Tag: ದೋಣಿ ಮುಳುಗಡೆ

  • ಬೋಟ್ ಮುಳುಗಿ ಮದುವೆಯಿಂದ ಹಿಂದಿರುಗುತ್ತಿದ್ದ 103 ಮಂದಿ ದುರ್ಮರಣ- ಹಲವರು ನಾಪತ್ತೆ

    ಬೋಟ್ ಮುಳುಗಿ ಮದುವೆಯಿಂದ ಹಿಂದಿರುಗುತ್ತಿದ್ದ 103 ಮಂದಿ ದುರ್ಮರಣ- ಹಲವರು ನಾಪತ್ತೆ

    ನೈಜೀರಿಯಾ: ಮದುವೆ (Marriage) ಯಿಂದ ಹಿಂದಿರುಗುತ್ತಿದ್ದಾಗ ದೋಣಿ ಮಗುಚಿ, ಮಕ್ಕಳು ಸೇರಿದಂತೆ ಕನಿಷ್ಠ 103 ಜನರು ಸಾವನ್ನಪ್ಪಿದ ಘಟನೆ ಎಂದು ಉತ್ತರ ನೈಜೀರಿಯಾ (Nigeria) ದಲ್ಲಿ ನಡೆದಿದೆ.

    ರಾಜ್ಯದ ರಾಜಧಾನಿ ಇಲೋರಿನ್‍ನಿಂದ 160 ಕಿಲೋಮೀಟರ್ ದೂರದಲ್ಲಿರುವ ಕ್ವಾರಾ ರಾಜ್ಯದ ಪಟೇಗಿ ಜಿಲ್ಲೆಯ ನೈಜರ್ ನದಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹಲವು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆದಿದೆ. ಇದುವರೆಗೆ 100 ಜನರನ್ನು ರಕ್ಷಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

    ನೀರಿನಲ್ಲಿ ಮುಳುಗಿದವರಲ್ಲಿ ಹೆಚ್ಚಿನವರು ಸಂಬಂಧಿಕರಾಗಿದ್ದು, ಅವರು ಮದುವೆಗೆ ಬಂದಿದ್ದರು. ತಡರಾತ್ರಿಯವರೆಗೂ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂದು ಸ್ಥಳೀಯ ಮುಖ್ಯಸ್ಥ ಅಬ್ದುಲ್ ಗಣ ಲುಕ್ಪಾಡಾ ಹೇಳಿದ್ದಾರೆ. ಇದನ್ನೂ ಓದಿ: ಬಾಲಕನನ್ನು ಕೊಂದು ತಿಂದ ಮೊಸಳೆಯನ್ನೇ ಥಳಿಸಿ ಹತ್ಯೆಗೈದ್ರು- ವೀಡಿಯೋ ವೈರಲ್

    ಬೈಕ್ ನಲ್ಲಿ ಸಮಾರಂಭಕ್ಕೆ ಆಗಮಿಸಿದ ಅವರು, ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿದ ಪರಿಣಾಮ ಬೋಟ್ ನಲ್ಲಿ ತೆರಳಬೇಕಾಯಿತು. ದೋಣಿಯಲ್ಲಿ ಸುಮಾರು 300 ಜನ ಇದ್ದರು, ಹೀಗಾಗಿ ಬೋಟ್ ಓವರ್ ಲೋಡ್ ಆಗಿತ್ತು. ದೋಣಿ ಚಲಿಸುತ್ತಿದ್ದಾಗ ಒಂದು ದೊಡ್ಡ ಮರದ ದಿಮ್ಮಿಗೆ ಬಡಿದು ಎರಡು ಭಾಗವಾಗಿ ದುರ್ಘಟನೆ ಸಂಭವಿಸಿದೆ. ಮಂಗಳವಾರ ಸಂಜೆ ಹೊತ್ತಿಗೆ ಎಲ್ಲರ ಮೃತದೇಹಗಳನ್ನು ನೀರಿನಿಂದ ಹೊರ ತೆಗೆದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಅವರು ವಿವರಿಸಿದರು.

    ಇದು ಹಲವು ವರ್ಷಗಳಿಂದ ಕಂಡ ಅತ್ಯಂತ ಭೀಕರ ದೋಣಿ ದುರಂತ ಎಂದು ಸ್ಥಳೀಯರು ಹೇಳಿದ್ದಾರೆ.

  • ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ – 12 ಮೀನುಗಾರರ ರಕ್ಷಣೆ

    ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ – 12 ಮೀನುಗಾರರ ರಕ್ಷಣೆ

    – 1.50 ಕೋಟಿ ರೂ. ಹಾನಿ

    ಕಾರವಾರ: ಅರಬ್ಬೀ ಸಮುದ್ರದಲ್ಲಿ (Arabian Sea) ಅಬ್ಬರದ ಗಾಳಿ ಹಾಗೂ ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು (Boat Sinking) 12 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ (Ankola) ತಾಲೂಕಿನಲ್ಲಿ ನಡೆದಿದೆ.

    ಮಂಗಳವಾರ ಅಂಕೋಲದ ಬೆಳ್ಳಂಬಾರಿನ ಕಡಲ ತೀರದಿಂದ ಅರಬ್ಬೀ ಸಮುದ್ರಕ್ಕೆ ಚಂದ್ರಾವತಿ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಸುಭಾಷ್ ಖಾರ್ವಿ ಎಂಬವರಿಗೆ ಸೇರಿದ ಪರ್ಶಿಯನ್ ಬೋಟ್ ಇದಾಗಿತ್ತು. ಹವಾಮಾನ ವೈಪರಿತ್ಯದಿಂದಾಗಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಹಾಗೂ ದೊಡ್ಡ ಅಲೆಗೆ ಬೋಟ್‌ನ ತಳಭಾಗದ ಫೈಬರ್ ಕಿತ್ತು ಹೋಗಿದ್ದು ಬಳಿಕ ಬೋಟ್‌ನ ಒಳಭಾಗಕ್ಕೆ ನೀರು ನುಗ್ಗಿ ಮುಳುಗಲು ಪ್ರಾರಂಭಿಸಿತು. ಇದನ್ನೂ ಓದಿ: ಕೆಮ್ಮಿನ ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ

    ತಕ್ಷಣ ಹತ್ತಿರದಲ್ಲಿದ್ದ ಇನ್ನೊಂದು ಬೋಟ್‌ನಲ್ಲಿದ್ದವರು ಮುಳುಗುತ್ತಿದ್ದ ಬೋಟ್‌ನಿಂದ 12 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಬೋಟ್ ಮುಳುಗಡೆಯಿಂದಾಗಿ ಅಂದಾಜು 1.50 ಕೋಟಿ ರೂ. ಹಾನಿಯಾಗಿದೆ. ಇದನ್ನೂ ಓದಿ: ಯುಪಿಎಸ್‍ಸಿ ಫಲಿತಾಂಶ ಪ್ರಕಟ – ಲೇಡಿಸ್‍ಗೆ ಫಸ್ಟ್ 4 ರ‍್ಯಾಂಕ್

  • ಹಿಂದೂ ಮಹಾಸಾಗರದಲ್ಲಿ ಚೀನಾದ ದೋಣಿ ಮುಳುಗಡೆ – 39 ಜನ ನಾಪತ್ತೆ

    ಹಿಂದೂ ಮಹಾಸಾಗರದಲ್ಲಿ ಚೀನಾದ ದೋಣಿ ಮುಳುಗಡೆ – 39 ಜನ ನಾಪತ್ತೆ

    – ರಕ್ಷಣೆಗೆ ಕ್ಸಿ ಜಿನ್‌ಪಿಂಗ್ ಆದೇಶ

    ಬೀಜಿಂಗ್: ಮೀನುಗಾರಿಕೆಗೆ ತೆರಳಿದ್ದ ಚೀನಾದ (China) ದೋಣಿಯೊಂದು (Fishing Boat) ಹಿಂದೂ ಮಹಾಸಾಗರದಲ್ಲಿ (Indian Ocean) ಮುಳುಗಡೆಯಾಗಿದ್ದು, ಅದರಲ್ಲಿದ್ದ 39 ಜನರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

    ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದೋಣಿಯಲ್ಲಿ ಚೀನಾದ 17 ಪ್ರಜೆಗಳು, ಇಂಡೋನೇಷ್ಯಾದ 17 ಜನ ಹಾಗೂ ಫಿಲಿಪೈನ್ಸ್‌ನ ಐವರು ಇದ್ದರು ಎಂದು ಚೀನಾ ಸೆಂಟ್ರಲ್ ಟೆಲಿವಿಷನ್ (CCTV) ತಿಳಿಸಿದೆ.

    ಇದೀಗ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ಹಾಗೂ ಪ್ರಧಾನಿ ಲಿ ಕಿಯಾಂಗ್ (Li Qiang)ವಿದೇಶಗಳಲ್ಲಿರುವ ಚೀನಾದ ರಾಜತಾಂತ್ರಿಕರಿಗೆ ಹಾಗೂ ಕೃಷಿ ಮತ್ತು ಸಾರಿಗೆ ಸಚಿವಾಲಯಗಳಿಗೆ ಬದುಕುಳಿದವರನ್ನು ಹುಡುಕಲು ಹಾಗೂ ರಕ್ಷಿಸಲು ಆದೇಶಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಲೇಡಿ ಡಾನ್‌ನಿಂದ ಉದ್ಯಮಿ ಮೇಲೆ ಹಲ್ಲೆ

    ಆಸ್ಟ್ರೇಲಿಯಾ ಮತ್ತು ಇತರ ಹಲವು ದೇಶಗಳಿಂದ ರಕ್ಷಣಾ ತಂಡಗಳು ಹುಡುಕಾಟಕ್ಕಾಗಿ ಘಟನಾ ಸ್ಥಳಕ್ಕೆ ತೆರಳಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಚೀನಾ 2 ಹಡಗುಗಳನ್ನು ನಿಯೋಜಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ – 10 ದಿನ ಪ್ರವಾಸ

  • ಅರಬ್ಬೀ ಸಮುದ್ರದಲ್ಲಿ ಪರ್ಷಿಯನ್ ಬೋಟ್ ಮುಳುಗಡೆ – 17 ಮೀನುಗಾರರ ರಕ್ಷಣೆ

    ಅರಬ್ಬೀ ಸಮುದ್ರದಲ್ಲಿ ಪರ್ಷಿಯನ್ ಬೋಟ್ ಮುಳುಗಡೆ – 17 ಮೀನುಗಾರರ ರಕ್ಷಣೆ

    ಕಾರವಾರ: ಅರಬ್ಬೀ ಸಮುದ್ರದಲ್ಲಿ (Arabian Sea) ಬಂಡೆಕಲ್ಲಿಗೆ ತಾಗಿ ಮುಳುಗುತ್ತಿದ್ದ ಬೋಟ್‌ನಿಂದ (Boat Sinking) 17 ಜನ ಮೀನುಗಾರರ (Fishermen) ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಕುಮಟಾ ತಾಲೂಕಿನ ಸಮೀಪದ ಕಡ್ಲೆ ಬಳಿ ನಡೆದಿದೆ

    ಆಳ ಸಮುದ್ರದಲ್ಲಿ 17 ಜನ ಮೀನುಗಾರರು ಮೀನುಗಾರಿಕೆಗೆ (Fishing)ತೆರಳಿದ್ದ ಶ್ರೀದೇವಿ ಅನುಗ್ರಹ ಹೆಸರಿನ ಸುಧಾಕರ್ ಕಾರ್ವಿ ಅವರ ಮಾಲೀಕತ್ವದ ಪರ್ಶಿಯನ್ ಬೋಟ್ ಇದಾಗಿದ್ದು, ಮೀನು ಹಿಡಿದುಕೊಂಡು ವಾಪಸ್ಸಾಗುತ್ತಿದ್ದಾಗ ಘಟನೆ ನಡೆದಿದೆ. ಇದನ್ನೂ ಓದಿ: ಪಂಚರತ್ನ ಯಾತ್ರೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ನಿಧನ

    ಕರಾವಳಿ ಕಾವಲು ಪಡೆ ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ 17 ಜನ ಮೀನುಗಾರರನ್ನು ರಕ್ಷಿಸಿ ದಡಕ್ಕೆ ತರಲಾಗಿದೆ. ಬೋಟ್ ಮುಳುಗಡೆಯಾಗಿರುವುದರಿಂದ 10 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಹಾನಿ ಸಂಭವಿಸಿದೆ. ಘಟನೆಯಲ್ಲಿ ಎಲ್ಲಾ ಮೀನುಗಾರರ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಸೇರ್ತಾರಾ ಸುಮಲತಾ ಅಂಬರೀಶ್?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಾಲಯ ಆಚರಣೆ – ಬಾಂಗ್ಲಾದೇಶದಲ್ಲಿ ದೋಣಿ ಮುಳುಗಿ 24 ಮಂದಿ ಸಾವು

    ಮಹಾಲಯ ಆಚರಣೆ – ಬಾಂಗ್ಲಾದೇಶದಲ್ಲಿ ದೋಣಿ ಮುಳುಗಿ 24 ಮಂದಿ ಸಾವು

    ಢಾಕಾ: ಬಾಂಗ್ಲಾದೇಶದ (Bangladesh) ಪಂಚಗಢ್‌ನ ಕರಟೋಯಾ ನದಿಯಲ್ಲಿ (Karatoya River) ಭಾನುವಾರ ದೋಣಿ (Boat) ಮುಳುಗಿ 24 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಮಹಾಲಯ ಆಚರಣೆ ಹಿನ್ನೆಲೆ ಔಲಿಯಾ ಘಾಟ್‌ನಿಂದ ಬದ್ಧೇಶ್ವರ ದೇವಸ್ಥಾನದ ಕಡೆ ಹೋಗುತ್ತಿದ್ದ ದೋಣಿ ಮುಳುಗಿದೆ. ದೋಣಿಯಲ್ಲಿ ಬೋಡಾ, ಪಂಚ್‌ಪಿರ್, ಮಾರಿಯಾ ಹಾಗೂ ಬಂಘಾರಿ ಪ್ರದೇಶದ ಹಿಂದೂ ಸಮುದಾಯದ ಜನರು ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ದೋಣಿಯಲ್ಲಿ ಅದರ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಪ್ರಯಾಣಿಕರನ್ನು ಕೂರಿಸಲಾಗಿತ್ತು. ದೋಣಿ ನದಿಯ ಮಧ್ಯ ಭಾಗಕ್ಕೆ ಹೋಗುತ್ತಿದ್ದಂತೆ ಅದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಕೆಲವರು ಈಜಿ ದಡ ಸೇರಿದ್ದಾರೆ. ಆದರೆ ಹೆಚ್ಚಿನವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ

    ಘಟನೆಯ ಮಾಹಿತಿ ಸಿಕ್ಕ ತಕ್ಷಣ ಪಂಚಗಢ ಜಿಲ್ಲಾಧಿಕಾರಿ ಮೊಹಮ್ಮದ್ ಜಹುರುಲ್ ಇಸ್ಲಾಂ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ತನಿಖೆಗೆ 5 ಸದಸ್ಯರ ತಂಡವನ್ನು ರಚಿಸಲಾಗಿದೆ. ನಾಪತ್ತೆಯಾದವರ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಬೋಡಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಸುಜೋಯ್ ಕುಮಾರ್ ರಾಯ್ ತಿಳಿಸಿದ್ದಾರೆ.

    ಬಾಂಗ್ಲಾದೇಶದಲ್ಲಿ ಲಕ್ಷಾಂತರ ಜನರು ರಾಜಧಾನಿ ಢಾಕಾ ಅಥವಾ ಪ್ರಮುಖ ನಗರಗಳಿಗೆ ಪ್ರಯಾಣಿಸಲು ದೋಣಿಗಳನ್ನೇ ಅವಲಂಬಿಸಿದ್ದಾರೆ. ದೇಶದಲ್ಲಿ ಬಳಸಲಾಗುವ ಸುಮಾರು ಶೇ.95 ರಷ್ಟು ಮಧ್ಯಮ ಹಾಗೂ ಸಣ್ಣ ಗಾತ್ರದ ದೋಣಿಗಳಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ತೂಕ ಇಳಿಸಿ, 10 ಲಕ್ಷ ಬಹುಮಾನ ಗೆಲ್ಲಿ – ಉದ್ಯೋಗಿಗಳಿಗೆ ಫಿಟ್‌ನೆಸ್ ಚ್ಯಾಲೆಂಜ್ ಹಾಕಿದ ಸಿಇಒ

    Live Tv
    [brid partner=56869869 player=32851 video=960834 autoplay=true]