Tag: ದೇವೇಂದ್ರ ಫಡ್ನವಿಸ್

  • ಡಿ.14ರಂದು ʻಮಹಾʼ ಸಂಪುಟ ವಿಸ್ತರಣೆ – ಪ್ರಧಾನಿ ಮೋದಿ ಭೇಟಿಯಾದ ಸಿಎಂ ಫಡ್ನವಿಸ್‌

    ಡಿ.14ರಂದು ʻಮಹಾʼ ಸಂಪುಟ ವಿಸ್ತರಣೆ – ಪ್ರಧಾನಿ ಮೋದಿ ಭೇಟಿಯಾದ ಸಿಎಂ ಫಡ್ನವಿಸ್‌

    ಮುಂಬೈ: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ (Maharashtra Cabinet Formation) ಖಾತೆ ಹಂಚಿಕೆ ಕುರಿತ ಸಸ್ಪೆನ್ಸ್‌ಗೆ ಡಿ.14ರಂದು ತೆರೆ ಬೀಳಲಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಡಿಸೆಂಬರ್‌ 14ರಂದು ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಖಚಿತಪಡಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಫಡ್ನವಿಸ್ (Devendra Fadnavis )ಅವರು ಬುಧವಾರ ತಡರಾತ್ರಿ ದೆಹಲಿಗೆ ತೆರಳಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮುಖ್ಯಸ್ಥ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ. ಬಳಿಕ ಇದೊಂದು ಸೌಜನ್ಯದ ಭೇಟಿ ಎಂದು ತಿಳಿಸಿದ್ದಾರೆ.

    ಹಿಂದಿನ ಸರ್ಕಾರದಲ್ಲಿ ಸಿಎಂ ಆಗಿದ್ದ ಏಕನಾಥ್‌ ಶಿಂಧೆ (Eknath Shinde) ಈ ಬಾರಿ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಗೃಹ ಖಾತೆಯ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಆದ್ರೆ ಮೂರು ಮಿತ್ರಪಕ್ಷಗಳ ಪೈಕಿ ಅತಿ ದೊಡ್ಡ ಪಕ್ಷವಾದ ಬಿಜೆಪಿ ಗೃಹ ಸಚಿವಾಲಯ ಖಾತೆಯಯನ್ನು ಉಳಿಸಿಕೊಳ್ಳಲಿದ್ದು, ಪಿಡಬ್ಲ್ಯುಡಿ (ಲೋಕೋಪಯೋಗಿ ಇಲಾಖೆ) ಮತ್ತು ಯುಡಿ (ನಗರಾಭಿವೃದ್ಧಿ) ಶಿಂಧೆ ಪಾಳೆಯಕ್ಕೆ ನೀಡುವ ಸಾಧ್ಯತೆಯಿದೆ. ಹಣಕಾಸು ಖಾತೆ ಅಜಿತ್ ಪವಾರ್ ಪಕ್ಷದ ಪಾಲಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ಹೊಸ ಸೂತ್ರಕ್ಕೆ ಒಪ್ಪಿಗೆ:
    ಮೂಲಗಳ ಪ್ರಕಾರ, ಮಹಾಯುತಿಯ ಮೂವರು ನಾಯಕರಾದ ಫಡ್ನವಿಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಖಾತೆ ಹಂಚಿಕೆಯ ಹೊಸ ಸೂತ್ರಕ್ಕೆ ಒಪ್ಪಿಗೆ ನೀಡಿದ್ದಾರೆ. ಅದರಂತೆ ಬಿಜೆಪಿ 20 ಇಲಾಖೆಗಳನ್ನು ಹೊಂದಿರುತ್ತದೆ, ಶಿವಸೇನೆ ಮತ್ತು ಎನ್‌ಸಿಪಿ ತಲಾ 10 ಖಾತೆಗಳನ್ನು ಹೊಂದಿರಲಿವೆ. ಇತ್ತ ಬಿಜೆಪಿ ಮತ್ತು ಎನ್‌ಸಿಪಿ ಹಾಲಿ ಸಚಿವರಿಗೆ ಸಚಿವ ಸ್ಥಾನ ನೀಡುವ ಪ್ಲ್ಯಾನ್‌ ಮಾಡಿದ್ದರೆ, ಶಿಂಧೆ ಬಣದ ಶಿವ ಸೇನೆ ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

    ಕಳೆದ ತಿಂಗಳು ನಡೆದ ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ನಡೆಸ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಗೆಲುವು ಸಾಧಿಸಿತ್ತು. ಬಿಜೆಪಿ 132 ಸ್ಥಾನಗಳನ್ನು ಗೆದ್ದರೆ, ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದುಕೊಂಡಿತು. ಇದೇ ಡಿಸೆಂಬರ್ 5 ರಂದು ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

  • ಮಹಾರಾಷ್ಟ್ರದಲ್ಲಿ ಫಡ್ನವಿಸ್‌ ರಾಜ್ಯಭಾರ ಶುರು – ಡಿಸಿಎಂಗಳಾಗಿ ಶಿಂಧೆ, ಪವಾರ್ ಪದಗ್ರಹಣ

    ಮಹಾರಾಷ್ಟ್ರದಲ್ಲಿ ಫಡ್ನವಿಸ್‌ ರಾಜ್ಯಭಾರ ಶುರು – ಡಿಸಿಎಂಗಳಾಗಿ ಶಿಂಧೆ, ಪವಾರ್ ಪದಗ್ರಹಣ

    – ಅದ್ಧೂರಿ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ

    ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಮಹಾಯುತಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 3ನೇ ಬಾರಿಗೆ ಬಿಜೆಪಿಯ ದೇವೇಂದ್ರ ಫಡ್ನವಿಸ್‌ (Devendra Fadnavis) ರಾಜ್ಯಭಾರ ಶುರುವಾಗಿದೆ. ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌, ಉಪಮುಖ್ಯಮಂತ್ರಿಗಳಾಗಿ ಏಕನಾಥ್‌ ಶಿಂಧೆ (Eknath Shinde) ಮತ್ತು ಅಜಿತ್ ಪವಾರ್ (Ajit Pawar) ಪ್ರಮಾಣ ವಚನ ಸ್ವೀಕರಿಸಿದರು.

    ಮೂವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ರು. ಈ ಕ್ಷಣಕ್ಕೆ ಅಮಿತ್ ಶಾ, ರಾಜನಾಥ್ ಸಿಂಗ್, ಜೆಪಿ ನಡ್ಡಾ, ನಿರ್ಮಲಾ ಸೀತಾರಾಮನ್, ಹೆಚ್‌.ಡಿ ಕುಮಾರಸ್ವಾಮಿ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಚಂದ್ರಬಾಬು ನಾಯ್ಡು ಸೇರಿ 19 ರಾಜ್ಯಗಳ ಸಿಎಂಗಳು ಸಾಕ್ಷಿಯಾದ್ರು.

    ಅವರಷ್ಟೇ ಅಲ್ಲ, ಬಾಲಿವುಡ್, ಕ್ರಿಕೆಟ್ ಲೋಕದ ಸೆಲೆಬ್ರಿಟಿಗಳು, ಉದ್ಯಮಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದ್ರು. 40 ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ರು. ಸದ್ಯಕ್ಕೆ ಇಂದು ಮೂವರಷ್ಟೇ ಪ್ರಮಾಣ ವಚನ ಸ್ವೀಕರಿಸಿದ್ದು, ಶೀಘ್ರವೇ ಪೂರ್ಣ ಪ್ರಮಾಣದ ಮಂತ್ರಿ ಮಂಡಲ ಅಸ್ತಿತ್ವಕ್ಕೆ ಬರಲಿದೆ. ನಂತರ ಖಾತೆಗಳ ಹಂಚಿಕೆ ಆಗಲಿದೆ.

  • ಮಹಾರಾಷ್ಟ್ರಕ್ಕೆ ಫಡ್ನವಿಸ್‌ ಸಿಎಂ, ಪವಾರ್‌ ಡಿಸಿಎಂ – ಇಂದೇ ಅಧಿಕೃತ ಪ್ರಕಟ ಸಾಧ್ಯತೆ

    ಮಹಾರಾಷ್ಟ್ರಕ್ಕೆ ಫಡ್ನವಿಸ್‌ ಸಿಎಂ, ಪವಾರ್‌ ಡಿಸಿಎಂ – ಇಂದೇ ಅಧಿಕೃತ ಪ್ರಕಟ ಸಾಧ್ಯತೆ

    – ಗೃಹ, ನಗರಾಭಿವೃದ್ಧಿ ಇಲಾಖೆಗಳಿಗೆ ಶಿಂಧೆ ಡಿಮ್ಯಾಂಡ್‌

    ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್‌ (Devendra Fadnavis) ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ (Ajit Pawar) ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್‌ ಶಿಂಧೆ ಅವರು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಎಲ್ಲವೂ ಅಂದುಕೊಂಡಂತೆ ನಡೆದರೆ, ಪ್ರಧಾನಿ ಮೋದಿ, ಅಮಿತ್‌ ಶಾ ನೇತೃತ್ವದಲ್ಲಿ ಇಂದೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಹೆಸರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 4ನೇ ಬಾರಿ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ – INDIA ನಾಯಕರು ಭಾಗಿ

    ಗುರುವಾರ ರಾತ್ರಿ ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ ನಡೆಯಿತು. ಮಹಾರಾಷ್ಟ್ರದ ನಿಯೋಜಿತ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ (Eknath Shinde), ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಅಜಿತ್ ಪವಾರ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಗೂ ಮುನ್ನ ಏಕನಾಥ್‌ ಶಿಂಧೆ ಅವರು ಕೃಷ್ಣ ಮೆನನ್ ಮಾರ್ಗದಲ್ಲಿರುವ ನಿವಾಸದಲ್ಲಿ ಅಮಿತ್‌ ಶಾ (Amit Shah) ಅವರನ್ನ ಭೇಟಿಯಾದರು. ನಂತರ ಫಡ್ನವಿಸ್‌, ಅಜಿತ್‌ ಪವಾರ್‌ ಚರ್ಚೆಯಲ್ಲಿ ಪಾಲ್ಗೊಂಡರು. ಮುಂಬೈನಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಆರ್ಥಿಕ ಸಮಸ್ಯೆಯಿಂದ 40,000ಕ್ಕೆ 4 ವರ್ಷದ ಹೆಣ್ಣುಮಗು ಮಾರಾಟ – ಪೋಷಕರು ಸೇರಿ 6 ಮಂದಿ ಅರೆಸ್ಟ್‌

    20 ಖಾತೆ ಉಳಿಸಿಕೊಳ್ಳಲು ಬಿಜೆಪಿ ಪ್ಲ್ಯಾನ್‌:
    ಮಹಾರಾಷ್ಟ್ರ ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳನ್ನು ಪಡೆದಿರುವ ಬಿಜೆಪಿ ಸುಮಾರು 20 ಸಚಿವ ಸ್ಥಾನಗಳನ್ನು ತನ್ನಲ್ಲೇ ಉಳಿಸಿಕೊಳ್ಳುವ ಪ್ಲ್ಯಾನ್‌ ಮಾಡಿದೆ. ನಂತರದ ಸ್ಥಾನಗಳನ್ನು ಶಿವಸೇನೆ (ಶಿಂಧೆ ಬಣ) ಮತ್ತು ಎನ್‌ಸಿಪಿಗೆ ನೀಡುವ ನಿರೀಕ್ಷೆಯಿದೆ. ಸದ್ಯಕ್ಕೆ ಖಾತೆಗಳ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲವಾದರೂ ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಮನವಿ ಮಾಡಿದ್ದಾರೆ. ಇಂದು ಹೆಚ್ಚಿನ ಚರ್ಚೆಗಾಗಿ ದೆಹಲಿಯಲ್ಲೇ ಉಳಿಯುವ ನಿರೀಕ್ಷೆಯಿದೆ, ಆದರೆ ಫಡ್ನವಿಸ್ ಮತ್ತು ಅಜಿತ್ ಪವಾರ್ ಮುಂಬೈಗೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಬುಧವಾರ ಮಾಧಮಗಳೊಂದಿಗೆ ಮಾತನಾಡಿದ್ದ ಶಿಂಧೆ ಮಹಾಯುತಿ ಸರ್ಕಾರ ರಚನೆಗೆ ತಾನು ಅಡ್ಡಿಯಾಗುವುದಿಲ್ಲ ಮತ್ತು ಮುಖ್ಯಮಂತ್ರಿ ಆಯ್ಕೆಯ ಕುರಿತು ಬಿಜೆಪಿಯ ನಿರ್ಧಾರ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದರು.

    ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಕೂಟವು 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿದೆ. ಇದನ್ನೂ ಓದಿ: ಬಿಜೆಪಿಗೆ ಸಿಎಂ ಪಟ್ಟ ಕೊಟ್ಟ ಶಿಂಧೆ – ಫಡ್ನಾವೀಸ್‌ ಮುಂದಿನ ಮುಖ್ಯಮಂತ್ರಿ?

  • ನಾಳೆ ಮಹಾರಾಷ್ಟ್ರ ಬಿಜೆಪಿ, ಶಿವಸೇನೆ, ಎನ್‌ಸಿಪಿ ಮುಖಂಡರಿಂದ ದೆಹಲಿಯಲ್ಲಿ ಅಮಿತ್ ಶಾ ಭೇಟಿ

    ನಾಳೆ ಮಹಾರಾಷ್ಟ್ರ ಬಿಜೆಪಿ, ಶಿವಸೇನೆ, ಎನ್‌ಸಿಪಿ ಮುಖಂಡರಿಂದ ದೆಹಲಿಯಲ್ಲಿ ಅಮಿತ್ ಶಾ ಭೇಟಿ

    ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲು ಮಹಾಯುತಿ ಮೈತ್ರಿಕೂಟದ ಮೂವರು ಉನ್ನತ ನಾಯಕರು ನಾಳೆ ದೆಹಲಿಯಲ್ಲಿ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.

    ಬಿಜೆಪಿಯ ದೇವೇಂದ್ರ ಫಡ್ನವೀಸ್, ಎನ್‌ಸಿಪಿಯ ಅಜಿತ್ ಪವಾರ್ ಮತ್ತು ಶಿವಸೇನೆಯ ಏಕನಾಥ್ ಶಿಂಧೆ ಸಿಎಂ ರೇಸ್‌ನಲ್ಲಿದ್ದಾರೆ.

    ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಐತಿಹಾಸಿಕ ಸಾಧನೆಯಲ್ಲಿ ಮಹಾಯುತಿ ಮೈತ್ರಿಕೂಟವು 288 ವಿಧಾನಸಭಾ ಸ್ಥಾನಗಳ ಪೈಕಿ 235ರಲ್ಲಿ ಗೆದ್ದುಕೊಂಡಿದೆ. ಬಿಜೆಪಿ ಮಾತ್ರ 132 ಸ್ಥಾನಗಳನ್ನು ಗೆದ್ದಿದೆ. ಶಿವಸೇನೆ 57 ಮತ್ತು ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿವೆ.

    ಮೂವರು ನಾಯಕರ ಬೆಂಬಲಿಗರು ಮಹಾರಾಷ್ಟ್ರದ ಸಿಎಂ ಸ್ಥಾನಕ್ಕೆ ತಮ್ಮ ನಾಯಕರನ್ನು ಪರಿಪೂರ್ಣ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ.

    ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಮಿತ್ರಪಕ್ಷವಾದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ (ಅಠವಳೆ) ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು, ಮುಂದಿನ ಮುಖ್ಯಮಂತ್ರಿಯಾಗಿ ರಾಜ್ಯ ಮೈತ್ರಿಕೂಟದ ನೇತೃತ್ವ ವಹಿಸಲು ಫಡ್ನವಿಸ್ ಅವರನ್ನು ಬೆಂಬಲಿಸಿದ್ದಾರೆ. ಅಠವಳೆ ಅವರು ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವುದನ್ನು ಉಲ್ಲೇಖಿಸಿದ್ದಾರೆ.

    ಬಿಜೆಪಿ ಹೈಕಮಾಂಡ್ ದೇವೇಂದ್ರ ಫಡ್ನವಿಸ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಅಂತಿಮಗೊಳಿಸಿದೆ ಎಂದಾಗ, ಏಕನಾಥ್ ಶಿಂಧೆ ಸ್ವಲ್ಪ ಅಸಮಾಧಾನಗೊಂಡಿದ್ದರು. ಇದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ಬಿಜೆಪಿ 132 ಸ್ಥಾನಗಳನ್ನು ಗೆದ್ದಿದೆ. ಆದ್ದರಿಂದ ಅವರು ದಾರಿ ಮಾಡಿಕೊಡಬೇಕು. ಶಿಂಧೆ ಕೇಂದ್ರ ಸಚಿವರನ್ನಾಗಿ ಮಾಡಬೇಕು ಎಂದು ಅಠವಳೆ ಅಭಿಪ್ರಾಯಪಟ್ಟಿದ್ದಾರೆ.

  • ಯಾರಾಗ್ತಾರೆ ʻಮಹಾʼ ಸಾರಥಿ? – ಇಂದು ಮೂರು ಕಡೆ ಪ್ರತ್ಯೇಕ ಸಭೆ, ನಾಳೆಯೇ ಸಿಎಂ ಆಯ್ಕೆ?

    ಯಾರಾಗ್ತಾರೆ ʻಮಹಾʼ ಸಾರಥಿ? – ಇಂದು ಮೂರು ಕಡೆ ಪ್ರತ್ಯೇಕ ಸಭೆ, ನಾಳೆಯೇ ಸಿಎಂ ಆಯ್ಕೆ?

    – ನ.26ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ?

    ಮುಂಬೈ: ಮಹಾರಾಷ್ಟ್ರದ (Maharashtra) 288 ಕ್ಷೇತ್ರಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಭಾರಿ ಬಹುಮತದೊಂದಿಗೆ ಐತಿಹಾಸಿಕ ಗೆಲುವು ಸಾಧಿಸಿದೆ. ಕಳೆದ 50 ವರ್ಷಗಳಲ್ಲಿ ಚುನಾವಣಾ ಪೂರ್ವ ಮೈತ್ರಿ ಇದೇ ಮೊದಲ ಬಾರಿ ಇಂತಹ ಅಭೂತಪೂರ್ವ ಗೆಲುವು ಸಾಧಿಸಿದೆ ಎಂದು ಪ್ರಧಾನಿ ಮೋದಿ (PM Modi) ಬಣ್ಣಿಸಿದ್ದಾರೆ. ಇದೀಗ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಕುತೂಹಲ ಹೆಚ್ಚಿಸಿದೆ. ಜೊತೆಗೆ ಪ್ರಬಲ ಖಾತೆಗಳ ಹಂಚಿಕೆ ಯಾರ ತೆಕ್ಕೆಗೆ ಬೀಳಲಿದೆ ಎಂಬ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

    ಈ ಬೆಳವಣಿಗೆಯ ನಡುವೆ ಮಹಾಯುತಿ (Mahayuti) ಮೈತ್ರಿ ಕೂಟದ ಪಕ್ಷಗಳು ಇಂದು (ಭಾನುವಾರ) ಪ್ರತ್ಯೇಕವಾಗಿ ಉನ್ನತ ಮಟ್ಟದ ಸಭೆಗಳನ್ನ ಕರೆದಿದೆ. ಮೈತ್ರಿಕೂಟದ ಎಲ್ಲ ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಿಎಂ ಹುದ್ದೆ ಸೇರಿದಂತೆ ಸಂಪುಟದ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

    ಮುಂಬೈನಲ್ಲಿರುವ ದೇವೇಂದ್ರ ಫಡ್ನವೀಸ್ ಅವರ ಅಧಿಕೃತ ನಿವಾಸದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಇತ್ತ ಏಕನಾಥ್ ಶಿಂಧೆ ಅವರು ಬಾಂದ್ರಾದಲ್ಲಿರುವ ಹೋಟೆಲ್‌ನಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲಾ ಶಾಸಕರೊಂದಿಗೆ ಸಭೆ ಕರೆದಿದ್ದಾರೆ. ಏತನ್ಮಧ್ಯೆ, ಎನ್‌ಸಿಪಿ ಅಜಿತ್ ಪವಾರ್ ಬಣವು ಮುಂಬೈನ ಅವರ ಅಧಿಕೃತ ನಿವಾಸ ದೇವಗಿರಿ ಬಂಗಲೆಯಲ್ಲಿ ಸಭೆ ನಡೆಸುತ್ತಿದೆ. ಇಂದು ಪ್ರತ್ಯೇಕ ಸಭೆ ನಡೆಸಿದ ಬಳಿಕ ಸೋಮವಾರ (ನ.25) ಮಹಾಯುತಿಯ ಎಲ್ಲ ಶಾಸಕರು ಒಟ್ಟಾಗಿ ಸಭೆ ಸೇರಲಿದ್ದಾರೆ. ಅಲ್ಲಿಯೇ ಮುಂದಿನ ಸಿಎಂ ಯಾರು ಎಂಬುದು ನಿರ್ಧಾರವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    288 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ 233 ಸ್ಥಾನ ಗೆದ್ದು ಅಧಿಕಾರದ ಗದ್ದುಗೆ ಏರಿದೆ. ಆದ್ರೆ ಘಟಾನುಘಟಿ ನಾಯಕರುಳ್ಳ ಮಹಾ ವಿಕಾಸ್‌ ಅಘಾಡಿ ಕೇವಲ 49 ಸ್ಥಾನ ಗೆದ್ದು, ಮುಖಭಂಗ ಅನುಭವಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? – ದೇವೇಂದ್ರ ಫಡ್ನವಿಸ್‌ ಹೇಳಿದ್ದೇನು?

    ಫಡ್ನವಿಸ್‌ ಆಗ್ತಾರಾ ಸಿಎಂ?
    ಈಗಾಗಲೇ ಸಿಎಂ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲರ ಜೊತೆ ಸಮಾಲೋಚನೆ ನಡೆಸಿದ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಅಮಿತ್‌ ಶಾ ಮೈತ್ರಿಕೂಟದ ನಾಯಕರಿಗೆ ತಿಳಿಸಿದ್ದಾರೆಂದು ಫಡ್ನವಿಸ್‌ ಮಾಹಿತಿ ನೀಡಿದ್ದಾರೆ.

    2022 ರಲ್ಲಿ 40 ಶಾಸಕರೊಂದಿಗೆ ಏಕನಾಥ್‌ ಶಿಂಧೆ ಅವರು ಬಿಜೆಪಿ ಮನೆ ಬಾಗಿಲಿಗೆ ಹೋದರು. ಶಿವಸೇನೆಯ ವಿಭಜನೆಯಿಂದಾಗಿ ಪಕ್ಷದ ಮುಖ್ಯಸ್ಥ ಉದ್ಧವ್‌ ಠಾಕ್ರೆ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಪರಿಣಾಮ ಎಂವಿಎ ಸರ್ಕಾರ ಪತನಗೊಂಡಿತು. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

    ಮುಂದೆ ಬಿಜೆಪಿ ನೇತೃತ್ವದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರಲು ವೇದಿಕೆ ಸಜ್ಜಾಯಿತು. ಆಗ ಪಕ್ಷದಲ್ಲಿ ಅನುಭವಿ ವ್ಯಕ್ತಿಯಿದ್ದರೂ ಬಿಜೆಪಿ ಅಚ್ಚರಿ ಎಂಬಂತೆ ಏಕನಾಥ್‌ ಶಿಂಧೆ ಅವರನ್ನೇ ಮಹಾರಾಷ್ಟ್ರ ಸಿಎಂ ಮಾಡಿತು. ಇದರ ನಡುವೆ ಎನ್‌ಸಿಪಿ ಕೂಡ ಇಬ್ಭಾಗವಾಗಿ ಅಜಿತ್‌ ಪವಾರ್‌ ಬಣ ಬಿಜೆಪಿ ಜೊತೆ ಕೈಜೋಡಿಸಿತು.

    ಬಿಜೆಪಿ ಪ್ರಚಾರದ ನೇತೃತ್ವ ವಹಿಸಿದ್ದ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ. ಪ್ರಬಲ ಮರಾಠ ನಾಯಕನಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡ ಏಕನಾಥ್ ಶಿಂಧೆ ಮತ್ತು 81 ಪ್ರತಿಶತದಷ್ಟು ಪ್ರಭಾವಶಾಲಿ ಸ್ಟ್ರೈಕ್ ರೇಟ್ ಸಾಧಿಸಿದ ಅವರು ಉನ್ನತ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.

    ನ.26ರಂದು ಪ್ರಮಾಣ ವಚನ ಸ್ವೀಕಾರ:
    ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ನವೆಂಬರ್‌ 26ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದೇವೇಂದ್ರ ಫಡ್ನವಿಸ್‌ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

  • ಸಾಮಾನ್ಯರನ್ನ ಸೂಪರ್‌ ಮ್ಯಾನ್‌ಗಳಾಗಿ ಪರಿವರ್ತಿಸುತ್ತೇವೆ – ಶಿಂಧೆ ಪ್ರತಿಜ್ಞೆ

    ಸಾಮಾನ್ಯರನ್ನ ಸೂಪರ್‌ ಮ್ಯಾನ್‌ಗಳಾಗಿ ಪರಿವರ್ತಿಸುತ್ತೇವೆ – ಶಿಂಧೆ ಪ್ರತಿಜ್ಞೆ

    – ಲಡ್ಕಿ ಬಹಿನ್ ಯೋಜನೆ ಮಹಾರಾಷ್ಟ್ರದ ಗೇಮ್ ಚೇಂಜರ್ ಎಂದ ಪವಾರ್‌
    – ನಾನು ಆಧುನಿಕ ಅಭಿಮನ್ಯು – ಚಕ್ರವ್ಯೂಹ ಭೇದಿಸುವುದು ಗೊತ್ತು: ಫಡ್ನವಿಸ್‌

    ಮುಂಬೈ: ಮುಂದಿನ 5 ವರ್ಷವೂ ಮಹಾರಾಷ್ಟ್ರ (Maharashtra) ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದ್ದೇವೆ. ಸಾಮಾನ್ಯರನ್ನು ಸೂಪರ್‌ ಮ್ಯಾನ್‌ಗಳಾಗಿ ಪರಿವರ್ತಿಸುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Eknath Shinde) ಪ್ರತಿಜ್ಞೆ ಮಾಡಿದ್ದಾರೆ.

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ (Maharashtra Election Results) ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಗಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ +236, ಎಂವಿಎ +48, ಇತರೆ +4 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

    ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಲಿ ಸಿಎಂ ಏಕನಾಥ್‌ ಶಿಂಧೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಬಳಿಕ ಸಿಎಂ ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ಬಣದ ಅಜಿತ್ ಪವಾರ್ (Ajit Pawar) ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇದನ್ನೂ ಓದಿ: 14 ರಾಜ್ಯಗಳ 48 ಕ್ಷೇತ್ರಗಳಿಗೆ ಉಪಚುನಾವಣೆ – 23 ಕ್ಷೇತ್ರಗಳಲ್ಲಿ ಎನ್‌ಡಿಎ ಕಮಾಲ್

    ನಾವು ಟೀಕೆಗಳಿಗೆ ಕೆಲಸ ಮೂಲಕ ಉತ್ತರ ಕೊಟ್ಟಿದ್ದೇವೆ, ಇದು ಜನ ಮೆಚ್ಚುಗೆ ಪಡೆದಿದೆ. ನಾವೆಲ್ಲ ಜನರೊಂದಿಗೆ ಕೆಲಸ ಮಾಡುವವರು, ಹಾಗೆಯೇ ಮಾಡಿದ್ದೇವೆ. ಮನೆಯಲ್ಲಿದ್ದುಕೊಂಡು ಸರ್ಕಾರ ನಡೆಸಲು ಸಾಧ್ಯವಿಲ್ಲ. ನೀವು ಜನರ ಬಳಿ ಹೋಗಿದ್ದರೆ ಹೀಗಾಗುತ್ತಿರಲಿಲ್ಲ ಎಂದು ವಿಪಕ್ಷಗಳಿಗೆ ಕುಟುಕಿದ್ದಾರೆ.

    ನಾವು ಬಾಳಾಸಾಹೇಬ್ ಠಾಕ್ರೆಯವರ ಆದರ್ಶಗಳನ್ನ ಮುಂದುವರಿಸುತ್ತೇವೆ, ಹೊಸ ಸರ್ಕಾರ ರಚನೆ ಮಾಡುತ್ತೇವೆ. 2019ರಲ್ಲೇ ಈ ರೀತಿಯ ಸರ್ಕಾರ ರಚನೆ ಆಗಬೇಕಿತ್ತು. ಆದ್ರೆ ಆಗಲಿಲ್ಲ, ಜನ ಕೂಡ ಹಳೆಯದ್ದನ್ನು ಮರೆತಿಲ್ಲ ಎಂದು ಶಿಂಧೆ ಹೇಳಿದ್ದಾರೆ. ಇದನ್ನೂ ಓದಿ: ಜಾರ್ಖಂಡ್, ವಯನಾಡಲ್ಲಿ ಕಾಂಗ್ರೆಸ್ ಗೆಲುವಿಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

    ಮುಂದುವರಿದು, ನಮ್ಮ ಸರ್ಕಾರ ಶ್ರೀಸಾಮಾನ್ಯರ ಸರ್ಕಾರವಾಗಿದೆ. ಪ್ರಧಾನಿ ಮೋದಿ ಅವರ ಅತ್ಯುತ್ತಮ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಮಹಿಳೆಯರು, ಮಕ್ಕಳು ಮತ್ತು ರೈತರು ನಮಗೆ ಕೇಂದ್ರ ಬಿಂದುವಾಗಿದ್ದರು. ನಾವು ಕಾಮನ್ ಮ್ಯಾನ್​ ಅನ್ನು ಸೂಪರ್​ಮ್ಯಾನ್​ಗಳಾಗಿ ಪರಿವರ್ತಿಸಲು ಬಯಸುತ್ತೇವೆ ಎಂದಿದ್ದಾರೆ.

    ಥಾಣೆ ಜಿಲ್ಲೆಯ ಕೊಪ್ರಿ-ಪಚ್ಚಖಾಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಿಂಧೆ 1,20,717 ಮತಗಳ ಅಂತರದಿಂದ ಶಿವಸೇನಾ (ಯುಬಿಟಿ) ಅಭ್ಯರ್ಥಿ ಕೇದಾರ್ ದಿಘೆ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

    ನಾನು ಆಧುನಿಕ ಅಭಿಮನ್ಯು; ಚಕ್ರವ್ಯೂಹ ಭೇದಿಸುವುದು ಗೊತ್ತು:
    ಮತ್ತೊಂದೆಡೆ ಮಹಾಯುತಿ ವಿಜಯದ ಸಂತೋಷ ಹಂಚಿಕೊಂಡಿರುವ ಬಿಜೆಪಿಯ ದೇವೇಂದ್ರ ಫಡ್ನವಿಸ್‌, ತಮ್ಮನ್ನು ಆಧುನಿಕ ಅಭಿಮನ್ಯುಗೆ ಹೋಲಿಸಿಕೊಂಡಿದ್ದಾರೆ. ʻಚಕ್ರವ್ಯೂಹ ಭೇದಿಸುವುದು ನನಗೆ ಚೆನ್ನಾಗಿ ತಿಳಿದಿದೆ, ನಾನು ಆಧುನಿಕ ಅಭಿಮನ್ಯು ಎಂದು ನಾನು ಮೊದಲೇ ಹೇಳಿದ್ದೆ. ಈ ಗೆಲುವಿನಲ್ಲಿ ನನ್ನ ಕೊಡುಗೆ ಚಿಕ್ಕದಾಗಿದೆ, ಇದು ನಮ್ಮ ತಂಡದ ಗೆಲುವು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

    ಮುಂದುವರಿದು, ನಕಲಿ ನಿರೂಪಣೆಯನ್ನು ಪ್ರಚಾರ ಮಾಡುವ ವಿರೋಧ ಪಕ್ಷದವರ ಪ್ರಯತ್ನಗಳು ಮತ್ತು ಧರ್ಮದ ಆಧಾರದ ಮೇಲೆ ಮತದಾರರ ಧ್ರುವೀಕರಣವನ್ನು ಜನಸಾಮಾನ್ಯರು ವಿಫಲಗೊಳಿಸಿದ್ದಾರೆ ಎಂದು ನುಡಿದಿದ್ದಾರೆ.

    ಲಡ್ಕಿ ಬಹಿನ್ ಯೋಜನೆ ಮಹಾರಾಷ್ಟ್ರದ ಗೇಮ್ ಚೇಂಜರ್:
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಲಡ್ಕಿ ಬಹಿನ್ ಯೋಜನೆ ಮಹಾರಾಷ್ಟ್ರದ ಗೇಮ್‌ ಚೇಂಜರ್‌. ಇದು ನಮ್ಮ ವಿರೋಧಿಗಳನ್ನು ಸೋಲಿಸಿದೆ. ಈ ಗೆಲುವು ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಮುಂದಿನ 5 ವರ್ಷಗಳ ವರೆಗೂ ಮಹಾರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮಹಾಯುತಿ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ.

  • ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? – ದೇವೇಂದ್ರ ಫಡ್ನವಿಸ್‌ ಹೇಳಿದ್ದೇನು?

    ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? – ದೇವೇಂದ್ರ ಫಡ್ನವಿಸ್‌ ಹೇಳಿದ್ದೇನು?

    ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಭಾರಿ ಬಹುಮತದೊಂದಿಗೆ ಜಯ ಸಾಧಿಸಿದೆ. ಈ ಹೊತ್ತಿನಲ್ಲಿ ಮಹಾರಾಷ್ಟ್ರ ಸಿಎಂ ಯಾರು ಎಂಬ ಬಗ್ಗೆಯೂ ಚರ್ಚೆ ಜೋರಾಗಿದೆ. ಏಕನಾಥ್ ಶಿಂಧೆ ನಂತರ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದರ ಮೇಲೆ ಗಮನ ಕೇಂದ್ರೀಕೃತವಾಗಿದೆ.

    ಎರಡು ಬಾರಿ ರಾಜ್ಯದ ಸಿಎಂ ಆಗಿದ್ದ ಬಿಜೆಪಿಯ ದೇವೇಂದ್ರ ಫಡ್ನವಿಸ್‌ ಅವರು ಮುಂದಿನ ಸಿಎಂ ಯಾರಾಗ್ತಾರೆ ಎಂಬ ಬಗ್ಗೆ ಒಂದಷ್ಟು ಒಳನೋಟ ನೀಡಿದ್ದಾರೆ. ಈಗಾಗಲೇ ಸಿಎಂ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲರ ಜೊತೆ ಸಮಾಲೋಚನೆ ನಡೆಸಿದ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಅಮಿತ್‌ ಶಾ ಅವರು ಮೈತ್ರಿಕೂಟದ ನಾಯಕರಿಗೆ ತಿಳಿಸಿದ್ದಾರೆಂದು ಫಡ್ನವಿಸ್‌ ಮಾಹಿತಿ ನೀಡಿದ್ದಾರೆ.

    ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಬಗ್ಗೆ ಯಾವುದೇ ವಿವಾದವಿಲ್ಲ. ಚುನಾವಣೆಯ ನಂತರ ಮೂರೂ ಪಕ್ಷಗಳ ನಾಯಕರು ಒಟ್ಟಾಗಿ ಕುಳಿತು ಈ ನಿರ್ಧಾರ ಕೈಗೊಳ್ಳಬೇಕು ಎಂದು ಮೊದಲೇ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ನಿರ್ಣಯವು ಎಲ್ಲರಿಗೂ ಸ್ವೀಕಾರಾರ್ಹವಾಗಿರುತ್ತದೆ. ಇದರಲ್ಲಿ ಯಾರಲ್ಲೂ ಯಾವುದೇ ತಕರಾರಿಲ್ಲ ಎಂದು ಫಡ್ನವಿಸ್‌ ಹೇಳಿದ್ದಾರೆ.

    2022 ರಲ್ಲಿ 40 ಶಾಸಕರೊಂದಿಗೆ ಏಕನಾಥ್‌ ಶಿಂಧೆ ಅವರು ಬಿಜೆಪಿ ಮನೆ ಬಾಗಿಲಿಗೆ ಹೋದರು. ಶಿವಸೇನೆಯ ವಿಭಜನೆಯಿಂದಾಗಿ ಪಕ್ಷದ ಮುಖ್ಯಸ್ಥ ಉದ್ಧವ್‌ ಠಾಕ್ರೆ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಪರಿಣಾಮ ಎಂವಿಎ ಸರ್ಕಾರ ಪತನಗೊಂಡಿತು.

    ಮುಂದೆ ಬಿಜೆಪಿ ನೇತೃತ್ವದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರಲು ವೇದಿಕೆ ಸಜ್ಜಾಯಿತು. ಆಗ ಪಕ್ಷದಲ್ಲಿ ಅನುಭವಿ ವ್ಯಕ್ತಿಯಿದ್ದರೂ ಬಿಜೆಪಿ ಅಚ್ಚರಿ ಎಂಬಂತೆ ಏಕನಾಥ್‌ ಶಿಂಧೆ ಅವರನ್ನೇ ಮಹಾರಾಷ್ಟ್ರ ಸಿಎಂ ಮಾಡಿತು. ಇದರ ನಡುವೆ ಎನ್‌ಸಿಪಿ ಕೂಡ ಇಬ್ಭಾಗವಾಗಿ ಅಜಿತ್‌ ಪವಾರ್‌ ಬಣ ಬಿಜೆಪಿ ಜೊತೆ ಕೈಜೋಡಿಸಿತು.

  • ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ

    ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ

    ಮುಂಬೈ: ಮಹಾರಾಷ್ಟ್ರ (Maharashtra) ಮಾಜಿ ಸಿಎಂ ಮತ್ತು ಶಿವಸೇನೆ (UBT) ನಾಯಕ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಸಿಎಂ ಏಕನಾಥ್ ಶಿಂಧೆ (Ekanath Shindhe) ಹೆಲಿಕಾಪ್ಟರ್ ತಪಾಸಣೆ ಮಾಡಲಾಗಿದೆ.

    ಉದ್ಧವ್ ಠಾಕ್ರೆ (Uddhav Thackeray) ಅವರ ಬ್ಯಾಗ್‌ಗಳನ್ನು ಅಧಿಕಾರಿಗಳು ಯವತ್ಮಾಳ್‌ನಲ್ಲಿ ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನೂ ಅಪ್‌ಲೋಡ್ ಮಾಡಿ ಆಕ್ರೋಶ ಹೊರ ಹಾಕಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ವಿಡಿಯೋ ಪೋಸ್ಟ್ ಮಾಡಿದೆ. ಠಾಕ್ರೆ ಮಾತ್ರವಲ್ಲ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರ ಬ್ಯಾಗ್‌ಗಳನ್ನೂ ಪರೀಕ್ಷಿಸಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಅಮೆರಿಕದಲ್ಲಿ 10 ಶತಕೋಟಿ ಡಾಲರ್‌ ಹೂಡಿಕೆಗೆ ಬದ್ಧ, 15,000 ಉದ್ಯೋಗ ಸೃಷ್ಟಿ ಗುರಿ: ಅದಾನಿ

    ಅಧಿಕಾರಿಗಳು ಉದ್ಧವ್ ಠಾಕ್ರೆ ಅವರ ವಸ್ತುಗಳನ್ನು ಪರಿಶೀಲಿಸಿದಾಗ, ಏಕನಾಥ್ ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರ ಬ್ಯಾಗ್‌ಗಳನ್ನು ಸಹ ಪರಿಶೀಲಿಸಿದ್ದೀರಾ? ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಮಹಾರಾಷ್ಟ್ರಕ್ಕೆ ಆಗಮಿಸಿದಾಗ ಅವರ ಬ್ಯಾಗ್‌ಗಳನ್ನು ಸಹ ಪರಿಶೀಲಿಸಿದ್ದೀರಾ? ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಬಿ.ಎಸ್ಸಿ ನರ್ಸಿಂಗ್-ಆಪ್ಷನ್ ದಾಖಲಿಗೆ ಮತ್ತಷ್ಟು ಅವಕಾಶ: ಕೆಇಎ

    ಮಾದರಿ ನೀತಿ ಸಂಹಿತೆ (MCC) ಜಾರಿಯಲ್ಲಿರುವಾಗ, ಮತದಾರರಿಗೆ ಆಮಿಷ ಒಡ್ಡಲು ಉಡುಗೊರೆಗಳು ಮತ್ತು ನಗದು ವಿತರಣೆಯನ್ನು ತಡೆಯಲು ಚುನಾವಣಾ ಅಧಿಕಾರಿಗಳು ನಿಯಮಿತವಾಗಿ ಹಠಾತ್ ತಪಾಸಣೆ ನಡೆಸುತ್ತಾರೆ. ಮಂಗಳವಾರ ಲಾತೂರ್‌ಗೆ ಆಗಮಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಹಾಗೆಯೇ ದೇವೇಂದ್ರ ಫಡ್ನವೀಸ್ ಅವರ ಬ್ಯಾಗ್‌ಗಳನ್ನು ಅಧಿಕಾರಿಗಳು ಇದೇ ರೀತಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: 5 ಕೋಟಿಗೆ ಮಾಜಿ ಸಿಎಂ ದಿ.ಎಸ್ ನಿಜಲಿಂಗಪ್ಪ ಮನೆ ಖರೀದಿಸಿದ ಸರ್ಕಾರ

    ಈ ಬಗ್ಗೆ ದೇವೇಂದ್ರ ಫಡ್ನವಿಸ್ (Devendra Fadnavis) ಮಾತನಾಡಿ, ಬ್ಯಾಗ್‌ಗಳನ್ನು ಪರಿಶೀಲಿಸುವುದರಲ್ಲಿ ಏನು ತಪ್ಪಿದೆ? ನಾವು ಪ್ರಚಾರ ಮಾಡುವ ಸಮಯದಲ್ಲಿ ನಮ್ಮ ಬ್ಯಾಗ್‌ಗಳನ್ನು ಪರಿಶೀಲಿಸಿದ್ದಾರೆ ಅದರಲ್ಲಿ ಏನಿದೆ? ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಇಂತಹ ಕ್ರಮಗಳು ಅತ್ಯಗತ್ಯ. ಇದಕ್ಕೆ ನಾನು ಸಂಪೂರ್ಣವಾಗಿ ಸಹಕರಿಸಿದ್ದೇನೆ. ನಾವೆಲ್ಲರೂ ಕಾನೂನನ್ನು ಗೌರವಿಸೋಣ ಮತ್ತು ನಮ್ಮ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಎತ್ತಿಹಿಡಿಯುವ ಪ್ರಯತ್ನಗಳನ್ನು ಬೆಂಬಲಿಸೋಣ ಎಂದರು. ಇದನ್ನೂ ಓದಿ: ಗೃಹಪ್ರವೇಶದ ಸಂಭ್ರಮದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಸೋನು ಗೌಡ

  • ವಿವಾದಕ್ಕೆ ಕಾರಣವಾದ ರಾಗಾ `ರೆಡ್‌ ಬುಕ್’ – ಸಂವಿಧಾನ ಪ್ರತಿ ಎಂದ ಪುಸ್ತಕದಲ್ಲಿ ಖಾಲಿ ಹಾಳೆ: ಫಡ್ನವಿಸ್‌ ಕೌಂಟರ್‌

    ವಿವಾದಕ್ಕೆ ಕಾರಣವಾದ ರಾಗಾ `ರೆಡ್‌ ಬುಕ್’ – ಸಂವಿಧಾನ ಪ್ರತಿ ಎಂದ ಪುಸ್ತಕದಲ್ಲಿ ಖಾಲಿ ಹಾಳೆ: ಫಡ್ನವಿಸ್‌ ಕೌಂಟರ್‌

    ಮುಂಬೈ: ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮತ್ತು ಚುನಾವಣಾ ಫಲಿತಾಂಶದ ನಂತರವೂ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಕೆಂಪು ಬಣ್ಣದ ಸಂವಿಧಾನ ಪ್ರತಿ ಎನ್ನಲಾದ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡೇ ಸುತ್ತುತ್ತಿದ್ದರು. ತಮ್ಮ ಸಾರ್ವಜನಿಕ ಸಭೆಯಲ್ಲಿ ಇದನ್ನು ಪ್ರದರ್ಶಿಸುತ್ತಿದ್ದರು.

    ಇನ್ನೂ ಇತ್ತೀಚೆಗೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ (Maharashtra And Jharkhand Assembly Elections) ಪ್ರಚಾರದಲ್ಲಿ ರಾಹುಲ್ ಗಾಂಧಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಂವಿಧಾನದ ಪುಸ್ತಕದ ಜೊತೆ ಭಾಷಣ ಮುಂದುವರಿಸಿದ್ದಾರೆ. ಅವರ ಸಾರ್ವಜನಿಕ ಸಭೆಯೊಂದರಲ್ಲಿ ಸಂವಿಧಾನದ (Constitution) ಪ್ರತಿ ಎನ್ನಲಾದ ಕೆಂಪು ಬಣ್ಣದ ಪುಸ್ತಕವನ್ನು ಜನರಿಗೆ ವಿತರಿಸಲಾಗಿತ್ತು. ಆದರೆ, ಅದರಲ್ಲಿ ಖಾಲಿ ಹಾಳೆಗಳಿವೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ

    ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ರ‍್ಯಾಲಿಗಳಲ್ಲಿ ʻರೆಡ್‌ ಬುಕ್‌ʼನೊಂದಿಗೆ (Red Book) ಕಾಣಿಸಿಕೊಳ್ತಿದ್ದಾರೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಪ್ರಚಾರದ ಸಭೆಗಳಲ್ಲಿ ಕೆಂಪು ಹೊದಿಕೆ ಇರುವ ಚಿಕ್ಕ ಪುಸ್ತಕವನ್ನು ಏಕೆ ಪ್ರದರ್ಶಿಸುತ್ತಾರೆ? ಎಂದು ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವಿಸ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ’

    ಸಂವಿಧಾನ ಪ್ರತಿಯ ಮುಖಪುಟ ನೀಲಿ ಬಣ್ಣದ್ದಾಗಿರುತ್ತೆ, ಆದರೆ ರಾಹುಲ್ ಮಾತ್ರ ಕೆಂಪು ಹೊದಿಕೆ ತೋರಿಸುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಸುತ್ತ ನಕ್ಸಲರು ಹಾಗೂ ಅರಾಜಕ ಶಕ್ತಿಗಳೇ ತುಂಬಿವೆ. ರಾಹುಲ್ ಗಾಂಧಿ ಕಾಂಗ್ರೆಸ್ ವ್ಯಕ್ತಿಯಾಗಿ ಉಳಿಯದೇ ಉಗ್ರ ಎಡಪಂಥೀಯ ವಿಚಾರವಾದಿಯಾಗಿ ಬದಲಾಗಿದ್ದಾರೆ ಎಂದು ಟೀಕಿಸಿದ್ದಾರೆ.

    ಇದೇ ವೇಳೆ, ಕೆಂಪು ಪುಸ್ತಕದ ಹಾಳೆಗಳು ಖಾಲಿ ಖಾಲಿ ಆಗಿರುವ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ, ಬಾಬಾ ಸಾಹೇಬರ ಮೇಲೆ ದಾಳಿ ನಡೆಸ್ತಿದೆ. ಸಂವಿಧಾನಶಿಲ್ಪಿಗೆ ಅಪಮಾನ ಮಾಡುವ ಕೆಲಸ ಮಾಡ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್‌ ಕೇಸ್‌ – ಬಂಗಾಳದಿಂದ ಬೇರೆ ರಾಜ್ಯಕ್ಕೆ ಕೇಸ್‌ ವರ್ಗಾಯಿಸಲು ಸುಪ್ರೀಂ ನಕಾರ

  • 44 ವರ್ಷಗಳ ನಂಟು ಕಡಿದುಕೊಂಡ ಮುಂಬೈ ಕಾಂಗ್ರೆಸ್ ಮುಖಂಡ – 5 ಬಾರಿ ಕಾರ್ಪೋರೇಟರ್ ಆಗಿದ್ದ ರವಿರಾಜ ಬಿಜೆಪಿ ಸೇರ್ಪಡೆ

    44 ವರ್ಷಗಳ ನಂಟು ಕಡಿದುಕೊಂಡ ಮುಂಬೈ ಕಾಂಗ್ರೆಸ್ ಮುಖಂಡ – 5 ಬಾರಿ ಕಾರ್ಪೋರೇಟರ್ ಆಗಿದ್ದ ರವಿರಾಜ ಬಿಜೆಪಿ ಸೇರ್ಪಡೆ

    ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Elections) ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಮುಂಬೈನ (Mumbai) ಕಾಂಗ್ರೆಸ್ (Congress) ಹಿರಿಯ ಮುಖಂಡ ಹಾಗೂ 5 ಬಾರಿ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದ ರವಿರಾಜ (Ravi Raja) ಬಿಜೆಪಿ ಸೇರಿದ್ದಾರೆ.

    44 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ರವಿರಾಜ ಇದೀಗ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ (BJP) ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ 44 ವರ್ಷಗಳ ನಂಟನ್ನು ರವಿರಾಜ ಶಾಶ್ವತವಾಗಿ ಕಡಿದುಕೊಂಡಿದ್ದಾರೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಮತ್ತು ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್ ಅವರು ರವಿರಾಜ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದನ್ನೂ ಓದಿ: ಜಮೀನು ವಿವಾದ ಹಿನ್ನೆಲೆ 17 ವರ್ಷದ ಬಾಲಕನ ಶಿರಚ್ಛೇದನ – 6 ಮಂದಿಯ ವಿರುದ್ಧ ಎಫ್‌ಐಆರ್

    ಬಳಿಕ ಮಾತನಾಡಿದ ದೇವೇಂದ್ರ ಫಡ್ನವಿಸ್, ಇನ್ನಷ್ಟು ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಹಾಯತಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ಜನರಲ್ಲಿದೆ. ರವಿರಾಜ ಮುಂಬೈನಲ್ಲಿರುವ ಸಮಸ್ಯೆಗಳಿಗೆ ಎನ್‌ಸೈಕ್ಲೋಪೀಡಿಯಾ ಇದ್ದಂತೆ. ಅವರು ನಮ್ಮ ಹಳೆಯ ಸ್ನೇಹಿತ ಕೂಡ ಹೌದು. ರವಿರಾಜ ಮತ್ತವರ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರಿದ್ದು ಪಕ್ಷದ ಬಲವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದರು. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು

    ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ಸಿಎಂಗೆ ಇ.ಡಿ ಬಂದ ಮೇಲೆ ಭಯ ಆಗಿದೆ, ಅದಕ್ಕೆ ಉಡಾಫೆಯಾಗಿ ಮಾತನಾಡುತ್ತಿದ್ದಾರೆ: ಜೋಶಿ