Tag: ದೇವಸ್ಥಾನ

  • ತಿರುಪತಿ ದೇವಸ್ಥಾನದ ದೈನಂದಿನ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

    ತಿರುಪತಿ ದೇವಸ್ಥಾನದ ದೈನಂದಿನ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

    ನವದೆಹಲಿ: ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಅರ್ಚನೆ ಮತ್ತು ಪೂಜೆಯಲ್ಲಿ ಅಕ್ರಮ ನಡೆಯುತ್ತಿದ್ದು ಈ ಸಂಬಂಧ ವಿಚಾರಣೆ ನಡೆಸುವಂತೆ ಭಕ್ತರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

    ಆಂಧ್ರಪ್ರದೇಶ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ, ಕೋರ್ಟ್ ದೇವಾಲಯದ ದೈನಂದಿನ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಥ್ರೋಬಾಲ್ ಆಡಿ ಗಮನಸೆಳೆದ ನಟಿ ರೋಜಾ

    ಅಭಿಷೇಕ ಪ್ರಕ್ರಿಯೆಗಳನ್ನು ಸಂಪ್ರದಾಯಿಕವಾಗಿ ಅನುಸರಿಸಬೇಕು ಎಂದು ಭಕ್ತ ಶ್ರೀವಾರಿ ದಾದಾ ಕೋರಿದ್ದರು. ವಿಚಾರಣೆ ವೇಳೆ ಮು.ನ್ಯಾ ಎನ್.ವಿ ರಮಣ ಭಕ್ತರಿಗೆ ಏಕೆ ಸರಿಯಾದ ಸ್ಪಷ್ಟನೆ ನೀಡುತ್ತಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿಯನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಟಿಟಿಡಿ ಪರ ಅರ್ಜಿದಾರರ ಪ್ರತಿಯೊಂದು ಕುಂದುಕೊರತೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರತಿ-ಅಫಿಡವಿಟ್‍ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಸ್ಪಷ್ಟನೆಗಳನ್ನು ನೇರವಾಗಿ ಭಕ್ತರಿಗೆ ನೀಡಬೇಕು, ಕೋರ್ಟ್ ಇವುಗಳನ್ನು ಆದೇಶಿಸಲು ಸಾಧ್ಯವಿಲ್ಲ, ದೇವಸ್ಥಾನದ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ ಎಂದಿತು. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    ದೇವಸ್ಥಾನದ ವಿಚಾರಗಳಲ್ಲಿ ಏನೇ ಸಮಸ್ಯೆಗಳು ಕಂಡು ಬಂದರು ಅದನ್ನು ಭಕ್ತರು ಕೇಳಬಹುದಾಗಿದ್ದು ಅದಕ್ಕೆ ಟಿಟಿಡಿ ಸ್ಪಷ್ಟನೆ ನೀಡಬೇಕು ಅಂತಯೇ ಈ ಅರ್ಜಿದಾರರ ಪ್ರಶ್ನೆಗಳಿಗೆ ಉತ್ತರವನ್ನು ನೀಡಬೇಕು ಎಂದ ಪೀಠ ಅರ್ಜಿಯನ್ನು ತಿರಸ್ಕರಿಸಿತು. ಈ ಅರ್ಜಿ ಆಂಧ್ರಪ್ರದೇಶ ಹೈಕೋರ್ಟ್‍ನಲ್ಲೂ ತಿರಸ್ಕೃತಗೊಂಡಿತ್ತು.

  • ದೇವಸ್ಥಾನದ ಪ್ರಸಾದ ಸೇವಿಸಿ 30 ಮಂದಿ ಅಸ್ವಸ್ಥ

    ದೇವಸ್ಥಾನದ ಪ್ರಸಾದ ಸೇವಿಸಿ 30 ಮಂದಿ ಅಸ್ವಸ್ಥ

    ಶಿವಮೊಗ್ಗ: ನಗರದ ಸಾಯಿಬಾಬಾ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಸಾದ ಸೇವನೆ ಮಾಡಿದ 25 ರಿಂದ 30 ಮಂದಿ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಸಾಗರದಲ್ಲಿ ನಡೆದಿದೆ.

    ಸಾಗರ ನಗರಸಭೆ ವ್ಯಾಪ್ತಿಯ ವಿನೋಬನಗರದ ಸಾಯಿಬಾಬಾ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ವಾರ್ಷಿಕೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿದ್ದ ಭಕ್ತರು ಪ್ರಸಾದ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದ ಹಲವು ಮಂದಿಗೆ ಶನಿವಾರ ಸಂಜೆ ಸುಮಾರಿಗೆ ವಾಂತಿ ಭೇದಿ ಆಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದು ಅಸ್ವಸ್ಥಗೊಂಡಿದ್ದರು. ಅಸ್ವಸ್ಥರಾದವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ, ಯತ್ನಾಳ್ ರಹಸ್ಯ ಸಮಾಲೋಚನೆ!

    ಸದ್ಯ ವೈದ್ಯರು ಅಸ್ವಸ್ಥಗೊಂಡವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಯಾವ ಕಾರಣಕ್ಕಾಗಿ ಈ ರೀತಿಯಾಗಿದೆ ಎಂದು ತಿಳಿದು ಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದರು. ಅಲ್ಲದೇ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅವ್ರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ: ಕುಟುಕಿದ ಬಿಜೆಪಿ

  • ನಾನು ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

    ನಾನು ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್

    ನವದೆಹಲಿ: ನಾನು ಹಿಂದೂ, ಹೀಗಾಗಿ ನಾನು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಬಾರದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಕೇಜ್ರಿವಾಲ್ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಮೃದು ಹಿಂದುತ್ವ ದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ. ನೀವು ದೇವಸ್ಥಾನಕ್ಕೆ ಹೋಗುತ್ತೀರಾ? ನಾನು ಕೂಡ ದೇವಸ್ಥಾನಕ್ಕೆ ಹೋಗುತ್ತೇನೆ. ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿಲ್ಲ, ನೀವು ಅದನ್ನು ಭೇಟಿ ಮಾಡಿದಾಗ ನಿಮಗೆ ಶಾಂತಿ ಸಿಗುತ್ತದೆ. ಅವರ (ಮೃದು ಹಿಂದುತ್ವದ ಆರೋಪ ಮಾಡುವವರು) ಆಕ್ಷೇಪಣೆ ಏನು? ಏಕೆ ವಿರೋಧ ವ್ಯಕ್ತಪಡಿಸಬೇಕು? ನಾನು ಹಿಂದೂ ಎಂಬ ಕಾರಣಕ್ಕೆ ನಾನು ದೇವಸ್ಥಾನಕ್ಕೆ ಹೋಗುತ್ತಿದ್ದೇನೆ, ನನ್ನ ಪತ್ನಿ ಗೌರಿಶಂಕರ ದೇವಸ್ಥಾನಕ್ಕೆ ಭೇಟಿ ನೀಡುತ್ತಾಳೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಪ್ರಮೋದ್ ಸಾವಂತ್ ನಮ್ಮ ಸರ್ಕಾರವನ್ನು ನಕಲು ಮಾಡುತ್ತಿದ್ದಾರೆ. ನಾವು ವಿದ್ಯುತ್ ಉಚಿತ ನೀಡುತ್ತೇವೆ ಎಂದು ನಾನು ಹೇಳಿದಾಗ ಅವರು ನೀರು ಉಚಿತವಾಗಿ ನೀಡಿದರು. ನಾವು ಉದ್ಯೋಗ ಭತ್ಯೆ ನೀಡುತ್ತೇವೆ ಎಂದು ಹೇಳಿದಾಗ ಅವರು ಸುಮಾರು 10,000 ಉದ್ಯೋಗಗಳನ್ನು ಘೋಷಿಸಿದರು. ನಾನು ತೀರ್ಥಯಾತ್ರೆಗಳ ಬಗ್ಗೆ ಮಾತನಾಡುವಾಗ ಅವರು ತಮ್ಮ ಯೋಜನೆ ಘೋಷಣೆ ಮಾಡಿದರು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದನ್ನೂ ಓದಿ:  ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ

  • ಹಾಸನನಾಂಬೆ ದರ್ಶನಕ್ಕೂ ತಟ್ಟಿದ ಪುನೀತ್ ಸಾವಿನ ನೋವು

    ಹಾಸನನಾಂಬೆ ದರ್ಶನಕ್ಕೂ ತಟ್ಟಿದ ಪುನೀತ್ ಸಾವಿನ ನೋವು

    ಹಾಸನ: ಪುನೀತ್ ರಾಜ್‍ಕುಮಾರ್ ಸಾವಿನಿಂದ ಶೋಕಸಾಗರದಲ್ಲಿ ಮುಳುಗಿರುವ ಕರುನಾಡ ಜನ ಇಂದು ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆಯ ದರ್ಶನ ಪಡೆಯಲು ಕೂಡ ಆಗಮಿಸಲಿಲ್ಲ.

    PUNEET

    ಅಕ್ಟೋಬರ್ 28 ರಂದು ಹಾಸನಾಂಬೆ ದೇವರ ದರ್ಶನ ಆರಂಭವಾಗಿದೆ. ದೇವಾಲಯದ ಭಾಗಿಲು ತೆರೆದ ನಂತರ ದೇವಿಯ ದರ್ಶನ ಪಡೆಯಲು ಪ್ರತಿದಿನ ಸಾವಿರಾರು ಭಕ್ತರು ಬರುತ್ತಿದ್ದರು. ಸರದಿ ಸಾಲಲ್ಲಿ ಗಂಟೆಗಟ್ಟಲೆ ಸಾಲುಗಟ್ಟಿ ನಿಂತು ಹಾಸನಾಂಬೆಯ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ ಪುನೀತ್ ರಾಜ್‍ಕುಮಾರ್ ಸಾವಿನಿಂದ ಇಡೀ ರಾಜ್ಯದ ಜನ ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಇದನ್ನೂ ಓದಿ: ಇಂದಿನಿಂದ ಹಾಸನಾಂಬೆಯ ದರ್ಶನ ಆರಂಭ

    ಪುನೀತ್ ಸಾವಿನ ದುಃಖದಲ್ಲಿರುವ ಜನ ಇಂದು ನೋವಿನಿಂದ ಹಾಸನಾಂಬೆ ದರ್ಶನಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಕೇವಲ ಒಂದಷ್ಟು ಜನ ಮಾತ್ರ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದು, ಇಡೀ ರಾಜ್ಯದಲ್ಲಿ ಅಪ್ಪು ಕಳೆದುಕೊಂಡ ನೋವಿಗೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಅಪ್ಪು ಅಗಲಿಕೆ ಬಗ್ಗೆ ಶಿವಣ್ಣ ಸುದೀಪ್‍ಗೆ ಹೇಳಿದ್ದೇನು?

  • ಕಾರ್‌ನಿಂದ ಇಳಿದು ಶಾಲಾ ಮಕ್ಕಳಿಗೆ ವಿಶ್ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

    ಕಾರ್‌ನಿಂದ ಇಳಿದು ಶಾಲಾ ಮಕ್ಕಳಿಗೆ ವಿಶ್ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

    ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಯಲ್ಲಿ ಕಾರಿನಿಂದ ಕೆಳಗಿಳಿದು ಮಕ್ಕಳಿಗೆ ವಿಶ್ ಮಾಡಿದ್ದಾರೆ. ಅವರು ಇಂದು ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡಿದ್ದಾರೆ.

    ಬೆಳಗ್ಗೆ 11 ಗಂಟೆಗೆ ಶೃಂಗೇರಿ ದೇವಸ್ಥಾನಕ್ಕೆ ಬಂದ ಅವರು ಸಂಜೆ ನಾಲ್ಕು ಗಂಟೆವರೆಗೂ ಮಠದಲ್ಲೇ ಇದ್ದರು. 11 ಗಂಟೆಗೆ ದೇವಾಲಯದ ಆವರಣಕ್ಕೆ ಬಂದ ರಾಷ್ಟ್ರಪತಿಗಳು ಶೃಂಗೇರಿಶಾರದಾಂಬೆ ದರ್ಶನ ಪಡೆದು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶೃಂಗೇರಿ ಮಠದ ಜಗದ್ಗುರುಗಳಾದ ಭಾರತೀ ತೀರ್ಥ ಶ್ರೀಗಳು ಹಾಗೂ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದರು. ಸುಮಾರು ಅರ್ಧ ಗಂಟೆಗಳ ಕಾಲ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ಇದನ್ನೂ ಓದಿ:  ಗೋಕರ್ಣದಲ್ಲಿ ಪೂಜೆ, ದಕ್ಷಿಣೆ ಕಾಸಿಗಾಗಿ ಜಗಳ – ಕೊನೆಗೂ ಭಕ್ತರಿಗೆ ಅವಕಾಶ, ಅರ್ಚಕರಿಗೆ ಶಾಕ್‌

    ಈ ವೇಳೆ, ರಾಷ್ಟ್ರಪತಿಗೆ ಶಾಲು ಹೊದಿಸಿ, ಸನ್ಮಾನಿಸಿ ಶಂಕರಾಚಾರ್ಯರ ವಿಗ್ರಹ, ಫಲ ಮಂತ್ರಾಕ್ಷತೆ ಮತ್ತು ಬೆಳ್ಳಿಯ ಪದಕವನ್ನ ರಾಷ್ಟ್ರಪತಿ ಅವರಿಗೆ ನೀಡಲಾಯಿತು. ಮಧ್ಯಾಹ್ನ ಮಠದಲ್ಲೇ ಊಟ ಮಾಡಿದ ರಾಷ್ಟ್ರಪತಿ ಅವರಿಗೆ ಚಪಾತಿ ಅನ್ನ, ತಿಳಿಸಾರು, ಸಾಂಬಾರು, ಹುಳಿತೊವೆ, ಮಜ್ಜಿಗೆ ಹುಳಿ, ಎರಡು ತರಹದ ಕೋಸಂಬರಿ, ಎರಡು ರೀತಿಯ ಪಲ್ಯ, ಚಿಪ್ಸ್, ಮಿಕ್ಸರ್,ಡ್ರೈ ಜಾಮೂನು, ಗೋಡಂಬಿ ಬರ್ಫಿಯನ್ನ ಸಿದ್ಧಪಡಿಸಲಾಗಿತ್ತು. ಇದನ್ನೂ ಓದಿ: ಮಗ ಇಲ್ಲದೇ ಹುಟ್ಟುಹಬ್ಬ ಆಚರಿಸಲ್ಲ: ಶಾರೂಖ್ ಪತ್ನಿ ಗೌರಿ ಖಾನ್

    ರಾಷ್ಟ್ರಪತಿ ಅವರು ಭೇಟಿ ಹಿನ್ನೆಲೆ ಶೃಂಗೇರಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಸುಮಾರು 800-1000 ಪೊಲೀಸರು ಶೃಂಗೇರಿಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಹೆಲಿಪ್ಯಾಡ್ ನಿಂದ ದೇವಾಲಯಕ್ಕೆ ಹೋಗುವ ಮಾರ್ಗ ಮಧ್ಯೆ ನಾಯಿ, ದನಕರುಗಳು ರಸ್ತೆಯಲ್ಲಿ ಅಡ್ಡ ಸಂಚರಿಸದಷ್ಟು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪತ್ನಿ, ಪುತ್ರಿ ಜೊತೆ ಬಂದಿದ್ದ ರಾಮನಾಥ್ ಕೋವಿಂದ್ ಅವರು ಶಾರದಾಂಬೆ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ: ದೇವೇಗೌಡ

    ಶಾರದಾಂಬೆ ದರ್ಶನದ ಬಳಿಕ ಶಕ್ತಿಗಣಪತಿಯ ದರ್ಶನ ಪಡೆದರು. ರಾಷ್ಟ್ರಪತಿಯವರ ಆಗಮನದ ಹಿನ್ನೆಲೆ ಇಂದು ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ನಿಬರ್ಂಧಿಸಲಾಗಿತ್ತು. ಶಾರದಾಂಭೆ ದರ್ಶನಕ್ಕೆ ಬಂದ ನೂರಾರು ಜನ ಹೊರಗಡೆಯೇ ಕಾಯುವಂತಾಗಿತ್ತು. ಮತ್ತೊಂದೆಡೆ ಅವರನ್ನ ನೋಡಲೆಂದೇ ದೇವಸ್ಥಾನದ ಎದುರು ಜನ ಜಾತಕಪಕ್ಷಿಗಳಂತೆ ಕಾಯುತ್ತಿದ್ದರು. ಇದನ್ನೂ ಓದಿ:  ನನಗೆ ಅಕ್ರಮ ಸಂಬಂಧ ಇಲ್ಲ- ಟ್ರೋಲಿಗರ ವಿರುದ್ಧ ಕುಟುಕಿದ ಸಮಂತಾ

    ಸಂಜೆ ದೇವಸ್ಥಾನದಿಂದ ಹಿಂದಿರುಗುವಾಗ ನೆರೆದಿದ್ದ ಜನ ಸಾಮಾನ್ಯರತ್ತ ಕೈ ಬೀಸಿ ಹೊರಟರು. ಹೆಲಿಪ್ಯಾಡ್‍ಗೆ ಹೋಗುವ ಮಾರ್ಗದಲ್ಲಿನ ಕುರುಬಗೇರೆ ಗ್ರಾಮದಲ್ಲಿ ಮಕ್ಕಳು ರಾಷ್ಟ್ರಪತಿಯನ್ನ ನೋಡಲು ಶಾಲಾ ಕಾಂಪೌಂಡ್ ಒಳಗೆ ಕಾಯುತ್ತಿದ್ದರು. ರಾಮನಾಥ್ ಕೋವಿಂದ್ ಅವರು ಕಾರಿನಿಂದ ಕೆಳಗಿಳಿದು ಮಕ್ಕಳಿಗೆ ವಿಶ್ ಮಾಡಿ ಹೊರಟಿದ್ದಾರೆ.

  • ಚಾಮುಂಡಿ ಭಕ್ತರಿಗಿಲ್ಲ ಅಮ್ಮನವರ ದರ್ಶನ- 3ದಿನ ಪ್ರವೇಶಕ್ಕೆ ನಿರ್ಬಂಧ

    ಚಾಮುಂಡಿ ಭಕ್ತರಿಗಿಲ್ಲ ಅಮ್ಮನವರ ದರ್ಶನ- 3ದಿನ ಪ್ರವೇಶಕ್ಕೆ ನಿರ್ಬಂಧ

    ಮೈಸೂರು: ನಾಳೆ ಮಹಾಲಯ ಅಮವಾಸ್ಯೆಯಾಗಿದೆ ಚಾಮುಂಡಿ ಬೆಟ್ಟಕ್ಕೆ ಹೋಗಬೇಕು ಎಂದು ನೀವು ಏನಾದ್ರೂ ಅಂದುಕೊಂಡಿದ್ದರೆ ನಿರಾಸೆ ಉಂಟಾಗಲಿದೆ. ಮೂರು ದಿನ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ. ಇದನ್ನೂ ಓದಿ: ಶಾರೂಖ್‌ ಪುತ್ರನ ಲೆನ್ಸ್‌ ಬಾಕ್ಸ್, ಇನ್ನೊಬ್ಬಳು ಯುವತಿಯ ಬ್ಯಾಗಲ್ಲಿದ್ದ ಸ್ಯಾನಿಟರಿ ಪ್ಯಾಡಲ್ಲಿತ್ತು ಮಾದಕ ವಸ್ತು!

    ಗುರುವಾರ ನಾಡ ಹಬ್ಬ ದಸರಾ ಉದ್ಘಾಟನೆಯನ್ನು ಮಾಡಲಾಗುತ್ತದೆ. ಹೀಗಾಗಿ ಈ ಹಿನ್ನಲೆಯಲ್ಲಿ ಮೂರು ದಿನಗಳ ಕಾಲ ದೇವಿ ದರ್ಶಕ್ಕೆ ಭಕ್ತಾದಿಗಳಿಗೆ ನಿರ್ಬಂಧವನ್ನು ಹೇರಲಾಗಿದೆ. ಇಂದು, ನಾಳೆ ಮತ್ತು ನಾಡಿದ್ದು ಒಟ್ಟೂ ಮೂರು ದಿನಗಳ ಕಾಲ ಚಾಮುಂಡಿ ದೇವಿಯ ದರ್ಶನಕ್ಕೆ ಭಕ್ತಾಧಿಗಳಿಗೆ ನಿರ್ಬಂಧವನ್ನು ಜಿಲ್ಲಾಢಳಿತ ಹೇರಿದೆ. ಕೋವಿಡ್ ನಿರ್ಬಂಧ ಕಾರಣವನ್ನು ಕೂಡ ಜಿಲ್ಲಾಡಿತದ ಆದೇಶದಲ್ಲಿ ಹೇಳಲಾಗಿದೆ. ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣ – ಐಷಾರಾಮಿ ಹಡಗಿನಲ್ಲಿ ತಗ್ಲಾಕ್ಕೊಂಡ ಬೆಂಗಳೂರಿಗರು..!

    ಚಾಮುಂಡಿ ಬೆಟ್ಟಕ್ಕೆ ಹೋಗಬೇಕು ಎಂದು ಕೊಂಡವರಿಗೆ ನಿರಾಸೆ ಉಂಟಾಗಲಿದೆ. ಕೊರೊನಾ ನಿರ್ಭಂದಗಳಿರುವುದರಿಂದ ಜನ ತುಂಬಾ ಸೇರಿ ಬಿಟ್ಟರೆ ತೊಂದರೆಯಾಗುತ್ತದೆ. ದಸರಾ ಉದ್ಘಾಟನೆಯ ಸಿದ್ಧತೆಗೆ ತೊಂದರೆಯಾಗುತ್ತದೆ ಎನ್ನುವ ಕಾರಣದಿಂದಾಗಿ ಪ್ರವೇಶಕ್ಕೆ ನಿರ್ಭಂಧವನ್ನು ಹೇರಲಾಗಿದೆ.

  • ದೇವರಿಗೆ ಪೂಜೆ ಮಾಡಿ ಕಾಣಿಕೆ ಹುಂಡಿ ಎಗರಿಸಿದ ಖದೀಮರು

    ದೇವರಿಗೆ ಪೂಜೆ ಮಾಡಿ ಕಾಣಿಕೆ ಹುಂಡಿ ಎಗರಿಸಿದ ಖದೀಮರು

    ನೆಲಮಂಗಲ: ದೇವರೇ ಒಳ್ಳೆಯದು ಮಾಡಪ್ಪ ಎಂದು ದೇವರಿಗೆ ಕೈ ಮುಗಿದು ಬೇಡಿಕೊಳ್ಳುವ ಭಕ್ತರನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಳ್ಳರ ಕೂಟ ವಿನೂತನವಾಗಿ ದೇವರಲ್ಲಿ ನಾನೊಬ್ಬ ಕಳ್ಳ ಕಾಪಾಡು ಮಾರಮ್ಮ ಎಂದು ಪೂಜೆ ನೆರವೇರಿಸಿ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಮಾರಮ್ಮ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಕಳ್ಳತನಕ್ಕೆ ಬಂದ ಇಬ್ಬರು ಕಳ್ಳರು ದೇವಾಲಯದ ಹುಂಡಿ ಕದಿಯುವ ಮೊದಲು ಓರ್ವ ತಪ್ಪಾಯಿತು ಎಂದು ಪ್ರಾರ್ಥನೆ ಸಲ್ಲಿಸಿ, ದೇವಾಲಯದಲ್ಲಿ ಇದ್ದ ಕಾಣಿಕೆ ಹುಂಡಿಯನ್ನು ನಂತರ ಪ್ಲಾಸ್ಟಿಕ್ ಚೀಲ ಹೊದಿಸಿ ಕದ್ದು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ವ್ಯಕ್ತಿ ಹೊಟ್ಟೆಯಲ್ಲಿ 1ಕೆ.ಜಿ ಮೊಳೆ, ಬೋಲ್ಟ್, ಸ್ಕ್ರೂ ನೋಡಿ ವೈದ್ಯರು ಶಾಕ್

    Thieves

    ಸದ್ಯ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರಯಾಗಿದ್ದು, ದಾಬಸ್ ಪೇಟೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು

  • ಹಿಂದೂ ಧರ್ಮವನ್ನು ಬಿಜೆಪಿ ಸರ್ಕಾರ ಸರ್ವನಾಶ ಮಾಡುತ್ತಿದೆ: ಋಷಿಕುಮಾರ ಸ್ವಾಮೀಜಿ

    ಹಿಂದೂ ಧರ್ಮವನ್ನು ಬಿಜೆಪಿ ಸರ್ಕಾರ ಸರ್ವನಾಶ ಮಾಡುತ್ತಿದೆ: ಋಷಿಕುಮಾರ ಸ್ವಾಮೀಜಿ

    -ಒಂದೇ ಒಂದು ಕರೆ ನೀಡಿದರೆ ಕೇಂದ್ರ ಸರ್ಕಾರವೇ ಅಲ್ಲಾಡುತ್ತೆ

    ಚಿಕ್ಕಮಗಳೂರು: ಹಿಂದೂ ಧರ್ಮವನ್ನು ಕಾಂಗ್ರೆಸ್ ಅಥವಾ ಕುಮಾರಸ್ವಾಮಿ ನಾಶ ಮಾಡಿಲ್ಲ. ಬಿಜೆಪಿ ಸರ್ಕಾರವೇ ಸರ್ವನಾಶ ಮಾಡುತ್ತಿದೆ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಇಂದು ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಪೀಠದಲ್ಲಿ ಮುಜಾವರ್ ನೇಮಕಾತಿಯನ್ನು ಹೈಕೋರ್ಟ್ ರದ್ದುಪಡಿಸಿದ ಖುಷಿಯಲ್ಲಿ ಋಷಿಕುಮಾರ ಸ್ವಾಮೀಜಿ ದತ್ತಪೀಠಕ್ಕೆ ಆಗಮಿಸಿದ್ದರು. ದತ್ತಾತ್ರೇಯ ಸ್ವಾಮೀಜಿಯ ಗುರುವಾಗಿರುವುದರಿಂದ ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಲು ಬಂದಿದ್ದರು ಆದರೆ, ಜಿಲ್ಲಾಡಳಿತ ದತ್ತಪಾದುಕೆ ದರ್ಶನಕ್ಕೆ ಅವಕಾಶ ನೀಡಿತೋ ವಿನಃ ದತ್ತಪಾದುಕೆಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಿಲ್ಲ. ಕೂಡಲೇ ಋಷಿಕುಮಾರ ಸ್ವಾಮಿಜಿ, ಶ್ರೀರಾಮಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಸೇರಿದಂತೆ ಎರಡ್ಮೂರು ಸ್ವಾಮೀಜಿಗಳು ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಗುಹೆಯೊಳಗೆ ಧರಣಿಗೆ ಕೂತರು. ಸಾಧು-ಸಂತರಿಗೆ ಪೂಜೆಗೆ ಅವಕಾಶ ಇಲ್ಲವೆಂದು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಕೂಡ ಹೇಳಿಲ್ಲ. ಆದರೆ, ನೀವು ಹೊಸ ಸಂಪ್ರದಾಯ ಹುಟ್ಟುಹಾಕಿದ್ದೀರಾ ಎಂದು ಗುಹೆಯೊಳಗೆ ಸುಮಾರು ಎರಡು ಗಂಟೆಗಳ ಕಾಲ ಧರಣಿ ಕೂತು ದತ್ತ ಹಾಗೂ ಶ್ರೀರಾಮ ಸ್ಮರಣೆ ಮಾಡಿದರು. ಇದನ್ನೂ ಓದಿ: ದತ್ತಪೀಠಕ್ಕೆ ಮೌಲ್ವಿ ನೇಮಕ ರದ್ದು

    ದತ್ತಪೀಠಕ್ಕೆ ಬಂದ ಹೊರಗಿನ ಭಕ್ತರು ಹಾಗೂ ಪ್ರವಾಸಿಗರಿಗೆ ತೊಂದರೆಯಾಗಬಾರದೆಂದು ಧರಣಿಯನ್ನು ಕೈಬಿಟ್ಟು ಹೊರಬಂದು ಮಾತನಾಡಿದ ಅವರು, ಸರ್ಕಾರಕ್ಕೆ ನಾಚಿಕೆಗೇಡು, ಅಸಯ್ಯ ನಿಮ್ಮನ್ನು ನಂಬಿ ಹಿಂದೂಗಳು ಜೈ…ಜೈ….ಜೈ… ಅಂದಿದ್ದೇ, ಅಂದಿದ್ದು ಅಷ್ಟೆ ಹಿಂದೂಗಳಿಗೆ ಸಿಕ್ಕಿದ್ದು. ದತ್ತಪೀಠದಲ್ಲಿ ಮೈಕ್ ಹಾಕಿಕೊಂಡು ಬಾಂಗ್ ಕೂಗಲು ಅವಕಾಶ ನೀಡಿದ ಸರ್ಕಾರ ಇಂದು ನಮಗೆ ಅರ್ಚನೆ ಮಾಡಲು ಏಕೆ ಬಿಡಲ್ಲ ಎಂದು ಪ್ರಶ್ನಿಸಿದರು.

    ಮುಂದಿನ ದಿನಗಳಲ್ಲಿ ಅವಕಾಶ ನೀಡದಿದ್ದರೆ ರಾಜ್ಯದ ಎಲ್ಲಾ ಮಠಾಧೀಶರು ಜಾಗೃತರಾಗಿ, ನಾವೆಲ್ಲಾ ಸಣ್ಣ-ಪುಟ್ಟ ಮಠದವರು. ಬಾಳೆಹೊನ್ನೂರು-ಆದಿಚುಂಚನಗಿರಿ ಪೀಠಕ್ಕಿಂತ ದೊಡ್ಡ ಮಠ ಬೇಕಾ ಒಂದೇ ಒಂದು ಕರೆ ನೀಡಿದರೆ ಕೇಂದ್ರ ಸರ್ಕಾರವೇ ಅಲ್ಲಾಡುತ್ತೆ. ರಾಮಸೇನೆ, ಬಜರಂಗದಳ, ಆರ್‌ಎಸ್‌ಎಸ್‌ ಪರವೂ ಮಾತನಾಡಬೇಡಿ, ಹಿಂದೂ ಧರ್ಮದ ದೇವಸ್ಥಾನಗಳ ಬಗ್ಗೆ ಮಾತನಾಡಿ. ನಾವು ಚಿಕ್ಕವರು ಗುಬ್ಬಚ್ಚಿ ಹೋಗಿ ಗಿಡಗದ ಮುಂದೆ ಯುದ್ಧ ಮಾಡಿದಂತೆ ಆಗುತ್ತೆ. ದೊಡ್ಡ-ದೊಡ್ಡ ಮಠಾಧೀಶರೆಲ್ಲಾ ಬಂದು ದತ್ತಪೀಠಕ್ಕೆ ಯತಿ-ಸಾಧು-ಸಂತರನ್ನು ಪೂಜೆ ಸಲ್ಲಿಸಲು ಏಕೆ ಬಿಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದತ್ತಪೀಠದಲ್ಲಿ ಮುಜಾವರ್ ನೇಮಕ ರದ್ದು – ಮತ್ತೆ ಸರ್ಕಾರದ ಅಂಗಳಕ್ಕೆ ಚೆಂಡು

    ಮತಾಂತರ ತಡೆ ಕಾಯ್ದೆ ಜಾರಿಗೆ ತರುತ್ತೇವೆ ಎಂದೊಡನೆ ಊರಲ್ಲಿರೋ ಪಾದ್ರಿಗಳೆಲ್ಲಾ ಒಗ್ಗಟ್ಟಾಗಿ ಕೂತಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ. ಹಿಂದೂ ಧರ್ಮದ ಹೆಸರೇಳಿಕೊಂಡು ಮಠದ ಅನ್ನ ತಿನ್ನುತ್ತಿದ್ದೇವೆ. ಆಚೆಗೆ ಮಾತ್ರ ಬರಲ್ಲ. ಎದ್ದು ಹೊರ ಬನ್ನಿ ಎಂದು ಮಠಾಧೀಶರ ವಿರುದ್ಧವೂ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪಿತೃಪಕ್ಷದಲ್ಲಿ ಥಿಯೇಟರ್ ಓಪನ್ ಮಾಡಲ್ಲ – ಉಡುಪಿ ಚಿತ್ರಮಂದಿರ ಮಾಲೀಕರ ತೀರ್ಮಾನ

  • ಮುಸ್ಲಿಂ ಯುವತಿಯ ಕನಸು ನನಸು-ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ

    ಮುಸ್ಲಿಂ ಯುವತಿಯ ಕನಸು ನನಸು-ದೇವಸ್ಥಾನಕ್ಕೆ ಶ್ರೀಕೃಷ್ಣನ ಚಿತ್ರ ಉಡುಗೊರೆ

    ತಿರುವನಂತಪುರಂ: ದೇವರನಾಡು ಕೇರಳದ ಮುಸ್ಲಿಂ ಯುವತಿ ಜಸ್ನಾ ಸಲೀಂ ಅವರ ಬಹುದಿನಗಳ ಕನಸು ಇಂದು ಈಡೇರಿದೆ.

    ಕಳೆದ ಕೆಲ ವರ್ಷಗಳ ಹಿಂದೆ ಯುವತಿ ಜಸ್ನಾ ಅವರ ಹೆಸರು ಎಲ್ಲೆಡೆ ಕೇಳಿ ಬಂದಿತ್ತು. ಅದಕ್ಕೆ ಕಾರಣ ಅವರು ಬಿಡಿಸಿದ ವರ್ಣರಂಜಿತವಾದ ಚಿತ್ರಗಳಾಗಿವೆ. ದೇವರ ಭಾವಚಿತ್ರಗಳ ಪೆಂಟಿಂಗ್ ಈಕೆಗೆ ಅಚ್ಚುಮೆಚ್ಚು. ಕಳೆದ 6 ವರ್ಷಗಳಲ್ಲಿ ಸುಮಾರು 500ಕ್ಕೂ ಹೆಚ್ಚು ವಿವಿಧ ದೇವರ ಕಲಾಕೃತಿಗಳನ್ನು ಕುಂಚದಲ್ಲಿ ಅರಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ: ಕಟೀಲ್

    ತರಬೇತಿ ಪಡೆಯದೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುವ ಜಸ್ನಾ ಅವರಿಗೆ ಬಹುದಿನಗಳ ಆಸೆಯೊಂದಿತ್ತು. ಅದು ಇದೀಗ ಈಡೇರಿದೆ. ಇದುವರೆಗೆ ಅವರು ರಚಿಸಿದ ಚಿತ್ರಗಳನ್ನು ಹಿಂದೂ ದೇವರುಗಳ ಭಾವಚಿತ್ರಗಳೇ ಹೆಚ್ಚು. ತಾವು ಮಾಡಿದ ಕೃಷ್ಣನ ಪೆಂಟಿಂಗ್‍ನ್ನು ದೇವಸ್ಥಾನಕ್ಕೆ ನೀಡಬೇಕೆನ್ನುವುದು ಈಕೆಯ ಬಯಕೆಯಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಸಾಧ್ಯವಾಗಿರಲಿಲ್ಲ. ಇದೀಗ ಕಾಲ ಕೂಡಿ ಬಂದಿದ್ದು, ಭಾನಿವಾರ ಉಲನಾಡು ಗ್ರಾಮದ ಶ್ರೀಕೃಷ್ಣದೇವಸ್ಥಾನಕ್ಕೆ ತನ್ನ ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಟಿಪ್ಪುವಿನ ವಂಶಸ್ಥರಾ?: ಕೆ.ಜಿ ಬೋಪಯ್ಯ

    ಈ ಬಗ್ಗೆ ಸಂತಸ ಹಂಚಿಕೊಂಡಿರುವ ಜಸ್ನಾ, ಶ್ರೀ ಕೃಷ್ಣನ ಮೂರ್ತಿಯನ್ನು ಕಣ್ತುಂಬಿಕೊಳ್ಳುವುದು ಮತ್ತು ಆ ದೇವರ ಮುಂದೆ ನನ್ನ ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿವುದು ನನ್ನ ದೊಡ್ಡ ಕನಸಾಗಿತ್ತು. ಪಂಡಲಂನ ಉಲನಾಡು ಶ್ರೀಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನನ್ನ ಕನಸು ನನಸಾಗಿದ್ದಕ್ಕೆ ತುಂಬಾ ಸಂತೋಷವಾಯಿತ್ತು. ಈ ಸಂಭ್ರಮವನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದೇವಸ್ಥಾನದ ಅಧಿಕಾರಿಗಳಿಗೆ ನನ್ನ ಕೃತಜ್ಞತೆಗಳು ಎಂದು ಜಸ್ನಾ ಹೇಳಿದ್ದಾರೆ.

  • ಸಿ.ಎಂ.ಗೆ ಉಡುಗೊರೆ ನೀಡಿದ್ದ ಬೆಳ್ಳಿ ಗದೆಯನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ ಬಿ.ಸಿ.ಪಾಟೀಲ್

    ಸಿ.ಎಂ.ಗೆ ಉಡುಗೊರೆ ನೀಡಿದ್ದ ಬೆಳ್ಳಿ ಗದೆಯನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ ಬಿ.ಸಿ.ಪಾಟೀಲ್

    ಹಾವೇರಿ: ಸಿ.ಎಂ.ಗೆ ಉಡುಗೊರೆ ನೀಡಿದ್ದ ಬೆಳ್ಳಿ ಗದೆಯನ್ನ ಆಂಜನೇಯ ದೇವಸ್ಥಾನಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸಮರ್ಪಣೆ ಮಾಡಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 28, ರಂದು ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಆಗಮಿಸಿದ್ದರು. ಈ ವೇಳೆ ಸಿಎಂಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೆಳ್ಳಿ ಗದೆಯನ್ನು ಉಡುಗೊರೆ ನೀಡಿದ್ದರು. ಇದನ್ನೂ ಓದಿ:  ಮಳೆಯಿಂದ ಹಾಸ್ಟೆಲ್ ಜಲಾವೃತ: ರಾತ್ರಿಯಿಡೀ ಛಾವಣಿ ಹತ್ತಿ ಕುಳಿತ ವಿದ್ಯಾರ್ಥಿಗಳು

    ಈ ಉಡುಗೊರೆಯನ್ನ ಆಂಜನೇಯ ದೇವಸ್ಥಾನಕ್ಕೆ ನೀಡುವಂತೆ ಸಿಎಂ ಬೊಮ್ಮಾಯಿ ಹೇಳಿದ್ದರು. ಹೀಗಾಗಿ ಇಂದು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕದರಮಂಡಲಗಿಯ ಆಂಜನೇಯ ದೇವಸ್ಥಾನಕ್ಕೆ ಬೆಳ್ಳಿ ಗದೆ ಸಮರ್ಪಣೆ ಮಾಡಲಾಗಿದೆ. ಆಂಜನೇಯ ದೇವಸ್ಥಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೆಸರಿನಲ್ಲಿ ಪೂಜೆ ಮಾಡಿಸಿ, ಗದೆಯನ್ನ ದೇವಸ್ಥಾನಕ್ಕೆ ಬಿ.ಸಿ.ಪಾಟೀಲ್ ಬೆಳ್ಳಿ ಗದೆ ಅರ್ಪಿಸಿದ್ದಾರೆ. ಇದನ್ನೂ ಓದಿ:  ರೇಷ್ಮೆ ಬೆಳೆಗಾರರಿಗೆ ವಿಶಿಷ್ಟ ಗುರುತಿನ ಚೀಟಿ: ನಾರಾಯಣಗೌಡ

    ಬಿ.ಸಿ.ಪಾಟೀಲ್ ಅವರಿಗೆ ಬ್ಯಾಡಗಿ ಬಿಜೆಪಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರಾದ ಆರ್.ಎನ್.ಗಂಗೋಳ, ರವಿ ಮೆಣಸಿನಕಾಯಿ ಸಾಥ್ ನೀಡಿದರು. ಸಿ.ಎಂ ಉಡುಗೊರೆಯನ್ನು ತೆಗೆದುಕೊಳ್ಳದೆ, ಅದನ್ನ ದೇವರಿಗೆ ನೀಡಿ ಸರಳತೆ ಮೆರೆದಿದ್ದಾರೆ.