Tag: ಧನಂಜಯ್

  • ಡಾಲಿ ಧನಂಜಯ್ ಈಗ ‘ಕೋಟಿ’ ಸರದಾರ

    ಡಾಲಿ ಧನಂಜಯ್ ಈಗ ‘ಕೋಟಿ’ ಸರದಾರ

    ನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾದ ಡಾಲಿ ಧನಂಜಯ (Dhananjay) ಅವರ ಹೊಸ ಕನ್ನಡ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮ್‌ ನಿರ್ದೇಶನದ ಈ ಸಿನಿಮಾ ಹೆಸರು ಕೋಟಿ (Kotee). ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು ಪರಮ್.‌ ಕಲರ್ಸ್‌ ಕನ್ನಡ ವಾಹಿನಿಯನ್ನು ಅವರು ಮುನ್ನಡೆಸುತ್ತಿದ್ದಾಗ ಅತಿ ಹೆಚ್ಚು ಕನ್ನಡ ಮೂಲದ ಕತೆಗಳನ್ನು ಅವರು ಕೊಟ್ಟಿದ್ದು ನಿಮಗೆಲ್ಲಾ ಗೊತ್ತೇ ಇದೆ. ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದಾರೆ.

    ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ. ತೀಕ್ಷ್ಣ ಕಣ್ಣುಗಳಿಂದ ಈ ಪೋಸ್ಟರ್‌ ಗಮನ ಸೆಳೆಯುತ್ತಿರುವುದಂತೂ ಹೌದು.‌

    ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

    ಈ ಸಿನಿಮಾಗೆ ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು ಬರೆದು ಸ್ವತಃ ಪರಮ್‌ (Parameshwar Gundkal) ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಇದರೊಂದಿಗೆ ಸಿನಮಾ ಮಾಡಬೇಕು ಎಂಬ ಅವರ ಬಹುದಿನಗಳ ಕನಸು ನೆರವೇರಿದಂತಾಗಿದೆ. ಕಳೆದ ವರ್ಷ ಟೆಲಿವಿಷನ್‌ ಚಾನೆಲ್ಲಿನಿಂದ ಹೊರಗೆ ಬಂದಾಗ ತಾನು ಹಿರಿತೆರೆಯಲ್ಲಿ ಕತೆಗಳನ್ನು ಹೇಳಬೇಕು ಎಂದು  ಅವರು ಆಸೆ ಪಟ್ಟಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.

     

    ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದು ಜಿಯೋ ಸ್ಟುಡಿಯೋಸ್‌ ನ ಜ್ಯೋತಿ ದೇಶಪಾಂಡೆ. ಈ ವರ್ಷ ಒಂದಾದ ಮೇಲೆ ಒಂದು ಹಿಟ್‌ ಹಿಂದಿ ಸಿನಿಮಾಗಳನ್ನು ಕೊಟ್ಟಿರುವ ಜ್ಯೋತಿ ಮತ್ತು ಜಿಯೋ ಸ್ಟುಡಿಯೋಸ್ ಈ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ವಾಸುಕಿ ವೈಭವ್‌ ಹಾಡುಗಳನ್ನು ಸಂಯೋಜನೆ ಮಾಡಿದ್ದರೆ ನೊಬಿನ್‌ ಪೌಲ್‌ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಈ ಸಿನಿಮಾಗೆ ಅರುಣ್‌ ಬ್ರಹ್ಮನ್‌ ಛಾಯಾಗ್ರಹಣವಿದೆ. ಸಿನಿಮಾ ಶೀರ್ಷಿಕೆ ಅನಾವರಣ ಮಾಡುತ್ತಲೇ ಇದೇ ಶನಿವಾರ ಟೀಸರ್‌ ಬಿಡುಗಡೆಯಾಗಲಿದೆ ಎಂದು ತಂಡ ಹೇಳಿದೆ.‌

  • ರಮ್ಯಾ-ಶಿವಣ್ಣ-ಡಾಲಿ ಕಾಂಬಿನೇಷನ್ ಚಿತ್ರದಲ್ಲಿ ನಿಮಗೂ ಅವಕಾಶ

    ರಮ್ಯಾ-ಶಿವಣ್ಣ-ಡಾಲಿ ಕಾಂಬಿನೇಷನ್ ಚಿತ್ರದಲ್ಲಿ ನಿಮಗೂ ಅವಕಾಶ

    ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ‌‌ ಬರುತ್ತಿರುವ ‘ಉತ್ತರಕಾಂಡ’ (Uttarkanda) ಚಿತ್ರಕ್ಕಾಗಿ ಚಿತ್ರ ತಂಡ ಇದೀಗ ಆಡಿಷನ್ ಆಯೋಜಿಸಿದೆ.  ಉತ್ತರಕಾಂಡ ಚಿತ್ರವು ಒಂದು ಕ್ರೈಂ ಡ್ರಾಮಾ ಚಿತ್ರವಾಗಿದ್ದು, ಇದನ್ನು ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ. ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್,‌ಡಾಲಿ‌ ಧನಂಜಯ, ಮೋಹಕ ತಾರೆ ರಮ್ಯಾ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಉತ್ತರ ಕರ್ನಾಟಕದ ಸೊಗಡನ್ನು ಹೊಂದಿರುವ ಈ‌ ಚಿತ್ರಕ್ಕಾಗಿ‌ ಚಿತ್ರ ತಂಡವು ಉತ್ತರ ಕರ್ನಾಟಕ ಭಾಗಗಳಲ್ಲಿ‌ ಆಡಿಷನ್ ಆಯೋಜಿಸಿದೆ. ಮಾರ್ಚ್ 27 ವಿಜಯಪುರದಲ್ಲಿ‌ ಹಾಗೂ 28 ಹುಬ್ಬಳ್ಳಿಯಲ್ಲಿ ಆಡಿಷನ್ ಆಯೋಜಿಸಿದೆ. ಆಡಿಷನ್ ನಲ್ಲಿ ಭಾಗವಹಿಸಲು ವಯೋಮಿತಿ 12‌ರಿಂದ‌ 75 ವರ್ಷವಾಗಿದ್ದು,  ನವ‌ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವ ಉದ್ದೇಶವನ್ನು ಚಿತ್ರ‌ತಂಡ ಹೊಂದಿದೆ.

    ‘ರತ್ನನ್ ಪ್ರಪಂಚ’ ಖ್ಯಾತಿಯ ನಿರ್ದೇಶಕ ರೋಹಿತ್ ಪದಕಿ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಉತ್ತರಕಾಂಡ ಸಿನಿಮಾ ಪಕ್ಕಾ ಆ್ಯಕ್ಷನ್ ಸೀಕ್ವೇನ್ಸ್ ಇರುವ ಚಿತ್ರವಾಗಿದೆ.

     

    ಇನ್ನೂ ಶಿವಣ್ಣ (Shivaraj Kumar) , ರಮ್ಯಾ (Ramya), ಡಾಲಿ (Dhananjay) ಮೂವರು ಒಂದೇ ಸಿನಿಮಾದಲ್ಲಿ ನಟಿಸುತ್ತಿರುವ ಕಾರಣ, ಕಥೆ ಮತ್ತು ಪಾತ್ರ ಹೇಗಿರಲಿದೆ ಎಂಬ ಕೌತುಕ ಮೂಡಿಸಿದೆ.

  • ಗೆಳೆಯನಿಂದ ಪಾರ್ಟಿ ಸಾಂಗ್ ರಿಲೀಸ್ ಮಾಡಿಸಿದ ನೀನಾಸಂ ಸತೀಶ್

    ಗೆಳೆಯನಿಂದ ಪಾರ್ಟಿ ಸಾಂಗ್ ರಿಲೀಸ್ ಮಾಡಿಸಿದ ನೀನಾಸಂ ಸತೀಶ್

    ಹೊಸ ವರ್ಷವನ್ನು ಮತ್ತಷ್ಟು ರಂಗಾಗಿಸಲು ನೀನಾಸಂ ಸತೀಶ್ ಮತ್ತು ಮ್ಯಾಟ್ನಿ ಟೀಮ್ ಸಜ್ಜಾಗಿದೆ. ನ್ಯೂ ಯಿಯರ್ ಆಚರಿಸುವವರಿಗಾಗಿ ಮ್ಯಾಟ್ನಿ ಸಿನಿಮಾದ ಹಾಡೊಂದು ನಿನ್ನೆ ರಿಲೀಸ್ ಆಗಿದ್ದು, ನೆಚ್ಚಿನ ಗೆಳೆಯ, ನಟ ಧನಂಜಯ್ (Dhananjay) ಅವರಿಂದ ಮ್ಯಾಟ್ನಿ ಸಿನಿಮಾದ  ‘ಬಾರೋ ಬಾರೋ ಬರುವಾಗ ಬಾಟಲ್ ತಾರೋ’ ಎರಡನೇ ಹಾಡನ್ನು ರಿಲೀಸ್ ಮಾಡಿಸಲಾಗಿದೆ.

    ಈ ಹಿಂದೆ ಇದೇ ಕಲರ್ ಫುಲ್ ಎಣ್ಣೆ ಸಾಂಗ್ ಶೂಟಿಂಗ್ ಬೆಂಗಳೂರಿನಲ್ಲಿ ನಡೆದಿತ್ತು. ರಂಗು ರಂಗಾದ ಸೆಟ್ ನಲ್ಲಿ ನಡೆದ ಚಿತ್ರೀಕರಣದಲ್ಲಿ ನೀನಾಸಂ ಸತೀಶ್, ನಾಗಭೂಷಣ್ (Nagabhushan), ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದೊಂದು ಎಣ್ಣೆ ಸಾಂಗ್ ಆಗಿದ್ದು, ಸಿನಿಮಾದ ಪ್ರಮುಖ ಘಟ್ಟದಲ್ಲಿ ಈ ಹಾಡು ಬರಲಿದೆಯಂತೆ.

    ನೀನಾಸಂ ಸತೀಶ್ ನಟನೆಯ ಬಹುತೇಕ ಸಿನಿಮಾದ ಹಾಡುಗಳು ಹಿಟ್ ಆಗಿವೆ. ಇದೇ ಮ್ಯಾಟ್ನಿ ಸಿನಿಮಾದ ಹಾಡೊಂದು ಈ ಹಿಂದೆ ರಿಲೀಸ್ ಆಗಿದ್ದು, ಸಂಜೆ ಮೇಲೆ ಸುಮ್ನೆ ಹಂಗೆ ಹೆಸರಿನ ಗೀತೆಯೂ ಹಿಟ್ ಲಿಸ್ಟ್ ಗೆ ಸೇರ್ಪಡೆ ಆಗಿದೆ. ಹಾಗಾಗಿ ಎಣ್ಣೆ ಸಾಂಗ್ ಕೂಡ ಅದೇ ಸಾಲಿಗೆ ಸೇರಲಿದೆ ಎನ್ನುವ ನಿರೀಕ್ಷೆ ಹುಟ್ಟು ಹಾಕಿದೆ. ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ, ಅಯೋಗ್ಯ ಸಿನಿಮಾದ ‘ಏನಮ್ಮಿ ಏನಮ್ಮಿ’ ಹಾಡು 108 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿತ್ತು. ಇದೀಗ ಮತ್ತೆ ಈ ಜೋಡಿಯ ‘ಸಂಜೆ ಮೇಲೆ ಸುಮ್ನೆ ಹಂಗೆ’ (Sanje Mele) ಹಾಡು ವೈರಲ್ ಆಗಿದೆ. ನಿನ್ನೆಯಷ್ಟೇ ರಿಲೀಸ್ ಆಗಿರುವ ‘ಮ್ಯಾಟ್ನಿ’ (Matinee) ಸಿನಿಮಾದ ಈ ಗೀತೆ ಕಡಿಮೆ ಅವಧಿಯಲ್ಲೇ 3.8 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ವೈರಲ್ ಆಗುತ್ತಿದೆ.

    ಪೂರ್ಣಚಂದ್ರ ತೇಜಸ್ವಿ (Purnachandra Tejaswi) ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಗೀತೆಗೆ ವಿಜಯ್ ಪ್ರಕಾಶ್ (Vijay Prakash) ದನಿಯಾಗಿದ್ದಾರೆ. ಇಡೀ ಹಾಡನ್ನು ಕಲರ್ ಫುಲ್ ಸೆಟ್ ನಲ್ಲಿ ಚಿತ್ರೀಕರಿಸಿದ್ದಾರೆ ನಿರ್ದೇಶಕ ಮನೋಹರ್. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸಖತ್ತಾಗಿ ಹಾಡುಗಳಿಗೆ ಹೆಜ್ಜೆ ಹಾಕಿದ್ದ ಸತೀಶ್ ಮತ್ತು ರಚಿತಾ ರಾಮ್ ಕೂಡ ಈ ಸಿನಿಮಾದಲ್ಲಿ ಇರುವುದರಿಂದ ಹಾಡುಗಳು (Songs)ನಿರೀಕ್ಷೆ ಮೂಡಿಸಿದ್ದವು. ಏನಮ್ಮಿ ಏನಮ್ಮಿ ಅಂತ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಜೋಡಿ ಸತೀಶ್ ನೀನಾಸಂ- ರಚಿತಾ ರಾಮ್ ಫೇರ್ ಮತ್ತೆ ಮ್ಯಾಟ್ನಿ ಸಿನಿಮಾದ ಮೂಲಕ ಒಂದಾಗಿದ್ದರಿಂದ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ  ಮನೋಹರ್ ಕಾಂಪಳ್ಳಿ ಕೂಡ ‘ಮ್ಯಾಟ್ನಿ’ ಸಿನಿಮಾವನ್ನು ತಯಾರಿಸಿದ್ದಾರೆ ಎನ್ನುವ ಮಾತಿದೆ. ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

    ‘ಮ್ಯಾಟ್ನಿ’ಯ ಟೀಸರ್ ಕಲರ್ ಫುಲ್ ಸೆಟ್, ಮನ ಸೆಳೆಯೋ ಬ್ಯಾಗ್ರೌಂಡ್ ಮ್ಯೂಸಿಕ್, ರಚ್ಚು ಲುಕ್ ಎಲ್ಲವೂ ಕಣ್ಣಿಗೆ ಹಬ್ಬ ನೀಡಿದ್ದರೆ, ಸತೀಶ್ ನೀನಾಸಂ ಪ್ರೇಮ ನಿವೇದನೆ, ಪ್ರೀತಿಯ ಸಾಲುಗಳು ಕಣ್ಮನ ಸೆಳೆದಿದ್ದವು.  ಮನೋಹರ್ ಕಾಂಪಲಿ ಇಬ್ಬರು ಸ್ಟಾರ್ ಜೋಡಿಗೆ ಸರಿ ಹೊಂದುವಂತಹ ಒಂದೊಳ್ಳೆ ಕಥೆ ಹೆಣೆದಿದ್ದು ನಿರ್ದೇಶಕನಾಗಿ ತಮ್ಮನ್ನು ಸಹ ಪ್ರೂವ್ ಮಾಡಿಕೊಳ್ಳಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.

     

    ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ. ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.  ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

  • ಬಡವ ರಾಸ್ಕಲ್ ಟೀಮ್: ‘ಅಣ್ಣ From Mexico’ ಚಿತ್ರಕ್ಕೆ ಮುಹೂರ್ತ

    ಬಡವ ರಾಸ್ಕಲ್ ಟೀಮ್: ‘ಅಣ್ಣ From Mexico’ ಚಿತ್ರಕ್ಕೆ ಮುಹೂರ್ತ

    ಡವ ರಾಸ್ಕಲ್ ಬಳಗ ಮತ್ತೆ ಒಂದಾಗಿರುವುದು ಗೊತ್ತೇ ಇದೆ. ನಟರಾಕ್ಷಸ ಡಾಲಿ ಧನಂಜಯ್ (Dhananjay) ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ಅಣ್ಣ From Mexico (Anna From Mexico) ಚಿತ್ರತಂಡವೀಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಶೂಟಿಂಗ್ ಅಖಾಡಕ್ಕೆ ಹೆಜ್ಜೆ ಇಡಲು ತಯಾರಾಗಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಧನು ಹಾಗೂ ಶಂಕರ್ ಗುರು ಜೋಡಿಯ ಅಣ್ಣ From Mexico ಸಿನಿಮಾದ ಮುಹೂರ್ತ ನೆರವೇರಿದೆ. ರಾಯಲ ಸ್ಟುಡಿಯೋಸ್ ನ ಪಾಲುದಾರರಾದ ಜಾನ್ವಿ ರಾಯಲ ಕ್ಲ್ಯಾಪ್ ಮಾಡಿದ್ದು, ನಿರ್ದೇಶಕ ಶಂಕರ್ ಗುರು (Shankar Guru) ತಾಯಿ ಕ್ಯಾಮೆರಾಗೆ ಚಾಲನೆ ನೀಡಿದರು. ಸ್ನೇಹಿತ ಹಾಗು ಹಿತೈಷಿಗಳಾದ ಮೃಣಾಲ್ ಹೆಬ್ಬಾಳ್ಕರ್ ರವರು ಸಿನಿಮಾದ ಮುಹೂರ್ತಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.

    2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ.

    ’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ದಿ ರಾಯಲ ಸ್ಟುಡಿಯೋಸ್  ಅಡಿಯಲ್ಲಿ ಸತ್ಯ ರಾಯಲ  ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಜೊತೆಯಾಗಿ ಕೈ ಜೋಡಿಸಿದೆ.

    ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಿದ್ದು. ಜನವರಿ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

    ಇನ್ನು, ಡಾಲಿ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಉತ್ತರಕಾಂಡ, ಪುಷ್ಪ-2, ಝೀಬ್ರಾ ಹಾಗೂ ಚಿತ್ರದಲ್ಲಿ ಧನು ನಟಿಸುತ್ತಿದ್ದಾರೆ. ಜೊತೆಗೆ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ.

  • ‘ತೋತಾಪುರಿ 2’ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಶಿವರಾಜ್ ಕುಮಾರ್

    ‘ತೋತಾಪುರಿ 2’ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಶಿವರಾಜ್ ಕುಮಾರ್

    ವರಸ ನಾಯಕ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ 2’ ಸಿನಿಮಾದ ಟ್ರೈಲರ್ (Trailer) ಅನ್ನು ಇಂದು ನಟ ಶಿವರಾಜ್ ಕುಮಾರ್ (Shivaraj Kumar) ಬಿಡುಗಡೆ ಮಾಡಿದರು. ಜೊತೆಗೆ ಅಭಿಮಾನಿಗಳಿಗೆ ಗಣೇಶ್ ಹಬ್ಬ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ತೋತಾಪುರಿ ಸಿನಿಮಾದ ನಿರ್ಮಾಪಕ ಸುರೇಶ್ ಅವರ ಜೊತೆಗಿನ ಬಾಂಧವ್ಯವನ್ನೂ ನೆನಪಿಸಿಕೊಂಡರು ಶಿವಣ್ಣ.

    ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ಧನಂಜಯ್, ಜಗ್ಗೇಶ್, ಅದಿತಿ ಪ್ರಭುದೇವ್, ಸುಮನ್ ರಂಗನಾಥ್ ಅವರ ಪಾತ್ರಗಳನ್ನು ಇಟ್ಟುಕೊಂಡು ಸಿನಿಮಾದ ಝಲಕ್ ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ. ಹಾಸ್ಯ, ಎಮೋಷನ್ ಜೊತೆಗೊಂದು ಅದ್ಭುತ ಸಂದೇಶವನ್ನು ಈ ಸಿನಿಮಾ ನೀಡಲಿದೆ ಎನ್ನುವುದು ಟ್ರೈಲರ್ ನೋಡಿದರೆ ಅರ್ಥವಾಗುತ್ತದೆ.

    ಸಿದ್ಲಿಂಗು ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಈಗಾಗಲೇ ಒಂದು ತೋತಾಪುರಿಯನ್ನು ಪ್ರೇಕ್ಷಕರಿಗೆ ತಿನ್ನಿಸಿದ್ದಾರೆ. ಮತ್ತೊಂದು ತೋತಾಪುರಿ ತಿನ್ನಿಸಲು ರೆಡಿ ಮಾಡಿಕೊಂಡಿದ್ದಾರೆ. ಜಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ’ ಸಿನಿಮಾ ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ತೋತಾಪುರಿ ಸಿನಿಮಾವನ್ನು ಜನರು ಮೆಚ್ಚಿಕೊಂಡ ಬೆನ್ನಲ್ಲೇ ತೋತಾಪುರಿ 2 (Thothapuri 2) ಸಿನಿಮಾವನ್ನು ಟ್ರೈಲರ್ ರಿಲೀಸ್ ಆಗಿದೆ.

    ಕೆ.ಎ.ಸುರೇಶ್ (KA Suresh) ಆರ್ಟ್ಸ್ ಬ್ಯಾನರ್ ಅಡಿಯಲ್ಲಿ  ಈ ಸಿನಿಮಾ ನಿರ್ಮಾಣಗೊಂಡಿದ್ದು, ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ (Vijay Prasad) ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ (Jaggesh), ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಇದನ್ನೂ ಓದಿ:ಗೃಹಪ್ರವೇಶದ ಫೋಟೋ ಹಂಚಿಕೊಂಡ ‘ನಾಗಿಣಿ 2’ ನಟಿ

    ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ (Dhananjay),  ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.

     

    ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100ಕ್ಕೂ ಹೆಚ್ಚು ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ

    ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ

    ಟರಾಕ್ಷಸ ಡಾಲಿ ಧನಂಜಯ್ (Dhananjay)  ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ  ‘ಟಗರು ಪಲ್ಯ’ (Tagaru Palya). ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

    ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ‌ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಕಂಠ ಕುಣಿಸಿದ್ದು, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ (Amrita Prem) ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: Exclusive: ಸ್ಪಂದನಾ ಇಲ್ಲ ಅನ್ನೋ ರಾಘು ನೋವು ಮಾಯ ಆಗಲ್ಲ- ನವೀನ್ ಕೃಷ್ಣ ಭಾವುಕ 

    ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನ ಆಯ್ಕೆ ಮಾಡಿಕೊಂಡು, ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಾಗಭೂಷಣ್ ಟಗರು ಪಲ್ಯದ ನಾಯಕ.

    ‘ಟಗರು ಪಲ್ಯ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಕೂತೂಹಲ ದುಪ್ಪಟ್ಟಾಗಿದೆ. ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್  ಚಿತ್ರಕ್ಕೆ ಸಾಥ್ ಕೊಟ್ಟಿದೆ. ಹಾಗೇ ವಾಸುಕಿ ವೈಭವ್ ಸಂಗೀತವಿದೆ ಇನ್ನು ಎಸ್.ಕೆ.ರಾವ್ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಪ್ರಚಾರ ಕಾರ್ಯ ಆರಂಭಿಸಿರುವ ಟಗರು ಪಲ್ಯ ತಂಡ ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಗನ್, ಧನಂಜಯ್, ಚೈತ್ರಾ ಕುಂದಾಪುರ ಪರಿಚಯವಾಗಿದ್ದು ಹೇಗೆ?: ಡೀಲ್ ಕೇಸ್‍ನ ಸಂಪೂರ್ಣ ಕಥೆ ಬಿಚ್ಚಿಟ್ಟ ಚನ್ನನಾಯ್ಕ್

    ಗಗನ್, ಧನಂಜಯ್, ಚೈತ್ರಾ ಕುಂದಾಪುರ ಪರಿಚಯವಾಗಿದ್ದು ಹೇಗೆ?: ಡೀಲ್ ಕೇಸ್‍ನ ಸಂಪೂರ್ಣ ಕಥೆ ಬಿಚ್ಚಿಟ್ಟ ಚನ್ನನಾಯ್ಕ್

    – ನನಗೆ ಮೇಕಪ್ ಮಾಡಲು 3 ದಿನ ತಗೊಂಡ್ರು

    ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದ 5ನೇ ಆರೋಪಿಯಾಗಿರುವ ಹಾಗೂ ಡೀಲ್‍ನಲ್ಲಿ ‘ವಿಶ್ವನಾಥ್ ಜೀ’ ಪಾತ್ರಧಾರಿಯಾಗಿದ್ದ ಚನ್ನನಾಯ್ಕ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ನನಗೆ ಗಗನ್ ಮತ್ತು ಧನಂಜಯ್ ಅವರು ಚೈತ್ರಾ ಅವರನ್ನು ಪರಿಚಯ ಮಾಡಿಕೊಟ್ಟಿದ್ದಾರೆ. ಆಗ ನಾನು ಅವರ ಮೂಲಕ ಒತ್ತಡ ಹೇರುತ್ತೇನೆ. ಟಿಕೆಟ್ ಕೊಡಿಸುವಂತಹ ವ್ಯಕ್ತಿ ನನ್ನ ಮುಂದೆ ಬಂದು ಕುಳಿತುಕೊಂಡು ವಿಚಾರವನ್ನು ಹೇಳಲಿ. ಆಗ ನನಗೆ ಅದು ಹೌದು ಅನಿಸಿದ್ರೆ ನಾನು ಮುಂದೆ ಬರಲು ಇಚ್ಛೆ ಪಡುತ್ತೇನೆಯೋ ಇಲ್ಲವೋ ಎಂಬುದನ್ನು ಆ ಬಳಿಕ ಹೇಳುತ್ತೇನೆ. ನಂತರ ಬರಲೇ ಬೇಕು ಎಂದು ಅವರು ಒತ್ತಾಯದ ಮೇಲೆ ಕರಿದಿದ್ದಕ್ಕೆ ಚೈತ್ರಾ ಅವರನ್ನು ಕಡೂರಿಗೆ ಕರೆಸಿ ಗಗನ್ ಅವರ ಮನೆಯಲ್ಲಿಯೇ ಸತತ ಮೂರು ಗಂಟೆ ಮೀಟಿಂಗ್ ಮಾಡಿದ್ದೇವೆ ಎಂದು ಹೇಳಿದರು.

    ಅವರು ನನ್ನನ್ನು ‘ವಿಶ್ವನಾಥ್ ಜೀ’ ಯಂತೆ ಪ್ರಿಪೇರ್ ಮಾಡೋಕೆ ಮೂರು ದಿನ ತೆಗೆದುಕೊಂಡಿದ್ದಾರೆ. ಯಾಕಂದರೆ ಮೇಕಪ್ ಮಾಡಬೇಕು, ಮೀಸೆ ತೆಗೀಬೇಕು ಅನ್ನೋದನ್ನು ನನ್ನ ಜೊತೆ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ನೀವು ಹೋಗಿ ಇಷ್ಟು ಮಾತಾಡಬೇಕು ಎಂದು ಹೇಳಿದ್ರು ಅಷ್ಟೇ. ಅದಕ್ಕೆ ನಾನು ಒಪ್ಪಿಕೊಂಡೆ. ಹೀಗೆ ಒಪ್ಪಿಕೊಂಡು ಹೊರಟಿರುವ ಸಮಯದಲ್ಲಿ ಚೈತ್ರಾ ಅವರು ನಿಮಗೆ ನೋಡೋಕೆ ಒಂದು ಫೋಟೋ ಕಳುಹಿಸಿದ್ದಾರೆ. ಈ ಫೋಟೋದಂತೆ ನೀವು ರೆಡಿ ಆಗಬೇಕು ಎಂದು ಹೇಳಿ ಫೋಟೋ ತೋರಿಸುತ್ತಾರೆ. ಬಳಿಕ ಅವರ ಫ್ರೆಂಡ್ ಕಟ್ಟಿಂಗ್ ಶಾಪ್‍ಗೆ ಕರೆದುಕೊಂಡು ಹೋಗಿ ನನ್ನನ್ನು ರೆಡಿ ಮಾಡಿ ನಂತರ ಬೆಂಗಳೂರಿನ ಕುಮಾರಕೃಪಾಗೆ ಕರೆದುಕೊಂಡು ಬರುತ್ತಾರೆ ಎಂದು ಹೇಳಿದರು.

    ಮುಂದಿನ ಬಾರಿ ಶೋಭಾ ಕರಂದ್ಲಾಜೆಯವರಿಗೆ ಎಂಪಿ ಟಿಕೆಟ್ ಕೊಡಲ್ಲ. ನನಗೆ (ಚೈತ್ರಾ) ಟಿಕೆಟ್ ಕೊಡುತ್ತಾರೆ. ಆಗ ಇವರನ್ನು ನಾನು ಶಾಸಕರನಾಗಿ ಗೆಲ್ಲಿಸಿಕೊಂಡರೆ ಎಂಪಿಯಾಗಿ ನಾನು ಗೆಲ್ಲೋಕೆ ಸುಲಭವಾಗುತ್ತದೆ ಎಂದು ಹೇಳಿದರು. ಆಗ ನಾನು ಆರ್ಥಿಕವಾಗಿ ಚೆನ್ನಾಗಿರುವಂತಹ ವ್ಯಕ್ತಿ ಅಲ್ಲ. ಹೀಗಾಗಿ ನಿಮ್ಮ ಜೊತೆ ಸಮಯ ಕಳೆಯಲು ನನ್ನಿಂದ ಸಾಧ್ಯವಿಲ್ಲ. ನನಗೆ ತುಂಬಾ ಕಮಿಟ್ಮೆಂಟ್ ಇದೆ, ಒಂದು ಲಕ್ಷ ರೂ.ಗೆ ನಾನು ಬಡ್ಡಿ ಕಟ್ಟುತ್ತಿದ್ದೇನೆ ಅಂದೆ. ಆಗ ಅವರು ನಾವು ನಿಮಗೆ ನಮ್ಮ ಕೈಯಿಂದ 1 ಲಕ್ಷ ರೂ. ಕೊಡುತ್ತೇವೆ. ಯಾಕೆಂದರೆ ಮುಂದೆ ನಾನು ಎಂಪಿ ಆಗಬೇಕು, ನಿಮ್ಮಂತವರು ನಮಗೆ ಬೇಕು. ಕಳೆದ ಬಾರಿ ಎಂಎಲ್‍ಎ ಎಲೆಕ್ಷನ್ ನಿಂತುಕೊಂಡು ಕೈಯಲ್ಲಿರುವ ಹಣವನ್ನೆಲ್ಲಾ ಹಾಳು ಮಾಡಿಕೊಂಡಿದ್ದೀರಾ. ಈ ಹಿನ್ನೆಲೆಯಲ್ಲಿ ರಾಜಕೀಯವಾಗಿ ನಿಮ್ಮನ್ನು ಬೆಳೆಸುವ ಜವಾಬ್ದಾರಿ ನಂದು. ನಾನು ಹೇಳಿದರೆ ದೊಡ್ಡ ದೊಡ್ಡವರೇ ನನ್ನ ಮಾತು ಕೇಳುತ್ತಾರೆ ಅಂತ ಹೇಳಿ ನಮಗೂ ಆಮೀಷ ಒಡ್ಡಿದ್ದಾರೆ ಎಂದು ಚೈತ್ರಾ ಕುಂದಾಪುರ ವಿರುದ್ಧ ಚನ್ನನಾಯ್ಕ್ ಆರೋಪಿಸಿದರು. ಇದನ್ನೂ ಓದಿ: MLA ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ಡೀಲ್ – ಪ್ರಕರಣದ 5ನೇ ಆರೋಪಿ ಅರೆಸ್ಟ್‌

    ಇತ್ತ ಗಗನ್ ಅವರು 1 ಲಕ್ಷ ಕೋಡ್ತೀನಿ ಅಂತಾ ಒಪ್ಪಿಕೊಂಡು, ಒಂದು ಲಕ್ಷ ಹಾಕಿದ್ದೀನಿ ಅಂತಾನೂ ಹೇಳಿ ಕಡೂರಿನಿಂದ ಕುಮಾರಕೃಪಾಗೆ ಬಾಡಿಗೆ ಬಾಡಿಗೆ ಮಾಡಿಕೊಂಡು ಬಂದೆವು. ಆ ಬಾಡಿಗೆ ಹಣ 7 ಸಾವಿರವನ್ನು ಮುರಿದುಕೊಂಡು ನನ್ನ ಅಕೌಂಟಿಗೆ 93 ಸಾವಿರವನ್ನು ಟ್ರಾನ್ಸ್‍ಫರ್ ಮಾಡಿದ್ದಾರೆ. ಗಗನ್, ಚೈತ್ರಾ ಕುಂದಾಪುರ, ಧನಂಜಯ್ ಹಾಗೂ ದೂರು ನೀಡಿರುವ ಗೋವಿಂದ ಪೂಜಾರಿ ಅವರ ಜೊತೆನೂ ನನ್ನ ನಂಬರ್ ಇದೆ. ಆದರೆ ಇವರು ಯಾರು ಕೂಡ ನನ್ನ ನಂಬರ್ ಅನ್ನು ಸಿಸಿಬಿ ಪೊಲೀಸರಿಗೆ ನೀಡಿಲ್ಲ ಅನ್ನೋದೇ ಕುತೂಹಲ ಎಂದರು.

    ಸ್ವಾಮೀಜಿ, ಚೈತ್ರಾ ಹಾಗೂ ಗಗನ್ ಇವರಿಗೆ ಮೂವರಿಗೆ ಬಿಟ್ಟರೆ ಬೇರೆ ಯಾರಿಗೂ ದೊಡ್ಡ ಮಟ್ಟಿನ ಹಣಕಾಸು ವ್ಯವಹಾರ ಗೊತ್ತಿಲ್ಲ ಅನಿಸುತ್ತೆ. ನಮಗೆ ಯಾವಾಗ ಅನುಮಾನ ಬಂದು ಇವರನ್ನು ಕೇಳುವುದಕ್ಕೆ ಶುರು ಮಾಡ್ತೀವೋ ಆಗ ಇದ್ದಕ್ಕಿದ್ದ ಹಾಗೆಯೇ ಗಗನ್ ಅವರು ಕಾರು ತೆಗೆದುಕೊಂಡು ಬರುತ್ತಾರೆ, ಅದ್ಧೂರಿಯಾಗಿ ಮದುವೆ ಆಗ್ತಾರೆ. ಇವರೆಲ್ಲಾ ಆರ್ಥಿಕವಾಗಿ ಹೇಗಿದ್ದಾರೆ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಇದನ್ನು ಪ್ರಶ್ನೆ ಮಾಡಿದಾಗ ನಮ್ಮ ಮೇಲೆ ಧಮ್ಕಿ ಹಾಕುತ್ತಾರೆ. ಇಷ್ಟೆಲ್ಲಾ ಆದ ಬಳಿಕ ನನಗೆ ಅನುಮಾನ ಇನ್ನಷ್ಟು ಹೆಚ್ಚಾಯಿತು. ಆಗ ನಾನು ಗೋವಿಂದ ಪೂಜಾರಿಗೆ ಫೋನ್ ಮಾಡಿದೆ. ಆದರೆ ಅವರು ಪೋನ್ ರಿಸೀವ್ ಮಾಡಿಲ್ಲ. ಮಾಡಿದರೂ ನನ್ನ ಮಾತು ಕೇಳಲು ರೆಡಿ ಇರಲಿಲ್ಲ ಎಂದರು.

    ಗೋವಿಂದ ಪೂಜಾರಿ ಪರಿಚಯ ಹೇಗೆ?: ನಾನು ಕುಮಾರಕೃಪಾಗೆ ಹೋದಾಗ. ಅಲ್ಲಿ ಒಂದು ರೂಮಿನಲ್ಲಿ ಗೋವಿಂದ ಪೂಜಾರಿ ನನ್ನನ್ನು ಭೇಟಿಯಾಗುತ್ತಾರೆ. ಈ ವೇಳೆ ಅವರು ನನಗೆ ಬೊಕ್ಕೆ ಹಾಗೂ ಡ್ರೈಫೂಟ್ಸ್, ಸ್ವೀಟ್ ಬಾಕ್ಸ್ ಕೊಡುತ್ತಾgಕ್ಸೀ ಸ್ವೀಟ್ ಬಾಕ್ಸ್‍ನಲ್ಲಿ ಅವರ ವಿಸಿಟಿಂಗ್ ಕಾರ್ಡ್ ಇಟ್ಟಿರುತ್ತಾರೆ. ಆ ವಿಸಿಟಿಂಗ್ ಕಾರ್ಡ್ ಅನ್ನು ಧನಂಜಯ್ ಹಾಗೂ ಗಗನ್‍ಗೆ ಗೊತ್ತಾಗಂದತೆ ಎತ್ತಿಟ್ಟುಕೊಂಡಿದ್ದೆ. ಆ ನಂಬಿರ್‍ನಿಂದ ಪೂಜಾರಿಗೆ ಕರೆ ಮಾಡಿದೆ. ಆದ್ರೆ ಅವರು ಕಾಲ್ ಎತ್ತಿಲ್ಲ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲವೇ ದಿನಗಳಲ್ಲಿ ‘ಉತ್ತರಕಾಂಡ’ ಟೀಮ್ ಸೇರಿಕೊಳ್ಳಲಿದ್ದಾರೆ ನಟಿ ರಮ್ಯಾ

    ಕೆಲವೇ ದಿನಗಳಲ್ಲಿ ‘ಉತ್ತರಕಾಂಡ’ ಟೀಮ್ ಸೇರಿಕೊಳ್ಳಲಿದ್ದಾರೆ ನಟಿ ರಮ್ಯಾ

    ವಿದೇಶಿ ಪ್ರವಾಸದಲ್ಲಿರುವ ರಮ್ಯಾ ಅತೀ ಶೀಘ್ರದಲ್ಲೇ ಭಾರತಕ್ಕೆ ವಾಪಸ್ಸಾಗುವುದಾಗಿ ತಿಳಿಸಿದ್ದರು. ಇನ್ನೂ ಅವರು ಭಾರತಕ್ಕೆ ಆಗಮಿಸಿಲ್ಲ. ಆದರೆ, ಅವರು ಕರ್ನಾಟಕಕ್ಕೆ ಬಂದ ನಂತರ ಯಾವೆಲ್ಲ ಕೆಲಸದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಈ ಮಾಹಿತಿಯು ನಿಜಕ್ಕೂ ಅಭಿಮಾನಿಗಳಿಗೆ ಸಂಭ್ರಮ ತರಲಿದೆ.

    ಡಾಲಿ ಧನಂಜಯ್ (Dolly Dhananjay) ಹುಟ್ಟು ಹಬ್ಬದ ದಿನದಂದು ಉತ್ತರಕಾಂಡ (Uttarkanda) ಸಿನಿಮಾ ಟೀಮ್ ಟೀಸರ್ ರಿಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಂದಿನ ಕಾರ್ಯಕ್ರಮಕ್ಕೆ ಚಿತ್ರದ ನಾಯಕಿಯಾಗಿರುವ ರಮ್ಯಾ (Ramya) ಗೈರಾಗಿದ್ದರು. ಉತ್ತರಕಾಂಡ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಮ್ಯಾ, ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಏಕೆ ಬರಲಿಲ್ಲ ಎನ್ನುವ ಪ್ರಶ್ನೆ ಮೂಡಿತ್ತು. ಇದನ್ನೂ ಓದಿ:3ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಜೆನಿಲಿಯಾ? ವೈರಲ್‌‌ ಆಯ್ತು ಫೋಟೋ

    ಉತ್ತರಕಾಂಡ ಸಿನಿಮಾದ ಕೆಲಸ ದೃಶ್ಯಗಳು ಚಿತ್ರೀಕರಣವಾಗಿದ್ದರೂ, ಆ ಶೂಟಿಂಗ್ ನಲ್ಲಿ ಮತ್ತೋರ್ವ ನಾಯಕಿ ಸಪ್ತಮಿ ಗೌಡ (Saptami Gowda) ಮಾತ್ರ ಭಾಗಿಯಾಗಿದ್ದಾರೆ. ಹಾಗಾಗಿ ರಮ್ಯಾ ಈ ಸಿನಿಮಾದಿಂದ ಹಿಂದೆ ಸರಿದಿದ್ದಾರೆ ಎನ್ನುವ ಚರ್ಚೆ ಕೂಡ ಶುರುವಾಗಿತ್ತು. ಸಿನಿಮಾದಿಂದ ಹೊರ ಬಂದ ಕಾರಣದಿಂದಾಗಿ ಅವರು ಕಾರ್ಯಕ್ರಮಕ್ಕೆ ಬರಲಿಲ್ಲ ಎನ್ನುವ ಮಾತೂ ಕೇಳಿ ಬಂದಿತ್ತು.

    ರಮ್ಯಾ ವಿದೇಶಿ ಪ್ರವಾಸದಲ್ಲಿ ಬ್ಯುಸಿಯಾಗಿದ್ದರು. ಆ ವಿಡಿಯೋ ಮತ್ತು ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟೀಸರ್ ಕಾರ್ಯಕ್ರಮಕ್ಕೆ ಗೈರಾಗಿದ್ದಕ್ಕೆ ಕಾರಣ ತಾವು ವಿದೇಶದಲ್ಲಿ ಇರುವುದೇ ಆಗಿದೆ ಎನ್ನುವುದನ್ನು ಸ್ಪಷ್ಟ ಪಡಿಸಿದ್ದರು. ಆದರೂ, ಉತ್ತರ ಕಾಂಡ ಸಿನಿಮಾದಲ್ಲಿ ರಮ್ಯಾ ಇರುವುದು ಅನುಮಾನ ಎಂದು ಹೇಳಲಾಗಿತ್ತು.

     

    ಇದೀಗ ಅಸಲಿ ಸಮಾಚಾರ ಹೊರ ಬಿದ್ದಿದ್ದು, ರಮ್ಯಾ ಭಾರತಕ್ಕೆ ಬಂದ ತಕ್ಷಣವೇ ಉತ್ತರಕಾಂಡ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಲಿದ್ದಾರಂತೆ. ಮುಂದಿನ ತಿಂಗಳು ನಡೆಯಲಿರುವ ಚಿತ್ರೀಕರಣದಲ್ಲಿ (Shooting) ಅವರು ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದ್ದೆ. ಈ ಪಾತ್ರಕ್ಕಾಗಿ ಅವರು ಸಖತ್ ತಯಾರಿ ಕೂಡ ಮಾಡಿಕೊಂಡಿದ್ದು, ಮತ್ತೆ ಹಳೆಯ ರಮ್ಯಾರನ್ನು ಈ ಸಿನಿಮಾದಲ್ಲಿ ನೋಡಬಹುದಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಅತ್ತಿಗೆಯ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ಧ್ರುವ ಸರ್ಜಾ : ‘ತತ್ಸಮ ತದ್ಭವ’ ಟ್ರೈಲರ್ ರಿಲೀಸ್

    ಮೇಘನಾ ರಾಜ್ ಸರ್ಜಾ (Meghana Raj) ಹಲವು ವರ್ಷಗಳ ನಂತರ ನಟಿಸಿರುವ ‘ತತ್ಸಮ ತದ್ಭವ’ (Tatsama Tadbhava) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ (Dhruv Sarja) ಹಾಗೂ ಡಾಲಿ ಧನಂಜಯ (Dhananjay) ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಯಶಸ್ಸನ್ನು ಹಾರೈಸಿದರು. ಹಿರಿಯ ನಟ ಸುಂದರರಾಜ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

    ನಾನು ಸಿನಿಮಾದಲ್ಲಿ ನಟಿಸಬಾರದು ಎಂದು ನಿರ್ಧರಿಸಿದಾಗ ಬಂದ ಸಿನಿಮಾವಿದು ಎಂದು ಮಾತು ಆರಂಭಿಸಿದ ಮೇಘನರಾಜ್ ಸರ್ಜಾ, ಈ ಚಿತ್ರ ಆರಂಭವಾಗಲು ಕಾರಣ ನನ್ನ ಪತಿ ಚಿರು. ಅವರಿಗೆ ಪ್ರಜ್ವಲ್ (Prajwal Devaraj) ಹಾಗೂ ಪನ್ನಗ ಅವರ ಜೊತೆ ಸೇರಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಆನಂತರ ಪನ್ನಗಾಭರಣ ಈ ಚಿತ್ರದ ಕಥೆಯನ್ನು ಹೇಳಲು ನಿರ್ದೇಶಕರನ್ನು ಮನೆಗೆ ಕಳುಹಿಸಿದರು. ಕಥೆ ಇಷ್ಟವಾಯಿತು. ಅಭಿನಯಿಸಿದ್ದೇನೆ. ಪನ್ನಗಾಭರಣ, ಸ್ಫೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್ ಅಭಿನಯಿಸಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ನಾನು ಈ ಚಿತ್ರ ಮಾಡಲು ಸಹಕಾರ ನೀಡಿದ ನನ್ನ ಎರಡು ಕುಟುಂಬಕ್ಕೆ ಧನ್ಯವಾದ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ವಿಶೇಷ ಧನ್ಯವಾದ ಎಂದರು.

    ನಾನು ಈವರೆಗೂ ಮಾಡದ ಪಾತ್ರ ಈ ಚಿತ್ರದಲ್ಲಿ ಮಾಡಿದ್ದೇನೆ. ಬಹಳ ಇಷ್ಟಪಟ್ಟು ಮಾಡಿರುವ ಸಿನಿಮಾವಿದು. ಟ್ರೇಲರ್ ಗೆ ನಮ್ಮ ತಂದೆ ದೇವರಾಜ್ ಅವರು ಧ್ವನಿ ನೀಡಿದ್ದಾರೆ ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು. ತತ್ಸಮ ತದ್ಭವ ಒಂದು ಕ್ರೈಮ್ ಥ್ರಿಲ್ಲರ್ ಚಿತ್ರ. ಆದರೆ ಮಾಮೂಲಿ ಕ್ರೈಮ್ ಥ್ರಿಲ್ಲರ್ ಗಳಿಗಿಂತ ವಿಭಿನ್ನ. ನನ್ನ ಕಥೆ ಮೆಚ್ಚಿ ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ, ಚಿತ್ರದಲ್ಲಿ ನಟಿಸಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನಾನು ಆಭಾರಿ ಎನ್ನುತ್ತಾರೆ ನಿರ್ದೇಶಕ ವಿಶಾಲ್ ಆತ್ರೇಯ.

    ನಾನು ಸಾಮಾನ್ಯವಾಗಿ ಭಾವುಕನಾಗುವುದಿಲ್ಲ. ಇಂದು ಏಕೋ ಗೊತ್ತಿಲ್ಲ ಸ್ವಲ್ಪ ಭಾವುಕನಾಗುತ್ತಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ಮಾಪಕ ಪನ್ನಗಾಭರಣ, ನಾನು ನಿರ್ಮಾಪಕನಾಗಬೇಕು ಅಂತ ಇರಲಿಲ್ಲ. ನಿರ್ಮಾಪಕನಾದೆ. ನನ್ನೊಟ್ಟಿಗೆ ಕೆಲವು ಸ್ನೇಹಿತರು ಕೈ ಜೋಡಿಸಿದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಟ್ರೈಲರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಹಾಗೂ ಧನಂಜಯ ಅವರಿಗೆ ಧನ್ಯವಾದ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಎಂದರು.

    ಸಂಗೀತ ನಿರ್ದೇಶಕ ವಾಸುಕಿ ವೈಭವ್, ಛಾಯಾಗ್ರಾಹಕ ಶ್ರೀನಿವಾಸ ರಾಮಯ್ಯ, ಕೆ.ಆರ್.ಜಿ ಸ್ಟುಡಿಯೋಸ್ ಯೋಗಿ ಜಿ ರಾಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾಲಿ ಹುಟ್ಟುಹಬ್ಬಕ್ಕೆ ಖಡಕ್ ರೊಟ್ಟಿ, ಪುಂಡೆಪಲ್ಯೆ ಮೆನು

    ಡಾಲಿ ಹುಟ್ಟುಹಬ್ಬಕ್ಕೆ ಖಡಕ್ ರೊಟ್ಟಿ, ಪುಂಡೆಪಲ್ಯೆ ಮೆನು

    ಬೆಂಗಳೂರಿನ ನಂದಿ ಲಿಂಕ್ಸ್ ಮೈದಾನದಲ್ಲಿ ಇಂದು ನಟ ಡಾಲಿ ಧನಂಜಯ್ (Dhananjay) ಫ್ಯಾನ್ಸ್ ಜೊತೆ ಹುಟ್ಟು ಹಬ್ಬವನ್ನು (birthday) ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಿಗಾಗಿಯೇ ನಿನ್ನೆ ಮಧ್ಯರಾತ್ರಿಯಿಂದಲೇ ಸಮಯವನ್ನು ಮೀಸಲಿಟ್ಟಿದ್ದಾರೆ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ‘ಡಾಲಿ ಉತ್ಸವ’ ಹೆಸರಿನಲ್ಲಿ ಕಾರ್ಯಕ್ರಮವನ್ನೇ ಆಯೋಜನೆ ಮಾಡಿದ್ದಾರೆ.

    ಎರಡು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಈ ಉತ್ಸವದಲ್ಲಿ ಪಾಲ್ಗೊಂಡಿದ್ದು, ಬಂದಿದ್ದ ಅಭಿಮಾನಿಗಳಿಗಾಗಿಯೇ ಉತ್ತರ ಕರ್ನಾಟಕ (North Karnataka) ಮತ್ತು ಸೌತ್ ಇಂಡಿಯನ್ ಶೈಲಿಯಲ್ಲಿ ಊಟವನ್ನು (lunch) ಆಯೋಜನೆ ಮಾಡಲಾಗಿದೆ. ಅದರಲ್ಲೂ ರಾಯಚೂರು, ಸಿಂಧನೂರಿನ ಅಭಿಮಾನಿಗಳು ಖಡಕ್ ರೊಟ್ಟಿ, ಎಣ್ಣೆ ಬದನೆಕಾಯಿ, ಪುಂಡೆ ಪಲ್ಯೆ, ಬೂಂದಿ, ಶೇಂಗ ಹಿಂಡಿ , ಮೆಣಸಿನಕಾಯಿ ಒಳಗೊಂಡ ಊಟದ ವ್ಯವಸ್ಥೆ ಮಾಡಿದ್ದಾರೆ. ಡಾಲಿ ಅಭಿಮಾನಿಯಾದ ಶಿವರಾಜ್ ಪಾಟೀಲ್ ಗುಂಜಳ್ಳಿ ಉತ್ತರ ಕರ್ನಾಟಕದ ಊಟದ ವ್ಯವಸ್ಥೆ ಮಾಡಿದ್ದು ವಿಶೇಷ. ಇದನ್ನೂ ಓದಿ:ನ್ಯೂಯಾರ್ಕ್‌ನ 41ನೇ ಇಂಡಿಯಾ ಡೇ ಪರೇಡ್‌ನಲ್ಲಿ ಭಾಗಿಯಾದ ಸಮಂತಾ

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಧನಂಜಯ್, ‘ನಾನು ಹುಟ್ಟು ಹಬ್ಬ ಸೆಲೆಬ್ರೇಶನ್ ಮಾಡ್ಕೊಂಡು ತುಂಬಾ ದಿನ ಆಗಿತ್ತು. ಕಾರಣಾಂತರಗಳಿಂದ 3-4 ವರ್ಷಗಳಿಂದ ಮಾಡಿರಲಿಲ್ಲ. ಈ ವರ್ಷ ಅಭಿಮಾನಿಗಳ ಜೊತೆ ಆಚರಣೆ ಮಾಡಿದ್ದು ತುಂಬಾ ಖುಷಿಯಾಗಿದೆ. ಉತ್ತರಕಾಂಡ ಸಿನಿಮಾದ ಗಬ್ರು ಸತ್ಯ, ಅಣ್ಣಾ ಫ್ರಮ್ ಮೆಕ್ಸಿಕೋ 2 ಪ್ರಾಜೆಕ್ಟ್ ಅನೌನ್ಸ್ ಮಾಡಿದ್ದೀವಿ’ ಎಂದರು.

     

    ಮುಂದುವರೆದು ಮಾತನಾಡಿದ ಡಾಲಿ, ‘ನಾನು ಬರಬೇಕಾದರೆ ತುಂಬಾ ಜನ ವಿಶ್ ಮಾಡಿದ್ರು. ಜನರು ಕೂಡ ನೀನು ಚೆನ್ನಾಗಿ ಬೆಳೀಬೇಕು ಅಂತ ಹಾರೈಸ್ತಿದಾರೆ. ಅದಕ್ಕಿಂತ ದೊಡ್ಡ ಸಂಪಾದನೆ ಯಾವುದು ಇಲ್ಲ. ಅದನ್ನ ಕಾಪಾಡಿಕೊಳ್ಳೋಕೆ ಕೆಲಸ ಮಾಡ್ತೀನಿ. ಜನರ ಪ್ರೀತಿಗೆ ನಾನ್ಯಾವತ್ತೂ ಬೆಲೆ ಕಟ್ಟೋದಕ್ಕೆ ಆಗಲ್ಲ. ಅಣ್ಣಾ ಫ್ರಮ್ ಮೆಕ್ಸಿಕೋ ಸಿನಿಮಾ ಬಹಳ ಡಿಫರೆಂಟ್ ಆಗಿದೆ. ಅಭಿಮಾನಿಗಳಿಗೆ ಇಷ್ಟವಾಗುವಂತಹ ಪಾತ್ರವನ್ನ ಕೊಡ್ತಾ ಇದೀನಿ. ಅಭಿಮಾನಿಗಳಿಗೆ ಪಾತ್ರಗಳಿಂದ ಒಂದಿಷ್ಟು ವಿಷಯಗಳನ್ನ ಹೇಳ್ತಾ ಇದೀನಿ’ ಎನ್ನುತ್ತಾರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]