Tag: ದೇಶದ್ರೋಹ ಪ್ರಕರಣ

  • ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ

    ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ

    – ದೇಶದ್ರೋಹದ ಬರಹದಲ್ಲಿ ಕನ್ನಡಿಗರ ಬಗ್ಗೆಯೂ ಅವಾಚ್ಯ ಪದ ಬಳಕೆ
    – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

    ರಾಮನಗರ: ಇಲ್ಲಿನ ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದೆ.

    ಶೌಚಾಲಯದ ಗೋಡೆ ಮೇಲೆ `ಪಾಕಿಸ್ತಾನಕ್ಕೆ ಜೈ, ಪಾಕಿಸ್ತಾನಕ್ಕೆ ಜಯವಾಗಲಿ’ ಎಂಬ ಬರಹ ಪತ್ತೆಯಾಗಿದೆ. ದೇಶದ್ರೋಹದ ಬರಹದ ಜೊತೆಗೆ ಕಿಡಿಗೇಡಿಗಳು ಕನ್ನಡಿಗರ ಬಗ್ಗೆಯೂ ಅವಾಚ್ಯ ಬರಹ ಬರೆದಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಿಡಿಗೇಡಿಗಳೇ ಈ ಆಕ್ಷೇಪಾರ್ಹ ಬರಹ ಬರೆದಿರುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಬಟ್ಟೆ ಹಾಕೊಂಡು ಬಂದ್ರೆ ಈ ಬೀಚ್‌ಗೆ ನೋ ಎಂಟ್ರಿ – ಎಲ್ಲಿದೆ ‘ನ್ಯೂಡಿಸ್ಟ್‌ ಬೀಚ್‌’; ಯಾಕೆ ಈ ರೂಲ್ಸ್‌?

    ಕಿಡಿಗೇಡಿಗಳ ಕೃತ್ಯವನ್ನ ಕಾರ್ಖಾನೆಯ ಆಡಳಿತ ಮಂಡಳಿ ನೋಟಿಸ್ ಬೋರ್ಡ್‌ನಲ್ಲಿ ಹಾಕಿದ್ದು, ಈ ರೀತಿಯ ಬರವಣಿಗೆ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿ ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ. ಇದು ಮುಂದುವರೆದು ದೇಶದ ಕಾನೂನಿನ ಚೌಕಟ್ಟಿನಲ್ಲಿ ದೇಶದ್ರೋಹಿ ಅಪರಾಧವಾಗುತ್ತದೆ. ಅಂತಹ ಕಾರ್ಮಿಕರನ್ನ ಪೊಲೀಸರಿಗೆ ಒಪ್ಪಿಸಿ, ಜೈಲು ವಾಸವಾಗುವಂತೆ ಕ್ರಮವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿ ಕೈತೊಳೆದುಕೊಂಡಿದೆ. ಅಲ್ಲದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ಸುಮ್ಮನಾಗಿದೆ. ಇದನ್ನೂ ಓದಿ: IPL 2025 | 10 ತಂಡಗಳ ನಾಯಕರ ಹೆಸರು ಫೈನಲ್‌ – 9 ಮಂದಿ ಭಾರತೀಯರದ್ದೇ ಆರ್ಭಟ

    ವಿಚಾರ ತಿಳಿಯುತ್ತಿದ್ದಂತೆಯೇ ಶುಕ್ರವಾರ ರಾತ್ರಿ ಕಾರ್ಖಾನೆಗೆ ದೌಡಾಯಿಸಿದ ಪೊಲೀಸರು, ಬರಹ ಬರೆದ ಶೌಚಾಲಯದ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರಿಂದ ಮಾಹಿತಿ ಪಡೆದು, ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ಮಾಡಿದರು. ಕಾರ್‌ನ ಸೀಟ್‌ಗಳನ್ನ ತಯಾರು ಮಾಡುವ ಕಾರ್ಖಾನೆಯಲ್ಲಿ ಸುಮಾರು 400 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀಕೃಷ್ಣನ ರಥೋತ್ಸವ ಸೇವೆಯಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ ದಂಪತಿ

    ಈ ಬಗ್ಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅನಾಮಧೇಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಶೌಚಾಲಯದಲ್ಲಿ ಪಾಕಿಸ್ತಾನದ ಪರ ಕನ್ನಡಿಗರ ವಿರುದ್ಧವೂ ಅವಹೇಳನ ಬರಹ ಹಿನ್ನೆಲೆ ಕಿಡಿಗೇಡಿಗಳ ಬಂಧನಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು. ಇದು ದೇಶದ್ರೋಹದ ಕೆಲಸ, ಇಂತಹ ಕೃತ್ಯ ಎಸಗಿರುವವರನ್ನ ಗಡಿಪಾರು ಮಾಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಕೈಗಾದಲ್ಲಿ ಉದ್ಯೋಗ ಮಾಹಿತಿ ನೀಡದೇ ಕನ್ನಡಿಗರಿಗೆ ವಂಚನೆ!

    ಕಾರ್ಖಾನೆ ಆಡಳಿತ ಮಂಡಳಿ ಕೇವಲ ನೋಟಿಸ್ ಬೋರ್ಡ್‌ನಲ್ಲಿ ಎಚ್ಚರಿಕೆ ನೀಡಿ ಸುಮ್ಮನಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಡಲು ವಿಳಂಬ ಮಾಡಿದೆ ಎಂದು ಕಿಡಿಕಾರಿದರು. ಅಲ್ಲದೇ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧವೂ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ – ಸಮಾರಂಭಕ್ಕೆ ಮನೆಮಗ ದರ್ಶನ್ ಬರ್ತಾರಾ?

    ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಪಾಕ್ ಗೆಲುವು ಸಂಭ್ರಮಿಸಿದ್ದಕ್ಕೆ ದೇಶದ್ರೋಹ ಪ್ರಕರಣ- ಮೂವರು ವಿದ್ಯಾರ್ಥಿಗಳ ಬಂಧನ

    ಪಾಕ್ ಗೆಲುವು ಸಂಭ್ರಮಿಸಿದ್ದಕ್ಕೆ ದೇಶದ್ರೋಹ ಪ್ರಕರಣ- ಮೂವರು ವಿದ್ಯಾರ್ಥಿಗಳ ಬಂಧನ

    ಲಕ್ನೋ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದಡಿ ಕಾಶ್ಮೀರದ ಮೂವರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶ ಆಗ್ರಾದಲ್ಲಿ ಬುಧವಾರ ಪೊಲೀಸರು ಬಂಧಿಸಿದ್ದಾರೆ.

    ಕ್ರಿಕೆಟ್‍ನಲ್ಲಿ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ದೇಶದ್ರೋಹ ಪ್ರಕರಣ ದಾಖಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

    YOGI TWEET

    ಅರ್ಷದ್ ಯೂಸಫ್, ಇನಾಯತ್ ಅಲ್ತಾಫ್ ಶೇಖ್, ಶೌಕತ್ ಅಹ್ಮದ್ ಗನಾಯ್ ಬಂಧಿತರು. ಮೂವರು ಸಹ ರಾಜ ಬಲವಂತ್ ಸಿಂಗ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎನ್ನಲಾಗಿದೆ. ಇದನ್ನೂ ಓದಿ: ಟಿ-20 ವಿಶ್ವಕಪ್‍ನಲ್ಲಿ ಪಾಕ್ ಗೆಲುವು ಆಚರಿಸೋರು ದೇಶದ್ರೋಹ ಆರೋಪ ಎದುರಿಸ್ಬೇಕಾಗಿರುತ್ತೆ: ಯೋಗಿ ಆದಿತ್ಯನಾಥ್

    ಧರ್ಮದ ಹೆಸರಿನಲ್ಲಿ ಗುಂಪುಗಳ ನಡುವೆ ವೈರತ್ವ ಪ್ರಚೋದಿಸಿದ ಆರೋಪದ ಮೇಲೆ ಮೂವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ದೇಶದ್ರೋಹ ಪ್ರಕರಣವನ್ನೂ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಖಾತೆ ಟ್ವೀಟ್ ಮಾಡಿದೆ.

    POLICE

    ಭಾರತ-ಪಾಕಿಸ್ತಾನ ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಪರವಾಗಿ ಪೋಸ್ಟ್‍ಗಳನ್ನು ಹಾಕಿ ಅಶಿಸ್ತು ಪ್ರದರ್ಶಿಸಿದ್ದಾರೆಂದು ಆರೋಪಿಸಿ ಮೂವರನ್ನು ಸೋಮವಾರವೇ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿತ್ತು. ಇದನ್ನೂ ಓದಿ: ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

    ಪಂದ್ಯದ ನಂತರ ಇವರ ವಿರುದ್ಧ ದೇಶದ್ರೋಹ ಆರೋಪ ಕೇಳಿಬಂದಿತ್ತು. ದೂರು ಆಧರಿಸಿ ಎಫ್‍ಐಆರ್ ದಾಖಲಿಸಿದ್ದೇವೆ. ತನಿಖೆ ನಂತರ ಅವರನ್ನು ಬಂಧಿಸಲಾಗಿದೆ ಎಂದು ಆಗ್ರಾ ನಗರದ ಎಸ್‍ಪಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.

    ಬಂಧಿತ ವಿದ್ಯಾರ್ಥಿಗಳನ್ನು ಜಗದೀಶಪುರ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ. ನಂತರ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.