Tag: ದ್ವಿತೀಯ ಪಿಯುಸಿ

  • SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ (SSLC Exam) ಹಾಗೂ ದ್ವಿತೀಯ ಪಿಯುಸಿ (2nd PUC Exam) ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ www.kseab.karnataka.gov.in ನಲ್ಲಿ ಪರೀಕ್ಷೆ-1, ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟಿಸಿದೆ. 2026ರ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್‌ 9ರ ವರೆಗೆ ಕಾಲಾವಕಾಶ ನೀಡಲಾಗಿದೆ.

    ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

    2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
    ದ್ವಿತೀಯ ಪಿಯುಸಿ ಪರೀಕ್ಷೆ – 1ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೊದಲ ಪರೀಕ್ಷೆ 2026ರ ಫೆಬ್ರವರಿ 28 ರಂದು ನಡೆಯಲಿದೆ. ಮಾರ್ಚ್ 17 ರಂದು ಕೊನೆಯ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ – 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2026ರ ಏಪ್ರಿಲ್ 25 ರಂದು ಪರೀಕ್ಷೆ ಶುರುವಾಗಿ, ಮೇ 9 ರಂದು ಕೊನೆಗೊಳ್ಳಲಿದೆ.

    SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
    SSLC ಪರೀಕ್ಷೆ – 1ರ ತಾತ್ಕಾಲಿಕ ವೇಳಾಪಟ್ಟಿಯಂತೆ ಪರೀಕ್ಷೆ 2026ರ ಮಾರ್ಚ್ 18 ರಂದು ಆರಂಭವಾಗಿ ಏಪ್ರಿಲ್ 1 ರಂದು ಕೊನೆಗೊಳ್ಳಲಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ – 2ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೇ 18ರಂದು ಪರೀಕ್ಷೆ ಆರಂಭವಾಗಿ ಮೇ 25 ರಂದು ಕೊನೆಗೊಳ್ಳಲಿದೆ.

  • ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ

    ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ

    – ಕೆ.ನಿರ್ಮಲಾ ದ್ವಿತೀಯ ಸ್ಥಾನ

    ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ (Second PUC Result) ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ (Vijayanagara) ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.

    600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌

    ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕೆ.ನಿರ್ಮಲಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ನಿರ್ಮಲಾ ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ. ನಿರ್ಮಲಾ 600ಕ್ಕೆ 596 ಅಂಕ ಪಡೆದಿದ್ದಾರೆ.‌ ಇದನ್ನೂ ಓದಿ: ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

  • ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಫಸ್ಟ್‌,  ದಕ್ಷಿಣ ಕನ್ನಡ ಸೆಕೆಂಡ್‌

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌

    ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Second PUC) ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

    6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.  ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%)  ಪಡೆದುಕೊಂಡಿದೆ.

    ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಅಮೂಲ್ಯ ಕಾಮತ್‌ 599 ಅಂಕ ಪಡೆದು ಮೊದಲ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ ಪಡೆದಿದ್ದಾರೆ.  ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

    ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ ಪಾಸ್‌?
    ಉನ್ನತ ಶ್ರೇಣಿ- 1,00,571
    ಪ್ರಥಮ ದರ್ಜೆ- 2,78,054
    ದ್ವೀತಿಯ ದರ್ಜೆ-70969
    ತೃತೀಯ ದರ್ಜೆ-18845

    ವಿಭಾಗವರು ಸಾಧನೆ
    ಕಲಾ
    ಹಾಜರಾದವರು :1,53,043
    ಉತ್ತೀರ್ಣ- 81,533 (53.79%)

    ವಾಣಿಜ್ಯ
    ಹಾಜರಾದವರು -2,04,329
    ಉತ್ತೀರ್ಣ -1,55,425 (76.07%)

    ವಿಜ್ಞಾನ
    ಹಾಜರಾದವರು – 2,80,433
    ಉತ್ತೀರ್ಣ – 2,31,461 (82.54%)

    ಮಾಧ್ಯಮವಾರು ಫಲಿತಾಂಶ
    ಕನ್ನಡ
    ಹಾಜರಾದವರು -2,08,794
    ತೇರ್ಗಡೆಯಾದವರು – 1,17,703 (56.37%)

    ಇಂಗ್ಲೀಷ್‌
    ಹಾಜರಾದವರು -4,29,011
    ತೇರ್ಗಡೆಯಾದವರು -3,50,736(81.75%)

    ಇಂದು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

    ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.

    ಪಿಯು ಫಲಿತಾಂಶ ಲಭ್ಯವಾಗುವ ವೆಬ್‌ಸೈಟ್‌ : www.karresultsnic.in

  • ನಾಳೆ ದ್ವಿತೀಯ ಪಿಯುಸಿ ರಿಸಲ್ಟ್

    ನಾಳೆ ದ್ವಿತೀಯ ಪಿಯುಸಿ ರಿಸಲ್ಟ್

    ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ-1 ಪರೀಕ್ಷೆ ಫಲಿತಾಂಶ (2nd PUC Exam Result) ನಾಳೆ (ಏಪ್ರಿಲ್‌ 8 ರಂದು) ಪ್ರಕಟವಾಗಲಿದೆ.

    ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಇದನ್ನೂ ಓದಿ: Breaking | ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

    ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್ ಸೈಟ್ ನಲ್ಲಿ ‌ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ಈ ಬಾರಿ ಪರೀಕ್ಷೆ ನಡೆದಿತ್ತು. ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದನ್ನೂ ಓದಿ: ಮೈಸೂರು ಮಹಾರಾಜರಿಗೆ ಸೇರಿರುವ 4,500 ಎಕ್ರೆ ಭೂಮಿ ವರ್ಗಕ್ಕೆ ಪ್ರಮೋದಾದೇವಿ ಪತ್ರ

    ಫಲಿತಾಂಶ ಲಭ್ಯವಾಗೋ ವೆಬ್ ಸೈಟ್ ಹೀಗಿದೆ. https://kerresults.nic.in

  • ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಬರೆಯುವ ಸಮಯ ಕಡಿತ ಮಾಡಿದ ಸರ್ಕಾರ

    ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಬರೆಯುವ ಸಮಯ ಕಡಿತ ಮಾಡಿದ ಸರ್ಕಾರ

    ಬೆಂಗಳೂರು : ದ್ವಿತೀಯ ಪಿಯುಸಿ (PUC) ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ನೀಡಿದೆ. ಪರೀಕ್ಷೆ (Exam) ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಹೊಸ ನಿಯಮ ಈ ವರ್ಷದ ಅಂದರೆ 2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ. ಸಮಯ ಕಡಿತ ಮಾಡಿರೋ ಸಂಬಂಧ ಕರ್ನಾಟಕ (Karnataka) ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ.

    ಈ ಮೊದಲು ವಿದ್ಯಾರ್ಥಿಗಳು ಉತ್ತರ ಬರೆಯಲು 3 ಗಂಟೆ 15 ನಿಮಿಷ ಸಮಯ ಕೊಡಲಾಗ್ತಿತ್ತು.3 ಗಂಟೆ ಉತ್ತರ ಬರೆಯಲು ಮತ್ತು 15 ನಿಮಿಷಗಳು ಪ್ರಶ್ನೆ ಪತ್ರಿಕೆ ಓದಲು ನೀಡಲಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಉತ್ತರ ಬರೆಯಲು 2 ಗಂಟೆ 45 ನಿಮಿಷ ಸಮಯ ಮತ್ತು 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗಿದ್ದು, 15 ನಿಮಿಷ ಸಮಯವನ್ನು ಕಡಿತ ಮಾಡಲಾಗಿದೆ. ಇದನ್ನೂ ಓದಿ: Manipur | ರಾಕೆಟ್‌ ದಾಳಿ ಬೆನ್ನಲ್ಲೇ ಮಷೀನ್ ಗನ್‌ ಬಳಕೆಗೆ ಮುಂದಾದ ಪೊಲೀಸರು – ಕಾಂಗ್ರೆಸ್‌ ವಿರೋಧ

    ಸಮಯ ಕಡಿತಕ್ಕೆ ಬೋರ್ಡ್ ಕಾರಣ ನೀಡಿದೆ. ಮೊದಲು 3 ಗಂಟೆ 15 ನಿಮಿಷ ಇದ್ದ ಸಮಯದಲ್ಲಿ 100 ಅಂಕಗಳಿಗೆ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತಿತ್ತು. ಆದರೆ ಈಗ 70/80 ಅಂಕಗಳಿಗೆ ಲಿಖಿತ ಪರೀಕ್ಷೆ ಇದ್ದು,ಉಳಿದ ಅಂಕಗಳು ಇಂಟ್ರನಲ್ ಅಸೆಸ್ಮೆಂಟ್ ಗೆ ನೀಡಲಾಗ್ತಿದೆ. ಈ ಹಿನ್ನಲೆಯಲ್ಲಿ 15 ನಿಮಿಷ ಉತ್ತರ ಬರೆಯಲು ಕಡಿತ ಮಾಡಲಾಗಿದೆ ಅನ್ನೋದು ಇಲಾಖೆ ವಾದವಾಗಿದೆ. ಅಂಕಗಳು ಕಡಿಮೆ ಮಾಡಿದರು 15 ನಿಮಿಷ ಹೆಚ್ಚುವರಿ ಸಮಯ ಕೊಟ್ಟಿದ್ರೆ ಏನ್ ಸಮಸ್ಯೆ ಆಗುತ್ತೆ ಅನ್ನೋದು ಪೋಷಕರು, ಶಿಕ್ಷಣ ತಜ್ಞರ ಪ್ರಶ್ನೆಯಾಗಿದೆ. ಇದನ್ನೂ ಓದಿ:  ನಾಗಮಂಗಲ ಗಲಭೆ| ಅಂಗಡಿ ಮುಗ್ಗಟ್ಟುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಹೆಚ್‌ಡಿಕೆ

  • ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ: KEA

    ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ: KEA

    ಬೆಂಗಳೂರು : ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವುದು ಸತ್ಯಕ್ಕೆ ದೂರವಾದುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

    ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ 50%ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರಾಂಕ್‌ (Rank) ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

    ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ CET ರಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: DCET-2024: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

    ಬಿಎಸ್‌ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.

  • ಬುಧವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬುಧವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Second PUC Exam Result) ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ.

    ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

    ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

  • ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ ಫಲಿತಾಂಶ ಪ್ರಕಟ – ಬಾಲಕಿಯರೇ ಮೇಲುಗೈ

    ದ್ವಿತೀಯ ಪಿಯುಸಿ ಪೂರಕ‌ ಪರೀಕ್ಷೆ ಫಲಿತಾಂಶ ಪ್ರಕಟ – ಬಾಲಕಿಯರೇ ಮೇಲುಗೈ

    ಬೆಂಗಳೂರು : ಮೇ- ಜೂನ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ (2nd PUC Supplementary Result) ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಫಲಿತಾಂಶ ಪ್ರಕಟಗೊಂಡಿದೆ. ಮುಖ್ಯ ಪರೀಕ್ಷೆಯಂತೆ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ‌ ಮೇಲುಗೈ ಸಾಧಿಸಿದ್ದಾರೆ‌

    ಇಲಾಖೆ ವೆಬ್ ಸೈಟ್‌ನಲ್ಲಿ ‌ಫಲಿತಾಂಶ ಲಭ್ಯವಿದೆ. ಪೂರಕ ಪರೀಕ್ಷೆಯಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದು, ರಾಜ್ಯದಲ್ಲಿ 32% ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದವರ ಪೈಕಿ 28,901 ಬಾಲಕರು (30.22%) ಹಾಗೂ 21,577 ಬಾಲಕಿಯರು (34.75%) ತೇರ್ಗಡೆಯಾಗಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.

    ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 26 ಕೊನೆ ದಿನವಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿದೆ.

    ಪರೀಕ್ಷೆಯ ಫಲಿತಾಂಶದ ವೆಬ್‌ಸೈಟ್‌ ವೀಕ್ಷಿಸಲು ಕ್ಲಿಕ್‌ ಮಾಡಿ: Karnataka 2nd PUC supplementary result

  • ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ ಬದಲಾವಣೆ

    ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ ಬದಲಾವಣೆ

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ (2nd PUC) ಪೂರಕ ಪರೀಕ್ಷೆ (Exam) ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ.

    ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದೆ. ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23 ರಿಂದ ಜೂನ್ 3 ವರೆಗೆ ಪರೀಕ್ಷೆ ನಿಗದಿಯಾಗಿದೆ.

    ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ:

    ಮೇ 23- ಕನ್ನಡ, ಅರೇಬಿಕ್
    ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ.
    ಮೇ 25- ಇಂಗ್ಲೀಷ್
    ಮೇ 26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
    ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ
    ಮೇ 29- ಹಿಂದಿ.
    ಮೇ 30- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
    ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
    ಜೂನ್ 1- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
    ಜೂನ್ 2- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
    ಜೂನ್ 3- ಅರ್ಥಶಾಸ್ತ್ರ, ಜೀವಶಾಸ್ತ್ರ

  • ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

    ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

    ಬೆಂಗಳೂರು: ದ್ವಿತೀಯ ಪಿಯುಸಿ (2nd PUC) ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿ ಪ್ರಕಟ ಮಾಡಿದ್ದು, ಮೇ 22 ರಿಂದ ಜೂನ್ 2ರವರೆಗೆ ಪರೀಕ್ಷೆ ನಡೆಯಲಿದೆ.

    ಪರೀಕ್ಷೆಯ ವೇಳಾಪಟ್ಟಿ:
    ಮೇ 22- ಕನ್ನಡ, ಅರೇಬಿಕ್
    ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
    ಮೇ 24- ಇಂಗ್ಲೀಷ್
    ಮೇ 25- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ

    Preparations for rescheduled exam of PUC English paper on June 18 seen at a centre in Chikkamagalur on Wednesday. -KPN ### Chikkamagalur Preparations for rescheduled exam

    ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ
    ಮೇ 27- ಹಿಂದಿ
    ಮೇ 29- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
    ಮೇ 30- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
    ಮೇ 31- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
    ಜೂನ್ 1- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
    ಜೂನ್ 2- ಅರ್ಥಶಾಸ್ತ್ರ, ಜೀವಶಾಸ್ತ್ರ