Tag: ದ ಜಡ್ಜ್ ಮೆಂಟ್

  • ‘ದ ಜಡ್ಜ್ ಮೆಂಟ್’ ಗೆ ಮಾತು ಪೋಣಿಸುತ್ತಿದ್ದಾರೆ ಕ್ರೇಜಿಸ್ಟಾರ್

    ‘ದ ಜಡ್ಜ್ ಮೆಂಟ್’ ಗೆ ಮಾತು ಪೋಣಿಸುತ್ತಿದ್ದಾರೆ ಕ್ರೇಜಿಸ್ಟಾರ್

    ಶಾರದ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ ಮತ್ತು ಪ್ರತಿಮ ಬಿರಾದಾರ ನಿರ್ಮಿಸುತ್ತಿರುವ ಹಾಗೂ ಗುರುರಾಜ ಕುಲಕರ್ಣಿ (Gururaja Kulkarni) (ನಾಡಗೌಡ) ರಚನೆ ಹಾಗೂ ನಿರ್ದೇಶನದ ‘ದ ಜಡ್ಜ್ ಮೆಂಟ್’  (The Judgment) ಚಿತ್ರಕ್ಕೆ ಮಾತಿನ (dubbing) ಜೋಡಣೆ ಆರಂಭವಾಗಿದೆ. ಚಿತ್ರಕ್ಕೆ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.

    ಅಪಾರವೆಚ್ಚದಲ್ಲಿ ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗುತ್ತಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ.  ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಈ ಚಿತ್ರದಲ್ಲಿ ವಕೀಲರಾಗಿ ಅಭಿನಯಿಸಿದ್ದಾರೆ. ದಿಗಂತ ಮಂಚಾಲೆ, ಮೇಘನಾ ಗಾವಂಕರ, ಧನ್ಯಾ ರಾಮಕುಮಾರ, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ ಬೆಳವಾಡಿ, ಟಿ ಎಸ್ ನಾಗಾಭರಣ,  ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ರವಿಶಂಕರ ಗೌಡ ಸುಜಯ ಶಾಸ್ತ್ರೀ, ರೇಖಾ ಕೂಡ್ಲಿಗಿ, ರೂಪಾ ರಾಯಪ್ಪ, ಪ್ರೀತಂ, ಅಶ್ವಿನ್ ರಾವ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶಿಸಿರುವ ದ ಜಡ್ಜ್ ಮೆಂಟ್ ಚಿತ್ರಕ್ಕೆ ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಮರವಂತೆ ಹಾಡುಗಳನ್ನು ರಚಿಸಿದ್ದಾರೆ.  ಅನೂಪ ಸೀಳಿನ ಸಂಗೀತ ಸಂಯೋಜಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,  ಕೆಂಪರಾಜ್ ಬಿ ಎಸ್ ಸಂಕಲನವಿರುವ ಈ ಚಿತ್ರದ ಸ್ಕ್ರಿಪ್ಟ್ ಸೂಪರ್ ವೈಸರ್ ಆಗಿ  ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ.

  • ಮುಕ್ತಾಯ ಹಂತದಲ್ಲಿ ರವಿಚಂದ್ರನ್ ನಟನೆಯ ‘ದ ಜಡ್ಜ್‌ಮೆಂಟ್‌’

    ಮುಕ್ತಾಯ ಹಂತದಲ್ಲಿ ರವಿಚಂದ್ರನ್ ನಟನೆಯ ‘ದ ಜಡ್ಜ್‌ಮೆಂಟ್‌’

    ಕ್ರೇಜಿಸ್ಟಾರ್ ವಿ ರವಿಚಂದ್ರನ್ (Ravichandran) ಪ್ರಮುಖಪಾತ್ರದಲ್ಲಿ ನಟಿಸಿರುವ  ‘ದ ಜಡ್ಜ್ ಮೆಂಟ್’ (The Judgment) ಚಿತ್ರದ ಚಿತ್ರೀಕರಣ (Shooting) ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರದ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು.

    ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ) (Gururaj Kulkarni) , ನಮ್ಮ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸಂಕಲನ ಕಾರ್ಯ ನಡೆಯುತ್ತಿದೆ. ನಮ್ಮ ಚಿತ್ರದ ತಂತ್ರಜ್ಞರನ್ನು ಪರಿಚಯಿಸುವ ಸಲುವಾಗಿ ಈ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ.  ನಾನು ಹಿಂದೆ ನಿರ್ಮಾಪಕನಾಗಿ ಬಂದಾಗ ಯಾರು ಕೂಡ ನನ್ನನ್ನು ಪರಿಚಯಿಸಿರಲಿಲ್ಲ. ಆಗ ನನಗೆ ತುಂಬಾ ಬೇಸರವಾಗಿತ್ತು. ನಿರ್ಮಾಪಕರಿಗೆ ಸಲುವ ಗೌರವ ಸಲ್ಲಲ್ಲೇ ಬೇಕು. ಹಾಗಾಗಿ ನಾನು ಮೊದಲು ನಿರ್ಮಾಪಕರನ್ನು ಪರಿಚಯಿಸುತ್ತಿದ್ದೇನೆ. ಶರದ್ ನಾಡಗೌಡ, ವಿಶ್ವನಾಥ್ ಗುಪ್ತ, ರಾಮು ರಾಯಚೂರು, ರಾಜಶೇಖರ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಹಾಡನ್ನು ಬರೆದಿದ್ದಾರೆ. ವಾಸುದೇವ ಚಿತ್ರಕಥೆ, ಎಂ.ಎಸ್ ರಮೇಶ್ ಸಂಭಾಷಣೆ, ಕೆಂಪರಾಜ್ ಸಂಕಲನ ಹಾಗೂ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಈ ಚಿತ್ರಕ್ಕಿದೆ ಎಂದರು.

    ನಾವು ಗೆಳೆಯರೆಲ್ಲಾ ಸೇರಿಕೊಂಡು ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಚಿತ್ರೀಕರಣ ಪೂರ್ಣವಾಗಿ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ನಮ್ಮ ಚಿತ್ರ ಈಗಾಗಲೇ ಮುಂಬೈ ತನಕ ತಲುಪಿದೆ. ಚಿತ್ರವನ್ನು ಹಿಂದಿಯಲ್ಲಿ ರಿಮೇಕ್ ಮಾಡುವ ಯೋಜನೆಯಿದೆ. ಅಲ್ಲಿನ ಪ್ರಸಿದ್ದ ನಟರೊಬ್ಬರ ಜೊತೆ ಸದ್ಯದಲ್ಲೇ ಈ ಕುರಿತು ಚರ್ಚಿಸಲಿದ್ದೇವೆ.‌  ನಮ್ಮ ಚಿತ್ರ ಅಲ್ಲಿಯವರೆಗೂ ತಲುಪಲು ಇಲ್ಲಿನ ಮಾಧ್ಯಮ ನೀಡಿದ ಬೆಂಬಲ ಕಾರಣ ಎಂದರು ನಿರ್ಮಾಪಕರಾದ ಶರದ್ ನಾಡಗೌಡ ಹಾಗೂ ರಾಮು ರಾಯಚೂರು.

    ಈಗ ಸಾಮಾನ್ಯವಾಗಿ ಮೊಬೈಲ್ ನಲ್ಲೇ ಟ್ಯೂನ್ ಕಳುಹಿಸುತ್ತಾರೆ. ನಾವು ಸಾಹಿತ್ಯ ಬರೆದು ಕಳುಹಿಸುತ್ತೇವೆ. ಆದರೆ ಈ ಚಿತ್ರದಲ್ಲಿ ಅನೂಪ್ ಸೀಳಿನ್ ಅವರ ಉಪಸ್ಥಿತಿಯಲ್ಲೇ ಹಾಡು ಬರೆದಿದ್ದೇನೆ. ನಿರ್ದೇಶಕರಿಗೂ ಇಷ್ಟವಾಗಿದೆ ಎಂದರು ಗೀತರಚನೆಕಾರ ಪ್ರಮೋದ್ ಮರವಂತೆ. ನನ್ನ ಮೂವತ್ತೆರಡು ವರ್ಷಗಳ ಸಿನಿ ಜರ್ನಿಯಲ್ಲಿ ತಂತ್ರಜ್ಞರಿಗಾಗಿ ಪತ್ರಿಕಾಗೋಷ್ಠಿ ಆಯೋಜಿಸಿರುವುದು ಇದೇ ಮೊದಲಿರಬೇಕು. ಈ ಚಿತ್ರದ ಸಂಭಾಷಣೆ ಮಾಮೂಲಿ ತರಹ ಇಲ್ಲ. ಸ್ವಲ್ಪ ಭಿನ್ನವಾಗಿದೆ ಎಂದರು ಸಂಭಾಷಣೆ ಬರೆದಿರುವ ಎಂ ಎಸ್ ರಮೇಶ್.

    ಈಗ ಸಾಮಾನ್ಯವಾಗಿ ಕಥೆಯನ್ನು ಯಾರೊಂದಿಗೂ ಜಾಸ್ತಿ ಚರ್ಚೆ ಮಾಡುವುದಿಲ್ಲ. ಆದರೆ ಈ ಚಿತ್ರದ ಕಥೆಯನ್ನು ನಿರ್ದೇಶಕರು ಸತ್ಯಪ್ರಕಾಶ್, ಗೋಪಿ ಪೀಣ್ಯ ಮುಂತಾದವರ ಜೊತೆ ಚರ್ಚಿಸಿದ್ದರು. ಹಾಗೆ ಮಾಡಿದಾಗ ಒಂದೊಳ್ಳೆ ಕಥೆ ಹುಟ್ಟುತ್ತದೆ ಎಂದರು ಸಂಕಲನಕಾರ ಕೆಂಪರಾಜು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಸಹ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಬಗ್ಗೆ ಸಂತಸ ವ್ಯಕ್ತಪಡಿಸಿ, ಚಿತ್ರೀಕರಣದ ಸನುಭವವನ್ನು ಹಂಚಿಕೊಂಡರು. ಕ್ರೇಜಿಸ್ಟಾರ್ ರವಿಚಂದ್ರನ್, ನಾಗಾಭರಣ, ದಿಗಂತ್ , ಧನ್ಯ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಅದ್ದೂರಿ ಹಾಡಿಗೆ ಹೆಜ್ಜೆ ಹಾಕಿದ ದಿಗಂತ್ – ಧನ್ಯಾ ರಾಮಕುಮಾರ್

    ಅದ್ದೂರಿ ಹಾಡಿಗೆ ಹೆಜ್ಜೆ ಹಾಕಿದ ದಿಗಂತ್ – ಧನ್ಯಾ ರಾಮಕುಮಾರ್

    ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) (Gururaja Kulkarni) ಇಂದಿನ ಯುವಜನತೆಯ ಮಧ್ಯೆ ಟ್ರೆಂಡ್ ಆಗುವ ಪಬ್ ಸಾಂಗ್ (Song) ಒಂದನ್ನು ಡೆಕ್ ಆಫ್ ಬ್ರೆವ್ಯುಸ್ ಪಬ್ ನಲ್ಲಿ ‘ದ ಜಡ್ಜ್ ಮೆಂಟ್’ (The Judgment) ಚಿತ್ರಕ್ಕಾಗಿ ಅದ್ಧೂರಿಯಾಗಿ ಚಿತ್ರಿಸಿದ್ದಾರೆ.

    ಈ ಹಾಡಿಗೆ ಹೆಜ್ಜೆ ಹಾಕಿದವರು ದಿಗಂತ್ (Digant) ಮತ್ತು ಧನ್ಯಾ ರಾಮಕುಮಾರ್ (Dhanya Ram Kumar). ಇವರಿಬ್ಬರಿಗೂ ಜೊತೆಯಾದವರು ಕಲಾವಿದರಾದ ಅಶ್ವಿನ್, ಸುಶೀಲ್ ನಾಗ್ ಮತ್ತು ಸುವೀಷ್. ಈ ಹಾಡಿಗಾಗಿ ಸುಮಾರು 75 ಜನ ನೃತ್ಯ ಕಲಾವಿದರು ಮತ್ತು 50 ಜನ ಸಹ ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಹಾಡನ್ನು ಸಂಯೋಜಿಸಿದ ಅನೂಪ್ ಸೀಳಿನ್ ಮತ್ತು ಹಾಡು ಬರೆದ ಪ್ರಮೋದ್ ಮರವಂತೆ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

    ಈ ಹಾಡು ವರ್ಷದ ಸೂಪರ್ ಹಿಟ್ ಹಾಡು ಆಗುವದು ಪಕ್ಕಾ ಎನ್ನುವುದು ಚಿತ್ರೀಕರಣದಲ್ಲಿ ಭಾಗಿಯಾದವರ ಅನಿಸಿಕೆ. ಹೊಸತನದ ಬೀಟ್ಸ್ ಇರುವ ಈ ಹಾಡಿಗಾಗಿ, ಬಾಲಿವುಡ್ ನಿಂದ ಊರ್ವಶಿ ಮತ್ತು ಗೋವಾದಿಂದ ಸಾನಿಯಾರವರನ್ನು ಸಿನಿಮಾ ತಂಡ ವಿಶೇಷವಾಗಿ ಆಹ್ವಾನಿಸಿದ್ದರು. ಹಾಡಿನ ನೃತ್ಯ ಸಂಯೋಜನೆ ಮಾಡಿದ್ದು ಯುವ ನಿರ್ದೇಶಕ ರಾಮ್ ಕಿರಣ್ ಮತ್ತು ಅವರ ತಂಡ.

    ದ  ಜಡ್ಜ್ ಮೆಂಟ್ ಕಥೆ ಲೀಗಲ್ ಥ್ರಿಲ್ಲರ್ ಶೈಲಿಯಾಗಿದ್ದು, ಇಂದಿನ ಪ್ರಸ್ತುತ ವಿದ್ಯಮಾನಗಳನ್ನು, ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವುದು ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಅವರ  ಗಟ್ಟಿ ನಂಬಿಕೆ.

    ಕ್ರೇಜಿ ಸ್ಟಾರ್ ವಿ. ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ. ಎಸ್. ನಾಗಾಭರಣ, ಪ್ರಕಾಶ ಬೆಳವಾಡಿ, ಕೃಷ್ಣ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ್, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ ಈ ಚಿತ್ರಕಿದ್ದರೆ ಪಿ. ಕೆ. ಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ, ಪ್ರಮೋದ್ ಮರವಂತೆ ಗೀತರಚನೆ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನವಿದೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಸ್ಕ್ರಿಪ್ಟ್ ಸೂಪರವೈಸರ್ ಆಗಿ ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದ ಜಡ್ಜ್ ಮೆಂಟ್’ ಚಿತ್ರದ ವಿಭಿನ್ನ ಪಾತ್ರದಲ್ಲಿ ರವಿಚಂದ್ರನ್

    ‘ದ ಜಡ್ಜ್ ಮೆಂಟ್’ ಚಿತ್ರದ ವಿಭಿನ್ನ ಪಾತ್ರದಲ್ಲಿ ರವಿಚಂದ್ರನ್

    ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ‘ದ ಜಡ್ಜ್ ಮೆಂಟ್’ (The Judgment) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು. G9 communication media & Entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಗುರುರಾಜ ಬಿ ಕುಲಕರ್ಣಿ(ನಾಡಗೌಡ) (Gururaja Kulkarni) ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಆಕ್ಸಿಡೆಂಟ್, ಲಾಸ್ಟ್‌ ಬಸ್, ಅಮೃತ ಅಪಾರ್ಟ್‌ಮೆಂಟ್ಸ್ ಚಿತ್ರಗಳನ್ನು ಈ ಸಂಸ್ಥೆ ಮೂಲಕ ನಿರ್ಮಿಸಲಾಗಿತ್ತು ಹಾಗೂ ಈ ಚಿತ್ರಗಳನ್ನು ಗುರುರಾಜ್ ಬಿ ಕುಲಕರ್ಣಿ ಅವರೆ ನಿರ್ದೇಶಿಸಿದ್ದರು. ಸಂಸ್ಥೆಯ ನಾಲ್ಕನೇ ಚಿತ್ರವಾಗಿ ದ ಜಡ್ಜ್ ಮೆಂಟ್ ಚಿತ್ರ ನಿರ್ಮಾಣವಾಗುತ್ತಿದೆ.

    ಇದೊಂದು ಲಿಗಲ್ ಸಿಸ್ಟಮ್ ಕುರಿತಾದ ಚಿತ್ರ. ಇದೇ ಏಪ್ರಿಲ್ 24ರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ. ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್,  ಧನ್ಯ ರಾಮಕುಮಾರ್, ಲಕ್ಷ್ಮೀಗೋಪಾಲಸ್ವಾಮಿ, ಟಿ.ಎಸ್.ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರೂಪ ರಾಯಪ್ಪ, ರಾಜೇಂದ್ರ ಕಾರಂತ್ ಹೀಗೆ ಬಹುದೊಡ್ಡ ತಾರಾಬಳಗವಿದೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಶಿವು ಬಿ.ಕೆ.ಕುಮಾರ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನ ಹಾಗೂ ಎಂ.ಎಸ್ ರಮೇಶ್ ಅವರ ಸಂಭಾಷಣೆ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ಗುರುರಾಜ ಬಿ ಕುಲಕರ್ಣಿ (ನಾಡಗೌಡ) ಮಾಹಿತಿ ನೀಡಿದರು.

    ನಿರ್ದೇಶಕರು ಆಕ್ಸಿಡೆಂಟ್ ಮಾಡಿ, ಲಾಸ್ಟ್ ಬಸ್ ಹತ್ತಿ, ಅಮೃತ ಅಪಾರ್ಟ್‌ಮೆಂಟ್ಸ್ ಗೆ ಹೋಗಿ ಈಗ ಜಡ್ಜ್ ಮೆಂಟ್ ನೀಡಲು ಬಂದಿದ್ದಾರೆ.  ಈ ಚಿತ್ರದ ಕಥೆ ಚೆನ್ನಾಗಿದೆ. ನನಗೆ ಈ ತಂಡ ಹಾಗೂ ಜಾನರ್ ಎರಡು ಹೊಸತು. ಆರು ಜನ ಸ್ನೇಹಿತರು ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಒಳ್ಳೆಯ ತಂಡದ ಜೊತೆ ಸಿನಿಮಾ ಮಾಡುತ್ತಿರುವ ಖುಷಿಯಿದೆ ಎಂದರು ಕ್ರೇಜಿಸ್ಟಾರ್ ರವಿಚಂದ್ರನ್. ನಾವೆಲ್ಲ ಸದ್ಯದಲ್ಲೇ ಮತ್ತೊಂದು ಜಡ್ಜ್ ಮೆಂಟ್ ಗಾಗಿ ಕಾಯುತ್ತಿದ್ದೇವೆ. ಅಷ್ಟರಲ್ಲಿ ಗುರುರಾಜ್ ಕುಲಕರ್ಣಿ ಮತ್ತು ತಂಡದವರ ದ ಜಡ್ಜ್ ಮೆಂಟ್ ಶುರುವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ನಾಗಾಭರಣ ಹಾರೈಸಿದರು. ಇದನ್ನೂ ಓದಿ:ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ

    ದಿಗಂತ್ (Digant), ಧನ್ಯ, ಲಕ್ಷ್ಮೀ ಗೋಪಾಲಸ್ವಾಮಿ, ರೂಪ ರಾಯಪ್ಪ ಮುಂತಾದವರು ದ ಜಡ್ಜ್ ಮೆಂಟ್ ಕುರಿತು ಮಾತನಾಡಿದರು. ಶರದ್ ಬಿ ನಾಡಗೌಡ, ವಿಶ್ವನಾಥ ಗುಪ್ತ, ರಾಮು ರಾಯಚೂರು, ರಾಜಶೇಖರ ಆರ್ ಪಾಟೀಲ, ರಾಜೇಶ್ವರಿ ಆರ್ ಸುನೀಲ ಹಾಗೂ ಪ್ರತಿಮ ಬಿರಾದಾರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ ‌.