Tag: ದ್ರೌಪದಿ ಮುರ್ಮ

  • ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ (Justice Sanjiv Khanna) ಇಂದು (ನ.11) ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಇಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿರುವ ನ್ಯಾ.ಸಂಜೀವ ಖನ್ನಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಬೋಧಿಸಲಿದ್ದಾರೆ.ಇದನ್ನೂ ಓದಿ: ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

    ಎರಡು ವರ್ಷಗಳ ಅವಧಿಯ ಬಳಿಕ ಹಾಲಿ ಸಿಜೆಐ ಡಿವೈ ಚಂದ್ರಚೂಡ್ (DY Chandrachud) ಅವರು ಭಾನುವಾರ ತಮ್ಮ ಅಧಿಕಾರದಿಂದ ನಿವೃತ್ತಿ ಹೊಂದಿದರು. ಅವರ ಶಿಫಾರಸಿನ ಮೇರೆಗೆ ಅ.24 ರಂದು ನ್ಯಾ.ಸಂಜೀವ ಖನ್ನಾ ಅವರನ್ನು ಮುಖ್ಯ ನ್ಯಾರ್ಯಮೂರ್ತಿಯಾಗಿ ನೇಮಕ ಮಾಡುವ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಸೋಮವಾರ ಅಧಿಕಾರ ಸ್ವೀಕರಿಸಲಿರುವ ನ್ಯಾ.ಖನ್ನಾ 2025ರ ಮೇ.31ರವರೆಗೆ ಅಧಿಕಾರದಲ್ಲಿರಲಿದ್ದಾರೆ.

    2019ರ ಜನವರಿಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ ನ್ಯಾ.ಖನ್ನಾ ಅವರು, ಸುಪ್ರೀಂ ಕೋರ್ಟ್‌ನ ಭಾಗವಾಗಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಚುನಾವಣಾ ಬಾಂಡ್‌ಗಳ ಯೋಜನೆ ರದ್ದು, ಭಾರತದ ಸಂವಿಧಾನದ 370ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು.

    ಇನ್ನೂ ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಿನ ದೆಹಲಿ (Delhi) ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (AAP Arvind Kejrival) ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.ಇದನ್ನೂ ಓದಿ: ಕ್ಯೂಬಾದಲ್ಲಿ ಒಂದೇ ಗಂಟೆಯಲ್ಲಿ 2 ಪ್ರಬಲ ಭೂಕಂಪ

  • ಮೋದಿ ಅತ್ಯುತ್ತಮ ಕೆಲಸ ಮಾಡಲಿದ್ದಾರೆ- ಲೋಕಸಭಾ ಎಲೆಕ್ಷನ್ ನಂತ್ರದ ಮೊದಲ ಭಾಷಣದಲ್ಲಿ ಮುರ್ಮು ಹೇಳಿದ್ದೇನು?

    ಮೋದಿ ಅತ್ಯುತ್ತಮ ಕೆಲಸ ಮಾಡಲಿದ್ದಾರೆ- ಲೋಕಸಭಾ ಎಲೆಕ್ಷನ್ ನಂತ್ರದ ಮೊದಲ ಭಾಷಣದಲ್ಲಿ ಮುರ್ಮು ಹೇಳಿದ್ದೇನು?

    – ಸಾಮಾಜಿಕ, ಆರ್ಥಿಕ ಬದಲಾವಣೆಯತ್ತ ಹೆಜ್ಜೆ ಇಡುತ್ತಿದ್ದೇವೆ

    ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿಯವರು ಅತ್ಯುತ್ತಮ ಕೆಲಸಗಳನ್ನು ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಅಂತಾ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

    18ನೇ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಸಂಸತ್ತಿನಲ್ಲಿ ಇಂದು ಮಾತನಾಡಿದ ಅವರು, ನೂತನ ಸಂಸದರಿಗೆ ಅಭಿನಂದನೆ ಸಲ್ಲಿಸಿ ಬಳಿಕ ಮಾತನಾಡಿದ ಮುರ್ಮು ಅವರು ಮೊದಲಿಗೆ ಓಂ ಬಿರ್ಲಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಬಳಿಕ ಓಂ ಬಿರ್ಲಾ ಅವರು ಅತ್ಯುತ್ತಮವಾಗಿ ಕೆಲಸ ಮಾಡಲಿದ್ದಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

    ಅಪಪ್ರಚಾರಕ್ಕೆ ಚುನಾವಣೆ ಮೂಲಕ ಉತ್ತರ: ಇದೇ ವೇಳೆ ಚುನಾವಣಾ ಆಯೋಗಕ್ಕೂ ಅಭಿನಂದನೆಗಳನ್ನು ಸಲ್ಲಿಸಿದ ಅವರು, ವಿಶ್ವದ ಅತಿದೊಡ್ಡ ಚುನಾವಣೆ, ಜನರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ದಾಖಲೆಯ ಮತದಾನವಾಗಿದೆ. ಕಾಶ್ಮೀರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿತ್ತು. ಆದರೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗಿದೆ ಎಂದು ಹೇಳಿದರು.

    ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದೆ. ದೊಡ್ಡ ಆರ್ಥಿಕ, ಸಾಮಾಜಿಕ ಬದಲಾವಣೆಯತ್ತ ಹೆಜ್ಜೆ ಇಡುವ ಬಜೆಟ್ ಇದಾಗಲಿದೆ. ರಾಜ್ಯದ ವಿಕಾಸವೇ ದೇಶದ ವಿಕಾಸ್ ಎನ್ನುವ ಭಾವನೆಯಿಂದ ನಮ್ಮ ಸರ್ಕಾರ ಮುಂದುವರಿಯಲಿದೆ. 12 ರಿಂದ 5 ನೇ ಬಲಿಷ್ಠ ಆರ್ಥಿಕತೆಯಾಗಿ ದೇಶ ಬದಲಾಗಿದೆ. ಕೊರೊನಾ ಮತ್ತು ಯುದ್ಧದ ಪರಿಸ್ಥಿತಿಯಲ್ಲೂ ಭಾರತ ಅಭಿವೃದ್ಧಿ ಸಾಧಿಸಿದೆ. ಸರ್ವಿಸ್ ಸೆಕ್ಟರ್ ಬಲಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

    ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್‌: ನಮ್ಮ ಸರ್ಕಾರ ಮೂರನೇ ಬಲಿಷ್ಠ ಆರ್ಥಿಕತೆಯಾಗಲು ಹೊರಟಿದೆ. ಪ್ರತಿ ಕ್ಷೇತ್ರದಲ್ಲಿ ಭಾರತ ಲೀಡರ್ ಆಗುತ್ತಿದೆ. ಉದ್ಯೋಗ ಸೃಷ್ಟಿಯಾಗುತ್ತಿವೆ. ಕೃಷಿ ಆಧಾರಿತ ಉದ್ಯಮ ವಿಸ್ತರಣೆ ಮಾಡಲಾಗುತ್ತಿದೆ. ರೈತರಿಗಾಗಿ ಸರ್ಕಾರಿ ಸಂಸ್ಥೆಗಳ ನೆಟ್ವರ್ಕ್ ಮಾಡುತ್ತಿದೆ. ಸಹಕಾರಿ ವಲಯದಲ್ಲಿ ದೊಡ್ಡ ಬದಲಾವಣೆ ಮಾಡುತ್ತಿದೆ. ಸಣ್ಣ ಖರ್ಚು ನಿಭಾಯಿಸಲು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಸಹಾಯ ಮಾಡಲಾಗುತ್ತಿದೆ. ಎಂಎಸ್‍ಪಿಯಲ್ಲಿ ದಾಖಲೆಯ ಸಾಧನೆ ಮಾಡಿದೆ. ವರ್ತಮಾನ ಅಗತ್ಯ ಆಧರಿಸಿ ಕೃಷಿ ವಲಯದಲ್ಲಿ ಬದಲಾವಣೆ ಮಾಡುತ್ತಿದೆ ಎಂದು ತಿಳಿಸಿದರು.

    ವಿಶ್ವದ ಹಲವು ದೇಶಗಳನ್ನು ಭಾರತ ಪ್ರೇರೆಪಿಸುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿವೆ. ಗ್ರೀನ್ ಎನರ್ಜಿಗೆ ಭವಿಷ್ಯವಿದೆ. ಈ ಹಿನ್ನೆಲೆ ನಮ್ಮ ಸರ್ಕಾರ ಇದಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಮಹಿಳೆಯರ ಆರ್ಥಿಕ ಸ್ಥಿತಿ ಹೆಚ್ಚಿಸಿದೆ. ಪಿಎಂ ಆವಾಸ್ ಯೋಜನೆಯಡಿ ಮಹಿಳೆಯರಿಗೆ ಹೆಚ್ಚು ಮನೆ ನೀಡಿದೆ. ಮುಂದಿನ ಅವಧಿಯಲ್ಲಿ ಮೂರು ಕೋಟಿ ಮನೆ ನಿರ್ಮಿಸಿ ಹೆಚ್ಚು ಮಹಿಳೆಯರಿಗೆ ನೀಡಲಾಗುವುದು. ಸ್ವಂಸಹಾಯ ಗುಂಪುಗಳಿಗೆ ಆದ್ಯತೆ ನೀಡಲಾಗುತ್ತಿದೆ. ನಮೋ ಡ್ರೋನ್ ಮೂಲಕ, ಲಕ್ ಪತಿ ದೀದಿ ಮೂಲಕ ಮಹಿಳೆಯರನ್ನು ಸ್ವಾವಲಂಬಿ ಮಾಡಲಾಗುತ್ತಿದೆ ಎಂದರು.

    ಮೂಲಭೂತ ಸೌಕರ್ಯಗಳ ಹೆಚ್ಚಳ: ಎರಡು, ಮೂರನೇ ಹಂತದ ನಗರಗಳಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದೆ. ಮಹಾನಗರಗಳಲ್ಲಿ ಮೆಟ್ರೋ ವಿಸ್ತರಣೆಯಾಗುತ್ತಿದೆ. ವಂದೇ ಭಾರತ್ ರೈಲು ಯೋಜನೆ ಆರಂಭವಾಗಲಿದೆ. ನಗರಗಳ ಮೂಲ ಸೌಕರ್ಯ ಹೆಚ್ಚಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಎರಡು ಪಟ್ಟು ಹೆಚ್ಚಿಸಿದೆ. ಹೈಸ್ಪೀಡ್ ರೈಲ್ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಬಾಕಿ ಕಡೆ ಬುಲೆಟ್ ಟ್ರೈನ್ ಸಾಧ್ಯತೆ ಪರಿಶೀಲಿಸಲಾಗುತ್ತಿದೆ. ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಅಸ್ಸಾಂನಲ್ಲಿ ಸೆಮಿ ಕಂಡಕ್ಟರ್ ಉತ್ಪಾದನೆ ಮಾಡಲಾಗುವುದು. ಹತ್ತು ವರ್ಷಗಳಲ್ಲಿ ಅನೇಕ ಸಮಸ್ಯೆ ಬಗೆಹರಿಸಿದೆ. ದೇಶದ ಹಲವು ಕ್ಷೇತ್ರಗಳು ಅಭಿವೃದ್ಧಿ ಕಂಡಿದೆ. ಈಶಾನ್ಯ ರಾಜ್ಯಗಳ ವಿಷಯ ಬರುತ್ತಿದ್ದಂತೆಯೇ ಮಣಿಪುರ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು.

    ಮಹಿಳೆಯರಿಗೆ ಬ್ಯಾಂಕ್ ನಲ್ಲಿ ಹೆಚ್ಚು ಬಡ್ಡಿ ನೀಡಲಾಗುತ್ತಿದೆ. ಉಚಿತ ರೇಷನ್, ಕಡಿಮೆ ದರದಲ್ಲಿ ಗ್ಯಾಸ್ ನೀಡಿದ್ದು, ಮಹಿಳೆಯರ ಉಳಿತಾಯ ಹೆಚ್ಚಿದೆ. ವಿದ್ಯುತ್ ಉಚಿತ ಮಾಡಲು ಸೋಲಾರ್ ಹಾಕಿ ಕೊಡಲಾಗುತ್ತಿದೆ. ಎಸ್‍ಸಿ, ಎಸ್ಟಿ ಓಬಿಸಿಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಅವರ ಜೀವನ ಬದಲಿಸುವ ಕೆಲಸ ಮಾಡಿದೆ. ಜೀವನ ಭೀಮಾ ಯೋಜನೆ ಮೂಲಕ ಸುರಕ್ಷೆ ನೀಡಲಾಗುತ್ತಿದೆ. ಸರ್ಕಾರ ಬಡವರ ಸೇವೆ ಮಾಡುತ್ತಿದೆ ಎಂದು ಜನರ ಭಾವನೆಗೆ ಬಂದಿದೆ. ಸ್ವಚ್ಛ ಭಾರತ್ ಯೋಜನೆಯನ್ನು ರಾಷ್ಟ್ರೀಯ ವಿಷಯ ಮಾಡಿದೆ. ಕೋಟ್ಯಂತರ ಶೌಚಾಲಯ ನಿರ್ಮಾಣ ಮಾಡಿದೆ. 55 ಕೋಟಿ ಆಯುಷ್ಮಾನ್ ಭಾರತ್ ಯೋಜನೆ ಲಾಭ ಪಡೆದಿದ್ದಾರೆ. ಜನೋಷಧಿ ಮೂಲಕ ಕಡಿಮೆ ದರದಲ್ಲಿ ಔಷಧಿ ನೀಎಲಾಗುತ್ತಿದೆ. ಈ ಬಾರಿ ಆಯುಷ್ಮಾನ್ ಯೋಜನೆ ವಿಸ್ತರಿಸಿದೆ, ವೃದ್ಧರಿಗೆ ಈಗ ಲಾಭ ಸಿಗಲಿದೆ ಎಂದರು.

    ಎರಡು ವರ್ಷದ ಹಿಂದೆ ಬ್ಯಾಂಕಿಂಗ್ ವಲಯ ಮುಳುಗಡೆ ತಡೆಯಲು ಪುನಶ್ಚೇತನ ಮಾಡಲಾಯಿತು. ಈಗ ಬ್ಯಾಂಕುಗಳು ಸಾಕಷ್ಟು ಅಭಿವೃದ್ಧಿಯಾಗಿವೆ. ಆರ್ಥಿಕ ಬೆಳವಣಿಗಗಳಿಗೆ ಸಹಕಾರಿಯಾಗಿವೆ. ಸರ್ಕಾರಿ ಬ್ಯಾಂಕ್ ಗಳ ಎನ್‍ಪಿಎ ಕಡಿಮೆಯಾಗಿದೆ. ದೇಶದ ರಕ್ಷಣಾ ವಲಯದಲ್ಲಿ ಹೆಚ್.ಎ.ಎಲ್ ಶಕ್ತಿ ನೀಡುತ್ತಿದೆ. ಡಿಜಿಟಲ್ ಇಂಡಿಯಾಗೆ ಇಡೀ ವಿಶ್ವ ಆಕರ್ಷಣೆಯಾಗಿದೆ. ಎರಡು ಕೋಟಿಗೂ ಅಧಿಕ ವಹಿವಾಟು ನಡೆಸಿ ದಾಖಲೆ ಸಾಧಿಸಿದೆ. ರಕ್ಷಣಾ ವಲಯ ಆತ್ಮ ನಿರ್ಭರ್ ಮಾಡಲು ಸಾಕಷ್ಟು ಕ್ರಮ ತೆಗೆದುಕೊಂಡಿದೆ. ಒಂದು ಲಕ್ಷ ಕೋಟಿಗೂ ಅಧಿಕ ರಕ್ಷಣಾ ವಲಯದಲ್ಲಿ ಭಾರತ ಉತ್ಪಾದನೆ ಮಾಡುತ್ತಿದೆ. ಬ್ರಹ್ಮಾಸ್ ಅನ್ನು ರಫ್ತು ಮಾಡಲಾಗುತ್ತಿದೆ. ಸೈನಿಕರ ಹಿತ ಕಾಯುತ್ತಿದೆ. ಒನ್ ಯಾರ್ಂಕ್ ಒನ್ ಪೆನ್ಷನ್ ಯೋಜನೆ ಜಾರಿ ಮಾಡಿದೆ. ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಿಸಿದೆ ಎಂದರು.

    ಕೇಂದ್ರ ಸರ್ಕಾರದ ಗ್ರೂಪ್ ಸಿ ಡಿ ಯಲ್ಲಿ ಸಂದರ್ಶನ ರದ್ದು ಮಾಡಿದೆ. ಯುವಕರಿಗೆ ಹೆಚ್ಚು ಉದ್ಯೋಗ ನೀಡಲಾಗುತ್ತಿದೆ. ಹೊಸ ಶಿಕ್ಷಣ ನೀತಿ ಜಾರಿ ಮಾಡಿದೆ. ಭಾರತೀಯ ಭಾಷೆಯಲ್ಲಿ ಎಂಜಿನಿಯರಿಂಗ್ ಮಾಡಬಹುದು. 7 IIT, 16IIIT, 6 IIM, 315 ಮೆಡಿಕಲ್ ಕಾಲೇಜು, 390 ವಿವಿ ನಿರ್ಮಾಣ ಮಾಡಲಿದೆ. ಪೇಪರ್ ಲೀಕ್ ತಡೆಯಲು ಕಾನೂನು ಕ್ರಮ ತೆಗೆದುಕೊಳ್ಳಲು ನನ್ನ ಸರ್ಕಾರ ಬದ್ಧವಾಗಿದೆ. ಅಕ್ರಮ ತಡೆಯಲು ಕಾನೂನು ಜಾರಿ ಮಾಡಿದೆ. ಪರೀಕ್ಷಾ ಸುಧಾರಣೆಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

    ನಳಂದಾ ಕ್ಯಾಂಪಸ್ ಅಭಿವೃದ್ಧಿಪಡಿಸಿದೆ. ಅದೊಂದು ವಿವಿ ಮಾತ್ರವಲ್ಲ, ಅದು ವಿಶ್ವದ ಜ್ಞಾನಕೇಂದ್ರ. ಇದು ಮುಂದಿನ ದಿನಗಳ ವಿಶ್ವದ ಗಮನ ಸೆಳೆದಿದೆ. ತೀರ್ಥ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದೆ. ಚಂದ್ರಯಾನ ಯಶಸ್ವಿಗೆ ನಾವು ಗರ್ವಪಡಬೇಕು. ದೇಶದ ಬಲಿಷ್ಠ ಆರ್ಥಿಕತೆಯಾಗುತ್ತಿದೆ. ಅತ್ಯುತ್ತಮ ಚುನಾವಣಾ ವ್ಯವಸ್ಥೆಗೆ ಪ್ರಜಾಪ್ರಭುತ್ವದ ತಾಯಿಯಾಗಿರಲು ನಾವು ಗರ್ವ ಪಡಬೇಕು ಎಂದರು.

  • ಬೆಳ್ತಂಗಡಿಯ ಅಮೈ ದೇವರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ ಪ್ರದಾನ

    ಬೆಳ್ತಂಗಡಿಯ ಅಮೈ ದೇವರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ ಪ್ರದಾನ

    ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಆಯೋಜಿಸಿದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯ ಕಿಲ್ಲೂರಿನ ಅಮೈ ದೇವ ರಾವ್ (Deva Rao) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu)  ಅವರು ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ಪ್ರಶಸ್ತಿ 2020-21 ನೀಡಿ ಪುರಸ್ಕರಿಸಿದರು.

    ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣ (First Global Symposium on Farmers’ Rights) ದೆಹಲಿಯಲ್ಲಿ ಇಂದು ಆರಂಭಗೊಂಡಿದ್ದು ಸೆ.15ರವರೆಗೆ ನಡೆಯಲಿದೆ. ಈ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿಗಳು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.   ಇದನ್ನೂ ಓದಿ: G20 ಶೃಂಗಸಭೆಗೆ ನಿಗದಿಗಿಂತ 300 ಪಟ್ಟು ಅಧಿಕ ಹಣ ಖರ್ಚು- ಆರೋಪ ತಳ್ಳಿ ಹಾಕಿದ ಕೇಂದ್ರ ಸರ್ಕಾರ

    ಅಮೈ ದೇವರಾವ್‌ ಅವರಿಗೆ ಈ ಹಿಂದೆ 2019ರಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು. ಈ ಕೃಷಿ ಕೆಲಸಕ್ಕೆ ʼತಳಿ ತಪಸ್ವಿʼ ಬಿರುದು ಸಿಕ್ಕಿದೆ.  ರಾಷ್ಟ್ರಮಟ್ಟದ ಪ್ರತಿಷ್ಠಿತ ʼಸೃಷ್ಟಿ ಸಮ್ಮಾನ್‌ʼ ಪ್ರಶಸ್ತಿಯೂ ದೊರಕಿದೆ.

    ಯಾರು ಅಮೈ ದೇವರಾವ್‌?
    ತಮ್ಮ ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ (P addy) ತಳಿಗಳನ್ನು ಬೆಳೆದಿರುವ ಸಾಧಕ.  ವರ್ಷಕ್ಕೆ ಎರಡು ಬೆಳೆ ಬೆಳೆಯುತ್ತಿದ್ದು,  ಪ್ರತಿಸಲವೂ 50 ಕ್ವಿಂಟಾಲ್‌ಗಿಂತಲೂಅಧಿಕ ಇಳುವರಿ ಸಿಗುತ್ತಿದೆ.

    ಹಿಂದೆ ಏಳು ಜೋಡು ಎತ್ತುಗಳಿಂದ ಗದ್ದೆಯನ್ನು ಹಸನು ಮಾಡಿ ಕೃಷಿ ಮಾಡುತ್ತಿದ್ದ ಇವರು 25 ವರ್ಷಗಳಿಂದ ಟಿಲ್ಲರ್ ಉಪಯೋಗಿಸಿಕೊಂಡು ಗದ್ದೆಯನ್ನು ಉಳುತ್ತಿದ್ದಾರೆ. ಒಂದೇ ಗದ್ದೆಯಲ್ಲಿ ಅನೇಕ ಬಗೆಯ ತಳಿಗಳನ್ನು ನಾಟಿ ಮಾಡುವ ದೇವರಾವ್ ಇದು ಯಾವ ತಳಿ ಎಂಬುದನ್ನು ಗುರುತಿಸುವ ಸಾಮರ್ಥ್ಯ ಹೊಂದಿದ್ದಾರೆ.

    ಹಿಂದೆ ನಾಲ್ಕು ಬೆಳೆಯನ್ನು ಬೆಳೆಯುತ್ತಿದ್ದ ದೇವರಾವ್ ಅವರು, ಕೆಲ ವರ್ಷಗಳಿಂದ ಎಣೆಲು ಮತ್ತು ಸುಗ್ಗಿ ಬೆಳೆಯನ್ನು ಬೆಳೆಯುತ್ತಿದ್ದಾರೆ. ಭತ್ತದ ವಿವಿಧ ತಳಿಗಳಲ್ಲೂ ದೀರ್ಘಾವಧಿ ಬೆಳೆ ಹಾಗೂ ಅಲ್ಪಾವಧಿ ಬೆಳೆಯನ್ನು ಮಾಡುತ್ತಿದ್ದಾರೆ.

    1988 ರಿಂದ ರಾಸಾಯನಿಕ ಬಳಕೆಗೆ ಸಂಪೂರ್ಣ ವಿದಾಯ ಹೇಳಿದ್ದಾರೆ. ಹಟ್ಟಿಯ ಗೊಬ್ಬರನ್ನು ಬಳಸುವ ಇವರು ಭತ್ತವನ್ನು ಮನೆಯಲ್ಲಿಯೇ ಒಣಗಿಸಿ ಸ್ವಂತ ಹಲ್ಲರಿನಲ್ಲಿ ಅಕ್ಕಿ ಮಾಡುತ್ತಾರೆ. ದೇವ ರಾವ್ ಮನೆಗೇ ಬಂದು ಜನರು ಅಕ್ಕಿ ಖರೀದಿಸುತ್ತಿರುವುದು ವಿಶೇಷ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]