Tag: ದ್ವಿತೀಯ ಪಿಯುಸಿ

  • 2nd PUC ಫಲಿತಾಂಶ ‌ಪ್ರಕಟ- 61.88% ಮಕ್ಕಳು ಪಾಸ್‌, ವಿದ್ಯಾರ್ಥಿನಿಯರೇ ಮೇಲುಗೈ

    2nd PUC ಫಲಿತಾಂಶ ‌ಪ್ರಕಟ- 61.88% ಮಕ್ಕಳು ಪಾಸ್‌, ವಿದ್ಯಾರ್ಥಿನಿಯರೇ ಮೇಲುಗೈ

    ಬೆಂಗಳೂರು: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ‌ಪ್ರಕಟವಾಗಿದ್ದು, ರಾಜ್ಯದಲ್ಲಿ 61.88% ಮಕ್ಕಳು ಪಾಸ್‌ ಆಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

    ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಈ ವೇಳೆ ಮಾತನಾಡಿದ ಅವರು, ಮಕ್ಕಳು ನಿರೀಕ್ಷೆಗಿಂತ ಚೆನ್ನಾಗಿ ಮಾಡಿದ್ದಾರೆ. ಕೋವಿಡ್ ಮಧ್ಯೆ ಉತ್ತಮವಾಗಿ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಮಕ್ಕಳು ಸ್ಪೋಟೀವ್ ಆಗಿ ಫಲಿತಾಂಶ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

    bc nagesh

    ದಕ್ಷಿಣ ಕನ್ನಡ ಮೊದಲ ಸ್ಥಾನ (88.02%) ಪಡೆದಿದ್ದು, 2 ಹಾಗೂ 3 ನೇ ಸ್ಥಾನದಲ್ಲಿ ಕ್ರಮವಾಗಿ ಉಡುಪಿ (86.38%) ವಿಜಯಪುರ (77.14%) ಪಡೆದಿದ್ದು, ಕೊನೆ ಸ್ಥಾನ ಚಿತ್ರದುರ್ಗ (49.31%) ಪಡೆದುಕೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು www.karresults.nic.in ಹಾಗೂ www.pue.kar.nic.in ವೆಬ್‌ಸೈಟ್‌ ಮೂಲಕ ವೀಕ್ಷಿಸಬಹುದು.

    81 ಮೌಲ್ಯಮಾಪನ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 4,02,697 ವಿದ್ಯಾರ್ಥಿ ಪಾಸ್ ಆಗಿದ್ದಾರೆ ಹಾಗೂ ರಿಪೀಟರ್ಸ್ 61,838ರಲ್ಲಿ 14,403 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇನ್ನುಳಿದಂತೆ 21,931 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 5,866 ಮಂದಿ ಪಾಸ್ ಆಗಿದ್ದಾರೆ. ಒಟ್ಟಾರೆ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    4,22,966 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಅದರಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೇ ಹೆಚ್ಚು ಪಾಸ್‌ ಆಗಿದ್ದಾರೆ. ವಿಜ್ಞಾನ ವಿಭಾಗದ ಶೇ. 72.53ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ಶೇ. 64.97ರಷ್ಟು ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ ಶೇ. 48.71ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,810 ವಿದ್ಯಾರ್ಥಿಗಳು ಗ್ರೇಸ್ ಅಂಕ ಪಡೆದು ಪಾಸ್ ಆಗಿದ್ದಾರೆ. ಈ ಬಾರಿ ಒಂದೇ ಒಂದು ಕಾಲೇಜಿನಲ್ಲೂ ಶೂನ್ಯ ಫಲಿತಾಂಶ ದಾಖಲಾಗಿಲ್ಲ. ಇದನ್ನೂ ಓದಿ: ಪ್ರಧಾನಿ ಮೋದಿ ವೇದಿಕೆಯಲ್ಲಿ ಯೋಗ ಮಾಡಲು ಯದುವೀರ್‌ಗೆ ಆಹ್ವಾನ

    ಸರ್ಕಾರಿ ಕಾಲೇಜುಗಳಲ್ಲಿ 52.84% ಫಲಿತಾಂಶ ಬಂದಿದ್ದು, ಅನುದಾನಿತ ಕಾಲೇಜು 62.05% ಹಾಗೂ ಖಾಸಗಿ ಕಾಲೇಜುಗಳು 76.50% ಫಲಿತಾಂಶ ಪಡೆದುಕೊಂಡಿವೆ. ಇನ್ನುಳಿದಂತೆ ಕಾರ್ಪೊರೇಷನ್ ಕಾಲೇಜು 55.72% ಫಲಿತಾಂಶ ಪಡೆದುಕೊಂಡಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 30 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜುಲೈ 13 ಕೊನೆ ದಿನವಾಗಿದೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

    Live Tv

  • 2nd PUC ಫಲಿತಾಂಶ ನಾಳೆ ಪ್ರಕಟ

    2nd PUC ಫಲಿತಾಂಶ ನಾಳೆ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ (ಜೂ.18) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

    ಈ ಕುರಿತು ಬಿ.ಸಿ.ನಾಗೇಶ್‌ ಅವರು ಟ್ವೀಟ್‌ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ದೇಶ ಸೇವೆ ಮಾಡಲು ಯುವಕರಿಗೆ ಸುವರ್ಣ ಅವಕಾಶ: ರಾಜನಾಥ್ ಸಿಂಗ್

    ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. 6.80 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಆಗಿದ್ದರು. ಅವರಲ್ಲಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಆಗಿದ್ದಾರೆ. ರಾಜ್ಯದ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

    Live Tv

  • ಹುಬ್ಬಳ್ಳಿ ಗಲಭೆ ಪ್ರಮುಖ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರ್

    ಹುಬ್ಬಳ್ಳಿ ಗಲಭೆ ಪ್ರಮುಖ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರ್

    ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಹಿರೇಮಠ್ ಶುಕ್ರವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.

    ಶುಕ್ರವಾರ ಬೆಳಗ್ಗೆ 10:15ಕ್ಕೆ ದ್ವಿತೀಯ ಪಿಯುಸಿಯ ಮೊದಲ ಪರೀಕ್ಷೆ ಎದುರಿಸಲಿರುವ ಅಭಿಷೇಕ್ ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ. ಕಾಮರ್ಸ್ ವಿದ್ಯಾರ್ಥಿಯಾಗಿರುವ ಅಭಿಷೇಕ್ ಮಹೇಶ್ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಸ್ಟಡೀಸ್ ಪರೀಕ್ಷೆ ಬರೆಯಲಿದ್ದಾನೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಹಿಜಬ್‌ ಹೋರಾಟಗಾರ್ತಿಯರು

    ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಅಶೋಕನಗರದ ಉಪ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಪರೀಕ್ಷೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‌ಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಸುಪ್ರಭಾತ ಸೇವೆಗೆ ಅನುಮತಿ ನೀಡಿ- ಹಿಂದೂ ಮುಖಂಡರಿಂದ ಮತ್ತೊಂದು ಬೇಡಿಕೆ

     

  • ಹಿಜಬ್ ಹೋರಾಟಗಾರ್ತಿಯರು ಸೆಕೆಂಡ್ ಪಿಯುಸಿ ಪರೀಕ್ಷೆ ಬರೆಯೋದು ಡೌಟ್

    ಹಿಜಬ್ ಹೋರಾಟಗಾರ್ತಿಯರು ಸೆಕೆಂಡ್ ಪಿಯುಸಿ ಪರೀಕ್ಷೆ ಬರೆಯೋದು ಡೌಟ್

    ಉಡುಪಿ: ರಾಜ್ಯಾದ್ಯಂತ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಹಿಜಬ್ ಹೋರಾಟದ ವಿಚಾರಕ್ಕೆ ನಾಳೆ ಆರಂಭವಾಗಲಿರುವ ಪರೀಕ್ಷೆಗಳು ಭಾರೀ ನಿರೀಕ್ಷೆಗೆ ಕಾರಣವಾಗಿದೆ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟ ಆಗಿರುವುದರಿಂದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ತೆಗೆದು ಕ್ಲಾಸಿಗೆ ಬಂದು ಪರೀಕ್ಷೆ ಬರೆಯುತ್ತಾರಾ ಎಂಬುದು ಕುತೂಹಲದ ಪ್ರಶ್ನೆ.

    ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಆಗುತ್ತಿದೆ. ಎಲ್ಲಾ ಜಿಲ್ಲೆಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಹಿಜಬ್ ಹೋರಾಟಗಾರ್ತಿಯರು ಪರೀಕ್ಷೆ ಬರೆಯುತ್ತಾರಾ? ಹೈ ಕೋರ್ಟ್ ತೀರ್ಪಿನಂತೆ ಹಿಜಬ್ ತೆಗೆದು ಪರೀಕ್ಷೆಗೆ ಹಾಜರಾಗುತ್ತಾರೆ ಎಂಬ ಕುತೂಹಲಗಳು ಇವೆ. ಉಡುಪಿಯ ಆರು ಜನ ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು. ಕಾಮರ್ಸ್ ವಿಭಾಗದ ಪರೀಕ್ಷೆಗಳು ನಾಳೆ ನಡೆಯಲಿದ್ದು ನಾಲ್ವರ ಪೈಕಿ ಇಬ್ಬರಿಗೆ ಪರೀಕ್ಷೆ ಇದೆ. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು

    ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಕ್ಕಿಗಾಗಿ ಡಿಸೆಂಬರ್ ಕಡೆಯ ವಾರದಿಂದ ಬಹಿರಂಗ ಹೋರಾಟ ನಡೆಸಿದ್ದರು. ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಹಿಜಬ್ ಗೆ ಅವಕಾಶ ಇಲ್ಲ ಎಂಬ ಮಹತ್ವದ ತೀರ್ಪು ಹೊರಬಿದ್ದಿತ್ತು. ಆನಂತರ ಆರು ವಿದ್ಯಾರ್ಥಿಗಳು ತರಗತಿಗೆ ಪೂರ್ವಭಾವಿ ಪರೀಕ್ಷೆಗಳಿಗೆ ಹಾಜರಾಗಿರಲಿಲ್ಲ. ಆರರ ಪೈಕಿ ಇಬ್ಬರು ಪ್ರಥಮ ಪಿಯು ಪರೀಕ್ಷೆಗೆ ಬಂದಿರಲಿಲ್ಲ. ಹೀಗಾಗಿ ನಾಳೆಯಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗೂ ನಾಲ್ವರು ವಿದ್ಯಾರ್ಥಿಗಳು ಬರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

  • ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್‌ 22ರಿಂದ ಮೇ 18ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ.

    ಪಿಯುಸಿ ಅಂತಿಮ ವೇಳಾಪಟ್ಟಿ
    ಏಪ್ರಿಲ್ 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಏಪ್ರಿಲ್ 23 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ
    ಏಪ್ರಿಲ್ 25 – ಅರ್ಥಶಾಸ್ತ್ರ
    ಏಪ್ರಿಲ್ 26 – ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ
    ಏಪ್ರಿಲ್ 27 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
    ಏಪ್ರಿಲ್ 28 – ಕನ್ನಡ, ಅರೇಬಿಕ್
    ಮೇ 2- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮೇ 4- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್‌ಕೇರ್, ಆಟೋಮೊಬೈಲ್, ಬ್ಯೂಟಿ ಅಂಡ ವೆಲ್‌ನೆಸ್‌
    ಮೇ 5- ಇಂಗ್ಲಿಷ್
    ಮೇ 10- ಇತಿಹಾಸ,ಭೌತಶಾಸ್ತ್ರ
    ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
    ಮೇ 18- ಹಿಂದಿ

    ಈ ಮೊದಲು ಏಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಈ ದಿನಾಂಕದಲ್ಲಿ ಇರುವ ಕಾರಣ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಲಾಗಿತ್ತು. ಮತ್ತೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಈಗ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!

  • ನಾನು ಹೃದಯದಿಂದ ಮುಸ್ಲಿಂ ಮಗಳು, ಹಿಜಬ್‍ನಿಂದಲ್ಲ: ಕಾಶ್ಮೀರ ಟಾಪರ್

    ನಾನು ಹೃದಯದಿಂದ ಮುಸ್ಲಿಂ ಮಗಳು, ಹಿಜಬ್‍ನಿಂದಲ್ಲ: ಕಾಶ್ಮೀರ ಟಾಪರ್

    ಶ್ರೀನಗರ: ನಾನು ಹೃದಯದಿಂದ ಮುಸ್ಲಿಂ ಮಗಳು ಆದರೆ ಹಿಜಬ್‍ನಿಂದಲ್ಲ. ಹೀಗಾಗಿ ನಾನು ಉತ್ತಮ ಮುಸ್ಲಿಂ ಎಂದು ಸಾಬೀತು ಪಡಿಸುವ ಅಗತ್ಯವಿಲ್ಲ ಎಂದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಕಾಶ್ಮೀರಕ್ಕೆ ಪ್ರಥಮ ಸ್ಥಾನ ಪಡೆದ ಶ್ರೀನಗರದ ಆರೂಸಾ ಪರ್ವೇಜ್ ತಿಳಿಸಿದ್ದಾರೆ.

    ಫೆ. 8ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ ಆರೂಸಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗಕ್ಕೆ 500ಕ್ಕೆ 499 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆರೂಸಾಗೆ ಸನ್ಮಾನ ಕಾರ್ಯಕ್ರಮವೊಂದು ನಡೆದಿತ್ತು. ಆದರೆ ಆರೂಸಾ ಹಿಜಬ್ ಧರಿಸದ ಕಾರಣ ಅವರನ್ನು ಟ್ರೋಲ್ ಮಾಡಲಾಗಿತ್ತು. ಜೊತೆಗೆ ಅವರಿಗೆ ಅನೇಕ ಕೊಲೆ ಬೆದರಿಕೆಗಳು ಬಂದಿದ್ದವು.

    ಇದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನನ್ನ ಧರ್ಮ, ನನ್ನ ಹಿಜಬ್ ಮತ್ತು ನನ್ನ ಅಲ್ಲಾ ಇವೆಲ್ಲವೂ ನನ್ನ ವೈಯಕ್ತಿಕ. ನನ್ನ ಧರ್ಮದ ಶ್ರೇಷ್ಠತೆಯನ್ನು ನಂಬುವವರಿಗೆ ನಾನು ಹಿಜಬ್ ಧರಿಸಬೇಕು ಅಥವಾ ಧರಿಸಬಾರದು ಎಂದು ಏಕೆ ಒತ್ತಾಯಿಸಬೇಕು. ಈ ಕಾಮೆಂಟ್‍ಗಳು ನನಗೆ ಅಪ್ರಸ್ತುತವಾಗುತ್ತದೆ. ಆದರೆ ನನ್ನ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್ ಶಾಕ್ – ಪ್ರತಿ ಯೂನಿಟ್‍ಗೆ 30 ಪೈಸೆ ಹೆಚ್ಚಳ?

    ನೀವು ಟ್ರೋಲ್ ಮಾಡುವುದಕ್ಕಿಂತಲೂ ಹೆಚ್ಚಾಗಿ ನಾನು ಅಲ್ಲಾಹುನನ್ನು ನಂಬುವೆ ಮತ್ತು ಇಸ್ಲಾಮಿಕ್ ತತ್ವಗಳನ್ನು ಪಾಲಿಸುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ನಾಳೆ ಹೈಕೋರ್ಟ್‍ನಲ್ಲಿ ಹಿಜಬ್ ಸಂಘರ್ಷ ವಿಚಾರಣೆ – ಪೊಲೀಸ್ ಭದ್ರತೆಯಲ್ಲಿ ಹೈಸ್ಕೂಲ್ ಓಪನ್

  • ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಪಿಯು ಬೋರ್ಡ್ ಎಡವಟ್ಟು- ವಿದ್ಯಾರ್ಥಿನಿ ಪಾಸ್ ಆದ್ರೂ ಫೇಲ್

    ಕೊಪ್ಪಳ: ಪರೀಕ್ಷೆ ಬರೆಯದೇ ಪಾಸ್ ಆಗುವ ಸರ್ಕಾರದ ಆಫರ್ ತಿರಸ್ಕರಿಸಿದ್ದ ವಿದ್ಯಾರ್ಥಿನಿಯ ಭವಿಷ್ಯವೇ ಈಗ ಅತಂತ್ರವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ಭೂಮಿಕಾ ಪಿಯು ಬೋರ್ಡ್ ಎಡವಟ್ಟಿನಿಂದ ಫೇಲ್ ಆಗಿದ್ದಾಳೆ.

    ವಿದ್ಯಾರ್ಥಿನಿ ಭೂಮಿಕಾ 40 ಅಂಕ ಪಡೆದಿದ್ದರೂ 4 ಅಂಕ ಕೊಟ್ಟು ಅನುತ್ತೀರ್ಣ ಮಾಡಿದ್ದಾರೆ. ಕೊರೊನಾ ವೈರಸ್ ಹಾಗೂ ಲಾಕ್‍ಡೌನ್ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಸದೇ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಪಿಯು ಬೋರ್ಡ್ ತೀರ್ಮಾನಿಸಿತ್ತು. ಆದರೆ ಸರ್ಕಾರದ ಆಫರ್ ತಿರಸ್ಕರಿಸಿದ್ದ ಗಂಗಾವತಿಯ ವೆಂಕಟೇಶ್ವರ ಪಿಯು ಕಾಲೇಜಿನ ಭೂಮಿಕಾ ಪರೀಕ್ಷೆ ಬರೆದಿದ್ದಳು. ಇದನ್ನೂ ಓದಿ: ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿದ ವಿದ್ಯಾರ್ಥಿನಿ

    ರಾಸಾಯನ ಶಾಸ್ತ್ರದಲ್ಲಿ ಭೂಮಿಕಾ ಪಡೆದದ್ದು 40 ಅಂಕ ಪಿಯು ಬೋರ್ಡ್ ನ ಎಡವಟ್ಟಿನಿಂದ ವಿದ್ಯಾರ್ಥಿನಿಗೆ 4 ಅಂಕ ನೀಡಿ, ಅನುತ್ತೀರ್ಣ ಮಾಡಿದ್ದಾರೆ. ಹೀಗಾಗಿ ವಿದ್ಯಾರ್ಥಿನಿ ಮನನೊಂದು ಕೆಲ ದಿನ ಊಟ ನಿದ್ದೆ ಸಹ ಮಾಡದೆ ಹತಾಶೆಗೊಂಡಿದ್ದಳು. ಬಳಿಕ ಪಾಲಕರು ಪರೀಕ್ಷೆ ಬರೆದ ಉತ್ತರ ಪತ್ರಿಕೆ ಜೆರಾಕ್ಸ್ ಕಾಪಿ ತರಿಸಿ ನೋಡಿದಾಗ ಆಕೆ 40 ಅಂಕ ಪಡೆದಿರೋದು ಗೊತ್ತಾಗಿದೆ. ಇದನ್ನೂ ಓದಿ: ನಾವು ಸತ್ತ ಮೇಲೂ ನೀನು ನೆಮ್ಮದಿಯಾಗಿರಬಾರದು – ಶಂಕರ್‌ಗೆ ಮಗನದ್ದೇ ಖೆಡ್ಡಾ

    ಪಿಯು ಬೋರ್ಡ್ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಭೂಮಿಕಾ ತಂದೆ ಚಂದ್ರಶೇಖರಗೌಡ ತಾವರಗೇರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ಕೂಡಲೇ ಪಿಯು ಬೋರ್ಡ್ ಮಾಡಿರುವ ತಪ್ಪನ್ನು ತಿದ್ದುಪಡಿ ಮಾಡಿ, ವಿದ್ಯಾರ್ಥಿನಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.

  • ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

    ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

    – ಕೋಟಿ ಜನರಲ್ಲಿ ಒಬ್ಬರಿಗೆ ಬರುವ ಕಾಯಿಲೆಯಿಂದ ಬಳಲುತ್ತಿರುವ ಯುವತಿ

    ಚಿಕ್ಕಮಗಳೂರು: ಹುಟ್ಟಿದಾಗಿನಿಂದ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅರಳಿಕೊಪ್ಪ ಗ್ರಾಮದ ಯುವತಿ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾಳೆ.

    ಶಾಲಾ-ಕಾಲೇಜಿಗೆ ಹೋಗದೆ, ಮನೆಯಲ್ಲೇ ಓದಿ ದೀಪಿಕಾ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪಾಸ್ ಮಾಡಿದ್ದಾಳೆ. ಕೋಟಿ ಜನರಲ್ಲಿ ಒಬ್ಬರಿಗೆ ಬರುವ ಕಾಯಿಲೆಯಿಂದ ಈಕೆ ಬಳಲುತ್ತಿದ್ದಾಳೆ. ಶಾಲಾ-ಕಾಲೇಜು ಸೇರಿದಂತೆ ಮನೆಯಿಂದ ಹೊರ ಹೋಗುವಂತಿಲ್ಲ. ಈಕೆಯದ್ದು ಮನೆಯೊಳಗಿನ ಜೀವನ. ಆದರೂ ಬಾಳೆಹೊನ್ನೂರು ಸಮೀಪದ ಅರಳಿಕೊಪ್ಪ ಗ್ರಾಮದ ಸುಧಾಕರ್-ಪ್ರತಿಮಾ ದಂಪತಿಯ ಪುತ್ರಿ ದೀಪಕಾ ಮೊದಲ ಸಲವೇ ಪಿಯುಸಿ ಪಾಸ್ ಮಾಡಿ ಮಾದರಿಯಾಗಿದ್ದಾಳೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳು ಜಿಎಸ್‍ಟಿಗೆ ಸೇರಿಸಲು ಒಪ್ಪದ ಹೊರತು ಪೆಟ್ರೋಲ್ ಬೆಲೆ ಇಳಿಯಲ್ಲ: ಹರ್ದೀಪ್ ಸಿಂಗ್ ಪುರಿ

    ಈಕೆ ಹುಟ್ಟಿದಾಗಿನಿಂದ ಯಾವುದೇ ಶಾಲಾ-ಕಾಲೇಜಿಗೆ ಹೋಗಿಲ್ಲ. ಯಾವ ಶಿಕ್ಷಕರ ಪಾಠವನ್ನೂ ಕೇಳಿಲ್ಲ. ಯಾವ ಟ್ಯೂಷನ್‍ಗೂ ಹೋಗಿಲ್ಲ. ತಾನೇ ಓದಿ, ತನ್ನ ಗ್ರಹಿಕಾ ಶಕ್ತಿಯಿಂದ ಮೊದಲ ಸಲ ಪರೀಕ್ಷೆ ಎದುರಿಸಿ ಪಿಯುಸಿ ಪಾಸ್ ಮಾಡಿದ್ದಾಳೆ. ಕಳೆದ ಎರಡು ವರ್ಷದ ಹಿಂದೆ ಸರ್ಕಾರ ಖಾಸಗಿಯಾಗಿ ನಡೆಸಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನೂ ಕೂಡ ಪಾಸ್ ಮಾಡಿದ್ದಳು. ಓದಿನ ಜೊತೆಗೆ ಚಿತ್ರಕಲೆ, ಎಂಬ್ರಾಯ್ಡಿಂಗ್, ಕಂಪ್ಯೂಟರ್, ಟೈಲರಿಂಗ್ ಕೂಡ ಮಾಡಿದ್ದಾಳೆ.

    ತನ್ನಂತೆ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ತನ್ನ ತಂಗಿಗೂ ತಾನೇ ಪಾಠ ಮಾಡುತ್ತಿದ್ದಾಳೆ. ಹೆತ್ತವರು ಕೂಡ ಕಳೆದ 20 ವರ್ಷಗಳಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಕ್ಕಳನ್ನು ಯಾವುದೇ ಕೀಳಿರಿಮೆ ಬಾರದಂತೆ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳುತ್ತಿದ್ದಾರೆ. ಓದಿ ದೊಡ್ಡವಳಾಗಿ ತನ್ನಂತೆ ಅಪರೂಪದ ಕಾಯಿಲೆಯಿಂದ ಬಳಲುವವರ ಸೇವೆ ಮಾಡಬೇಕೆಂಬ ಆಸೆ ದೀಪಿಕಾಳದ್ದಾಗಿದೆ. ಹೆತ್ತವರು ಕೂಡ ಮಗಳಿಗೆ ಯಾವುದಾದರೂ ಒಂದು ಕೆಲಸ ಸಿಕ್ಕರೆ ಅವಳ ಜೀವನಕ್ಕೂ ಸಹಕಾರಿಯಾಗಲಿದೆ. ಜೊತೆಗೆ ನಮಗೂ ತುಸು ನೆಮ್ಮದಿ ಸಿಗಲಿದೆ ಎಂದಿದ್ದಾರೆ.

  • ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಎಲ್ಲ ವಿದ್ಯಾರ್ಥಿಗಳು ಪಾಸ್

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಎಲ್ಲ ವಿದ್ಯಾರ್ಥಿಗಳು ಪಾಸ್

    – ಒಟ್ಟು 2,239 ಮಂದಿಗೆ 600 ಅಂಕ
    – ದಕ್ಷಿಣ ಕನ್ನಡದ 445 ಮಂದಿಗೆ 600 ಅಂಕ

    ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ತಜ್ಞರ ಸಮಿತಿ ನೀಡಿದ ಶಿಫಾರಸ್ಸಿನ ಆಧಾರದಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.

    ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಕುರಿತು ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ 38 ವಿಷಯಗಳಿವೆ. ಅಲ್ಲದೆ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದ ಕಾರಣ ಪರೀಕ್ಷೆ ನಡೆಸಿಲ್ಲ. ಎಲ್ಲ ಮಕ್ಕಳನ್ನು ಪಾಸ್ ಮಾಡಲು ತೀರ್ಮಾನ ಮಾಡಲಾಯಿತು. ಅದರಂತೆ ಪ್ರಥಮ ಪಿಯುಸಿ, ಎಸ್‍ಎಸ್‍ಎಲ್‍ಸಿ ಯಲ್ಲಿ ಪಡೆದ ಅಂಕಗಳು, ದ್ವೀತಿಯ ಪಿಯುಸಿಯಲ್ಲಿನ ಅಸೆಸ್ಮೆಂಟ್ ಅಂಕಗಳು ಮತ್ತು ಶೇ.5ರಷ್ಟು ಗ್ರೇಸ್ ಅಂಕ ನಿಗದಿ ಮಾಡಲಾಗಿದೆ. ಯಾವುದೇ ಮಗುವಿಗೆ ಅನ್ಯಾಯ ಆಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

    ಖಾಸಗಿ ಅಭ್ಯರ್ಥಿಗಳಿಗೂ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ನೀಡಲಾಗುತ್ತದೆ. ತಜ್ಞರ ಸಮಿತಿ ಶಿಫಾರಸ್ಸಿನ ಆಧಾರದಲ್ಲಿ ಅಂಕಗಳ ಮಾನದಂಡವನ್ನು ಅನುಸರಿಸಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.45 ಅಂಕ, ವಿಷಯವಾರು ಅಂಕ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯ ಶೇ.45ರಷ್ಟು ಪ್ರತಿ ವಿಷಯವಾರು ಅಂಕ ಪಡೆಯಲಾಗಿದೆ. ಶೇ.10ರಷ್ಟು ದ್ವೀತಿಯ ಪಿಯುಸಿಯ ವಿದ್ಯಾರ್ಥಿ ಶೈಕ್ಷಣಿಕ ಚಟುವಟಿಕೆ ಗೆ ಇಂಟರ್ನಲ್ ಅಸೆಸ್ಮೆಂಟ್ ಅಂಕ ನೀಡಲಾಗಿದೆ. ಅದರ ಜೊತೆ ಪ್ರಥಮ ಪಿಯುಸಿ ಪಡೆದ ಅಂಕಗಳಿಗೆ ಶೇ.5 ಗ್ರೇಸ್ ಅಂಕ ನೀಡಿ ಫಲಿತಾಂಶ ನೀಡಲಾಗಿದೆ

    ರಿಪೀಟರ್ಸ್ ಗಳನ್ನು ಪಾಸ್ ಮಾಡಲಾಗಿದೆ. ಕನಿಷ್ಠ ಉತೀರ್ಣ ಅಂಕ ಮತ್ತು ಶೇ.5ರಷ್ಟು ಗ್ರೇಸ್ ಅಂಕ ನೀಡಿ ಪಾಸ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 3,35,138 ಬಾಲಕರು, 3,31,359 ಬಾಲಕಿಯರು ಸೇರಿ ಒಟ್ಟು 6,66,497 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 95,628 ಉನ್ನತ ಶ್ರೇಣಿ, 3,55,078 ಪ್ರಥಮ ದರ್ಜೆ, 1,47,055 ದ್ವಿತೀಯ ದರ್ಜೆ ಹಾಗೂ 68,729 ಜನ ತೃತೀಯ ದರ್ಜೆ ಹಾಗೂ ಜಸ್ಟ್ ಪಾಸ್ ಆಗಿದ್ದಾರೆ ಎಂದು ತಿಳಿಸಿದರು. ರಿಪೀಟರ್ಸ್ 76344 ಜನ ಉತ್ತೀರ್ಣರಾಗಿದ್ದಾರೆ.

    600-600 ಅಂಕ ಪಡೆದ 5 ಜಿಲ್ಲೆಗಳ ವಿದ್ಯಾರ್ಥಿಗಳು:
    ದಕ್ಷಿಣ ಕನ್ನಡ – 445
    ಬೆಂಗಳೂರು ದಕ್ಷಿಣ – 302
    ಬೆಂಗಳೂರು ಉತ್ತರ – 261
    ಉಡುಪಿ- 149
    ಹಾಸನ- 104

    600-600 ಅಂಕ ಪಡೆದವರು:
    ಕಲಾ ವಿಭಾಗ – 18
    ವಾಣಿಜ್ಯ – 292
    ವಿಜ್ಞಾನ – 1929
    ಒಟ್ಟು ವಿದ್ಯಾರ್ಥಿಗಳು – 2239 ವಿದ್ಯಾರ್ಥಿಗಳು 600 ಅಂಕ

  • ದ್ವಿತೀಯ ಪಿಯುಸಿ ಫಲಿತಾಂಶ ಮಾರ್ಗಸೂಚಿ ಪ್ರಕಟ

    ದ್ವಿತೀಯ ಪಿಯುಸಿ ಫಲಿತಾಂಶ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಈ ಕುರಿತಂತೆ ಅಧಿಕೃತ ಸರ್ಕಾರದ ಆದೇಶ ಪ್ರಕಟಣೆಗೆ ಕ್ರಮ ವಹಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೆ ಅನುಗುಣವಾಗಿ ಫಲಿತಾಂಶಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

    ಒಂದು ವೇಳೆ ಘೋಷಿತ ಫಲಿತಾಂಶದಿಂದ ಪಡೆದ ಅಂಕಗಳು ತೃಪ್ತಿಕರವೆನಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಮುಂದಿನ ದಿನಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

    ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ಒದಗಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಪುನರಾವರ್ತಿತ ಅಭ್ಯರ್ಥಿಗಳ ತೇರ್ಗಡೆ :
    ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದ ಪುನರಾವರ್ತಿತ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸಲು ಇಲಾಖೆ ನಿರ್ಧರಿಸಿದೆ.  ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು ಮತ್ತು ಶೇ. 5ರಷ್ಟು ಕೃಪಾಂಕಗಳನ್ನು ನೀಡಿ ಫಲಿತಾಂಶ ಘೋಷಿಸಲಾಗುತ್ತದೆ.  ಇದನ್ನೂ ಓದಿ: SSLC ಪರೀಕ್ಷೆ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ : ಸುರೇಶ್ ಕುಮಾರ್

    ಕೋವಿಡ್-19 ಸೋಂಕು ಪ್ರಸರಣದ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರ ಕೈಗೊಂಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪುನರಾವರ್ತಿತ ಅಭ್ಯರ್ಥಿಗಳನ್ನೂ ಸಹ ಉತ್ತೀರ್ಣಗೊಳಿಸಬೇಕೆಂದು ಕೆಲವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಪುನರಾವರ್ತಿತ ಅಭ್ಯರ್ಥಿಗಳನ್ನೂ ಈ ವರ್ಷದ ಮಟ್ಟಿಗೆ ಉತ್ತೀರ್ಣಗೊಳಿಸುವ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದು, ಸರ್ಕಾರದ ನಿಲುವನ್ನು ಹೈಕೋರ್ಟ್ ಸಮ್ಮತಿಸಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.