ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ (Shimla) ಜಿಲ್ಲೆಯ ರಾಮ್‍ಪುರದ ಹಿಂದೂ ದೇವಾಲಯದ (Temple) ಆವರಣದಲ್ಲಿ ಮುಸ್ಲಿಂ ಜೋಡಿಗಳು (Muslim Couple) ಇಸ್ಲಾಮಿಕ್ ಪದ್ಧತಿಯಂತೆ ವಿವಾಹವಾಗುವ (Marriage) ಮೂಲಕ ಕೋಮು ಸೌಹಾರ್ದತೆಗೆ ಸಾಕ್ಷಿಯಾದರು.
ಹಿಮಾಚಲ ಪ್ರದೇಶದ ವಿಶ್ವ ಹಿಂದೂ ಪರಿಷತ್ತಿನ ಠಾಕೂರ್ ಸತ್ಯನಾರಾಯಣ ದೇವಸ್ಥಾನದಲ್ಲಿ ಈ ಅಪರೂಪದ ವಿವಾಹ ನೆರವೇರಿತು. ದೇವಸ್ಥಾನದಲ್ಲಿ ನಡೆದ ಮುಸ್ಲಿಂ ಜೋಡಿಯ ವಿವಾಹ ಸಮಾರಂಭಕ್ಕೆ ಮುಸ್ಲಿಂ ಹಾಗೂ ಹಿಂದೂ ಸಮುದಾಯದ ಜನರು ಸಾಕ್ಷಿಯಾದರು. ವಧು ಎಂಟೆಕ್ ಸಿವಿಲ್ ಇಂಜಿನಿಯರ್ ಆಗಿದ್ದು, ವರ ಸಿವಿಲ್ ಇಂಜಿನಿಯರ್ ಆಗಿದ್ದಾರೆ.
ವಿವಾಹ ಸಂದರ್ಭದಲ್ಲಿ ಮೌಲ್ವಿ, ವಕೀಲರು, ಅತಿಥಿಗಳು ದೇವಾಲಯದ ಆವರಣದಲ್ಲಿ ಪಾಲ್ಗೊಂಡಿದ್ದರು. ಧಾರ್ಮಿಕ ಸೌಹಾರ್ದತೆ ಹಾಗೂ ಸಹೋದರತ್ವದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಮದುವೆಯನ್ನು ದೇವಸ್ಥಾನದ ಆವರಣದಲ್ಲಿ ಮಾಡಲಾಗಿತ್ತು ಎಂದು ವಧುವಿನ ತಂದೆ ತಿಳಿಸಿದ್ದಾರೆ. ಇದನ್ನೂ ಓದಿ: ಜೀವನದಿ ಕಾವೇರಿ ತೀರ್ಥ ಪ್ರಸಾದ ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ
ಸತ್ಯನಾರಾಯಣ ದೇವಾಲಯ ಸಂಕೀರ್ಣವು ವಿಶ್ವ ಹಿಂದೂ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಚೇರಿಯಾಗಿರುವುದು ಗಮನಾರ್ಹ ವಿಷಯವಾಗಿತ್ತು. ಈ ಬಗ್ಗೆ ದೇವಸ್ಥಾನ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಆರ್‌ಎಸ್‍ಎಸ್ ಅನ್ನು ಆಗಾಗ ಮುಸ್ಲಿಂ ವಿರೋಧಿ ಎಂದು ಆರೋಪಿಸಲಾಗುತ್ತದೆ. ಆದರೆ ಇಲ್ಲಿ ಮುಸ್ಲಿಂ ಜೋಡಿ ವಿವಾಹವಾಗುವ ಮೂಲಕ ಸನಾತನ ಧರ್ಮವು ಯಾವಾಗಲೂ ಎಲ್ಲರನ್ನು ಪ್ರೇರೆಪಿಸುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿದೆ ಎಂದರು. ಇದನ್ನೂ ಓದಿ: ಐವರು ಮಕ್ಕಳಿದ್ದರೂ, ಆಸ್ತಿಯೆಲ್ಲಾ UP ಸರ್ಕಾರದ ಹೆಸರಿಗೆ ಬರೆದ ವೃದ್ಧ
ಬೆಂಗಳೂರು: ಮಾಂಸಹಾರ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ (C.T.Ravi) ವಾವದವನ್ನ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಈಗ ಮೌನವಾಗಿರುವುದಕ್ಕೆ ಅವರು ಗರಂ ಆಗಿದ್ದಾರೆ.
ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ” ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಬೇರೆಯವರ ದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.
ನಾನು ಮೀನು ತಿಂದು ದೇವಸ್ಥಾನಕ್ಕೆ (Temple) ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ರಾಜ್ಯ ಬಿಜೆಪಿ (BJP) ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ರಾಜ್ಯ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಪಾಲಿಕೆಯಲ್ಲಿ ಹೈಡ್ರಾಮಾ – ಪರಸ್ಪರ ಹೊಡೆದಾಡಿಕೊಂಡ ಬಿಜೆಪಿ, ಆಪ್ ಸದಸ್ಯರು
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅದು ನನ್ನ ಭೇಟಿಯ ಉದ್ದೇಶವಾಗಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ತಿಳಿಸಿದರು.
ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ (Temple) ಭೇಟಿ ನೀಡಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ನಾನ್ ವೆಜ್ (Non Veg) ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅಲ್ಲಿನ ಸ್ಥಳೀಯರ ಅಪೇಕ್ಷೆ ಮೇರೆಗೆ ಹೋಗಿದ್ದೆ. ಹೀಗಾಗಿ ನಾನು ದೇವಸ್ಥಾನ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ. ಎಲ್ಲವನ್ನೂ ಎದೆ ಬಗೆದು ತೋರಿಸಲು ನಾನು ಹನುಮಂತ ಅಲ್ಲ. ಕಾಂಗ್ರೆಸ್‌ನವರಂತೆ ನಾನು ತಿಂದು ಹೋಗಿದ್ದೆ ಏನ್ ಈಗ ಅಂತ ನಾನು ಹೇಳಲ್ಲ ಎಂದು ಸ್ಪಷ್ಟ ಪಡಿಸಿದರು.
ನಾನು ನಾನ್ ವೆಜ್ ತಿಂದಿದ್ದು ಹೌದು, ಆದರೆ ದೇವಸ್ಥಾನದ ಒಳಗೆ ಹೋಗಲಿಲ್ಲ. ದೇವಸ್ಥಾನದ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದು, ಗರ್ಭಗುಡಿಯ ಹೊರಭಾಗದಲ್ಲಿ ಇದ್ದೆ. ದೇವಸ್ಥಾನದ ಆವರಣದಲ್ಲಿ ಕಟ್ಟಡ ಕಟ್ಟಲು ಮುಸ್ಲಿಮರು ಅವಕಾಶ ಕೊಟ್ಟಿರಲಿಲ್ಲ. ಈ ದೇವಸ್ಥಾನಕ್ಕೆ ಭೇಟಿ ನೀಡಬೇಕೆಂದು ಮೊದಲೇ ನಿರ್ಧಾರ ಮಾಡಿರಲಿಲ್ಲ. ಅಲ್ಲಿನ ಸ್ಥಳೀಯರೇ ಕರೆದುಕೊಂಡು ಹೋಗಿದ್ದರು. ಕೆಲವು ವೆಜ್ ಮತ್ತು ನಾನ್ ವೆಜ್ ದೇವಸ್ಥಾನಗಳಿವೆ, ನಾನ್ ವೆಜ್ ದೇವಸ್ಥಾನಗಳಲ್ಲಿ ಮಾಂಸಹಾರಿ ನೈವೇದ್ಯ ಮಾಡಲಾಗುತ್ತದೆ. ಅಂಥ ದೇವಸ್ಥಾನಗಳಿಗೆ ಹೋಗಬಹುದು ಎಂದು ಹೇಳಿದರು. ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ ಸಿಕ್ಕಿಬಿದ್ರೆ 5 ಸಾವಿರ ದಂಡ
ಘಟನೆಯೇನು?: ಫೆ.19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಸಿ.ಟಿ ರವಿ ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ನಂತರ ಭಟ್ಕಳಕ್ಕೆ ಆಗಮಿಸಿದ್ದರು. ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಮೀನೂಟ ಸೇವಿಸಿದ್ದ ಸಿ.ಟಿ ರವಿ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭಟ್ಕಳ ಶಾಸಕ ಸುನಿಲ್ ನಾಯ್ಕ (Sunil Naik) ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಘಟನೆ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮೋದಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ: ಶೋಭಾ ಕರಂದಾಜ್ಲೆ
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಶುಕ್ರವಾರ) ತಮ್ಮ ಎರಡನೇ ಬಜೆಟ್ (Karnataka Budget 2023) ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆ ಹೊತ್ತಲ್ಲೇ ಮಂಡಿಸಲಾಗುತ್ತಿರುವ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಎಸ್ ಎನ್.ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು. ಸಿಎಂ ವಿಧಾನಸೌಧಕ್ಕೆ ತೆರಳುವ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಶುಕ್ರವಾರ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ಮಂಡನೆ – ನಿರೀಕ್ಷೆಗಳೇನು?
ಶ್ರೀಕಂಠೇಶ್ವರ ಮತ್ತು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಸಿಎಂ ಅರ್ಚನೆ ಮಾಡಿಸಿದರು. ನಂತರ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದರು.
ಅನಾರೋಗ್ಯದ ಕಾರಣದಿಂದಾಗಿ ಕುಗ್ಗಿ ಹೋಗಿರುವ ನಟಿ ಸಮಂತಾ (Samantha), ಚೈತನ್ಯಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದಾರೆ. ನಿಯಮಿತ ವ್ಯಾಯಾಮ, ಮಿತ ಆಹಾರ, ಧ್ಯಾನ ಹೀಗೆ ಸಲಹೆ ನೀಡಿದವರ ಪ್ರತಿ ಮಾತುಗಳನ್ನೂ ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ. ಇವಲ್ಲದೇ ದೇವರಿಗೂ ಅವರು ಮೊರೆ ಹೋಗಿದ್ದಾರೆ. ಅಧ್ಯಾತ್ಮವನ್ನು ನಂಬುವ ಸಮಂತಾ ತಮಿಳುನಾಡಿನ ಪಳನಿ ಮುರುಗನ್ (Palani Murugan) ದೇವರಿಗೆ ಹರಕೆ ಹೊತ್ತಿದ್ದಾರೆ.
ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಪಳನಿ ಮುರುಗನ್ ದೇವಸ್ಥಾನಕ್ಕೆ (Temple) ಭೇಟಿ ನೀಡಿ ಹರಕೆ ತೀರಿಸಿದ್ದು, ಈ ಹರಕೆಗಾಗಿ ಅವರು ಆರು ನೂರಕ್ಕೂ ಹೆಚ್ಚು ಮೆಟ್ಟಿಲು ಹತ್ತಿ, ಕರ್ಪೂರ ಹಚ್ಚಿ ಹರಕೆ ತೀರಿಸಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ನಿರ್ದೇಶಕರು ಮತ್ತು ಅವರ ಆಪ್ತರು ಜೊತೆಯಾಗಿದ್ದರು. ಅಲ್ಲದೇ, ಪೊಲೀಸರು ಕೂಡ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿದ್ದರು. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್
ಒಂದು ಕಡೆ ಶೂಟಿಂಗ್ ಮತ್ತೊಂದು ಕಡೆ ಶಾಕುಂತಲಂ ಸಿನಿಮಾ ಬಿಡುಗಡೆ. ಆರೋಗ್ಯ ಸುಧಾರಿಸಲಿ ಮತ್ತು ಸಿನಿಮಾ ಗೆಲ್ಲಲಿ ಎಂಬ ಎರಡು ಉದ್ದೇಶ ಇಟ್ಟುಕೊಂಡು ಸಮಂತಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳು ನಾಡಿನಲ್ಲಿ ಅಸಂಖ್ಯಾತ ಭಕ್ತರನ್ನು ಹೊಂದಿರುವ ಪಳನಿ ಮುರುಗನ್ ದೇವಸ್ಥಾನದ ಭೇಟಿ ಸಮಂತಾಗೆ ನೆಮ್ಮದಿ ನೀಡಿದೆ ಎನ್ನುತ್ತಿದ್ದಾರೆ ಆಪ್ತರು.
ಸಿನಿಮಾಗಳ ಜೊತೆ ಜೊತೆಗೆ ಹಿಂದಿಯ ಸಿಟಾಡೆಲ್ (Citadel) ಸೀರಿಸ್ ನಲ್ಲೂ ಸಮಂತಾ ನಟಿಸುತ್ತಿದ್ದಾರೆ. ಇದೊಂದು ಭಾರೀ ಪ್ರಾಜೆಕ್ಟ್ ಆಗಿದ್ದು, ಈ ಸೀರಿಸ್ ಶೂಟಿಂಗ್ ಗಾಗಿಯೇ ಅವರು ಮುಂಬೈನಲ್ಲಿ ಮನೆ ಕೂಡ ಖರೀದಿ ಮಾಡಿದ್ದಾರೆ. ಮುಂಬೈನಿಂದಲೇ ಅವರು ಚಿತ್ರೀಕರಣಕ್ಕೂ ತೆರಳಲಿದ್ದಾರಂತೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಭಕ್ತಾದಿಗಳಿಗೆ ದೇವಾಲಯಗಳಲ್ಲಿ (Temple) ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ(Swachh Mandira Abhiyan) ಉದ್ಘಾಟನೆಗೆ ಸಿದ್ದವಾಗಿದೆ.
ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ (Shashikala Jolle) ಅವರ ಆಶಯದ ಯೋಜನೆಯ ಚಾಲನೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಫೆ.10 ರಂದು ನಿಮಿಷಾಂಭ ದೇವಸ್ಥಾನದಿಂದ(Nimishamba Temple) ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ (Rohini Sindhuri) ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ
ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ತನ್ನ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಯೋಜನೆಯನ್ನ ಅನುಷ್ಠಾನಗೊಳಿಸುತ್ತಿದೆ. ಸಚಿವರಾದ ಶಶಿಕಲಾ ಜೊಲ್ಲೆ ಅವರು ದೇವಸ್ಥಾನಗಳಲ್ಲಿ ಸ್ವಚ್ಚ ಪರಿಸರವಿಲ್ಲದೆ ಭಕ್ತಾದಿಗಳು ಪಡುತ್ತಿರುವ ತೊಂದರೆಯನ್ನ ನಿವಾರಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮೊದಲ ಹಂತದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯದ ಪ್ರಮುಖ 12 ದೇವಾಲಯಗಳಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ “ಸ್ವಚ್ಚ ಮಂದಿರ ಅಭಿಯಾನ”ದ ಅಡಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದು, ಫೆಬ್ರವರಿ 10 ರಂದು ಶಶಿಕಲಾ ಜೊಲ್ಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ತ್ಯಾಜ್ಯ ನಿರ್ವಹಣೆ ಘಟಕವನ್ನು ಉದ್ಘಾಟಿಸಿ ನಂತರ ವೀಡಿಯೋ ಕಾನ್ಫರೆನ್ಸ್ ಮೂಲಕ ಉಳಿದ 11 ದೇವಸ್ಥಾನಗಳ ಘಟಕಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಸ್ವಚ್ಚ ಮಂದಿರ ಅಭಿಯಾನದ ಮೂಲಕ ದೇವಸ್ಥಾನಗಳಲ್ಲಿ ಹಾಗೂ ದೇವಸ್ಥಾನದ ಆವರಣದಲ್ಲಿ ಉತ್ಪತ್ತಿಯಾಗುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಸವಾಲುಗಳಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರಗಳನ್ನು ಒದಗಿಸಲಾಗುವುದು. ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡಲು ವ್ಯವಸ್ಥಿತ ಕ್ರಮಗಳನ್ನು ಹುಟ್ಟುಹಾಕುವುದು ಮತ್ತು ದೇವಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವುದು, ಸಾಗಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡಲು ಅಗತ್ಯವಾದ ಬೆಂಬಲ ವ್ಯವಸ್ಥೆಗಳೊಂದಿಗೆ ಮೂಲದಲ್ಲಿ ತ್ಯಾಜ್ಯವನ್ನು ಪ್ರತ್ಯೇಕಿಸುವುದು. ಮತ್ತು ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೌಲಭ್ಯಗಳನ್ನು ಸ್ಥಾಪಿಸುವ ಮೂಲಕ ದೇವಸ್ಥಾನವನ್ನು ಸುಸ್ಥಿರ ಸಂಸ್ಥೆ ಮತ್ತು ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಜೀ ಅವರ ಸ್ವಚ್ಚ ಮಂದಿರ ಪರಿಕಲ್ಪನೆಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ “ಸ್ವಚ್ಛ ಮಂದಿರ ಅಭಿಯಾನ” ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 12 ದೇವಸ್ಥಾನಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಪ್ರಾರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ದೇವಸ್ಥಾನಗಳಲ್ಲಿ ಅಳವಡಿಸಲಾಗುವುದು. ಈ ಸೌಲಭ್ಯದಿಂದಾಗಿ ಪ್ರತಿದಿನ ಈ ದೇವಸ್ಥಾನಗಳಲ್ಲಿ ಉತ್ಪತ್ತಿಯಾಗುವ ಸುಮಾರು 3500 ರಿಂದ 12 ಸಾವಿರ ಕೆಜಿಗಳಷ್ಟು ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಲಿದೆ. ಭಕ್ತಾದಿಗಳಿಗೆ ಸ್ವಚ್ಚ, ಸುಂದರ ಹಾಗೂ ನೈರ್ಮಲ್ಯದ ವಾತಾವರಣ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಉದ್ಘಾಟನೆಯಾಗುವ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಹೊಂದಿರುವ ದೇವಸ್ಥಾನಗಳ ಪಟ್ಟಿ
1. ಶ್ರೀ ನಿಮಿಷಾಂಭ ದೇವಾಲಯ, ಗಂಜಾಂ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
2. ಶ್ರೀ ಬನಶಂಕರಿ ದೇವಾಲಯ, ಕರಿಯಪ್ಪ ರಸ್ತೆ, ಬೆಂಗಳೂರು ನಗರ ಜಿಲ್ಲೆ
3. ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ
4. ಶ್ರೀ ರೇವಣ ಸಿದ್ಧೇಶ್ವರ ದೇವಾಲಯ, ರಾಮನಗರ ತಾಲ್ಲೂಕು, ರಾಮನಗರ ಜಿಲ್ಲೆ
5. ಶ್ರೀ ಕಬ್ಬಾಳಮ್ಮ ದೇವಾಲಯ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ
6. ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ರಾಮನಗರ ಜಿಲ್ಲೆ
7. ಶ್ರೀ ರಂಗನಾಥಸ್ವಾಮಿ ದೇವಾಲಯ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
8. ಶ್ರೀ ಚೆನ್ನಕೇಶವಸ್ವಾಮಿ ದೇವಾಲಯ, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ
9. ಶ್ರೀ ದುರ್ಗಪರಮೇಶ್ವರಿ ದೇವಾಲಯ, ಮಂದಾರ್ತಿ, ದಕ್ಷಿಣ ಕನ್ನಡ ಜಿಲ್ಲೆ
10. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ, ನಾಯಕನಹಟ್ಟಿ, ಚಳ್ಳಕೆರೆ, ಚಿತ್ರದುರ್ಗ ಜಿಲ್ಲೆ
11. ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವರಾಯನ ದುರ್ಗ, ತುಮಕೂರು ಜಿಲ್ಲ
12. ಶ್ರೀ ಪೊಳಲಿ ರಾಜರಾಜೇಶ್ವರಿ ದೇವಾಲಯ, ದಕ್ಷಿಣ ಕನ್ನಡ ಜಿಲ್ಲೆ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ದೇವಸ್ಥಾನ (Temple) ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ವಾಮೀಜಿಯ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಸಿಡಿಮಿಡಿಗೊಂಡ ಘಟನೆ ನಡೆದಿದೆ.
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿನ ಗರುಡಾಚಾರ್ ಪಾಳ್ಯದಲ್ಲಿ ಸಚಿವ ಎಂ.ಟಿ.ಬಿ. ನಾಗರಾಜ್ (MTB Nagaraj) ಅವರ ಮನೆ ದೇವರಾದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರವಾಗಿದ್ದು ಗುರುವಾರ ಲೋಕಾರ್ಪಣೆ ಮಾಡಲಾಯಿತು.
ಈಶ್ವರಾನಂದಪುರಿ ಸ್ವಾಮೀಜಿಗಳು ಮಾತಾನಾಡುತ್ತಾ, ಮುಖ್ಯಮಂತ್ರಿಗಳು ಕೇವಲ ಆಶ್ವಾಸನೆಯನ್ನು ಕೊಡುವ ಮುಖ್ಯಮಂತ್ರಿಗಳಾಗಬಾರದು. ಬೆಂಗಳೂರು (Bengaluru) ನಗರದಲ್ಲಿ ಮಳೆ ಬಂದ ಪ್ರವಾಹ ಸೃಷ್ಟಿಯಾಗಿತ್ತು ಅಧಿಕಾರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವರಿಕೆ ಆಗುತ್ತಿಲ್ಲ ಎನ್ನುತ್ತಿದ್ದಾಗ ಸಿಡಿಮಿಡಿಗೊಂಡ ಸಿಎಂ ಸ್ವಾಮೀಜಿ ಕೈಯಿಂದ ಮೈಕ್ ಕಸಿದುಕೊಂಡು ಉತ್ತರ ನೀಡಲು ಆರಂಭಿಸಿದರು.
ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದಾರೆ. ಒತ್ತುವರಿ ತೆರವು ಮಾಡುವ ಮೂಲಕ ಆದಷ್ಟು ಬೇಗ ರಾಜಕಾಲುವೆಗಳ ಕೆಲಸ ಪೂರ್ಣ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲಾ ಅನುದಾನವನ್ನು ಸಹ ಸರ್ಕಾರದಿಂದ ಕೊಡಲಾಗಿದೆ ಎಂದು ಸಿಎಂ ವೇದಿಕೆಯಲ್ಲೇ ಸ್ವಾಮೀಜಿಗಳಿಗೆ ಪ್ರತ್ಯುತ್ತರ ನೀಡಿದರು.
Live Tv
[brid partner=56869869 player=32851 video=960834 autoplay=true]
ಮಂಡ್ಯ: ದೇವಸ್ಥಾನ (Temple) ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ (Sumalatha Ambareesh) ವೇದಿಕೆ ಏರುವ ವಿಚಾರಕ್ಕೆ ಗ್ರಾಮಸ್ಥರಲ್ಲಿ ವಾಗ್ವಾದ ನಡೆದಿದ್ದು, ಬಳಿಕ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬಿ.ಗೌಡಗೆರೆ ಗ್ರಾಮದಲ್ಲಿ ನಡೆದಿದೆ.
ಮಂಡ್ಯ (Mandya) ತಾಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಮಹದೇಶ್ವರ ದೇವಾಲಯ ಉದ್ಘಾಟನೆ ವೇಳೆ ಸುಮಲತಾ ಬೆಂಬಲಿಗರು ಹಾಗೂ ಮತ್ತೊಂದು ಬಣಗಳ ನಡುವೆ ವಾಗ್ವಾದ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಇದನ್ನೂ ಓದಿ: ಮಾಧುಸ್ವಾಮಿ ಮೊದಲು ಮಾತಾಡಲಿ- ಸಚಿವರ ಹೇಳಿಕೆಗೆ ಸಿಎಂ ವ್ಯಂಗ್ಯ
ದೇವಾಲಯ ಉದ್ಘಾಟನೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಿಸಲಾಗಿತ್ತು. ಈ ವೇದಿಕೆಗೆ ರಾಜಕೀಯ ಮುಖಂಡರನ್ನು ಹತ್ತಿಸಬಾರದು ಎಂದು ಮೊದಲೇ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ನಡುವೆಯೂ ಸಂಸದೆ ಸುಮಲತಾರನ್ನ ವೇದಿಕೆಗೆ ಕರತೆತಂದಿದ್ದರಿಂದ ಗ್ರಾಮಸ್ಥರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಇದನ್ನೂ ಓದಿ: ಗಲ್ಲಾಪೆಟ್ಟಿಗೆಯಲ್ಲಿ 16 ಸಾವಿರ ಕೋಟಿ ಬಾಚಿದ `ಅವತಾರ್ 2′ ಸಿನಿಮಾ
ಯಾಕೆ ಸುಮಲತಾರನ್ನ ವೇದಿಕೆ ಹತ್ತಿಸುತ್ತೀರಾ? ಎಂದು ಕೆಲವರು ಪ್ರಶ್ನಿಸಿ ವಾಗ್ವಾದಕ್ಕಿಳಿದರು. ಪರಿಸ್ಥಿತಿ ಮಿತಿ ಮಿರಿ ಎರಡು ಬಣದವರು ಕಿತ್ತಾಟಕ್ಕಿಳಿದರು. ಒಂದು ಗುಂಪಿನ ವಿರೋಧದ ನಡುವೆಯೂ ಮತ್ತೊಂದು ಗುಂಪು ಸುಮಲತಾರನ್ನ ವೇದಿಕೆಗೆ ಕರೆತಂದಿತು. ಬಳಿಕ ವೇದಿಕೆಯಲ್ಲಿ ಮಾತನಾಡಿ ಸುಮಲತಾ ಕಾರ್ಯಕ್ರಮದಿಂದ ನಿರ್ಗಮಿಸಿದರು.
Live Tv
[brid partner=56869869 player=32851 video=960834 autoplay=true]
– ಉತ್ತರಾಯಣಕ್ಕೆ ಪಥ ಬದಲಾಯಿಸುವ ಸೂರ್ಯ – ವಿಸ್ಮಯ ಕ್ಷಣ ಕಣ್ತುಂಬಿಕೊಳ್ಳಲು ಭಕ್ತರು ಕಾತುರ
ಬೆಂಗಳೂರು: 2023 ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು (Sankranti Festival) ಬಸವನಗುಡಿಯ ಗವಿಗಂಗಾಧರೇಶ್ವರನನ್ನ (Gavi Gangadhareshwara) ಸೂರ್ಯ ರಶ್ಮಿ ಸ್ಪರ್ಶಿಸಲಿದೆ.
ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಪಥ ಬದಲಾಯಿಸಲಿದ್ದು, ಈ ವೇಳೆ 30 ರಿಂದ 40 ಸೆಕೆಂಡ್ ಗಳ ಕಾಲ ಗವಿಗಂಗಾಧರೇಶ್ವರರ ಮೇಲೆ ಸೂರ್ಯನ ಕಿರಣಗಳು ಬೀಳಲಿವೆ. ಸಂಜೆ 5:17 ರಿಂದ 5:37ರ ನಡುವೆ ಸೂರ್ಯನ ಕಿರಣಗಳು ಗವಿ ಗಂಗಾಧರ ಸ್ವಾಮಿಯನ್ನು ಸ್ಪರ್ಶಿಸಲಿದೆ. ಪ್ರತಿ ವರ್ಷ ಸಂಕ್ರಾಂತಿಯಂದು ಪ್ರಕೃತಿಯ ಈ ವಿಸ್ಮಯದ ವೀಕ್ಷಣೆಗೆ ಭಕ್ತರು ಕಾತುರರಾಗಿದ್ದಾರೆ.
ಮೊದಲು ನಂದಿಯನ್ನು ಹಾದುಹೋಗುವ ಸೂರ್ಯನ ಕಿರಣಗಳು ನಂತರ ಪಾಣಿ ಪೀಠದ ಮೂಲಕ ಶಿವಲಿಂಗವನ್ನು ಸ್ಪರ್ಶಿಸಲಿದೆ. ಈ ವಿಸ್ಮಯ ಕಣ್ತುಂಬಿಸಿಕೊಳ್ಳಲು ದೇವಸ್ಥಾನದ ಹೊರ ಭಾಗದಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತೆ. ಇನ್ನೂ ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ (Devotees) ಟೆಂಟ್, ಶಾಮಿಯಾನದ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇವಸ್ಥಾನಕ್ಕೆ ಬಂದ ಮಹಿಳೆಯ ಮೇಲೆ ದೌರ್ಜನ್ಯ ನಡೆದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.
ಹೌದು. ದೇವಸ್ಥಾನಕ್ಕೆ ಬಂದು ಹೈಡ್ರಾಮಾ ಸೃಷ್ಟಿಸಿದ್ದ ಮಹಿಳೆಯನ್ನು ಹೇಮಾವತಿ ಎಂದು ಗುರುತಿಸಲಾಗಿದೆ. ನನ್ನ ಮೈ ಮೇಲೆ ದೇವರು ಬರುತ್ತೆ, ವೆಂಕಟೇಶ್ವರ (Venkateshwara) ನನ್ನ ಪತಿ. ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕೂರಬೇಕು ಎಂದು ಮಹಿಳೆ ಹಠಕ್ಕೆ ಬಿದ್ದಿದ್ದಾಳೆ. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ
ಈ ವೇಳೆ ಅರ್ಚಕ ರಾಜಾಜಂ, ಮಹಿಳೆಗೆ ತಿಳಿ ಹೇಳಿದರು. ಆದರೂ ಕೇಳದೇ ಗರ್ಭಗುಡಿಯ ಒಳಗೆ ಹೋಗಲು ಯತ್ನಿಸಿದ್ದಾಳೆ. ಈ ವೇಳೆ ದೇವಸ್ಥಾನದ ಧರ್ಮದರ್ಶಿ ಮುನಿ ಕೃಷ್ಣರಿಗೆ ಫೋನ್ ಮಾಲಾಯಿತು. ಕೂಡಲೇ ಸ್ಥಳಕ್ಕೆ ಬಂದ ಧರ್ಮದರ್ಶಿ ಮುನಿಕೃಷ್ಣ ಅವರನ್ನು ಅವಾಚ್ಯವಾಗಿ ನಿಂದಿಸಿ ಮುಖಕ್ಕೆ ಉಗಿದಿದ್ದಳು. ಇದರಿಂದ ಕೋಪಗೊಂಡ ಮುನಿಕೃಷ್ಣ, ಮಹಿಳೆಯನ್ನು ಎಳೆದು ಹೊರಹಾಕಿದ್ರು.
ಹೀಗಂತ ಪೊಲೀಸರ ತನಿಖೆಯಲ್ಲಿ ಮಹಿಳೆಯ ಮೇಲಿನ ಹಲ್ಲೆ ಹಿಂದಿನ ಆಸಲಿ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಮುನಿಕೃಷ್ಣರನ್ನು ಪೊಲೀಸರು ಬಂಧಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]