Tag: ದೇಶದ್ರೋಹ

  • ಸಂತ ಚಿನ್ಮಯ್ ಕೃಷ್ಣದಾಸ್‌ ವಿರುದ್ಧ ದೇಶದ್ರೋಹದ ಕೇಸ್‌ – ಬಾಂಗ್ಲಾದಲ್ಲಿ ಇಸ್ಕಾನ್ ಬ್ಯಾನ್‌ ಆಗುತ್ತಾ?

    ಸಂತ ಚಿನ್ಮಯ್ ಕೃಷ್ಣದಾಸ್‌ ವಿರುದ್ಧ ದೇಶದ್ರೋಹದ ಕೇಸ್‌ – ಬಾಂಗ್ಲಾದಲ್ಲಿ ಇಸ್ಕಾನ್ ಬ್ಯಾನ್‌ ಆಗುತ್ತಾ?

    ಢಾಕಾ/ನವದೆಹಲಿ: ಬಾಂಗ್ಲಾದೇಶದ ಇಸ್ಲಾಂ ಮೂಲಭೂತವಾದಿ ಸರ್ಕಾರದ ಹಿಂದೂ (Hindu) ದ್ವೇಷ ರಾಜಕೀಯ ಮಿತಿ ಮೀರುತ್ತಿದೆ. ಹಿಂದೂ ಪ್ರಜೆಗಳ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದೆ.

    ಬಾಂಗ್ಲಾ ರಾಷ್ಟ್ರಧ್ವಜಕ್ಕೆ (Bangladesh National Flag) ಅಪಮಾನ ಎಸಗಿದ ಆರೋಪದ ಮೇಲೆ ಮಂಗಳವಾರ ಇಸ್ಕಾನ್ (ISKCON) ಸಂತ ಚಿನ್ಮಯ್ ಕೃಷ್ಣದಾಸ್‌ರನ್ನು (Chinmoy Krishna Das) ಬಂಧಿಸಿದ್ದ ಪೊಲೀಸರು ದೇಶದ್ರೋಹದ (Sedition) ಕೇಸ್ ದಾಖಲಿಸಿದ್ದಾರೆ. ಕೋರ್ಟ್‌ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    ಚಿನ್ಮಯ್ ಕೃಷ್ಣದಾಸ್‌ ಬಂಧನಕ ಖಂಡಿಸಿ ಬಾಂಗ್ಲಾ ಹಿಂದೂಗಳು ದೊಡ್ಡಮಟ್ಟದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೊತ್ತಲ್ಲೇ ಮಹತ್ವದ ಬೆಳವಣಿಗೆ ಘಟಿಸಿದೆ. ಇಸ್ಕಾನ್ ಸಂಸ್ಥೆಯನ್ನು ನಿಷೇಧಿಸಲು ಬಾಂಗ್ಲಾ ಸರ್ಕಾರ ಚಿಂತನೆ ನಡೆಸಿದೆ. ಇಸ್ಕಾನ್ ಸಂಸ್ಥೆ ಒಂದು ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿಯಾಗಿದೆ. ಇದನ್ನು ನಿಷೇಧಿಸಿ ಎಂದು ಕೋರಿ ಢಾಕಾ ಹೈಕೋರ್ಟ್‌ನಲ್ಲಿ ಅರ್ಜಿಯೊಂದು ಸಲ್ಲಿಕೆ ಆಗಿದೆ. ಇದನ್ನೂ ಓದಿ: ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್‌-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ

    ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಮೊಹಮ್ಮದ್‌ ಅಸದುಜ್ಜಮಾನ್ ಕೂಡ, ಇಸ್ಕಾನ್‌ಗೆ ಧಾರ್ಮಿಕ ಮೂಲಭೂತವಾದಿ ಸಂಸ್ಥೆ ಎಂಬ ಹಣೆಪಟ್ಟಿ ಕಟ್ಟಿದ್ದಾರೆ. ಇಸ್ಕಾನ್ ಸಂಸ್ಥೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ಶುರುವಾಗಿವೆ ಎಂಬುದನ್ನು ಕೋರ್ಟ್ ಗಮನಕ್ಕೆ ತಂದರು.

     

    ಈ ವೇಳೆ ಇಸ್ಕಾನ್ ಸಂಸ್ಥೆಯ ವಿರುದ್ಧ ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಬಗ್ಗೆ ನಾಳೆಯೊಳಗೆ ವರದಿ ನೀಡಿ ಬಾಂಗ್ಲಾ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿತು. ಬಾಂಗ್ಲಾ ದೇಶದ ನಡೆ ಅಲ್ಲಿನ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.

    ಚಿನ್ಮಯ್ ಕೃಷ್ಣದಾಸ್ ಬಿಡುಗಡೆಗೆ ಆಗ್ರಹಿಸಿ ಇಸ್ಕಾನ್ ಸಂಸ್ಥೆ ವಿರುದ್ಧ ಕ್ರಮ ತೆಗೆದುಕೊಳ್ಳದಂತೆ ಬಾಂಗ್ಲಾ ದೇಶವನ್ನು ತಡೆಯುವಂತೆ ಒತ್ತಾಯಿಸಿ ಕೋಲ್ಕತ್ತಾದಲ್ಲಿ ಇಸ್ಕಾನ್ ಸಂಸ್ಥೆ ಪ್ರತಿಭಟನೆ ನಡೆಸಿದೆ. ಚಿನ್ಮಯ್ ಬಿಡುಗಡೆಗಾಗಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ.

     

    ದೇಶದ್ರೋಹದ ಕೇಸ್‌ ಯಾಕೆ?
    ಚಿತ್ತಗಾಂಗ್‌ನಲ್ಲಿ ವ್ಯಾಪಾರಿ ಓಸ್ಮಾನ್ ಆಲಿ ಎಂಬಾತ ಇಸ್ಕಾನ್ ನಿಷೇಧಿಸಿ ಎಂದು ಪೋಸ್ಟ್ ಹಾಕಿದ್ದ.ಇದಕ್ಕೆ ಇಸ್ಕಾನ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಂಗಡಿ ಮುಂದೆ ನಡೆಯುತ್ತಿದ್ದ ಪ್ರತಿಭಟನೆ ಘರ್ಷಣೆಗೆ ತಿರುಗಿದೆ. ಘರ್ಷಣೆ ವೇಳೆ ಕಲ್ಲು ತೂರಾಟ, ಜೈಶ್ರೀರಾಮ್ ಘೋಷಣೆ ವೇಳೆ ಆಸಿಡ್ ದಾಳಿಯಾಗಿದೆ. ಈ ಘರ್ಷಣೆಯಲ್ಲಿ 14 ಪೊಲೀಸರು ಗಾಯಗಳಾಗಿತ್ತು. ಆಲಿ ಅಂಗಡಿ ಧ್ವಂಸವಾಗಿತ್ತು. ಆರೋಪಿ ಓಸ್ಮಾನ್ ಆಲಿ ಸೇರಿ 82 ಮಂದಿಯನ್ನು ಪೊಲೀಸರು ಬಂಧಿಸಿದ್ದರು.

    ಚಿತ್ತಗಾಂಗ್‌ನಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು. ಈ ಕಾರಣಕ್ಕೆ ಪ್ರತಿಭಟನೆಯ ಉಸ್ತುವಾರಿ ಹೊತ್ತಿದ್ದ ಇಸ್ಕಾನ್ ಸಂತ ಚಿನ್ಮಯ್ ಕೃಷ್ಣದಾಸ್ ಸೇರಿ 18 ಮಂದಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

    ಚಿನ್ಮಯ್ ಕೃಷ್ಣದಾಸ್ ಯಾರು?
    38 ವರ್ಷದ ಕೃಷ್ಣದಾಸ್‌ ಬಾಂಗ್ಲಾದ ಚಿತ್ತಗಾಂಗ್ ಮೂಲದವರು. ಬಾಲ್ಯದಿಂದಲೇ ಧಾರ್ಮಿಕ ಭಾಷಣಗಳಿಗೆ ಫೇಮಸ್ ಆಗಿದ್ದ ಇವರು ಶಿಶುಭಕ್ತ ಎಂದೇ ಜನಪ್ರಿಯರಾಗಿದ್ದರು.

    2007ರಿಂದ ಪುಂಡರಿಕ್ ಧಾಮ್ ಅಧ್ಯಕ್ಷ ಮತ್ತು 2016ರಿಂದ ಇಸ್ಕಾನ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶೇಖ್ ಹಸೀನಾ ಪಲಾಯನದ ನಂತರ ದೇಗುಲಗಳ ಮೇಲೆ ದಾಳಿ ನಡೆದ ಬಳಿಕ ಆಗಸ್ಟ್‌ನಲ್ಲಿ ಸನಾತನ ಜಾಗರಣ ಮಂಚ್ ಹೆಸರಿನ ಸಂಘಟನೆ ರಚನೆಯಾಗಿತ್ತು. ಕೃಷ್ಣದಾಸ್ ಈ ಸಂಘಟನೆಯ ವಕ್ತಾರರಾಗಿದ್ದಾರೆ.

  • ದೇಶದ್ರೋಹ ಕಾನೂನು ರದ್ದು: ಅಮಿತ್ ಶಾ ಮಸೂದೆ ಮಂಡನೆ

    ದೇಶದ್ರೋಹ ಕಾನೂನು ರದ್ದು: ಅಮಿತ್ ಶಾ ಮಸೂದೆ ಮಂಡನೆ

    ನವದೆಹಲಿ: ದೇಶದ್ರೋಹ ಕಾನೂನನ್ನು (Sedition Law) ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಂಸತ್ತಿನಲ್ಲಿ ತಿಳಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳನ್ನು ಅಮಿತ್ ಶಾ ಮಂಡಿಸಿದ್ದಾರೆ.

    ನೂತನ ಮಸೂದೆಯಲ್ಲಿ ದೇಶದ್ರೋಹ (Sedition) ಎಂಬ ಪದವಿಲ್ಲ. ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳಿಗಾಗಿ ಇರುವ ಕಾನೂನನ್ನು ಐಪಿಸಿ ಸೆಕ್ಷನ್ 150ರ ಅಡಿ ಸೇರಿಸಲಾಗಿದೆ. ದೇಶದ್ರೋಹಕ್ಕೆ ಜೀವಾವಧಿ ಶಿಕ್ಷೆ ಅಥವಾ ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ನೀಡಲಾಗುತ್ತದೆ. ಹೊಸ ನಿಬಂಧನೆಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು 7 ವರ್ಷಕ್ಕೆ ಹೆಚ್ಚಿಸಲಾದ ಉಲ್ಲೇಖವಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್‌ ರೇಪ್‌ಗೆ 20 ವರ್ಷ ಜೈಲು – ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್‌ ಶಾ

    ಕಾನೂನಿನ ಉದ್ದೇಶ ಶಿಕ್ಷಿಸುವುದೇ ಅಲ್ಲ, ನ್ಯಾಯವನ್ನು ಒದಗಿಸುವುದು. ಅಪರಾಧವನ್ನು ನಿಲ್ಲಿಸಲು ಕೈಗೊಳ್ಳುವ ಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.

    The Indian Penal Code (IPC) ಭಾರತೀಯ ನ್ಯಾಯ ಸಂಹಿತಾವಾಗಿ ಬದಲಾದರೆ Code of Criminal Procedure ಭಾರತೀಯ ನಾಗರೀಕ ಸುರಕ್ಷಾವಾಗಿ ಬದಲಾಗಲಿದೆ. Indian Evidence Act 1860 ಇನ್ನು ಮುಂದೆ ಭಾರತೀಯ ನ್ಯಾಯವಾಗಿ ಬದಲಾಯಿಸುವ ಅಂಶ ಮಸೂದೆಯಲ್ಲಿದೆ.

    ಉದ್ದೇಶಪೂರ್ವಕವಾಗಿ ಮಾತನಾಡುವ ಅಥವಾ ಬರೆಯುವ ಮೂಲಕ, ಚಿಹ್ನೆಗಳ ಮೂಲಕ, ಎಲೆಕ್ಟ್ರಾನಿಕ್ ಸಂವಹನದಿಂದ, ಹಣಕಾಸಿನ ನೆರವಿನ ವಿಧಾನಗಳ ಮೂಲಕ, ಯಾವುದೇ ರೀತಿಯಲ್ಲಿ ಪ್ರಚೋದಿಸುವ, ಪ್ರತ್ಯೇಕತೆ, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಉತ್ತೇಜಿಸುವುದು, ಭಾರತದ ಸಾರ್ವಭೌಮತೆ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡಿದರೆ, ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅವರಿಗೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗಬಹುದು ಎಂದು ಈ ಮಸೂದೆ ಹೇಳುತ್ತದೆ. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ನವದೆಹಲಿ: ಕೇಂದ್ರ ಸರ್ಕಾರದ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹದ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

    ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.

    ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣ ದಾಖಲಾಗಿ ಜೈಲಿನಲ್ಲಿರುವವರು ಜಾಮೀನು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೀಠ ಜುಲೈಗೆ ಮುಂದೂಡಿಕೆ ಮಾಡಿದೆ.

    ಕೇಂದ್ರ ಹೇಳಿದ್ದೇನು?
    ಸೋಮವಾರ ದೇಶದ್ರೋಹದ ಕಾನೂನನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ತಿಳಿಸಿತ್ತು ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿತ್ತು.

    court order law

    ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾಯ್ದೆಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿತ್ತು.

    ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

  • ದೇಶದ್ರೋಹ ಕಾಯ್ದೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ: ಸುಪ್ರೀಂಗೆ ಕೇಂದ್ರ

    ದೇಶದ್ರೋಹ ಕಾಯ್ದೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ: ಸುಪ್ರೀಂಗೆ ಕೇಂದ್ರ

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ)  ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

    ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿದೆ. ಇದನ್ನೂ ಓದಿ: ಶಾಹೀನ್‌ ಬಾಗ್‌ ತೆರವು ಕಾರ್ಯಾಚರಣೆ – ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ: ಸಿಪಿಐ(ಎಂ)ಗೆ ಸುಪ್ರೀಂ ಪ್ರಶ್ನೆ

    ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾನೂನಿಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ.

    ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಇದನ್ನೂ ಓದಿ: ಭಾಷಣದ ವೇಳೆ ನೀರು ಕೇಳಿದ್ದ ಅಧಿಕಾರಿಯ ನೆರವಿಗೆ ಬಂದ ನಿರ್ಮಲಾ ಸೀತಾರಾಮನ್

    ಸದ್ಯ ಈಗ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸಂವಿಧಾನ ಪೀಠದಲ್ಲಿ ನಡೆಸಬೇಕೇ ಅಥವಾ ಐದಕ್ಕಿಂತ ಹೆಚ್ಚಿನ ನ್ಯಾಯಾಧೀಶರ ಪೀಠದಲ್ಲಿ ನಡೆಸಬೇಕೇ ಎಂಬುದರ ಬಗ್ಗೆ ಕೋರ್ಟ್‌ ಪರಿಶೀಲಿಸುತ್ತಿದೆ.

  • ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹ ಕೇಸ್‌ ಇಲ್ಲ

    ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹ ಕೇಸ್‌ ಇಲ್ಲ

    ಬೆಂಗಳೂರು: ಡಿಸೆಂಬರ್ 17ರ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಎಂಇಎಸ್‌ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.

    ಎಂಇಎಸ್‍ನ 38 ಪುಂಡರ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣಗಳನ್ನು ಕೈಬಿಟ್ಟು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  ಇದನ್ನೂ ಓದಿ: ಗುರುವಾರ ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಮುಸ್ಲಿಂ ಮುಖಂಡರು

    ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವುದಾಗಿ ಬೆಳಗಾವಿ ಅಧಿವೇಶನ ಸಾಕ್ಷಿಯಾಗಿ ಸಿಎಂ ಬೊಮ್ಮಾಯಿ ಗುಡುಗಿದ್ದರು. ಬೆಳಗಾವಿ ರಾಜಕಾರಣಿಗಳ ಒತ್ತಡಕ್ಕೆ ತಲೆಬಾಗಿ ಪೊಲೀಸ್ ಇಲಾಖೆ ಈ ರೀತಿ ಮಾಡಿದ್ಯಾ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

    ಸಿಎಂ ಬೊಮ್ಮಾಯಿ ಹೇಳಿಕೆ ಹೊರತಾಗಿಯೂ ಚಾರ್ಜ್‍ಶೀಟ್‍ನಲ್ಲಿ 124(ಎ) ಸೆಕ್ಷನ್ ಕೈಬಿಟ್ಟಿದ್ದೇಕೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಇದೇ ರೀತಿ ಮಾಡಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ನಾರಾಯಣಗೌಡ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬುರ್ಕಾ ಹಾಕಬೇಕು, ನಮಾಜ್ ಮಾಡಬೇಕು, ಮುಸ್ಲಿಂ ಸಂಸ್ಕೃತಿ ಪಾಲಿಸಬೇಕೆಂದು ಒತ್ತಾಯಿಸುತ್ತಿದ್ದ: ಪತ್ನಿ ನೇರ ಆರೋಪ

    ಡಿ.17ರಂದು ರಾತ್ರಿ ಆನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿದ್ದ ಕಿಡಿಗೇಡಿಗಳು, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿ ಪುಂಡಾಟ ಪ್ರದರ್ಶಿಸಿದರು.

  • ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

    ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

    ಭೋಪಾಲ್: T20 ವಿಶ್ವಕಪ್ ಪಂದ್ಯದ ನಂತರ ಪಾಕ್ ಪರ ಹೇಳಿಕೆಗಾಗಿ ದೇಶದ್ರೋಹದ ಆರೋಪದ ಮೇಲೆ ಮಧ್ಯಪ್ರದೇಶದ ವ್ಯಕ್ತಿಯನ್ನು ಬಂಧಿಸಲಾಗಿದೆ.

    ಮೊಹಮ್ಮದ್ ಫಾರೂಕ್(23) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಪಾಕ್‍ಪರ ಘೋಷಣೆ ಕೂಗಿದ ಆರೋಪದ ಮೇಲೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‍ನಲ್ಲಿ ಅಬ್ಬರ, ವಿಶ್ವಕಪ್‍ನಲ್ಲಿ ಠುಸ್ ಪಠಾಕಿ – ಭಾರತಕ್ಕೆ ಹೀನಾಯ ಸೋಲು

    ಇತ್ತೀಚೆಗೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಕ್ರಿಕೆಟ್‍ನಲ್ಲಿ, ಪಾಕ್ ಗೆದ್ದ ಬಳಿಕ ಯುವಕ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ. ಸತ್ನಾ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ಜಿಲ್ಲಾ ಕಾರ್ಯದರ್ಶಿ ಅನುರಾಗ್ ಮಿಶ್ರಾ ಮತ್ತು ಇತರರು ನೀಡಿದ ದೂರಿನ ಮೇರೆಗೆ ಮೈಹಾರ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ ಸೋತಿದ್ದು ಎಲ್ಲಿ? ಕಳಪೆ ಪ್ರದರ್ಶನಕ್ಕೆ ಕಾರಣ ಏನು?

    ಮೊಹಮ್ಮದ್ ಫಾರೂಕ್ ಭಾರತೀಯ ದಂಡ ಸಂಹಿತೆ 124-ಎ (ದೇಶದ್ರೋಹ), 153-ಬಿ, 504 ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿಸಿದ ನಂತರ, ಫಾರೂಕ್‍ನನ್ನು ಸೋಮವಾರ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ.

  • ದೇಶದ್ರೋಹ ಕಾನೂನು ಈಗಲೂ ಅಸ್ತಿತ್ವದಲ್ಲಿರಬೇಕೆ? – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ದೇಶದ್ರೋಹ ಕಾನೂನು ಈಗಲೂ ಅಸ್ತಿತ್ವದಲ್ಲಿರಬೇಕೆ? – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ನವದೆಹಲಿ: ಮಹಾತ್ಮ ಗಾಂಧೀಜಿ, ಬಾಲ ಗಂಗಾಧರ್ ತಿಲಕ್‍ರಂತಹ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಬಳಸಲ್ಪಟ್ಟಿರುವ ದೇಶದ್ರೋಹ ಕಾನೂನು (ಐಪಿಸಿಯ ಸೆಕ್ಷನ್ 124 ಎ ) ಈಗಲೂ ಅಸ್ತಿತ್ವದಲ್ಲಿರಬೇಕೆ?, ಅದರ ಅವಶ್ಯಕತೆ ಈಗಲೂ ಇದೆಯೇ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು  ಖಾರವಾಗಿ ಪ್ರಶ್ನಿಸಿದೆ.

    ಐಪಿಸಿಯ ಸೆಕ್ಷನ್ 124 ಎ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಇಂತಹ ಹಲವು ಪ್ರಶ್ನೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

    ವಿಚಾರಣೆ ವೇಳೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಇದೊಂದು ವಸಾಹತುಶಾಹಿ ಕಾನೂನು. ಇದನ್ನು 1870 ರಲ್ಲಿ ಸೇರಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರನ್ನು ಹತ್ತಿಕ್ಕಲು ಬ್ರಿಟಿಷರು ಈ ಕಾನೂನು ಸೇರ್ಪಡೆ ಮಾಡಿದ್ದರು. ಸ್ವಾತಂತ್ರ್ಯ ಸಿಕ್ಕಿದ 73 ವರ್ಷದ ಬಳಿಕವೂ ಈ ಕಾನೂನಿನ ಅವಶ್ಯಕತೆ ಇದೆಯೇ ಎಂದು ಅದು ಪ್ರಶ್ನಿಸಿತು.  ಇದನ್ನೂ ಓದಿ : ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿಯಲ್ಲಿ ಇನ್ನೂ ಕೇಸ್ ದಾಖಲಿಸುತ್ತಿರುವುದು ಆಘಾತಕಾರಿ – ಸುಪ್ರೀಂಕೋರ್ಟ್

    ಈ ನಡುವೆ ದೇಶ ದ್ರೋಹದ ಪ್ರಕರಣಗಳು ಹೆಚ್ಚುತ್ತಿದೆ ಎಂದು ಪರೋಕ್ಷವಾಗಿ ಕಾನೂನು ದುರ್ಬಳಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಪೀಠ, ಸ್ವಾತಂತ್ರ್ಯದ 73 ವರ್ಷದ ಬಳಿಕ ಇಂತಹ ಕಾನೂನು ಮುಂದುವರಿಸುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿತು.

    ಈ ಕಾನೂನು ಕಾರ್ಪೆಂಟರ್ ಬಳಿ ಇರುವ ಗರಗಸದಂತೆ ಮರ ಕತ್ತರಿಸುವ ಬದಲು ಇಡೀ ಅರಣ್ಯವನ್ನೇ ಕತ್ತರಿಸಲು ಬಳಕೆ ಮಾಡಲಾಗುತ್ತಿದೆ. ಪರಿಸ್ಥಿತಿ ಎಷ್ಟು ಕಠೋರವಾಗಿದೆ ಎಂದರೆ ನಿರ್ದಿಷ್ಟ ಧ್ವನಿಗಳನ್ನು ಕೇಳಲು ಸರ್ಕಾರಕ್ಕೆ ಇಷ್ಟವಿಲ್ಲದಿದ್ದರೆ ಅಂತಹ ಧ್ವನಿಗಳ ವಿರುದ್ಧ ಈ ಕಾನೂನು ಬಳಕೆಗೆ ಸರ್ಕಾರ ಸೂಚಿಸುತ್ತಿದೆ ಎಂದು ಆಘಾತ ವ್ಯಕ್ತಪಡಿಸಿತು. ಇದೇ ವೇಳೆ ಅವರು ಯಾವುದೇ ರಾಜ್ಯ ಅಥವಾ ಸರ್ಕಾರವನ್ನು ಉದ್ದೇಶಿಸಿ ಈ ಮಾತು ಹೇಳಿಲ್ಲ ಎಂದಿತು.

    ಐಪಿಸಿಯ ಸೆಕ್ಷನ್ 124 ಎ ಅಡಿಯಲ್ಲಿ ದೇಶದ್ರೋಹದ ಅಪರಾಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸೇನೆಯ ನಿವೃತ್ತ ಮೇಜರ್-ಜನರಲ್ ಎಸ್.ಜಿ. ವೊಂಬಟ್ಕೆರ ಅರ್ಜಿ ಸಲ್ಲಿಸಿದ್ದರು. ತಮ್ಮ ವಿರುದ್ಧ ದಾಖಲಿಸಿದ್ದ ದೇಶ ದ್ರೋಹದ ಕಾನೂನನ್ನು ಅವರು ಪ್ರಶ್ನೆ ಮಾಡಿದ್ದರು. ದೇಶಕ್ಕಾಗಿ ಸೇವೆ ಮಾಡಿದ ಯೋಧನ ಮೇಲೆ ಈ ರೀತಿಯ ಕೇಸು ದಾಖಲಿಸಿರುವುದನ್ನು ಅವರು ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು ಕಾನೂನು ಪುನರ್ ಪರಿಶೀಲಿಸುವ ಭರವಸೆ ನೀಡಿದೆ. ಜುಲೈ 27 ರಂದು ಮುಂದಿನ ವಿಚಾರಣೆ ನಡೆಯಲಿದೆ.

  • ದೇಶದ್ರೋಹಿ ದುಷ್ಕೃತ್ಯಕ್ಕೆ ವಿದ್ಯಾರ್ಥಿಗಳ ಬಳಕೆ, ದೊಡ್ಡ ಷಡ್ಯಂತ್ರವಿದೆ – ಬೊಮ್ಮಾಯಿ ಆರೋಪ

    ದೇಶದ್ರೋಹಿ ದುಷ್ಕೃತ್ಯಕ್ಕೆ ವಿದ್ಯಾರ್ಥಿಗಳ ಬಳಕೆ, ದೊಡ್ಡ ಷಡ್ಯಂತ್ರವಿದೆ – ಬೊಮ್ಮಾಯಿ ಆರೋಪ

    ದಾವಣಗೆರೆ: ರಾಜ್ಯದಲ್ಲಿ ದೇಶ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶ ವಿರೋಧಿ ಕೃತ್ಯಗಳ ಹಿಂದಿರುವವರನ್ನು ಪತ್ತೆ ಹಚ್ಚಲು ಗೃಹ ಸಚಿವ ಬೊಮ್ಮಾಯಿ ರವರು ಬೆಂಗಳೂರಿನಲ್ಲಿ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ನಾಳೆ ಸಭೆ ಕರೆಯುತ್ತೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

    ಸರ್ಕ್ಯೂಟ್ ಹೌಸ್‍ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಹೇಳಿಕೆಗಳು, ಕೃತ್ಯಗಳ ಹಿಂದೆ ಒಂದು ವ್ಯವಸ್ಥಿತ ಸಂಚು, ಷಡ್ಯಂತ್ರ ಇದೆ. ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ. ಹಾಗಾಗಿ ಇದನ್ನೆಲ್ಲ ಹತ್ತಿಕ್ಕಲು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.

    ರಾಜ್ಯದಲ್ಲಿ ದೇಶದ್ರೋಹಿ ಕೃತ್ಯಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ವಿದ್ಯಾರ್ಥಿಗಳು ಅದರಲ್ಲೂ ಹೆಣ್ಣು ಮಕ್ಕಳನ್ನು ಇಂತಹ ಕೆಲಸಗಳಿಗೆ ಬಳಕೆ ಮಾಡಿಕೊಂಡು ಸಮಾಜದಲ್ಲಿ ಶಾಂತಿ ಕದಡುವ, ಗಲಭೆ ಸೃಷ್ಟಿಸುವ, ವೈಷಮ್ಯ ಉಂಟುಮಾಡುವ ಕೆಲಸ ನಡೆಯುತ್ತಿದೆ. ದೇಶದ್ರೋಹಿ ಹೇಳಿಕೆ ನೀಡಿರುವ ಅಮೂಲ್ಯ ಹಿಂದೆ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳ ಕುಮ್ಮಕ್ಕು ಇದ್ದಂತಿದೆ. ಇದರ ಬಗ್ಗೆ ನಾಳೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ಕೃತ್ಯದಲ್ಲಿ ಭಾಗಿಯಾದವರನ್ನು ಬೇರು ಸಹಿತ ಕಿತ್ತು ಹಾಕಲಾಗುವುದು ಎಂದರು.

    ಯಾವುದೇ ರೀತಿಯ ದೇಶವಿರೋಧಿ ಚಟುವಟಿಕೆಗಳು ಕಂಡು ಬಂದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದೇನೆ. ಅದೇ ರೀತಿ ರಾಜ್ಯದಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ದೇಶ ವಿರೋಧಿ ಚಟುವಟಿಕೆಗಳಿಗೆ ಶಾಲಾ-ಕಾಲೇಜುಗಳ ವೇದಿಕೆಗಳನ್ನು ವಿದ್ಯಾರ್ಥಿಗಳು ಬಳಸದಂತೆ ಎಚ್ಚರವಹಿಸಿ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆಯೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ. ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗ ಪಡಿಸಿಕೊಂಡು ಇಂತಹ ಚಟುವಟಿಕೆಗಳಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಇಂತಹ ಚಟುವಟಿಕೆಗಳಲ್ಲಿ ಯಾರೇ ಭಾಗಿಯಾದರೂ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಕಲ್ಬುರ್ಗಿಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರದ ಮಾಜಿ ಶಾಸಕರು ಕೋಮುಭಾವನೆಗೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ. ಈ ಬಗ್ಗೆಯೂ ಸಹ ಪ್ರಕರಣ ದಾಖಲಾಗಿದೆ. ಮಾಧ್ಯಮದವರು ಶಾಸಕರ ಭವನಕ್ಕೆ ಪ್ರವೇಶ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಈ ವಿಚಾರ ಸ್ಪೀಕರ್ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿ ಜಾರಿಕೊಂಡರು.

  • ಅಮೂಲ್ಯಾ ಹೇಳಿದ್ರಲ್ಲಿ ತಪ್ಪಿಲ್ಲ, ಆಕೆಯ ಮಾತುಗಳಿಗೆ ನಮ್ಮ ಬೆಂಬಲವಿದೆ: ವಕೀಲ ಎಸ್ ಮಾರೆಪ್ಪ

    ಅಮೂಲ್ಯಾ ಹೇಳಿದ್ರಲ್ಲಿ ತಪ್ಪಿಲ್ಲ, ಆಕೆಯ ಮಾತುಗಳಿಗೆ ನಮ್ಮ ಬೆಂಬಲವಿದೆ: ವಕೀಲ ಎಸ್ ಮಾರೆಪ್ಪ

    – ಅಮೂಲ್ಯಾ ಬುದ್ಧಿವಂತ ಹುಡುಗಿ

    ರಾಯಚೂರು: ದೇಶದ್ರೋಹದ ಭಾಷಣ ಮಾಡಿ ಜೈಲುಪಾಲಾಗಿರುವ ಅಮೂಲ್ಯಾ ಲಿಯೋನ ಪರ ರಾಯಚೂರಿನ ಸಿಎಎ ವಿರೋಧಿ ಹೋರಾಟದ ಸಂಚಾಲಕ ಹಿರಿಯ ವಕೀಲ ಎಸ್.ಮಾರೆಪ್ಪ ವಿವಾದಾತ್ಮಕ ಹೇಳಿಕೆ ನೀಡಿ ಅಮೂಲ್ಯಳಾನ್ನು ಬೆಂಬಲಿಸಿದ್ದಾರೆ.

    ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಹೋರಾಟ ಹಿನ್ನೆಲೆ ಶಿವರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಮಾರೆಪ್ಪ, ಆಕೆ ಎಲ್ಲಾ ದೇಶಗಳಿಗೆ ಜಿಂದಾಬಾದ್ ಹೇಳುತ್ತಿದ್ದಳು. ಆದರೆ ಹೇಳಲು ಬಿಡಲಿಲ್ಲ. ಎಲ್ಲಾ ದೇಶಗಳ ಬಗ್ಗೆ ಪ್ರೀತಿ ವ್ಯಕ್ತಪಡಿಸಲು ಮುಂದಾಗಿದ್ದಳು. ಅದಕ್ಕೆ ಕೊನೆಯಲ್ಲಿ ಹಿಂದೂಸ್ಥಾನ್ ಜಿಂದಾಬಾದ್ ಹೇಳಿದ್ದಾಳೆ ಎಂದು ಅಮೂಲ್ಯಾಳನ್ನು ಸಮರ್ಥಿಸಿಕೊಂಡರು. ಇದನ್ನು ಓದಿ: ಬೆಂಗ್ಳೂರಲ್ಲಿ ದೇಶದ್ರೋಹ ಘೋಷಣೆ ಪ್ರಕರಣ- ಪರಪ್ಪನ ಅಗ್ರಹಾರಕ್ಕೆ ಅಮೂಲ್ಯ ಶಿಫ್ಟ್

    ಅಮೂಲ್ಯಾ ಹೇಳಿದ್ದರಲ್ಲಿ ತಪ್ಪಿಲ್ಲ ಅವಳಿಗೆ ಪೂರ್ಣವಾಗಿ ಮಾತನಾಡಲು ಬಿಡಬೇಕಿತ್ತು. ಅವಳ ಮಾತುಗಳಿಗೆ ನಮ್ಮ ಬೆಂಬಲಯಿದೆ. ಮಾತನಾಡಲು ಬಿಡದೆ ಕೇಸ್ ಹಾಕಿದ್ದಾರೆ. ಆಕೆ ಬುದ್ಧಿವಂತ ಹುಡುಗಿ, ವೇದಿಕೆಯಲ್ಲಿದ್ದ ಮುಸ್ಲಿಮರು ಏನು ಹೇಳುತ್ತಾಳೋ ಎಂದು ಹೆದರಿಕೊಂಡು ಮಾತನಾಡಲು ಅವಕಾಶ ಕೊಟ್ಟಿಲ್ಲ. ಅಮೂಲ್ಯಾ ದೇಶದ್ರೋಹಿ ಅಲ್ಲ ಎಂದರು. ಇದನ್ನು ಓದಿ: ಮಗಳು ಮಾಡಿದ್ದು ತಪ್ಪು, ಅವಳ ಕೈ-ಕಾಲು ಮುರಿಯಲಿ: ಅಮೂಲ್ಯ ತಂದೆ

    ಇದೇ ವೇಳೆ ನಮಸ್ತೆ ಟ್ರಂಪ್ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ದೇಶದ್ರೊಹ ಮಾಡಿದ್ದಾರೆ. ತಮ್ಮ ದೇಶದ್ರೋಹ ಮುಚ್ವಿಕೊಳ್ಳಲು ಮೋದಿ ಹೋರಾಟಗಾರರನ್ನು ಬಂಧಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿದರು.

  • ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಡಿಕೆಶಿ

    ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಡಿಕೆಶಿ

    ಬೆಂಗಳೂರು: ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

    ದೇಶದ್ರೋಹದ ಹೇಳಿಕೆಗಳನ್ನು ನೀಡಿ ಅಮೂಲ್ಯ ಲಿಯೋನ ಮತ್ತು ಆರ್ದ್ರಾ ನಾರಾಯಣನ್ ಪೊಲೀಸರ ಅತಿಥಿಗಳಾಗಿದ್ದಾರೆ. ಈಗ ಈ ವಿಚಾರಕ್ಕೆ ಸಂಬಂಧಿದಂತೆ ಟ್ವೀಟ್ ಮಾಡಿರು ಡಿಕೆ ಶಿವಕುಮಾರ್ ಅವರು, ಅಮೂಲ್ಯ ಆಗಲಿ, ಮತ್ಯಾರೇ ಆಗಲಿ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಡಿಕೆಶಿ, ಅಮೂಲ್ಯ ಆಗಲಿ, ಮತ್ಯಾರೇ ಆಗಲಿ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಆಕೆ ಪಾಕ್ ಪರ ಘೋಷಣೆ ಹಾಕಿದ ಬಗ್ಗೆ ಹೆಚ್ಚಿನ ತನಿಖೆ ಆಗಬೇಕು. ದೇಶವಿರೋಧಿ ಚಟುವಟಿಕೆಗೆ ಯಾವುದೇ ವೇದಿಕೆ ಆಗಲಿ ದುರ್ಬಳಕೆ ಆಗಬಾರದು. ದೇಶಭಕ್ತಿ, ದೇಶ ಕಟ್ಟುವ ವಿಚಾರದಲ್ಲಿ ಎಲ್ಲ ಭಾರತೀಯರ ಅಭಿಪ್ರಾಯವೂ ಒಂದೇ ಎಂದು ಬರೆದುಕೊಂಡಿದ್ದಾರೆ.

    ಈ ಹಿಂದೆ ಈ ವಿಚಾರವಾಗಿ ಮಾತನಾಡಿದ್ದ ಡಿಕೆಶಿ ಅವರು, ಆಕೆಯ ಭಾಷಣಗಳನ್ನು ನಾನು ನೋಡಿದ್ದೇನೆ. ಅದರಲ್ಲಿ ಆಕೆ ಈಗ ಹೇಳಿದ ಮಾತನ್ನು ಕೇಳಿರಲಿಲ್ಲ. ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ನೀಡಬೇಕಿತ್ತು. ಆದರೆ ಮಧ್ಯದಲ್ಲಿ ಏನೋ ಸಮಸ್ಯೆಯಾಗಿದೆ. ಇದರ ಬಗ್ಗೆ ನನಗೆ ಇನ್ನೂ ಕೆಲವು ಸ್ಪಷ್ಟನೆಗಳು ಬೇಕಿದೆ. ಹೀಗಾಗಿ ಈ ಬಗ್ಗೆ ನಾನು ಹೆಚ್ಚಾಗಿ ಕಮೆಂಟ್ ಮಾಡುವುದಿಲ್ಲ ಎಂದು ತಿಳಿಸಿದ್ದರು.