ಸಿನಿಮಾ, ನಾಟಕಗಳಲ್ಲಿ ದೈವಾರಾಧನೆ ಪ್ರದರ್ಶನವಾದ ಹಿನ್ನೆಲೆ ಅನೇಕರು ಅನುಕರಣೆ ಮಾಡುತ್ತಿದ್ದಾರೆ. ದೈವಾರಾಧನೆಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ದೈವಗಳ ಅಪಹಾಸ್ಯವಾಗುತ್ತಿದೆ ಎಂದು ದೈವದ ಮುಂದೆ ಭಕ್ತೆ ರೂಪಶ್ರೀ ನೋವು ತೋಡಿಕೊಂಡಿದ್ದರು. ಇದನ್ನೂ ಓದಿ: `ಕಾಂತಾರ’ ನೋಡಿ ಹುಚ್ಚಾಟ ಪ್ರದರ್ಶನ – ವಿಡಿಯೋ ವೈರಲ್ ಆಗ್ತಿದ್ದಂತೆ ಕ್ಷಮೆಯಾಚನೆ
ಈ ಕುರಿತು ಮಾಧ್ಯಮಗಳ ಮುಂದೆ ಮಾತನಾಡಿದ ರೂಪಶ್ರೀ, ದೈವಗಳ ಅಪಹಾಸ್ಯ ತಡೆಯಲು ಹೋದ ನಮಗೆ ಅಪಹಾಸ್ಯ ಮಾಡುತ್ತಿದ್ದಾರೆ. ನಮಗಾದ ನೋವನ್ನ ಪೆರಾರ ಕ್ಷೇತ್ರದ ದೈವಗಳ ಮುಂದೆ ತೋಡಿಕೊಂಡಿದ್ದೇವೆ. ನಾವು ಬೇಡಿಕೊಂಡಾಗ ದೈವ ನಮಗೆ ಅಭಯದ ನುಡಿ ನೀಡಿದೆ ಎಂದು ತಿಳಿಸಿದರು.
‘ಏನು ಬೇಕಾದರೂ ಆಗಲಿ, ನೀವು ಮುಂದುವರೆಯಿರಿ. ನಿಮ್ಮ ಬೆನ್ನ ಹಿಂದೆ ನಾನಿದ್ದೇನೆ’ ಎಂದು ದೈವ ನುಡಿ ನೀಡಿದೆ. ‘ಯಾರು ದೈವಗಳ ವೇಷ ತೊಟ್ಟು ದೊಂಬರಾಟ ಮಾಡುತ್ತಾರೋ ಅವರಿಗೆ ಹುಚ್ಚು ಹಿಡಿಸುತ್ತೇನೆ. ಇಲ್ಲವಾದಲ್ಲಿ ಒಳ್ಳೆ ಬುದ್ಧಿ ನೀಡಿ ಸರಿ ದಾರಿಯಲ್ಲಿ ನಡೆಸುತ್ತೇನೆ’ ಎಂದು ದೈವ ಹೇಳಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಮೋಹನ್‍ಲಾಲ್ ಅಭಿನಯದ ವೃಷಭ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ಈಗೀಗ ಮಹಿಳೆಯರು ದೈವ ಬಂದಂತೆ ವರ್ತಿಸುತ್ತಾರೆ. ತುಳುನಾಡಿನ ಇತಿಹಾಸದಲ್ಲಿ ಈ ರೀತಿ ಕಂಡ ಕಂಡಲ್ಲಿ ದೈವ ಬರುವಂತಹ ಪದ್ಧತಿ ಇಲ್ಲ. ಪವಿತ್ರ ಕ್ಷೇತ್ರಗಳಲ್ಲಿ ಹಾಗೂ ದೈವ ಅವಾಹನೆಗೆ ಅದರದ್ದೇ ನಿಯಮಗಳು ಇದೆ ಎಂದರು.
– ನಾನು ನಿಮ್ಮವ ಅಂತ ಕ್ಷಮಿಸಿಬಿಡಿ ಎಂದ ವೆಂಕಟ್
– ಅತ್ತ ಕಾಂತಾರ ವಿರುದ್ಧ ಸಿಡಿದೆದ್ದ ದೈವಾರಾಧಕರು
ಬೆಂಗಳೂರು: ಕಾಂತಾರ ಚಾಪ್ಟರ್-1 (Kantara Chapter 1) ಜಗತ್ತಿನಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಆದ್ರೆ ದೈವಾರಾಧನೆಯ ಎಳೆ ಹಿಡಿದು ನಿರ್ಮಿಸಿದ ಕಾಂತಾರ ಚಿತ್ರದ ವಿರುದ್ಧ ಇದೀಗ ದೈವಾರಾಧಕರೇ ಸಿಡಿದೆದ್ದಿದ್ದಾರೆ. ದೈವಸ್ಥಾನದ ಮೆಟ್ಟಿಲಲ್ಲೇ ತೀರ್ಪಿಗಾಗಿ ದೈವಾರಾಧಕರು ದೈವದ ಮೊರೆ ಹೋಗಿದ್ದಾರೆ. ತುಳುನಾಡಿನಲ್ಲಿ (Tulunad) ದೈವಾರಾಧಕರು ವರ್ಸೆಸ್ ಕಾಂತಾರ ಫೈಟ್ ತಾರಕಕ್ಕೇರಿದೆ.
ಈ ನಡುವೆ ಕಾಂತಾರ ಸಿನಿಮಾ ನೋಡಿದ ಬಳಿಕ ದೈವದ ಅನುಕರಣೆ ಮಾಡಿ ಹುಚ್ಚಾಟ ಮೆರೆದಿದ್ದ ವೆಂಕಟ್ ಎಂಬಾತ ಕ್ಷಮೆಯಾಚಿಸಿದ್ದಾನೆ. ವಿಡಿಯೋ ಮೂಲಕ ತುಳುನಾಡ ಜನತೆ ಹಾಗೂ ಕಾಂತಾರ ಚಿತ್ರತಂಡಕ್ಕೆ ಕ್ಷಮೆ ಕೇಳಿದ್ದಾನೆ ವೆಂಕಟ್.
ಘಟನೆ ಬಳಿಕ ಮಾನಸಿಕವಾಗಿ ನೊಂದಿದ್ದೇನೆ. ತುಳುನಾಡಿನ ಜನತೆಯಲ್ಲಿ ಕ್ಷಮೆ ಇರಲಿ. ಈ ರೀತಿ ಯಾರೂ ಮಾಡಬೇಡಿ, ನಾನು ನಿಮ್ಮವ ಅಂತ ಕ್ಷಮಿಸಿಬಿಡಿ ಎಂದು ವಿಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾನೆ.
ಕಾಂತಾರ ವಿರುದ್ಧ ಸಿಡಿದೆದ್ದ ದೈವಾರಾಧಕರು
ಕಾಂತಾರ ಚಾಪ್ಟರ್-1 ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ವಿಶ್ವದಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಸಿನಿಮಾದ ಬಗ್ಗೆ ಪ್ರಶಂಸೆಯೂ ವ್ಯಕ್ತವಾಗುತ್ತಿದೆ. ತುಳುನಾಡಿನ ದೈವಾರಾಧನೆಯ ಎಳೆಯನ್ನೇ ಹಿಡಿದುಕೊಂಡು ಬಂದ ಕಾಂತಾರ ಹಾಗೂ ಕಾಂತಾರ ಚಾಪ್ಟರ್-1 ಮೂಲಕ ತುಳುನಾಡಿನ ಆರಾಧ್ಯ ದೈವಗಳಿಗೆ ನಿಂದನೆ ಆಗಿದೆ ಅನ್ನೋ ಅಸಮಧಾನವೂ ಇದೆ.
ಹಾದಿಬೀದಿಯ ಪ್ರದರ್ಶನವನ್ನ ಕಾಂತಾರ ಪ್ರೇರೇಪಿಸಿದೆ
ತುಳುವರ ಆರಾಧ್ಯ ದೈವಗಳನ್ನ ಹಾದಿಬೀದಿಯಲ್ಲಿ ಪ್ರದರ್ಶನ ಮಾಡೋದನ್ನ ಕಾಂತಾರ ಚಿತ್ರವೇ ಪ್ರೇರೇಪಿಸಿದೆ ಅನ್ನೋ ವಿರೋಧ ವ್ಯಕ್ತವಾಗಿದೆ. ಕಾಂತಾರದಲ್ಲಿ ಪಂಜುರ್ಲಿ, ಗುಳಿಗ, ಪಿಲಿದೈವವನ್ನ ತೋರಿಸಿ ರಿಷಬ್ ಶೆಟ್ಟಿ ಮಾಡಿದ ದೈವ ನರ್ತನವನ್ನ ಸಿನಿಮಾ ಥಿಯೇಟರ್‌ನಲ್ಲಿ ವೇಷ ಹಾಕಿ ಕುಣಿಯುತ್ತಿದ್ದಾರೆ. ಸಿನಿಮಾ ಮಂದಿರ ಹಿಡಿದು ರಸ್ತೆ ಮಧ್ಯೆ ಬಂದು ದೈವ ನರ್ತನ ಮಾಡೋವರೆಗೂ ಬಂದು ತಲುಪಿದೆ.
ಪಿಲಿಚಂಡಿ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ
ಸಿನಿಮಾ ಬಿಡುಗಡೆ ಬೆನ್ನಲ್ಲೇ ಅನೇಕರಿಂದ ದೈವಾರಾಧನೆಯ ಅನುಕರಣೆ, ಮೈಮೇಲೆ ದೈವ ಬಂದ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ. ಹೀಗಾಗಿ ತುಳುನಾಡಿದ ದೈವಾರಾಧಕರು, ದೈವ ನರ್ತಕರು ಕಾಂತಾರ ಚಿತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ದೈವಸ್ಥಾನದ ಮೆಟ್ಟಿಲೇರಿದ್ದಾರೆ. ಕಾಂತಾರದಲ್ಲಿ ದೈವಾರಾಧನೆಯ ಬಳಕೆ ಹಾಗೂ ಸಿನಿಮಾ ಬಿಡುಗಡೆಯ ಬಳಿಕ ಅನೇಕರು ವಿಕೃತಿ ಮೆರೆದಿರೋದ್ರ ಜೊತೆಗೆ ಸಾಮಾಜಿಕ ಜಾಲತಾಣದಲ್ಲೂ ಪರ ವಿರೋಧ ಚರ್ಚೆಗಳು ಆಗುತ್ತಿದೆ. ಹೀಗಾಗಿ ಇಂದು ದೈವಾರಾಧಕರು ಹಾಗೂ ದೈವ ನರ್ತಕರು ದೈವ ಕ್ಷೇತ್ರದಲ್ಲೇ ಕಾಂತಾರ ಸಿನಿಮಾದ ವಿರುದ್ಧ ದೂರು ನೀಡಿದ್ದಾರೆ. ಮಂಗಳೂರು ಹೊರವಲಯದ ಬಜಪೆ ಸಮೀಪದ ಪೆರಾರ ಶ್ರೀ ಬ್ರಹ್ಮಬಲವಂಡಿ ಪಿಲಿಚಂಡಿ ದೈವಸ್ಥಾನದಲ್ಲಿ ದೈವ ನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್ 1 ಸಿನಿಮಾದ (Kantara Chapter 1) ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ದೈವಾರಾಧನೆ (Daivaradhane) ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು ದೈವಸ್ಥಾನದ ಮೆಟ್ಟಿಲೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರಿನ (Mangaluru) ಬಜಪೆ ಸಮೀಪ ಪೆರಾರ ಬ್ರಹ್ಮ ಬಲವಂಡಿ, ಪಿಲಿಚಂಡಿ ದೈವಸ್ಥಾನದಲ್ಲಿ ದೈವನರ್ತಕರು ಹಾಗೂ ದೈವಾರಾಧಕರು ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾ ಹಾಗೂ ದೈವಾರಾಧನೆಯ ಅಪಹಾಸ್ಯದ ವಿರುದ್ಧ ದೈವಸ್ಥಾನದ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!
ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ, ಗುಳಿಗ, ಪಿಲಿ ದೈವದ ಆವೇಶ ಸೇರಿದಂತೆ ದೈವ ನರ್ತನದ ಬಳಕೆ ಮಾಡಲಾಗಿತ್ತು. ಸಿನಿಮಾ ಬಿಡುಗಡೆ ಬೆನ್ನಲ್ಲೇ ಥಿಯೇಟರ್ ಸೇರಿದಂತೆ ಅನೇಕ ಕಡೆ ಹಲವರು ದೈವಾರಾಧನೆಯ ಅನುಕರಣೆ ಮಾಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಯೂ ಜೋರಾಗಿದೆ.
ಇನ್ನು ಕೆಲವರು ಮೈಮೇಲೆ ದೈವ ಬಂದ ರೀತಿಯಲ್ಲಿ ವಿಕೃತಿ ಮೆರೆದಿದ್ದರು. ಇದೆಲ್ಲವನ್ನು ಖಂಡಿಸಿ ದೈವಾರಾಧಕರು ಇಂದು ದೈವಕ್ಷೇತ್ರದಲ್ಲೇ ಕಾಂತಾರ ಸಿನಿಮಾ ಮತ್ತು ದೈವಾರಾಧನೆಯ ಅಪಹಾಸ್ಯ ಮಾಡುವವರ ವಿರುದ್ಧ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.
– ಕಾಂತಾರ ಚಾಪ್ಟರ್ 1 ವೀಕ್ಷಣೆ ವೇಳೆ ಅಭಿಮಾನಿಗಳ ಹುಚ್ಚಾಟಕ್ಕೆ ಬೇಸರ
ದೈವಾರಾಧನೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯ. ಅದನ್ನು ಹಾಸ್ಯಾಸ್ಪದವಾಗಿ ಅಣಕು ಪ್ರದರ್ಶನ ಮಾಡಬೇಡಿ ಎಂದು ‘ಕಾಂತಾರ ಚಾಪ್ಟರ್ 1’ ಸಿನಿಮಾ ಪ್ರೇಕ್ಷಕರಲ್ಲಿ ಹೊಂಬಾಳೆ ಫಿಲ್ಮ್ಸ್ ಮನವಿ ಮಾಡಿಕೊಂಡಿದೆ.
ಕಾಂತಾರ ಚಾಪ್ಟರ್ 1 ಸಿನಿಮಾ ಥಿಯೇಟರ್‌ಗಳಲ್ಲಿ ಕೆಲ ಪ್ರೇಕ್ಷಕರ ಅನುಚಿತ ವರ್ತನೆಗೆ ಹೊಂಬಾಳೆ ಫಿಲ್ಮ್ಸ್ ಬೇಸರ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ.
ಪೋಸ್ಟ್‌ನಲ್ಲಿ ಏನಿದೆ?
‘ತುಳುನಾಡಿನ ಸಂಸ್ಕೃತಿಯ ಪ್ರೌಢತೆಯ ಸಂಕೇತವಾದ ದೈವಾರಾಧನೆ ನಮ್ಮ ನಂಬಿಕೆ, ಭಕ್ತಿ ಹಾಗೂ ತಾಯ್ನಾಡಿನ ಹೆಮ್ಮೆಯ ಪ್ರತಿರೂಪವಾಗಿದೆ. ಕಾಂತಾರ ಮತ್ತು ಕಾಂತಾರ ಚಾಪ್ಟರ್ 1 ಚಿತ್ರಗಳನ್ನು ನಾವು ಗೌರವದೊಂದಿಗೆ ದೈವಗಳ ಮಹಿಮೆಯನ್ನು ಕೊಂಡಾಡುವ ಸದುದ್ದೇಶದಿಂದ ನಿರ್ಮಿಸಿದ್ದೇವೆ. ದೈವಾರಾಧನೆ ಗೌರವ ಹಾಗೂ ಅಚಲ ಭಕ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ನಾವು ಶ್ರಮಪಟ್ಟು ಕೆಲಸ ಮಾಡಿದ್ದೇವೆ. ಇದರೊಂದಿಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾರಿ ಯಶಸ್ವಿಯಾಗಿದ್ದೇವೆ. ಪ್ರೇಕ್ಷಕರಿಂದ ಬಂದಿರುವ ಅಪಾರವಾದ ಪ್ರೀತಿಗೆ ಹಾಗೂ ಪ್ರೋತ್ಸಾಹಕ್ಕೆ ನಾವು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ.
ಆದಾಗ್ಯೂ, ಇತ್ತೀಚೆಗೆ ಕೆಲವು ಜನರು ಚಿತ್ರದಲ್ಲಿ ತೋರಿಸಿದ ದೈವಪಾತ್ರಗಳನ್ನು ಅನುಕರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಚಿತ್ರಗಳಲ್ಲಿ ತೋರಿಸಲಾದ ದೈವಾರಾಧನೆ ಅಥವಾ ದೈವಪೂಜೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯಕ್ಕೆ ಆಧಾರಿತವಾಗಿದೆ. ಇದನ್ನು ಹಾಸ್ಯಾಸ್ಪದವಾಗಿ ಅಣುಕು ಪ್ರದರ್ಶನ ಮಾಡುವಂತಿಲ್ಲ. ಇಂತಹ ಕೃತ್ಯಗಳು ನಮ್ಮ ನಂಬಿಕೆ ಮತ್ತು ಧಾರ್ಮಿಕ ಸಂವೇದನೆಯನ್ನು ಹೀನಗೊಳಿಸುತ್ತವೆ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ತೀವ್ರ ನೋವುಂಟು ಮಾಡುತ್ತವೆ.
ಆದ್ದರಿಂದ, ಹೊಂಬಾಳೆ ಫಿಲ್ಮ್ಸ್, ಜನತೆ ಹಾಗೂ ಪ್ರೇಕ್ಷಕರಿಗೆ ಮನವಿ ಮಾಡಿಕೊಳ್ಳುತ್ತದೆ. ದೈವಪಾತ್ರಗಳನ್ನು ಅನುಕರಿಸುವುದು, ಧ್ವನಿಯನ್ನು ಹೋಲುವುದು ಅಥವಾ ಅವರ ರೂಪ-ವೇಷಧಾರಣೆ ಮಾಡುವುದು ಸೇರಿದಂತೆ ಯಾವುದೇ ರೀತಿಯ ಕೃತ್ಯಗಳಿಂದ ದೂರವಿರಿ. ಇದನ್ನು ಚಿತ್ರಮಂದಿರಗಳಲ್ಲಿ ಆಗಲಿ, ಸಾರ್ವಜನಿಕ ಸ್ಥಳಗಳಲ್ಲಿ ಆಗಲಿ ಎಲ್ಲೂ ಮಾಡುವಂತಿಲ್ಲ. ದೈವಾರಾಧನೆಯ ಪವಿತ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಆರಾಧನೆಯ ಆಧ್ಯಾತ್ಮಿಕ ಮಹತ್ವವನ್ನು ಎಲ್ಲರೂ ಗುರುತಿಸಿ, ಗೌರವದಿಂದ ನಡೆದುಕೊಳ್ಳಬೇಕು. ನಮ್ಮ ಚಿತ್ರಗಳ ಮೂಲಕ ನಾವು ಸಂಭ್ರಮಿಸಿದ ನಂಬಿಕೆಯನ್ನು ಯಾವುದೇ ಸಂದರ್ಭದಲ್ಲಿ ಹಾಸ್ಯಾಸ್ಪದವಾಗಲು ಅವಕಾಶ ನೀಡಬಾರದು. ಈ ಅಮೂಲ್ಯ ಸಾಂಸ್ಕೃತಿಕ ಪರಂಪರೆಯ ಪವಿತ್ರತೆಯನ್ನು ಕಾಪಾಡಲು ನೀವು ನೀಡುತ್ತಿರುವ ನಿರಂತರ ಪ್ರೋತ್ಸಾಹ ಮತ್ತು ಸಹಕಾರಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು’ ಎಂದು ಹೊಂಬಾಳೆ ಫಿಲ್ಮ್ಸ್ ಮನವಿ ಮಾಡಿಕೊಂಡಿದೆ.
ದೇಶ-ವಿದೇಶಗಳಲ್ಲಿ ಅ.2 ರಂದು ರಿಲೀಸ್ ಆದ ಕಾಂತಾರ ಚಾಪ್ಟರ್ 1 ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲೆಡೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾ ನೋಡಿ ಕೆಲ ಪ್ರೇಕ್ಷಕರು ಭಾವೋದ್ವೇಗಕ್ಕೆ ಒಳಗಾಗಿ, ದೈವದಂತೆ ನರ್ತಿಸುವುದು, ಕೂಗುವುದು.. ಹೀಗೆ ಹಾಸ್ಯಾಸ್ಪದ ರೀತಿಯಲ್ಲಿ ಅಣಕು ಪ್ರದರ್ಶನ ಮಾಡುತ್ತಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ದೈವಗಳ ವಿಚಾರವಾಗಿ ಹೀಗೆ ಹುಚ್ಚಾಟ ಮಾಡುವವರಿಗೆ ಬುದ್ಧಿ ಹೇಳಿ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ತುಳುಕೂಟ ಪತ್ರ ಬರೆದಿತ್ತು. ಅದರಂತೆ ಹೊಂಬಾಳೆ ಫಿಲ್ಮ್ಸ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ.
ಮಂಗಳೂರು: ಸಿನಿಮಾ (Cinema) ಮತ್ತು ನಾಟಕಗಳಲ್ಲಿ (Drama) ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಇಲ್ಲಿನ ದೈವಾರಾಧಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ (Dakshina Kannada DC) ಮನವಿ ಸಲ್ಲಿಸಿದ್ದಾರೆ.
`ಕಾಂತಾರ’ (Kantara) ಸಿನಿಮಾದಲ್ಲಿ ದೈವದ ಅಣುಕು ವೇಷ ಹಾಕಿರುವ ರಿಷಬ್ ಶೆಟ್ಟಿ (Rishab Shetty), `ಶಿವದೂತೆ ಗುಳಿಗೆ’ ನಾಟಕದಲ್ಲಿ ದೈವದ ಅಣುಕು ವೇಷ ಧರಿಸಿದ ಸ್ವರಾಜ್ ಹಾಗೂ `ಕಾವೇರಿ’ ಧಾರಾವಾಹಿಯ ಸಿ.ಕೆ ಪ್ರಶಾಂತ್ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಆಖಲಿಸಿ ತನಿಖೆ ನಡೆಸುವಂತೆ ತುಳುನಾಡ ದೈವಾರಾಧನಾ ಸಂರಕ್ಷಣಾ ವೇದಿಕೆ ಮನವಿ ಮಾಡಿದೆ.
ದೈವಾರಾಧಕರ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ್ (VHP), ಬಜರಂಗದಳ (Bhajarandal) ಸಾಥ್ ನೀಡಿದೆ. ಮುಂದೆ ಟಿವಿ, ಸಿನೆಮಾ ನಾಟಕಗಳಲ್ಲಿ ದೈವಾರಾಧನೆಯ ಪ್ರದರ್ಶನವಾಗಬಾರದು. ಮುಂದೆ ಕಂಡ ಕಂಡಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಮುತ್ತಿಗೆ ಹಾಕುತ್ತೇವೆ. ಈ ಬಗ್ಗೆ ರಿಷಬ್ ಶೆಟ್ಟಿಗೂ ಎಚ್ಚರಿಕೆ ನೀಡುತ್ತೇವೆ ಎಂದು ಬಜರಂಗದಳದ ಮುಖಂಡ ಶರಣ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಶೆಟ್ಟರ್‌ಗೆ ತಟ್ಟಿತು ಕೈ ಕಾರ್ಯಕರ್ತರ ಪ್ರತಿಭಟನೆ ಬಿಸಿ
ಈ ಕುರಿತು ಬೆಳ್ತಂಗಡಿ ನಳಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಾಭಾಕರ್ ಮಾತನಾಡಿ, ತುಳುನಾಡಿನಲ್ಲಿ ಹುಟ್ಟಿ ತುಳುನಾಡು ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಅಂದ್ರೆ ನಾವು ಸುಮ್ಮನೆ ಕೂರಲು ಸಾಧ್ಯವಿಲ್ಲ. ಮೂಲ ಪರಂಪರೆಯಿಂದ ನಾವು ಮಾಡಿಕೊಂಡು ಬಂದ ಚಾಕರಿ ಅದರೂ ದೈವದ ಚಾಕರಿಯನ್ನು ಮಾಡಿದವರೇ ಮಾಡಬೇಕು. ಆದ್ರೆ ದೈವದ ಬಣ್ಣ, ಹಚ್ಚಿ, ಗಗ್ಗರ ಕಟ್ಟಿಕೊಂಡು ಇಷ್ಟಬಂದಂತೆ ಮಾಡುತ್ತಿದ್ದಾರೆ. ಕಾಂತಾರ ಸಿನಿಮಾದಲ್ಲಿ ಮಾಡಿದ್ದಾರೆ. ಅವರಿಗೆ ಏನು ನೈತಿಕತೆ ಇದೆ? ನಮ್ಮ ದೈವವನ್ನು ಬೀದಿಬದಿಗೆಲ್ಲ ಕೊಂಡೊಯ್ದು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಗುಳಿಗ ದೈವ ನಂಬಿಕೆ ಇರುವ ಸ್ಥಳ. ಇನ್ನೂ ಕಾಂತಾರ-2 ಬರುತ್ತಿದೆ. ಯಾವ ಕಾಂತಾರ ಸಿನಿಮಾ ಬಂದರೂ ನಾವು ಹೋರಾಟಕ್ಕೆ ಇಳಿಯೋದೆ. ಇವರು ದುಡ್ಡು ಮಾಡುವುದಿದ್ದರೆ, ದೇಶದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನ್ನಿಟ್ಟುಕೊಂಡು ಮಾಡಲಿ. ವಿಷ್ಣುವರ್ಧನ್ ಅವರು ಸಿನಿಮಾ ಮಾಡಿದ್ದರು. ಆದ್ರೆ ಯಾವೊಂದು ಸಮಾಜಕ್ಕೆ ಅನ್ಯಾಯ ಆಗುವ ರೀತಿಯಲ್ಲಿ ಮಾಡಲಿಲ್ಲ. ಇದು ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ – ಮೋದಿ, ನಡ್ಡಾ ನೇತೃತ್ವದಲ್ಲಿ 2 ದಿನ ಹೈವೋಲ್ಟೇಜ್ ಸಭೆ
ಬೆಂಗಳೂರು: ವಿಧಾನಸಭೆಯ ಅಧಿವೇಶನದಲ್ಲೂ (Assembly Session) ದೈವಾರಾಧನೆ (Daivaradhane) ವಿಚಾರ ಸದ್ದು ಮಾಡಿದೆ. ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್ ಕುಮಾರ್ (Sunil Kumar) ಗರಂ ಆದರು.
ಅಧಿವೇಶನದ ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ ಪ್ರಸ್ತಾಪಿಸಿದ ಸುನೀಲ್ ಕುಮಾರ್, ದಕ್ಷಿಣ ಕನ್ನಡ ಸೇರಿದಂತೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ದೈವಾರಾಧನೆ ಪದ್ಧತಿ ಇದೆ. ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ ಎಂದು ಗುಡುಗಿದರು. ಇದನ್ನೂ ಓದಿ: ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್
ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa), ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.
ದೈವಾರಾಧನೆಯು ತುಳುನಾಡಿನ ಆರಾಧನೆಯಲ್ಲಿ ಪ್ರಮುಖವಾದದ್ದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ದೈವಾರಾಧನೆ ಸಂಪ್ರದಾಯ ಆಚರಣೆಯಲ್ಲಿದೆ. ರಿಷಬ್ ಶೆಟ್ಟಿಯ ‘ಕಾಂತಾರ’ ಸಿನಿಮಾ ಬಂದ ನಂತರ ದೈವಾರಾಧನೆ ಸಂಸ್ಕೃತಿ ದೇಶ-ವಿದೇಶಗಳಲ್ಲಿ ಹೆಚ್ಚು ಚಿರಪರಿಚಿತವಾಯಿತು. ಇದನ್ನೂ ಓದಿ: ಕುಮಾರಸ್ವಾಮಿ ಯಾವತ್ತೂ ಹಿಟ್ & ರನ್ ಕೇಸ್ – ಸಿಎಂ ತಿರುಗೇಟು
ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.
ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆ ನಡೆಸಿದವರು, ಮುಂದೊಂದು ದಿನ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ದೈವಾರಾಧಕರು ತಿಳಿಸಿದ್ದಾರೆ. ದೈವಾರಾಧನೆ ಸಿನಿಮಾ ಮಾಡಿದರೆ, ಮುಲಾಜಿಲ್ಲದೇ ವಿರೋಧಿಸಲಾಗುವುದು ಎಂದಿದ್ದಾರೆ.
ದೈವದ ಕೋಲಾ (Buta Kola), ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದಾರೆ ಎಂದು ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಿವೆ. ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ
ಕರಾವಳಿ (Karavali) ಹೊರಗಿನ ದೈವಾರಾಧನೆ ವಿರುದ್ಧ ಮಂಗಳೂರಿನ ಜನ ಸಿಡಿದೆದ್ದಿದ್ದಾರೆ. ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ (Koragajja) ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು (Mangaluru) ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ಮೈಸೂರು ಮೂಲದ ಕೆಲ ಭಕ್ತರೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶ. ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಿನಿಮಾ ಮತ್ತು ಸಾಮಾಜಿಕ ತಾಣಗಳ ಕಾರಣದಿಂದ ಈ ದಂಧೆ ನಡೀತಾ ಇದೆ. ಇದನ್ನ ನಿಲ್ಲಿಸದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಉಡುಪಿ: ದೈವಾರಾಧಾನೆ ಹಿಂದುತ್ವದ ಭಾಗವಲ್ಲವೆಂದ ನಟ ಚೇತನ್ (Actor Chetan) ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆ (Karkala Police Station) ಯಲ್ಲಿ ದಾಖಲು ಮಾಡಲಾಗಿದೆ.
ಹಿಂದೂ ಜಾಗರಣಾ ವೇದಿಕೆ (Hindu Jagaran Vedike) ವತಿಯಿಂದ ಈ ದೂರು ದಾಖಲಿಸಲಾಗಿದೆ. ದೂರಿನಲ್ಲಿ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು
ಚೇತನ್ ಹೇಳಿದ್ದೇನು..?: ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗ ಎಂದು ನಿರ್ದೇಶಕ ರಿಷಬ್ ಶೆಟ್ಟಿ (Director Rishab Shetty) ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಮಹತ್ವ ಪಡೆದುಕೊಂಡಿತ್ತು. ಈ ಮಾತಿಗೆ ವಿರೋಧ ಎನ್ನುವಂತೆ ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆ ನೀಡಿದ್ದರು. ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ವಿರೋಧಿಸಿದ್ದರು. ಈ ಕುರಿತು ಪರ ವಿರೋಧ ಚರ್ಚೆ ಕೂಡ ನಡೆದಿತ್ತು. ಇದಕ್ಕೆ ಚೇತನ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ರಿಷಬ್ ಬಳಸಿದ `ಹಿಂದೂ ಸಂಸ್ಕೃತಿ’ ಪದಕ್ಕೆ ನನ್ನ ಆಕ್ಷೇಪಣೆ ಇದೆ ಎಂದಿದ್ದರು. ಚೇತನ್ ಹೇಳಿಕೆ ಬಾರೀಊ ವಿವಾದ ಸೃಷ್ಟಿಸಿತ್ತು.
ಈ ಬೆನ್ನಲ್ಲೇ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಚೇತನ್, ನಾನು ಚರ್ಚೆಯ ಮೂಲಕ ಗೆಲ್ಲಬೇಕು. ಸಂವಾದದ ಮೂಲಕ ಅರ್ಥ ಮಾಡಿಕೊಳ್ಳಬೇಕು. ನಾನು ಆಡಿದ ಮಾತುಗಳಲ್ಲಿ ಏನು ಸುಳ್ಳು ಇದೆ ಹೇಳಲಿ. ಯಾರಿಗೆ ನನ್ನನ್ನು ಸೋಲಿಸಲು ಆಗುವುದಿಲ್ಲವೋ, ಅವರು ಪೌರತ್ವದ ಬಗ್ಗೆ ಮಾತನಾಡುತ್ತಾರೆ. ನನ್ನ ಹುಟ್ಟು ನನ್ನ ಕೈಯಲ್ಲಿ ಇಲ್ಲ. ಯಾರ ಕೈಯಲ್ಲೂ ಇಲ್ಲ. ನಾನು ಯಾವಾಗಲೂ ಸತ್ಯದ ಪರವಾಗಿ ಇರುತ್ತೇನೆ. ಹಾಗಾಗಿ ಈ ರೀತಿಯ ಮಾತುಗಳನ್ನು ಕೇಳಿಸಿಕೊಳ್ಳುವುದು ಅನಿವಾರ್ಯ ಎಂದಿದ್ದರು. ಇದನ್ನೂ ಓದಿ: ಆಮದು ಮಾಡಿಕೊಂಡ ಧರ್ಮಗಳು ಎಂದು ಚೇತನ್ ಮತ್ತೆ ಕಿಡಿ
Live Tv
[brid partner=56869869 player=32851 video=960834 autoplay=true]