Tag: ದೈಹಿಕ ಸಂಪರ್ಕ

  • ಪರ ಸ್ತ್ರೀ ಜೊತೆ ತಂದೆಯ ದೈಹಿಕ ಸಂಪರ್ಕ ವಿಡಿಯೋ ವೈರಲ್ – ಮನನೊಂದು ಮಗ ಆತ್ಮಹತ್ಯೆ

    ಪರ ಸ್ತ್ರೀ ಜೊತೆ ತಂದೆಯ ದೈಹಿಕ ಸಂಪರ್ಕ ವಿಡಿಯೋ ವೈರಲ್ – ಮನನೊಂದು ಮಗ ಆತ್ಮಹತ್ಯೆ

    ಮಂಗಳೂರು: ಪರ ಸ್ತ್ರೀ ಜೊತೆ ತಂದೆಯ ದೈಹಿಕ ಸಂಪರ್ಕದ (Physical Relation) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆದ ಹಿನ್ನೆಲೆ ಮನನೊಂದು ಪುತ್ರ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಡಬಿದ್ರೆ (Moodbidri) ತಾಲೂಕಿನಲ್ಲಿ ನಡೆದಿದೆ.

    ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ತಂದೆ ಪರ ಸ್ತ್ರೀ ಜೊತೆ ದೈಹಿಕ ಸಂಪರ್ಕ ಮಾಡುವಾಗ ಸಿಕ್ಕಿಬಿದ್ದಿದ್ದರು. ಸ್ಥಳೀಯ ಯುವಕನೊಬ್ಬ ಇವರಿಬ್ಬರ ದೈಹಿಕ ಸಂಪರ್ಕದ ವಿಡಿಯೋ ರೆಕಾರ್ಡ್ ಮಾಡಿದ್ದು, ಬಳಿಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಇದರಿಂದ ಇಳಿ ವಯಸ್ಸಿನ ಮಹಿಳೆ ಮತ್ತು ಯುವಕನ ತಂದೆ ಮುಜುಗರಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ತಂದೆಯ ಲೈಂಗಿಕ ಕಿರುಕುಳದಿಂದ ರಕ್ಷಿಸುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ರೇಪ್

    ಆ ಬಳಿಕ ಸುಮಂತ್ ತಂದೆಯ ಜೊತೆ ಜಗಳ ಮಾಡಿದ್ದು, ತಂದೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ ತೀವ್ರ ಮುಜುಗರ ಅನುಭವಿಸಿದ್ದ. ಇದರಿಂದ ತೀವ್ರ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ದೊರೆತಿದೆ. ಸದ್ಯ ವಿಡಿಯೋ ವೈರಲ್ ಮಾಡಿದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದ್ವೆಯಾಗೋದಾಗಿ 3 ವರ್ಷ ದೈಹಿಕ ಸುಖ ಅನುಭವಿಸಿ ಕೈಕೊಟ್ಟ ಎಂಜಿನಿಯರ್

    ಮದ್ವೆಯಾಗೋದಾಗಿ 3 ವರ್ಷ ದೈಹಿಕ ಸುಖ ಅನುಭವಿಸಿ ಕೈಕೊಟ್ಟ ಎಂಜಿನಿಯರ್

    ಚಾಮರಾಜನಗರ: ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಾಟಕವಾಡಿದ ಯುವಕನೊಬ್ಬ ಆಕೆಯೊಂದಿಗೆ ಮೂರು ವರ್ಷಗಳ ಕಾಲ ದೈಹಿಕ ಸುಖ ಅನುಭವಿಸಿ ಈಗ ಕೈಕೊಟ್ಟಿರುವ ಪ್ರಕರಣ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

    ಗುಂಡ್ಲುಪೇಟೆ ತಾಲೂಕಿನ ಕಮರಹಳ್ಳಿ ಗ್ರಾಮದ ಮಹದೇವಪ್ರಸಾದ್, ಪ್ರೀತಿಯ ನಾಟಕವಾಡಿ ಕೈಕೊಟ್ಟಿರುವ ಎಂಜಿನಿಯರ್. ಈತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ. ಮೂರು ವರ್ಷಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅದೇ ತಾಲೂಕಿನ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದನು. ಪರಿಚಯ ಸ್ನೇಹವಾಗಿ, ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

    ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಎಲ್ಲ ಕಡೆ ಸುತ್ತಾಡಿದ್ದಾನೆ. ಅಷ್ಟೇ ಅಲ್ಲದೇ ದೈಹಿಕ ಸುಖವನ್ನೂ ಅನುಭವಿಸಿದ್ದಾನೆ. ನಂತರ ಮದುವೆಯಾಗುವ ಮೊದಲೇ ದೈಹಿಕ ಸಂಪರ್ಕ ಹೊಂದುವುದು ಸರಿಯಲ್ಲ ಎಂದು ಯುವತಿಗೆ ಮನವರಿಕೆಯಾಗಿದೆ. ಹಾಗಾಗಿ ದೈಹಿಕ ಸಂಪರ್ಕಕ್ಕೆ ಆಕೆ ನಿರಾಕರಿಸಿದ್ದಾರೆ.

    ದೈಹಿಕ ಸಂಪರ್ಕಕ್ಕೆ ನಿರಾಕರಿಸಿದನ್ನೆ ನೆಪವಾಗಿಟ್ಟುಕೊಂಡ ಮಹದೇವಪ್ರಸಾದ್, ಈಗ ನಿನಗು ನನಗೂ ಸಂಬಂಧವೇ ಇಲ್ಲ ಎಂದು ಯುವತಿಗೆ ಕೈಕೊಟ್ಟಿದ್ದಾನೆ. ಈ ಬಗ್ಗೆ ಯುವತಿ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅತ್ಯಾಚಾರದ ಕೇಸ್ ದಾಖಲಿಸಿದ್ದಾರೆ.

    ಇತ್ತ ಅತ್ಯಾಚಾರದ ಕೇಸ್ ದಾಖಲಾಗುತ್ತಿದ್ದಂತೆ ಮಹದೇವಪ್ರಸಾದ್ ನಾಪತ್ತೆಯಾಗಿದ್ದಾನೆ. ಜೊತೆಗೆ ಆತನ ಪೋಷಕರು ಕೂಡ ತಲೆಮರೆಸಿಕೊಂಡಿದ್ದಾರೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews