Tag: ದೇವಸ್ಥಾನ

  • ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ

    ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇವಸ್ಥಾನಕ್ಕೆ ಬಂದ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಘಟನೆ 2022ರ ಡಿಸೆಂಬರ್ 22 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮಹಿಳೆಯ ಜುಟ್ಟು ಹಿಡಿದು ಧರಧರನೆ ಎಳೆದೊಯ್ದು, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಈ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮೀನಾರಾಯಣ ದೇವಸ್ಥಾನ (Sri Lakshminarayana Swamy Temple in Amruthahalli) ದಲ್ಲಿ ನಡೆದಿದೆ. ಹೇಮಾವತಿ ಎಂಬಾಕೆ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಎಂಬಾತ ಇಂತಹ ಹೀನ ಕೃತ್ಯ ಎಸಗಿದ್ದಾನೆ.

    ದೇವರ ದರ್ಶನಕ್ಕೆ ತೆರಳಿದ್ದ ಹೇಮಾವತಿಗೆ ಸ್ನಾನ ಮಾಡದೇ, ಶುದ್ಧಿ ಇಲ್ಲದೆ ದೇವಸ್ಥಾನಕ್ಕೆ ಬಂದಿದ್ದೀಯಾ ಎಂದು ಕೂದಲು ಹಿಡಿದು ಹೊರಗೆ ಎಳೆದೊಯ್ದಿದ್ದಾನೆ. ನಂತರ ಕಬ್ಬಿಣದ ರಾಡ್ ನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಯಾರಿಗಾದರೂ ಹೇಳಿದ್ರೆ ಸರಿಯಿರಲ್ಲ ಅಂತಾ ಅಂತಾ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಇದನ್ನೂ ಓದಿ: ಮುತ್ಯಾಲಮಡುವು ಪ್ರವಾಸಿತಾಣದಲ್ಲಿ ಈಜಲು ಹೋಗಿ ವ್ಯಕ್ತಿ ನೀರುಪಾಲು

    ಮುನಿಕೃಷ್ಣ (Munikrishna) ಹಲ್ಲೆ ನಡೆಸುವಾಗ ದೇವಸ್ಥಾನದ ಅರ್ಚಕರು ತಡೆಯುವ ಪ್ರಯತ್ನ ಮಾಡಿದರೂ, ಮತ್ತೆ ಮುಂದೆ ನುಗ್ಗಿ ಹಲ್ಲೆ ನಡೆಸಿದ್ದಾನೆ. ಈತನ ಎಲ್ಲಾ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಗುರುವಾರ ಮಹಿಳೆ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಪಿಸಿ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಸದ್ಯ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿ ಮುನಿಕೃಷ್ಣ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿದ್ದೇಶ್ವರ ಸ್ವಾಮೀಜಿ ನನ್ನನ್ನು ಗುರುತು ಹಿಡಿದರು : ಬೊಮ್ಮಾಯಿ

    ಸಿದ್ದೇಶ್ವರ ಸ್ವಾಮೀಜಿ ನನ್ನನ್ನು ಗುರುತು ಹಿಡಿದರು : ಬೊಮ್ಮಾಯಿ

    ಬೆಂಗಳೂರು: ಸಿದ್ದೇಶ್ವರ ಸ್ವಾಮೀಜಿಗಳನ್ನು (Siddeshwar Swamiji) ನಿನ್ನೆಯೇ ಅವರನ್ನು ಭೇಟಿ ಮಾಡಿದ್ದೆ, ಅವರು ನನ್ನನ್ನು ಗುರುತು ಹಿಡಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಸುದ್ದಿಗಾರರೊದಿಗೆ ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು. ಅವರನ್ನು ನಿನ್ನೆ ಭೇಟಿ ಮಾಡಿದ್ದೇನೆ. ಯಾವುದೇ ಆತಂಕ ಬೇಡ. ಸ್ವಾಮೀಜಿಗಳು ತಮ್ಮ ಅಂತರ್ ಗತ ಶಕ್ತಿಯಿಂದ ಆರೋಗ್ಯ ಸುಧಾರಿಸಿ ಬರಲಿದ್ದಾರೆ ಎಂದು ತಿಳಿಸಿದರು.

    ವೈಕುಂಠ ಏಕಾದಶಿ ನಿಮಿತ್ತ ಟಿಟಿಡಿ ವೆಂಕಟೇಶ್ವರ ದರ್ಶನ ಪಡೆದಿದ್ದು, ಪುನೀತ ಭಾವನೆ ಬಂದಿದೆ. ರಾಜ್ಯದ ಸಮಸ್ತ ಜನತೆಗೆ ಒಳಿತಾಗಲೀ ಎಂದು ಬೇಡಿಕೆ ಇಟ್ಟಿರುವೆ. ರಾಜ್ಯ ಅಭಿವೃದ್ಧಿ ಸಮೃದ್ಧಿ ಕಾಣಲಿ ಎಂದು ಬೇಡಿಕೆ ಇಟ್ಟಿದ್ದೇನೆ. ಚುನಾವಣೆಯ ಬಗ್ಗೆ ನಾನು ದೇವರ ಹತ್ತಿರ ಈ ಥರ ಎಲ್ಲಾ ಬೇಡಿಕೊಳ್ಳುವುದಿಲ್ಲ. ದೇವರಿಗೆ ಗೊತ್ತಿದೆ, ಮತದಾರರೇ ದೇವರು. ನನಗೆ ವಿಶ್ವಾಸ ಇದೆ, ಮತ್ತೊಮ್ಮೆ ಬಿಜೆಪಿ (BJP) ಸರ್ಕಾರ ಬರುತ್ತೆ ಎಂದು ಹೇಳಿದರು. ಇದನ್ನೂ ಓದಿ: ಇಸ್ಕಾನ್‍ನಲ್ಲಿ ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ

    ಅರವಿಂದ್ ಲಿಂಬಾವಳಿ ಹೆಸರಿಟ್ಟು ಉದ್ಯಮಿ ಆತ್ಮಹತ್ಯೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಲಿಂಬಾವಳಿ ಹೆಸರು ಬಂದಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿಚಾರ ಇನ್ನೂ ನನಗೆ ಗೊತ್ತಿಲ್ಲ, ಮಾಹಿತಿ ಪಡೆಯುವೆ. ಕಾನೂನಾತ್ಮಕವಾಗಿ ಏನೆಲ್ಲಾ ನಡೆಯಬೇಕೋ ನಡೆಯಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಹಾಜರಾದ 32 ಸಾವಿರ ಜನ – ಪೆನ್ನು, ಪೇಪರ್ ಹಿಡಿದು ಸ್ಟೇಡಿಯಂನಲ್ಲೆ ಕುಳಿತ್ರು

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ- ಹೊಸ ವರ್ಷದಲ್ಲಿ ದೇವಸ್ಥಾನಕ್ಕೆ ಭಕ್ತಸಾಗರ

    ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ- ಹೊಸ ವರ್ಷದಲ್ಲಿ ದೇವಸ್ಥಾನಕ್ಕೆ ಭಕ್ತಸಾಗರ

    ಬೆಂಗಳೂರು: ಹೊಸ ವರ್ಷ (New Year 2023) ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠ ಏಕಾದಶಿ (Vaikunta Ekadashi). ಬೆಂಗಳೂರಿನ ದೇವಸ್ಥಾನಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಕಳೆದ 2 ವರ್ಷದಿಂದ ಕೊರೊನಾ ಹಿನ್ನೆಲೆ ವೈಕುಂಠ ಏಕಾದಶಿಯನ್ನ ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಇದೀಗ ಕೊಂಚ ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ನಡೆಯಲಿದೆ. ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ದಂಡೇ ಹರಿದು ಬರಲಿದೆ.

    ಹೊಸ ವರ್ಷ ಹಿನ್ನೆಲೆ ನಿನ್ನೆ ವೈಯಾಲಿಕಾವಲ್‍ನ ಟಿಟಿಡಿ ದೇವಸ್ಥಾನಕ್ಕೆ 25 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ರು. ತಿರುಪತಿಯಿಂದ ಲಾಡು ಕಡಿಮೆ ಪ್ರಮಾಣದಲ್ಲಿ ಬಂದ ಹಿನ್ನೆಲೆ 10 ಸಾವಿರ ಲಾಡು ವಿತರಣೆ ಮಾಡಿದ್ರು. ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಳಗ್ಗೆ 3 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತಾದಿಗಳಿಗೆ ಪಾಸ್‍ಗಳನ್ನು ವಿತರಿಸಲಾಗಿದೆ. ಇದನ್ನೂ ಓದಿ: ಕೋಲಾರ ಸಂಸದ ಮುನಿಸ್ವಾಮಿಗೆ ಮುತ್ತು ಕೊಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್

    ನಿನ್ನೆ ರಾಜಾಜಿ ನಗರದ ಇಸ್ಕಾನ್‍(Iskon) ನ ರಾಧಾಕೃಷ್ಣ ಮಂದಿರಕ್ಕೆ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಿ ಶ್ರೀಕೃಷ್ಣ ಪರಮಾತ್ಮನನ್ನು ಕಣ್ತುಂಬಿಕೊಂಡರು. ಇಂದು ಕೂಡ ಒಂದೂವರೆ ಲಕ್ಷ ಜನ ವೈಕುಂಠ ಏಕಾದಶಿಗೆ ಬರೋ ನಿರೀಕ್ಷೆ ಇದೆ. ಬೆಳಗ್ಗೆ 3 ಗಂಟೆಯಿಂದ ಪೂಜೆಗಳು ನಡೆಯಲಿವೆ. ಸುಪ್ರಭಾತ ಸೇವೆ, ಅರ್ಚನ ಸೇವೆ, ದ್ವಾರ ಸೇವೆ ನಡೆಯುತ್ತವೆ. ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕರು ದರ್ಶನಕ್ಕೆ ಬರಬಹುದು. ರಾತ್ರಿ 11 ಗಂಟೆವರೆಗೂ ದರ್ಶನ ಇರುತ್ತದೆ. ಬೆಳಗ್ಗೆ ಮತ್ತು ಸಂಜೆ ಕಲ್ಯಾಣೋತ್ಸವ ಇರುತ್ತದೆ.

    ಕಳೆದ 2 ವರ್ಷದಿಂದ ಕೊರೊನಾ (Corona Virus) ಹಿನ್ನೆಲೆ ವೈಕುಂಠ ಏಕಾದಶಿಯನ್ನ ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಇದೀಗ ಕೊಂಚ ಕೊರೋನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ನಡೆಯಲಿದೆ. ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ದಂಡೇ ಹರಿದು ಬರಲಿದೆ. ಇದನ್ನೂ ಓದಿ: ಮಹದಾಯಿ ಯೋಜನೆಗೆ ಡಿಪಿಆರ್‌ ಆಗಿದೆ; ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ – ಸಿಎಂ

    Live Tv
    [brid partner=56869869 player=32851 video=960834 autoplay=true]

  • ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ಬೆಂಗಳೂರು: ಚೀನಾದಲ್ಲಿ ಡೆಡ್ಲಿ ಕೊರೊನಾ (Corona Virus) ರೂಪಾಂತರಿಯ ಅಬ್ಬರ ಜೋರಾಗಿದ್ದು ಚೀನಾ ಅಕ್ಷರಶಃ ನಲುಗಿ ಹೋಗಿದೆ. ಈಗಾಗಲೇ ಭಾರತದಲ್ಲೂ (India) ಚೀನಾದ ಬಿಎಫ್.7 ಉಪತಳಿ (BF7 Variant) ಪತ್ತೆಯಾಗಿದ್ದು, ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ (Government Of Karnataka) ಹಲವು ಕ್ರಮಗಳನ್ನ ಜಾರಿಗೊಳಿಸಿದೆ.

    ಮುಂದಿನ 3 ತಿಂಗಳು ಅಲರ್ಟ್ ಆಗಿರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳನ್ನ ಎಚ್ಚರಿಸಿದ್ದು, ನಮ್ಮ ರಾಜ್ಯವೂ ಸಕಲ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಹೊಸ ವರ್ಷಕ್ಕೆ ಮಾತ್ರವಲ್ಲದೇ ವೈಕುಂಠ ಏಕಾದಶಿ ಸಂಕ್ರಾಂತಿ ಸಂಭ್ರಮದ ಮೇಲೂ ಕೊರೊನಾ ಕರಿನೆರಳು ಆವರಿಸಿದೆ. ಪ್ರತಿ ವಾರವೂ ಕೊರೊನಾ ಮಾರ್ಗಸೂಚಿಗಳ (Covid Guidelines) ಅವಲೋಕನ ಮಾಡಿಕೊಳ್ಳಲಾಗುತ್ತಿದ್ದು, ಕೊಂಚ ಕೇಸ್ ಏರಿಕೆಯಾದ್ರೂ ಮುಂದಿನ 90 ದಿನಗಳಿಗೆ ನಿಯಮಗಳು ನಿರ್ಣಾಯಕವಾಗಲಿದೆ. ಹೀಗಾಗಿ ಆರೋಗ್ಯ ಇಲಾಖೆ (Health Department) ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ಇದನ್ನೂ ಓದಿ: ಶೂಟಿಂಗ್ ಮುಗಿಸಿದ ‘ಆಪರೇಷನ್ ಡಿ’ ಸಿನಿಮಾ

    ಧಾರ್ಮಿಕ ಕಾರ್ಯಕ್ರಮಗಳ ಮೇಲೂ ನಿಗಾ: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಮಾತ್ರವಲ್ಲದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಜನ ಸೇರುವುದನ್ನು ಕಡಿವಾಣ ಹಾಕಲು ದೇವಸ್ಥಾನಗಳಿಗೂ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ- ಹೋಟೆಲ್‌ನಲ್ಲಿ ರಾತ್ರಿ ತನ್ನೊಂದಿಗೆ ಇರಲು ನಿರಾಕರಿಸಿದ್ದಕ್ಕೆ ಕೊಲೆ

    ಕ್ರಮಗಳು ಏನೇನು ಬರಲಿವೆ?: ವೈಕುಂಠ ಏಕಾದಶಿ ದಿನ ಭಕ್ತರು ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡುವುದು, ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಅಳವಡಿಸುವುದು, ಜನಜಂಗುಳಿ ತಡೆಯಲು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಂಕ್ರಾಂತಿ ಹಬ್ಬಕ್ಕೆ (Sankranti Festival) ಜನಜಂಗುಳಿ ತಡೆಯಲು ಈಗಿನಿಂದಲೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

    Live Tv
    [brid partner=56869869 player=32851 video=960834 autoplay=true]

  • ಮಸೀದಿ, ದೇವಸ್ಥಾನ ಕೆಡವೋದು ನೋವಿನ ಸಂಗತಿ.. ಆದ್ರೆ ಅನಿವಾರ್ಯ – ಸಿಎಂ

    ಮಸೀದಿ, ದೇವಸ್ಥಾನ ಕೆಡವೋದು ನೋವಿನ ಸಂಗತಿ.. ಆದ್ರೆ ಅನಿವಾರ್ಯ – ಸಿಎಂ

    ಹುಬ್ಬಳ್ಳಿ: ಇವತ್ತು ನಾಗರಿಕತೆ ಬೆಳೆದಿದೆ. ಮಸೀದಿ (Mosque), ದೇವಸ್ಥಾನ (Temple) ಕೆಡವೋದು ನೋವಿನ ಸಂಗತಿ. ಆದರೆ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    MOSQUE

    ಹುಬ್ಬಳ್ಳಿಯ (Hubballi) ಬೈರಿದೇವರಕೊಪ್ಪ ದರ್ಗಾ ಭೇಟಿಯ ಬಳಿಕ ಮಾತನಾಡಿದ ಅವರು, ದರ್ಗಾ ಶಿಪ್ಟ್ ಮಾಡೋ ಕಾರ್ಯಚಾರಣೆ ವೀಕ್ಷಿಸಲು ಬಂದಿದ್ದೆ. ದರ್ಗಾದ ಮುಖ್ಯಸ್ಥರು ದರ್ಗಾ ಶಿಫ್ಟ್ ಮಾಡೋದಕ್ಕೆ ಸಹಕರಿಸಿದ್ದಾರೆ. ನಾನು ಅವರಿಗೆ ಧನ್ಯವಾದ ಹೇಳ್ತೀನಿ. ಜೊತೆಗೆ ಹೊಸ ಮಸೀದಿ ಕಟ್ಟೋಕೆ ತೀರ್ಮಾನ ಮಾಡಿದ್ದಾರೆ. ಜಾಗ ನೋಡಿದ್ರೆ ನಾನು ಅವರಿಗೆ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜನರು ಕೋವಿಡ್ ಗಂಭೀರವಾಗಿ ತೆಗೆದುಕೊಳ್ಳದಿದ್ರೆ ಸಾವಿನ ಸಂಖ್ಯೆ ತಡೆಯೋಕಾಗಲ್ಲ – ಆರಗ ಜ್ಞಾನೇಂದ್ರ

    ಇದೇ ರಸ್ತೆಯಲ್ಲಿ 13 ದೇವಸ್ಥಾನ ಕೆಡವಿದ್ದೇವೆ. ನಾವು ಕೆಲವು ಸಲ‌ ಕೋರ್ಟ್ ಆದೇಶ ಪಾಲನೆ ಮಾಡಬೇಕಾಗತ್ತೆ. ರಾಜ್ಯದಲ್ಲಿ ಸುಪ್ರೀಂ ಕೋರ್ಟ್, ಹೈಕೋರ್ಟ್ ಸೂಚನೆ ಪಾಲಿಸಬೇಕಾಗತ್ತೆ ಎಂದು ತಿಳಿಸಿದ್ದಾರೆ.

    ದೇವಸ್ಥಾನವಾಗಲಿ ಅಥವಾ ಮಸೀದಿಯಾಗಲಿ, ಆದಷ್ಟು ಉಳಿಸೋ ಪ್ರಯತ್ನ ಮೊದಲನೆಯದ್ದು. ಇಲ್ಲದಿದ್ರೆ ಶಾಂತಿಯುತವಾಗಿ ಶಿಫ್ಟ್ ಮಾಡೋದು ಎರಡನೇ ಪಯತ್ನ. ಆಮೇಲೆ ನೆಲಸಮ ಮಾಡಲೇಬೇಕಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಯಾವತ್ತೂ ದನ ಕಾಯದೇ ಇರೋರು, ಸಗಣಿ ಎತ್ತದವರು ಗೋವು ರಕ್ಷಣೆ ಅಂತಾರೆ – ಸಿದ್ದು ಲೇವಡಿ

    Live Tv
    [brid partner=56869869 player=32851 video=960834 autoplay=true]

  • ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನಿಂದ 18 ಕ್ಕೂ ಹೆಚ್ಚು ದೇವಸ್ಥಾನ ದರೋಡೆ

    ಮಕ್ಕಳಿಗೆ ಪಾಠ ಮಾಡುವ ಶಿಕ್ಷಕನಿಂದ 18 ಕ್ಕೂ ಹೆಚ್ಚು ದೇವಸ್ಥಾನ ದರೋಡೆ

    ಕಾರವಾರ: ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಗಳ ದೇವಸ್ಥಾನಗಳಲ್ಲಿ (Temple) ಭಾರೀ ಸೊತ್ತುಗಳ ಕಳ್ಳತನ (Theft) ಮಾಡಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಹಾವೇರಿ ರಟ್ಟಿಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿರುವ (Teacher) ವಸಂತ ಕುಮಾರ್ (40), ರಾಣೆಬೆನ್ನೂರಿನ ಗುಡ್ಡದಬೇವಿನಹಳ್ಳಿಯ ಸಲೀಂ (28) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಯಲ್ಲಾಪುರ ತಾಲೂಕಿನ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ, ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನ ಸೇರಿದಂತೆ ಹಲವೆಡೆ ಕಳ್ಳತನ ಮಾಡಿ ದೇವರ ಹುಂಡಿ ಸೇರಿದಂತೆ ಹಲವು ವಸ್ತುಗಳನ್ನು ದರೋಡೆ ಮಾಡಿದ್ದರು.

    ಯಲ್ಲಾಪುರ, ಅಂಕೋಲಾ, ಶಿರಸಿ ಗ್ರಾಮೀಣ, ಬನವಾಸಿ, ಶಿವಮೊಗ್ಗ, ರಿಪ್ಪನ್‌ಪೇಟೆ, ಹೊಸನಗರ, ಹಾವೇರಿಯ ಹಂಸಬಾವಿ, ಹಿರೇಕೆರೂರು, ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ 18 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಕಳೆದ 3-4 ವರ್ಷದಿಂದ ದರೋಡೆ ಮಾಡಿಕೊಂಡೇ ಐಷಾರಾಮಿ ಜೀವನ ಸಾಗಿಸುತ್ತಿದ್ದರು.

    ಎಸ್‌ಪಿ ವಿಷ್ಣುವರ್ಧನ್ ಮಾರ್ಗದರ್ಶನಲ್ಲಿ ಯಲ್ಲಾಪುರ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ್ ಹಾಗೂ ತಂಡದಿಂದ ಕಾರ್ಯಾಚರಣೆ ನಡೆಸಿ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಒಟ್ಟು 19,20,285 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: 6 ಮದುವೆ, 54 ಮಕ್ಕಳಿಗೆ ತಂದೆಯಾದ ಪಾಕಿಸ್ತಾನಿ ವ್ಯಕ್ತಿ ಸಾವು

    ಕೃತ್ಯಕ್ಕೆ ಬಳಸಿದ್ದ 12 ಲಕ್ಷ ರೂ. ಮೌಲ್ಯದ ಒಂದು ಎಸ್ ಕ್ರಾಸ್ ಕಾರು, 30,000 ರೂ. ಮೌಲ್ಯದ ಬಜಾಜ್ ಪ್ಲಾಟಿನಾ ಕಂಪನಿಯ ಮೋಟಾರ್ ಬೈಕ್, 2,29,000 ರೂ. ನಗದು, 50,000 ರೂ. ಮೌಲ್ಯದ 9 ಗ್ರಾಂ ತೂಕದ ದೇವರ ಆಭರಣ, 1,80,400 ರೂ. ಮೌಲ್ಯದ 3.400 ಕೆ.ಜಿ ತೂಕದ ದೇವರ ಬೆಳ್ಳಿಯ ಆಭರಣ, 1,45,000 ರೂ. ಮೌಲ್ಯದ 140 ಹಿತ್ತಾಳೆಯ ಗಂಟೆಗಳು, 39,550 ರೂ. ಮೌಲ್ಯದ 27 ಹಿತ್ತಾಳೆಯ ದೀಪಗಳು, 9,600 ರೂ. ಮೌಲ್ಯದ 22 ಹಿತ್ತಾಳೆಯ ತೂಗು ದೀಪಗಳು, 13,500 ರೂ. ಮೌಲ್ಯದ 7 ತಾಮ್ರದ ಕೊಡಗಳು, 13,235 ರೂ. ಮೌಲ್ಯದ 35 ಹಿತ್ತಾಳೆ ಹಾಗೂ ತಾಮ್ರದ ಪೂಜಾ ಸಾಮಾಗ್ರಿಗಳು, 10,000 ರೂ. ಮೌಲ್ಯದ ಡಿವಿಆರ್ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಕರ್ನಾಟಕ ಎಲೆಕ್ಷನ್ ಗೆಲ್ಲಲು ಕಾಂಗ್ರೆಸ್ ರೋಡ್‌ಮ್ಯಾಪ್ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

    Live Tv
    [brid partner=56869869 player=32851 video=960834 autoplay=true]

  • ಕರಾವಳಿಯಲ್ಲಿ ಧರ್ಮದಂಗಲ್: ದೇವಸ್ಥಾನದ ಉತ್ಸವ, ಕಂಬಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ

    ಕರಾವಳಿಯಲ್ಲಿ ಧರ್ಮದಂಗಲ್: ದೇವಸ್ಥಾನದ ಉತ್ಸವ, ಕಂಬಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ (Udupi) ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಹಿಜಬ್ (Hijab) ನಿಂದ ಆರಂಭವಾಗಿದ್ದ ಜಟಾಪಟಿ ಕೊಂಚ ತಣ್ಣಗಾಗಿತ್ತು. ಇದೀಗ ಮತ್ತೆ ಜಾತ್ರೆ ಉತ್ಸವ ಆರಂಭವಾಗುತ್ತಿದ್ದಂತೆ ವ್ಯಾಪಾರ ನಿರಾಕರಣೆಗೆ ಕರೆ ನೀಡಲಾಗಿದೆ. ಇದಕ್ಕೆ ಕಾರಣ ಮಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಕುಕ್ಕರ್ ಬಾಂಬ್ ಸ್ಫೋಟ (Mangaluru Bomb Blast Case) ಪ್ರಕರಣ ಕಾರಣವಾಗಿದೆ.

    ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹಿಜಬ್ ಹೋರಾಟದ (Hijab Controversy) ನಂತರ ಧರ್ಮ ದಂಗಲ್ ಆರಂಭವಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನಗಳಲ್ಲಿ ಮಸ್ಲಿಂ ಸಮುದಾಯದ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡಬಾರದು ಎಂಬ ಅಸಹಕಾರ ಧೋರಣೆ ಕಳೆದ ವರ್ಷ ನಡೆದಿತ್ತು. 2-3 ತಿಂಗಳ ಜಟಾಪಟಿಯ ನಂತರ ಕೆಲವು ಉತ್ಸವ ಜಾತ್ರೆಗಳಲ್ಲಿ ಮುಸಲ್ಮಾನ ವ್ಯಾಪಾರಿಗಳು (Muslim Traders) ವ್ಯವಹಾರ ನಡೆಸಿದ್ದರು. ಇದೀಗ ಮತ್ತೆ ವೈಮನಸ್ಸಿಗೆ ಕಾರಣವಾಗಿದ್ದು ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ. ಇದನ್ನೂ ಓದಿ: ಹಿರೇಕೊಡಗಲಿ ಗ್ರಾಮದ ಅಭಿಮಾನಿ ಮನೆಗೆ ಧ್ರುವ ಸರ್ಜಾ ಅಚ್ಚರಿಯ ಭೇಟಿ

    ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ನಡೆಯುವ ಜಾತ್ರೆ ಮತ್ತು ಉತ್ಸವದ ವ್ಯಾಪಾರಕ್ಕೆ ಈ ಬಾರಿ ತಡೆಯೊಡ್ಡಲಾಗಿದೆ. ಕೋಟ್ಯಂತರ ರೂಪಾಯಿ ವ್ಯವಹಾರ ಕೈ ತಪ್ಪಲಿದೆ. ಶಂಕಿತ ಉಗ್ರ ಶಾರಿಕ್ (Shariq) ನಿಂದ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಬೆಳವಣಿಗೆಯಿಂದ ಕರಾವಳಿಯಲ್ಲಿ ಹಿಂದೂ ಮುಸ್ಲಿಮರ ನಡುವೆ ಬಿರುಕು ಜಾಸ್ತಿಯಾಗಿದೆ. ಉಡುಪಿ ಜಿಲ್ಲೆಯ ಬಹುತೇಕ ದೇವಸ್ಥಾನಗಳಲ್ಲಿ ವ್ಯಾಪಾರ ನಿರಾಕರಣೆ, ಚಳುವಳಿ ಮಾದರಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಸಂಗೀತ ವಿದ್ವಾನ್ ಎಂ.ನಾರಾಯಣಗೆ ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿ

    ವಿಶ್ವ ಹಿಂದೂ ಪರಿಷತ್ (VHP), ಭಜರಂಗದಳ (Bajrang Dal), ಹಿಂದೂ ಜಾಗರಣ ವೇದಿಕೆ ಶ್ರೀರಾಮ ಸೇನೆ (SriRam Sena) ತಮ್ಮ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಪತ್ರದ ಮುಖೇನ ಮನವಿ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಮೂಲಕ ಸಂದೇಶಗಳನ್ನು ಹರಿ ಬಿಡಲಾಗುತ್ತಿದೆ. ಎರಡು ದಿನಗಳ ಉಪ್ಪುಂದ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಆಡಳಿತ ಮಂಡಳಿಯೇ ಈ ತೀರ್ಮಾನವನ್ನು ಮಾಡಿದೆ.

    ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಆಡಳಿತ ಮಂಡಳಿಗೆ ಹಿಂದೂ ಸಂಘಟನೆಗಳು ಮನವಿ ಕೊಡುತ್ತಿವೆ. ಕಂಬಳ ದೈವಾರಾಧನೆ ದೇವಸ್ಥಾನದ ವಾರ್ಷಿಕೋತ್ಸವ ಸಂದರ್ಭ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂಬ ಕೂಗೂ ಜೋರಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ಚೆನ್ನೈ: ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡಲು ರಾಜ್ಯದ ಎಲ್ಲ ದೇವಸ್ಥಾನದ(Temple) ಆವರಣದ ಒಳಗಡೆ ಮೊಬೈಲ್‌ ಫೋನ್‌(Mobile Phone) ಮತ್ತು ಕ್ಯಾಮೆರಾವನ್ನು(Camera) ನಿಷೇಧಿಸುವಂತೆ ಮದ್ರಾಸ್‌ ಹೈಕೋರ್ಟ್‌(Madras High Court) ತಮಿಳುನಾಡು ಸರ್ಕಾರಕ್ಕೆ(Tamilnadu Government) ನಿರ್ದೇಶನ ನೀಡಿದೆ.

    ಮಧುರೈ ಪೀಠದ ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜೆ ಸತ್ಯನಾರಾಯಣ ಅವರಿದ್ದ ದ್ವಿಸದಸ್ಯ ಪೀಠವು ಭಕ್ತರು ಮತ್ತು ದೇವಾಲಯಗಳಿಗೆ ಭೇಟಿ ನೀಡುವವರು ಯೋಗ್ಯವಾದ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಿ ಎಂದು ರಾಜ್ಯಕ್ಕೆ ನಿರ್ದೇಶನ ನೀಡಿದೆ.

    ತೂತುಕುಡಿ ಜಿಲ್ಲೆಯ ಪುರಾತನ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ವೇಳೆ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: HDK ಪ್ರಧಾನಿಯಾದ್ರೆ ಜೆಡಿಎಸ್‍ನಲ್ಲಿ ದಲಿತ, ಮುಸ್ಲಿಂ CM: ಸಿಎಂ ಇಬ್ರಾಹಿಂ

    ದೇವಾಲಯಗಳ ಒಳಗೆ ಇರುವ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತವೆ. ಆದ್ದರಿಂದ ದೇವಾಲಯದ ಆವರಣದಲ್ಲಿ ಅವುಗಳ ಬಳಕೆಯನ್ನು ದೇವಾಲಯದ ಅಧಿಕಾರಿಗಳು ನಿಯಂತ್ರಿಸಬೇಕು ಎಂದು ಪೀಠ ಹೇಳಿದೆ.

    ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅರ್ಹರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ ದೇವಾಲಯದ ಆವರಣದೊಳಗೆ ಕಾರ್ಯನಿರ್ವಹಿಸಲು ಮತ್ತು ಆಚರಣೆಗೆ ಅಂತಹ ಸ್ವಾತಂತ್ರ್ಯವು ನಿಯಮಗಳಿಗೆ ಒಳಪಟ್ಟಿರುತ್ತದೆ. ದೇವಸ್ಥಾನದಲ್ಲಿ ನಡೆಯುವ ಪೂಜಾ ವಿಧಿವಿಧಾನಗಳ ನಿಯಮಾವಳಿಗಳನ್ನು ಸೂಚಿಸಿ  ಅಧಿಕಾರಿಗಳು ದೇವಾಲಯದ ಪಾವಿತ್ರ್ಯತೆ ಕಾಪಾಡುವಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

    court order law

    ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದ್ದರಿಂದ ದೇವಾಲಯದ ಅಧಿಕಾರಿಗಳು ಸಾಕಷ್ಟು ಸುರಕ್ಷತಾ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಹೆಚ್ಚಿನ ಭಕ್ತರು ದೇವಾಲಯದ ಆವರಣದ ಒಳಗಿನಿಂದ ಚಿತ್ರಗಳನ್ನು ತೆಗೆಯುತ್ತಾರೆ ಮತ್ತು ವೀಡಿಯೊಗಳನ್ನು ಮಾಡುತ್ತಾರೆ. ದೇವಾಲಯದಲ್ಲಿ ಇರಿಸಲಾಗಿರುವ ವಿಗ್ರಹಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಫೋಟೋಗಳನ್ನು ತೆಗೆಯುತ್ತಾರೆ. ಭದ್ರತಾ ದೃಷ್ಟಿಯಿಂದ ಇವುಗಳಿಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    ಮಧುರೈನ ಪ್ರಸಿದ್ಧ ಮೀನಾಕ್ಷಿ ದೇವಸ್ಥಾನ ಸೇರಿದಂತೆ ರಾಜ್ಯದ ಇತರ ಹಲವಾರು ದೇವಾಲಯಗಳ ಒಳಗಡೆ ಭಕ್ತರು ತಮ್ಮ ಫೋನ್ ಅಥವಾ ಕ್ಯಾಮೆರಾಗಳನ್ನು ದೇವಾಲಯದ ಆವರಣದೊಳಗೆ ಕೊಂಡೊಯ್ಯಲು ಅನುಮತಿ ನೀಡುವುದಿಲ್ಲ ಎಂಬ ವಿಚಾರವನ್ನು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

    ಮೀನಾಕ್ಷಿ ದೇವಸ್ಥಾನದಲ್ಲಿ ಭಕ್ತರು ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ತಮ್ಮ ಫೋನ್‌ಗಳನ್ನು ಲಾಕರ್‌ನಲ್ಲಿ ಇಡಬೇಕಾಗುತ್ತದೆ. ಭಕ್ತರು ಹೊರಗೆ ಬಂದ ನಂತರ ಫೋನ್‌ಗಳನ್ನು ಹಿಂಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಅರ್ಜಿದಾರರು ತಿಳಿಸಿದ್ದರು.

    ತೂತುಕುಡಿಯ ದೇವಸ್ಥಾನದ ಒಳಗೆ ಫೋನ್ ಮತ್ತು ಕ್ಯಾಮೆರಾಗಳನ್ನು ಬಳಸುವುದನ್ನು ನಿಷೇಧಿಸುವ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದೆ. ಭಕ್ತರು ಮತ್ತು ದೇವಾಲಯಕ್ಕೆ ಭೇಟಿ ನೀಡುವವರು ಸಭ್ಯ ಡ್ರೆಸ್ ಕೋಡ್ ಅನುಸರಿಸಬೇಕು ಎಂದು ಸೂಚಿಸಲಾಗಿದೆ ಎಂಬುದನ್ನು ತೂತುಕುಡಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೋರ್ಟ್‌ ಗಮನಕ್ಕೆ ತಂದಿದ್ದರು.

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಸುವಂತಿಲ್ಲ – ಮದ್ರಾಸ್ ಹೈಕೋರ್ಟ್ ಆದೇಶ

    ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಸುವಂತಿಲ್ಲ – ಮದ್ರಾಸ್ ಹೈಕೋರ್ಟ್ ಆದೇಶ

    ಚೆನ್ನೈ: ತಮಿಳುನಾಡಿನಾದ್ಯಂತ (Tamil Nadu) ದೇವಸ್ಥಾನಗಳ (Temples) ಒಳಭಾಗದಲ್ಲಿ ಮೊಬೈಲ್ ಫೋನ್ (Mobile Phones) ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ (Madras High Court) ಆದೇಶಿಸಿದೆ.

    ದೇವಾಲಯಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ಸಲುವಾಗಿ ಮೊಬೈಲ್ ಫೋನ್ ನಿಷೇಧಿಸಲು ಮುಂದಾಗಿದ್ದೇವೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಅಫ್ಘಾನ್‌ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಟ್‌, ಒಬ್ಬ ಸಾವು

     

    ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ನಿಷೇಧಿಸುವ ಮಹತ್ವದ ಆದೇಶ ನೀಡಿದೆ. ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿದರು.

    ಭಕ್ತಾಧಿಗಳಿಗೆ ಮೊಬೈಲ್ ಫೋನ್ ಬಳಕೆಯಿಂದಾಗಿ ಹಲವು ತೊಂದರೆಗಳು ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್‍ಗಳನ್ನು ಸಮರ್ಪಕವಾಗಿ ಹೊರಗಿಟ್ಟು ಬರಲು ಭದ್ರತಾ ಲಾಕರ್ ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಇದನ್ನೂ ಓದಿ: ನನ್ನ ಹತ್ಯೆಗೆ ಸ್ಕೆಚ್ – ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ಗಂಭೀರ ಆರೋಪ

    ದೇಗುಲಗಳಲ್ಲಿ ಫೋನ್‌ ಲಾಕರ್:
    ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್‌ಗಳನ್ನು ಅಳವಡಿಸಬೇಕು. ಈ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ದೇವಾಲಯಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದು ಆದೇಶಿಸಿದೆ.

    ಈಗಾಗಲೇ ಕೇರಳದ ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನ, ತಮಿಳುನಾಡಿನ ಮಧುರೈ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಮತ್ತು ಆಂಧ್ರಪ್ರದೇಶದ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಪ್ರಸಿದ್ಧ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧವನ್ನು ಜಾರಿಗೊಳಿಸಲಾಗಿದೆ. ಇದಲ್ಲದೇ ಮೊಬೈಲ್ ಡೆಪಾಸಿಟ್ ಮಾಡಲು ಭದ್ರತಾ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಅಳವಡಿಸಿಕೊಳ್ಳಿ. ದೇವಸ್ಥಾನದ ಆವರಣವನ್ನು ಪ್ರವೇಶಿಸುವ ಮೊದಲು ಫೋನ್‍ಗಳನ್ನು ಡೆಪಾಸಿಟ್ ಮಾಡುವಂತಹ ವ್ಯವಸ್ಥೆ ಮಾಡಿ ಎಂದು ಕೋರ್ಟ್ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಈಗ ರಾಗಿಗುಡ್ಡ ಆಂಜನೇಯಸ್ವಾಮಿ ಜಾತ್ರೆಯಲ್ಲೂ ವ್ಯಾಪಾರ ದಂಗಲ್‌

    ಈಗ ರಾಗಿಗುಡ್ಡ ಆಂಜನೇಯಸ್ವಾಮಿ ಜಾತ್ರೆಯಲ್ಲೂ ವ್ಯಾಪಾರ ದಂಗಲ್‌

    ಬೆಂಗಳೂರು: ವ್ಯಾಪಾರ ದಂಗಲ್ ಮುಂದುವರಿದಿದ್ದು ಈಗ ಜಯನಗರದ ರಾಗಿಗುಡ್ಡ ಆಂಜನೇಯಸ್ವಾಮಿ ಜಾತ್ರೆಯಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ಅನುಮತಿಸಬಾರದೆಂಬ ಆಗ್ರಹ ಕೇಳಿಬಂದಿದೆ.

    ಈ ಬಗ್ಗೆ ದೇವಸ್ಥಾನ ಮಂಡಳಿ ಪ್ರತಿಕ್ರಿಯಿಸಿದ್ದು, ನಮ್ಮದು ಟ್ರಸ್ಟ್ ಆಧಾರಿತ ದೇಗುಲ. ಹೀಗಾಗಿ ನಮ್ಮ ಅಧಿಕಾರ ಏನಿದ್ದರೂ ದೇವಾಲಯದ ಆವರಣಕ್ಕೆ ಸೀಮಿತ ಎಂದು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಲ್ಲ: ಬೊಮ್ಮಾಯಿ

    ಹಿಂದೂ ಸಂಘಟನೆಗಳ ಕರೆಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಆಕ್ರೋಶ ಹೊರಹಾಕಿದೆ. ಮುಜುರಾಯಿ ಇಲಾಖೆಯೂ ಸ್ಪಷ್ಟನೆ ನೀಡಿ, ದೇವಾಲಯದ ಹೊರಗೆ ಇಂಥವರೇ ವ್ಯಾಪಾರ ಮಾಡಬೇಕು ಎಂಬ ನಿಯಮವಿಲ್ಲ. ಈ ರೀತಿಯ ನಿರ್ಬಂಧದ ಕರೆ ನೀಡುವುದು ತಪ್ಪು. ಯಾರಾದರೂ ದೂರು ಕೊಟ್ಟರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದೆ.

    ಮುಜುರಾಯಿ ವ್ಯಾಪ್ತಿಯ ದೇಗುಲಗಳಿಗೆ ಮಾತ್ರ ಹಿಂದೂಯೇತರರ ವ್ಯಾಪಾರರ ನಿರ್ಬಂಧಕ್ಕೆ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದೆ.

    ಎರಡು ದಿನದ ಹಿಂದೆ ವಿವಿ ಪುರಂ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದವು.

    Live Tv
    [brid partner=56869869 player=32851 video=960834 autoplay=true]