Tag: ದ್ವಿತೀಯ ಪಿಯುಸಿ

  • ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

    ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

    ಬೆಂಗಳೂರು: ಸೋಮವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 6.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    ಮಾರ್ಚ್ 1 ರಿಂದ 17 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಸದ್ಯ ಫಲಿತಾಂಶಕ್ಕೆ ಪಿಯುಸಿ ಬೋರ್ಡ್ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

    ಸೋಮಾವರ ಬೆಳಗ್ಗೆ 11 ಗಂಟೆಗೆ ಪಿಯುಸಿ ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12 ಗಂಟೆಗೆ ವೆಬ್ ಸೈಟ್‍ನಲ್ಲಿ ಫಲಿತಾಂಶ ಹೊರಬರಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

    Pue.kar.nic. ವೆಬ್ ಸೈಟ್‍ನಲ್ಲಿ ಫಲಿತಾಂಶ ವಿವರ ಲಭ್ಯವಾಗಲಿದೆ.

  • ದ್ವಿತೀಯ ಪಿಯು ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದು ಪರಾರಿಯಾದ ನಕಲಿ ವಿದ್ಯಾರ್ಥಿ

    ದ್ವಿತೀಯ ಪಿಯು ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದು ಪರಾರಿಯಾದ ನಕಲಿ ವಿದ್ಯಾರ್ಥಿ

    ಯಾದಗಿರಿ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವಾಗ ನಕಲಿ ವಿದ್ಯಾರ್ಥಿ ಸಿಕ್ಕಿಬಿದ್ದು ಪರಾರಿಯಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಸರಕಾರಿ ಪಿಯು ಪರೀಕ್ಷೆ ಕೇಂದ್ರದಲ್ಲಿ ನಡೆದಿದೆ.

    ಕಕ್ಕೇರಾ ಪಟ್ಟಣದ ಪಿಯು ಕಾಲೇಜ್‍ನ ವಿದ್ಯಾರ್ಥಿ ಸೋಮನಾಥ್ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಸೋಮನಾಥನ ಹೆಸರಿನಿಂದ ಬೇರೆ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆಯುತ್ತಿದ್ದನು. ಬಳಿಕ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆಯುವಾಗ ಸಿಕ್ಕಿಬಿದ್ದು ಪರಾರಿಯಾಗಿದ್ದಾನೆ.

    ನಕಲಿ ವಿದ್ಯಾರ್ಥಿ ಒಂದು ಗಂಟೆಗಳ ಕಾಲ ಪರೀಕ್ಷೆ ಬರೆದಿದ್ದಾನೆ. ಪರೀಕ್ಷೆ ಕೇಂದ್ರದ ಮೇಲ್ವಿಚಾರಕರು ತಪಾಸಣೆ ಮಾಡುವಾಗ ನಕಲಿ ವಿದ್ಯಾರ್ಥಿಯ ಕಳ್ಳಾಟ ಬೆಳಕಿಗೆ ಬಂದಿದೆ. ತಕ್ಷಣ ನಕಲಿ ವಿದ್ಯಾರ್ಥಿ ಹಾಲ್ ಟಿಕೆಟ್ ಕೊಟ್ಟು ಪರಾರಿಯಾಗಿದ್ದಾನೆ. ಹಾಲ್ ಟಿಕೆಟ್‍ನಲ್ಲಿ ಸೋಮನಾಥನ ಫೋಟೋ ಬದಲಾಯಿಸಲಾಗಿದೆ.

    ಸದ್ಯ ಹುಣಸಗಿ ಪೊಲೀಸರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

    ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

    ನವದೆಹಲಿ: ಸಿಬಿಎಸ್‍ಸಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ರಿಶಬ್ (ಭೌತ ಶಾಸ್ತ್ರ) ಮತ್ತು ರೋಹಿತ್ (ಗಣಿತ) ಬಂಧಿತ ಶಿಕ್ಷಕರು. ಕೋಚಿಂಗ್ ಸೆಂಟರ್ ಮಾಲೀಕನನ್ನು ತಖ್ವೀರ್ ಎಂದು ಗುರುತಿಸಲಾಗಿದೆ. ಇಬ್ಬರು ಶಿಕ್ಷಕರು ಬೆಳಗ್ಗೆ 9:15 ಸಮಯಕ್ಕೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ತೆಗೆದು ಕೋಚಿಂಗ್ ಸೆಂಟರ್ ಮಾಲೀಕನಿಗೆ ಕಳುಹಿಸಿದ್ದಾರೆ. ಮಾಲೀಕನು ವಿದ್ಯಾರ್ಥಿಗಳಿಗೆ ಕಳಿಸಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಎರಡು ರೂಪದಲ್ಲಿ ಸೋರಿಕೆ: ಪ್ರಶ್ನೆಪತ್ರಿಕೆ ಎರಡು ರೂಪದಲ್ಲಿ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಒಂದು ಮುದ್ರಿತ ಪ್ರಶ್ನೆ ಪತ್ರಿಕೆ ವಾಟ್ಸಪ್ ಮೂಲಕ ಹಾಗೂ ಕೈ ಬರಹದ ಪ್ರಶ್ನೆಪತ್ರಿಕೆ ಕೂಡ ಹರಿದಾಡಿದೆ. ದೆಹಲಿಯ ಬವನಾದಲ್ಲಿ ಕೋಚಿಂಗ್ ಸೆಂಟರ್ ಅನ್ನು ನಡೆಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಸಿಬಿಎಸ್‍ಸಿ ಮತ್ತು ಕೇಂದ್ರ ಸರ್ಕಾರ ದ್ವಿತೀಯ ಪಿಯುಸಿ ಅರ್ಥಶಾಸ್ತ್ರದ ಮರು ಪರೀಕ್ಷೆಗೆ ಆದೇಶಿಸಿದೆ.

    ದೇಶಾದ್ಯಂತ ಏಪ್ರಿಲ್ 25 ರಂದು ದ್ವಿತೀಯ ಪಿಯುಸಿ ಅರ್ಥಶಾಸ್ತ್ರದ ಮರುಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿ ದೊರೆಯುವರೆಗೂ 10ನೇ ತರಗತಿ ಗಣಿತಶಾಸ್ತ್ರದ ಮರು ಪರೀಕ್ಷೆ ನಿರ್ಧಾರವನ್ನು ಮುಂದೂಡಿದ್ದೇವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಸೋರಿಕೆಯ ಹೆಚ್ಚಿನ ಮಾಹಿತಿ ದೊರೆತ ನಂತರ 10ನೇ ತರಗತಿ ಗಣಿತಶಾಸ್ತ್ರದ ಮರು ಪರೀಕ್ಷೆ ದೆಹಲಿ, ಹರಿಯಾಣ ವಲಯದಲ್ಲಿ ಮಾತ್ರ ನಡೆಯಲಿದೆ. ಮರುಪರೀಕ್ಷೆ ಜುಲೈನಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಸಚಿವರು ತಿಳಿಸಿದ್ದಾರೆ.

    ಸಿಬಿಎಸ್‍ಸಿ 10ನೇ ತರಗತಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಜಾರ್ಖಂಡ್ ಪೊಲೀಸರು ಚಾತ್ರ ಜಿಲ್ಲೆಯಲ್ಲಿ 12 ಜನ ವಿದ್ಯಾರ್ಥಿಗಳು ಹಾಗೂ ಕೋಚಿಂಗ್ ಸೆಂಟರ್ ಸಿಬ್ಬಂಧಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ಕಾಪಿ ಪ್ರಶ್ನಿಸಿದ್ದೇ ತಪ್ಪಾಯ್ತು- ಎರಡು ಕಾಲೇಜು ಸಿಬ್ಬಂದಿ ನಡುವೆ ಫೈಟ್

    ಕಾಪಿ ಪ್ರಶ್ನಿಸಿದ್ದೇ ತಪ್ಪಾಯ್ತು- ಎರಡು ಕಾಲೇಜು ಸಿಬ್ಬಂದಿ ನಡುವೆ ಫೈಟ್

    ಕೊಪ್ಪಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯನ್ನು ಕೊಠಡಿ ಮೇಲ್ವಿಚಾರಕ ಪ್ರಶ್ನಿಸಿದ್ದಕ್ಕೆ ಎರಡು ಕಾಲೇಜಿನ ಸಿಬ್ಬಂದಿ ಹೊಡೆದಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳದ ಗಂಗಾವತಿಯ ವಿದ್ಯಾನಗರದ ಶಾರದಾ ಎಜುಕೇಷನ್ ವ್ಯೆಜೆಆರ್‍ಪಿಯು ಕಾಲೇಜಿಗೆ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಲು ಬಂದಿದ್ದರು. ವಿದ್ಯಾನಿಕೇತನ್ ಕಾಲೇಜಿನ ವಿದ್ಯಾರ್ಥಿ ಒಬ್ಬ ತಾನು ತಂದಿದ್ದ ಪ್ಯಾಡ್ ಮೇಲೆ ಕೆಲವೊಂದು ಉತ್ತರಗಳನ್ನು ಬರೆದುಕೊಂಡಿದ್ದನು. ಇದನ್ನು ನೋಡಿದ ಕೊಠಡಿ ಮೇಲ್ವಿಚಾರಕರು ವಿದ್ಯಾರ್ಥಿಗೆ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

    ಈ ವೇಳೆ ವೈ ಜೆ ಆರ್ ಪಿ ಯು ಕಾಲೇಜಿನ ರಾಮಕೃಷ್ಣ ಮತ್ತು ವಿದ್ಯಾನಿಕೇತನ್ ಕಾಲೇಜಿನ ಪ್ರಿನ್ಸಿಪಾಲ್‍ರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಪರಿಣಾಮ ರಾಮಕೃಷ್ಣ ಅವರಿಗೆ ತೀವ್ರ ಪೆಟ್ಟಾಗಿದೆ. ಕೂಡಲೇ ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಘಟನೆ ಸಂಬಂಧ ಸ್ಪಷ್ಟಿಕರಣ ನೀಡಿದ ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷ, ನಮ್ಮ ಕಾಲೇಜಿನ ವಿದ್ಯಾರ್ಥಿಗೆ ಯಾರೋ ಹೊಡೆದಿದ್ದಾರೆ. ಅದನ್ನು ಕೇಳಲು ಕಾಲೇಜಿಗೆ ಹೋಗಿದ್ದ ಸಮಯದಲ್ಲಿ ಮಾತಿನ ಚಕಮಕಿ ನಡೆದಿದೆ. ನಮ್ಮ ಶಾಲೆಯ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಕಾಪಿ ಮಾಡಿಲ್ಲ ಅಂತ ಹೇಳಿದ್ದಾರೆ.

    ಈ ಕುರಿತು ಗಂಗಾವತಿ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗಮನಿಸಿ, ನಾಳೆ ಅಲ್ಲ ಗುರುವಾರ ದ್ವಿತೀಯ ಪಿಯುಸಿ ಫಲಿತಾಂಶ

    ಗಮನಿಸಿ, ನಾಳೆ ಅಲ್ಲ ಗುರುವಾರ ದ್ವಿತೀಯ ಪಿಯುಸಿ ಫಲಿತಾಂಶ

    ಬೆಂಗಳೂರು: ಮೇ 11 ಅಂದ್ರೆ ನಾಡಿದ್ದು ಗುರುವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

    ಮೇ 11ರಂದು ವೆಬ್‍ಸೈಟ್‍ನಲ್ಲಿ ಪಿಯುಸಿ ಫಲಿತಾಂಶ ಲಭ್ಯವಿರಲಿದ್ದು, ಮೇ 12ಕ್ಕೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟ ಮಾಡಲಾಗುತ್ತದೆ.

    ಆರಂಭದಲ್ಲಿ ಬುಧವಾರ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಮೂಲಗಳಿಂದ ಸಿಕ್ಕಿತ್ತು. ಆದರೆ ಈಗ ಅಧಿಕೃತವಾಗಿ ಪಿಯು ಬೋರ್ಡ್ ನಿಂದ ಗುರುವಾರ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಪ್ರಕಟವಾಗಿದೆ.

    ಮಾರ್ಚ್ 9ರಿಂದ 27 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ 6 ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಇದ್ರಲ್ಲಿ 3 ಲಕ್ಷದ 48 ಸಾವಿರದ 562 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 35 ಸಾವಿರದ 909 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. 19 ಜನ ತೃತೀಯ ಲಿಂಗಿಗಳು ಪರೀಕ್ಷೆ ಬರೆದಿರೋದು ವಿಶೇಷ.

    ಕಳೆದ ವರ್ಷ ಪೇಪರ್ ಲೀಕ್‍ನಿಂದಾದ ಸಮಸ್ಯೆಯಿಂದ ಎಚ್ಚೆತ್ತ ಪಿಯುಸಿ ಬೋರ್ಡ್ ಈ ವರ್ಷ ಭಾರೀ ಭದ್ರತೆಯೊಂದಿಗೆ ಪರೀಕ್ಷೆ ನಡೆಸಿತ್ತು. ಕರ್ನಾಟಕ ಸೆಕ್ಯೂರ್ ಎಕ್ಸಾಂಮೀನೇಷನ್ ಸಿಸ್ಟಮ್ ಪ್ರೋಗ್ರಾಂ  ಅಳವಡಿಸಿಕೊಂಡಿದ್ದು, ಜಿಲ್ಲಾ ಖಜಾನೆಗಳಿಗೆ ಸಿಸಿಟಿವಿ, ಮ್ಯಾಗ್ನೆಟಿಕ್ ಡೋರ್ಗಳು, ಬಯೋ ಮೆಟ್ರಿಕ್ ಪದ್ಧತಿ ಸೇರಿದಂತೆ ಇನ್ನಿತರ ಹೈ ಸೆಕ್ಯುರಿಟಿ ಸಿಸ್ಟಮ್ ಅಳವಡಿಕೆ ಮಾಡಲಾಗಿತ್ತು.

  • ಮತ್ತೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ?

    ಮತ್ತೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ?

    – ಸೋರಿಕೆಯಾಗಿಲ್ಲ ಸಿಬ್ಬಂದಿಯೇ ವಾಟ್ಸಪ್‍ನಲ್ಲಿ ಕಳುಹಿಸಿರಬಹುದು
    – ಪಬ್ಲಿಕ್ ಟಿವಿಗೆ ನಿರ್ದೇಶಕಿ ಶಿಖಾ ಸ್ಪಷ್ಟನೆ

    ರಾಯಚೂರು: ಪಿಯುಸಿ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಿದೆಯಾ ಎನ್ನುವ ಶಂಕೆ ಈಗ ಹುಟ್ಟಿಕೊಂಡಿದೆ. ಇಂದು ನಡೆದ ವಾಣಿಜ್ಯ ವಿಭಾಗದ ಅಕೌಂಟಿನ್ಸಿ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಹರಿದಾಡಿರುವುದೇ ಈ ಶಂಕೆ ಮೂಡಲು ಕಾರಣವಾಗಿದೆ.

    ರಾಯಚೂರಿನ ಮಾನ್ವಿಯ ಗಾಂಧಿ ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಾಟ್ಸಪ್‍ನಲ್ಲಿ ಪ್ರಶ್ನೆ ಪತ್ರಿಕೆ ಸಿಕ್ಕಿದೆ. ಪ್ರಶ್ನೆ ಪತ್ರಿಕೆಯನ್ನು ಬೆಳಗ್ಗೆ 10.15ಕ್ಕೆ ನೀಡಿದರೆ, 10.30ಕ್ಕೆ ಉತ್ತರ ಪತ್ರಿಕೆಯನ್ನು ನೀಡಲಾಗುತ್ತದೆ. ಆದರೆ ಈ ಪ್ರಶ್ನೆಪತ್ರಿಕೆ ಬೆಳಗ್ಗೆ 10.50ಕ್ಕೆ ವಾಟ್ಸಪ್‍ನಲ್ಲಿ ಹರಿದಾಡಿದೆ.

    ಪಿಯು ಪರೀಕ್ಷೆ ಆರಂಭಗೊಂಡ ಬಳಿಕ ವಿದ್ಯಾರ್ಥಿಯೊಬ್ಬ ಮಧ್ಯದಲ್ಲಿ ಪರೀಕ್ಷೆ ಮುಗಿಸಿ ಹೋದರೂ ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗುವಂತಿಲ್ಲ. 1.30ಕ್ಕೆ ನಿಗದಿತ ಅವಧಿ ಮುಗಿದ ಬಳಿಕವೇ ವಿದ್ಯಾರ್ಥಿ ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ. ಆದರೆ ಪರೀಕ್ಷೆ ಆರಂಭಗೊಂಡ ಕೆಲವೇ ನಿಮಿಷದಲ್ಲಿ ಪ್ರಶ್ನೆ ಪತ್ರಿಕೆ ಹೊರಗಡೆ ಬಂದಿರುವುದು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿಗಳಿಗೆ ಮೊಬೈಲ್ ತೆಗೆದುಕೊಂಡು ಹೋಗಲು ಅನುಮತಿ ಇಲ್ಲ. ಆದರೆ ಈ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಹೊರ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಈ ಕೇಂದ್ರದಲ್ಲಿ ಯಾವುದೇ ಸಿಸಿಟಿವಿ ಇಲ್ಲ. ಹೀಗಾಗಿ ಯಾರು ಈ ಫೋಟೋವನ್ನು ಕ್ಲಿಕ್ಕಿಸಿದ್ದಾರೆ ಎನ್ನುವುದನ್ನು ತಿಳಿಯುವುದು ಕಷ್ಟ. ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಸಿಬ್ಬಂದಿಯಿಂದಲೇ ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದೆ.

    ಅಕ್ರಮ ನಡೆಯುತ್ತಾ?
    ಒಂದು ವೇಳೆ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಸಿಕ್ಕಿದರೆ ಉತ್ತರವನ್ನು ತಯಾರು ಮಾಡಿ ಚೀಟಿ ಮೂಲಕ ವಿದ್ಯಾರ್ಥಿಗಳಿಗೆ ನೀಡುವ ಸಾಧ್ಯತೆಯನ್ನು ನಾವು ತಳ್ಳಿ ಹಾಕುವಂತಿಲ್ಲ. ವಿದ್ಯಾರ್ಥಿಗಳ ಪೋಷಕರ ಜೊತೆ ಸೇರಿ ಶಿಕ್ಷಕರೇ ಕಾಪಿಗೆ ಸಹಕಾರ ನೀಡುತ್ತಿರುವ ಸಿಸಿಟಿವಿಯಲ್ಲಿ ಸೆರೆಯಾಗಿರುವ ಸುದ್ದಿಯನ್ನು ಪಬ್ಲಿಕ್ ಟಿವಿ ಭಾನುವಾರ ಪ್ರಸಾರ ಮಾಡಿತ್ತು. ಇದರಲ್ಲಿ ವಾಟರ್ ಬಾಯಿ ವಿದ್ಯಾರ್ಥಿಗಳಿಗೆ ಚೀಟಿ ನೀಡಿ ಹೋಗುತ್ತಿರುವುದು ಸೆರೆಯಾಗಿತ್ತು. ಹೀಗಾಗಿ ಈ ಒಂದು ಪ್ರಶ್ನೆ ಪತ್ರಿಕೆಯ ಫೋಟೋ ರಾಜ್ಯದ ಹಲವು ಭಾಗಗಳಿಗೆ ತಲುಪಿರುವ ಸಾಧ್ಯತೆಯು ಇದೆ. ಈ ಒಂದು ಪ್ರಶ್ನೆ ಪತ್ರಿಕೆ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಹಿಂದಿನ ಪರೀಕ್ಷೆಯ ವೇಳೆಯೂ ಈ ರೀತಿ ನಡೆದಿತ್ತಾ ಎನ್ನುವುದು ತಿಳಿದು ಬಂದಿಲ್ಲ.

    ಸೋರಿಕೆಯಾಗಿಲ್ಲ: ರಾಯಚೂರಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಸಿಬ್ಬಂದಿ ಅಕ್ರಮದಿಂದಾಗಿ ಪ್ರಶ್ನೆ ಪತ್ರಿಕೆ ವಾಟ್ಸಪ್‍ನಲ್ಲಿ ಬಂದಿರಬಹುದು. ಆ ಕೇಂದ್ರದಲ್ಲಿ ಏನಾಗಿದೆ ಎನ್ನುವುದನ್ನು ತನಿಖೆ ನಡೆಸುತ್ತೇವೆ ಎಂದು ಪದವಿ ಪೂರ್ವ ಶಿಕ್ಷಣಾ ಇಲಾಖೆಯ ನಿರ್ದೇಶಕಿ ಶಿಖಾ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಬೀದರ್‍ನಲ್ಲಿ ಏನಾಗಿತ್ತು?
    ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಬೀದರ್‍ನ ನೂರ ಕಾಲೇಜಿನಲ್ಲಿ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿಗಳು ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕೋಣೆ ನಂಬರ್ 1, ಸಿಸಿ ಕ್ಯಾಮರಾ 10 ರಲ್ಲಿ ನಕಲಿಗೆ ಸಿಬ್ಬಂದಿಗಳು ಪ್ರೋತ್ಸಾಹ ಮಾಡುತ್ತಿರುವ ದೃಶ್ಯಗಳು ಸೆರೆಯಾಗಿವೆ. ವ್ಯಕ್ತಿಯೊಬ್ಬ ರಾಜಾರೋಷವಾಗಿ ವಿದ್ಯಾರ್ಥಿನಿಗೆ ಮೊಬೈಲ್ ನೀಡಿ ನಕಲು ಮಾಡಲು ಸಹಕಾರ ಮಾಡುತ್ತಿದ್ದು ಜೊತೆಗೆ ವಾಟರ್‍ಬಾಯಿ ಕೂಡ ವಿದ್ಯಾರ್ಥಿಗಳಿಗೆ ಚೀಟಿಗಳನ್ನು ನೀಡಿ ಹೋಗುತ್ತಿರುವ ದೃಶ್ಶ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    https://www.youtube.com/watch?v=uLxQjBR3pXw

  • ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭ – ಭಾರೀ ಭದ್ರತೆಯಲ್ಲಿ ಎಕ್ಸಾಂ

    ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭ – ಭಾರೀ ಭದ್ರತೆಯಲ್ಲಿ ಎಕ್ಸಾಂ

    ಬೆಂಗಳೂರು: ಶಿಕ್ಷಣ ಇಲಾಖೆ ಹಾಗೂ ವಿದ್ಯಾರ್ಥಿಗಳಿಗೆ ಅಗ್ನಿ ಪರೀಕ್ಷೆಯಾಗಿರೋ ದ್ವೀತಿಯ ಪಿಯುಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗ್ತಿದೆ. ಮೊದಲ ದಿನವಾದ ಇಂದು ಜೀವಶಾಸ್ತ್ರ ಹಾಗೂ ಇತಿಹಾಸ ವಿಷಯದ ಪರೀಕ್ಷೆಗಳು ನಡೆಯಲಿವೆ.

    ಈ ವರ್ಷ 6 ಲಕ್ಷದ 84 ಸಾವಿರದ 490 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದ್ರಲ್ಲಿ 3 ಲಕ್ಷದ 48 ಸಾವಿರದ 562 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 35 ಸಾವಿರದ 909 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ. 19 ಜನ ತೃತೀಯ ಲಿಂಗಿಗಳು ಪರೀಕ್ಷೆ ಬರೆಯುತ್ತಿರೋದು ವಿಶೇಷ. ರಾಜ್ಯಾದ್ಯಂತ 998 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ವರೆಗೆ ಪರೀಕ್ಷೆಗಳು ನಡೆಯಲಿವೆ.

    ಕಳೆದ ವರ್ಷ ಪೇಪರ್ ಲೀಕ್‍ನಿಂದಾದ ಸಮಸ್ಯೆಯಿಂದ ಎಚ್ಚೆತ್ತಿರುವ ಪಿಯುಸಿ ಬೋರ್ಡ್ ಈ ವರ್ಷ ಭಾರೀ ಭದ್ರತೆ ಮಾಡಿಕೊಂಡಿದೆ. ಕರ್ನಾಟಕ ಸೆಕ್ಯೂರ್ ಎಕ್ಸಾಂಮೀನೇಷನ್ ಸಿಸ್ಟಮ್ ಪ್ರೋಗ್ರಾಂ ಅಳವಡಿಸಿಕೊಂಡಿದ್ದು, ಜಿಲ್ಲಾ ಖಜಾನೆಗಳಿಗೆ ಸಿಸಿಟಿವಿ, ಮ್ಯಾಗ್ನೆಟಿಕ್ ಡೋರ್‍ಗಳು, ಬಯೋ ಮೆಟ್ರಿಕ್ ಪದ್ಧತಿ ಸೇರಿದಂತೆ ಇನ್ನಿತರ ಹೈ ಸೆಕ್ಯುರಿಟಿ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ.