Tag: ದ್ವಿತೀಯ ಪಿಯು

  • ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTCಯಿಂದ ಉಚಿತ ಸೇವೆ

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTCಯಿಂದ ಉಚಿತ ಸೇವೆ

    ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಬಿಎಂಟಿಸಿ ವತಿಯಿಂದ ಪರೀಕ್ಷೆ ದಿನ ಉಚಿತ ಓಡಾಟಕ್ಕೆ ಅವಕಾಶ ಮಾಡಿದೆ.

    ಪೂರಕ ಪರೀಕ್ಷೆ ದಿನಾಂಕ 19-08-2021 ರಿಂದ 03-09-2021ರವರೆಗೆ ನಿಗದಿಯಾಗಿದ್ದು. ಈ ಪರೀಕ್ಷೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರ ತೋರಿಸುವ ಮೂಲಕ ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ತೆರಳೋದಕ್ಕೆ ಅವಕಾಶ ಮಾಡಿ ಕೊಡಲಾಗಿದೆ.

    ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬಿಎಂಟಿಸಿಯು ವಿದ್ಯಾರ್ಥಿ ಸಮುದಾಯ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ಇದನ್ನೂ ಓದಿ: ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

  • ದ್ವಿತೀಯ ಪಿಯು ಫಲಿತಾಂಶಕ್ಕೆ ಹೈಕೋರ್ಟ್ ತಡೆ

    ದ್ವಿತೀಯ ಪಿಯು ಫಲಿತಾಂಶಕ್ಕೆ ಹೈಕೋರ್ಟ್ ತಡೆ

    ಬೆಂಗಳೂರು: ರಾಜ್ಯ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಿದೆ

    ಕೊರೊನಾ ರಣಾರ್ಭಟ ಹಿನ್ನೆಲೆಯಲ್ಲಿ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯು ವಿದ್ಯಾರ್ಥಿಗಳು ಪಾಸ್ ಅಂತ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ರಿಪೀಟರ್ಸ್ ಅಂದ್ರೆ ಈಗಾಗಲೇ ಫೇಲ್ ಆಗಿರೋ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಿಯೇ ಪಾಸ್ ಮಾಡಲು ನಿರ್ಧರಿಸಿದೆ. ಸರ್ಕಾರದ ಈ ದ್ವಂದ್ವ ನಿರ್ಧಾರಕ್ಕೆ ರಾಜ್ಯ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

    ರಿಪೀಟರ್ಸ್ ಪರವಾಗಿ ದಾಖಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪರೀಕ್ಷೆ ಇಲ್ಲದೇ ಪಾಸ್ ಮಾಡೋದಾದರೆ ಎಲ್ಲರನ್ನು ಪಾಸ್ ಮಾಡಿ. ಕೇವಲ ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ಗೆ ಪರೀಕ್ಷೆ ಮಾಡುವ ನಿರ್ಧಾರ ಸರಿಯಲ್ಲ. ಗುರುವಾರದವರೆಗೆ ಪಿಯು ಫಲಿತಾಂಶ ಪ್ರಕಟಿಸುವಂತಿಲ್ಲ. ಈ ಬಗ್ಗೆ ಗುರುವಾರದೊಳಗೆ ಸ್ಪಷ್ಟನೆ ನೀಡಿ ಎಂದು ಅಡ್ವೋಕೇಟ್ ಜನೆರಲ್‍ಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲಿಯವರೆಗೂ ಫಲಿತಾಂಶ ಪ್ರಕಟಿಸಬಾರದು ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.

    ಇದೇ ಗುರುವಾರ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ. ಸರ್ಕಾರ ಎಲ್ಲರನ್ನೂ ಒಂದೇ ತಕ್ಕಡಿಗೆ ಹಾಕಿ ಪಾಸ್ ಮಾಡುವ ನಿರ್ಧಾರ ಕೈಗೊಳ್ಳುತ್ತಾ..? ಇಲ್ಲ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಾ ಎಂಬ ಕುತೂಹಲ ಮನೆ ಮಾಡಿದೆ.

  • ರಾಜ್ಯದಲ್ಲಿಯೂ SSLC, ದ್ವಿತೀಯ ಪಿಯು ಪರೀಕ್ಷೆ ರದ್ದಾಗುತ್ತಾ?

    ರಾಜ್ಯದಲ್ಲಿಯೂ SSLC, ದ್ವಿತೀಯ ಪಿಯು ಪರೀಕ್ಷೆ ರದ್ದಾಗುತ್ತಾ?

    ಬೆಂಗಳೂರು: ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳು ರದ್ದಾಗುತ್ತಾ ಅನ್ನೋ ಪ್ರಶ್ನೆಯೊಂದು ಮೂಡಿದೆ. ಕೇಂದ್ರ ಸಿಬಿಎಸ್‍ಇ 12ನೇ ತರಗತಿಯ ಪರೀಕ್ಷೆ ರದ್ದುಗೊಳಿಸಿದ ಬೆನ್ನಲ್ಲೇ ಈ ಪ್ರಶ್ನೆ ಉದ್ಬವವಾಗಿದೆ.

    ಶೀಘ್ರದಲ್ಲಿ ಸೂಕ್ತ ತೀರ್ಮಾನ: ಸಿಬಿಎಸ್‍ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

    ಸದ್ಯ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳನ್ನ ಮುಂದೂಡಲಾಗಿದೆ. ಕೊರೊನಾ ಹೆಚ್ಚಳ ಹಿನ್ನೆಲೆ ಪರೀಕ್ಷೆ ದಿನಾಂಕ ಇನ್ನೂ ಅಂತಿಮವಾಗಿಲ್ಲ. ಈಗ ಕೇಂದ್ರ ಸರ್ಕಾರ ಸಿಬಿಎಸ್‍ಇ 12ನೇ ತರಗತಿಗಳ ಪರೀಕ್ಷೆಗಳನ್ನ ರದ್ದು ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಪರೀಕ್ಷೆ ನಡೆಸುವ ಕುರಿತು ಇನ್ನೆರಡು ದಿನಗಳಲ್ಲಿ ಸರ್ಕಾರದಿಂದ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಚಾಮರಾಜನಗರ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ಕೂಡಲೇ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ತಜ್ಞರು, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ಬಳಿಕ ಸರ್ಕಾರ ತನ್ನ ಅಂತಿಮ ನಿರ್ಧಾರ ಪ್ರಕಟಿಸಲಿದೆ.

    ಪರೀಕ್ಷೆ ರದ್ದು: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಕೊರೋನಾ ಪರಿಸ್ಥಿತಿ ಹೀಗಿರುವಾಗ 12ನೇ ಕ್ಲಾಸ್ ರದ್ದು ಮಾಡಬಾರದೇಕೆ ಅಂತ ಸೋಮವಾರ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಲು ಕೇಂದ್ರ ಸರ್ಕಾರ 3 ದಿನಗಳ ಸಮಯ ಪಡೆದಿತ್ತು. ಇವತ್ತು ಸಂಜೆ 5.30ರ ಹೊತ್ತಿಗೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ ತಜ್ಞರು ಮತ್ತು ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ರು. ಸಭೆಯಲ್ಲಿ ವ್ಯಾಪಕ ಚರ್ಚೆ ನಡೀತು. ಬಳಿಕ, ಕೊರೊನಾ ಸಾಂಕ್ರಾಮಿಕ ರೋಗದ ಹಾವಳಿಗೆ ನಮ್ಮ ವಿದ್ಯಾರ್ಥಿಗಳು ತುತ್ತಾಗಬಾರದು ಅಂತ ಪರೀಕ್ಷೆಯನ್ನು ರದ್ದುಗೊಳಿಸುತ್ತಿರೋದಾಗಿ ಮೋದಿ ಹೇಳಿದ್ರು.

    ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಹಾಗಾಗಿ, ವಿದ್ಯಾರ್ಥಿಸ್ನೇಹಿ ನಿರ್ಧಾರ ತೆಗೆದುಕೊಂಡಿದ್ದೇವೆ ಅಂತ ಪ್ರಧಾನಿ ಹೇಳಿದ್ರು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಯಸಿದ್ದೇ ಆದಲ್ಲಿ ಕೊರೊನಾ ಸಹಜ ಸ್ಥಿತಿಗೆ ಬಂದ ಮೇಲೆ ಪರೀಕ್ಷೆ ತೆಗೆದುಕೊಳ್ಳಬಹುದು. ಇಲ್ಲವಾದಲ್ಲಿ ಸಿಬಿಎಸ್‍ಇ ಬೇಕಾದರೆ ಹೊಸ ಆಬ್ಜೆಕ್ಟೀವ್ ಮಾದರಿ ಬಳಸಬಹುದು. ಹಿಂದಿನ 3 ಇಂಟರ್ ನಲ್ ಪರೀಕ್ಷೆಗಳ ಅಂಕ ಆಧರಿಸಿ ಫಲಿತಾಂಶ ಕೊಡಬಹುದು ಅಂತ ಮೋದಿ ಹೇಳಿದ್ದಾರೆ. ಏಪ್ರಿಲ್ 18ರಂದು ಸಿಬಿಎಸ್‍ಇ 10ನೇ ಕ್ಲಾಸ್ ಪರೀಕ್ಷೆ ರದ್ದುಗೊಳಿಸಿ, 12ನೇ ಕ್ಲಾಸ್ ಎಕ್ಸಾಂ ಮುಂದೂಡಲಾಗಿತ್ತು. ಇದೀಗ ರದ್ದು ಮಾಡಲಾಗಿದೆ.

  • ದ್ವಿತೀಯ ಪಿಯು ಪರೀಕ್ಷೆಯ ಅಧಿಕೃತ ವೇಳಾಪಟ್ಟಿ ಪ್ರಕಟ

    ದ್ವಿತೀಯ ಪಿಯು ಪರೀಕ್ಷೆಯ ಅಧಿಕೃತ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ 23 ವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಸಂಬಂಧ ಇಂದು ಪಿಯು ಬೋರ್ಡ್ ಅಂತಿಮ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ಮಾರ್ಚ್ 4 ರಂದು ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ ನಡೆದರೆ ಮಾರ್ಚ್ 24 ರಂದು ಕೊನೆಯದಾಗಿ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

    ವೇಳಾಪಟ್ಟಿ ಹೀಗಿದೆ:
    ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ
    ಮಾರ್ಚ್ 5 – ತಮಿಳು, ತೆಲಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
    ಮಾರ್ಚ್ 6 – ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ

    ಮಾರ್ಚ್ 7 – ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ,
    ಮಾರ್ಚ್ 9ರಂದು ಇನ್ಫಾರ್ಮೇಶನ್ ಟೆಕ್ನಾಲಜಿ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್ ಹಾಗೂ ಬ್ಯುಟಿ ಅಂಡ್ ವೆಲ್‌ನೆಸ್
    ಮಾರ್ಚ್ 10 – ಉರ್ದು
    ಮಾರ್ಚ್ 11 – ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ

    ಮಾರ್ಚ್ 12 – ಭೂಗೋಳಶಾಸ್ತ್ರ
    ಮಾರ್ಚ್ 13 – ಎಜುಕೇಶನ್ (ಶಿಕ್ಷಣ)
    ಮಾರ್ಚ್ 14 – ಮನಃಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್

    ಮಾರ್ಚ್ 16 – ಲಾಜಿಕ್, ಹೋಮ್ ಸೈನ್ಸ್, ಭೂ ವಿಜ್ಞಾನ
    ಮಾರ್ಚ್ 17 – ಅರ್ಥಶಾಸ್ತ್ರ, ಜೀವಶಾಸ್ತ್ರ
    ಮಾರ್ಚ್ 18 – ಹಿಂದಿ
    ಮಾರ್ಚ್ 19 – ಕನ್ನಡ

    ಮಾರ್ಚ್ 20 – ಸಂಸ್ಕೃತ
    ಮಾರ್ಚ್ 21 – ರಾಜ್ಯಶಾಸ್ತ್ರ, ಲೆಕ್ಕಶಾಸ್ತ್ರ
    ಮಾರ್ಚ್ 23 – ಇಂಗ್ಲಿಷ್

    ಬಹುದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷೆಯ ವೇಳಾಪಟ್ಟಿಗೆ ಕಾಯುತ್ತಿದ್ದರು. ಪರೀಕ್ಷಾ ಸಮಯ ಲಭ್ಯವಾಗಿದ್ದು, ಸಮಯಕ್ಕನುಗುಣವಾಗಿ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕಿದೆ.

  • ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

    ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 18 ವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದು ಪಿಯು ಬೋರ್ಡ್ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ.

    ವೇಳಾಪಟ್ಟಿ ಹೇಗಿದೆ:
    ಮಾರ್ಚ್ 1 – ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2 – ಎನ್.ಎಸ್.ಕ್ಯೂ.ಎಫ್, ಮಾರ್ಚ್ 5 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾರ್ಚ್ 06 – ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ, ಮಾರ್ಚ್ 07 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ, ಮಾರ್ಚ್ 8- ಉರ್ದು, ಸಂಸ್ಕೃತ, ಮಾರ್ಚ್ 9- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 11- ವ್ಯವಹಾರ ಅಧ್ಯಾಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ, ಮಾರ್ಚ್ 12- ಭೂಗೋಳ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮಾರ್ಚ್ 13 – ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಮಾರ್ಚ್ 14- ಇತಿಹಾಸ, ಜೀವಶಾಸ್ತ್ರ, ಬೇಸಿಕ್ ಮ್ಯಾಥ್ಸ್, ಮಾರ್ಚ್ 15- ಹಿಂದಿ, ಮಾರ್ಚ್ 16- ಕನ್ನಡ, ಮಾರ್ಚ್ 18 – ಇಂಗ್ಲೀಷ್

    ಬಹುದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷೆಯ ವೇಳಾಪಟ್ಟಿಗೆ ಕಾಯುತ್ತಿದ್ದರು. ಪರೀಕ್ಷಾ ಸಮಯ ಲಭ್ಯವಾಗಿದ್ದು, ಸಮಯಕ್ಕನುಗುಣವಾಗಿ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv