Tag: ದೈಹಿಕ ಶಿಕ್ಷಣ

  • ಎನ್‍ಇಪಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಅಶ್ವತ್ಥನಾರಾಯಣ

    ಎನ್‍ಇಪಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಅಶ್ವತ್ಥನಾರಾಯಣ

    ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಂಸ್ಕೃತಿಕ, ದೈಹಿಕ ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಒತ್ತು ಕೊಡಲಾಗಿದ್ದು, ಇವೆಲ್ಲವನ್ನೂ ಕಡ್ಡಾಯಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು, ಕನ್ನಡ ರಾಜ್ಯೋತ್ಸವ ಮತ್ತು 2021-22ನೇ ಸಾಲಿನ ಪಠ್ಯೇತರ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಎಇಪಿಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ವಿಕಸನದ ಗುರಿ ಇಟ್ಟುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಕಾಲೇಜುಗಳ ಸಂಪೂರ್ಣ ಡಿಜಿಟಲೀಕರಣವನ್ನು ಮಾಡಿದ್ದು, ಈ ವಿಚಾರದಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಬೋಧನಾ ವ್ಯವಸ್ಥೆಯ ಡಿಜಿಟಲೀಕರಣದಿಂದ ಶಿಕ್ಷಣದ ಗುಣಮಟ್ಟ ಸಾಕಷ್ಟು ಸುಧಾರಿಸಲಿದೆ ಎಂದು ನುಡಿದರು.

     Ashwath narayan

    ಸರ್ಕಾರಿ ಕಾಲೇಜುಗಳಲ್ಲಿ ಇರುವಂತಹ ಆಧುನಿಕ ವ್ಯವಸ್ಥೆಗಳು ರಾಜ್ಯದ ಖಾಸಗಿ ವಿ.ವಿ.ಗಳಲ್ಲೂ ಇಲ್ಲ. ಇವತ್ತು ಇಡೀ ಭಾರತವೇ ಬೆಂಗಳೂರಿನತ್ತ ನೋಡುತ್ತಿದ್ದು, ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ರಾಜ್ಯದ ರಾಜಧಾನಿಯು 23ನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಭಾರತದ ಬೇರೆ ಯಾವ ನಗರಗಳೂ ಇಲ್ಲ ಎಂದು ಅವರು ಉಲ್ಲೇಖಿಸಿದರು. ಇದನ್ನೂ ಓದಿ: ಪ್ಯಾರಾ ಒಲಿಂಪಿಕ್ಸ್ ಆಟಗಾರ ಸುಹಾಸ್ ಯತೀರಾಜ್‍ಗೆ ಬಂಪರ್ – ವಿಶೇಷ ಗೌರವಕ್ಕೆ ಭಾಜನರಾದ ಕನ್ನಡಿಗ

    ಬೆಂಗಳೂರು ಇವತ್ತು ಸುವರ್ಣಾವಕಾಶಗಳ ನಗರವಾಗಿದೆ. ವಿದ್ಯಾರ್ಥಿಗಳು ಕೇವಲ ಅದೃಷ್ಟವನ್ನು ನಂಬಿ ಕೂರದೇ, ಶ್ರಮ ವಹಿಸಿ ಸಾಧನೆ ಮಾಡಿ, ಇರುವ ಅವಕಾಶಗಳನ್ನು ತಮ್ಮದನ್ನಾಗಿಸಿಕೊಳ್ಳಬೇಕು ಎಂದು ಹೇಳಿದರು.

    ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ಜಗತ್ತಿನ ಮೂಲೆಮೂಲೆಗಳಲ್ಲೂ ಇಂದು ಕನ್ನಡಿಗ ಸಾಧಕರಿದ್ದಾರೆ. ವಿದ್ಯಾರ್ಥಿ ಸಮುದಾಯವು ಇಂಥವರಿಂದ ಪ್ರೇರಣೆ ಪಡೆದುಕೊಳ್ಳಬೇಕು. ನಮ್ಮ ನಾಡು-ನುಡಿ ಚೆನ್ನಾಗಿರಬೇಕೆಂದರೆ ಕನ್ನಡಿಗರು ಸದೃಢವಾಗಿ ಬೆಳೆಯಬೇಕು ಎಂದರು. ಇದನ್ನೂ ಓದಿ: ಬೊಮ್ಮಾಯಿ ಗೃಹಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ನಡೆದಿದೆ: ಸುರ್ಜೆವಾಲಾ

    ಕಾರ್ಯಕ್ರಮದಲ್ಲಿ ನಿರೂಪಕಿ ಅಪರ್ಣಾ, ಪ್ರಾಂಶುಪಾಲರಾದ ಡಾ.ಡಿ.ಎಸ್. ಪ್ರತಿಭಾ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರತ್ನಾಕರ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಎಸ್.ಕೌಸಲ್ಯಾ ಮುಂತಾದವರು ಉಪಸ್ಥಿತರಿದ್ದರು.

  • ಶಾಲೆಗಳಲ್ಲಿ ದೈಹಿಕ ಶಿಕ್ಷಣ, ಶಿಕ್ಷಕರ ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ: ನಾರಾಯಣಗೌಡ

    ಶಾಲೆಗಳಲ್ಲಿ ದೈಹಿಕ ಶಿಕ್ಷಣ, ಶಿಕ್ಷಕರ ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ: ನಾರಾಯಣಗೌಡ

    – ಮುಂದಿನ ಒಲಿಂಪಿಕ್ಸ್‌ಗೆ ನಮ್ಮ ರಾಜ್ಯದಿಂದ 100 ಕ್ರೀಡಾಪಟುಗಳು

    ಬೆಂಗಳೂರು: ಕಳೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ದೇಶ ಉತ್ತಮ ಸಾಧನೆ ಮಾಡಿದೆ. ಇನ್ನೂ ಹೆಚ್ಚಿನ ಸಾಧನೆ ಆಗಬೇಕೆಂದರೆ ಈಗಲೇ ಸಿದ್ಧತೆ ಮಾಡಬೇಕು. ಬಾಲ್ಯದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿ ಮೂಡುವಂತಾಗಬೇಕು. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.

    ಕ್ರೀಡೆಯಲ್ಲಿ ಮಕ್ಕಳಿಗೆ ಸೂಕ್ತ ತರಬೇತಿಯೂ ಸಿಗಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಸಾಧನೆ ಸಾಧ್ಯ. ಅದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ನೀಡಬೇಕು. ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆ ಭರ್ತಿಯಾಗಬೇಕು. ಶಾಲೆಯಲ್ಲಿ ಪ್ರತಿ ನಿತ್ಯ ವ್ಯಾಯಾಮ, ಕ್ರೀಡೆಗೆ ಒಂದು ಗಂಟೆ ಸಮಯ ಮೀಸಲಿಡಿ. ವಿದ್ಯಾರ್ಥಿ ದೆಸೆಯಲ್ಲೇ ಕ್ರೀಡೆಯ ತರಬೇತಿ ಆಗಬೇಕು. ಆಸಕ್ತಿ ಇರುವ ಸಮರ್ಥ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮುಂದುವರಿಯುತ್ತಾರೆ. ಕ್ರೀಡಾಂಗಣ, ಕ್ರೀಡಾ ಸೌಲಭ್ಯ ಇದ್ದ ಮಾತ್ರಕ್ಕೆ ಸಾಧನೆ ಆಗಲಾರದು. ಬುನಾದಿ ಸರಿಯಾಗಿರಬೇಕು. ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಂತದಲ್ಲೇ ವ್ಯಾಯಾಮ, ಕ್ರೀಡೆ ಬಗ್ಗೆ ಸೂಕ್ತ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಬೇಕು. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ 39,308 ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇದೆ. ಇದು ಬೆಳೆವ ಸಿರಿಯನ್ನು ಮೊಳಕೆಯಲ್ಲೇ ಚಿವುಟಿದಂತೆ ಆಗುತ್ತಿದೆ. ಮುಂದಿನ ಒಲಿಂಪಿಕ್ಸ್‍ಗೆ ನಮ್ಮ ರಾಜ್ಯದಿಂದ 100 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರೀಡಾಪಟುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಬೇಕೆಂದರೆ ಈಗಿನಿಂದಲೇ ಸಿದ್ಧತೆ ಆಗಬೇಕು. ದೈಹಿಕ ಶಿಕ್ಷಕರ ನೇಮಕವಾಗಬೇಕು. ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಇದು ಸಹಕಾರಿಯಾಗುತ್ತದೆ. ಶಿಕ್ಷಣ ಸಚಿವರು ಕಡ್ಡಾಯವಾಗಿ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಕೇವಲ ಕ್ರೀಡಾಪಟುವಾಗುವುದಕ್ಕೆ ಮಾತ್ರವಲ್ಲ, ನಮ್ಮ ಜೀವನವನ್ನು ಸುಂದರವಾಗಿ ರೂಪಿಸುವಲ್ಲಿ ವ್ಯಾಯಾಮ ಮತ್ತು ಕ್ರೀಡೆಗಳು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ವ್ಯಾಯಾಮ ಮತ್ತು ಕ್ರೀಡೆಗಳು ಸುಲಭವಾದ ಮಾರ್ಗಗಳು. ಕ್ರೀಡೆ ಮತ್ತು ವ್ಯಾಯಾಮ ಸ್ಪರ್ಧಾತ್ಮಕ ಭಾವನೆ, ಸ್ನೇಹಪರ ಭಾವನೆ, ಶಿಸ್ತು, ಆತ್ಮಸ್ಥೈರ್ಯ, ಕೌಶಲ್ಯತೆಯನ್ನು ಮೂಡಿಸಿ ಶಾರೀರಿಕ ಸಂಪತ್ತನ್ನು ಹಾಗೂ ಬೌದ್ದಿಕ ಸಾಮಥ್ರ್ಯವನ್ನು ವೃದ್ಧಿಸುತ್ತದೆ. ಕ್ರೀಡೆಯು ಮನರಂಜನೆ ನೀಡುವುದರೊಂದಿಗೆ ಪ್ರೀತಿ, ಸಹಕಾರ, ಸಹಬಾಳ್ವೆ, ದೇಶಪ್ರೇಮದ ಭಾವೈಕ್ಯತೆಯನ್ನು ಬೆಳೆಸುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಶಾರೀರಿಕ ಬೆಳವಣಿಗೆಯೊಂದಿಗೆ ಆರೋಗ್ಯದ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯ. ದೈಹಿಕ ಆರೋಗ್ಯ, ವ್ಯಕ್ತಿತ್ವ ನಿರ್ಮಾಣ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಶಾರೀರಿಕ ಚಟುವಟಿಕೆಗಳ ಮೂಲಕ ಸಾಧಿಸುವುದು ದೈಹಿಕ ಶಿಕ್ಷಣದ ಮುಖ್ಯ ಉದ್ದೇಶ. ದೈಹಿಕ ಶಿಕ್ಷಣದಿಂದ ನಾಯಕತ್ವ, ಹೋರಾಟ ಮನೋಭಾವ, ಸೋಲನ್ನು ಎದುರಿಸುವ ಶಕ್ತಿ, ಮುಂತಾದ ಗುಣಗಳು ಬೆಳೆಯುತ್ತವೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಕ್ರಮಗಳು ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳು ಕೂಡ ಅಷ್ಟೇ ಮುಖ್ಯ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನೀರಜ್‌ ಚೋಪ್ರಾ ತರಬೇತಿಗಾಗಿ 7 ಕೋಟಿ ರೂ. ಖರ್ಚು ಮಾಡಿದ್ದ ಸರ್ಕಾರ

    ಈ ಹಿಂದೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯ ಒಂದು ಗಂಟೆ ಅವಧಿ ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ಪದ್ಧತಿಯನ್ನು ಕೈಬಿಟ್ಟಿರುವುದು, ಕ್ರಮೇಣವಾಗಿ ಕಡಿಮೆ ಮಾಡುತ್ತಿರುವುದು ವಿಷಾದದ ಸಂಗತಿ. ವಿದ್ಯಾರ್ಥಿಗಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಸಹ ಮುಖ್ಯವಾಗಿರುವುದರಿಂದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯ ಒಂದು ಗಂಟೆ ಅವಧಿಯನ್ನು ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡುವುದು ಅತ್ಯವಶ್ಯಕವಾಗಿದೆ. ಇದನ್ನು ಹೊಸ ಶಿಕ್ಷಣ ನೀತಿಯಲ್ಲೂ ಸಹ ಉಲ್ಲೇಖಿಸಲಾಗಿದೆ. ಆದುದರಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಪ್ರತಿನಿತ್ಯ ಕನಿಷ್ಠ ಒಂದು ಗಂಟೆ ಅವಧಿಯನ್ನು ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡುವಂತೆ ಸೂಚಿಸುವಂತೆ ಶಿಕ್ಷಣ ಸಚಿವರಿಗೆ ನಾರಾಯಣಗೌಡ ಪತ್ರ ಬರೆದು ಮನವಿ ಮಾಡಿಕೊಂಡಿದ್ದು, ಸಂಬಂಧಪಟ್ಟವರಿಗೆಲ್ಲಾ ಕಟ್ಟುನಿಟ್ಟಾಗಿ ನಿರ್ದೇಶನಗಳನ್ನು ನೀಡುವಂತೆ ಕೋರಿದ್ದಾರೆ. ಖಾಲಿ ಇರುವ ದೈಹಿಕ ಶಿಕ್ಷಕ ಹುದ್ದೆಗಳನ್ನು ಆದ್ಯತೆಯ ಮೇಲೆ ಶೀಘ್ರವಾಗಿ ಭರ್ತಿ ಮಾಡಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಲು ಅನುಕೂಲ ಕಲ್ಪಿಸುವಂತೆ ವಿನಂತಿಸಿಕೊಂಡಿದ್ದಾರೆ.

  • ಗುಜರಾತ್‍ನಲ್ಲಿ ಜುಲೈ 26 ರಿಂದ 9 ಮತ್ತು 11ನೇ ತರಗತಿಗಳು ಓಪನ್

    ಗುಜರಾತ್‍ನಲ್ಲಿ ಜುಲೈ 26 ರಿಂದ 9 ಮತ್ತು 11ನೇ ತರಗತಿಗಳು ಓಪನ್

    ಗಾಂಧೀನಗರ: 9ನೇ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಜುಲೈ 26ರಿಂದ ಶಾಲೆ ತೆರೆಯಲು ಗುಜರಾತ್ ಸರ್ಕಾರ ಅನುಮತಿ ನೀಡಿದೆ.

    ಈ ಕುರಿತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಶಾಲೆಯಲ್ಲಿ ದೈಹಿಕ ಶಿಕ್ಷಣ ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳ ಪೋಷಕರು ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಸಲ್ಲಿಸಬೇಕಾಗುತ್ತದೆ.

    ಈ ದೈಹಿಕ ಶಿಕ್ಷಣ ತರಗತಿಗೆ ಹಾಜರಿ ಕಡ್ಡಾಯವಾಗಿಲ್ಲವಾದರೂ, ಆನ್‍ಲೈನ್ ಶಿಕ್ಷಣ ಎಂದಿನಂತೆ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಕೋವಿಡ್-19 ನಿಯಮಗಳ ಅನುಸಾರ ಶಾಲೆಗಳನ್ನು ತೆರೆಯಲಾಗಿದ್ದು, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

    ಕಳೆದ ವಾರ ಕೊರೊನಾ ವೈರಸ್ ಪ್ರಕರಣದಲ್ಲಿ ಇಳಿಕೆ ಕಂಡಿದ್ದು, ಶಾಲೆಗಳು, 12ನೇ ತರಗತಿ, ಕಾಲೇಜುಗಳು ಹಾಗೂ ತಾಂತ್ರಿಕ ಸಂಸ್ಥೆಗಳನ್ನು ಪುನಃ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಗುಜರಾತ್‍ನಲ್ಲಿ ಗುರುವಾರ 34 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸಾವಿನಕ್ಕೆ ಶೂನ್ಯವಾಗಿದೆ. ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್​ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ

  • ಊರೂರು ತಿರುಗಿ ಚಂದಾ ಎತ್ತಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ರು ಈ ಪಿ ಟಿ ಮೇಷ್ಟ್ರು

    ಮಡಿಕೇರಿ: ನಮ್ಮ ಅಕ್ಕಪಕ್ಕದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಜನತೆಗೆ ಪರಿಚಯಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಅದರಲ್ಲೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ಪಾಲು ದೊಡ್ಡದಾಗಿರಬೇಕು. ಆದರೆ ಜನನಾಯಕರು ಹಾಗೂ ಸರ್ಕಾರಿ ಬಾಬುಗಳೇ ಮರೆತಾಗ ಪ್ರತಿಭೆಗಳನ್ನೇ ಅರಳುವ ಮುನ್ನ ಚಿವುಟಿದಂತಾಗುತ್ತದೆ. ಆದರೆ ಇಂಥ ಪ್ರತಿಭೆಗಳನ್ನು ಗುರುತಿಸಿ ದೇಶದ ಮಟ್ಟದಲ್ಲಿ ಫುಟ್ಬಾಲ್‍ನಲ್ಲಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಲು ಈ ಪಿ ಟಿ ಮೇಷ್ಟ್ರು ಸಜ್ಜಾಗಿದ್ದಾರೆ.

    ದಶಕಗಳಿಂದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ನಂದ ಅವರು ಎಲ್ಲರಿಗಿಂತ ಭಿನ್ನ. ಈ ಶಾಲೆಗೆ ಸೇರುವ ಮಕ್ಕಳಲ್ಲಿ ಆಡಗಿರುವ ಸೂಕ್ತ ಪ್ರತಿಭೆಗಳನ್ನು ಗುರುತಿಸುತ್ತಾ ಅವರಿಗೆ ಸತತ ಪರಿಶ್ರಮದಿಂದ ವಿದ್ಯಾರ್ಥಿಗಳನ್ನು ತಿದ್ದಿತೀಡಿ ಅವರ ಪ್ರತಿಭೆಯನ್ನು ಹೊರಹೊಮ್ಮಿಸಲು ಸಾಕಷ್ಟು ಪ್ರಯತ್ನಿಸಿ ಅವರು ಸಫಲರಾಗಿದ್ದಾರೆ.

    ಆಟವಾಡಲು ಶೂ ಇಲ್ಲದೆ ಬರಿಗಾಲಿನಲ್ಲಿ ಆಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಅಷ್ಟು ಸುಲಭದ ಕೆಲಸವಲ್ಲ. ಫುಟ್ಬಾಲ್ ನಲ್ಲಿ ಭಾಗವಹಿಸುವ ಬಾಲಕರಿಗೆ ಬೆಳಿಗ್ಗೆ ಸಾಯಕಾಲ ವಿಶೇಷ ತರಬೇತಿಯನ್ನು ನೀಡಿ ಇವರು ಮಾರ್ಗದರ್ಶನ ನೀಡುತ್ತಾರೆ.

    ಈ ಶಾಲೆಯಲ್ಲಿ ಓದುತ್ತಿರುವ ಪೈಕಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಬಡ ವಿದ್ಯಾರ್ಥಿಗಳಿಗೆ ಉತ್ತಮ ಪೌಷ್ಠಿಕ ಆಹಾರವನ್ನು ನೀಡಬೇಕಾಗುತ್ತದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆಯಲ್ಲಿ ಇದಕ್ಕಾಗಿ ಯಾವುದೇ ಅನುದಾನ ನೀಡುವುದಿಲ್ಲ.

    ಆಟಗಾರರಿಗೆ ಜರ್ಸಿ(ಸಮವಸ್ತ್ರ) ಕಾಲಿಗೆ ಶೂ ಅಗತ್ಯವಿದೆ. ಇದಕ್ಕಾಗಿ ಅಂದಾಜು 60 ಸಾವಿರ ಖರ್ಚಾಗುತ್ತದೆ. ಈ ಹಣಕ್ಕಾಗಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ದಾನಿಗಳ ಬಳಿ ಹೋಗಿ ಬಡ ಮಕ್ಕಳಿಗೆ ಸಹಾಯ ಮಾಡುವಂತೆ ಕೇಳಿಕೊಂಡು ಬರುತ್ತಾರೆ, ಬಂದ ಹಣದಲ್ಲಿ ಬಡ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡುತ್ತಾರೆ.

    ಒಟ್ಟಿನಲ್ಲಿ ತಮಗೆ ಸಂಬಳ, ಸವಲತ್ತು ಹೆಚ್ಚು ಬೇಕು ಎನ್ನುವವರೇ ಮಧ್ಯೆ ಇವರು ವಿಭಿನ್ನವಾಗಿ ಗುರುತಿಸಿಕೊಂಡು ಶಿಕ್ಷಕರಿಗೆ ಮಾದರಿಯಾಗಿದ್ದಾರೆ.

    https://www.youtube.com/watch?v=inJg34TyDj8