Tag: ದೇವೆಗೌಡ

  • ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ

    ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ

    ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ವರಿಷ್ಠ ಹೆಚ್‌.ಡಿ. ದೇವೇಗೌಡರು ಬೆಂಬಲವನ್ನು ಘೋಷಿಸಿದರು.

    ರಾಷ್ಟ್ರಪತಿ ಚುನಾವಣೆ ನಿಮಿತ್ತ ಬೆಂಬಲವನ್ನು ಕೇಳಲು ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಹೆಚ್.ಡಿ. ದೇವೇಗೌಡರು ಮಾತನಾಡಿ, ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

    ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಿಶನ್ ರೆಡ್ಡಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಭಾಗವಹಿಸಿದ್ದರು. ಜೊತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಹೆಚ್.ಡಿ. ರೇವಣ್ಣ ಸಹ ಉಪಸ್ಥಿತರಿದ್ದರು. ಇದನ್ನೂ ಓದಿ: ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಬಲಿಸಿದ ಸುಮಲತಾ

    ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಪ್ರಚಾರ ಸಭೆಗೆ ಆಗಮಿಸಿದ್ದಾರೆ. ಈ ವೇಳೆ ಬಿಜೆಪಿ ಸಭೆಯಲ್ಲೂ ಭಾಗವಹಿಸಿದ್ದರು. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ದ್ರೌಪದಿ ಮುರ್ಮು

    Live Tv
    [brid partner=56869869 player=32851 video=960834 autoplay=true]

  • ದೇವೇಗೌಡರಿಗೆ ಮಕ್ಕಳ ಮೇಲೆ ನಂಬಿಕೆ ಇಲ್ಲ :  ಶ್ರೀನಿವಾಸಗೌಡ

    ದೇವೇಗೌಡರಿಗೆ ಮಕ್ಕಳ ಮೇಲೆ ನಂಬಿಕೆ ಇಲ್ಲ : ಶ್ರೀನಿವಾಸಗೌಡ

    ಕೋಲಾರ : ದೇವೇಗೌಡರಿಗೆ ಅವರ ಮಕ್ಕಳ ಮೇಲೆ ನಂಬಿಕೆ ಹೋಗಿದೆ ಹಾಗಾಗಿ ಸ್ವತಃ ತಾವೇ ರಾಜ್ಯದಲ್ಲಿ ಸಂಚಾರ ಮಾಡುವುದಾಗಿ ಹೇಳಿದ್ದಾರೆ ಮತ್ತು ಮೇಕೆದಾಟು ಯೋಜನೆ ಕಾಂಗ್ರೆಸ್ ಅವರದ್ದೇ ಜೆಡಿಎಸ್‍ನವರು ಏನೇನೋ ಹೇಳುತ್ತಾರೆ ಎಂದು ಜೆಡಿಎಸ್ ಹಿರಿಯ ಶಾಸಕ ಶ್ರೀನಿವಾಸಗೌಡ ಅವರು ಹೇಳಿದ್ದಾರೆ.

    ಕೋಲಾರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಎಲ್‍ಸಿ ಚುನಾವಣೆಯಲ್ಲಿ ಹಾಸನದಲ್ಲಿ ಒಂದೇ ಒಂದು ಸ್ಥಾನ ಗೆದ್ದಿರುವ ಜೆಡಿಎಸ್‍ನವರು ಮುಂದೆ ರಾಜ್ಯದಲ್ಲಿ 132 ಸ್ಥಾನ ಗೆಲ್ಲುತ್ತಾರೆ. ದೇವೇಗೌಡರಿಗೆ ಅವರ ಮಕ್ಕಳ ಮೇಲೆ ನಂಬಿಕೆ ಹೋಗಿರುವುದರಿಂದ, ದೇವೇಗೌಡರೆ ರಾಜ್ಯದಲ್ಲಿ ಸಂಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಇನ್ನು ಸಮ್ಮಿಶ್ರ ಸರ್ಕಾರ ಇದ್ದಾಗ ಕುಣಿಲಾರದೆ ನೆಲ ಡೊಂಕು ಎನ್ನುವಂತೆ ಆಡಳಿತ ಮಾಡಿದ್ದರು. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಜನ ಮನ್ನಣೆ ಹಾಕುತ್ತಾರೆ ಎಂದು ಜೆಡಿಎಸ್ ವಿರುದ್ಧ ಮಾತಿನ ಸಮರ ಸಾರಿದ್ದಾರೆ. ಇದನ್ನೂ ಓದಿ: ಸಣ್ಣ ವಯಸ್ಸಿನಿಂದಲೇ ಸೇವಾ ಮನೋಭಾವವನ್ನು ಬೆಳೆಸಬೇಕು: ಎಂ.ವೆಂಕಯ್ಯ ನಾಯ್ಡು

    ಇದೇ ವೇಳೆ ಮೇಕೆದಾಟು ವಿಚಾರ ಪಾದಯಾತ್ರೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡಿಕೆಶಿ ಅವರು ಒಳ್ಳೆಯ ಯೋಜನೆಯನ್ನು ಹಮ್ಮಿಕೊಂಡಿದ್ದು, ಮೇಕೆದಾಟು ಯೋಜನೆ ಕಾಂಗ್ರೆಸ್‍ನಿಂದಲೇ ಆಗಿರುವುದು. ಜೆಡಿಎಸ್‍ನವರು ಏನೇನೊ ಹೇಳಿಕೊಳ್ಳುತ್ತಾರೆ. ಅದಕ್ಕೆ ಹೆಚ್ಚಿನ ಆದ್ಯತೆ ಕೊಡುವ ಅಗತ್ಯವಿಲ್ಲ. ಅಲ್ಲದೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಲ್ಲಿ ಅವಕಾಶ ಸಿಕ್ಕರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ತಿಳಿಸಿದ್ದಾರೆ. ಇದನ್ನೂ ಓದಿ: ತಜ್ಞರ ವರದಿಯ ಆಧಾರದ ಮೇಲೆ ಸರ್ಕಾರ ಕ್ರಮ ತಗೆದುಕೊಳ್ಳುತ್ತೆ: ಭಗವಂತ್ ಖೂಬಾ

  • ನನಗೇನ್ ಜೆಡಿಎಸ್ ಬಾಗಿಲು ಬಂದ್ ಮಾಡೋದು? ನಾನೇ ದೇವೇಗೌಡ್ರ ಮನೆ ಬಾಗಿಲು ಕ್ಲೋಸ್ ಮಾಡಿ ಬಂದಿದ್ದೇನೆ: ಜಿಟಿಡಿ

    ನನಗೇನ್ ಜೆಡಿಎಸ್ ಬಾಗಿಲು ಬಂದ್ ಮಾಡೋದು? ನಾನೇ ದೇವೇಗೌಡ್ರ ಮನೆ ಬಾಗಿಲು ಕ್ಲೋಸ್ ಮಾಡಿ ಬಂದಿದ್ದೇನೆ: ಜಿಟಿಡಿ

    ಮೈಸೂರು: ನನಗೇನ್ ಜೆಡಿಎಸ್ ಬಾಗಿಲು ಬಂದ್ ಮಾಡೋದು..? ನಾನೇ ದೇವೇಗೌಡರ ಮನೆ ಬಾಗಿಲನ್ನು ದಡಾರಂತ ಕ್ಲೋಸ್ ಮಾಡಿಕೊಂಡು ಬಂದಿದ್ದೇನೆ ಎಂದು ಕುಮಾರಸ್ವಾಮಿಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ.

    ಮೈಸೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಬಾಗಿಲು ಹಾಕಿಕೊಂಡು ಬಂದ ನಂತರ ಅಂದಿನಿಂದ ಬಾಗಿಲು ಹಾಕಿದ್ದರೋ, ತೆಗೆದಿದ್ದಾರೋ ಎಂದು ನಾನು ನೋಡಿಲ್ಲ. ನಾನಂತು ನೋಡೋಕೆ ಹೋಗಲ್ಲ. ಈ ವಿಧಾನಪರಿಷತ್ ಚುನಾವಣೆ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಗುವುದಿಲ್ಲ. ಆದರೆ ಇಲ್ಲಿ ಕಳಂಕಗಳು ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾನು ಜೆಡಿಎಸ್‍ನಲ್ಲಿ ಇರಬೇಕಾ? ಬೇಡ್ವಾ?: ಜಿ.ಟಿ.ದೇವೆಗೌಡ

    HDD

    ಪರಿಷತ್‍ಗೆ ತಜ್ಞರು, ಬುದ್ದಿಜೀವಿಗಳು ಆರಿಸಿ ಹೋಗಬೇಕು. ಆದರೆ ಹಿನ್ನೆಲೆ ಹೇಗೆ ಇದ್ದರೂ ದುಡ್ಡೊಂದಿದ್ರೆ ಸಾಕು ಎನ್ನುವಂತಾಗಿದೆ. ಮೈಸೂರಿನಲ್ಲಿ ಮಂಜುನಾಥ ಸ್ವಾಮಿಯ ಬೆಳ್ಳಿಯ ಕಾಯಿನ್, ಜೊತೆಗೆ ಉಪ್ಪು, ಮಾರಿ ಕೂದಲು ಇಟ್ಟು ಆಣೆ ಪ್ರಮಾಣ ಮಾಡಿ ವೋಟ್ ಹಾಕಿಸಿಕೊಂಡಿದ್ದಾರೆ. ಇದನ್ನು ನೋಡಿದ್ರೆ ಪರಿಷತ್‍ನ ಪಾವಿತ್ರತೆಗೆ ಕಳಂಕ ಅಲ್ಲವೇ? ಎಂದು ಕಿಡಿಕಾರಿದರು. ಇದನ್ನೂ ಓದಿ: ಕರ್ನಾಟಕ: ಓಮಿಕ್ರಾನ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದವರಿಗೆ ಹೊಸ ಗೈಡ್‌ಲೈನ್ಸ್‌

  • ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರ್ತಾರಾ?- ದೇವೇಗೌಡ್ರು ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರ್ತಾರಾ?- ದೇವೇಗೌಡ್ರು ಹೇಳಿದ್ದೇನು?

    ಕಾರವಾರ: ಹೆಚ್‍ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರ್ ರಾಜಕಾರಣಕ್ಕೆ ಬರ್ತಾರೆ ಎಂಬ ವದಂತಿಯ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೆಗೌಡರು ಪ್ರತಿಕ್ರಿಯೆ ನೀಡಿದ್ದಾರೆ . ನಿಖಿಲ್ ಒಬ್ಬ ನಟನಾಗಿದ್ದು, ರಾಜಕಾರಣಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕುಮಾರಸ್ವಾಮಿಯವರ ಆರೋಗ್ಯ ಸರಿಯಿಲ್ಲದ ಕಾರಣ ಪಕ್ಷದ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಇಲ್ಲಿ ವಂಶ ಪಾರಂಪರ್ಯ ರಾಜಕೀಯ ನಡೆಸುವ ಉದ್ದೇಶವಿಲ್ಲ. ಕುಟುಂಬ ರಾಜಕಾರಣ ಆರೋಪ ಸರಿಯಲ್ಲವೆಂದು ತನ್ನ ಮೊಮ್ಮಗನ ನಿಲುವನ್ನು ದೇವೇಗೌಡರು ಸಮರ್ಥಿಸಿಕೊಂಡರು.

    ಸಿದ್ದರಾಮಯ್ಯನವರು ತಮ್ಮ ಬೆಂಬಲಿಗರೊಂದಿಗೆ ತೆರಳಿ ಮುಳಬಾಗಿಲ ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, ತಾನೊಬ್ಬ ನಾಸ್ತಿಕನೆಂದು ಹೇಳುತ್ತಿದ್ದವರು ಆಸ್ತಿಕರಾಗಿದ್ದಾರೆ ಎಂದು ವ್ಯಂಗವಾಡಿದರು.

    ಪಕ್ಷದಲ್ಲಿ ಕುಮಾರಸ್ವಾಮಿ ಹಾಗೂ ರೇವಣ್ಣರ ನಡುವೆ ಯಾವುದೇ ನಾಯಕತ್ವದ ಪೈಪೊಟಿ ಇಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಡಿಸೆಂಬರ್‍ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಕುರಿತು ಟಿಕೆಟ್ ಆಕಾಂಕ್ಷಿಗಳಿಗೆ ಒಂದು ತಿಂಗಳ ಗಡುವು ನೀಡಲಾಗಿದೆ ಎಂದು ತಿಳಿಸಿದರು.

  • ದೇವೇಗೌಡರ ಆತ್ಮಚರಿತ್ರೆ ಬಿಡುಗಡೆಯಾದ್ರೆ ರಾಷ್ಟ್ರೀಯ ಪಕ್ಷಗಳ ಬಣ್ಣ ಬಯಲಾಗುತ್ತೆ: ವೈಎಸ್‍ವಿ ದತ್ತಾ

    ದೇವೇಗೌಡರ ಆತ್ಮಚರಿತ್ರೆ ಬಿಡುಗಡೆಯಾದ್ರೆ ರಾಷ್ಟ್ರೀಯ ಪಕ್ಷಗಳ ಬಣ್ಣ ಬಯಲಾಗುತ್ತೆ: ವೈಎಸ್‍ವಿ ದತ್ತಾ

    ರಾಯಚೂರು: ಇದೇ ನವೆಂಬರ್ ತಿಂಗಳಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆತ್ಮಚರಿತ್ರೆ ಬಿಡುಗಡೆಯಾಗಲಿದ್ದು, ಸಾಕಷ್ಟು ಸ್ಫೋಟಕ ಮಾಹಿತಿಗಳು ಬೆಳಕಿಗೆ ಬರಲಿವೆ ಎಂದು ಜೆಡಿಎಸ್ ವಕ್ತಾರ ವೈಎಸ್‍ವಿ ದತ್ತಾ ಹೇಳಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ದತ್ತಾ, ಗೌಡರ ಆತ್ಮಚರಿತ್ರೆ ತಾವೇ ಬರೆಯುತ್ತಿದ್ದು ಅನೇಕ ರಾಜಕಾರಣಿಗಳ ವಾಸ್ತವ ಚಿತ್ರಣಗಳು ಬಯಲಾಗಲಿವೆ. ಎಲ್ಲಾ ರಾಷ್ಟ್ರೀಯ ಪಕ್ಷಗಳ ಬಣ್ಣಬಯಲಾಗಲಿದೆ. ಆಡಿಯೋ ರೂಪದಲ್ಲೂ ಆತ್ಮಚರಿತ್ರೆ ಹೊರತರುತ್ತಿದ್ದು, ಅಕ್ಟೋಬರ್ 11 ರಿಂದ ಒಂದೊಂದೆ ಸಂಗತಿಗಳ ಟ್ರೇಲರ್ ಬಿಡುಗಡೆ ಮಾಡಲಾಗುವುದು ಎಂದರು.

    ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಥರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ. ತಮ್ಮ ಮೂಗಿನ ನೇರಕ್ಕೆ ಸಮೀಕ್ಷೆಗಳನ್ನ ಮಾಡಿಸುತ್ತಿವೆ. ಆದ್ರೆ ಜನ ಪ್ರಾದೇಶಿಕ ಪಕ್ಷವನ್ನ ಅಧಿಕಾರಕ್ಕೆ ತರುವ ನಿರ್ಧಾರ ಮಾಡಿದ್ದಾರೆ ಎಂದರು. ಎಚ್.ಡಿ.ಕುಮಾರಸ್ವಾಮಿಯವರು ಗುಣಮುಖರಾದ ಮೇಲೆ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇನ್ನೂ ನಾಲ್ಕು ತಿಂಗಳಲ್ಲಿ ಜನಾಭಿಪ್ರಾಯ ಬೆಳಕಿಗೆ ಬರಲಿದೆ ಎಂದರು.

    ಕಾಂಗ್ರೆಸ್ ಸರ್ಕಾರ ಕೇವಲ ಪ್ರಚಾರ ಪಡೆಯುತ್ತಿದೆ. ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಲ್ಲಿ ಸೋತಿದೆ ಅಂತ ಆರೋಪಿಸಿದರು. ಮೌಢ್ಯ ನಿಷೇಧ ಕಾಯಿದೆ ಜಾರಿಗೆ ತಮ್ಮ ಸಹಮತವಿದ್ದು, ಎಲ್ಲಾ ಧರ್ಮಗಳಿಗೂ ಅನ್ವಯವಾಗುವಂತ ಕಾಯಿದೆ ಜಾರಿ ಮಾಡಬೇಕು ಎಂದು ದತ್ತಾ ಹೇಳಿದರು.