Tag: ದೇವಾಲಯ ಪ್ರಸಾದ

  • ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ರಾಮಲಿಂಗಾ ರೆಡ್ಡಿ

    ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ರಾಮಲಿಂಗಾ ರೆಡ್ಡಿ

    – ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದವನ್ನೂ ಟೆಸ್ಟ್ ಮಾಡಲಿ
    – ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ

    ಬೆಂಗಳೂರು: ತಿರುಪತಿ ಲಡ್ಡು (Tirupathi Laddu) ವಿವಾದವಾದ ಬೆನ್ನಲ್ಲೇ, ರಾಜ್ಯ ಎಚ್ಚೆತ್ತಿದೆ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ತೀರ್ಮಾನಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲೇಶ್ವರಂ ಟಿಟಿಡಿ (Malleshwaram TTD) ದೇವಸ್ಥಾನದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಗ್ರಾಮ ತೊರೆದು ಬಂಧನ ಭೀತಿಯಲ್ಲಿ ಯುವಕ ಸಾವು

    ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ:
    ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯ 99% ದೇವಾಲಯಗಳು ನಂದಿನಿ ತುಪ್ಪವನ್ನೆ ಬಳಸಿಕೊಳ್ಳುತ್ತಾ ಇದ್ದಾರೆ. ಜನರಿಗೆ ಸಂಶಯ ಬೇಡ ಅಂತಾ ನಂದಿನಿ ತುಪ್ಪ ಬಳಕೆ ಮಾಡಬೇಕು ಅಂತಾ ಆದೇಶ ಮಾಡಿದ್ದೇವೆ. ಕೇಂದ್ರದ ಮಂತ್ರಿ ಒಬ್ಬರು ಪ್ರಸಾದ ಟೆಸ್ಟ್ ಮಾಡಬೇಕು ಅಂತಾ ಹೇಳಿದ್ದಾರೆ. ನನ್ನ ಅಭಿಪ್ರಾಯ ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ ಎಂದಿದ್ದಾರೆ.

    ನಮ್ಮ ರಾಜ್ಯದ ದೇವಸ್ಥಾನಗಳಲ್ಲಿ ಎಲ್ಲಿಯೂ ಅಂತಹ ಘಟನೆ ಆಗಿಲ್ಲ. ತಿರುಪತಿ ಲಡ್ಡು ಪ್ರಸಾದದ ಸಂಶಯದ ಬಗ್ಗೆ ತೀರ್ಮಾನ ಆಗೋವರೆಗೂ ಬಳಸಬಾರದು ಅಂತಾ ಚರ್ಚೆ ಆಗ್ತಿರೋ ವಿಷಯ. ನಮ್ಮ ರಾಜ್ಯದ ವಿಚಾರ ಅಲ್ಲ ಇದು ಆಂಧ್ರಪ್ರದೇಶ ವಿಚಾರ ಅಲ್ಲಿನ ಸರ್ಕಾರ ತೀರ್ಮಾನ ಮಾಡಬೇಕು. ಜನ ಬಳಸದೇ ಇದ್ರೆ ಮುಗಿದೇ ಹೋಯ್ತು ಎಂದಿದ್ದಾರೆ.

    ಏನಿದು ವಿವಾದ?
    ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನವು ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆರೋಪಿಸಿದ್ದರು.

    ಆಂಧ್ರಪ್ರದೇಶದ (Andhrapradesh) ಸಿಎಂ ಎನ್.ಚಂದ್ರಬಾಬು ನಾಯ್ಡು (N Chandrababu Naidu) ಅವರ ಆರೋಪದ ಕುರಿತು ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಅವರಿಗೆ ವಿವರವಾದ ವರದಿ ಕೇಳಿದ್ದಾರೆ.ಇದನ್ನೂ ಓದಿ: ಮೀಸಲಾತಿ ಕುರಿತ ಹೇಳಿಕೆಗೆ ಆಕ್ಷೇಪ – ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ದೂರು

    ಇದರ ಬೆನ್ನಲ್ಲೇ ರಾಜ್ಯ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಮುಜರಾಯಿ ಇಲಾಖೆ ಎಚ್ಚೆತ್ತಿದೆ. ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ! – ಆದೇಶದಲ್ಲಿ ಏನಿದೆ?

    ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ! – ಆದೇಶದಲ್ಲಿ ಏನಿದೆ?

    ಬೆಂಗಳೂರು: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ನೀಡಿದ್ದ ವಿಷ ಪ್ರಸಾದ ಸೇವಿಸಿ 14 ಮಂದಿ ಸಾವನ್ನಪ್ಪಿದ ಬಳಿಕ ಎಚ್ಚೆತ್ತಿರುವ ರಾಜ್ಯ ಮುಜರಾಯಿ ಇಲಾಖೆ, ದೇವಾಲಯಗಳಲ್ಲಿ ಅನ್ನದಾಸೋಹ, ಪ್ರಸಾದ ವಿತರಣೆಗೆ ಸ್ಥಳೀಯ ಅಧಿಕಾರಿಗಳ ಅನುಮತಿ ಕಡ್ಡಾಯ ಎಂಬ ಖಡಕ್ ಆದೇಶವನ್ನು ಹೊರಡಿಸಿದೆ.

    ಆದೇಶದಲ್ಲಿ ಏನಿದೆ?
    ದೇವರ ನೈವೇದ್ಯ ಮತ್ತು ದಾಸೋಹ ತಯಾರಿಸುವ ಕೋಣೆಯಲ್ಲಿ ಸಿಸಿ ಟಿವಿ ಅಳವಡಿಕೆಯೂ ಕೂಡ ಕಡ್ಡಾಯ. ಪ್ರಮುಖವಾಗಿ ದೇವಾಲಯದ ಅಡುಗೆ ಕೋಣೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ಮೇಲೆ ಕಟ್ಟುನಿಟ್ಟಿನ ನಿಗಾವಹಿಸುವುದು.

    ತಯಾರಿಸಿದ ನೈವೇದ್ಯ/ ಅಡುಗೆಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಬೇಕು. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದವನ್ನು ಆರೋಗ್ಯಾಧಿಕರಿಗಳು ಪರಿಶೀಲನೆ ನಡೆಸಬೇಕು. ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ನೀಡುವ ಪ್ರಸಾದಕ್ಕೆ ಆರೋಗ್ಯಾಧಿಕಾರಿಯಿಂದ ಅನುಮತಿ ಪಡೆದ ಮೇಲೆಯೇ ವಿತರಣೆ
    ಮಾಡಬೇಕು.

    ದೇವಾಲಯದ ಪರಿಸರದಲ್ಲಿ ಭಕ್ತಾದಿಗಳೇ ಪ್ರಸಾದ ತಯಾರಿಸಿ ನೇರವಾಗಿ ಭಕ್ತರಿಗೆ ನೀಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆ ಒಳಪಡಿಸಿ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಮಾಡಲಾಗಿದೆ.

    ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಇಲಾಖೆ ನೀಡಿದ ನಿಯಮಗಳನ್ನು ಆಯಾ ದೇವಾಲಯ ಸಂಸ್ಥೆಗಳು ಪಾಲಿಸಬೇಕು ಎಂದು ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv