Tag: ಧನಂಜಯ

  • ಕನ್ನಡ ಸಿನಿಮಾಗೆ WWE ಸೂಪರ್ ಸ್ಟಾರ್ ಸುಖ್ವಿಂದರ್ ಸಿಂಗ್ ಗ್ರೆವಾಲ್ ಎಂಟ್ರಿ

    ಕನ್ನಡ ಸಿನಿಮಾಗೆ WWE ಸೂಪರ್ ಸ್ಟಾರ್ ಸುಖ್ವಿಂದರ್ ಸಿಂಗ್ ಗ್ರೆವಾಲ್ ಎಂಟ್ರಿ

    ಶಿವರಾಜ್‌ಕುಮಾರ್‌ (ShivarajKumar) ಮತ್ತು ಧನಂಜಯ (Dhananjay) ಅಭಿನಯಿಸುತ್ತಿರುವ ಬಹು ನಿರೀಕ್ಷಿತ 666 ಆಪರೇಷನ್ ಡ್ರೀಮ್ ಥಿಯೇಟರ್ (666 Operation Dream Theatre) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ಹಾಕಿ ನಿರ್ದೇಶಕ ಎಂ ಹೇಮಂತ್ ರಾವ್ ಚಿತ್ರೀಕರಣ ನಡೆಸುತ್ತಿದ್ದಾರೆ. ಇದೀಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಅಂಗಳಕ್ಕೆ WWE ಸೂಪರ್ ಸ್ಟಾರ್ ಸುಖ್ವಿಂದರ್ ಸಿಂಗ್ ಗ್ರೆವಾಲ್ (Sukhwinder Singh Grewal) ಎಂಟ್ರಿ ಕೊಟ್ಟಿದ್ದಾರೆ. ಶಾರುಖ್ ಖಾನ್ ನಟನೆಯ ಜವಾನ್ ಹಾಗೂ ಆರ್ಯನ್ ಖಾನ್ ನಿರ್ದೇಶನದ ‘ಬ್ಯಾಡ್ಸ್ ಆಫ್ ಬಾಲಿವುಡ್’ ನಲ್ಲಿ ನಟಿಸಿರುವ ಸುಖಿ ಗ್ರೆವಾಲ್ ಈಗ ಸ್ಯಾಂಡಲ್‌ವುಡ್ ಗೆ ಪದಾರ್ಪಣೆ ಮಾಡಿದ್ದಾರೆ.

    ಸದ್ಯ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ. ಸುಖಿ ಎಂಟ್ರಿ ಬಗ್ಗೆ ಮಾತನಾಡಿದ ನಿರ್ದೇಶಕ ಹೇಮಂತ್ ಎಂ ರಾವ್, ‘ನಮಗೆ ಭಯಾನಕವಾಗಿ ಕಾಣುವ ವ್ಯಕ್ತಿತ್ವದ ಪಾತ್ರಧಾರಿ ಬೇಕಿತ್ತು. ದೊಡ್ಡ ಪರದೆಯನ್ನೂ ಚಿಕ್ಕದಾಗಿ ಕಾಣುವಂತೆ ಮಾಡಿದ ವ್ಯಕ್ತಿ. ಸುಖಿ ಪಾತ್ರವು ಒಂದು ರೀತಿಯ ಪಾತ್ರಕ್ಕೆ ಸರಿಹೊಂದುತ್ತದೆ. ನಾನು ಸೆಟ್‌ನಲ್ಲಿ ಭೇಟಿಯಾದ ಅತ್ಯಂತ ಸೌಮ್ಯ ವ್ಯಕ್ತಿಗಳಲ್ಲಿ ಅವರು ಒಬ್ಬರು. ಇದು ಅವರ ದೈತ್ಯ ವ್ಯಕ್ತಿತ್ವಕ್ಕೆ ಸಾಕಷ್ಟು ಭಿನ್ನವಾಗಿದೆ. ಅವರ ವ್ಯಕ್ತಿತ್ವವನ್ನು ಸರಿಹೊಂದಿಸಲು ನಾವು ಸೆಟ್‌ ಎತ್ತರವನ್ನು ಹೆಚ್ಚಿಸಬೇಕಾಗಿತ್ತು ಎಂದು ನಾನು ಹೇಳಿದಾಗ ಅದು ಉತ್ಪ್ರೇಕ್ಷೆಯಾಗುವುದಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಭಾನುವಾರವೂ ಹೌಸ್‌ಫುಲ್‌ – ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ

    7 ಅಡಿ 2 ಇಂಚು ಎತ್ತರವಿರುವ ಸುಖ್ವಿದರ್ ಸಿಂಗ್ ಗ್ರೆವಾಲ್ ಮಾತನಾಡಿ, ದಕ್ಷಿಣ ಚಲನಚಿತ್ರೋದ್ಯಮದ ಬಗ್ಗೆ ನಾನು ಬಹಳಷ್ಟು ಕೇಳಿದ್ದೇನೆ, ಕನ್ನಡ ಚಲನಚಿತ್ರೋದ್ಯಮದ ಭಾಗವಾಗುವುದು ಅದ್ಭುತವಾಗಿದೆ. ಧನಂಜಯ ಮತ್ತು ಡಾ. ಶಿವರಾಜ್ ಕುಮಾರ್ ಇರುವ ಯೋಜನೆಯಲ್ಲಿ ಕೆಲಸ ಮಾಡುವುದು ಒಂದು ಗೌರವ. ನಾನು ಸೆಟ್‌ನಲ್ಲಿ ಇರಲು ಇಷ್ಟಪಡುತ್ತೇನೆ, ಇಲ್ಲಿನ ಜನರು ತುಂಬಾ ಪ್ರೀತಿಯಿಂದ ಇದ್ದಾರೆ. ನನ್ನ ಅಭಿನಯಕ್ಕೆ ಕನ್ನಡ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ನಾನು ಎದುರು ನೋಡುತ್ತಿದ್ದೇನೆ ಮತ್ತು ಹೆಚ್ಚಿನ ಪ್ರಾಜೆಕ್ಟ್ ಗಳಲ್ಲಿ ಕೆಲಸ ಮಾಡಲು ಬಯಸುತ್ತೇನೆ. ಸೆಟ್ನಲ್ಲಿ ವಾತಾವರಣ ಮತ್ತು ಮುಖ್ಯವಾಗಿ ಬೆಂಗಳೂರಿನ ವಾತಾವರಣ ನಾನು ಹೆಚ್ಚು ಆನಂದಿಸಿದೆ. ನಾನು ನಗರವನ್ನು ಹೆಚ್ಚು ಅನ್ವೇಷಿಸಿಲ್ಲ, ಆದರೆ ಇಲ್ಲಿನ ಆಹಾರವನ್ನು ನಾನು ಆನಂದಿಸಿದೆ. ಅದಕ್ಕಾಗಿಯೇ ನಾನು ಜಿಮ್‌ನಲ್ಲಿ ಹೆಚ್ಚು ಸಮಯ ಕಳೆಯಬೇಕಾಯಿತು ಎಂದರು. ಇದನ್ನೂ ಓದಿ:  ಕೇರಳದಲ್ಲಿ ‌ಕಾಂತಾರ ಭರ್ಜರಿ ಪ್ರದರ್ಶನ – ಅತಿ ಹೆಚ್ಚು ಗಳಿಕೆ ಮಾಡಿದ 2ನೇ ಕನ್ನಡ ಸಿನಿಮಾ ದಾಖಲೆ

    ಈಗಾಗಲೇ ತಮ್ಮ ಭಾಗದ ಆಕ್ಷನ್ ಸೀಕ್ವೆನ್ಸ್ ನ್ನು ಸುಖಿ ಮುಕ್ತಾಯಗೊಳಿದ್ದಾರೆ.  ವೈಶಾಕ್ ಜೆ. ಗೌಡ ಅವರ ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ಮಿಸಲಾಗುತ್ತಿದೆ. ಹೇಮಂತ್ ಎಂ. ರಾವ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಈ ಸಿನಿಮಾಗಿದೆ.

    ರೆಟ್ರೋ ಲುಕ್‌ನಲ್ಲಿ ಶಿವರಾಜ್‌ಕುಮಾರ್‌ ಹಾಗೂ ಧನಂಜಯ್ ಕಾಣಿಸಿಕೊಂಡಿದ್ದು, ಪೋಸ್ಟರ್ ಈಗಾಗಲೇ ರಿಲೀಸ್ ಆಗಿದೆ. ಈ ಲುಕ್ ಡಾ. ರಾಜ್‌ಕುಮಾರ್‌ ಅವರ ಬಾಂಡ್ ಸಿನಿಮಾಗಳಾದ ಜೇಡರ ಬಲೆ, ಆಪರೇಷನ್ ಡೈಮಂಡ್ ರಾಕೆಟ್, ಗೋವಾದಲ್ಲಿ CID 999 ನೆನಪಿಸುತ್ತದೆ.

  • ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ

    ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ

    ಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ ಎಂದು ನಟ ಧನಂಜಯ (Daali Dhananjay) ಮಾತನಾಡಿದ್ದಾರೆ. ಇದು ಎಲ್ಲರೂ ಖುಷಿಪಡುವಂತಹ ವಿಚಾರ ಎಂದು ಭಾರತ ಸೇನೆಯ ಬಗ್ಗೆ ಮೆಚ್ಚಿಗೆಯ ಮಾತುಗಳನ್ನಾಡಿದ್ದಾರೆ ಡಾಲಿ. ಇದನ್ನೂ ಓದಿ:12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ

    ಕಾರ್ಯಕ್ರಮವೊಂದರಲ್ಲಿ ಡಾಲಿ ಮಾತನಾಡಿ, ಉಗ್ರರಿಗೆ ಉತ್ತರ ಕೊಡಲೇಬೇಕು. ಪ್ರತಿ ಬಾರಿಯೂ ಉತ್ತರ ಕೊಟ್ಟಿದ್ದೇವೆ. ಇದೀಗ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದ ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ. ಇದು ಎಲ್ಲರೂ ಖುಷಿಪಡುವಂತದ್ದು ಎಂದಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್- ಬರಲಿದೆ ವಿಜಯ್ ಸೇತುಪತಿ ನಟನೆಯ ‘ಮಹಾರಾಜ’ ಸೀಕ್ವೆಲ್

    ಇದೇ ವೇಳೆ ಸೋನು ನಿಗಮ್ ಅವರ ಕನ್ನಡ ವಿವಾದದ ಬಗ್ಗೆಯೂ ಡಾಲಿ ಮಾತನಾಡಿ, ನಾಡು ನುಡಿ ಅಂತ ಬಂದಾಗ ಎಲ್ಲರೂ ನಿಂತುಕೊಳ್ಳಲೇಬೇಕು. ಸೋನು ನಿಗಮ್ ಕೂಡ ಕನ್ನಡದ ಬಗ್ಗೆ ಕಾಳಜಿಯಿರುವ ಕಲಾವಿದ. ಅವರು ಒಳ್ಳೆಯ ಸಿಂಗರ್, ಚಿತ್ರರಂಗಕ್ಕೆ ಅವರು ಕೊಡುಗೆ ಕೊಟ್ಟಿದ್ದಾರೆ. ನಾವು ಅವರು ಹಾಡಿರುವ ಹಾಡುಗಳನ್ನು ಕೇಳಿ ಎಂಜಾಯ್ ಮಾಡಿದ್ದೇವೆ. ಅಂದಿನ ಸಂದರ್ಭದಲ್ಲಿ ಅವರ ಪ್ರತಿಕ್ರಿಯೆ ಬೇರೆ ತರಹ ಕಾಣಿಸಿರಬಹುದು. ಅಥವಾ ತಪ್ಪಾಗಿ ರಿಯಾಕ್ಟ್ ಮಾಡಿರಬಹುದು. ಆದರೆ ಕನ್ನಡ ಅಂತ ಬಂದಾಗ ನಾವೆಂದಿಗೂ ಕನ್ನಡದ ಪರನೇ ಇರುತ್ತೇವೆ. ಕನ್ನಡನೇ ನಮ್ಮ ಅನ್ನ, ಅದೇ ನಮ್ಮ ಜೀವ ಎಂದಿದ್ದಾರೆ.

  • ‘ಹೊಯ್ಸಳ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್

    ‘ಹೊಯ್ಸಳ’ ಸಿನಿಮಾದ ರೊಮ್ಯಾಂಟಿಕ್ ಹಾಡು ರಿಲೀಸ್

    ಟ ರಾಕ್ಷಸ ಧನಂಜಯ (Dhananjaya) ನಟನೆಯ 25ನೇ ಸಿನೆಮಾ ಹೊಯ್ಸಳ (Hoysala) ದಲ್ಲಿ ಖಡಕ್ ಪೊಲೀಸ್ ಆಗಿ ಕಾಣಿಸಿಕೊಳ್ಳುವುದಲ್ಲದೆ ತನ್ನ ಮಡದಿಯ ಮುಂದೆ ಪ್ರೀತಿಯ ನಿವೇದನೆ ಮಾಡುವ ರೊಮ್ಯಾಂಟಿಕ್ ಗಂಡನಾಗಿಯೂ ಕಾಣಿಸಿಕೊಂಡಿದ್ದಾರೆ. ಬಡವ ರಾಸ್ಕಲ್ ನಲ್ಲಿ ಉಡುಪಿ ಹೋಟೆಲು ಹಾಡಿನಿಂದ ತಮ್ಮ ಜೋಡಿಯ ಮೋಡಿ ಮಾಡಿದ್ದ ಧನಂಜಯ ಹಾಗೂ ಅಮೃತಾ ಐಯ್ಯಂಗಾರ್ (Amrita Iyengar) ಈಗ “ಅರೇ ಇದು ಎಂಥಾ ಭಾವನೆ” ಎನ್ನುವ ಮೆಲೋಡಿ ಲವ್ ಸಾಂಗ್ ನಲ್ಲಿ ಬಹಳ ಹೋಮ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    “ಅರೇ ಇದು ಎಂಥಾ ಭಾವನೆ” ಹಾಡಿನ ಲಿರಿಕಲ್ ವಿಡಿಯೋ ಆನಂದ್ ಆಡಿಯೋ ಚಾನೆಲ್ ನಲ್ಲಿ ಇಂದು ಬಿಡುಗಡೆಯಾಗಿದ್ದು, ಗುರುದೇವ್ – ಗಂಗಾಳ ಕ್ಯೂಟ್ ರೊಮಾನ್ಸ್ ಅನ್ನು ನಾವು ಈ ಹಾಡಿನಲ್ಲಿ ನೋಡಬಹುದು. ತನ್ನ ಮಡದಿ- ಮನದರಸಿಗೆ ಮನದಾಳದ ಮಾತುಗಳನ್ನು ಈ ಹಾಡಿನ ಮೂಲಕ ಡಾಲಿ ಪ್ರೀತಿಯಿಂದ ವ್ಯಕ್ತಪಡಿಸುತ್ತಿದ್ದಾರೆ. ಗಾಯಕ ಹರಿಚರಣ್ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಯೋಗರಾಜ್ ಭಟ್ (Yogaraj Bhatt) ಸಾಹಿತ್ಯ ಬರೆದಿದ್ದು, ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿರುತೆರೆ ಸುಂದರಿ ಅಮೂಲ್ಯ ಗೌಡ

    ಈ ಹಿಂದೆ ಟೈಟಲ್ ಸಾಂಗ್ ರಿಲೀಸ್ ಆಗಿದ್ದು ಭಾರಿ ಸದ್ದು ಮಾಡಿತ್ತು. ಪೊಲೀಸ್ ಡ್ರಾಮಾ ಸಿನಿಮಾ ಆಗಿರುವ ಹೊಯ್ಸಳ ಚಿತ್ರದ ಟೀಸರ್ ರಿಲೀಸ್ ಆಗಿ ಭರವಸೆ ಮೂಡಿಸಿತ್ತು. ಇನ್ನು ಡಾಲಿ ಧನಂಜಯ್​ರ 25ನೇ ಸಿನಿಮಾ ಹೊಯ್ಸಳ ಮಾರ್ಚ್‌ 30 ರಂದು ತೆರೆಮೇಲೆ ಅಪ್ಪಳಿಸಲಿದೆ. ಸಿನಿಮಾದಲ್ಲಿ ಅಮೃತಾ ಐಯ್ಯಂಗಾರ್ ನಾಯಕಿ, ಅಚ್ಯುತ್ ಕುಮಾರ್, ರಾಜೇಶ್ ನಟರಂಗ ಸೇರಿದಂತೆ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ವಿಜಯ್ ಎನ್ ನಿರ್ದೇಶನ ಮಾಡಿದ್ದು, ಕೆಆರ್​ಜಿ ಸ್ಟುಡಿಯೋ ಅಡಿಯಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಾಣ ಮಾಡಿದ್ದಾರೆ.

  • ಜಮಾಲಿಗುಡ್ಡ- 90ರ ದಶಕದ ಮನಮಿಡಿಯುವ ಭಾವನಾತ್ಮಕ ಪಯಣ

    ಜಮಾಲಿಗುಡ್ಡ- 90ರ ದಶಕದ ಮನಮಿಡಿಯುವ ಭಾವನಾತ್ಮಕ ಪಯಣ

    ನಂಜಯ (Dhananjay) ಮತ್ತು ಅದಿತಿ ಪ್ರಭುದೇವಾ (Aditi Prabhudeva) ನಟನೆಯ Once Upon a Time In `ಜಮಾಲಿಗುಡ್ಡ’ ಡಿ.30ರಂದು ಸಿನಿಮಾ ತೆರೆಕಂಡು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ಏನೀದು ಜಮಾಲಿಗುಡ್ಡ? ಚಿತ್ರದ ಕುರಿತು ಇಲ್ಲಿದೆ ಅಪ್‌ಡೇಟ್.

    ಕುಶಾಲ್ ಗೌಡ ನಿರ್ದೇಶನದಲ್ಲಿ ಮೂಡಿಬಂದಿರುವ ಜಮಾಲಿಗುಡ್ಡ ಸಿನಿಮಾ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಡಿ.30ರಂದು ರಿಲೀಸ್ ಆಗಿದೆ. ಡಾಲಿ, ಅದಿತಿ, ಭಾವನಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಧನಂಜಯ್ ಅಭಿನಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಡೀ ಚಿತ್ರವನ್ನು ಆವರಿಸಿಕೊಂಡಿದ್ದಾರೆ ಡಾಲಿ ಧನಂಜಯ. ಮಾತು ತಡವರಿಸುವ ಮುಗ್ಧ ಹುಡುಗನಾಗಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಎರಡು ಶೇಡ್ ಗಳಲ್ಲಿ ಸ್ನೇಹ, ಮಮಕಾರ, ಪ್ರೀತಿಯ ಅಪ್ಪುಗೆಯನ್ನು ವ್ಯಕ್ತಪಡಿಸಿದ್ದಾರೆ.

    ನಿಹಾರಿಕಾ ಮೂವೀಸ್ (Niharika Movies) ನಿರ್ಮಾಣದ ‌ʻಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡʼ ಚಿತ್ರಕ್ಕೆ ಕುಶಾಲ್ ಗೌಡ ನಿರ್ದೇಶನ ಮಾಡಿದ್ದಾರೆ. ಇದೊಂದು 90ರ ದಶಕದ ಕಾಲ್ಪನಿಕ ಪ್ರಪಂಚದ ಭಾವನಾತ್ಮಕ ಕಥೆಯಾಗಿದ್ದು, ಧನಂಜಯ್ ಮತ್ತು ಬೇಬಿ ಪ್ರಾಣ್ಯ ನಡುವಿನ ಸನ್ನಿವೇಶಗಳು ಸುಂದರವಾಗಿ ಮೂಡಿ ಬಂದಿದೆ. ಈ ಚಿತ್ರವನ್ನು ಚಿಕ್ಕಮಗಳೂರು ಮತ್ತು ಬಾಬಾಬುಡನ್‌ಗಿರಿ ಸೇರಿದಂತೆ ಹಲವೆಡೆ ಚಿತ್ರೀಕರಿಸಲಾಗಿದೆ.

    ಚಿತ್ರದಲ್ಲಿ ಅದ್ಭುತ ಪ್ರೇಮಕಥೆ, ಆ್ಯಕ್ಷನ್, ಬಾಂಧವ್ಯ, ಪ್ರತಿಯೊಂದನ್ನ ಕೂಡ ಗಮನದಲ್ಲಿಟ್ಟುಕೊಂಡು ಈ ಸಿನಿಮಾ ರೂಪಿಸಲಾಗಿದೆ. ಖಡಕ್ ಪಾತ್ರಗಳ ಮೂಲಕ ಡಾಲಿನ ನೋಡಿದ್ದ ಅಭಿಮಾನಿಗಳಿಗೆ ಈ ಚಿತ್ರದಲ್ಲಿನ ಡಾಲಿ ಪಾತ್ರ ಗಮನ ಸೆಳೆದಿದೆ.

    ಇನ್ನೂ ನಟಿ ಅದಿತಿ ಪ್ರಭುದೇವಾ ಕೂಡ ಮೊದಲ ಬಾರಿಗೆ ಧನಂಜಯಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅದಿತಿ ಕೂಡ ಮಧ್ಯಮ ವರ್ಗದ ಸಿಂಪಲ್ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಟಿ ಸಿಗರೇಟ್ ಕೂಡ ಸೇದಿದ್ದಾರೆ. ಡಾಲಿ, ಅದಿತಿ ಜೊತೆ ಭಾವನಾ ಕೂಡ ಪ್ರಮುಖ ಪಾತ್ರಕ್ಕೆ ಜೀವ ತುಂಬಿದ್ದಾರೆ. ಚಿತ್ರದಲ್ಲಿ ಧನಂಜಯ್, ಅದಿತಿ, ಭಾವನಾ, ಪ್ರಕಾಶ್ ಬೆಳವಾಡಿ, ಪ್ರಾಣ್ಯ, ಯಶ್ ಶೆಟ್ಟಿ, ತ್ರಿವೇಣಿ ರಾವ್ ನಟಿಸಿದ್ದಾರೆ.

    ಡಿ.30ರಂದು ತೆರೆಕಂಡಿರುವ ಈ ಸಿನಿಮಾ ನೋಡಿರುವ ಪ್ರೇಕ್ಷಕರು, ಪಕ್ಕಾ ಪೈಸಾ ವಸೂಲ್ ಚಿತ್ರ ಎನ್ನುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • `ಸಿಂಧೂರ ಲಕ್ಷ್ಮಣ’ ಸಿನಿಮಾ ಬಗ್ಗೆ ನಿರ್ಮಾಪಕ ಉಮಾಪತಿ ಪ್ರತಿಕ್ರಿಯೆ

    `ಸಿಂಧೂರ ಲಕ್ಷ್ಮಣ’ ಸಿನಿಮಾ ಬಗ್ಗೆ ನಿರ್ಮಾಪಕ ಉಮಾಪತಿ ಪ್ರತಿಕ್ರಿಯೆ

    ನ್ನಡ ಚಿತ್ರರಂಗದ ಬಿಗ್ ಬಜೆಟ್ ಸಿನಿಮಾ `ಸಿಂಧೂರ ಲಕ್ಷ್ಮಣ'(Sindhura Lakshmana) ಸದ್ಯದಲ್ಲೇ ಸೆಟ್ಟೇರುತ್ತಿರುವ ವಿಷ್ಯ ಗಾಂಧಿನಗರದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕನ್ನಡದ ನಟ ರಾಕ್ಷಸ ಡಾಲಿ(Dhannanjay) ಸಿಂಧೂರ ಲಕ್ಷ್ಮಣನಾಗಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ಈಗ ನಿರ್ಮಾಪಕ ಉಮಾಪತಿ(Producer Umapathy) ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಇತ್ತೀಚೆಗೆ ಡಾಲಿ ನಟಿಸಿರುವ ಸಲಗ, ರತ್ನನ್ ಪ್ರಪಂಚ, ಬೈರಾಗಿ, ಪುಷ್ಪ, ಹೆಡ್‌ಬುಷ್, ಅಷ್ಟು ಚಿತ್ರಗಳು ಸಿಕ್ಕಾಪಟ್ಟೆ ಸದ್ದು ಮಾಡಿದೆ. `ಹೆಡ್‌ಬುಷ್’ ನಂತರ ಸ್ಟಾರ್ ನಿರ್ಮಾಪಕ ಉಮಾಪತಿ ನಿರ್ಮಾಣದ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಉತ್ತರ ಕರ್ನಾಟಕದ ಹೋರಾಟಗಾರ `ವೀರ ಸಿಂಧೂರ ಲಕ್ಷ್ಮಣ’ನಾಗಿ ಡಾಲಿ ಬರಲಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಈ ವಿಷ್ಯಕ್ಕೆ ಟ್ವಿಸ್ಟ್ ಸಿಕ್ಕಿದೆ. ನಿರ್ಮಾಪಕ ಉಮಾಪತಿ ಈ ಚಿತ್ರದ ಬಗ್ಗೆ ಮೌನ ಮುರಿದಿದ್ದಾರೆ. ಇದನ್ನೂ ಓದಿ:‘ಸಲಾರ್’ ಸಿನಿಮಾದಲ್ಲಿ ಕನ್ನಡದ ಯುವ ನಾಯಕ ಪ್ರಮೋದ್ ನಟಿಸಿದ್ದು ನಿಜ : ಪ್ರಶಾಂತ್ ನೀಲ್

    `ಸಿಂಧೂರ ಲಕ್ಷ್ಮಣ ಚಿತ್ರದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ನನ್ನ ಮನಸ್ಸಿನಲ್ಲಿ ಇಬ್ಬರೂ ಹೀರೋ ಇದ್ದಾರೆ. ಅವರೊಂದಿಗೆ ಮಾತುಕತೆ ಆಗಿ ಅಫಿಷಿಯಲ್ ಆಗಿ ಅಡ್ವಾನ್ಸ್ ಕೊಡುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಎಲ್ಲವೂ ಓಕೆ ಆದ ಮೇಲೆ ನಾನು ಅಧಿಕೃತವಾಗಿ ತಿಳಿಸುತ್ತೇನೆ. ಸದ್ಯಕ್ಕೆ ನಾನು ಚುನಾವಣೆ ಕಡೆ ಗಮನ ಹರಿಸುತ್ತೇನೆ. ಫೆಬ್ರವರಿ ಸಮಯದಲ್ಲಿ ಈ ಚಿತ್ರ ಸೆಟ್ಟೇರುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಎಲ್ಲರಿಗೂ ಸೀಕ್ರೆಟ್ ಆಗಿರುತ್ತದೆ ಎಂದು `ರಾಬರ್ಟ್’ ನಿರ್ಮಾಪಕ ಉಮಾಪತಿ ಪ್ರತಿಕ್ರಿಯೆ ನೀಡಿದ್ದಾರೆ.

    ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗಗಳಲ್ಲಿ ಸಿಂಧೂರ ಲಕ್ಷ್ಮಣನನ್ನು ಅಗಾಧವಾಗಿ ಗೌರವಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮದೇ ಶೈಲಿಯಲ್ಲಿ ಸಿಂಧೂರ ಲಕ್ಷ್ಮಣಹೋರಾಡಿದ್ದರು. ಬಡವರ ಬಳಿಯೇ ತೆರಿಗೆ ವಸೂಲಿ ಮಾಡುತ್ತಿದ್ದ ಬ್ರಿಟಿಷರ ನಿದ್ದೆಗೆಡಿಸಿದ್ದ ಈ ಸಿಂಧೂರ ಲಕ್ಷ್ಮಣ, ಇದೀಗ ಈ ಪಾತ್ರಕ್ಕೆ ಡಾಲಿ ಜೀವತುಂಬಲಿದ್ದಾರೆ. ಈಗಾಗಲೇ ಸ್ಕ್ರೀಪ್ಟ್ ವರ್ಕ್ ಕೂಡ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಕುರಿತು ಮತ್ತಷ್ಟು ಅಪ್‌ಡೇಟ್ ಸಿಗಲಿದೆ.

    Live Tv
    [brid partner=56869869 player=32851 video=960834 autoplay=true]

  • ʻಸಿಂಧೂರ ಲಕ್ಷ್ಮಣʼನಾಗಿ ಬರಲಿದ್ದಾರೆ ನಟ ಧನಂಜಯ

    ʻಸಿಂಧೂರ ಲಕ್ಷ್ಮಣʼನಾಗಿ ಬರಲಿದ್ದಾರೆ ನಟ ಧನಂಜಯ

    ಸ್ಯಾಂಡಲ್‌ವುಡ್ (Sandalwood) ನಟ ರಾಕ್ಷಸ ಧನಂಜಯ(Dhananjay) ಇದೀಗ ಭರ್ಜರಿ ಡಿಮ್ಯಾಂಡ್ ಶುರುವಾಗಿದೆ. ಇತ್ತೀಚೆಗಷ್ಟೇ ರಮ್ಯಾ(Ramya) ಜೊತೆಗಿನ `ಉತ್ತರಕಾಂಡ’ ಚಿತ್ರ ಅನೌನ್ಸ್ ಮಾಡಿದ್ದ ಬೆನ್ನಲ್ಲೇ ಮತ್ತೊಂದು ಹೊಸ ಸಿನಿಮಾಗೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಐತಿಹಾಸಿಕ ಪಾತ್ರದಲ್ಲಿ ಮಿಂಚಲು ಡಾಲಿ ರೆಡಿಯಾಗಿದ್ದಾರೆ. ಸಿಂಧೂರ ಲಕ್ಷ್ಮಣನಾಗಿ(Sindhura Lakshmana) ಡಾಲಿ ಬರಲಿದ್ದಾರೆ.

    ಇತ್ತೀಚೆಗೆ ಡಾಲಿ ನಟಿಸಿರುವ ಸಲಗ, ರತ್ನನ್ ಪ್ರಪಂಚ, ಬೈರಾಗಿ, ಪುಷ್ಪ, ಹೆಡ್‌ಬುಷ್, ಅಷ್ಟು ಚಿತ್ರಗಳು ಸಿಕ್ಕಾಪಟ್ಟೆ ಸದ್ದು ಮಾಡಿದೆ. ಇದೀಗ  `ರಾಬರ್ಟ್‌'(Robert) ಖ್ಯಾತಿಯ ನಿರ್ಮಾಪಕ ಉಮಾಪತಿ(Umapathy) ನಿರ್ಮಾಣದ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಉತ್ತರ ಕರ್ನಾಟಕದ ಹೋರಾಟಗಾರ `ವೀರ ಸಿಂಧೂರ ಲಕ್ಷ್ಮಣ’ನಾಗಿ ಬರಲು ಡಾಲಿ ರೆಡಿಯಾಗಿದ್ದಾರೆ. ಇದನ್ನೂ ಓದಿ:ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    `ರಾಬರ್ಟ್’ ನಿರ್ಮಾಪಕ ಉಮಾಪತಿ `ಸಿಂಧೂರ ಲಕ್ಷ್ಮಣʼ ಕಥೆಯನ್ನು ಕನ್ನಡದ ಸೂಪರ್ ಸ್ಟಾರ್ ನಟನಿಗೆ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದರು. ಈಗ ಈ ಪಾತ್ರಕ್ಕೆ ಡಾಲಿನೇ ಸೂಕ್ತ ಎಂದೇನಿಸಿ, ಧನಂಜಯ ಅವರನ್ನ ಈ ಸಿನಿಮಾಗೆ ಕೇಳಲಾಗಿದೆಯಂತೆ. ಕಥೆ ಕೇಳಿ ಡಾಲಿ ಕೂಡ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತರುಣ್ ಸುಧೀರ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದೆ.

    ಉತ್ತರ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಭಾಗಗಳಲ್ಲಿ ಸಿಂಧೂರ ಲಕ್ಷ್ಮಣ ಅಗಾಧವಾಗಿ ಗೌರವಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮದೇ ಶೈಲಿಯಲ್ಲಿ ಸಿಂಧೂರ ಲಕ್ಷ್ಮಣ ಹೋರಾಡಿದ್ದರು. ಬಡವರ ಬಳಿಯೇ ತೆರಿಗೆ ವಸೂಲಿ ಮಾಡುತ್ತಿದ್ದ ಬ್ರಿಟಿಷರಿಗೆ ಸಿಂಧೂರ ಲಕ್ಷ್ಮಣ ತಕ್ಕ ಪಾಠ ಕಲಿಸಿದ್ದರು. ಇದೀಗ ಈ ಪಾತ್ರಕ್ಕೆ ಡಾಲಿ ಜೀವ ತುಂಬಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ವರ್ಕ್ ಕೂಡ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಕುರಿತು ಮತ್ತಷ್ಟು ಅಪ್‌ಡೇಟ್ ಸಿಗಲಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜಬೀದಿಯಲ್ಲಿ ತಾಲೀಮು ಆರಂಭ: ದಸರಾ ಆನೆಗಳ ತೂಕ 1 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ರಾಜಬೀದಿಯಲ್ಲಿ ತಾಲೀಮು ಆರಂಭ: ದಸರಾ ಆನೆಗಳ ತೂಕ 1 ವರ್ಷದ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ಮೈಸೂರು: ಮೈಸೂರು ದಸರೆಗಾಗಿ ಆಗಮಿಸಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಮೊದಲ ಗಜಪಡೆಯ ಟೀಂ ರಾಜಬೀದಿಯಲ್ಲಿ ತಾಲೀಮು ಆರಂಭಿಸಿದೆ.

    ಅಂಬಾರಿ ಮೆರವಣಿಗೆ ವೇಳೆಗೆ ಆನೆಗಳು ಮತ್ತಷ್ಟು ಶಕ್ತಿಶಾಲಿ ಆಗಬೇಕಿದ್ದು, ತಾಲೀಮು ಆರಂಭಿಸುವ ಮುನ್ನ ಅವುಗಳ ತೂಕ ಪರೀಕ್ಷೆ ನಡೆಸಲಾಗುತ್ತದೆ. ಗಜಪಡೆಯ ಆರೈಕೆ ಹಾಗೂ ಆರೋಗ್ಯದ ಮೇಲೆ ನಿಗಾ ಇಡುವ ಸಲುವಾಗಿ ಅರಣ್ಯ ಇಲಾಖೆಯೂ ಈ ಪರೀಕ್ಷೆ ನಡೆಸುತ್ತದೆ. ಕಳೆದ ಬಾರಿ ದಸರಾ ಮುಗಿಸಿ ಕಾಡಿಗೆ ಹಿಂದಿರುಗಿದ್ದ ಗಜಪಡೆಯ ತೂಕಕ್ಕೂ ಇವತ್ತಿನ ತೂಕಕ್ಕೂ ಇರುವ ವ್ಯತ್ಯಾಸದ ಕುರಿತ ಇನ್‍ಟ್ರೆಸ್ಟಿಂಗ್ ಅಂಶಗಳು ಇಂತಿದೆ.

    ಇಂದು ಟ್ರಕ್‍ಗಳ ತೂಕ ಹಾಕುವ ಕೇಂದ್ರದಲ್ಲಿ ಆನೆಗಳ ತೂಕ ಪರೀಕ್ಷಿಸಲಾಯಿತು. ಕ್ಯಾಪ್ಟನ್ ಅರ್ಜುನ, ವರಲಕ್ಷ್ಮಿ, ವಿಕ್ರಮ, ಧನಂಜಯ, ಗೋಪಿ ಮತ್ತು ಚೈತ್ರ ಆನೆಗಳ ದೇಹ ತೂಕ ಪರೀಕ್ಷಿಸಲಾಯಿತು. ಕಳೆದ ವರ್ಷ 5,250 ಕೆಜಿ ತೂಕವಿದ್ದ ಕ್ಯಾಪ್ಟನ್ ಅರ್ಜುನ ಈಗ 5,650 ಕೆಜಿ ತೂಕವಿದ್ದಾನೆ. ಅಲ್ಲಿಗೆ, ಒಂದು ವರ್ಷಕ್ಕೆ 400 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾನೆ. ಇನ್ನೂ ವರಲಕ್ಷ್ಮಿ ಆನೆ 3,120 ಕೆಜಿ ತೂಕವಿದೆ. ಕಳೆದ ವರ್ಷ ಈ ಆನೆ 2,830 ಕೆಜಿ ಇತ್ತು. ಅಲ್ಲಿಗೆ 290 ಕೆಜಿ ತೂಕವನ್ನು ವರಲಕ್ಷ್ಮಿ ಹೆಚ್ಚಿಸಿಕೊಂಡಿದೆ.

    ವಿಕ್ರಮ ಆನೆ 3,985 ಕೆಜಿ, ಗೋಪಿ 4,435 ಕೆಜಿ, ಚೈತ್ರಾ 2,920 ಕೆಜಿ ಹಾಗೂ ಇದೇ ಮೊದಲ ಬಾರಿಗೆ ದಸರಾದಲ್ಲಿ ಭಾಗವಹಿಸುತ್ತಿರುವ ಧನಂಜಯ ಆನೆ 4,045 ಕೆಜಿ ತೂಕವಿದ್ದಾನೆ. ಅಲ್ಲಿಗೆ ಮೊದಲ ತಂಡದ ಆನೆಗಳಲ್ಲಿ ಕ್ಯಾಪ್ಟನ್ ಅರ್ಜುನ ಹೆಚ್ಚು ಬಲಶಾಲಿಯಾಗಿದ್ದಾನೆ. ಉಳಿದಂತೆ ಎಲ್ಲಾ ಆನೆಗಳು ಸದೃಢವಾಗಿವೆ. ಆನೆಗಳ ಬಲವನ್ನು ಇನ್ನಷ್ಟು ಹೆಚ್ಚಿಸಲು ಇಂದಿನಿಂದ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಬೆಲ್ಲ, ತೆಂಗಿನಕಾಯಿ, ಭತ್ತ, ಮುದ್ದೆ, ಬೆಣ್ಣೆ ಸೇರಿದಂತೆ ಪೌಷ್ಠಿಕವಾದ ಕಾಳು, ಹಸಿರು ಹುಲ್ಲನ್ನು ಪ್ರತಿ ದಿನವೂ ನಾಲ್ಕೈದು ಬಾರಿ ಆನೆಗಳಿಗೆ ನೀಡಿ ಅವುಗಳನ್ನು ಇನ್ನಷ್ಟು ಬಲಶಾಲಿ ಆಗುವಂತೆ ಮಾಡಲಾಗುತ್ತದೆ.

    ನಾಡಿನಲ್ಲಿ ಒಂದೂವರೆ ತಿಂಗಳು ಸಿಗುವ ರಾಜಾತಿಥ್ಯದಲ್ಲಿ ಆನೆಗಳು ತಮ್ಮ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವುದರಲ್ಲಿ ಅನುಮಾನಗಳೇ ಇಲ್ಲ. ವಿಜಯದಶಮಿ ಮೆರವಣಿಗೆಯಲ್ಲಿ ಐದು ಕಿಮೀ ದೂರವನ್ನು ಈ ಆನೆಗಳು ಕ್ರಮಿಸುತ್ತದೆ. ಹೀಗಾಗಿ ಆನೆಗಳ ಸಾರ್ಮಥ್ಯದ ಮೇಲೆ ಅರಣ್ಯ ಇಲಾಖೆ ಹೆಚ್ಚು ನಿಗಾವಹಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೊಗದಸ್ತಾದ ಟಗರು!

    ಪೊಗದಸ್ತಾದ ಟಗರು!

    ಬೆಂಗಳೂರು: ಟಗರು ಥಿಯೇಟರಿಗೆ ಬಂದಿದೆ. ಸೂರಿ ನಿರ್ದೇಶನ, ಶಿವರಾಜ್ ಕುಮಾರ್ ಹೀರೋ. ಇಬ್ಬರಿಬ್ಬರ ಕಾಂಬಿನೇಷನ್ನಿನಲ್ಲಿ ಬಂದ ಎರಡನೇ ಸಿನಿಮಾ. ಹೀಗೆ ಹತ್ತು ಹಲವರು ಕಾರಣಗಳಿಗಾಗಿ ಟಗರು ಸಿನಿಮಾದ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲದೆ, ಚಿತ್ರರಂಗದವರ ಪಾಲಿಗೂ ವಿಪರೀತ ಕುತೂಹಲವಿತ್ತು. ಈಗ ಆ ಎಲ್ಲ ನಿರೀಕ್ಷೆಗಳಿಗೂ ಉತ್ತರ ಸಿಕ್ಕಿದೆ.

    ಇರೋ ಬುದ್ಧಿಯನ್ನೇ ಬಂಡವಾಳ ಮಾಡಿಕೊಂಡು ಕ್ರೂರ ಕೆಲಸಗಳನ್ನು ಮಾಡಿಸುವ ಇಂಟಲಿಜೆಂಟ್ ಕ್ರಿಮಿನಲ್ಲುಗಳು. ರಾಜಕಾರಣಿಗಳು ಮತ್ತವರ ಮಕ್ಕಳನ್ನು ಟಾರ್ಗೆಟ್ ಮಾಡಿಕೊಂಡು ಹನಿ ಟ್ರ್ಯಾಪ್ ಮಾಡುವ ದುಷ್ಟರು. ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಕೊಲೆಗಡುಕರನ್ನು ಮಟ್ಟಹಾಕಲು ನಿಲ್ಲುವ ಪೊಲೀಸ್ ಅಧಿಕಾರಿಗಳು. ಪ್ರೀತಿಸಿದವರಿಗೆ ಸಹಾಯ ಮಾಡಲು ಹೋಗಿ ಫೀಲ್ಡಿಗಿಳಿದು ಡಾನ್ ಆದವನು. ಸಹವಾಸ ದೋಷದಿಂದ ಬೇಡದ್ದನ್ನೆಲ್ಲಾ ಕಲಿತ ಹುಡುಗಿ. ಹೀಗೆ ಸಾಕಷ್ಟು ಎಲಿಮೆಂಟುಗಳನ್ನು ಒಂದಕ್ಕೊಂದು ಪೋಣಿಸಿ ತಯಾರಿಸಿರುವ ಗುಚ್ಛವೇ ಟಗರು.

    ಸೂರಿ ಕಥೆ ಕಟ್ಟುವ ರೀತಿಯೇ ವಿಶಿಷ್ಟ. ನೇರವಾಗಿ ಹೇಳಿಬಿಡಬಹುದಾದ ಎಳೆಯನ್ನು ಬೇರೆಯದ್ದೇ ಹಾದಿಯಲ್ಲಿ ಕೊಂಡೊಯ್ದು ನೋಡುಗರ ಎದೆ ಮುಟ್ಟಿಸುವ ಅವರ ಕಸುಬುದಾರಿಕೆ ಟಗರು ಚಿತ್ರದಲ್ಲೂ ಗೆಲುವು ಕಂಡಿದೆ. ಇಂಥ ಸಿನಿಮಾಗಳಿಗೆ ಹಿನ್ನೆಲೆ ಸಂಗೀತ ಬಹಳ ಮುಖ್ಯ. ಇದೇ ಸಿನಿಮಾ ಬೇರೊಬ್ಬರ ಕೈಗೆ ಸಿಕ್ಕಿದ್ದರೆ ಅಬ್ಬರದಿಂದ ಗೊಬ್ಬರವಾಗುತ್ತಿತ್ತೋ ಏನೋ? ಆದರೆ ಸಂಗೀತ ನಿರ್ದೇಶಕ ಚರಣ್ ರಾಜ್ ಸಮಚಿತ್ತದಿಂದ ಕೂತು ಹಿನ್ನೆಲೆ ಶಬ್ದಗಳನ್ನು ಸೃಷ್ಟಿಸಿದ್ದಾರೆ. ಕ್ಯಾಮೆರಾ ಕೆಲಸ ಮಾಡಿರುವ ಮಹೇನ್ ಸಿಂಹ ಅಂತೂ ಇದು ಸಿನಿಮಾ ಅನ್ನೋದನ್ನೇ ಮರೆತು ಕಣ್ಣೆದುರೇ ನಡೆಯುತ್ತಿರುವ ದೃಶ್ಯಗಳಂತೆ ಕಲಾತ್ಮಕವಾಗಿ ಕಟ್ಟಿಕೊಟ್ಟಿದ್ದಾರೆ.

    ಸಿನಿಮಾದಲ್ಲಿನ ಒಂದೊಂದು ಪಾತ್ರಗಳೂ ಖಡಕ್ಕಾಗಿ ಮೂಡಿಬಂದಿವೆ. ಇಂಟಲಿಜೆಂಟ್ ಡಾನ್ ಪಾತ್ರದಲ್ಲಿ ನಟಿಸಿರೋ ರಂಗಭೂಮಿ ಕಲಾವಿದ ಸಚ್ಚು ಮುಖಪರಿಚಯ ಮಾಮೂಲಿ ಪ್ರೇಕ್ಷಕರಿಗೆ ಗೊತ್ತಿಲ್ಲದಿದ್ದರೂ ಯಾವತ್ತಿಗೂ ನೆನಪಿನಲ್ಲುಳಿಯುವಂತೆ ನಟಿಸಿದ್ದಾರೆ. ಇನ್ನು ಮುಂದೆ ಹೀರೋ ಆಗಿಯೇ ಮುಂದುವರೆಯಬೇಕೆನ್ನುವ ಆಸೆಯನ್ನು ಪಕ್ಕಕ್ಕಿಟ್ಟು ಇಂಥಾ ಖಡಕ್ಕು ರೋಲುಗಳಲ್ಲಿ ಕಾಣಿಸಿಕೊಂಡರೆ ಧನಂಜಯ, ವಸಿಷ್ಠರಂತ ನಟರು ದೊಡ್ಡ ಎತ್ತರಕ್ಕೇರುವುದರಲ್ಲಿ ಡೌಟಿಲ್ಲ.

    ಇನ್ನು ಟಗರು ಟೈಟಲ್ ಸಾಂಗ್‍ಗೆ ಚರಣ್ ರಾಜ್ ಕೊಟ್ಟಿರೋ ಟ್ಯೂನು, ಅಂಥೋಣಿ ದಾಸನ್ ಧ್ವನಿಗೆ ನಿಜಕ್ಕೂ ಬೆಲೆ ತಂದುಕೊಟ್ಟಿರೋದು ನೃತ್ಯ ನಿರ್ದೇಶಕ. ಲಾರಿ ಎಪಿಸೋಡುಗಳ ಫೈಟ್ ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್ ಕೆಲಸ ರೋಚಕ. ಸಂಭಾಷಣೆ ಬರೆದಿರುವ ಮಾಸ್ತಿ ಸಾಮಾನ್ಯವಾಗಿ ರೌಡಿಗಳ ಬಾಯಿಂದ ಹೊರಡುವ ಮಾತನ್ನೇ ಯಥಾವತ್ತು ಅಕ್ಷರಕ್ಕಿಳಿಸಿದ್ದಾರೆ.

    ಒಟ್ಟಾರೆಯಾಗಿ ನೋಡಿದರೆ ಟಗರು ಕಮರ್ಷಿಯಲ್ ಸಿನಿಮಾಗಳನ್ನು ಇಷ್ಟಪಡುವವರು ಮತ್ತು ಫ್ಯಾಮಿಲಿ ಆಡಿಯನ್ಸು ಕೂಡಾ ನೋಡಬಹುದಾದ ಸಿನಿಮಾ.