Tag: ಧನಂಜಯ್

  • ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ

    ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ

    ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು 666 ಆಪರೇಷನ್ ಡ್ರೀಮ್ ಥಿಯೇಟರ್ (666 Operation Dream Theatre). ಹೇಮಂತ್ ರಾವ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಒಂದು ಹೇಮಂತ್ ಡೈರೆಕ್ಷನ್ ಹಾಗೂ ಶಿವಣ್ಣ-ಧನಂಜಯ್ ಮತ್ತೆ ಒಂದಾಗಿರುವುದು. ಟಗರು (Tagaru) ಜೋಡಿಯ ಹೊಸ ಪ್ರಾಜೆಕ್ಟ್ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ಪೋಸ್ಟರ್ ಮೂಲಕವೇ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ರೆಟ್ರೋ ಲುಕ್‌ನಲ್ಲಿ ಶಿವಣ್ಣ ಹಾಗೂ ಧನಂಜಯ್ (Daali Dhananjay) ಕಾಣಿಸಿಕೊಂಡಿದ್ದು, ಈ ಲುಕ್ ನೋಡುತ್ತಿದ್ದರೆ ಡಾ. ರಾಜಕುಮಾರ್ ಅವರ ಸ್ಪೈ ಸಿನಿಮಾಗಳು ನೆನಪಾಗುತ್ತವೆ. ಸದ್ಯ ಚಿತ್ರತಂಡ ಮೊದಲ ಹಂತದ ಚಿತ್ರೀಕರಣ ಮುಗಿಸಿ, 2ನೇ ಹಂತಕ್ಕೆ ಸಜ್ಜಾಗುತ್ತಿದೆ.

    ಫಸ್ಟ್ ಶೆಡ್ಯೂಲ್ಡ್‌ ಶೂಟಿಂಗ್‌ನಲ್ಲಿ ಶಿವಣ್ಣ (Shiva Rajkumar) ಹಾಗೂ ಧನಂಜಯ್ ಭಾಗಿಯಾಗಿದ್ದರು. ಇದೀಗ ಇದೇ ತಿಂಗಳಲ್ಲಿ ಎರಡನೇ ಹಂತದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಜ್ಜಾಗಿದೆ. ಅದಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ಹಾಕಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಬೃಹತ್ ಆಕಾರದ ಸೆಟ್ ನಲ್ಲಿ ಬರೋಬ್ಬರಿ 100 ದಿನಗಳ ಕಾಲ ಶೂಟಿಂಗ್ ನಡೆಸಲಾಗುವುದು.

    ಸೆಟ್ ಬಗ್ಗೆ ಮಾತನಾಡಿದ ನಿರ್ಮಾಪಕ ಡಾ. ವೈಶಾಕ್ ಜೆ ಗೌಡ, ‘666 ಆಪರೇಷನ್ ಡ್ರೀಮ್ ಥಿಯೇಟರ್ ಬಗ್ಗೆ ಎಲ್ಲವನ್ನೂ ಹೇಮಂತ್ ಎಂ ರಾವ್ ಮತ್ತು ಅವರ ತಂಡ ಎಚ್ಚರಿಕೆಯಿಂದ ನೋಡಿಕೊಳ್ಳುತ್ತಿದೆ. ನಾವು ಇಂದಿನ ಪೀಳಿಗೆಯನ್ನು ಬೆರಗುಗೊಳಿಸುವ ಮತ್ತು ಹಿಂದಿನ ಪೀಳಿಗೆಯನ್ನು ನೆನಪಿನ ಹಾದಿಯಲ್ಲಿ ಕರೆದೊಯ್ಯುವ ಜಗತ್ತನ್ನು ರಚಿಸಲು ಪ್ರಯತ್ನಿಸುತ್ತಿದ್ದೇವೆ. ಯಾವ ಸೆಟ್‌ಗಳನ್ನ ನಿರ್ಮಿಸಲಾಗುತ್ತಿದೆ ಎಂಬುದನ್ನು ನಾನು ಬಹಿರಂಗಪಡಿಸಲು ಸಾಧ್ಯವಾಗುವುದಿಲ್ಲ. ಪ್ರೇಕ್ಷಕರು ದೊಡ್ಡ ಪರದೆಯ ಮೇಲೆ ಅನುಭವಿಸಬಹುದಾದ ವಿಷಯ ಅದು. ದೊಡ್ಡ ಪ್ರಮಾಣದಲ್ಲಿ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಈ ಕುರಿತ ಮತ್ತಷ್ಟು ಅಪ್ ಡೇಟ್ ಶೀಘ್ರದಲ್ಲೇ ನೀಡುತ್ತೇವೆ’ ಎಂದು ಹೇಳಿದ್ದಾರೆ.

    ಧನಂಜಯ್ ಹಾಗೂ ಶಿವರಾಜ್ ಕುಮಾರ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವೈಶಾಕ್ ಜೆ. ಗೌಡ ಅವರ ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಿಸಲಾಗುತ್ತಿದೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

  • ಹೊಸ ಗೆಟಪ್‌ನಲ್ಲಿ ಶಿವಣ್ಣನ ಫಸ್ಟ್ ಲುಕ್ ರಿಲೀಸ್

    ಹೊಸ ಗೆಟಪ್‌ನಲ್ಲಿ ಶಿವಣ್ಣನ ಫಸ್ಟ್ ಲುಕ್ ರಿಲೀಸ್

    666 ಆಪರೇಷನ್ ಡ್ರೀಮ್ ಥಿಯೇಟರ್ (666 Operation Dream Theatre) ಸಿನಿಮಾದಲ್ಲಿ ಧನಂಜಯ್ (Dhananjaya) ಅವರ ಎರಡು ಲುಕ್ ಬಿಡುಗಡೆ ಮಾಡಿ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದ್ದ ಚಿತ್ರತಂಡವೀಗ ಶಿವಣ್ಣ (Shivaraj Kumar) ಅವರ ಫಸ್ಟ್ ಲುಕ್ ಅನಾವರಣ ಮಾಡಿದೆ.

    666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಶಿವಣ್ಣ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್ ಹಿಡಿದು ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್ ಆಗಿರುವ ಪಾತ್ರವನ್ನು ತಂಡ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬಿಡುಗಡೆ ಮಾಡಿದೆ. ಶಿವಣ್ಣ ಲುಕ್ ನೋಡ್ತಿದ್ರೆ ಡಾ.ರಾಜ್ ಕುಮಾರ್ ಅವರ 999 ರ ಬ್ಲಾಕ್ಬಸ್ಟರ್ ಸ್ಪೈ ಚಿತ್ರಗಳ ರೀತಿಯೇ ಅವರು ಕೂಡ ಸ್ಪೈ ಪಾತ್ರ ಮಾಡುತ್ತಿದ್ದಾರೆ ಎಂಬ ಸುಳಿವನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ.

    ಶಿವಣ್ಣ ಪ್ರತಿ ಸಿನಿಮಾದಲ್ಲಿಯೂ, ಪ್ರತಿ ಪಾತ್ರದಲ್ಲಿಯೂ ಹೊಸತನ ನೀಡುತ್ತಾರೆ. ಅಂತೆಯೇ 666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಅವರ ಪಾತ್ರ ಪ್ರೇಕ್ಷಕರಿಗೆ ಎಂದು ಮರೆಯಲಾಗದ ಅನುಭವ ನೀಡಲಿದೆ. 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ರೆಟ್ರೋ ಕಥೆಯನ್ನು ಒಳಗೊಂಡಿದ್ದು, ಹೇಮಂತ್ ಎಂ ರಾವ್ ಸಾರಥ್ಯದಲ್ಲಿ ಚಿತ್ರ ನಿರ್ದೇಶನವಾಗುತ್ತಿದೆ.

    ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾಗೆ ಚರಣ್ ರಾಜ್ ಸಂಗೀತ, ಅದ್ವೈತ ಗುರುಮೂರ್ತಿ ಹಾಗೂ ವಿಶ್ವಾಸ್ ಕಶ್ಯಪ್ ನಿರ್ಮಾಣ ವಿನ್ಯಾಸ , ಇಂಚರಾ ಸುರೇಶ್ ಕಾಸ್ಟೈಮ್ ಡಿಸೈನ್ ಚಿತ್ರಕ್ಕಿದೆ. ಸದ್ಯ ಶಿವಣ್ಣ ಹಾಗೂ ಧನಂಜಯ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಮತ್ತಷ್ಟು ತಾರಾಬಳಗದ ಬಗ್ಗೆ ಮಾಹಿತಿ ಕೊಡಲಿದೆ.

    666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಶಿವರಾಜ್‌ ಕುಮಾರ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜುಲೈನಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರವನ್ನು ದೊಡ್ಡ ಬಜಟ್‌ನಲ್ಲಿ ನಿರ್ಮಿಸಲಾಗುತ್ತಿದ್ದು, ತೆಲುಗು ಮತ್ತು ಕನ್ನಡದಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

  • ಸರಳವಾಗಿ ನಡೆಯಿತು ಡಾಲಿ ಧನಂಜಯ್, ಧನ್ಯತಾ ನಿಶ್ಚಿತಾರ್ಥ- ಫೆ.16ಕ್ಕೆ ಮದುವೆ

    ಸರಳವಾಗಿ ನಡೆಯಿತು ಡಾಲಿ ಧನಂಜಯ್, ಧನ್ಯತಾ ನಿಶ್ಚಿತಾರ್ಥ- ಫೆ.16ಕ್ಕೆ ಮದುವೆ

    ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ (Daali Dhananjay) ಮತ್ತು ವೈದ್ಯೆ  ಧನ್ಯತಾ (Dhanyata) ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17)  ನಡೆಯಿತು.

    ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು  ಮದುವೆ ಕಾರ್ಯಕ್ರಮ ನಡೆಯಲಿದೆ.

    ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು.  ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ  ವಿಡಿಯೋ ಹಂಚಿಕೊಳ್ಳುವ ಮೂಲಕ  ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು.

    ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿಯೇ ಎನ್ನುವುದು ವಿಶೇಷ.

    ಧನ್ಯತಾ ಮಿಡಲ್ ಕ್ಲಾಸ್ ಹುಡುಗಿ ಕಷ್ಟ ಪಟ್ಟು ಡಾಕ್ಟರ್ ಆಗಿದ್ದಾರೆ. ಅಲ್ಲದೆ ಅವರ ವರ್ಕ್ ಎಥಿಕ್ಸ್ ಯೋಚನೆಗಳು ನನಗೆ ಇಷ್ಟ ಆಯ್ತು ಎಂದು ಡಾಲಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಹಿಂದೆ ಹೇಳಿದ್ದರು.

    ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ.  ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಸಂಬಂಧ ಬೆಸೆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ.  ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ.

  • ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ ಚಿತ್ರದ ಶೂಟಿಂಗ್ ಮುಕ್ತಾಯ

    ಧನಂಜಯ್ ನಿರ್ಮಾಣದ ‘ವಿದ್ಯಾಪತಿ’ ಚಿತ್ರದ ಶೂಟಿಂಗ್ ಮುಕ್ತಾಯ

    ನಂಜಯ್ (Dhananjay) ಒಡೆತನದ ಡಾಲಿ ಪಿಕ್ಚರ್ಸ್‌ನ ನಾಲ್ಕನೇ ಸಿನಿಮಾ ವಿದ್ಯಾಪತಿ (Vidyapathi). ಟೈಟಲ್ ಹಾಗೂ ಸ್ಯಾಂಪಲ್ಸ್ ನಿಂದಲೇ ಕುತೂಹಲ ದುಪ್ಪಟ್ಟು ಮಾಡಿರುವ ಈ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದೆ. ವಿದ್ಯಾಪತಿಗೆ ಕುಂಬಳಕಾಯಿ ಪ್ರಾಸ್ತಿಯಾಗಿದೆ. ಟಗರು ಪಲ್ಯ ಮೂಲಕ ಮಸ್ತ್ ಮನರಂಜನೆ ನೀಡಿದ್ದ ನಾಗಭೂಷಣ್ (Nagabhushan)ನಾಯಕನಾಗಿ ನಟಿಸಿದ್ದು, ಉಪಾಧ್ಯಕ್ಷನ ಬೆಡಗಿ ಮಲೈಕಾ ವಸೂಪಾಲ್ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ. ಕರಾಟೆ ಕಿಂಗ್ ಗೆಟಪ್ ನಲ್ಲಿ ನಾಗಭೂಷಣ್ ಕಾಣಿಸಿಕೊಂಡಿದ್ದು, ಅವರಿಗೆ ಮಾಸ್ಟರ್ ಆಗಿ ರಂಗಾಯಣ ರಘು ಅಭಿನಯಿಸಿದ್ದಾರೆ.

    ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ.

    ಡಾಲಿ ಧನಂಜಯ್ ವಿದ್ಯಾಪತಿ ಚಿತ್ರಕ್ಕೂ ದುಡ್ಡುಹಾಕುತ್ತಿದ್ದಾರೆ. ಟಗರು ಪಲ್ಯ ಸಿನಿಮಾ ಬಳಿಕ ಈ ಸಿನಿಮಾ ಪ್ರೊಡ್ಯೂಸ್ ಮಾಡುತ್ತಿದ್ದಾರೆ. ಇನ್ನುಳಿದಂತೆ ವಿದ್ಯಾಪತಿ ಸಿನಿಮಾದಲ್ಲಿ ಆ್ಯಕ್ಷನ್ ಇದೆ. ಹಾಸ್ಯದ ಹೊನಲು ಇರಲಿದೆ. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಪ್ರಚಾರ ಕಾರ್ಯವನ್ನು ಆರಂಭಿಸಲಿದೆ.

  • ಡಾರ್ಲಿಂಗ್ ಜಾಗಕ್ಕೆ ಬಂದ ನಟ ರಾಕ್ಷಸ: ಹಲಗಲಿ ಚಿತ್ರಕ್ಕೆ ಧನಂಜಯ್ ಹೀರೋ

    ಡಾರ್ಲಿಂಗ್ ಜಾಗಕ್ಕೆ ಬಂದ ನಟ ರಾಕ್ಷಸ: ಹಲಗಲಿ ಚಿತ್ರಕ್ಕೆ ಧನಂಜಯ್ ಹೀರೋ

    ಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹಲಗಲಿ (Halagali) ಚಿತ್ರಕ್ಕೆ ಡಾಲಿ ಧನಂಜಯ್ (Dhananjay) ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬರಲಿರುವ ಈ ಚಿತ್ರಕ್ಕೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಪೂಜೆ ಮಾಡುವ ಮೂಲಕ ಅದ್ಧೂರಿ ಚಾಲನೆ ನೀಡಲಾಗಿದೆ.

    ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ ಇದಾಗಿದೆ. ಈ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ಹಲಗಲಿ ಚಿತ್ರದ ಮೂಲಕ ತೆರೆ ಮೇಲೆ ತರಲಾಗುತ್ತಿದೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ಮ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಇವರು ಈಗಾಗಲೇ ತೆಲಗಿನಲ್ಲಿ ರಚಯತ ಚಿತ್ರವನ್ನು ನಿರ್ಮಿಸಿ, 20ಕ್ಕೂ ಹೆಚ್ಚು ಚಿತ್ರಗಳನ್ನು ಕನ್ನಡ ಹಾಗೂ ತೆಲುಗಿನಲ್ಲಿ ವಿತರಣೆ ಮಾಡಿದ್ದಾರೆ.

    ಚಿತ್ರಕ್ಕಾಗಿ ಬಹುದೊಡ್ಡ ತಾಂತ್ರಿಕ ತಂಡ ಕೆಲಸ ಮಾಡುತ್ತಿದೆ. ಅತ್ಯುತ್ತಮ ಛಾಯಾಗ್ರಾಹಕ ವಿಭಾಗದಲ್ಲಿ ನಂದಿ ಪ್ರಶಸ್ತಿ ಪುರಸ್ಕೃತ ಸಾಯಿ ಶ್ರೀರಾಮ್ ಕ್ಯಾಮೆರಾ, ವಾಸುಕಿ ವೈಭವ್ ಸಂಗೀತ ಇದೆ. ವಿಶೇಷ ಎಂದರೆ ಕೆಜಿಎಫ್ ಚಿತ್ರಕ್ಕೆ ಸಾಹಸ ಸಂಯೋಜನೆ ಮಾಡಿದ್ದ ವಿಕ್ರಮ್ ಮೋರ್ ಅವರೇ  ಹಲಗಲಿ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಲಿದ್ದಾರೆ. ಅಂದಹಾಗೆ ಈ ಚಿತ್ರಕ್ಕೆ ಈ ಮೊದಲು ಡಾರ್ಲಿಂಗ್ ಕೃಷ್ಣ ಅವರು ಹೀರೋ ಎಂದು ಸುದ್ದಿ ಆಗಿತ್ತು. ಆದರೆ, ಡಾರ್ಲಿಂಗ್ ಕೃಷ್ಣ ಅವರ ಡೇಟ್ಸ್ ಸಮಸ್ಯೆಯಿಂದ ಅವರು ಈ ಚಿತ್ರದಲ್ಲಿ ನಟಿಸಲು ಆಗುತ್ತಿಲ್ಲ. ಅಲ್ಲದೆ ಐತಿಹಾಸಿಕ, ಬಹುಭಾಷೆಯ ಚಿತ್ರಕ್ಕೆ ಡಾಲಿ ಧನಂಜಯ್ ಅವರೇ ಸೂಕ್ತ ಎನಿಸಿ ಈಗ ಡಾರ್ಲಿಂಗ್ ಜಾಗಕ್ಕೆ ಡಾಲಿ ಆಗಮನ ಆಗಿದೆ. ಚಿತ್ರದಲ್ಲಿ ಹೆಸರಾಂತ ಬಹು ಭಾಷೆಯ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ.

    ಐತಿಹಾಸಿಕ ಕತೆಗಳು ಅಂದರೆ ನನಗೆ ಇಷ್ಟ. ಹಲಗಲಿ ಕತೆ ಕೇಳಿದಾಗ ತುಂಬಾ ಇಷ್ಟವಾಯಿತು. ನಮ್ಮ ನಾಡಿಗಾಗಿ ಹೋರಾಡಿದವರ ಕತೆಯನ್ನು ಸಿನಿಮಾ ಮಾಡುತ್ತಿದ್ದು, ಆ ಚಿತ್ರದಲ್ಲಿ ನಾನು ಹೀರೋ ಆಗುತ್ತಿರುವುದು ಖುಷಿ ಕೊಟ್ಟಿದೆ. ನಿರ್ದೇಶಕ ಸುಕೇಶ್ ಡಿ ಕೆ ಹಾಗೂ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ ಅವರು ತುಂಬಾ ದೊಡ್ಡ ಕನಸು ಕಟ್ಟಿಕೊಂಡು ಈ ಚಿತ್ರವನ್ನು ಐದು ಭಾಷೆಯಲ್ಲಿ ಮಾಡುತ್ತಿದ್ದಾರೆ. ನಾನು ಈ ಚಿತ್ರಕ್ಕೆ ಹೀರೋ ಆಗುತ್ತಿರುವುದು ಹೆಮ್ಮೆ ಅನಿಸುತ್ತಿದೆ ಅಂತಾರೆ ಧನಂಜಯ್.

     

    ದೊಡ್ಡ ಮಟ್ಟದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಹಲಗಲಿ. ಈಗಾಗಲೇ ಮುಹೂರ್ತ ಕೂಡ ಮಾಡಿದ್ದೇವೆ. ಐದು ಭಾಷೆಗಳಲ್ಲಿ ಬರುತ್ತಿದೆ. ಪೂರ್ವ ತಯಾರಿಗಳು ಮುಗಿದಿವೆ. ಡಾರ್ಲಿಂಗ್ ಕೃಷ್ಣ ಅವರ ಮೂರು-ನಾಲ್ಕು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಕಾಯಲು ಆಗುತ್ತಿಲ್ಲ. ಅಲ್ಲದೆ ನಮ್ಮ ಕತೆಗೆ ಡಾಲಿ ಧನಂಜಯ್ ಅವರು ಸೂಕ್ತ ಎನಿಸಿದ್ದು, ಅವರೇ ಹೀರೋ ಆಗಿ ಮಾಡುತ್ತಿದ್ದಾರೆ. ಸದ್ಯದಲ್ಲೇ ರೆಗ್ಯೂಲರ್ ಶೂಟಿಂಗ್ ಶುರುವಾಗಲಿದೆ ಅನ್ನುವುದು ನಿರ್ಮಾಪಕ  ಕಲ್ಯಾಣ್ ಚಕ್ರವರ್ತಿ ಧೂಳಪಾಳ್ಳ ಮಾತು.

  • ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಮೊದಲ ಟಿಕೇಟ್ ‘ಕಿಚ್ಚ’ನಿಗೆ

    ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಮೊದಲ ಟಿಕೇಟ್ ‘ಕಿಚ್ಚ’ನಿಗೆ

    ಡಾಲಿ‌ ಧನಂಜಯ (Dhananjay) ಅಭಿನಯದ ‘ಕೋಟಿ’ (Kotee) ಸಿನಿಮಾದ ಮೊದಲ‌ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ (Kiccha Sudeep) ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ  ಪರಮ್ ಅವರಿಗೆ ಯಶಸ್ಸು‌ ಸಿಗಲಿ ಎಂದು ಶುಭ ಕೋರಿದರು.

    ಈಗಾಗಲೇ ‘ಕೋಟಿ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದ್ದು ಭಾರಿ ಮೆಚ್ಚುಗೆ ಗಳಿಸುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.

    ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ ಅಪ್ಪಟ ಕನ್ನಡ ಮಣ್ಣಿನ ಕತೆಯಾದ ‘ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ. ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

    ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

    ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

  • ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ಡಾಲಿ

    ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ಡಾಲಿ

    ನ್ನಡ ಚಿತ್ರರಂಗದ ಬಿಗ್ ಬಜೆಟ್ ‘ಹಲಗಲಿ’ (Halagali) ಸಿನಿಮಾ ಬಗ್ಗೆ ಇದೀಗ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಡಾರ್ಲಿಂಗ್ ಕೃಷ್ಣ ಈ ಚಿತ್ರದಿಂದ ಹೊರನಡೆದಿದ್ದರು. ಈ ಬೆನ್ನಲ್ಲೇ ಚಿತ್ರದ ಲೀಡ್ ಪಾತ್ರಕ್ಕೆ ನಟರಾಕ್ಷಸ ಡಾಲಿ ಎಂಟ್ರಿ ಕೊಡುವ ಬಗ್ಗೆ ಸುದ್ದಿ ಹಬ್ಬಿದೆ.

    ನಟ ಕಮ್ ನಿರ್ಮಾಪಕ ಡಾಲಿ ಧನಂಜಯ್ ಕನ್ನಡದ ಜೊತೆ ಪರಭಾಷಾ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಹೊಸ ಪ್ರತಿಭೆಗಳಿಗೆ ಡಾಲಿ ಅವಕಾಶ ನೀಡುತ್ತಿದ್ದಾರೆ. ಇದನ್ನೂ ಓದಿ:ಚಂದ್ರಕಾಂತ್, ಪವಿತ್ರಾ ಮದುವೆ ರೂಮರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರ

    ‘ಹಲಗಲಿ’ ಸಿನಿಮಾ ಅತೀ ದೊಡ್ಡ ಪ್ರಾಜೆಕ್ಟ್ ಆಗಿದ್ದು, ಡಾಲಿ ಈ ಸಿನಿಮಾಗೆ ಎಂಟ್ರಿ ಕೊಡುವ ಬಗ್ಗೆ ಸುದ್ದಿ ಹಬ್ಬಿದೆ. ಸಿನಿಮಾ ಕಥೆ ಮತ್ತು ಪಾತ್ರದ ಬಗ್ಗೆ ಡಾಲಿ ಮಾತನಾಡಿ ಚಿತ್ರತಂಡ ಮಾತುಕತೆ ನಡೆಸಿದೆ. ಶೀಘ್ರದಲ್ಲೇ ಶೂಟಿಂಗ್‌ಗೆ ನಡೆಯಲಿದೆ ಎನ್ನಲಾಗಿದೆ. ಅಧಿಕೃತ ಮಾಹಿತಿ ಚಿತ್ರತಂಡದಿಂದ ಹೊರಬರಬೇಕಿದೆ.

    ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆರಿಲ್ಲಾ ವಾರ್ ಮಾಡುವ ಮೂಲಕ ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದ ಹಲಗಲಿ ಬೇಡರ ಕಥೆಯನ್ನು ಸಿನಿಮಾ ನಿರ್ದೇಶಕ ಸುಕೇಶ್ ಡಿ.ಕೆ. ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾವಾಗಿದ್ದರಿಂದ ಮತ್ತು ಆ ಕಾಲ ಘಟ್ಟವನ್ನು ಕಟ್ಟಿ ಕೊಡಬೇಕಾಗಿದ್ದರಿಂದ ಬರೋಬ್ಬರಿ 80 ಕೋಟಿ ರೂಪಾಯಿಯನ್ನು ಈ ಸಿನಿಮಾಗಾಗಿ ಖರ್ಚು ಮಾಡುತ್ತಿದ್ದಾರೆ ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಳ್ಯ. ಇದೊಂದು ಅಪರೂಪದ ಕಥನವಾಗಿದ್ದರಿಂದ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

  • ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ಶೂಟಿಂಗ್‌ನಲ್ಲಿ ಡಾಲಿ ಭಾಗಿ

    ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ಶೂಟಿಂಗ್‌ನಲ್ಲಿ ಡಾಲಿ ಭಾಗಿ

    ನ್ನಡದ ಸ್ಟಾರ್ ನಟ ಡಾಲಿ ಧನಂಜಯ್ (Actor Dhananjay) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಉತ್ತರಕಾಂಡ’ ಚಿತ್ರದ ಶೂಟಿಂಗ್ ಬಳಿಕ ‘ಅಣ್ಣ ಫ್ರಂ ಮೆಕ್ಸಿಕೋ’ (Anna From Mexico) ಚಿತ್ರೀಕರಣದಲ್ಲಿ ಡಾಲಿ ಭಾಗಿಯಾಗಿದ್ದಾರೆ. ಶೂಟಿಂಗ್ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.

    ಇದೀಗ ‘ಅಣ್ಣ ಫ್ರಂ ಮೆಕ್ಸಿಕೋ’ ಆ್ಯಕ್ಷನ್ ಭಾಗದ ಚಿತ್ರೀಕರಣ ನಡೆಯಲಿದ್ದು, ಮೇ 13ರಿಂದ ಟಾಕಿ ಭಾಗಗಳು ಆರಂಭ ಆಗಲಿದೆ. ಅಣ್ಣ ಫ್ರಂ ಮೆಕ್ಸಿಕೋ ಸೆಟ್‌ನಲ್ಲಿ ಡಾಲಿ ಬಿಳಿ ಅಂಗಿ ಮತ್ತು ಪಂಚೆಯನ್ನು ಧರಿಸಿ ಗ್ರಾಮೀಣ ಭಾಗದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಈ ಚಿತ್ರದಲ್ಲಿ ಡಾಲಿ ಜೊತೆ ನಾಗಭೂಷಣ್, ರಂಗಾಯಣ ರಘು, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

     

    View this post on Instagram

     

    A post shared by Daali Dhananjaya (@dhananjaya_ka)

    ‘ಬಡವ ರಾಸ್ಕಲ್’ ಚಿತ್ರದ ಡೈರೆಕ್ಟರ್ ಶಂಕರ್ ಗುರು (Director Shankar Guru) ಇದೀಗ ಮತ್ತೊಮ್ಮೆ ಡಾಲಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಮತ್ತೆ ‘ಬಡವ ರಾಸ್ಕಲ್’ ಕಾಂಬಿನೇಷನ್ ಈ ಚಿತ್ರದ ಮೂಲಕ ಒಂದಾಗುತ್ತಿದೆ. ಸೂಪರ್ ಹಿಟ್ ಕೊಟ್ಟ ಜೋಡಿ ಮತ್ತೆ ಹೊಸ ಕಥೆ ಹೇಳಲು ಹೊರಟಿರುವುದು ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

    ಜೀಬ್ರಾ, ‘ಪುಷ್ಪ 2’ (Pushpa 2) ಸೇರಿದಂತೆ ಹಲವು ಸಿನಿಮಾಗಳು ಧನಂಜಯ್ ಕೈಯಲ್ಲಿವೆ. ವಿದ್ಯಾಪತಿ, ಜೆಸಿ-ದಿ ಯೂನಿವರ್ಸಿಟಿ ಎಂಬ ಚಿತ್ರಗಳನ್ನು ಡಾಲಿ ನಿರ್ಮಾಣ ಮಾಡುತ್ತಿದ್ದಾರೆ.

  • ಚಿತ್ರೀಕರಣ ಆರಂಭಿಸಿದ ಶಿವಣ್ಣ, ಡಾಲಿ ನಟನೆಯ ಬಹುನಿರೀಕ್ಷಿತ ಚಿತ್ರ ‘ಉತ್ತರಕಾಂಡ’

    ಚಿತ್ರೀಕರಣ ಆರಂಭಿಸಿದ ಶಿವಣ್ಣ, ಡಾಲಿ ನಟನೆಯ ಬಹುನಿರೀಕ್ಷಿತ ಚಿತ್ರ ‘ಉತ್ತರಕಾಂಡ’

    ಹುಬೇಡಿಕೆಯ ಮತ್ತು ಬಹುನಿರೀಕ್ಷಿತ ಕನ್ನಡ ಚಿತ್ರ ‘ಉತ್ತರಕಾಂಡ’ (Uttarakanda) ಚಿತ್ರೀಕರಣವನ್ನು ಇಂದು (ಏ.15) ಆರಂಭಿಸಿದೆ. ವಿಜಯಪುರದಲ್ಲಿ ಮೊದಲ ಹಂತದ ಶೂಟಿಂಗ್ ಇದೀಗ ಭರದಿಂದ ಸಾಗುತ್ತಿದ್ದು, ಡಾಲಿ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗುವ ಮೂಲಕ ಸಾಥ್‌ ನೀಡಿದ್ದಾರೆ.ಇದನ್ನೂ ಓದಿ:ಒಟಿಟಿಗೆ ಬಂದ ‘ಗಾಮಿ’: ವಿಶ್ವಕ್ ಸೇನ್ ಚಿತ್ರಕ್ಕೆ ಮೆಚ್ಚುಗೆ

    ‘ಉತ್ತರಕಾಂಡ’ದ ಮುಹೂರ್ತ 2022ರಲ್ಲಿ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ, ಹಾಗೂ ಚಿತ್ರವು ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಇಂದು (ಏ.15) ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರತಂಡದವರು ಉತ್ಸುಕರಾಗಿದ್ದಾರೆ.

    ಚಿತ್ರದ ನಿರ್ದೇಶಕ ರೋಹಿತ್ ಪದಕಿ ಮಾತನಾಡಿ ಚಿತ್ರವನ್ನು ಆರಂಭಿಸಲು ನಾನು ಉತ್ಸಾಹಿಯಾಗಿದ್ದೇನೆ. ಈ ಚಿತ್ರಕ್ಕೆ ನಿಖರವಾದ ಪ್ಲ್ಯಾನಿಂಗ್, ತಯಾರಿ ಮತ್ತು ಸಂಶೋಧನೆ ಅಗತ್ಯವಿತ್ತು. ನಾನು ಮತ್ತು ನಿರ್ಮಾಪಕರು ನಿದ್ದೆಗೆಟ್ಟು ಇದನ್ನು ಕಾರ್ಯರೂಪಕ್ಕೆ ತರವುದರಲ್ಲಿ ಶ್ರಮಿಸಿದ್ದೇವೆ. ಶಿವಣ್ಣ ಮತ್ತು ಧನಂಜಯ್ ಪಾತ್ರ ವಹಿಸಿರುವ ಬಹು ದೊಡ್ಡ ತಾರಾಗಣದ ಚಿತ್ರಕಥೆಯನ್ನು ಸಿನಿ ಪ್ರೇಕ್ಷಕರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ಈ ಕುರಿತು ಕುಂದು ಕೊರತೆ ಬರದಂತೆ ನಾನು ಮತ್ತು ಕೆ.ಆರ್.ಜಿ ಕೆಲಸ ಮಾಡಲಿದ್ದೇವೆ ಎಂದರು.

    ಚಿತ್ರದ ನಿರ್ಮಾಪಕ, ಕಾರ್ತಿಕ್ ಗೌಡ ಮಾತನಾಡಿ ಉತ್ತರಕಾಂಡ ಚಿತ್ರವು ಕೆ.ಆರ್.ಜಿ.ಯ ಹೆಮ್ಮೆ ಎಂದರೆ ಉತ್ಪ್ರೇಕ್ಷೆಯಲ್ಲ. ಕೇವಲ ನಾವಷ್ಟೇ ಅಲ್ಲದೆ ಇಡೀ ಕನ್ನಡ ಚಿತ್ರರಂಗವೇ ಹೆಮ್ಮೆ ಪಡುವಂತೆ ಉತ್ತರಕಾಂಡ ಮುಂಬರಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ:ತೆಲುಗಿಗೆ ಸಿಂಗಾರ ಸಿರಿ- ನಿತಿನ್ ಜೊತೆಗಿನ ಚಿತ್ರಕ್ಕಾಗಿ ಭರ್ಜರಿ ತಯಾರಿ

    ‘ಉತ್ತರಕಾಂಡ’ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shivarajukumar) ಮತ್ತು ಡಾಲಿ ಧನಂಜಯ್ (Daali Dhananjay) ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಪದಕಿ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ಬಾಲಿವುಡ್ ಗಾಯಕ- ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಸಾಥ್‌ ನೀಡುತ್ತಿದ್ದಾರೆ. ಚಿತ್ರಕ್ಕೆ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ (ಡಿಸೈನ್) ಮಾಡಲಿದ್ದಾರೆ. ಬಹುದೊಡ್ಡ ತಾರಾಬಳಗವನ್ನು ಹೊಂದಿರುವ ಈ ಚಿತ್ರ, ತಾರಾಬಳಗವನ್ನು ಈ ವಾರ ಘೋಷಿಸಲಿದೆ.

  • ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾದ ಟೀಸರ್ ರಿಲೀಸ್

    ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾದ ಟೀಸರ್ ರಿಲೀಸ್

    ನ್ನಡ ಸಿನಿಮಾ ಮಾರುಕಟ್ಟೆಗೆ ದೇಶದ ಪ್ರಮುಖ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ಕೋಟಿ (Kotee) ಸಿನಿಮಾ ಮೂಲಕ ಕಾಲಿಟ್ಟಿದೆ. ಕನ್ನಡದ ಅತಿ ಪ್ರತಿಭಾವಂತ ನಟ ಧನಂಜಯ ಈ ಸಿನಿಮಾ ನಾಯಕರಾಗಿದ್ದು ಪರಮ್ ಇದನ್ನು ನಿರ್ದೇಶಿಸುತ್ತಿದ್ದಾರೆ. ಇದರ ಟೀಸರ್ (Teaser)  ಬಿಡುಗಡೆ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡೆಯಿತು. ಬೈಪನ್ ಭಾರಿ ದೇವಾ (ಮರಾಠಿ), ಆರ್ಟಿಕಲ್ 370, ತೇರಿ ಬಾತೋಂಮೆ ಐಸಾ ಉಲ್ಜಾಜಿಯಾ, ಶೈತಾನ್ ಮತ್ತು ಲಾಪಾತಾ ಲೇಡೀಸ್ ಹೀಗೆ ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ಜಿಯೋ ಸ್ಟುಡಿಯೋಸ್ ಕೊಟ್ಟಿದೆ. ಈಗ ಕನ್ನಡ ಮಾರುಕಟ್ಟೆಗೆ ಪ್ರವೇಶಿಸುವ ಮೂಲಕ ತನ್ನ ಸ್ಥಾನವನ್ನು ಈ ನಿರ್ಮಾಣ ಸಂಸ್ಥೆ ಮತ್ತಷ್ಟು ಗಟ್ಟಿಗೊಳಿಸಿಕೊಂಡಿದೆ.

    ನಟಿಸುವ ಬದಲು ಪಾತ್ರವೇ ಆಗಿಬಿಡುವ ಧನಂಜಯ (Dhananjay) ಕನ್ನಡದ ಸೂಕ್ಷ್ಮ ನಟ.  ತಮ್ಮ ಹೊಸ ಸಿನಿಮಾ ʼಕೋಟಿʼಯ ಪಾತ್ರದ ಬಗ್ಗೆ ಎಕ್ಸೈಟ್ ಆಗಿರುವ ಅವರು ಈ ಸಿನಿಮಾದಲ್ಲಿ ಅಭಿನಯದ ಹೊಸ ಮಗ್ಗುಲುಗಳನ್ನು ಅನ್ವೇಷಿಸಿದ್ದಾರೆ. ‘ಒಂದೇ ಒಂದು ಕೋಟಿ ಸಿಕ್ಕಿಬಿಟ್ಟರೆ ಅಥವಾ ದುಡಿಯೋದಕ್ಕಾದರೆ ಸೆಟ್ಲ್ ಆಗಿಬಿಡಬಹುದು ಎಂದು ಎಲ್ಲರೂ ಅಂದ್ಕೊಳ್ತಿರ್ತಾರೆ. ನಮ್ ಕೋಟಿನೂ ಅಷ್ಟೇ. ಎಲ್ಲಾ ಮನೆಗಳಲ್ಲೂ ಈ ಕೋಟಿಯಂಥ ಅಣ್ಣ, ತಮ್ಮ, ಮಗ ನಿಮಗೆ ಸಿಕ್ತಾರೆ. ಕಷ್ಟಪಟ್ಟು ದುಡಿದು ಎಲ್ಲಾ ಸರಿ ಮಾಡ್ಕೋಬಹುದು ಅಂದ್ಕೋತಾ ಇರ್ತಾರೆʼ ಎಂದು ಪಾತ್ರದ ಬಗ್ಗೆ ಮಾತಾಡುತ್ತಾರೆ ಧನಂಜಯ.

    ಮಜಾ ಅಂದ್ರೆ ಎಲ್ರೊಳಗೂ ಕೋಟಿಯಂಥ ಒಬ್ಬ ವ್ಯಕ್ತಿ ಇರ್ತಾನೆ. ಈ ಪಾತ್ರ, ನನ್ನೊಳಗಿನ ಕೋಟಿಯನ್ನು ನನಗೆ ಪರಿಚಯಿಸಿದೆ. ಹಾಗೆಯೇ ನಿಮ್ಮೊಳಗಿನ ಕೋಟಿಯನ್ನು ಪತ್ತೆ ಮಾಡಲು ನೀವು ಈ ಸಿನಿಮಾ ನೋಡಬೇಕು’ ಎಂದು ಸೇರಿಸಲು ಅವರು ಮರೆಯುವುದಿಲ್ಲ.  ಈ ಸಿನಿಮಾ ನಿರ್ದೇಶಿಸುತ್ತಿರುವುದು ಪರಮ್ (Param). ಇದು ಅವರ ಚೊಚ್ಚಲ ಸಿನಿಮಾ. ಸಿನಿಮಾ ನಿರ್ದೇಶಕನಾಗಿ ಮೊದಲ ಅನುಭವವಾದರೂ ಕತೆ ಹೇಳುವುದು ಅವರಿಗೆ ಹೊಸದಲ್ಲ. ಟೆಲಿವಿಷನ್ ಚಾನೆಲ್ಲಿನಲ್ಲಿ ಹಲವು ಯಶಸ್ವೀ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ರೂಪಿಸಿದ ಅನುಭವವಿರುವ ಅವರು ಇಲ್ಲಿ ವಿಶಾಲ ಕ್ಯಾನ್ವಾಸಿನಲ್ಲಿ ಕತೆ ಹೇಳುವ ಸವಾಲನ್ನು ಸ್ವೀಕರಿಸಿದ್ದಾರೆ.

    ‘ನನ್ನ ಕನಸು ಈ ಸಿನಿಮಾ ಮೂಲಕ ನಿಜವೇ ಆಗಿಬಿಟ್ಟಿರುವುದನ್ನು ವಿವರಿಸಲು ಶಬ್ದಗಳಿಲ್ಲ. ಇದು ಸಾಧ್ಯ ಆಗಿದ್ದು ಜಿಯೋ ಸ್ಟುಡಿಯೋಸ್ ಮತ್ತು ಜ್ಯೋತಿ ದೇಶಪಾಂಡೆ ನನ್ನ ಮೇಲೆ ಇಟ್ಟ ನಂಬಿಕೆಯಿಂದ. ಒಳ್ಳೆ ಕತೆಗಳನ್ನು ಹೇಳಬೇಕು, ಬೇರೆ ಕತೆಗಳನ್ನು ಹೇಳಬೇಕು, ಬೇರೆ ಧ್ವನಿಗಳು ಕೇಳಿಸಬೇಕು ಅನ್ನೋದು ಜಿಯೋ ಸ್ಟುಡಿಯೋಸ್ ನ ಮೂಲ ಉದ್ದೇಶ. ಕನ್ನಡದಲ್ಲೂ ಈ ಇದು ಮುಂದುವರೆಯಬೇಕು ಅನ್ನೋದರ ಕಡೆಗೆ ನಮ್ಮ ತಂಡ ಕೆಲಸ ಮಾಡುತ್ತೆʼ ಎನ್ನುತ್ತಾರೆ ಜಿಯೋ ಸ್ಟುಡಿಯೋಸ್ ನ ಕನ್ನಡದ ಮುಖ್ಯಸ್ಥರೂ ಆಗಿರುವ ಪರಮ್.

    ಧನಂಜಯ್ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಹಲವು ಜಾಹೀರಾತುಗಳಲ್ಲಿ ಈಗಾಗಲೇ ಕಾಣಿಸಿಕೊಂಡಿರುವ ಕೊಡಗಿನ ಮೂಲದ ಕನ್ನಡದ ನಟಿ ಮೋಕ್ಷಾಗೆ ಇದು ಮಹತ್ವದ ಸಿನಿಮಾ. ‘ಸಪ್ತ ಸಾಗರದಾಚೆʼ ಸಿನಿಮಾದ ನಂತರ ಜನರಿಗೆ ಹೆಚ್ಚು ಪರಿಚಯವಾದ ರಮೇಶ್ ಇಂದಿರಾ ಈ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದಾರೆ. ಕೋಟಿ ಸಿನಿಮಾ ಡ್ರಾಮಾ ಥ್ರಿಲ್ಲರ್ ಎಳೆಯನ್ನು ಹೊಂದಿದೆ.

    ವಾಸುಕಿ ವೈಭವ್  ಹಾಡುಗಳಿಗೆ ಸ್ವರ ಸಂಯೋಜನೆ ಮಾಡಿದ್ದಾರೆ. ಸಿನಿಮಾದಲ್ಲಿ ಐದು ಹಾಡುಗಳಿವೆ. ಮೂರು ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಇದೆ. ಒಂದು ಹಾಡನ್ನು ಸ್ವತಃ ವಾಸುಕಿ ಬರೆದಿದ್ದಾರೆ. ಹಿನ್ನೆಲೆ ಸಂಗೀತ ‘ಕೋಟಿ’ ಸಿನಿಮಾದ ಮುಖ್ಯ ಭಾಗವಾಗಿದ್ದು, ಆ ಹೊಣೆಯನ್ನು ‘777ಚಾರ್ಲಿ’ ಮತ್ತು ʼ೨೦೧೮ʼ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ನೊಬಿನ್ ಪೌಲ್ ಹೊತ್ತಿದ್ದಾರೆ. ಅವರು ಸಂಗೀತ ಸಂಯೋಜನೆಯ ಮಲಯಾಳಮ್ ಚಿತ್ರ ʼ2018ʼ ಆಸ್ಕರ್ ಪ್ರಶಸ್ತಿಗೆ ಈ ವರ್ಷ ಭಾರತದ ಅಧಿಕೃತ ಆಯ್ಕೆ ಆಗಿತ್ತು.

    ಇದರ ಸಂಕಲನದ ಜವಾಬ್ದಾರಿಯನ್ನು ಹೊತ್ತಿರುವುದು ಕನ್ನಡದ ಪ್ರತಿಭಾವಂತ ಯುವ ಸಂಕಲನಕಾರ, ಛಾಯಾಗ್ರಾಹಕ ಪ್ರತೀಕ್ ಶೆಟ್ಟಿ. ಈಗಾಗಲೇ ʼಕಾಂತಾರʼ ʼ೭೭೭ಚಾರ್ಲಿʼ ಸಂಕಲನದ ಮೂಲಕ ಹೆಸರು ಗಳಿಸಿರುವ ಇವರು “ಗಂಧದ ಗುಡಿʼ ಸಾಕ್ಷ್ಯ ಚಿತ್ರಕ್ಕೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ ಎನ್ನುವುದು ವಿಶೇಷ. ಟೆಲಿವಿಷನ್ ಪ್ರಯಾಣದಲ್ಲಿ ಪರಮ್ ಅವರಿಗೆ ಜೋಡಿಯಾಗಿದ್ದ ಅರುಣ್ ಬ್ರಹ್ಮನ್ ‘ಕೋಟಿ’ ಸಿನಿಮಾದ ಸಿನಿಮಾಟೋಗ್ರಾಫರ್ ಆಗಿದ್ದಾರೆ. ಇದು ಅವರಿಗೆ ಮೊದಲ ಸಿನಿಮಾ. ರಂಗಾಯಣ ರಘು, ತಾರಾ, ಪೃಥ್ವಿ ಶಾಮನೂರು, ಸರದಾರ ಸತ್ಯಾ ಮತ್ತು ತನುಜಾ ವೇಂಕಟೇಶ್ ಬೇರೆ ಬೇರೆ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    ಕೋಟಿ ಸಿನಿಮಾದ ಟೀಸರ್ ಬಿಡುಗಡೆಯಾಗಿ ಈಗ ಕುತೂಹಲ ಹೆಚ್ಚಾಗಿದೆ. ಸಹಜವಾಗಿ ಇದ್ದುಬಿಡುವುದರ ಮೂಲಕ ಹೇಗೆ ಪಾತ್ರವೇ ಆಗಿಬಿಡಬಹುದು ಎನ್ನುವುದರ ಝಲಕ್ಕನ್ನು ಧನಂಜಯ ತೋರಿಸಿದ್ದರೆ ರಮೇಶ್ ಇಂದಿರಾ ಒಬ್ಬ ಪ್ರಭಾವಶಾಲಿ ಖಳನಟ ಆಗುವ ಭರವಸೆ ಹುಟ್ಟಿಸಿದ್ದಾರೆ. ಜೂನ್ 14 ರಂದು ಕೋಟಿ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.