Tag: ದೇವಸ್ಥಾನ

  • ನಾಗರ ಪಂಚಮಿ ದಿನವೇ ಕುಕ್ಕೆ ಸುಬ್ರಹ್ಮಣ್ಯ ಬಂದ್!

    ನಾಗರ ಪಂಚಮಿ ದಿನವೇ ಕುಕ್ಕೆ ಸುಬ್ರಹ್ಮಣ್ಯ ಬಂದ್!

    ಮಂಗಳೂರು: ಇಂದು ನಾಡಿನೆಲ್ಲೆಡೆ ನಾಗರಪಂಚಮಿ. ಆದರೆ ಈ ಕೊರೊನಾ ನಾಗರಪಂಚಮಿ ಆಚರಣೆಗೂ ಅಡ್ಡಿಯಾಗಿದೆ. ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ.

    ಇಂದು ನಡೆಯುತ್ತಿರುವ ನಾಗರಪಂಚಮಿ ಪೂಜೆಗೆ ಸಾರ್ವಜನಿಕರಿಗೆ ಅವಕಾಶ ನೀಡದಿರಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಪಾಡಲು ಕಷ್ಟಕರವಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಾಗರಪಂಚಮಿಗೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದರೆ ಈ ಬಾರಿ ಅರ್ಚಕರಿಂದ ಮಾತ್ರ ಧಾರ್ಮಿಕ ವಿಧಿ ವಿಧಾನ ನಡೆಯಲಿದೆ.

    ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ದೇಗುಲಕ್ಕೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಗರ ಪಂಚಮಿಯ ದಿನದಂದು ಸೇವೆಗಳು, ಸೇವಾಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಪ್ರಕಟಣೆ ಹೊರಡಿಸಿದೆ.

    ಉತ್ತರ ಕರ್ನಾಟಕದ ಗ್ರಾಮ ಗ್ರಾಮಗಳಲ್ಲೂ ಕೊರೊನಾ ರಣಕೇಕೆ ಹಾಕುತ್ತಿರುವುದರಿಂದ ಗ್ರಾಮಸ್ಥರೇ ಎಚ್ಚರಿಕೆ ತೆಗೆದುಕೊಂಡಿದ್ದಾರೆ. ಚಿಕ್ಕೋಡಿಯಲ್ಲಿ ನಾಗರಪಂಚಮಿಯಂದು ಮದುವೆಯಾದ ಸಹೋದರಿಯರನ್ನ ತವರು ಮನೆಗೆ ಕರೆಸುವ ಸಂಪ್ರದಾಯ ಇದೆ. ಆದರೆ ಈ ಕೊರೊನಾದಿಂದ ಯಾರು ಪಂಚಮಿ ಹಬ್ಬಕ್ಕೆ ಪರ ಊರಿನವರನ್ನ ಕರೆಯಬಾರದು ಎಂದು ಡಂಗುರ ಸಾರಲಾಗಿದೆ.

    ಮಹಾಮಾರಿ ಕೊರೊನಾದಿಂದಾಗಿ ಎಲ್ಲೆಡೆ ಪಂಚಮಿ ಹಬ್ಬ ಕಳೆಗುಂದಿದೆ. ಗದಗದಲ್ಲಿ ಜನ ತಮ್ಮ ತಮ್ಮ ಮನೆಯಲ್ಲೇ ಹಬ್ಬ ಆಚರಿಸುತ್ತಿದ್ದಾರೆ. ಒಟ್ಟಾರೆ ಹಬ್ಬಗಳ ಮೇಲೂ ಕೊರೊನಾ ಎಫೆಕ್ಟ್ ತಟ್ಟಿದೆ.

  • ಭೀಮನಮಾವಾಸ್ಯೆ ಪ್ರಯುಕ್ತ ದೇಗುಲದ ಮುಂದೆ ಕ್ಯೂ- ಮಾರುಕಟ್ಟೆಯಲ್ಲಿ ಜನರು ಭರ್ಜರಿ ವ್ಯಾಪಾರ

    ಭೀಮನಮಾವಾಸ್ಯೆ ಪ್ರಯುಕ್ತ ದೇಗುಲದ ಮುಂದೆ ಕ್ಯೂ- ಮಾರುಕಟ್ಟೆಯಲ್ಲಿ ಜನರು ಭರ್ಜರಿ ವ್ಯಾಪಾರ

    ಬೆಂಗಳೂರು: ಒಂದು ವಾರಗಳ ಲಾಕ್‍ಡೌನ್ ಮುಗಿಯಲು ಇನ್ನೊಂದೇ ದಿನ ಬಾಕಿ ಇದೆ. ಆದರೆ ಇಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಭಕ್ತಾದಿಗಳು ಸಾಲುಗಟ್ಟಿ ನಿಂತಿದ್ದಾರೆ.

    ಬುಧವಾರ ಬೆಳಗ್ಗೆ 5 ಗಂಟೆಗೆ ಬೆಂಗಳೂರು ಲಾಕ್‍ಡೌನ್ ಅಂತ್ಯವಾಗಲಿದೆ. ಆದರೆ ಇಂದು ಭೀಮನ ಅಮಾವಾಸ್ಯೆ. ಹೀಗಾಗಿ ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನದ ಮುಂದೆ ಭಕ್ತಾದಿಗಳು ಸಾಲುಗಟ್ಟಿ ನಿಂತಿದ್ದಾರೆ. ಇತ್ತ ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯಲ್ಲಿರುವ ಬಂಡಿ ಮಹಾಕಾಳಿ ದೇಗುಲದಲ್ಲಿ ಅಪಾರ ಜನರು ಬಂದಿದ್ದಾರೆ. ಲಾಕ್‍ಡೌನ್ ಇದ್ದರೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವರ ದರ್ಶನ ಮಾಡಲು ನೂರಾರು ಜನರು ಬಂದಿದ್ದಾರೆ.

    ಇನ್ನೂ ಭೀಮನಮಾವಾಸ್ಯೆ ಪ್ರಯುಕ್ತ ಮಾರುಕಟ್ಟೆಯಲ್ಲಿ ಜನರು ಭರ್ಜರಿಯಾಗಿ ವ್ಯಾಪಾರ ಮಾಡುತ್ತಿದ್ದಾರೆ. ಕೊರೊನಾ ಎಫೆಕ್ಟ್ ನಡುವೆಯೂ ಜನರು ಮಾಸ್ಕ್ ಧರಿಸುವುದನ್ನು ಮರೆತು ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಆನಂದ್ ಪುರ ಮಾರುಕಟ್ಟೆಯಲ್ಲೂ ಮಾಸ್ಕ್ ಹಾಗೂ ಮುಂಜಾಗೃತ ಕ್ರಮಕೈಗಳದೇ ವ್ಯಾಪಾರದಲ್ಲಿ ಜನರು ಫುಲ್ ಬ್ಯುಸಿಯಾಗಿದ್ದಾರೆ. 12 ಗಂಟೆಯ ತನಕ ವ್ಯಾಪಾರಕ್ಕೆ ಅವಕಾಶ ಇರುವುದರಿಂದ  ಪೊಲೀಸರು ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದಾರೆ.

    ಮೈಸೂರು ರಸ್ತೆಯ ಫ್ಲೈಓವರ್ ಕೆಳಭಾಗದಲ್ಲಿ ತರಕಾರಿ, ಹಣ್ಣು, ಸೊಪ್ಪು ವ್ಯಾಪಾರ ಜೋರಾಗಿ ನಡೆಯುತ್ತಿತ್ತು. ಆಗ ಸಾಮಾಜಿಕ ಅಂತರ ಕಾಯದ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

    ಇತ್ತ ಶ್ರೀರಾಮಪುರದಲ್ಲಿ ಎಂದಿನಂತೆ ಜನರ ಹಾಗೂ ವಾಹನಗಳ ಸಂಚಾರವಿದೆ. ದೇವಸ್ಥಾನ ಸಹ ಒಪನ್ ಆಗಿದೆ. ಯಾವುದೇ ರೀತಿಯ ಸಾಮಾಜಿಕ ಅಂತರ ಕೂಡ ಇಲ್ಲದೆ ಜನರು ಗುಂಪು ಗುಂಪಾಗಿ ನೆರೆದಿದ್ದಾರೆ. ಟೌನ್ ಹಾಲ್ ಮುಂದೆ ವಾಹನಗಳ ಓಡಾಟ ಜೋರಾಗಿದೆ. ಮೈಸೂರು ರಸ್ತೆ, ಕಾರ್ಪೊರೇಷನ್, ಜಯನಗರ ಭಾಗದ ಎಲ್ಲ ವಾಹನಗಳು ಟೌನ್ ಹಾಲ್ ಮುಂದೆ ಸಂಚಾರ ಮಾಡುತ್ತಿವೆ.

  • ಕೊರೊನಾ ಎಫೆಕ್ಟ್- ಶ್ರಾವಣ ಮಾಸದ ಪುರಾಣ, ಧಾರ್ಮಿಕ ಕಾರ್ಯಗಳಿಗೂ ಬ್ರೇಕ್

    ಕೊರೊನಾ ಎಫೆಕ್ಟ್- ಶ್ರಾವಣ ಮಾಸದ ಪುರಾಣ, ಧಾರ್ಮಿಕ ಕಾರ್ಯಗಳಿಗೂ ಬ್ರೇಕ್

    ಧಾರವಾಡ: ಪ್ರತಿ ವರ್ಷ ಶ್ರಾವಣ ಮಾಸದಂದು ಪುರಾಣ, ಪ್ರವಚನಗಳ ಕಾರ್ಯಕ್ರಮಗಳು ಭರದಿಂದ ನಡೆಯುತ್ತಿದ್ದವು. ಆದರೆ ಕೊರೊನಾದಿಂದಾಗಿ ಶ್ರಾವಣ ಮಾಸದ ಗದ್ದಲವೇ ಇಲ್ಲದಂತಾಗಿದ್ದು, ಈ ಮೂಲಕ ಶ್ರಾವಣಮಾಸದ ವಿಶೇಷ ಪುರಾಣ ಕಾರ್ಯಕ್ರಮಗಳ ಮೇಲೂ ಕೊರೊನಾ ಕರಿ ನೆರಳು ಬಿದ್ದಿದೆ.

    ಪ್ರತಿ ವರ್ಷ ಶ್ರಾವಣಮಾಸದ ತಿಂಗಳಲ್ಲಿ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಿತ್ಯ ಅನ್ನ ಸಂತರ್ಪಣೆ ಹಾಗೂ ಸಂಜೆ ಪುರಾಣ, ಪ್ರವಚನ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆ ದೇವಸ್ಥಾನದ ಆಡಳಿತ ಮಂಡಳಿ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದೆ.

    ಧಾರವಾಡ ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶ್ರಾವಣ ಮಾಸದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆದರೆ ಇದೀಗ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ವ್ಯಾಪಿಸುತ್ತಿದ್ದು, ಹೀಗಾಗಿ ಹೆಚ್ಚು ಜನ ಸೇರುವ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಧಾರವಾಡ ಜಿಲ್ಲಾಡಳಿತ ಸಹ ಈಗಾಗಲೇ ಜಿಲ್ಲೆಯಲ್ಲಿ ಲಾಕ್‍ಡೌನ್ ಆದೇಶ ಹೊರಡಿಸಿದೆ.

    ಇನ್ನೇನು ಕೆಲವೇ ದಿನಗಳಲ್ಲಿ ಶ್ರಾವಣ ಮಾಸ ಆರಂಭವಾಗಲಿದೆ. ಶ್ರಾವಣಮಾಸದ ಸಂದರ್ಭದಲ್ಲಿ ಹಾರೋಬೆಳವಡಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದವು. ಅಲ್ಲದೆ ಅನೇಕ ವರ್ಷಗಳಿಂದ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಕಾರ್ಯ ಕೂಡ ಮಾಡಿಕೊಂಡು ಬರಲಾಗಿತ್ತು. ಇದೀಗ ಕೊರೊನಾ ಹಿನ್ನೆಲೆಯಲ್ಲಿ ಅದೆಲ್ಲವನ್ನೂ ರದ್ದು ಮಾಡಲಾಗಿದೆ. ದೇವಸ್ಥಾನದ ಒಳಗೆ ಪ್ರವೇಶಿಸದಂತೆ ಭಕ್ತರಿಗೆ ನಿರ್ಬಂಧ ಸಹ ಹೇರಲಾಗಿದೆ.

  • ಚಾಮುಂಡಿ ತಾಯಿಯ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್

    ಚಾಮುಂಡಿ ತಾಯಿಯ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್

    ಮೈಸೂರು: ಕೊರೊನಾ ವೈರಸ್ ಭೀತಿ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಇಂದಿನಿಂದ ಐದು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವುದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

    ಐದು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿದ್ದರಿಂದ ಚಾಮುಂಡಿ ಬೆಟ್ಟದಲ್ಲಿ ಸರಳ ಹಾಗೂ ಸಾಂಪ್ರದಾಯಿಕ ಪೂಜೆಯನ್ನು ಮಾತ್ರ ಮಾಡಲಾಗಿದೆ. ಹೀಗಾಗಿ ನಟ ದರ್ಶನ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

    ದೇವಸ್ಥಾನದ ಆವರಣದಲ್ಲೇ ಚಾಮುಂಡಿ ತಾಯಿ ಉತ್ಸವ ನಡೆದಿದ್ದು, ಈಗಾಗಲೇ ಪೂಜಾ ಕೈಂಕರ್ಯಗಳು ಮುಕ್ತಾಯವಾಗಿದೆ. ನಟ ದರ್ಶನ್ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದುಕೊಂಡಿದ್ದಾರೆ.

    ಮೂರನೇ ಆಷಾಢ ಶುಕ್ರವಾರ ಹಾಗೂ ವಾರಾಂತ್ಯ ಶನಿವಾರ, ಭಾನುವಾರದಂದು ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧವಿದೆ. ಇದರ ಜೊತೆಗೆ ಸೋಮವಾರ ಚಾಮುಂಡೇಶ್ವರಿ ದೇವಿಯ ಜನ್ಮೋತ್ಸವವಿರುವ ಕಾರಣ ಹಾಗೂ ಆಷಾಢ ಮಾಸದ ಕಡೆಯ ಮಂಗಳವಾರ ಸೇರಿ ಸತತ ಐದು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಮಾಡಲಾಗಿದೆ.

    ಜುಲೈ 17ರಂದು ಕಡೆಯ ಆಷಾಢ ಶುಕ್ರವಾರ ಇರುವ ಕಾರಣ ಅಂದು ಕೂಡ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಉತ್ತನಹಳ್ಳಿ ದೇವಾಲಯಕ್ಕೂ ನಾಳೆಯಿಂದ ಸತತ ಐದು ದಿನಗಳ ಕಾಲ ಹಾಗೂ ಕೊನೆಯ ಆಷಾಢ ಶುಕ್ರವಾರ ಜುಲೈ 17ರಂದು ಭಕ್ತರ ಪ್ರವೇಶಕ್ಕೆ ನಿರ್ಬಂಧವಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಮಾಡಿದ್ದಾರೆ.

  • ದೇವರಗುಡ್ಡದ ಐತಿಹಾಸಿಕ ದೇವಾಯಲದಲ್ಲಿ ದರ್ಶನ ಭಾಗ್ಯ ಬಂದ್

    ದೇವರಗುಡ್ಡದ ಐತಿಹಾಸಿಕ ದೇವಾಯಲದಲ್ಲಿ ದರ್ಶನ ಭಾಗ್ಯ ಬಂದ್

    ಹಾವೇರಿ: ರಾಜ್ಯ ಸರ್ಕಾರದ ಆದೇಶ ಹಾಗೂ ಕೆಲವು ಸೂಚನೆಗಳನ್ನ ಪಾಲನೆ ಮಾಡುತ್ತಾ ರಾಜ್ಯದ ಬಹುತೇಕ ದೇವಾಲಯ ಓಪನ್ ಆಗಿದ್ದು, ಭಕ್ತರಿಗೆ ದೇವರ ದರ್ಶನ ಸಿಗುತ್ತಿದೆ.

    ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕು ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದಲ್ಲಿ ಅನಿರ್ಧಿಷ್ಟಾವಧಿವರೆಗೆ ದೇವರ ದರ್ಶನ ಇಲ್ಲ ಎಂದು ಗ್ರಾಮಸ್ಥರು ಹಾಗೂ ದೇವಸ್ಥಾನ ಪ್ರಧಾನ ಅರ್ಚಕರು ನಿರ್ಧಾರ ಮಾಡಿದ್ದಾರೆ. ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರು ಸಭೆ ಸೇರಿ ಈ ನಿರ್ಧಾರ ಮಾಡಿದ್ದಾರೆ.

    ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿ ಎಲ್ಲೆಡೆ ವ್ಯಾಪಿಸ್ತಿರೋದ್ರಿಂದ ದೇವಸ್ಥಾನ ತೆರೆಯದಿರಲು ನಿರ್ಧಾರ ಮಾಡಿದ್ದಾರೆ. ಪ್ರಸಿದ್ಧ ಮಾಲತೇಶ ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಕ್ತರು ದೇವರ ದರ್ಶನಕ್ಕೆ ಬರೋದ್ರಿಂದ ದೇವಸ್ಥಾನ ಸಮಿತಿ, ಅರ್ಚಕರು ಹಾಗೂ ಗ್ರಾಮಸ್ಥರ ಹಿತದೃಷ್ಟಿಯಿಂದ ದೇವರ ದರ್ಶನಕ್ಕೆ ನಿಷೇಧ ಮಾಡಿದ್ದಾರೆ.

  • ಸಿಸಿಟಿವಿ ಲೈವ್ ವೀಕ್ಷಕನ ಸಮಯಪ್ರಜ್ಞೆ- 25 ಲಕ್ಷ ಮೌಲ್ಯದ ನಗ ನಗದು ಬಿಟ್ಟೋಡಿದ ಕಳ್ಳರು

    ಸಿಸಿಟಿವಿ ಲೈವ್ ವೀಕ್ಷಕನ ಸಮಯಪ್ರಜ್ಞೆ- 25 ಲಕ್ಷ ಮೌಲ್ಯದ ನಗ ನಗದು ಬಿಟ್ಟೋಡಿದ ಕಳ್ಳರು

    ಉಡುಪಿ: ಸಿಸಿಟಿವಿ ಲೈವ್ ವೀಕ್ಷಕನಿಂದ ಕಟ್ಕೆರೆ ಶ್ರೀ ನಾಹಾದೇವಿ ಕಾಳಿಕಾಂಬ ಅಮ್ಮನ ದೇವಸ್ಥಾನದ ದೊಡ್ಡ ಕಳ್ಳತನ ತಪ್ಪಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಈ ಘಟನೆ ನಡೆದಿದೆ.

    ಸುಮಾರು 25 ಸಾವಿರ ಮೌಲ್ಯದ ಆಭರಣಗಳನ್ನು ಕದ್ದಿರುವ ಕಳ್ಳರಿಗೆ, ಗೌಪ್ಯವಾಗಿ ಅಳವಡಿಸಿದ್ದ ಸಿಸಿಟಿವಿ ಲಕ್ಷಾಂತರ ಮೌಲ್ಯದ ಕಳ್ಳತನಕ್ಕೆ ಅಡ್ಡಗಾಲಿಟ್ಟಿದೆ. ಕಳೆದ ರಾತ್ರಿ ಕಳ್ಳರು ದೇವಸ್ಥಾನ ಹೊಕ್ಕುವ ಸಂದರ್ಭ ಸಿಸಿಟಿವಿ ವಯರ್ ಕಟ್ ಮಾಡಿ, ಡಿವಿಆರ್ ತೆಗೆದಿದ್ದಾರೆ. ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯವರು ಸೇಫ್ ಕುಂದಾಪುರ ಪ್ರಾಜೆಕ್ಟ್ ಸದಸ್ಯರ ಸಮಯಪ್ರಜ್ಞೆಯಿಂದ ಬಾರೀ ಕಳ್ಳತನ ತಪ್ಪಿದೆ. ದೇವಸ್ಥಾನದ ಮುಖ್ಯದ್ವಾರದ ಬಾಗಿಲು ಒಡೆದು ಒಳ ಪ್ರವೇಶಿಸಿದ ಕಳ್ಳರು ದೇವಸ್ಥಾನದ ಒಳಗಿನ ದೇವಿ ಮೂರ್ತಿಯ ಕೈಯಲ್ಲಿದ್ದ ಬೆಳ್ಳಿಯ ಖಡ್ಗ, ಕೊಡಲಿ ಕಳವುಗೈದಿದ್ದಾರೆ.

    ಬಾಗಿಲಿಗೆ ಅಳವಡಿಸಿದ್ದ ಬೆಳ್ಳಿ ಲೇಪನವನ್ನು ಕಿತ್ತು ತೆಗೆಯಲು ಯತ್ನಿಸಿ ಹಾಳುಗೈದಿದ್ದಾರೆ. ರಾತ್ರಿ 1.27ರ ಹೊತ್ತಿಗೆ ಸಿಸಿ ಕ್ಯಾಮೆರಾ ಬಂದ್ ಆಗಿದೆ. ಇದನ್ನು ಗಮನಿಸಿದ ಸಿಸಿ ಕ್ಯಾಮೆರಾ ವೀಕ್ಷಕ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಠಾಣೆಯಿಂದ ಬೀಟ್ ಸಿಬ್ಬಂದಿ ತಕ್ಷಣ ದೇವಸ್ಥಾನದ ಬಳಿ ಬಂದಾಗ ಯಾವುದೋ ವಾಹನ ಬಂದದ್ದನ್ನು ಅರಿತ ಕಳ್ಳರು ಪರಾರಿಯಾಗಿದ್ದಾರೆ.

    ದೇವಸ್ಥಾನದ 26 ಲಕ್ಷದ ಬೆಳ್ಳಿ, 5 ಲಕ್ಷದ ಮೌಲ್ಯದ ಸೊತ್ತುಗಳು ದೇಗುಲದಲ್ಲೇ ಉಳಿದಿದೆ. ಇದೇ ದೇವಸ್ಥಾನದಲ್ಲಿ ಈ ಹಿಂದೆ ಎರಡು ಬಾರಿ ಕಳ್ಳತನವಾಗಿತ್ತು. ಕುಂದಾಪುರ ಎ.ಎಸ್ಪಿ ಹರಿರಾಂ ಶಂಕರ್, ಸರ್ಕಲ್ ಇನ್‍ಸ್ಪೆಕ್ಟರ್ ಗೋಪಿಕೃಷ್ಣ, ಕುಂದಾಪುರ ಪಿಎಸ್‍ಐ ಹರೀಶ್ ಆರ್. ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಜಾಡು ಹಿಡಿದಿರುವ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

  • ಕೊರೊನಾದಿಂದ ದೇವಸ್ಥಾನಕ್ಕಿಲ್ಲ ಪ್ರವೇಶ – ಭಕ್ತರಿಂದ ಮೈಲಿಗಲ್ಲಿಗೆ ಪೂಜೆ

    ಕೊರೊನಾದಿಂದ ದೇವಸ್ಥಾನಕ್ಕಿಲ್ಲ ಪ್ರವೇಶ – ಭಕ್ತರಿಂದ ಮೈಲಿಗಲ್ಲಿಗೆ ಪೂಜೆ

    ಶಿವಮೊಗ್ಗ: ತಾವು ನಂಬಿದ ದೈವವನ್ನು ಒಲಿಸಿಕೊಳ್ಳಲು ಭಕ್ತರು ಹಲವು ರೀತಿಯ ಮಾರ್ಗ ಅನುಸರಿಸುತ್ತಾರೆ. ಕೆಲವರು ನೂರಾರು ಕಿ.ಮೀ ನಡೆದು ಸಾಗಿ ತಾನು ನಂಬಿದ ದೇವರ ದರ್ಶನ ಮಾಡುತ್ತಾರೆ. ಇನ್ನು ಕೆಲವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸುತ್ತಾರೆ. ಆದರೆ ಕೊರೊನಾದಿಂದಾಗಿ ಕಳೆದ ಮೂರು ತಿಂಗಳಿನಿಂದ ಮಂದಿರ ಮಸೀದಿಗಳು ಮುಚ್ಚಿರುವುದರಿಂದ ಭಕ್ತರು ದೇವರನ್ನು ಒಲಿಸಿಕೊಳ್ಳಲು ಬೇರೊಂದು ಮಾರ್ಗ ಕಂಡುಕೊಂಡಿದ್ದಾರೆ.

    ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸೌಹಾರ್ದ ಕೇಂದ್ರದಲ್ಲಿ ಹಿಂದೂ ದೇವಾಲಯ ಹಾಗೂ ಮುಸ್ಲಿಮರ ಮಸೀದಿ ಎರಡು ಒಟ್ಟೊಟ್ಟಿಗೆ ಇದೆ. ಈಗಾಗಿ ಈ ಸ್ಥಳ ಭಾವೈಕ್ಯತೆಯ ಕೇಂದ್ರವಾಗಿದೆ. ಇಲ್ಲಿಗೆ ಪ್ರತಿ ಅಮವಾಸ್ಯೆ ಹಾಗೂ ಹುಣ್ಣಿಮೆಯ ದಿನದಂದು ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಆದರೆ ಕೊರೊನಾದಿಂದಾಗಿ ಕಳೆದ ಮೂರು ತಿಂಗಳಿನಿಂದ ಇದಕ್ಕೆ ಬ್ರೇಕ್ ಬಿದ್ದಿದೆ. ದೇವಾಲಯ ಹಾಗೂ ದರ್ಗಾ ಎರಡು ಮುಚ್ಚಲ್ಪಟ್ಟಿವೆ.

    ಹೀಗಾಗಿಯೇ ಹಣಗೆರೆ ಕಟ್ಟೆ ಈ ದೇವಾಲಯ ಹಾಗೂ ದರ್ಗಾಕ್ಕೆ ಹೋಗುತ್ತಿದ್ದ ಭಕ್ತರು ಹಣಗೆರೆ ಕಟ್ಟೆ ಎಂಬ ನಾಮಫಲಕ ಇರುವ ಮೈಲಿಗಲ್ಲಿಗೆ ಅರಿಶಿನ ಕುಂಕುಮ, ಹೂವು ಹಣ್ಣು ಕಾಯಿ ಇಟ್ಟು ಪೂಜೆ ಸಲ್ಲಿಸುತ್ತಿದ್ದಾರೆ. ಭಕ್ತಿಯ ಪರಾಕಾಷ್ಠೆಯಿಂದ ಮೈಲಿಗೆ ನಮಿಸುತ್ತಿದ್ದಾರೆ. ಮೈಲಿಗಲ್ಲಿಗೆ ಪೂಜೆ ಸಲ್ಲಿಸುತ್ತಿರುವುದನ್ನು ನೋಡಿದರೆ ಭಕ್ತರ ಮೂಢನಂಬಿಕೆ ಎಲ್ಲಿಗೆ ಹೋಗಿ ನಿಲ್ಲುತ್ತೋ ಎಂಬ ಪ್ರಶ್ನೆ ಮೂಡಿದೆ.

  • ಕೊಡಗಿನ ಪ್ರಸಿದ್ಧ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಸಮಯ ಬದಲಾವಣೆ

    ಕೊಡಗಿನ ಪ್ರಸಿದ್ಧ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಸಮಯ ಬದಲಾವಣೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಕೊರೊನಾ ರೋಗಿಗಳ ಸಂಖ್ಯೆ ಇದೀಗ 40ಕ್ಕೆ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನ ಮುಜರಾಯಿ ಇಲಾಖೆ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಪ್ರವೇಶಕ್ಕೆ ಮತ್ತೆ ನಿರ್ಬಂಧ ಹೇರಲು ನಿರ್ಧರಿಸಿವೆ.

    ಮಡಿಕೇರಿಯ ಓಂಕಾರೇಶ್ವರ ದೇವಾಲಯ, ಬಾಗಮಂಡಲದ ಭಗಂಡೇಶ್ವರ ದೇವಾಲಯ, ತಲಕಾವೇರಿ ಸೇರಿದಂತೆ ಪ್ರಮುಖ ದೇವಾಲಯಗಳು ಸಮಯ ಬದಲಾವಣೆ ಮಾಡಿ ಭಕ್ತರ ಪ್ರವೇಶ ನಿರ್ಬಂಧಕ್ಕೆ ಮುಂದಾಗಿವೆ.

    ಇದುವರೆಗೆ ಬೆಳಗ್ಗೆ 5 ರಿಂದ 12 ಗಂಟೆವರೆಗೆ ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ ಭಕ್ತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಇತ್ತು. ಆದರೆ ಕೊಡಗಿನಲ್ಲಿ ಕೊರೊನಾ ಮಿತಿ ಮೀರುತ್ತಿರುವುದರಿಂದ ಆ ಸಮಯವನ್ನು ಬದಲಾಯಿಸಲಾಗಿದೆ. ಬೆಳಗ್ಗೆ 6 ರಿಂದ 8 ಗಂಟೆಯವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ 6 ಗಂಟೆ ಬಳಿಕವಷ್ಟೇ ಭಕ್ತರು ದೇವರ ದರ್ಶನ ಪಡೆಯಲು ಅವಕಾಶ ಇದೆ.

    ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಭಕ್ತರನ್ನು ನಿಯಂತ್ರಿಸುವುದಕ್ಕಾಗಿಯೇ ಈ ರೀತಿ ಸಮಯ ಬದಲಾವಣೆ ಮಾಡಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

    ಎರಡುವರೆ ತಿಂಗಳ ಬಳಿಕ ದೇವಾಲಯಗಳನ್ನು ಸಾರ್ವಜನಿಕರ ದರ್ಶನಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೆ ಕೊಡಗಿನಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇವಾಲಯಗಳ ಆಡಳಿತ ಮಂಡಳಿಗಳು ಇಂತಹ ನಿರ್ಧಾರ ಕೈಗೊಂಡಿವೆ.

  • ರಾಜ್ಯದ ಹಲವೆಡೆ ಸ್ವಯಂ ಲಾಕ್‍ಡೌನ್ ಘೋಷಣೆ- ಮೈಸೂರಲ್ಲಿಂದು ಚಾಮುಂಡಿ ದರ್ಶನ ಸಿಗಲ್ಲ

    ರಾಜ್ಯದ ಹಲವೆಡೆ ಸ್ವಯಂ ಲಾಕ್‍ಡೌನ್ ಘೋಷಣೆ- ಮೈಸೂರಲ್ಲಿಂದು ಚಾಮುಂಡಿ ದರ್ಶನ ಸಿಗಲ್ಲ

    – ನಮ್ಮ ರಕ್ಷಣೆ ನಮ್ಮ ಹೊಣೆ ಎಂದ ಜನ

    ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವ್ಯಾಪಕವಾಗಿ ಬೇರೂರಿದೆ. ಅದರಲ್ಲೂ ಅನ್‍ಲಾಕ್ ಬಳಿಕ ಸೋಂಕು ದಿನದಿನಕ್ಕೆ ಹೆಚ್ಚಳವಾಗುತ್ತಿದೆ. ಅನ್‍ಲಾಕ್ ಮಾಡಿದ ಸರ್ಕಾರ ಸೋಂಕಿಗೆ ಕಡಿವಾಣ ಹಾಕುವಲ್ಲಿ ವಿಫಲವಾಯ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾದಿಂದ ರಕ್ಷಣೆ ಮಾಡಿಕೊಳ್ಳಲು ರಾಜ್ಯದ ಹಲವೆಡೆ ಸ್ವಯಂ ಲಾಕ್‍ಡೌನ್ ಘೋಷಣೆ ಮಾಡಿಕೊಳ್ಳಲಾಗುತ್ತಿದೆ.

    ಮೈಸೂರಿನಲ್ಲಿ 3 ದಿನ ಸೆಲ್ಫ್ ಲಾಕ್‍ಡೌನ್
    ಮೈಸೂರು ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಲಾಕ್‍ಡೌನ್‍ಗೆ ಜಿಲ್ಲಾಡಳಿತ ತೀರ್ಮಾನಿಸಿದೆ. ಇಂದು ಮೊದಲ ಆಷಾಡ ಶುಕ್ರವಾರವಾದರೂ ಕೊರೊನಾ ಭಯಕ್ಕೆ ಚಾಮುಂಡೇಶ್ವರಿ ದೇಗುಲು ತೆರೆಯುತ್ತಿಲ್ಲ. ಬರೀ ಚಾಮುಂಡಿ ಬೆಟ್ಟ ಅಷ್ಟೇ ಅಲ್ಲ, ಮೈಸೂರಿನ ಬೇರೆ ಯಾವುದೇ ದೇವಾಲಯಗಳು ಕೂಡ ಮೂರು ದಿನ ದರ್ಶನಕ್ಕೆ ಲಭ್ಯ ಇರಲ್ಲ.

    ಜೊತೆಗೆ ಶನಿವಾರ ಹಾಗೂ ಭಾನುವಾರ ಮೈಸೂರು ಅರಮನೆ ಹಾಗೂ ಮೃಗಾಲಯ ಬಂದ್‍ಗೆ ಪಾಲಿಕೆ ಆದೇಶಿಸಿದೆ. ಪ್ರಮುಖ 5 ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಸಂತೇಪೇಟೆ, ಶಿವರಾಂಪೇಟೆ, ಮನ್ನಾರ್ಸ್ ಮಾರ್ಕೆಟ್ ಮತ್ತು ಬೋಟಿ ಬಜಾರ್ ಗುರುವಾರದಿಂದ ನಾಲ್ಕು ದಿನ ಬಂದ್ ಮಾಡಲಾಗಿದೆ.

    ಕನಕಪುರ, ಮಾಗಡಿ, ರಾಮನಗರದಲ್ಲಿ ಲಾಕ್‍ಡೌನ್
    ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಕನಕಪುರ, ಮಾಗಡಿ ಹಾಗೂ ರಾಮನಗರ ಪಟ್ಟಣಗಳಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಏರಲಾಗಿದೆ. ಬೆಳಗ್ಗೆ 6 ಗಂಟೆಯಿಂದ 11 ಗಂಟೆವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳು ಓಪನ್ ಮಾಡಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. 11 ಗಂಟೆ ಬಳಿಕ ಕಂಪ್ಲೀಟ್ ಲಾಕ್‍ಡೌನ್ ಮಾಡಲಾಗುತ್ತಿದೆ. ಅಗತ್ಯ, ತುರ್ತು ಸೇವೆ ಹೊರೆತುಪಡಿಸಿ ಎಲ್ಲವನ್ನು ಜಿಲ್ಲಾಡಳಿತ ಬಂದ್ ಮಾಡಿದೆ.

    ಚನ್ನಗಿರಿ ಹಾಗೂ ಹರಿಹರದಲ್ಲಿ ಸೆಲ್ಫ್ ಲಾಕ್‍ಡೌನ್
    ದಾವಣಗೆರೆಯ ಚನ್ನಗಿರಿ ಹಾಗೂ ಹರಿಹರದಲ್ಲಿ ಸ್ಥಳೀಯ ಶಾಸಕರು, ಸಂಘ-ಸಂಸ್ಥೆಯವರು, ವಿವಿಧ ಪಕ್ಷದ ಮುಖಂಡರು ಸೇರಿ ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್ ಮಾಡುತ್ತಿದ್ದಾರೆ. ಚನ್ನಗಿರಿಯಲ್ಲಿ ಬೆಳಗ್ಗೆ 8 ರಿಂದ 12 ರ ವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಹರಿಹರದಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.

    ಶಿಡ್ಲಘಟ್ಟದಲ್ಲಿ ವ್ಯಾಪಾರಿಗಳಿಂದ ಸೆಲ್ಫ್ ಲಾಕ್‍ಡೌನ್
    ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ವ್ಯಾಪಾರಸ್ಥರೇ ಸ್ವಯಂಪ್ರೇರಿತವಾಗಿ ವ್ಯಾಪಾರ ವಹಿವಾಟಿಗೆ ಸಮಯ ನಿಗದಿ ಮಾಡಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲಾಗುತ್ತಿದ್ದು, ಸಂಜೆ 4 ಗಂಟೆಗೆ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿ ವರ್ತಕರೇ ಸ್ವಯಂ ಲಾಕ್‍ಡೌನ್ ಹೇರಿಕೊಳ್ಳುತ್ತಿದ್ದಾರೆ.

    ಶಿಗ್ಗಾಂವಿಯಲ್ಲಿ ಹೋಟೆಲ್ ಕಂಪ್ಲೀಟ್ ಬಂದ್
    ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರೋ ಹಿನ್ನೆಲೆ ಶಿಗ್ಗಾಂವಿ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಜೂನ್ 30ರವರೆಗೆ ಹೊಟೇಲ್‍ಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ ಅಂಗಡಿಗಳ ಓಪನ್ ಮಾಡಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಅನ್‍ಲಾಕ್‍ನಲ್ಲೂ ಲಾಕ್‍ಡೌನ್ ಪಾಲಿಸುತ್ತಿದ್ದಾರೆ.

    ರಾಜ್ಯಾದ್ಯಂತ ಅನ್‍ಲಾಕ್ ಆಗಿದ್ದರೂ ಕೊಲ್ಲೂರು ಗ್ರಾಮದಲ್ಲಿ ಮಾತ್ರ ಅಂಗಡಿಗಳು, ಹೋಟೆಲ್ ಓಪನ್ ಆಗಿಲ್ಲ. ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಕೊಲ್ಲೂರು ಗ್ರಾಮಕ್ಕೆ ಹೆಚ್ಚಾಗಿ ಕೇರಳ, ತಮಿಳುನಾಡು ಭಕ್ತರು ಆಗಮಿಸುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಆಗಸ್ಟ್ ವರೆಗೂ ಇಡೀ ಗ್ರಾಮಕ್ಕೆ ಸ್ವಯಂ ಪ್ರೇರಿತವಾಗಿ ಬಂದ್ ಹೇರಿಕೊಂಡಿದ್ದಾರೆ.

    21 ದಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ ಬಂದ್
    ಧಾರವಾಡ ಜಿಲ್ಲೆಯ ಮೊರಬ ಗ್ರಾಮದಲ್ಲಿ ಇಲ್ಲಿವರೆಗೆ 40 ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಸಂಪೂರ್ಣ ಸಿಲ್‍ಡೌನ್ ಮಾಡಲಾಗಿದೆ. ಗ್ರಾಮದಿಂದ ಯಾರೂ ಹೊರಗೆ ಹೋಗುವಂತಿಲ್ಲ. ಗ್ರಾಮಕ್ಕೆ ಹೊರಗಿನವರು ಯಾರೂ ಒಳಗೆ ಬರುವಂತಿಲ್ಲ. ಗ್ರಾಮದ ಎಲ್ಲ ಕಡೆ ಬ್ಯಾರಿಕೇಡ್ ಹಾಕಿ ಸೀಲ್‍ಡೌನ್ ಮಾಡಲಾಗಿದೆ. ಕೊಡಗಿನಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಗುರುವಾರದಿಂದ 21 ದಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್‍ಗಳನ್ನ ಬಂದ್ ಮಾಡಲಾಗಿದೆ. ಹೋಂ ಸ್ಟೇ ನಡೆಸುತ್ತಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್ ಹಿನ್ನೆಲೆ ಎಚ್ಚೆತ್ತುಕೊಂಡ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ ಮಾಲೀಕರ ಸಂಘ ಹಾಗೂ ಜಿಲ್ಲೆಯ ಜನರು, ಅತಿಥಿಗಳ ಹಿತದೃಷ್ಟಿಯಿಂದ ಬಂದ್ ಸ್ವಯಂ ಲಾಕ್ ಏರಿಕೊಂಡಿದ್ದಾರೆ.

     

    ಅಷ್ಟೇ ಅಲ್ಲ, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಇಂದಿನಿಂದ 3 ದಿನ ಸೆಲ್ಪ್ ಲಾಕ್‍ಡೌನ್ ಏರಲಾಗಿದೆ. ಜೂನ್ 29 ರಿಂದ ಜುಲೈ 10ರ ವರೆಗೂ ಬೆಳಗ್ಗೆ 07 ರಿಂದ ಮಧ್ಯಾಹ್ನ 12 ರವರೆಗೆ ಮಾತ್ರ ವಹಿವಾಟು ಮಾಡಲು ನಿರ್ಧರಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ವ್ಯಾಪಾರ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

  • ‘ಚೆಲುವಿನ ಚಿತ್ತಾರ’ ಸಿನಿಮಾ ರೀತಿಯಲ್ಲಿ ಲವ್ – ಕೊನೆಗೂ ಒಂದಾದ ಪ್ರೇಮಿಗಳು

    ‘ಚೆಲುವಿನ ಚಿತ್ತಾರ’ ಸಿನಿಮಾ ರೀತಿಯಲ್ಲಿ ಲವ್ – ಕೊನೆಗೂ ಒಂದಾದ ಪ್ರೇಮಿಗಳು

    ಕಾರವಾರ: ‘ಚೆಲುವಿನ ಚಿತ್ತಾರ’ ಸಿನಿಮಾ ಲವ್ ಸ್ಟೋರಿಯಂತೆಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಐದು ವರ್ಷದ ಪ್ರೀತಿಗೆ ಜಾತಿ ಅಡ್ಡವಾಗಿದ್ದರೂ ಪ್ರೇಮಿಗಳು ಮದುವೆಯಾಗಿದ್ದಾರೆ.

    ಕುಮಟಾದ ಧನುಷ್ (24) ಮತ್ತು ಸೀತಾ (23) ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು. ಧನುಷ್ ಗ್ಯಾರೇಜ್‍ನಲ್ಲಿ ಕೆಲಸ ಮಾಡುತ್ತಿದ್ದನು. ಗ್ಯಾರೇಜಿನ ಸಮೀಪದಲ್ಲಿದ್ದ ಮನೆಯಲ್ಲಿ ಸೀತಾ ವಾಸಿಸುತ್ತಿದ್ದು, ಪ್ರತಿದಿನ ಕಾಲೇಜಿಗೆ ಹೋಗುತ್ತಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೀತಿ ಬೆಳೆದಿದೆ.

    ವಿದ್ಯಾಭ್ಯಾಸ ಮುಗಿಸಿದ ಸೀತಾ ಕುಮಟಾದ ಹೆಚ್.ಡಿ.ಎಫ್.ಸಿ ಬ್ಯಾಂಕಿನಲ್ಲಿ ಉದ್ಯೋಗಕ್ಕೆ ಸೇರುತ್ತಾಳೆ. ಅಷ್ಟರಲ್ಲಾಗಲೇ ಯುವತಿ ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿರುವುದು ಕುಟುಂಬಕ್ಕೆ ತಿಳಿದಿದೆ. ಆಗ ಹುಡುಗ ಬೇರೆ ಜಾತಿಯಾಗಿದ್ದರಿಂದ ಮದುವೆಗೆ ನಿರಾಕರಿಸಿ ಕೆಲಸ ಬಿಡಿಸಿ ಮನೆಯಲ್ಲಿ ಕೂಡಿಹಾಕಿದ್ದರು. ಆದರೂ ಆತನನ್ನೇ ಮದುವೆಯಾಗಬೇಕು ಎಂದು ಹಠ ಹಿಡಿದು ಸೀತಾ ಮನೆಯಿಂದ ತಪ್ಪಿಸಿಕೊಂಡು ಯುವಕನೊಂದಿಗೆ ಊರು ಬಿಟ್ಟು ಓಡಿಹೋಗಿದ್ದಳು.

    ಸೀತಾ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಇಬ್ಬರನ್ನೂ ಕರೆಯಿಸಿ ಯುವಕನಿಗೆ ಧಮ್ಕಿ ಹಾಕಿದ್ದಾರೆ. ಆಗ ಸೀತಾಳನ್ನು ಸ್ವೀಕಾರ ಕೇಂದ್ರಕ್ಕೆ ಸೇರಿಸಿದ್ದಾರೆ. ಅಲ್ಲದೇ ತಮ್ಮ ಮಗಳು ಬೇರೆ ಜಾತಿಯ ಯುವಕನನ್ನು ಮದುವೆಯಾಗುವುದನ್ನು ಸಹಿಸದ ಪೋಷಕರು ಈ ವೇಳೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಅದಕ್ಕಾಗಿ ಸ್ವೀಕಾರ ಕೇಂದ್ರದಿಂದ ಮಗಳನ್ನು ಕರೆತಂದು ಮನೆಯಲ್ಲಿ ಬಂಧಿಸಿ, ಬಲವಂತದ ಮದುವೆ ಮಾಡಿಸಲು ಪ್ರಯತ್ನ ಮಾಡಿದ್ದಾರೆ.

    ಸೀತಾ ಮತ್ತೆ ಮನೆಯಿಂದ ತಪ್ಪಿಸಿಕೊಂಡು ಬಂದು ಇಂದು ಕಾರವಾರದ ಜನಶಕ್ತಿ ವೇದಿಕೆಯ ಮಾಧವ ನಾಯ್ಕ ಸಹಾಯ ಪಡೆದು ಶೇಜವಾಡದ ಶೆಜ್ಜೇಶ್ವರ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾದವನಾಯ್ಕ ಯುವತಿಯ ತಂದೆಯ ಸ್ಥಾನದಲ್ಲಿ ನಿಂತು ವಧುವನ್ನು ಧಾರೆ ಎರೆದಿದ್ದಾರೆ.