Tag: ಧನುಷ್ಯ

  • ತಮಿಳು ನಟ ಧನುಷ್ ಚಿತ್ರದಲ್ಲಿ ಶಿವರಾಜ್ ಕುಮಾರ್ : ಅಣ್ಣನಾದ ಶಿವಣ್ಣ

    ತಮಿಳು ನಟ ಧನುಷ್ ಚಿತ್ರದಲ್ಲಿ ಶಿವರಾಜ್ ಕುಮಾರ್ : ಅಣ್ಣನಾದ ಶಿವಣ್ಣ

    ಮಿಳು ಸಿನಿಮಾ ರಂಗದ ಖ್ಯಾತ ನಟ ಧನುಷ್ ನಟನೆಯ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ಧನುಷ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಅವರು ವಿಭಿನ್ನ ರೀತಿಯ ಪಾತ್ರ ಮಾಡಲಿದ್ದಾರಂತೆ. ಅದಕ್ಕಾಗಿ ಲುಕ್ ಕೂಡ ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ.

    ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಧನುಷ್ ಅವರಿಗೆ ಅಣ್ಣನಾಗಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೊಂದು ಅಣ್ಣ ತಮ್ಮನ ಬಾಂಧವ್ಯದ ಕಥೆಯಲ್ಲವಾದರೂ, ಅಣ್ಣನ ಪಾತ್ರಕ್ಕೆ ವಿಭಿನ್ನ ಹಿನ್ನೆಲೆಯನ್ನು ನೀಡಲಾಗಿದೆಯಂತೆ. ಹಾಗಾಗಿ ಈ ಪಾತ್ರವನ್ನು ಶಿವಣ್ಣ  ಒಪ್ಪಿಕೊಂಡಿದ್ದಾರೆ. ಮುಂದಿನ ತಿಂಗಳಿಂದ ನಡೆಯಲಿರುವ ಚಿತ್ರೀಕರಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಈ ಹಿಂದೆ ಶಿವರಾಜ್ ಕುಮಾರ್ ಮತ್ತೊಂದು ತಮಿಳು ಸಿನಿಮಾ ಒಪ್ಪಿಕೊಂಡಿದ್ದರು. ಇದೇ ಧನುಷ್ ಅವರ ಮಾವ, ಸೂಪರ್ ಸ್ಟಾರ್ ರಜನಿಕಾಂತ್ ಅವರ ಚಿತ್ರಕ್ಕೆ ಸಹಿ ಹಾಕಿದ್ದರು. ಈ ಸಿನಿಮಾದ ಶೂಟಿಂಗ್ ನಡೆದಿದ್ದು, ಶಿವರಾಜ್ ಕುಮಾರ್ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಶಿವಣ್ಣ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತು ನಾಯಕರಾಗಿ ನಟಿಸಿರುವ ವೇದ ಸಿನಿಮಾ ಬಿಡುಗಡೆ ಆಗುತ್ತಿದ್ದು, ಅದರಲ್ಲಿ ಶಿವಣ್ಣ ಬ್ಯುಸಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]