ ಕಾಣಿಯೂರು ಶ್ರೀಗಳು ನವ ಜೋಡಿಯನ್ನು ಮಠದ ವತಿಯಿಂದ ಗೌರವಿಸಿದರು.

    Live Tv
    [brid partner=56869869 player=32851 video=960834 autoplay=true]

  • ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ

    ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಹಿಯಾಗಿ ಹೊಸ ವರ್ಷ ಸ್ವಾಗತಿಸಲಾಯಿತು. ಮೈಸೂರಿನ ವಿಜಯನಗರದ ಎರಡನೇ ಹಂತದಲ್ಲಿನ ಯೋಗನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ಲಾಡು ವಿತರಿಸಿ ಹೊಸವರ್ಷ ಸ್ವಾಗತಿಸಲಾಯಿತು.

    ಭಕ್ತರಿಗೆ ಒಟ್ಟಾರೆ 2 ಲಕ್ಷ ಲಾಡು ವಿತರಿಸಲಾಯಿತು. ಬದೇವಾಲಯದಲ್ಲಿ ಬೆಳಗಿನ ಜಾವ 4.30ರಿಂದ ಪೂಜಾ ಕೈಂಕರ್ಯಗಳು ನಡೆದಿದ್ದು, ಪೂಜೆ ನಂತರ ನೈವೇದ್ಯ ಪ್ರಸಾದವಾಗಿ ಭಕ್ತರಿಗೆ ಲಾಡು ವಿತರಿಸಲಾಯಿತು. ಮುಂಜಾನೆಯಿಂದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಎಲ್ಲ ಭಕ್ತರಿಗು ಲಾಡು ವಿತರಿಸಲಾಯಿತು.

    ಹೊಸ ವರ್ಷದ ಮೊದಲ ದಿನದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರ ಹರಿದು ಬಂದಿದೆ. ಭಕ್ತರು ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹೊಸ ವರ್ಷ ಸ್ವಾಗತಿಸಿದರು. ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತು ವರ್ಷದ ಮೊದಲ ದಿನ ದೇವಿಯ ದರ್ಶನ ಪಡೆದು ಪುನೀತರಾದರು.