Tag: ದೇವಾಲಯ

  • ಮುಜರಾಯಿ ಇಲಾಖೆಯಿಂದ ಗುಡ್‌ನ್ಯೂಸ್ – ಇನ್ಮುಂದೆ ವೈಬ್‌ಸೈಟ್‌ನಲ್ಲಿ ದೇಗುಲದ ರೂಮ್‌ಗಳ ಮಾಹಿತಿ!

    ಮುಜರಾಯಿ ಇಲಾಖೆಯಿಂದ ಗುಡ್‌ನ್ಯೂಸ್ – ಇನ್ಮುಂದೆ ವೈಬ್‌ಸೈಟ್‌ನಲ್ಲಿ ದೇಗುಲದ ರೂಮ್‌ಗಳ ಮಾಹಿತಿ!

    -ರಾಜ್ಯದ 400 ಸೇರಿ ಹೊರರಾಜ್ಯದ 3,500 ದೇವಾಲಯಗಳ ಮಾಹಿತಿ ಲಭ್ಯ

    ಬೆಂಗಳೂರು: ರಾಜ್ಯ ಹಾಗೂ ಬೇರೆ ರಾಜ್ಯಗಳ ದೇವಾಲಯಕ್ಕೆ ತೆರಳುವವರಿಗೆ ಮುಜರಾಯಿ ಇಲಾಖೆ (Muzrai Department) ಗುಡ್‌ನ್ಯೂಸ್ ನೀಡಿದ್ದು, ಇನ್ಮುಂದೆ ದೇಗುಲದ ರೂಮ್‌ಗಳ ಮಾಹಿತಿ ವೈಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.

    ಹೌದು, ಸಾಮಾನ್ಯವಾಗಿ ಹಬ್ಬ, ಹರಿದಿನದಂದು ಬಹುತೇಕ ಜನ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನಗಳ ಜೊತೆಗೆ ಅಲ್ಲಿನ ರೂಮ್‌ಗಳು ಕೂಡ ತುಂಬಾ ರಷ್ ಇರುತ್ತವೆ. ಈ ಸಮಯದಲ್ಲಿ ಉಳಿದುಕೊಳ್ಳಲು ಭಕ್ತಾದಿಗಳು ಪರದಾಡುತ್ತಾರೆ ಜೊತೆಗೆ ದುಪ್ಪಟ್ಟು ಹಣ ಕೊಟ್ಟು ರೂಮ್ ಮಾಡಲೇಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಇದಕ್ಕೆಲ್ಲಾ ಬ್ರೇಕ್ ಹಾಕುವ ನಿಟ್ಟಿನಲ್ಲಿ, ರಾಜ್ಯ ಹಾಗೂ ಹೊರರಾಜ್ಯದ ದೇಗುಲಕ್ಕೆ ಹೋಗುವ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ ನೀಡಿದೆ.ಇದನ್ನೂ ಓದಿ: ದಿನ ಭವಿಷ್ಯ 13-03-2025

    ಈ ಬಾರಿಯ ಕರ್ನಾಟಕ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು ವಿವಿಧ ಕ್ಷೇತ್ರಗಳಿಗೆ ಹಣ ಮಂಜೂರು ಮಾಡಿದ್ದಾರೆ. ಅದರಂತೆ ಮುಜರಾಯಿ ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ರಾಜ್ಯದ ಭಕ್ತಾದಿಗಳಿಗೆ ಅನುಕೂಲವಾಗಲು ಕರ್ನಾಟಕ ದೇವಾಲಯಗಳ ವಸತಿ ಕೋಶವನ್ನು ನೀಡಲು ಧಾರ್ಮಿಕ ಧತ್ತಿ ಇಲಾಖೆ ಮುಂದಾಗಿದೆ. ಈ ಕೋಶದಂತೆ ವೆಬ್‌ಸೈಟ್‌ನಲ್ಲಿ ರಾಜ್ಯದ 400 ದೇವಾಲಯದ ಹಾಗೂ ಹೊರರಾಜ್ಯದ ಛತ್ರಗಳ ಅಂದಾಜು 3,500 ರೂಮ್‌ಗಳ ಬುಕ್ಕಿಂಗ್ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ.

    ಇನ್ನೂ ಕರ್ನಾಟಕ ಟೆಂಪಲ್ಸ್ ಅಕಾಮಡೇಷನ್ ಡಾಟ್ ಕಾಮ್ (https://karnatakatemplesaccommodation.com) ವೆಬ್‌ಸೈಟ್‌ನಲ್ಲಿ ಭಕ್ತಾದಿಗಳು ದೇವಾಲಯದ ರೂಮ್‌ಗಳನ್ನು ಬುಕ್ ಮಾಡಬಹುದಾಗಿದೆ. ಈ ವೆಬ್‌ಸೈಟ್ ಕ್ಲಿಕ್ ಮಾಡಿದರೆ ದೇವಾಲಯದ ರೂಮ್‌ಗಳ ಮಾಹಿತಿ ದೊರೆಯಲಿದೆ. ಈಗಾಗಲೇ ಈ ವೆಬ್‌ಸೈಟ್‌ನಲ್ಲಿ ಕೆಲ ದೇವಾಲಯಗಳ ರೂಮ್‌ಗಳ ಮಾಹಿತಿ ಲಭ್ಯವಿದೆ. ಕೇವಲ ರಾಜ್ಯ ಮಾತ್ರವಲ್ಲ ಹೊರರಾಜ್ಯಗಳಾದ ತಿರುಪತಿ, ಶ್ರೀಶೈಲ, ಮಂತ್ರಾಲಯ ಸೇರಿದಂತೆ ರಾಜ್ಯದ ಮುಜರಾಯಿ ಛತ್ರಗಳಿರುವ ಕಡೆ ಬುಕ್ ಮಾಡಬಹುದಾಗಿದೆ. ಇದರಿಂದ ದೇವಾಲಯಗಳ ಆದಾಯ ಹೆಚ್ಚಳವಾಗಲಿದೆ.

    ಒಟ್ಟಿನಲ್ಲಿ ಮುಜರಾಯಿ ಇಲಾಖೆಯ ಈ ವಸತಿ ಕೋಶದಿಂದ ಒಂದೆಡೆ ದೇವಾಲಯಗಳ ಆದಾಯ ಹೆಚ್ಚಳವಾದರೆ, ಮತ್ತೊಂದೆಡೆ ಭಕ್ತಾದಿಗಳಿಗೆ ಅನುಕೂಲವಾಗಲಿದೆ.ಇದನ್ನೂ ಓದಿ: ನನಗೆ 7ರಿಂದ 8 ಭಾಷೆಗಳು ಗೊತ್ತು: ತ್ರಿಭಾಷಾ ಸೂತ್ರಕ್ಕೆ ಸುಧಾ ಮೂರ್ತಿ ಬೆಂಬಲ

     

  • ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್

    ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್

    ಬೆಂಗಳೂರು: ಈಗಾಗಲೇ ಮಳೆಗಾಲ ಆರಂಭವಾಗಿದೆ. ಬರುವ ತಿಂಗಳಿನಿಂದ ಮುಂಗಾರು ತೀವ್ರಗೊಳ್ಳುವ ನಿರೀಕ್ಷೆ ಇದೆ. ಸಾಮಾನ್ಯವಾಗಿ ಮಳೆಗಾಲದ ಅವಧಿಯಲ್ಲಿ ದೇವಸ್ಥಾನಕ್ಕೆ (Temple) ಬರುವವರ ಸಂಖ್ಯೆ ಕಡಿಮೆಯಾಗುತ್ತದೆ. ಈ ಸಮಸ್ಯೆ ಪರಿಹಾರಕ್ಕೆ ಮುಜರಾಯಿ ಇಲಾಖೆ ಪ್ಲಾನ್ ಮಾಡಿದೆ.

    ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಇಲಾಖೆಗೆ (Muzrai Department) ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೊಸ ಸಲಹೆ ಕೊಟ್ಟಿದ್ದಾರೆ. ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾದಾಗ ಅಥವಾ ಮಳೆಗಾಲದಲ್ಲಿ ಮಳೆ ಆರ್ಭಟದ ಮಧ್ಯೆ ದೇವಸ್ಥಾನಕ್ಕೆ ಹೋಗೋದು ಹೇಗಪ್ಪಾ ಅನ್ನೋ ತಲೆನೋವು ಭಕ್ತಾದಿಗಳಲ್ಲಿ ಇರುತ್ತದೆ. ಜೊತೆಗೆ ಮಳೆ ಬಂದಾಗ ದೇವಸ್ಥಾನದ ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಸಹ ಎದುರಾಗಬಹುದು. ಹೀಗಾಗಿ ಮಳೆಗಾಲದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಇದನ್ನೂ ಓದಿ: ಟಿ20 ವಿಶ್ವಕಪ್‌; 7 ಪಂದ್ಯಗಳಲ್ಲಿ ಕೇವಲ 75 ರನ್‌, 8ನೇ ಪಂದ್ಯದಲ್ಲಿ ಕಿಂಗ್‌ ಕೊಹ್ಲಿ 76 ರನ್‌

    ಇನ್ನು ಮಳೆಗಾಲದಲ್ಲಿ ಉಂಟಾಗುವ ಇಂತಹ ಸಮಸ್ಯೆ ನಿವಾರಣೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮುಜರಾಯಿ ಇಲಾಖೆಗೆ ದೇವಾಲಯಗಳಲ್ಲಿ ಶೆಲ್ಟರ್ ನಿರ್ಮಾಣಕ್ಕೆ ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳ ಮುಂಭಾಗದಲ್ಲಿಯೂ ಶೆಲ್ಟರ್‌ಗಳು ತಲೆಯೆತ್ತಲಿವೆ. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

    ಈ ಬಗ್ಗೆ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಬಿಸಿಲಿನಿಂದ ರಕ್ಷಿಸಲು ಭಕ್ತಾದಿಗಳಿಗೆ ದೇವಾಲಯಗಳಲ್ಲಿ ಶಾಮಿಯಾನ ವ್ಯವಸ್ಥೆ ಮಾಡಿದ್ದೆವು. ಈಗ ಮಳೆಗಾಲದಲ್ಲಿ ಭಕ್ತಾದಿಗಳಿಗಾಗಿ ದೇಗುಲದ ಮುಂಭಾಗದಲ್ಲಿ ಶೆಲ್ಟರ್ ನಿರ್ಮಿಸಲು ಸಲಹೆ ಕೊಟ್ಟಿದ್ದೇನೆ. ಅದರಂತೆ ದೇವಾಲಯದಲ್ಲಿ ಶೆಲ್ಟರ್‌ಗಳು ನಿರ್ಮಾಣವಾಗಲಿವೆ. ಇದರಿಂದ ವಯಸ್ಸಾದ ಹಾಗೂ ಮಕ್ಕಳಿಗೆ ಅನುಕೂಲವಾಗಲಿದೆ. ಮೊದಲನೇ ಹಂತದಲ್ಲಿ ಹೆಚ್ಚು ಮಳೆ ಬರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ದೇವಾಲಯಗಳಲ್ಲಿ ಶೆಲ್ಟರ್ ನಿರ್ಮಿಸಲಾಗುವುದು ಎಂದರು. ಒಟ್ಟಿನಲ್ಲಿ ಮುಜರಾಯಿ ಇಲಾಖೆಯ ಈ ನಿರ್ಧಾರ ಭಕ್ತಾದಿಗಳಿಗೆ ಸಹಾಯವಾಗಲಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‌ – ಭಾರತದ ಪರ ವಿಶಿಷ್ಟ ದಾಖಲೆ ಬರೆದ ಹಿಟ್‌ಮ್ಯಾನ್‌

  • ಇಂಥದ್ದೇ ಡ್ರೆಸ್‌ ಹಾಕೊಳ್ಳಿ, ಬಟ್ಟೆ ಬಿಚ್ಚಾಕ್ಕೊಂಡು ಹೋಗಿ ಹೇಳಲ್ಲ- ದೇಗುಲಗಳಲ್ಲಿನ ಡ್ರೆಸ್‌ ಕೋಡ್‌ಗೆ ಸಿಎಂ ವಿರೋಧ

    ಇಂಥದ್ದೇ ಡ್ರೆಸ್‌ ಹಾಕೊಳ್ಳಿ, ಬಟ್ಟೆ ಬಿಚ್ಚಾಕ್ಕೊಂಡು ಹೋಗಿ ಹೇಳಲ್ಲ- ದೇಗುಲಗಳಲ್ಲಿನ ಡ್ರೆಸ್‌ ಕೋಡ್‌ಗೆ ಸಿಎಂ ವಿರೋಧ

    ಬೆಂಗಳೂರು: ಇತ್ತೀಚೆಗೆ ಹಂಪಿಯಲ್ಲಿ ಡ್ರೆಸ್ ಕೋಡ್ (Dress Code Temple) ಜಾರಿ ಮಾಡಲಾಗಿತ್ತು. ಆದರೆ ಇದೀಗ ದೇಗುಲಗಳಲ್ಲಿ ವಸ್ತ್ರಸಂಹಿತೆ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸುವುದರ ಜೊತೆಗೆ ವಿವಾದಾತ್ಮಕ ಹೇಳಿಕೆಯೊಂದನ್ನು ಕೂಡ ನೀಡಿದ್ದಾರೆ.

    ಬುಧವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಬಗ್ಗೆ ಹಿರಿಯ ಸಾಹಿತಿ ಮರುಳಸಿದ್ಧಪ್ಪ ಅವರು ಸಿಎಂ ಮುಂದೆಯೇ ಅಕ್ಷೇಪ ವ್ಯಕ್ತಪಡಿಸಿದ್ದರು. ಮೈತುಂಬಾ ಬಟ್ಟೆ ಹಾಕಿಕೊಂಡು ಹೋಗಬೇಕು ನಿಜ. ಹಾಗಂತ‌ ಮಹಿಳೆಯರು ಸೀರೆ, ಪುರುಷರು ಪಂಚೆ ಉಡಬೇಕು ಅನ್ನೋದು ಯಾಕೆ? ಇದು ಪ್ರಜಾಪ್ರಭುತ್ವ ತತ್ವಕ್ಕೆ ಮಾರಕ ಅಂತಾ ಮರುಳ ಸಿದ್ಧಪ್ಪ ಆಕ್ಷೇಪ ಎತ್ತಿದರು.

    ಇದಾದ ಬಳಿಕ ವೇದಿಕೆಯಲ್ಲಿಯೇ ಸ್ಪಷ್ಟೀಕರಣ ನೀಡಿದ ಸಿಎಂ, ನಮ್ಮ ಮುಜರಾಯಿ ಇಲಾಖೆ ಈ ತೀರ್ಮಾನ ಎಲ್ಲಾ ಮಾಡಿಲ್ಲ. ಇಂಥದ್ದೇ ಡ್ರೆಸ್ ಹಾಕಬೇಡಿ ಅಥವಾ ಹಾಕಿ ಅನ್ನೋದು ತಪ್ಪು. ಶರ್ಟ್, ಪ್ಯಾಂಟ್ ಧರಿಸಿಕೊಂಡು ಹೋಗಬೇಡಿ, ಸೀರೆ ಹಾಕ್ಕೊಂಡು ಹೋಗಿ ಅಂತಾ ಹೇಳೋದು ಸರಿಯಲ್ಲ. ನಾವು ಇಂಥದ್ದೇ ಡ್ರೆಸ್ ಹಾಕಿಕೊಳ್ಳಿ ಅಥವಾ ಬಟ್ಟೆ ಬಿಚ್ಚಾಕ್ಕೊಂಡು ಬನ್ನಿ ಅಂತಾ ಹೇಳಲ್ಲ ಎಂದು ಸಿಎಂ ವಿವಾದಾತ್ಮಕ ಹೇಳಿಕೆ ನೀಡಿದರು.

    ಶುದ್ಧ ಮನಸ್ಸಿನಿಂದ ದೇವಸ್ಥಾನಕ್ಕೆ ಹೋಗಬೇಕು, ಶುದ್ಧ ಭಕ್ತಿ ಇಲ್ಲದೇ ಬಟ್ಟೆ ಸರಿಯಾಗಿ ಹಾಕಿಕೊಂಡು ಹೋದರೆ ಏನ್ ಪ್ರಯೋಜನ ಎಂದು ಸಿಎಂ ಇದೇ ವೇಳೆ ಪ್ರಶ್ನೆಯನ್ನು ಹಾಕಿದರು.  ಇದನ್ನೂ ಓದಿ: ವಿಕ್ಷಿತ್ ಭಾರತ್ ಬಜೆಟ್ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಶ್ಲಾಘನೆ

    ಖಾಸಗಿ ದೇಗುದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತಂದಿದ್ದು ನಿಜ. ಆದರೆ ಸಿದ್ದರಾಮಯ್ಯ ಸರ್ಕಾರದ ಮುಜರಾಯಿ ಇಲಾಖೆ ದೇಗುಲದಲ್ಲಿ ಹಲವೆಡೆ ವಸ್ತ್ರ ಸಂಹಿತೆ ತಂದಿರುವ ನಿರ್ಧಾರಕ್ಕೆ ಖುದ್ದು ಸಿಎಂ ಅವರೇ ವಿರೋಧ ವ್ಯಕ್ತಪಡಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ದೇವಾಲಯದ ಆದಾಯ ಕಡಿಮೆ- ಅರ್ಚಕರ ಸಂಬಳ ವಾಪಸ್ ಕೇಳಿ‌ ರಾಜ್ಯ ಸರ್ಕಾರ ನೋಟಿಸ್

    ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ (State Govt) ಇದೀಗ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು (Priest Salary) ವಾಪಸ್ ಕೇಳಿದೆ.

    ಈ ಸಂಬಂಧ ಚಿಕ್ಕಮಗಳೂರಿನ (Chikkamagaluru) ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತವು ಕಣ್ಣನ್ ಅವರ ವೇತನ ತಡೆಹಿಡಿದು ಈ ನೋಟಿಸ್ ನೀಡಿದೆ.

    ನೋಟಿಸ್‍ನಲ್ಲೇನಿದೆ..?: ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

    ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.

  • ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ಬೆಂಗಳೂರು: ಹನುಮ ಜಯಂತಿ (Hanuma Jayanthi) ಹಿನ್ನೆಲೆ ದೇವಾಲಯಗಳಲ್ಲಿ (Temples) ಪ್ರಸಾದ (Prasadam) ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ನಗರದಲ್ಲಿ ನಡೆದಿದೆ.

    ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ ಭೇದಿ ಪ್ರಾರಂಭವಾಗಿದ್ದು, ನೂರಾರು ಜನ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಭಕ್ತರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ ಹಾಗೂ ಬೆಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ 8 ಮಂದಿಯಲ್ಲಿ JN.1 ವೈರಸ್‌ ಪತ್ತೆ

    ಇನ್ನು ಈ ಪ್ರಕರಣದಲ್ಲಿ ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇಂದು ಬೆಳಗ್ಗೆ ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೆಳತಿ ಮೇಲೆ ಪ್ರೀತಿ; ಲಿಂಗ ಬದಲಿಸಿಕೊಂಡ್ರೂ ಮದುವೆಗೆ ಒಪ್ಪದ ಮಹಿಳಾ ಟೆಕ್ಕಿಯನ್ನ ಜೀವಂತ ಸುಟ್ಟು ಹತ್ಯೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆಯ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಠಾಣಾ ವ್ಯಾಪ್ತಿಯ ಜನರು ದಾಖಲಾಗಿದ್ದಾರೆ. ಅವಲಹಳ್ಳಿ, ನಂದಗುಡಿ ಹಾಗೂ ಹೊಸಕೋಟೆ ಠಾಣಾ ವ್ಯಾಪ್ತಿಯ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಸ್ವಸ್ಥತೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಠಾಣೆ ಪೊಲೀಸರು ಸದ್ಯ ಅಸ್ವಸ್ಥಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಂದ ಅಸ್ವಸ್ಥತೆಗೆ ಕಾರಣ ಏನು ಎಂಬ ಮಾಹಿತಿಯನ್ನು ತಾಲೂಕು ವೈದ್ಯಾಧಿಕಾರಿಗಳು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ

    ಈ ಕುರಿತು ಹೊಸಕೋಟೆ ಪ್ರಭಾರ ಟಿಹೆಚ್‌ಒ ಡಾ. ಸುಮಾ ಮಾಹಿತಿ ನೀಡಿದ್ದು, ಸುಮಾರು ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ 80ಕ್ಕೂ ಹೆಚ್ಚು ಜನ ದಾಖಲಾಗಿದ್ದಾರೆ. ಎಲ್ಲಾ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರ ಬಗ್ಗೆ ಕಾರಣ ಏನು ಎಂಬುದು ಲ್ಯಾಬ್ ವರದಿ ಬಳಿಕ ಗೊತ್ತಾಗಲಿದೆ. ನೀರಿನಿಂದ ಅಥವಾ ಕೆಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವನೆ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ಬಗ್ಗೆ ಪರಿಶೀಲನೆ ಆಗುತ್ತಿದೆ ಎಂದರು. ಇದನ್ನೂ ಓದಿ: ಆಕ್ಸಿಡೆಂಟ್ ಆಗಿ ಕಟ್ ಆದ ತಲೆ ಮೂರೂವರೆ ಗಂಟೆ ಶೋಧದ ಬಳಿಕ ಸಿಕ್ತು..!

    ಇನ್ನು ಸಿಲಿಕಾನ್ ಸಿಟಿ ಆಸ್ವತ್ರೆಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು (Health Department officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ನಾಗೇಶ್, ಶನಿವಾರ ಹಾಗೂ ಭಾನುವಾರ ಪ್ರಸಾದ ತಿಂದ ಹಿನ್ನೆಲೆ ಅಸ್ವಸ್ಥರಾಗಿರುವುದು ಪ್ರಾಥಮಿಕ ಮಾಹಿತಿಯಲ್ಲಿ ಕಂಡು ಬಂದಿದೆ. ಎಲ್ಲೆಲ್ಲಿ ಪ್ರಸಾದ ಸೇವಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ನೀರಿನಿಂದಲೂ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಎಲ್ಲಾ ಬಗ್ಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದೇವೆ. ಈಗಾಗಲೆ 80 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿರುವವರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ಬೆಡ್ ಹಾಗೂ ಅಂಬುಲೆನ್ಸ್‌ಗಳ ನಿಯೋಜನೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ

  • ಸರ್ಕಲ್ ಮಾರಮ್ಮ ದೇವಾಲಯ ಬಳಿ ಆಟೋ ಮೇಲೆ ಬಿದ್ದ ಮರ – ಮೂವರಿಗೆ ಗಾಯ

    ಸರ್ಕಲ್ ಮಾರಮ್ಮ ದೇವಾಲಯ ಬಳಿ ಆಟೋ ಮೇಲೆ ಬಿದ್ದ ಮರ – ಮೂವರಿಗೆ ಗಾಯ

    ಬೆಂಗಳೂರು: ಒಣಗಿದ ಮರವೊಂದು (Tree) ಚಲಿಸುತ್ತಿದ್ದ ಆಟೋ (Auto) ಮೇಲೆ ಬಿದ್ದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಮಲ್ಲೇಶ್ವರಂನ (Malleswaram) ಸರ್ಕಲ್ ಮಾರಮ್ಮ ದೇವಾಲಯದ (Circle Maramma Temple) ಬಳಿ ನಡೆದಿದೆ.

    ಘಟನೆ ನಡೆದ ಸಂದರ್ಭ ಪಬ್ಲಿಕ್ ಟಿವಿ ಸಿಬ್ಬಂದಿ ಪ್ರಭು ಹಾಗೂ ಸ್ಥಳೀಯರು ಸೇರಿಕೊಂಡು ಗಾಯಾಳುಗಳನ್ನು ರಕ್ಷಿಸಿ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.

    ಬಿಡಬ್ಲ್ಯುಎಸ್‌ಎಸ್‌ಬಿಗೆ ಸೇರಿದ ಜಾಗದಲ್ಲಿ ಒಣಗಿದ ಮರ ಆಟೋ ಮೇಲೆ ಬಿದ್ದು, ಮೂವರಿಗೆ ಗಾಯಗಳಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಡ್ರೈವರ್ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಯುವತಿ ಓಡಿ ಹೋಗಿದ್ದಕ್ಕೆ ಯುವಕನ ಸೋದರ ಮಾವನನ್ನು ಅರೆಬೆತ್ತಲೆ ಮಾಡಿ ಠಾಣೆ ಮುಂದೆಯೇ ಥಳಿತ

    ಇದೇ ಜಾಗದಲ್ಲಿ ಇನ್ನೂ ಸಾಕಷ್ಟು ಒಣಗಿದ ಮರಗಳಿವೆ. ಯಾವ ಗಳಿಗೆಯಲ್ಲೂ ಮರಗಳು ಬಿದ್ದು ಅವಘಡವಾಗಬಹುದಾದಂತ ಸ್ಥಿತಿಯಿದೆ. ಇದರಿಂದ ಸಾರ್ವಜನಿಕರು ಅಪಾಯದ ಭೀತಿಯಲ್ಲೇ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಪರೀಕ್ಷೆ ಶುಲ್ಕ ಪಾವತಿಸದ್ದಕ್ಕೆ ಚಪ್ಪಲಿ ಬಿಡುವ ಜಾಗದಲ್ಲಿ ಮಕ್ಕಳನ್ನು ಕೂರಿಸಿ ಶಿಕ್ಷೆ!

  • ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

    ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

    ಬೆಂಗಳೂರು: ನಮ್ಮ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು (Private Temple) ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ (Mujarai Department) ತೆಗೆದುಕೊಳ್ಳುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟನೆ ನೀಡಿದ್ದಾರೆ.

    ಖಾಸಗಿ ದೇಗುಲವನ್ನು ಮುಜರಾಯಿ ವ್ಯಾಪ್ತಿಗೆ ತರಲು ಟಾರ್ಗೆಟ್ ಮಾಡಿ ನೋಟಿಸ್ ಕೊಡಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳಿಂದ ಸಮಾವೇಶದಲ್ಲಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲ ಹಿಂದೂ ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ. ನಮ್ಮ ಸರ್ಕಾರ ಬಂದ ಮೇಲಂತೂ ಒಂದೂ ತೊಗೊಂಡಿಲ್ಲ ಎಂದು ತಿಳಿಸಿದ್ದಾರೆ.

    ಕೆಲವು ಸಂದರ್ಭದಲ್ಲಿ ಹಣ ದುರಪಯೋಗ ಆಗುತ್ತಿದೆ. ಟ್ರಸ್ಟಿಗಳಲ್ಲಿ ಜಗಳಗಳು ಬಂದಾಗ ಅವರು ಕೋರ್ಟ್ಗೆ ಹೋಗ್ತಾರೆ. ಈ ರೀತಿಯ ಸಂದರ್ಭಗಳಲ್ಲಿ ಹಿಂದೆ ಕೆಲವು ದೇವಾಲಯಗಳನ್ನು ತೆಗೆದುಕೊಂಡಿದ್ದಾರೆ. ಆದರೆ ನಮ್ಮ ಸರ್ಕಾರ ಬಂದ ಮೇಲೆ ಯಾವ ದೇವಾಲಯವನ್ನೂ ತೆಗೆದುಕೊಂಡಿಲ್ಲ, ತೆಗೆದುಕೊಳ್ಳೋ ಉದ್ದೇಶವಿಲ್ಲ ಎಂದು ಹೇಳಿದರು.

    ನಮ್ಮ ಮುಜರಾಯಿ ಇಲಾಖೆಯ 34 ಸಾವಿರ ದೇವಾಲಯಗಳಿವೆ. ಆರೋಪ ಮಾಡೋ ಹಿಂದೂ ಸಂಘಟನೆಗಳು ಬೇಕಿದ್ರೆ ಮುಜರಾಯಿ ದೇವಸ್ಥಾನಗಳನ್ನು ದತ್ತು ತೆಗೆದುಕೊಳ್ಳಲಿ, ಅಭಿವೃದ್ಧಿ ಮಾಡಲಿ. ಪ್ರೈವೆಟ್ ದೇವಸ್ಥಾನಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ ಅಂತ ಕರ್ನಾಟಕ ಜನತೆಗೆ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಪ್ರಿನ್ಸಿಪಾಲ್, ವಾರ್ಡನ್‌, ಡಿ-ಗ್ರೂಪ್‌ ನೌಕರರ ಅಮಾನತಿಗೆ ಸೂಚನೆ

    ಬಳ್ಳಾರಿಯ ಕನ್ನಿಕಾ ಪರಮೇಶ್ವರಿ ದೇವಾಲಯಕ್ಕೆ ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಕೋರ್ಟ್‌ಗೆ ಹೋದಾಗ ಜಿಲ್ಲಾಧಿಕಾರಿ ನೋಟಿಸ್ ಕೊಟ್ಟಿರಬಹುದು ಎಂದರು. ಹಿಂದೂ ದೇಗುಲಗಳನ್ನು ಮುಜರಾಯಿ ವ್ಯಾಪ್ತಿಯಿಂದಲೇ ಕೈಬಿಟ್ಟು ಸ್ವತಂತ್ರಗೊಳಿಸಬೇಕು ಎಂಬ ಹಿಂದೂ ಸಂಘಟನೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, 35 ಸಾವಿರ ಮುಜರಾಯಿ ದೇವಸ್ಥಾನಗಳಿವೆ. ಅದ್ರಲ್ಲಿ 34 ಸಾವಿರ ಸಿ ದರ್ಜೆ ದೇವಾಲಯಗಳಿವೆ. ಆ ದೇವಾಲಯಗಳನ್ನು ತೆಗೆದುಕೊಂಡು ಅಭಿವೃದ್ಧಿ ಮಾಡಲಿ. ನಮ್ಮ ಇಲಾಖೆ ಪ್ರೈವೆಟ್‌ನವರು ಬಂದು ದೇವಾಲಯಗಳನ್ನು ಅಭಿವೃದ್ಧಿ ಮಾಡುತ್ತಾರೆ ಅಂದರೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದರು.

    ನಾನು ಮುಜರಾಯಿ ಸಚಿವನಾದಮೇಲೆ ಕೆಲ ಅಭಿವೃದ್ಧಿ ಕೆಲಸಗಳು ಆಗಿವೆ. 40 ಸಾವಿರ ಅರ್ಚಕರು ಇದ್ದಾರೆ. ಅರ್ಚಕರ ಮಕ್ಕಳಿಗೆ ಈ ವರ್ಷದಿಂದ 5 ಸಾವಿರದಿಂದ 1 ಲಕ್ಷ ರೂ. ವರೆಗೆ ಸ್ಕಾಲರ್‌ಶಿಪ್ ಕೊಡುತ್ತೇವೆ. ಇದನ್ನು ಜನವರಿಯಿಂದ ಪ್ರಾರಂಭ ಮಾಡುತ್ತೇವೆ. ಈ ಹಿಂದೆ ಅರ್ಚಕರು ಸಾವನ್ನಪ್ಪಿದರೆ 35 ಸಾವಿರ ರೂ. ಕೊಡುತ್ತಿದ್ದರು. ಅದನ್ನು 2 ಲಕ್ಷ ರೂ.ಗೆ ಏರಿಸಿದ್ದೇನೆ. ಕಾಶಿ ಯಾತ್ರೆಗೆ ಅರ್ಚಕರು ಹಾಗೂ ಅವರ ಮನೆಯವರು 1,200 ಜನ ಉಚಿತವಾಗಿ ಕರೆದುಕೊಂಡು ಹೋಗಬಹುದು. ಆನುವಂಶಿಕವಾಗಿ ಅರ್ಚಕರ ಹಕ್ಕುದಾರರು ಪೂಜೆ ಮಾಡಲು ಅವಕಾಶ ಮಾಡಿದ್ದೇನೆ. ದೇವಾಲಯಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರು ನೇರವಾಗಿ ಹೋಗೋದು, ಸಿಸಿಟಿವಿ ಅಳವಡಿಕೆ, ಮೊಬೈಲ್ ಬ್ಯಾನ್ ಹಲವು ಕ್ರಮಗಳನ್ನು ಕೈಗೊಂಡಿದ್ದೇನೆ. ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡಿದ್ದೇನೆ. ಯಲ್ಲಮ್ಮ ದೇವಾಲಯ, ಚಾಮುಂಡಿ ದೇವಾಲಯಕ್ಕೆ ಹೋಗೋ ಭಕ್ತಾದಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ವಿಶೇಷ ಪ್ರಾಧಿಕಾರ ಮಾಡೋ ಪ್ಲಾನ್ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಂತ್ಯಸಂಸ್ಕಾರವಾದ ಸ್ಥಳದಲ್ಲಿ ವಿಷ್ಣು ಅಪ್ಪಾಜಿ ಪುಣ್ಯಭೂಮಿ ಆಗಬೇಕು: ತಡರಾತ್ರಿ ಕಿಚ್ಚ ಸುದೀಪ್ ಟ್ವೀಟ್

  • ಸರ್ಕಾರಿ ಶಾಲೆ ನಿರ್ಮಾಣವಾದ್ರೆ ಕಿರಿಕಿರಿ ಎಂದು ಕಾಮಗಾರಿಗೆ ಅಡ್ಡಿ – ಸಿಎ ಸೈಟಲ್ಲಿ ದೇವಾಲಯ ನಿರ್ಮಾಣ

    ಸರ್ಕಾರಿ ಶಾಲೆ ನಿರ್ಮಾಣವಾದ್ರೆ ಕಿರಿಕಿರಿ ಎಂದು ಕಾಮಗಾರಿಗೆ ಅಡ್ಡಿ – ಸಿಎ ಸೈಟಲ್ಲಿ ದೇವಾಲಯ ನಿರ್ಮಾಣ

    ರಾಯಚೂರು: ಶಾಲೆಯನ್ನು ದೇಗುಲ ಎಂದು ಕರೆಯುತ್ತಾರೆ. ಆದರೆ ರಾಯಚೂರಿನಲ್ಲಿ (Raichur) ಸರ್ಕಾರಿ ಶಾಲೆ ನಿರ್ಮಾಣ ಆಗಬಾರದು ಎಂದು ದೇವಾಲಯ (Temple) ನಿರ್ಮಾಣ ಮಾಡಿರುವ ಘಟನೆ ನಡೆದಿದೆ.

    ಸರ್ಕಾರಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಜಾಗ ಸಿಗುವುದೇ ಕಷ್ಟವಾಗಿದೆ. ಅದರಲ್ಲೂ ರಾಯಚೂರಿನ ಎಲ್‌ಬಿಎಸ್ ನಗರ ಪ್ರೌಢ ಶಾಲೆ ತನಗೆ ಸಿಕ್ಕ ಜಾಗವನ್ನು ದೇವರ ಹೆಸರಿನಲ್ಲಿ ಕಳೆದುಕೊಳ್ಳುವ ಪರಿಸ್ಥಿತಿ ಎದುರಿಸುತ್ತಿದೆ. ಈ ಜಾಗದಲ್ಲಿ ಶಾಲೆ ಕಟ್ಟಿದರೆ ತಮಗೆ ಕಿರಿಕಿರಿಯಾಗುತ್ತದೆ ಎಂದು ಬಡಾವಣೆ ಜನ ದೇವಾಲಯ ಕಟ್ಟಿದ್ದಾರೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ

    ಮನೆ ಕಟ್ಟಡ ಕಟ್ಟುವ ವೇಳೆ ಸಿಮೆಂಟ್ ಹಾಗೂ ಇತರೆ ಸಾಮಗ್ರಿಗಳನ್ನು ಇರಿಸಿದ್ದ ಶೆಡ್ (Shed) ಅನ್ನೇ ದೇವಾಲಯ ಮಾಡಿ ಈಶ್ವರ, ಗಣೇಶ ದೇವರನ್ನು ಪ್ರತಿಷ್ಠಾಪಿಸಿ ಜನ ಪೂಜಿಸುತ್ತಿದ್ದಾರೆ. ಪಕ್ಕದ ಗಾರ್ಡನ್ ಜಾಗದಲ್ಲಿ ನಾಗದೇವತೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದರಿಂದ ಶಾಲಾ ಕಟ್ಟಡ ಕಾಮಗಾರಿ ಆರಂಭಿಸಲು ತೊಂದರೆಯುಂಟಾಗಿದೆ. ಇದನ್ನೂ ಓದಿ: ಬೆಂಗ್ಳೂರು ಮಾತ್ರವಲ್ಲ ವಿದೇಶಗಳ ಶಾಲೆಗಳಿಗೂ ಹುಸಿ ಬಾಂಬ್ ಬೆದರಿಕೆ

    ಇಲ್ಲಿನ ಸಂತೋಷ ನಗರ ಬಡಾವಣೆಯ 1017.45 ಚದರ ಮೀಟರ್ ಸಿ.ಎ.ಸೈಟ್ ಅನ್ನು ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ ಪ್ರೌಢಶಾಲೆಗೆ ನೀಡಿದೆ. 2022 ಜೂನ್ 1 ರಂದು ಎಲ್‌ಬಿಎಸ್ ನಗರ ಪ್ರೌಢಶಾಲೆ ಜಾಗವನ್ನು ಹಣಕಟ್ಟಿ ತನ್ನ ಹೆಸರಿಗೆ ನೋಂದಣಿಯನ್ನೂ ಮಾಡಿಕೊಂಡಿದೆ. ಆದರೆ ಈಗ ಶಿಕ್ಷಣ ಇಲಾಖೆಯಿಂದ ಅನುಮೋದನೆ ಸಿಕ್ಕಿರುವ ನಾಲ್ಕು ಕೊಠಡಿಗಳ ನಿರ್ಮಾಣಕ್ಕೆ ತಲೆ ಎತ್ತಿರುವ ದೇಗುಲ ಅಡ್ಡಿಯಾಗಿದೆ. ಬಡಾವಣೆ ಜನ 2014ರಿಂದ ದೇವಾಲಯ ನಿರ್ಮಾಣವಾಗಿದೆ. ದೇವಾಲಯ ತೆರವು ಮಾಡಲು ಬಿಡಲ್ಲ, ಶಾಲೆಯನ್ನೇ ಎಲ್ಲಿಗಾದರೂ ಸ್ಥಳಾಂತರ ಮಾಡಿಕೊಳ್ಳಿ ಎನ್ನುತ್ತಿದ್ದಾರೆ. ಇದನ್ನೂ ಓದಿ: ನೀನು‌ ಎಷ್ಟು ಟ್ಯಾಕ್ಸ್ ಕಟ್ತೀಯಾ ಹೇಳು – ರೈತನ ವಿರುದ್ಧ ಸುರೇಶ್‌ ಗರಂ

    ಸ್ಲಂ ಪ್ರದೇಶಗಳಾದ ಎಲ್‌ಬಿಎಸ್ ನಗರ, ಆಶ್ರಯ ಕಾಲೋನಿ, ಜನತಾ ಕಾಲೋನಿಯ ಬಡ ಮಕ್ಕಳಿಗೆ ಅನುಕೂಲವಾಗಬೇಕಾದ ಶಾಲೆ ಸಮಸ್ಯೆಗೆ ಸಿಲುಕಿದೆ. 150 ವಿದ್ಯಾರ್ಥಿಗಳಿರುವ ಶಾಲೆ ಸದ್ಯ ಕಳೆದ ಐದು ವರ್ಷಗಳಿಂದ ಅಲ್ಪಸಂಖ್ಯಾತರ ಮಹಿಳಾ ಪಿಯು ಕಾಲೇಜಿನ ಕಟ್ಟಡದಲ್ಲಿ ನಡೆಯುತ್ತಿದೆ. ಯಾವಾಗ ಅಲ್ಲಿಂದ ಜಾಗ ಖಾಲಿ ಮಾಡಬೇಕಾಗುತ್ತದೋ ಗೊತ್ತಿಲ್ಲ. ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ದೇವಾಲಯ ತೆರವು ಮಾಡಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ ಆದರೆ ಅದು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ಕದನ ವಿರಾಮದ ನಡುವೆಯೂ ಗಾಜಾದಲ್ಲಿ ಐವರು ಒತ್ತೆಯಾಳುಗಳ ಸಾವು

    ಬಡ ಮಕ್ಕಳು ಓದುವ ಶಾಲೆ ಎಂದು ಈ ಹಿಂದೆ ಪಬ್ಲಿಕ್ ಟಿವಿ ಈ ಶಾಲೆಯ 50 ಮಕ್ಕಳಿಗೆ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ಟ್ಯಾಬ್‌ಗಳನ್ನು ವಿತರಿಸಿತ್ತು. ಈಗಲೂ ಮಕ್ಕಳು ಟ್ಯಾಬ್‌ಗಳ ಮೂಲಕ ತಮ್ಮ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಸ್ವಂತ ಕಟ್ಟಡವಿಲ್ಲದೆ ಶಾಲೆ ಅತಂತ್ರ ಸ್ಥಿತಿಯಲ್ಲಿದೆ. ಕೂಡಲೇ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲೂ ಯೋಗಿ ಸರ್ಕಾರದ ಬುಲ್ಡೋಜರ್ ದಾಳಿ – ಕಟ್ಟಡಗಳು ಧ್ವಂಸ

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ

    ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hill) ಅಗ್ನಿ ಅವಘಡ ಸಂಭವಿಸಿದೆ. ಲಾಡು ತಯಾರಿಸುವ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

    ಮಹದೇಶ್ವರ ದೇಗುಲದ (Temple) ಹಿಂಭಾಗದಲ್ಲೇ ಇರುವ ಲಾಡು ತಯಾರಿಸುವ ಘಟಕದಲ್ಲಿ ಬೆಂಕಿ (Fire) ಹೊತ್ತಿಕೊಂಡಿದೆ. ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ಅಲ್ಲಿನ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ವರದಿಯಾಗಿಲ್ಲ.

    ಘಟನೆ ಬಳಿಕ ಪ್ರಾಧಿಕಾರದ ನೌಕರರಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಬೆಂಕಿ ಹೊತ್ತಿಕೊಳ್ಳಲು ಸಿಲಿಂಡರ್ ಕಾರಣವೆಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಎಣ್ಣೆ ಬಾಣಲೆಯಿಂದ ಬೆಂಕಿ ಪ್ರಜ್ವಲಿಸಿ, ಹೆಚ್ಚಿನ ಭಾಗಕ್ಕೆ ಹರಡಿಕೊಂಡಿದೆ. 2 ಟ್ಯಾಂಕರ್ ನೀರಿನ ಮೂಲಕ ಮಹದೇಶ್ವರ ಬೆಟ್ಟದ ಸ್ವಚ್ಛತಾ ಸಿಬ್ಬಂದಿ ಜೊತೆಗೂಡಿ ಬೆಂಕಿ ನಂದಿಸಿದ್ದಾರೆ. ಒಂದು ಭಾಗದ ಗೋಡೆ ಹಾಳಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ಹೇಳಿದ್ದಾರೆ.

    ದೇವಾಲಯದ ಆವರಣದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆ ಸತತ 1 ಗಂಟೆ ಪರಿಶ್ರಮದ ಬಳಿಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿದ ಸ್ಥಳದಲ್ಲಿ ಪ್ರಾಧಿಕಾರದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Bengaluru Bomb Threat: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ

  • ಹಾಸನಾಂಬೆ ದರ್ಶನೋತ್ಸವ ತೆರೆಗೆ ಕ್ಷಣಗಣನೆ

    ಹಾಸನಾಂಬೆ ದರ್ಶನೋತ್ಸವ ತೆರೆಗೆ ಕ್ಷಣಗಣನೆ

    ಹಾಸನ: ನವೆಂಬರ್ 2 ರಿಂದ ಆರಂಭವಾಗಿದ್ದ ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಮಧ್ಯಾಹ್ನ 12 ಗಂಟೆ ನಂತರ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಆ ಮೂಲಕ ಬರೋಬ್ಬರಿ 12 ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ನೀಡಿದ ಹಾಸನಾಂಬೆ (Hassanamba) ಮತ್ತೆ ಒಂದು ವರ್ಷಗಳ ಕಾಲ ಮರೆಗೆ ಸರಿಯಲಿದ್ದಾಳೆ.

    ಹಾಸನಾಂಬೆ ಬಾಗಿಲು ಮುಚ್ಚುವ ಮುನ್ನಾ ದಿನವಾದ ಮಂಗಳವಾರ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತು. ನಿನ್ನೆ ಇಡೀ ದಿನ ದೇವಾಲಯದ (Temple) ಒಳ-ಹೊರಗು ಆಗಮಿಕರಿಂದ ತುಂಬಿ ತುಳುಕುತ್ತಿತ್ತು. ನಿನ್ನೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮಾಜಿ ಸಚಿವ ವಿಜಯ್ ಶಂಕರ್, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಹಾಸನಾಂಬೆ ದೇವಿ ದರ್ಶನ ಪಡೆದರು.

    ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಹಲವು ದಾಖಲೆಗಳು ನಿರ್ಮಾಣ ಆಗಿದೆ. ಈ ಬಾರಿ 13.5 ಲಕ್ಷಕ್ಕೂ ಹೆಚ್ಚಿನ ಭಕ್ತರು ದೇವಿ ದರ್ಶನ ಪಡೆದಿದ್ದರೆ. ನಿನ್ನೆ ಬೆಳಗ್ಗೆ 6 ಗಂಟೆಯವರೆಗೆ ವಿಶೇಷ ದರ್ಶನದ 1,000 ರೂ., 300 ರೂ. ಹಾಗೂ ಲಾಡು ಪ್ರಸಾದ ಮಾರಾಟದಿಂದ 5,79,56,460 ರೂ. ಹಣ ಸಂಗ್ರಹವಾಗಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ. ಇಂದು ಮಧ್ಯಾಹ್ನ 12 ಗಂಟೆ ಬಳಿಕ ವಿಶ್ವರೂಪ ದರ್ಶನದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ, ಶಾಸಕ ಸ್ವರೂಪ್‌ಪ್ರಕಾಶ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ಇದನ್ನೂ ಓದಿ: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಳಗಾವಿಗೆ ವಿಸ್ತರಣೆ

    ಈವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ಶಕ್ತಿ ದೇವತೆಯ ದರ್ಶನಕ್ಕಾಗಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಇಂದು ಮಧ್ಯಾಹ್ನ ದೇವಿಗೆ ಅಲಂಕಾರ ಮಾಡಿದ್ದ ಒಡವೆಗಳನ್ನು ತೆಗೆದು ಪೂಜೆ ಸಲ್ಲಿಸಿ, ದೀಪ ಹಚ್ಚಿ, ದೇವಿಯ ಮುಂದೆ ಹೂವು, ನೈವೇದ್ಯ ಇಟ್ಟು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿ ಬಂದ್ ಮಾಡಲಿದ್ದು, ಒಂದು ವರ್ಷ ಕಾಲ ಹಾಸನಾಂಬೆ ತೆರೆ ಮರೆಗೆ ಸರಿಯಲಿದ್ದಾಳೆ. ಇದನ್ನೂ ಓದಿ: 25+ ಸ್ಥಾನ ಗೆಲ್ಲಲು ವಿಜಯೇಂದ್ರ ಮುಂದಿರುವ ಸವಾಲು ಏನು?