ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಶುದ್ಧೀಕರಣ ಹಿನ್ನೆಲೆಯಲ್ಲಿ ನಗರದ ವಿವಿಧ ದೇವಸ್ಥಾನಗಳ ಸುತ್ತಮುತ್ತ 144 ನಿಷೇಧಾಜ್ಞೆ ಜಾರಿ ಮಾಡಿ ಎಂದು ನಗರ ಪೊಲೀಸ್ ಆಯುಕ್ತ ವೈ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ನಗರದ ಶ್ರೀ ರಾಮ ಮಂದಿರ, ಶ್ರೀ ಶರಣಬಸವೇಶ್ವರ ದೇವಸ್ಥಾನ ಮತ್ತು ಶ್ರೀ ವಿಶ್ವರಾಧ್ಯ ದೇವಸ್ಥಾನಗಳ ಸುತ್ತಲೂ ನಿಷೇಧಾಜ್ಞೆ ವಿಧಿಸಲಾಗಿದೆ. ನಗರದ ವಿವಿಧ ದೇವಸ್ಥಾನಗಳಿಂದ ಶಿವಲಿಂಗ ಶುದ್ಧೀಕರಣದ ಕಾರ್ಯಕ್ಕೆ ಅನೇಕ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತೆರಳುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಇದನ್ನೂ ಓದಿ: ಪ್ರಮೋದ್ ಮುತಾಲಿಕ್, ಚೈತ್ರಾ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿದ ಡಿಸಿ
ಇನ್ನೂ ಇದಕ್ಕೂ ಮುನ್ನ ಆಳಂದ ಪಟ್ಟಣದ ದರ್ಗಾದಲ್ಲಿನ ಶಿವಲಿಂಗ ಶುದ್ದೀಕರಣ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಬೆಳಗ್ಗೆಯಿಂದ ರಾತ್ರಿವರೆಗೆ ಮಧ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪ್ರಭಾರಿ ಡಿಸಿ ಡಾ. ದಿಲಿಸ್ ಸಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಗೆ ಬರುವಾಗ ಚೈತ್ರಾ ವಶಕ್ಕೆ – ಯಾದಗಿರಿ ಗಡಿ ದಾಟಿಸಿ ಬಿಟ್ಟ ಪೊಲೀಸರು
ಅಮರಾವತಿ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಿತ್ತಿರುವ ಜಿಲೇಬಿ ಪ್ರಸಾದದ ಬೆಲೆಯನ್ನು 100 ರಿಂದ 500 ರೂ.ಗೆ ಏರಿಕೆ ಮಾಡಲಾಗಿದೆ. ದೇವಸ್ಥಾನದಲ್ಲಿ ಆರ್ಜಿತ ಸೇವೆ ಸಂದರ್ಭದಲ್ಲಿ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ಈ ಗುರುವಾರ ವಿಶೇಷ ಪ್ರಸಾದವನ್ನು ತೆರೆದ ಕೌಂಟರ್‌ಗಳಿಂದ ಭಕ್ತರಿಗೆ ವಿತರಿಸಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಪ್ರಸಾದವನ್ನು ತಯಾರಿಸುವ ಸ್ಥಳವನ್ನು ತಿರುಮಲ ದೇವಾಲಯದ ಒಳಗಿನ ಪಾಡಿ ಪೋಟುನಿಂದ ದೇವಾಲಯದ ಹೊರಗೆ ಹೊಸದಾಗಿ ನಿರ್ಮಿಸಲಾದ ಬೂಂದಿ ಕಿಚನ್‍ಗೆ ಬದಲಾಯಿಸಲಾಗುತ್ತದೆ ಎಂದು ದೇವಸ್ಥಾನ ಟ್ರಸ್ಟ್ ಹೇಳಿದೆ.
ಟಿಟಿಡಿ ವಿಶ್ವದ ಅತ್ಯಂತ ಗೌರವಾನ್ವಿತ ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಸಬ್ಸಿಡಿ ದರದಲ್ಲಿ ಅಥವಾ ಕನಿಷ್ಠ ವೆಚ್ಚದ ಆಧಾರದ ಮೇಲೆ ಪ್ರಸಾದವನ್ನು ನೀಡಬೇಕು. ಆದರೆ ಇಲ್ಲಿ ಜಿಲೇಬಿಯನ್ನು ಮಾರಾಟ ಮಾಡುವ ಮೂಲಕ ಶೇ.239 ಲಾಭ ಗಳಿಸಲು ಪ್ರಯತ್ನಿಸುತ್ತಿದೆ. ಪ್ರಸಾದವು ಅದರ ತಯಾರಿಕೆಯ ವೆಚ್ಚಕ್ಕಿಂತ ಹೆಚ್ಚು, ಇದು ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಟಿಡಿಪಿ ಶಾಸಕ ತಿಳಿಸಿದ್ದಾರೆ. ಇದನ್ನೂ ಓದಿ:ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ- ವೆಲ್ಲೂರಿನಲ್ಲಿ ತೃತೀಯಲಿಂಗಿಗೆ ಗೆಲುವು
ಮಧ್ಯವರ್ತಿಗಳು ಕಾಳ ದಂಧೆಯಲ್ಲಿ ಒಂದು ಸೆಟ್‍ಗೆ 2,000 ರೂ.ನಂತೆ ಮಾರುವುದನ್ನು ತಡೆಯಲು ಜೂನ್ 2021 ರಲ್ಲಿ, ಟಿಟಿಡಿ ಆಡಳಿತದ ಉನ್ನತಾಧಿಕಾರಿಗಳು ಟ್ರಸ್ಟ್ ಬೋರ್ಡ್‍ಗೆ ಪ್ರಸ್ತುತ 100 ಕ್ಕೆ ಮಾರಾಟವಾಗುತ್ತಿರುವ ಜಿಲೇಬಿ ಮತ್ತು ಥೆಂಥೋಲ ಸೆಟ್ ಅನ್ನು 2,000ಕ್ಕೆ ಮಾರುವಂತೆ ಪ್ರಸ್ತಾಪವಿರಿಸಿದ್ದರು. ಜಿಲೇಬಿ ಮತ್ತು ಥೆಂಥೋಲ ಸೆಟ್ ತಯಾರಿಸಲು ಟಿಟಿಡಿ ಮಾಡುವ ವೆಚ್ಚ 147.50 ಆಗಿದೆ. ಇದನ್ನೂ ಓದಿ:ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ
ಟ್ರಸ್ಟ್ ಬೋರ್ಡ್ ಈ ಸಂಬಂಧ ವಿವರವಾದ ಚರ್ಚೆಯನ್ನು ನಡೆಸಿದೆ. ಬೆಲೆಯನ್ನು 500 ರೂ.ಗೆ ಹೆಚ್ಚಿಸಲು ನಿರ್ಧರಿಸಿತು. ಬೆಲೆ ಏರಿಕೆಯಿಂದಾಗಿ ಟಿಟಿಡಿ ಶೇ.239 ರಷ್ಟು ಹೆಚ್ಚುವರಿ ಲಾಭವನ್ನು ಪಡೆಯುತ್ತದೆ. ಟಿಟಿಡಿ ಟ್ರಸ್ಟ್ ಬೋರ್ಡ್ ಕಾಳದಂಧೆ ನಿಲ್ಲಿಸುವ ಉದ್ದೇಶದಿಂದ ಐದು ಪಟ್ಟು ಹೆಚ್ಚಿಸಿದ್ದಾರೆ ಎಂದು ಆಂಧ್ರಪ್ರದೇಶದ ಸಾರ್ವಜನಿಕ ಖಾತೆಗಳ ಸಮಿತಿಯ ಅಧ್ಯಕ್ಷ ಪಯ್ಯವುಲ ಕೇಶವ್ ಹೇಳಿದ್ದಾರೆ.
ಟಿಟಿಡಿ ಟ್ರಸ್ಟ್‍ನ ಮಾಜಿ ಸದಸ್ಯ ಜಿ.ಭಾನುಪ್ರಕಾಶ್ ರೆಡ್ಡಿ ಕೂಡ ಬೆಲೆ ಏರಿಕೆ ತಪ್ಪು ಎಂದಿದ್ದಾರೆ. ಭಕ್ತರಿಗೆ ಸಬ್ಸಿಡಿ ದರದಲ್ಲಿ ಪ್ರಸಾದವನ್ನು ಯಾವಾಗಲೂ ನೀಡಬೇಕು. ಆದರೆ ಇಲ್ಲಿ ಟಿಟಿಡಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣಕ್ಕೆ ಭಕ್ತರನ್ನು ಸುಲಿಗೆ ಮಾಡುತ್ತಿದೆ. ಇದು ಆಕ್ಷೇಪಾರ್ಹವಾಗಿದೆ ಎಂದು ವಿರೋಧಿಸಿದ್ದಾರೆ.
ರಾಂಚಿ: ಹಿಜಬ್, ಕೇಸರಿ ಶಾಲು ವಿವಾದ ಅಂತರಾಷ್ಟ್ರೀಯ ಪಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಹಿಂದೂ, ಮುಸ್ಲಿಂ ನಡುವೆ ಇರುವ ಬಾಂಧವ್ಯಕ್ಕೆ ಕುತ್ತು ತರುವಂತಾಗಿದೆ. ಆದರೆ ಜಾರ್ಖಂಡ್‍ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬ ಕೃಷ್ಣ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದು, ಮೆಚ್ಚುಗೆಗೆ ಪಾತ್ರವಾಗಿದ್ದಾನೆ.
ಜಾರ್ಖಂಡ್‍ನ ದುಮ್ಕಾದ ಮಹೇಶ್‍ಬಥನ್ ಉದ್ಯಮಿ ನೌಶಾದ್ ಶೇಖ್ ಶ್ರೀಕೃಷ್ಣನಿಂದ ಪ್ರಭಾವಿತರಾಗಿ ದೇವಸ್ಥಾನ ನಿರ್ಮಾಣ ಮಾಡಿದ್ದಾರೆ. ತಮ್ಮ ಸ್ವಂತ ಖರ್ಚಿನಿಂದ ಸುಮಾರು 42 ಲಕ್ಷ ರೂ. ಖರ್ಚು ಮಾಡಿ ದೇವಸ್ಥಾನವೊಂದನ್ನು ಕಟ್ಟಿಸಿದ್ದಾರೆ. 3 ವರ್ಷಗಳಲ್ಲಿ ಈ 42 ಲಕ್ಷ ರೂ. ವೆಚ್ಚದ ಕೃಷ್ಣನ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ಮುಸ್ಲಿಂ ಉದ್ಯಮಿ ಕಟ್ಟಿಸಿದ ಈ ದೇವಸ್ಥಾನದಲ್ಲಿ ಹಿಂದೂ ಪದ್ಧತಿಯಂತೆ 150 ಬ್ರಾಹ್ಮಣರಿಂದ ಪ್ರಾಣ-ಪ್ರತಿಷ್ಠೆ ನೆರವೇರಿಸಲಾಯಿತು. ಇದನ್ನೂ ಓದಿ: ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ
ಈ ಪ್ರದೇಶದಲ್ಲಿ ವಾಸಿಸುವ ಹೆಚ್ಚಿನ ಜನರು ಹಿಂದೂಗಳಾಗಿರುವುದರಿಂದ ಅವರಿಗಾಗಿ ಕೃಷ್ಣನ ದೇವಾಲಯವನ್ನು ನಿರ್ಮಿಸಲು ಶೇಖ್ ಯೋಚಿಸಿದರು. ಸೋಮವಾರ ದೇವಸ್ಥಾನದ ಪ್ರಾಣ-ಪ್ರತಿಷ್ಠೆ ನಡೆದಿದ್ದು, ಎಲ್ಲಾ ಸಮುದಾಯದ ಜನರು ಈ ದೇವಸ್ಥಾನಕ್ಕೆ ಆಗಮಿಸಿ, ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಕೃಷ್ಣ ಪರಮಾತ್ಮನೇ ನನ್ನ ಕನಸಿನಲ್ಲಿ ಬಂದು ತನಗಾಗಿ ದೇವಸ್ಥಾನವನ್ನು ನಿರ್ಮಿಸಲು ಪ್ರೇರೇಪಣೆ ನೀಡಿದ್ದಾನೆ ಎಂದು ಆ ಮುಸ್ಲಿಂ ಉದ್ಯಮಿ ಶೇಖ್ ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ
ಈ ಕುರಿತಾಗಿ ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಶೇಖ್, ಎಲ್ಲರಿಗೂ ದೇವರು ಒಬ್ಬನೇ. ದೇವಸ್ಥಾನ, ಮಸೀದಿ ಅಥವಾ ಚರ್ಚ್‍ನಲ್ಲಿ ಪೂಜಿಸುತ್ತಾರೆ. ನಾವು ಎಲ್ಲಿ ಪೂಜಿಸುತ್ತೇವೆ ಎಂಬುದು ಮುಖ್ಯವಲ್ಲ, ನಾವು ಎಷ್ಟು ಭಕ್ತಿಯನ್ನು ಹೊಂದಿದ್ದೇವೆ ಎಂಬುದು ಮುಖ್ಯವಾಗುತ್ತದೆ.
ಬೆಂಗಳೂರು: ಇನ್ಮುಂದೆ ದೇವಾಲಯಗಳಲ್ಲಿ ಹೆಚ್ಚು ಸೌಂಡ್ ಇರುವಂತಹ ಧ್ವನಿವರ್ಧಕ ಬಳಸುವಂತಿಲ್ಲ. ಪೂಜೆ ಸಂದರ್ಭದಲ್ಲಿ ಡಮರುಗ, ಧ್ವನಿವರ್ಧಕ, ಭಾರೀ ಸದ್ದಾಗುವ ಗಂಟೆ ಹೊಡೆಯದಂತೆ ಮುಜರಾಯಿ ಇಲಾಖೆಯಡಿಯ ದೇವಸ್ಥಾನಗಳಿಗೆ ನೋಟಿಸ್ ನೀಡಲಾಗಿದೆ.
ಮಾಲಿನ್ಯ ನಿಯಂತ್ರಣ ಮಂಡಳಿಯ ನಿರ್ದೇಶನದಂತೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಹೆಚ್ಚು ಸೌಂಡ್ ಬಂದ್ರೆ ಎರಡು ಬಾರಿ ದಂಡ ಹಾಕ್ತಾರೆ. ಮೂರನೇ ಬಾರಿಗೆ ಕೇಸ್ ದಾಖಲಿಸಿಕೊಳ್ತಾರೆ. ಇನ್ನೂ ದೇವಸ್ಥಾನಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೂಡ ನಡೆಸಲಿದ್ದಾರೆ. ಇದನ್ನೂ ಓದಿ: ನಿನ್ನೆ ಕೂಲಿ ಕೆಲಸ ಮಾಡುತ್ತಿದ್ದವ ಇಂದು ಮಾಡೆಲ್- ಅದೃಷ್ಟ ಅಂದ್ರೆ ಇದು
ಈಗಾಗಲೇ ಬೆಂಗಳೂರಿನ ಪ್ರಸಿದ್ಧ ದೊಡ್ಡಗಣಪತಿ, ಬನಶಂಕರಿ, ಮಿಂಟೋ ಆಂಜನೇಯ ಸ್ವಾಮಿ ದೇವಸ್ಥಾನಗಳಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದ್ದು, ನಮ್ಮ ಇಲಾಖೆಯಿಂದ ಯಾವುದೇ ನೊಟೀಸ್ ಕೊಟ್ಟಿಲ್ಲ ಅಂತ ಇಲಾಖೆಯ ಸೆಕ್ರೇಟರಿ ಹೇಳಿದ್ದಾರೆ. ನೊಟೀಸ್ ಪತ್ರದ ಸಂಖ್ಯೆ ನಮ್ಮ ಇಲಾಖೆಯದಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ: ರಾಜವಂಶಸ್ಥ ಯದುವೀರ್ ಒಡೆಯರ್
ಲಕ್ನೋ: ಉತ್ತರ ಪ್ರದೇಶದ ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ 65 ವರ್ಷದ ಭಕ್ತ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದ್ದು, ಇವರು ಮಥುರಾದ ನಿವಾಸಿಯಾಗಿದ್ದಾರೆ. ಶನಿವಾರ ಮಂದಿರದಲ್ಲಿ ಕುಸಿದು ಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಲಕ್ಷ್ಮಣ್ ಅವರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆತಂದ ವೇಳೆ ಅವರು ಮೃತಪಟ್ಟಿರುವುದಾಗಿ ವೃಂದಾವನದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ.ಎಸ್.ಕೆ.ಜೈನ್ ತಿಳಿಸಿದ್ದಾರೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ
ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಜನಸಂದಣಿಯ ಮಧ್ಯೆ ಲಕ್ಷ್ಮಣ್ ಅವರಿಗೆ ಉಸಿರುಗಟ್ಟಿದೆ. ನಂತರ ಅವರನ್ನು ತಕ್ಷಣ ಅಲ್ಲಿಂದ ಹೊರಕ್ಕೆ ಕರೆದೊಯ್ದರು. ಆದರೆ ದೇವಸ್ಥಾನದ ಹೊರಗೆ ಬರುವಾಗ ಪ್ರಜ್ಞೆ ತಪ್ಪಿದರು. ಹಾಗಾಗಿ ಆಸ್ಪತ್ರೆಗೆ ಕರೆದೊಯ್ದ ವೇಳೆ ವೈದ್ಯರು ಲಕ್ಷ್ಮಣ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಮೃತ ಸಂಬಂಧಿಕರು ಹೇಳಿದ್ದಾರೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಸದ್ಯಕ್ಕೆ ಯಾವುದೇ ಭಕ್ತರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ದೇಶದಲ್ಲಿ ವಿಭಜನೆಯ ಬೀಜ ಬಿತ್ತಿದೆ: ಅನಿಲ್ ವಿಜ್
ಬೆಂಗಳೂರು: ದೇವರ ಮೈಮೇಲಿನ ಚಿನ್ನಾಭರಣವನ್ನು ಕದಿಯಲು ಬಂದಿದ್ದ ಕಳ್ಳ ದೇವರಿಗೆ ನಮಿಸಿ ಹಾಗೇ ಹೊರಬಂದಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ತಾವರೆಕೆರೆಯ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದ ಬೀಗವೊಡೆದು ಒಳಗೆ ಪ್ರವೇಶಿಸಿದ ಕಳ್ಳ ಅರೆಬೆತ್ತಲಾಗಿ ಇಡೀ ದೇವಸ್ಥಾನದ ತುಂಬೆಲ್ಲಾ ಅಡ್ಡಾಡಿದ.
ನಂತರ ಗರ್ಭಗುಡಿಯ ಬಾಗಿಲು ತೆಗೆದು ಒಳಗೆ ಹೋದ. ಚಿನ್ನಾಭರಣ ಕದಿಯೋಕೆ ಬಂದು ದೇವರನ್ನು ನೋಡಿ ಫುಲ್ ಸೈಲೆಂಟ್ ಆದ. ಕೆಲ ಕಾಲ ಗರ್ಭಗುಡಿಯಲ್ಲೇ ಇದ್ದು ಭಕ್ತಿಯಿಂದ ದೇವರಿಗೆ ನಮಸ್ಕರಿಸಿದ್ದಾನೆ. ಆದರೆ ದೇವರ ಮೇಲಿನ ಯಾವುದೇ ಚಿನ್ನಾಭರಣ, ನಗದು ತೆಗೆದುಕೊಳ್ಳದೆ ಹೊರಗೆ ಬಂದಿದ್ದಾನೆ. ಇದನ್ನೂ ಓದಿ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ
ದೇವಸ್ಥಾನದಲ್ಲಿ ಕಳ್ಳನ ಓಡಾಟ, ಗರ್ಭಗುಡಿಗೆ ಪ್ರವೇಶಿಸಿದ ಎಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ನೋಡಿದ ದೇವಸ್ಥಾನದ ಆಡಳಿತ ಮಂಡಳಿ ತಾವರೆಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಂಬೈ ಸರಣಿ ಸ್ಫೋಟ ಪ್ರಕರಣದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅರೆಸ್ಟ್
– ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ – 12 ಜ್ಯೋತಿರ್ಲಿಂಗ ದರ್ಶನ, ಅಷ್ಟ ವಿನಾಯಕ ಯಾತ್ರೆ, ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ – ತಸ್ಥಿಕ್ ಹಣ ಹೆಚ್ಚಳಕ್ಕೂ ಸರ್ಕಾರಕ್ಕೆ ಪ್ರಸ್ಥಾವನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಪ್ರಕಟಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕಾಶಿಯನ್ನು ಅಭಿವೃದ್ಧಿಗೊಳಿಸಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ 25 ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ 25 ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ದೇವಸ್ಥಾನದ ಮೂಲಭೂತ ಸೌಕರ್ಯ, ಒಣ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೊಳಿಸುವ ಯೋಜನೆ ಇದಾಗಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ಯಾವುದೇ ತೊಂದರೆ ಅಗದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಬೇಕು. ದೇವಸ್ಥಾನಕ್ಕೆ ಅವರು ನೀಡುವ ಕಾಣಿಕೆಗಳು ಪಾರದರ್ಶಕತೆಯಿಂದ ಸದುಪಯೋಗ ಆಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅಭಿವೃದ್ಧಿಗೊಳಿಸುವುದು ನನ್ನ ಮಹತ್ವದ ಕನಸಾಗಿದ್ದು, ಈ ಯೋಜನೆಯ ಮೊದಲ ಹಂತದ ಅಂದಾಜು ವೆಚ್ಚ 1,140 ಕೋಟಿ ರೂಪಾಯಿಗಳಾಗಿವೆ ಎಂದು ಹೇಳಿದರು. ಇದನ್ನೂ ಓದಿ: RD Parade 2022: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ
ಪ್ರತಿವರ್ಷ 1000 ಸಿ ದರ್ಜೆಯ ದೇವಸ್ಥಾನಗಳ ಸಮಗ್ರ ಅಭಿವೃದ್ಧಿ:
ಕಡಿಮೆ ಆದಾಯವಿರುವ ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿ ಸರಿಯಾಗಿ ಅಗುತ್ತಿಲ್ಲ ಎನ್ನುವ ಹಲವಾರು ದೂರುಗಳು ಬಂದಿವೆ. ರಾಜ್ಯದಲ್ಲಿ 34,217ಸಿ ದರ್ಜೆಯ ದೇವಸ್ಥಾನಗಳು ಇವೆ. ಪ್ರತಿವರ್ಷ ಇವುಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅನುದಾನ ನೀಡಲಾಗುತ್ತಿದೆ. ಆದರೂ, ಸಮಗ್ರವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ನಾವು ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳನ್ನು ಸಮಗ್ರ ಅಭಿವೃದ್ಧಿಗೊಳಿಸಲು ಕ್ರಮಕೈಗೊಳ್ಳಲಿದ್ದೇವೆ. ಸರ್ಕಾರದ ವತಿಯಿಂದ ಅನುದಾನ ಹಾಗೆಯೇ ದಾನಿಗಳ ಸಹಯೋಗದೊಂದಿಗೆ ಸಮಗ್ರ ಅಭಿವೃದ್ಧಿಗೊಳಿಸಲಾಗುವುದು. ಪ್ರತಿವರ್ಷ ಜಿಲ್ಲೆಯಲ್ಲಿ ಬೇರೆ, ಬೇರೇ ದೇವಸ್ಥಾನಗಳನ್ನು ಅಭಿವೃದ್ಧಿಗೆ ಆಯ್ಕೆ ಮಾಡಿಕೊಳ್ಳುವ ಮೂಲಕ ಎಲ್ಲಾ ಸಿ ದರ್ಜೆಯ ದೇವಸ್ಥಾನಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.
ಇಂದು ವಿಕಾಸಸೌಧದಲ್ಲಿ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರು ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಮುಂಬರುವ ವಾರ್ಷಿಕ ಆಯವ್ಯಯ (ಬಜೆಟ್) ಪ್ರಸ್ತಾವನೆ ಕುರಿತು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. #Bengalore | #Budget2022 | #WaqfBoardpic.twitter.com/W9UfnrbBxD
ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ವಿಶೇಷ ಅನುದಾನ:
ದೇವಾಲಯಗಳು ನಮ್ಮೊಂದಿಗೆ ಭಾವನಾತ್ಮಕವಾದ ಸಂಬಂಧ ಹೊಂದಿವೆ. ರಾಜ್ಯದ ದೇವಾಲಯಗಳ ಅಭಿವೃದ್ದಿಗೆ ವಿಶೇಷ ಕಾಳಜಿಯನ್ನು ನಮ್ಮ ಬಿಜೆಪಿ ಸರ್ಕಾರ ವಹಿಸುತ್ತಿದೆ. ಈ ಬಾರಿಯ ಆಯವ್ಯಯದಲ್ಲಿ 119 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್‍ನಲ್ಲಿ 60 ರಿಂದ 70 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರ್ಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಿರುವ ಹಿನ್ನಲೆಯಲ್ಲಿ ಮುಜರಾಯಿ ಖಾತೆ ಸಚಿವೆಯಾಗಿ ನಾನು ಮುಖ್ಯಮಂತ್ರಿಗಳಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಕೋವಿಡ್ ಸಂತ್ರಸ್ತರ ಕುಟುಂಬಗಳಿಗೆ 10 ದಿನದೊಳಗೆ ಪರಿಹಾರ ನೀಡಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ
ಶ್ರೀಶೈಲದಲ್ಲಿ ಕರ್ನಾಟಕ ಛತ್ರ ನಿರ್ಮಾಣ:
ಕರ್ನಾಟಕ ರಾಜ್ಯದಿಂದ ಬಹುಸಂಖ್ಯೆಯಲ್ಲಿ ಭಕ್ತರು ತೆರಳುವ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮುಜರಾಯಿ ಇಲಾಖೆ ಒಡೆತನದಲ್ಲಿರುವ ಭೂಮಿಯಲ್ಲಿ ಕರ್ನಾಟಕ ಛತ್ರ ನಿರ್ಮಿಸಲು 85 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. 45 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳ ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.
12 ಜ್ಯೋತಿರ್ಲಿಂಗ ಹಾಗೂ ಅಷ್ಟವಿನಾಯಕ ಮತ್ತು ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ:
ದೇಶದ ವಿವಿಧ ಭಾಗಗಳಲ್ಲಿರುವ 12 ಜ್ಯೋತಿರ್ಲಿಂಗ ಹಾಗೂ ಅಷ್ಟವಿನಾಯಕ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವುದು ಬಹಳ ಪುಣ್ಯವಾದ ಕೆಲಸ ಎನ್ನುವುದ ಹಿಂದುಗಳ ನಂಬಿಕೆ. ಈ ನಿಟ್ಟಿನಲ್ಲಿ ಕೈಲಾಸ ಮಾನಸ ಸರೋವರ ಮತ್ತು ಚಾರ್‍ಧಾಮ್ ಯಾತ್ರೆಗೆ ನೀಡುವ ಪ್ರೋತ್ಸಾಹ ಧನ ನೀಡುವ ಯೋಜನೆಯಂತೆ ಇವುಗಳಿಗೂ ಪ್ರೋತ್ಸಾಹ/ಸಹಾಯ ಧನ ನೀಡುವ ಯೋಜನೆಯನ್ನು ಪ್ರಾರಂಭಿಸಲಾಗುವುದು. 12 ಜ್ಯೋತಿರ್ಲಿಂಗ ಯಾತ್ರೆ ಮತ್ತು ಅಷ್ಟವಿನಾಯಕ ಪ್ರೋತ್ಸಾಹ ಧನ ನೀಡುವ ಪ್ರಸ್ತಾವನೆ ಸಿದ್ಧವಾಗಿದೆ. ಕಾಶೀ ಯಾತ್ರೆಗೂ ಪ್ರತ್ಯೇಕವಾಗಿ ವಾರ್ಷಿಕವಾಗಿ ಎರಡು ಬಾರಿ ರೈಲಿನಲ್ಲಿ ಪ್ರವಾಸ ಏರ್ಪಡಿಸುವ ಅಥವಾ ಪ್ರೋತ್ಸಾಹ ಧನ ನೀಡುವ ಪ್ರಸ್ತಾವನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಕಾರಿನಲ್ಲಿ ಏಕಾಂಗಿಯಾಗಿ ಓಡಾಡುವಾಗ ಮಾಸ್ಕ್ ಅಗತ್ಯ ಇಲ್ಲ – ದೆಹಲಿಯಲ್ಲಿ ವಿನಾಯಿತಿ
ತಸ್ತಿಕ್ ಹಣ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ:
ರಾಜ್ಯ ಸರ್ಕಾರದ ವತಿಯಿಂದ ರಾಜ್ಯದಲ್ಲಿರುವ ಸಿ ದರ್ಜೆಯ ದೇವಸ್ಥಾನಗಳಿಗೆ ವಾರ್ಷಿಕವಾಗಿ 48 ಸಾವಿರ ರೂಪಾಯಿಗಳ ತಸ್ತಿಕ್ ಹಣವನ್ನು ನೀಡಲಾಗುತ್ತಿದೆ. ಹೆಚ್ಚಿನ ಆದಾಯವಿಲ್ಲದ ದೇವಸ್ಥಾನಗಳ ಅರ್ಚಕರು ಹಾಗೂ ಮೋಕ್ತೇಸರರು ಹಲವಾರು ಬಾರಿ ಈ ಹಣವನ್ನು ಹೆಚ್ಚು ಮಾಡುವಂತೆ ಮನವಿ ಮಾಡಿದ್ದಾರೆ. ಇಂದಿನ ದಿನಮಾನದಲ್ಲಿ ಈ ಹಣ ಸಾಕಾಗುವುದಿಲ್ಲ ಎನ್ನುವುದು ನಮ್ಮ ಗಮನಕ್ಕೆ ಬಂದಿದ್ದು, ತಸ್ತಿಕ್ ಹಣವನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಅನುಮೋದನೆ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.
ರಾಜ್ಯದ ದೇವಸ್ಥಾನಗಳ ಜಮೀನು ಸರ್ವೆ:
ರಾಜ್ಯದ ದೇವಸ್ಥಾನಗಳ ವ್ಯಾಪ್ತಿಯಲ್ಲಿರುವ ಜಮೀನುಗಳ ಸರ್ವೇ ಕಾರ್ಯಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಕಂದಾಯ ಸಚಿವರಾದ ಅಶೋಕ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಡ್ರೋನ್ ಸರ್ವೇ ಕಾರ್ಯದಲ್ಲಿ ದೇವಾಲಯಗಳ ಹಾಗೂ ವಕ್ಫ್ ಜಮೀನಿನ ಸಮೀಕ್ಷೆಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಾಳೆಯಿಂದ ಥಿಯೇಟರ್ ಹೌಸ್ ಫುಲ್- ಸರ್ಕಾರದಿಂದ ಅನುಮತಿ
ಅಯೋಧ್ಯೆಯಲ್ಲಿ ಕರ್ನಾಟಕದ ಛತ್ರ:
ಅಯೋಧ್ಯೆಯಲ್ಲಿ ಕರ್ನಾಟಕ ರಾಜ್ಯದ ಛತ್ರವನ್ನು ನಿರ್ಮಿಸಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಪತ್ರವ್ಯವಹಾರ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಆಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಪ್ರಮುಖ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಹಾರ: ದೇವಸ್ಥಾನವನ್ನು ದರೋಡೆ ಮಾಡುವ ಮೊದಲು ಕಳ್ಳರು 7 ಬೀದಿ ನಾಯಿಗಳನ್ನು ಕೊಂದಿರುವ ಘಟನೆ ಬಿಹಾರದ ಕೈಮೂರ್‌ನಲ್ಲಿ ನಡೆದಿದೆ.
ಬಿಹಾರದ ಕೈಮೂರ್‌ನ ದೇವಸ್ಥಾನದಲ್ಲಿ ನಡೆದ ದರೋಡೆಯ ಸಂದರ್ಭದಲ್ಲಿ ಏಳು ನಾಯಿಗಳು ಸಾವನ್ನಪ್ಪಿವೆ. ಕಳ್ಳರು ಬೀದಿ ನಾಯಿಗಳಿಗೆ ವಿಷ ಉಣಿಸಿ ನಂತರ ದೇವಸ್ಥಾನದ ಬಾಗಿಲನ್ನು ಒಡೆದು ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ 15,000 ರೂ.ಗಳನ್ನು ಕದ್ದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಶ್ವಾನಗಳು ಘಟನಾ ಸ್ಥಳದ ಸಮೀಪವೇ ಸಾವನ್ನಪ್ಪಿವೆ. ಇದನ್ನೂ ಓದಿ: ಯಾರನ್ನೂ ನಂಬಲ್ಲ, ಭದ್ರತಾ ಅಧಿಕಾರಿಯೇ ನನ್ನನ್ನು ಶೂಟ್ ಮಾಡ್ಬೋದು: ಅಬ್ದುಲ್ಲಾ ಆಝಂ ಖಾನ್
ಅರ್ಚಕರು ಇಂದು ಬೆಳಿಗ್ಗೆ ಪ್ರಾರ್ಥನೆ ಸಲ್ಲಿಸಲು ಹೋದ ನಂತರ ಘಟನೆ ಬೆಳಕಿಗೆ ಬಂದಿದೆ. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್
ಘಟನೆ ಕುರಿತು ಪ್ರತಿಕ್ರಿಯಿಸಿರುವ ದೇವಸ್ಥಾನದ ಕಾರ್ಯದರ್ಶಿ ಧೀರೇಂದ್ರ ಪ್ರತಾಪ್ ಸಿಂಗ್, ದೇಗುಲದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ 15 ರಿಂದ 20 ಸಾವಿರ ರೂಪಾಯಿ ಕದ್ದಿದ್ದಾರೆ. ದೇವಸ್ಥಾನದ ಬಳಿ ವಾಸಿಸುತ್ತಿದ್ದ ಏಳು ಅಮಾಯಕ ಪ್ರಾಣಿಗಳಿಗೂ ವಿಷ ಹಾಕಿ ಸಾಯಿಸಲಾಗಿದೆ. ಈ ಮುಗ್ಧ ಜೀವಿಗಳು ಆರತಿಯ ನಂತರ ಪ್ರಸಾದ ತೆಗೆದುಕೊಳ್ಳಲು ದೇವಸ್ಥಾನದಲ್ಲಿಯೇ ಇರುತ್ತಿದ್ದವು. ಕಳ್ಳರೂ ಅವುಗಳನ್ನು ಬಿಡಲಿಲ್ಲ. ಈ ವಿಷಯವನ್ನು ಆದಷ್ಟು ಬೇಗ ಬಹಿರಂಗಪಡಿಸಬೇಕೆಂದು ನಾನು ಆಡಳಿತವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಚೆನ್ನೈ: ಕೋವಿಡ್ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ಲಾಕ್‍ಡೌನ್ ನಡುವೆಯೂ ತಿರುವಂತಿಪುರಂ ಶ್ರೀ ದೇವನಾಥಸ್ವಾಮಿ ದೇಗುಲದ ಹೊರಗೆ 91 ಜೋಡಿ ದಾಂಪತ್ಯ ಬದುಕಿಗೆ ಕಾಲಿಟ್ಟಿದೆ.
ಸೋಂಕು ನಿಯಂತ್ರಣ ಕ್ರಮವಾಗಿ ಸರ್ಕಾರ ವಾರಾಂತ್ಯ ಲಾಕ್‍ಡೌನ್ ಜಾರಿಗೊಳಿಸಿದೆ. ಹೀಗಾಗಿ ಭಾನುವಾರ ದೇಗುಲವನ್ನು ಬಂದ್ ಮಾಡಲಾಗಿತ್ತು. ಆದರೆ ಶುಭ ಮುಹೂರ್ತವಿದ್ದ ಕಾರಣ ಅರ್ಚಕರು ದೇಗುಲದ ಹೊರಗಿನ ರಸ್ತೆಯಲ್ಲಿಯೇ ವಿವಾಹ ನಡೆಸಿಕೊಟ್ಟರು ಎಂದು ದೇಗುಲದ ಆಡಳಿತ ಮಂಡಳಿ ಅಧಿಕಾರಿ ಎ.ವೀರಬತೀರನ್ ಮತ್ತು ಕಾರ್ಯದರ್ಶಿ ರತೀನಾ ಸಭಾಪತಿ ಅವರು ತಿಳಿಸಿದರು. ಇದನ್ನೂ ಓದಿ:ಎರಡೂ ಡೋಸ್ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ: ಬ್ರಿಟನ್ ಪ್ರಧಾನಿ
ಶುಭ ಮುಹೂರ್ತವಿದ್ದ ಕಾರಣ 110 ಜೋಡಿ ಮದುವೆಗೆ ನೋಂದಣಿ ಮಾಡಿಸಿದ್ದರು. ಬೆಳಗ್ಗೆ 4.30ರಿಂದ 11ರ ನಡುವಿನ ಅವಧಿಯಲ್ಲಿ ವಿವಾಹ ನೆರವೇರಿತು. ವಿಷ್ಣುವಿನ ಈ ದೇವಸ್ಥಾನದಲ್ಲಿ ಮದುವೆಯಾದರೆ ಒಳ್ಳೆಯದು ಎಂಬ ನಂಬಿಕೆಯಿದೆ. ವಿವಿಧ ಭಾಗಗಳ ಜನರು ಬಂದು ಇಲ್ಲಿ ಮದುವೆಯಾಗುತ್ತಾರೆ. ದೇಗುಲದ ಸಭಾಂಗಣದಲ್ಲಿ ಒಟ್ಟಿಗೆ 40 ಜೋಡಿ ವಿವಾಹವಾಗಲು ಅವಕಾಶವಿದೆ. ದೇಗುಲ ತೆರೆದಿರುವ ಸಾಮಾನ್ಯ ದಿನಗಳಲ್ಲಿ ಮದುವೆಯಾಗುವ ಜೋಡಿಗಳಿಗೆ ಯಾವುದೇ ಮಿತಿ ಇಲ್ಲ. ತಮಿಳುನಾಡಿನಲ್ಲಿ ಹೊಸದಾಗಿ 30,850 ಕೊರೊನಾ ಪ್ರಕರಣ ದೃಢಪಟ್ಟಿವೆ. ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ: WHO ಮುಖ್ಯಸ್ಥ
ಹಾವೇರಿ: ಎರಡು ಕಾರು ಮತ್ತು ಮೆಕ್ಕೆಜೋಳ ತುಂಬಿದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದ ಬಳಿ ನಡೆದಿದೆ.
ಒಂದರ ಹಿಂದೆ ಒಂದು ಚಲಿಸುತ್ತಿದ್ದ ಕಾರುಗಳು, ಮೆಕ್ಕೆಜೋಳ ತುಂಬಿದ ಲಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಶಂಕರಗೌಡ ನಾಗಪ್ಪಗೌಡರ (35), ಪುನೀತ ಹರಮುಚಡಿ (12), ಶಾಂತಮ್ಮ ಹೊಟ್ಟಿಗೌಡರ (32), ರಘು ಹೊಟ್ಟಿಗೌಡರ (14), ಎಂದು ಗುರುತಿಸಲಾಗಿದೆ. ಆರು ಜನ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್ – ಬಿಜೆಪಿ ಶಾಸಕ ಎಮ್ಮೆ ಓಡಿಸುವ ಸ್ಪರ್ಧೆಯಲ್ಲಿ ಬ್ಯುಸಿ
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ಒಂದೇ ಕುಟುಂಬದ ಸೋದರ ಸಂಬಂಧಿಗಳು ಎರಡು ಕಾರಿನಲ್ಲಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಪಿಜ್ಜಾ ಆರ್ಡರ್ ಮಾಡುವಾಗ 9,000 ಹೋಯ್ತು – ವಾಪಸ್ ಪಡೆಯಲು ಹೋಗಿ 11 ಲಕ್ಷ ಕಳ್ಕೊಂಡ ವೃದ್ಧೆ