Tag: ಧನ್ಯಾ ರಾಮ್ ಕುಮಾರ್

  • ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ

    ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ

    ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ (Pruthvi Ambaar) ಹಾಗೂ ಧನ್ಯಾ ರಾಮ್‌ಕುಮಾರ್ (Dhanya Ramkumar) ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ (ಡಿ.23) ಚಿತ್ರಕ್ಕೆ ಕುಂಬಳಕಾಯಿ ಒಡೆಯಲಾಯಿತು. ಈ ವೇಳೆ, ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿಗೋಷ್ಠಿಯಲ್ಲಿ ‘ಚೌಕಿದಾರ್’ (Chowkidar) ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು.

    ಪೃಥ್ವಿ ಅಂಬಾರ್ ಮಾತನಾಡಿ, ಈ ಚಿತ್ರದಿಂದ ಬಹಳಷ್ಟು ಕಲಿಯಲು ಸಿಕ್ಕಿದೆ. ನುರಿತ ನಿರ್ದೇಶಕರು ಇದ್ದಾಗ ಹೇಗೆ ಬೇಕು ಯಾವ ರೀತಿ ಬೇಕು ಅನ್ನೋದನ್ನು ಅವರು ಹೇಳಿ ಕೊಟ್ಟಿದ್ದಾರೆ. ಮನುಷ್ಯನ ಭಾವನೆಗಳನ್ನು ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಎಮೋಷನ್ ತುಂಬಾ ಚೆನ್ನಾಗಿ ಅಳವಡಿಸಿದ್ದಾರೆ. ಸಾಯಿ ಸರ್ ಸೆಟ್‌ನಲ್ಲಿ ಇದ್ದ ರೀತಿ. ನಮ್ಮಂತಹ ಕಲಾವಿದರಿಗೆ ಪುಸ್ತಕ ಇದ್ದಂತೆ. ನಿರ್ಮಾಪಕ ಜರ್ನಿ ನನಗೆ ಸ್ಫೂರ್ತಿ ಎಂದು ತಿಳಿಸಿದರು.

    ನಿರ್ದೇಶಕ‌ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ನಾವು ನಿರ್ದೇಶಕರಾಗಿ ನಿರ್ಮಾಪಕರ ನಂಬಿಕೆ ಉಳಿಸಿಕೊಳ್ಳಬೇಕು. ನಿರ್ಮಾಪಕರಿಗೆ ಪ್ರೊಫೆಷನಲಿಸಂ ಇದೆ. ಇಡೀ ಕಲಾವಿದರು ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ. 2025ರ ಸಂಕ್ರಾಂತಿಗೆ ಟೀಸರ್ ರಿಲೀಸ್ ಮಾಡುತ್ತೇವೆ. 4 ಹಾಡುಗಳಿವೆ. ಪ್ರತಿಯೊಬ್ಬ ಮನೆಯಲ್ಲಿಯೂ ಚೌಕಿದಾರ್ ಇರುತ್ತಾರೆ ಅವರ ಕಥೆಯನ್ನು ನಾವು ಹೇಳಿದ್ದೇವೆ. ಗ್ರಾಮಾಂತರ ಪ್ರದೇಶದಿಂದಲೇ ಚಿತ್ರ ಶುರುವಾಗುತ್ತದೆ. ಸಾಯಿ ಕುಮಾರ್ ಸರ್ ಹಾಗೂ ಪೃಥ್ವಿ ತಂದೆ- ಮಗನಾಗಿ ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

    ಧನ್ಯಾ ರಾಮ್ ಕುಮಾರ್ ಮಾತನಾಡಿ, ‘ಚೌಕಿದಾರ್’ ಶೂಟಿಂಗ್ ಮುಗಿದಿದೆ. ಈ ಚಿತ್ರದಲ್ಲಿ ಪಾತ್ರ ಸಿಕ್ಕಿರುವುದು ಖುಷಿ ಜೊತೆಗೆ ಹೆಮ್ಮೆ ಇದೆ. ಈ ಸಿನಿಮಾದಿಂದ ನನಗೆ ಕಲಿಯುವುದು ತುಂಬಾನೇ ಸಿಕ್ತು. ಜರ್ನಿ ಚಾಲೆಂಜಿಂಗ್ ಆಗಿತ್ತು. ಈ ಚಿತ್ರದ ಮೂಲಕ ಒಳ್ಳೆಯ ನಟಿಯಾಗಿ ಬಂದಿದ್ದೇನೆ ಎನಿಸಿತು. ಸಾಯಿಕುಮಾರ್ ಸರ್, ಧರ್ಮ ಸರ್, ಸುಧಾ ರಾಣಿ ಮೇಡಂ, ಶ್ವೇತಾ ಮೇಡಂ, ಪೃಥ್ವಿ ಇವರ ಜೊತೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಿರ್ಮಾಪಕರು ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದರು.

    ಸಾಯಿ ಕುಮಾರ್ ಮಾತನಾಡಿ, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಇದೇ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು , ಕುಂಬಳಕಾಯಿ ಕೂಡ ಇಲ್ಲೇ ಒಡೆಯಲಾಗಿದೆ. ಯಾವ ಸಿನಿಮಾಗೂ ಇದು ಆಗಿಲ್ಲ. ಮಹಾನ್ ಕಾಳಿ ಆಶೀರ್ವಾದ ನಮ್ಮ‌ ಚಿತ್ರಕ್ಕಿದೆ ಅನ್ನುವುದು ಗೊತ್ತಾಗುತ್ತಿದೆ. ಚೌಕಿದಾರ್ ಸಿನಿಮಾದಲ್ಲಿ ಒಂದೊಳ್ಳೆ ಕಲಾವಿದರು ಹಾಗೂ ತಂತ್ರಜ್ಞಾನರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ಇದೊಂದು ಫ್ಯಾಮಿಲಿ ಡ್ರಾಮಾ, ಎಮೋಷನಲ್ ಡ್ರಾಮಾ. ತೆಲುಗಿನಲ್ಲಿ ಹ್ಯಾಟ್ರಿಕ್ ಕೊಟ್ಟೆ. ಸರಿಪೋದ ಶನಿವಾರ, ಲಕ್ಕಿ ಭಾಸ್ಕರ್ 100 ಕೋಟಿ ಕೊಟ್ಟಿವೆ. ಮುಂದಿನ ವರ್ಷ ಕನ್ನಡದಲ್ಲಿ ಹ್ಯಾಟ್ರಿಕ್ ಆಗಲಿ ಎಂದು ಶುಭಕೋರಿದರು.

    ‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ‘ಚೌಕಿದಾರ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ‘ಡೈಲಾಗ್ ಕಿಂಗ್’ ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪೃಥ್ವಿ ಅಂಬಾರ್, ಧನ್ಯಾ ರಾಮ್‌ಕುಮಾರ್ ಹಾಗೂ ಸಾಯಿಕುಮಾರ್ ಕಾಂಬಿನೇಷನ್ ಸಿನಿಪ್ರಿಯರಿಗೆ ಗಮನವನ್ನಂತೂ ಸೆಳೆದಿದೆ. ಶ್ವೇತಾ, ಸುಧಾರಾಣಿ, ಧರ್ಮ ಸೇರಿದಂತೆ ಮತ್ತಿತರ ತಾರಾಬಳಗ ಚಿತ್ರದಲ್ಲಿದೆ.

    ‘ಚೌಕಿದಾರ್’ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ಸಚಿನ್‌ ಬಸ್ರೂರು ಸಂಗೀತವಿದ್ರೆ, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ರವಿ ವರ್ಮಾ ಸಾಹಸ ನಿರ್ದೇಶನ ಸಿನಿಮಾಗಿದೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಲವರ್‌ ಬಾಯ್‌ ಆಗಿದ್ದ ಪೃಥ್ವಿ ಅಂಬಾರ್ ಮಾಸ್ ಲುಕ್ ಕೊಡಲಿದ್ದಾರೆ. ಪೃಥ್ವಿರಾಜ್ ಧಘಾರಿ ಸಹ ನಿರ್ದೇಶನದಲ್ಲಿ ‘ಚೌಕಿದಾರ್’ ಚಿತ್ರ ಮೂಡಿ ಬಂದಿದೆ.

  • ‘ಪೌಡರ್’ ಸಿನಿಮಾದ ಮೊದಲ ಹಂತದ ಶೂಟಿಂಗ್ ಮುಕ್ತಾಯ

    ‘ಪೌಡರ್’ ಸಿನಿಮಾದ ಮೊದಲ ಹಂತದ ಶೂಟಿಂಗ್ ಮುಕ್ತಾಯ

    ದಿಗಂತ್ (Digant) ಮತ್ತು ಧನ್ಯಾ ರಾಮ್ (Dhanya Ram Kumar) ಕಾಂಬಿನೇಷನ್ ನ ಪೌಡರ್ (Powder) ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. ಬಹು ತಾರಾಗಣವನ್ನು ಹೊಂದಿರುವ ಸಿನಿಮಾ ಇದಾಗಿದ್ದು, ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡಿದೆ. ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರದ ಮುಹೂರ್ತ ನಡೆದಿತ್ತು.

    ಪೌಡರ್ ಒಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್ ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂದು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುತ್ತಿದೆ.

    ಜನಾರ್ದನ್ ಚಿಕ್ಕಣ್ಣ (Janardhan Chikkanna) ನಿರ್ದೇಶನದ ಈ ಬಹುತಾರಾಗಣದ ಚಿತ್ರದಲ್ಲಿ ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ-ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.

     

    ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ಪೌಡರ್. ಬಹು ತಾರಾಗಣವಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಿದೆ. 2024ರ ಏಪ್ರಿಲ್ 5 ಚಿತ್ರ‌ ಬಿಡುಗಡೆಯಾಗಲಿದೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಈಗಾಗಲೇ ತಿಳಿಸಿದ್ದಾರೆ.

  • ‘ಪೌಡರ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ಕಿಚ್ಚ ಸುದೀಪ್

    ‘ಪೌಡರ್’ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ ಕಿಚ್ಚ ಸುದೀಪ್

    ನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಈ ಸಿನಿಮಾಗೆ ‘ಪೌಡರ್’ (Powder) ಎಂದು ಹೆಸರಿಡಲಾಗಿದೆ.

    ಪೌಡರ್ ಚಿತ್ರದ ಮುಹೂರ್ತ (Muhurta) ಸಮಾರಂಭವು ವರಮಹಾಲಕ್ಷ್ಮೀ ಹಬ್ಬದಂದು ನಡೆದಿದ್ದು, ಕಿಚ್ಚ ಸುದೀಪ್ (Sudeep) ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ನಿರ್ಮಾಪಕ ಕಾರ್ತಿಕ್ ಗೌಡ ಅವರ ತಂದೆ ರಾಮಕೃಷ್ಣೇಗೌಡ ಕ್ಯಾಮೆರಾ ಸ್ವಿಚ್ ಆನ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.

    ಪೌಡರ್ ಒಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್ ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂದು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುತ್ತಿದೆ.

    ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಈ ಬಹುತಾರಾಗಣದ ಚಿತ್ರದಲ್ಲಿ ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ-ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.  ನಮ್ಮ ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ಪೌಡರ್. ಬಹು ತಾರಾಗಣವಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. 2024ರ ಏಪ್ರಿಲ್ 5 ಚಿತ್ರ‌ ಬಿಡುಗಡೆಯಾಗಲಿದೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ತಿಳಿಸಿದರು.

    ಕೆ.ಆರ್‌.ಜಿ ಸ್ಟುಡಿಯೋಸ್ ಜೊತೆಗೂಡಿ ಈ ಚಿತ್ರ ನಿರ್ಮಾಣ ಮಾಡುತ್ತಿರುವುದಕ್ಕೆ ಟಿವಿಎಫ್ ಸಂಸ್ಥೆಯ ಅರುಣಭ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಕಾಮಿಡಿ ಜಾನರ್ ನ ಈ ಕಥೆ ಎಲ್ಲರಿಗೂ ಹಿಡಿಸಲಿದೆ ಎಂದರು ನಿರ್ದೇಶಕ ಜನಾರ್ದನ್ ಚಿಕ್ಕಣ್ಣ.  ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಎರಡು ದೊಡ್ಡ ಸಂಸ್ಥೆಗಳು ಸೇರಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟಿಸುತ್ತಿರುವುದು ಖುಷಿಯ ವಿಚಾರ ಎನ್ನುತ್ತಾರೆ ನಾಯಕ ದಿಗಂತ್ (Digant).  ಶರ್ಮಿಳಾ ಮಾಂಡ್ರೆ (Sharmila Mandre), ಧನ್ಯ (Dhanya Ram Kumar), ಅನಿರುದ್ಧ್ ಆಚಾರ್ಯ, ಅಚ್ಯುತ ಕುಮಾರ್, ರವಿಶಂಕರ್ ಗೌಡ ಮುಂತಾದ ಕಲಾವಿದರು “ಪೌಡರ್” ಬಗ್ಗೆ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ದೂದ್ ಪೇಡ ದಿಗಂತ್ ಇದೀಗ ಹೊಸ ಸಿನಿಮಾಗಾಗಿ ‘ಗುಳ್ಟು'(Gultoo) ನಿರ್ದೇಶಕನ ಜೊತೆ ಕೈಜೋಡಿಸಿದ್ದಾರೆ. ಅಣ್ಣಾವ್ರ ಮೊಮ್ಮಗಳು ಧನ್ಯಾ ಮತ್ತು ‘ಗಾಳಿಪಟ 2’ ನಟಿ ಶರ್ಮಿಳಾ ಮಾಂಡ್ರೆ (Sharmiela Mandre) ಜೊತೆ ಡ್ಯುಯೇಟ್ ಹಾಡಲು ದಿಗಂತ್ ಮಂಚಾಲೆ (Diganth Manchale) ರೆಡಿಯಾಗಿದ್ದಾರೆ.

    ‘ಗುಳ್ಟು’ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ (Janardhan Chikkanna) ಇದೀಗ ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ.  ನಟ ದಿಗಂತ್ ಕೂಡ ಕಥೆ ಕೇಳಿ ಥ್ರಿಲ್ ಆಗಿ ಸಿನಿಮಾಗೆ ಓಕೆ ಎಂದಿದ್ದಾರೆ. ಇದನ್ನೂ ಓದಿ:ಘೋಸ್ಟ್ ಸಿನಿಮಾ ರಿಲೀಸ್ ಡೇಟ್ ಘೋಷಣೆ: ದಸರಾಗೆ ತೆರೆಯ ಮೇಲೆ ಶಿವಣ್ಣ

    ಈಗಾಗಲೇ ‌’ದಿ ಜಡ್ಜ್‌ಮೆಂಟ್’ ಸಿನಿಮಾದಲ್ಲಿ ದಿಗಂತ್- ಧನ್ಯಾ ಒಟ್ಟಿಗೆ ನಟಿಸಿದ್ದಾರೆ. ಮತ್ತೆ ಈ ಹೊಸ ಚಿತ್ರದ ಮೂಲಕ ದಿಗಂತ್‌ಗೆ ನಟಿ ಧನ್ಯಾ ರಾಮ್‌ಕುಮಾರ್ ಜೊತೆಯಾಗಿದ್ದಾರೆ. ಮತ್ತೊಂದು ವಿಶೇಷ ಅಂದರೆ, 13 ವರ್ಷಗಳ ನಂತರ ಶರ್ಮಿಳಾ ಮಾಂಡ್ರೆ- ದಿಗಂತ್ ಈ ಚಿತ್ರದ ಮೂಲಕ ಒಟ್ಟಿಗೆ ಕಾಣಿಸಿಕೊಳ್ತಿದ್ದಾರೆ.

    2010ರಲ್ಲಿ ‘ಸ್ವಯಂವರ’ ಸಿನಿಮಾದಲ್ಲಿ ದಿಗಂತ್-ಶರ್ಮಿಳಾ ಜೋಡಿಯಾಗಿ ನಟಿಸಿದ್ದರು.  ಗುಳ್ಟು ನಿರ್ದೇಶಕನ ಹೆಸರಿಡದ ಹೊಸ ಸಿನಿಮಾದ ಮೂಲಕ ಧನ್ಯಾ(Dhanya Ramkumar), ಶರ್ಮಿಳಾ, ದಿಗಂತ್ ಜೊತೆಯಾಗಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.‌ ಟ್ರೈಯಾಂಗಲ್‌ ಲವ್‌ ಸ್ಟೋರಿ ಬೆಳ್ಳಿಪರದೆಯಲ್ಲಿ ಹೇಗೆ ಮೂಡಿ ಬರಲಿದೆ ಎಂದು ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅದ್ದೂರಿ ಹಾಡಿಗೆ ಹೆಜ್ಜೆ ಹಾಕಿದ ದಿಗಂತ್ – ಧನ್ಯಾ ರಾಮಕುಮಾರ್

    ಅದ್ದೂರಿ ಹಾಡಿಗೆ ಹೆಜ್ಜೆ ಹಾಕಿದ ದಿಗಂತ್ – ಧನ್ಯಾ ರಾಮಕುಮಾರ್

    ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) (Gururaja Kulkarni) ಇಂದಿನ ಯುವಜನತೆಯ ಮಧ್ಯೆ ಟ್ರೆಂಡ್ ಆಗುವ ಪಬ್ ಸಾಂಗ್ (Song) ಒಂದನ್ನು ಡೆಕ್ ಆಫ್ ಬ್ರೆವ್ಯುಸ್ ಪಬ್ ನಲ್ಲಿ ‘ದ ಜಡ್ಜ್ ಮೆಂಟ್’ (The Judgment) ಚಿತ್ರಕ್ಕಾಗಿ ಅದ್ಧೂರಿಯಾಗಿ ಚಿತ್ರಿಸಿದ್ದಾರೆ.

    ಈ ಹಾಡಿಗೆ ಹೆಜ್ಜೆ ಹಾಕಿದವರು ದಿಗಂತ್ (Digant) ಮತ್ತು ಧನ್ಯಾ ರಾಮಕುಮಾರ್ (Dhanya Ram Kumar). ಇವರಿಬ್ಬರಿಗೂ ಜೊತೆಯಾದವರು ಕಲಾವಿದರಾದ ಅಶ್ವಿನ್, ಸುಶೀಲ್ ನಾಗ್ ಮತ್ತು ಸುವೀಷ್. ಈ ಹಾಡಿಗಾಗಿ ಸುಮಾರು 75 ಜನ ನೃತ್ಯ ಕಲಾವಿದರು ಮತ್ತು 50 ಜನ ಸಹ ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಹಾಡನ್ನು ಸಂಯೋಜಿಸಿದ ಅನೂಪ್ ಸೀಳಿನ್ ಮತ್ತು ಹಾಡು ಬರೆದ ಪ್ರಮೋದ್ ಮರವಂತೆ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

    ಈ ಹಾಡು ವರ್ಷದ ಸೂಪರ್ ಹಿಟ್ ಹಾಡು ಆಗುವದು ಪಕ್ಕಾ ಎನ್ನುವುದು ಚಿತ್ರೀಕರಣದಲ್ಲಿ ಭಾಗಿಯಾದವರ ಅನಿಸಿಕೆ. ಹೊಸತನದ ಬೀಟ್ಸ್ ಇರುವ ಈ ಹಾಡಿಗಾಗಿ, ಬಾಲಿವುಡ್ ನಿಂದ ಊರ್ವಶಿ ಮತ್ತು ಗೋವಾದಿಂದ ಸಾನಿಯಾರವರನ್ನು ಸಿನಿಮಾ ತಂಡ ವಿಶೇಷವಾಗಿ ಆಹ್ವಾನಿಸಿದ್ದರು. ಹಾಡಿನ ನೃತ್ಯ ಸಂಯೋಜನೆ ಮಾಡಿದ್ದು ಯುವ ನಿರ್ದೇಶಕ ರಾಮ್ ಕಿರಣ್ ಮತ್ತು ಅವರ ತಂಡ.

    ದ  ಜಡ್ಜ್ ಮೆಂಟ್ ಕಥೆ ಲೀಗಲ್ ಥ್ರಿಲ್ಲರ್ ಶೈಲಿಯಾಗಿದ್ದು, ಇಂದಿನ ಪ್ರಸ್ತುತ ವಿದ್ಯಮಾನಗಳನ್ನು, ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವುದು ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) ಅವರ  ಗಟ್ಟಿ ನಂಬಿಕೆ.

    ಕ್ರೇಜಿ ಸ್ಟಾರ್ ವಿ. ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ. ಎಸ್. ನಾಗಾಭರಣ, ಪ್ರಕಾಶ ಬೆಳವಾಡಿ, ಕೃಷ್ಣ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ್, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ ಈ ಚಿತ್ರಕಿದ್ದರೆ ಪಿ. ಕೆ. ಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ, ಪ್ರಮೋದ್ ಮರವಂತೆ ಗೀತರಚನೆ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನವಿದೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಸ್ಕ್ರಿಪ್ಟ್ ಸೂಪರವೈಸರ್ ಆಗಿ ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧನ್ಯಾ ರಾಮ್ ಕುಮಾರ್ ನಟನೆ ‘ಹೈಡ್ ಅಂಡ್ ಸೀಕ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಧನ್ಯಾ ರಾಮ್ ಕುಮಾರ್ ನಟನೆ ‘ಹೈಡ್ ಅಂಡ್ ಸೀಕ್’ ಚಿತ್ರದ ಫಸ್ಟ್ ಲುಕ್ ರಿಲೀಸ್

    ಕ್ಷ್ಮಣ ಖ್ಯಾತಿಯ ನಟ ಅನೂಪ್ ರೇವಣ್ಣ (Anoop Revanna) ನಟಿಸಿರುವ ‘ಹೈಡ್ ಅಂಡ್ ಸೀಕ್’ (Hide and Seek) ಚಿತ್ರವು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದೆ. ಪುನೀತ್ ನಾಗರಾಜು ಅವರ ನಿರ್ದೇಶನದ ಈ ಚಿತ್ರದಲ್ಲಿ ಅನೂಪ್ ರೇವಣ್ಣ ಒಬ್ಬ ಕಿಡ್ನಾಪರ್  ಆಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ (First Look) ಪೋಸ್ಟರ್ ಹಾಗೂ ಮೇಕಿಂಗ್ ವೀಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು  ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದರೆ, ಮಾಜಿಸಚಿವ ಹೆಚ್.ಎಂ.ರೇವಣ್ಣ ಅವರು  ಮೇಕಿಂಗ್ ವೀಡಿಯೋ ಲಾಂಚ್  ಮಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಂ.ರೇವಣ್ಣ ಪುನೀತ್ ನನ್ನಬಳಿ ಬಂದು ಸಿನಿಮಾ ಮಾಡುತ್ತೇವೆ ಅಂದಾಗ ಸಂತೋಷವಾಯಿತು. ಚಿತ್ರದ ಸನ್ನಿವೇಶಗಳು ಕುತೂಹಲಕರವಾಗಿವೆ. ನಾಗರಾಜ್ ಅವರ ಪ್ರಯತ್ನ ಯಶಸ್ವಿಯಾಗಲಿ. ಇವತ್ತು ಕನ್ನಡ ಚಿತ್ರರಂಗ ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಪಡೆದಿದೆ. ಈ ಸಿನಿಮಾ ಕೂಡ ಅಂಥಾ ಚಿತ್ರಗಳ ಸಾಲಿಗೆ ಸೇರಲಿ ಎಂದು ಹಾರೈಸಿದರು,. ಇದನ್ನೂ ಓದಿ:ಬರ್ತ್‌ಡೇ ಬಗ್ಗೆ ಅಪ್‌ಡೇಟ್ ನೀಡಿದ ರಾಧಿಕಾ ಪಂಡಿತ್

    ನಂತರ  ಮಾತನಾಡಿದ  ಪುನೀತ್ ನಾಗರಾಜು ಯುವತಿಯ ಅಪಹರಣದ ಸುತ್ತ ನಡೆಯುವ  ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ 30 ದಿನಗಳ ಕಾಲ ಚಿತ್ರೀಕರಿಸಿದ್ದೇವೆ.  ಚಿತ್ರದಲ್ಲಿ ನಾಯಕನೇ  ಕಿಡ್ನಾಪರ್ ಆಗಿದ್ದು, ಧನ್ಯ ರಾಮ್‌ಕುಮಾರ್ ಒಬ್ಬ ಬ್ಯುಸಿನೆಸ್‌ಮ್ಯಾನ್ ಮಗಳಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಿವರ್ಸ್ ಸ್ಕ್ರೀನ್ ಪ್ಲೈ ಮೂಲಕ ಕಥೆ ಹೇಳಲು ಟ್ರೈ ಮಾಡಿದ್ದೇವೆ, ಫಸ್ಟ್ ಹಾಫ್ ಡೈರೆಕ್ಟರ್ ಪಾಯಿಂಟ್ ಆಫ್  ವ್ಯೂನಲ್ಲಿ ಚಿತ್ರ ಬಂದರೆ, ಸೆಕೆಂಡ್ ಹಾಫ್‌ನಲ್ಲಿ ಅದೇ ಸೀನ್ ಬೇರೆ ರೀತಿ ನಡೆಯುತ್ತೆ  ಎಂದು ಹೇಳಿದರು, ಸಹ ನಿರ್ಮಾಪಕ ವಸಂತರಾವ್ ಕುಲಕರ್ಣಿ ಮಾತನಾಡಿ ಪುನೀತ್ ಈ ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ನಾನು ಒಬ್ಬ ಕಲಾನಿರ್ದೇಶಕ. ಇಷ್ಟು ದಿನದ ಸಂಪಾದನೆಯನ್ನು ಈ ಚಿತ್ರಕ್ಕೆ ಹಾಕಿದ್ದೇನೆ ಎಂದು ಹೇಳಿದರು.

    ನಾಯಕ ಅನೂಪ್ ಮಾತನಾಡುತ್ತ ನಿರ್ದೇಶಕರು  ಒಳ್ಳೇ ಕಥೆ ಮಾಡಿಕೊಂಡಿದ್ದರು. ನನ್ನ ಹಿಂದಿನ ಚಿತ್ರದ  ಪಾತ್ರಕ್ಕೂ ಇದಕ್ಕೂ ವ್ಯತ್ಯಾಸವಿದೆ. ಜಾಸ್ತಿ ಮಾತಾಡದ, ಯಾವುದನ್ನೂ ಎಕ್ಸ್ ಪ್ರೆಷನ್ ಮಾಡದಂಥ ವ್ಯಕ್ತಿ. ನಾನಿಲ್ಲಿ ಹೀರೋ, ವಿಲನ್ ಎರಡೂ ಥರದ ಕ್ಯಾರೆಕ್ಟರ್ ಪ್ಲೇ ಮಾಡಿದ್ದೇನೆ  ಎಂದು ಹೇಳಿದರು.

    ನಂತರ ನಾಯಕಿ ಧನ್ಯಾ ರಾಮ್‌ಕುಮಾರ್ (Dhanya Ram Kumar) ಮಾತನಾಡುತ್ತ ಈ ಸ್ಕ್ರಿಪ್ಟ್ ಕೇಳಿದಾಗಲೇ ನನಗೆ ಇಷ್ಟವಾಯ್ತು, ಮಿಸ್ಟ್ರಿ ಥ್ರಿಲ್ಲರ್, ಅದಕ್ಕೇ  ನಾನು ನನ್ನ ಎರಡನೇ ಚಿತ್ರವಾಗಿ ಈ ಸಿನಿಮಾ ಸೆಲೆಕ್ಟ್ ಮಾಡಿಕೊಂಡೆ. ಚಿತ್ರದಲ್ಲಿ ನಾನು ಅಪ್ಪನ ಮುದ್ದಿನ ಮಗಳು,  ತುಂಬಾ ಟ್ವಿಸ್ಟ್ ಅಂಡ್ ಟರ್ನ್ ಇರುವ ಚಿತ್ರ. ಕೊನೇತನಕ ಏನಾಗುತ್ತೆ ಅಂತ ಗೊತ್ತಾಗಲ್ಲ ಎಂದು ಹೇಳಿದರು. ಉಳಿದಂತೆ ಮೈತ್ರಿ ಜಗ್ಗಿ, ರಕ್ಷಾ ಉಮೇಶ್ ತಮ್ಮ ಪಾತ್ರಗಳ   ಬಗ್ಗೆ ಹೇಳಿಕೊಂಡರು,  ಸುನೇರಿ ಆರ್ಟ್ ಕ್ರಿಯೇಶನ್ಸ್ ಮ‌ೂಲಕ ಪುನೀತ್ ನಾಗರಾಜು, ವಸಂತ್ ರಾವ್ ಎಂ. ಕುಲಕರ್ಣಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಿಜೋ ಪಿ.ಜಾನ್ ಅವರ ಛಾಯಾಗ್ರಾಹಣ, ಸ್ಯಾಂಡಿ ಅದಾನ್ಕಿ  ಅವರ ಸಂಗೀತ ನಿರ್ದೇಶನ, ಮಧು ತುಂಬಕೆರೆ  ಅವರ ಸಂಕಲನ ಚಿತ್ರಕ್ಕಿದೆ.

  • ಪುನೀತ್ ಗಾಗಿ ಹಾಡಿದ ಅಪ್ಪು ಅಕ್ಕನ ಮಗಳು ನಟಿ ಧನ್ಯಾ ರಾಮ್ ಕುಮಾರ್

    ಪುನೀತ್ ಗಾಗಿ ಹಾಡಿದ ಅಪ್ಪು ಅಕ್ಕನ ಮಗಳು ನಟಿ ಧನ್ಯಾ ರಾಮ್ ಕುಮಾರ್

    ರಾಜಕುಮಾರ ಸಿನಿಮಾದ ‘ಬೊಂಬೆ ಹೇಳುತೈತೆ..’ ಹಾಡು ಸಿನಿಮಾ ರಿಲೀಸ್ ಆದ ವೇಳೆ ಮತ್ತು ನಂತರವೂ ಕೋಟಿ ಕೋಟಿ ಕಂಗಳನ್ನು ಒದ್ದೆಯಾಗಿಸಿತ್ತು. ಹೃದಯ ಭಾವುಕತೆಯಿಂದ ಒದ್ದೆಯಾಗಿತ್ತು. ಪುನೀತ್ ನಿಧನದ ನಂತರ ಮತ್ತಷ್ಟು ಕಾಡಿದ ಹಾಡಿದು. ಇದೇ ಸಾಹಿತ್ಯವನ್ನು ಸ್ವಲ್ಪ ಹಿಂದೆ ಮುಂದೆ ಮಾಡಿಕೊಂಡು ನಾಗೇಂದ್ರ ಪ್ರಸಾದ್ ಕೂಡ ‘ಗೊಂಬೆ ಹೇಳಲಿಲ್ಲ’ ಎಂದು ಹಾಡು ಬರೆದರು. ಇದೀಗ ಗೊಂಬೆ ಹೇಳತೈತಿ ಹಾಡಿಗೆ ಧನ್ಯಾ ರಾಮ್ ಕುಮಾರ್ ಧ್ವನಿಯಾಗಿದ್ದಾರೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ಏಪ್ರಿಲ್ 24 ರಂದು ತಮ್ಮ ತಾತ (ಡಾ.ರಾಜ್ ಕುಮಾರ್) ಹುಟ್ಟು ಹಬ್ಬಕ್ಕೆ ಮಾವ (ಪುನೀತ್) ನಟಿಸಿರುವ ರಾಜಕುಮಾರ್ ಸಿನಿಮಾದ ‘ಬೊಂಬೆ ಹೇಳುತೈತೆ’ ಗೀತೆಗೆ ಧ್ವನಿಯಾಗಿದ್ದಾರೆ ಪುನೀತ್ ಅವರ ಸಹೋದರಿ ಪೂರ್ಣಿಮಾ ಅವರ ಪುತ್ರ, ನಟಿ ಧನ್ಯ ರಾಮ್ ಕುಮಾರ್. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ಮೂಲ ಹಾಡನ್ನು ಹಾಡಿದ್ದು ವಿಜಯ ಪ್ರಕಾಶ್. ಆನಂತರ ಬೇರೆ ಬೇರೆಯವರು ಈ ಹಾಡಿಗೆ ಧ್ವನಿಯಾಗಿ ತಮ್ಮಿಷ್ಟದಂತೆ ಹಾಡುತ್ತಿದ್ದರು. ಸ್ವತಃ ಪುನೀತ್ ರಾಜ್ ಕುಮಾರ್ ಅವರೇ ಈ ಹಾಡನ್ನು ಹಲವು ವೇದಿಕೆಗಳಲ್ಲಿ ಹಾಡಿದ್ದೂ ಇದೆ. ಈಗ ಮೊದಲ ಬಾರಿಗೆ ಧನ್ಯಾ ರಾಮ್ ಈ ಗೀತೆಗೆ ದನಿಯಾಗಿದ್ದಾರೆ. ಅಪ್ಪು ಫೋಟೋ ಇರೊ ಹೆಡ್‍ಸೆಟ್ ಹಾಕಿಕೊಂಡು ಈ ಗೀತೆಯನ್ನು ಹಾಡಿದ್ದಾರೆ. ಇದನ್ನೂ ಓದಿ : ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಸಿನಿಮಾ ಅಷ್ಟೇ : ಬಾಲಿವುಡ್ ವಿರುದ್ಧ ಕಿಚ್ಚ ಸುದೀಪ್ ಗುಡುಗು

    ಧನ್ಯಾ ರಾಮ್ ಕುಮಾರ್ ಅವರನ್ನು ಕಂಡರೆ ಡಾ.ರಾಜ್ ಕುಮಾರ್ ಅವರಿಗೆ ಎಲ್ಲಿಲ್ಲದ ಪ್ರೀತಿ. ಪುನೀತ್ ಅವರಿಗೂ ಧನ್ಯಾ ಮೇಲೆ ಅಕ್ಕರೆ. ಹೀಗಾಗಿಯೇ ಇಬ್ಬರಿಗಾಗಿ ಈ ಗೀತೆಯನ್ನು ಧನ್ಯಾ ಹಾಡಿದ್ದಾರೆ. ಹಾಡಿನ ಮೂಲಕ ಇಬ್ಬರೂ ಮಹಾನ್ ಕಲಾವಿದರನ್ನು ನೆನೆದಿದ್ದಾರೆ.

  • ಕಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರಾ ಡಾ. ರಾಜ್‌ಕುಮಾರ್ ಮೊಮ್ಮಗಳು?

    ಕಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರಾ ಡಾ. ರಾಜ್‌ಕುಮಾರ್ ಮೊಮ್ಮಗಳು?

    ಬೆಂಗಳೂರು: ವರನಟ ಡಾ. ರಾಜ್ ಕುಮಾರ್‍ರವರ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಕಾಲಿವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿಯೊಂದು ಇದೀಗ ಗಾಂಧೀನಗರದಲ್ಲಿ ಹರಿದಾಡುತ್ತಿದೆ.

    ನಿನ್ನ ಸನಿಹಕೆ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಪಾದರ್ಪಣೆ ಮಾಡಿರುವ ಧನ್ಯಾ ರಾಮ್ ಕುಮಾರ್ ಈ ಚಿತ್ರದಲ್ಲಿ ನಟ ಸೂರಜ್ ಗೌಡಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಸಿನಿಮಾ ಆಗಸ್ಟ್ 20ರ ವರಮಹಾಲಕ್ಷ್ಮಿ ಹಬ್ಬದಂದು ಸಿನಿಮಾ ಬೆಳ್ಳಿ ಪರದೆ ಮೇಲೆ ಬರಲಿದೆ ಎಂದು ಚಿತ್ರತಂಡ ಹೇಳುತ್ತಿದೆ.

    ಈ ಮಧ್ಯೆ ಧನ್ಯಾ ರಾಮ್ ಕುಮಾರ್‍ಗೆ ತಮಿಳು ಚಿತ್ರರಂಗದಿಂದ ಆಫರ್‌ವೊಂದು ಬಂದಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ವಿಚಾರವಾಗಿ ಕೆಲವು ತಮಿಳು ವೆಬ್‍ಸೈಟ್‍ಗಳಲ್ಲಿ ಸದ್ಯದಲ್ಲಿಯೇ ಧನ್ಯಾ ರಾಮ್ ಕುಮಾರ್ ತಮಿಳು ಸಿನಿಮಾವೊಂದಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ವರದಿ ಮಾಡಿದೆ. ಆದರೆ ಧನ್ಯಾ ರಾಮ್ ಕುಮಾರ್ ಅಭಿನಯಿಸುತ್ತಿರುವ ಚಿತ್ರ ಯಾವುದು, ನಿರ್ದೇಶಕ, ನಟ ಯಾರು ಎಂಬ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ದೊರೆತಿಲ್ಲ.

    ಈ ವಿಚಾರವಾಗಿ ತಮಿಳು ಚಿತ್ರ ವಿಶ್ಲೇಷಕ ಕೌಶಿಕ್ ಧನ್ಯಾ ರಾಮ್ ಸಿನಿಮಾ ಕುರಿತಂತೆ ಆದಷ್ಟು ಬೇಗ ವಿವರಗಳು ಸಿಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ ಕಲಾವಿದೆ ಜಯಂತಿ: ಗಣ್ಯರ ಸಂತಾಪ

  • ಚಿತ್ರರಂಗಕ್ಕೆ ಅಣ್ಣಾವ್ರ ಮೊಮ್ಮಗಳು ಎಂಟ್ರಿ

    ಚಿತ್ರರಂಗಕ್ಕೆ ಅಣ್ಣಾವ್ರ ಮೊಮ್ಮಗಳು ಎಂಟ್ರಿ

    ಬೆಂಗಳೂರು: ಡಾ. ರಾಜ್‍ಕುಮಾರ್ ಕುಟುಂಬದಿಂದ ಈಗಾಗಲೇ ಇಬ್ಬರು ಮೊಮ್ಮಕ್ಕಳು ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗ ಅವರ ಮೊಮ್ಮಗಳು ಮೊದಲ ಬಾರಿಗೆ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

    ಪೂರ್ಣಿಮ ಮತ್ತು ರಾಮ್‍ಕುಮಾರ್ ಮಗಳು ಧನ್ಯಾ ರಾಮ್ ಕುಮಾರ್ ಸಿನಿಮಾಗೆ ಎಂಟ್ರಿ ಕೊಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನೃತ್ಯ, ಫಿಟ್ನೆಸ್, ನಟನೆ ಸೇರಿದಂತೆ ಮುಂತಾದ ತರಬೇತಿ ಪಡೆಯುತ್ತಿದ್ದಾರೆ.

    ನಟ ಸೂರಜ್ ಗೌಡ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಧನ್ಯಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಬರುತ್ತಿದ್ದಾರೆ. ಇನ್ನೂ ಹೆಸರಿಡದ ಸಿನಿಮಾಗೆ ಸೂರಜ್ ಗೌಡ ಕಥೆ ಬರೆದಿದ್ದು, ನಾಯಕನಾಗಿ ಮಿಂಚುವ ಜೊತೆಗೆ ಮೊದಲ ಬಾರಿಗೆ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಮೊದಲ ಬಾರಿಗೆ ಸುಮನ್ ಜಾದೂಗಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

    ಸದ್ಯಕ್ಕೆ ಚಿತ್ರತಂಡ ಪ್ರೀ ಪ್ರೊಡಕ್ಷನ್ ನಲ್ಲಿ ಬ್ಯುಸಿಯಿದ್ದು, ಮುಂದಿನ ತಿಂಗಳು ಜುಲೈನಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾಗೆ ರಘು ದೀಕ್ಷಿತ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

    ಈಗಾಗಲೇ ಪೂರ್ಣಿಮಾ, ರಾಮ್ ಕುಮಾರ್ ದಂಪತಿಯ ಮಗ ಧೀರನ್ ರಾಮ್‍ಕುಮಾರ್ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ರಾಘವೇಂದ್ರ ರಾಜ್‍ಕುಮಾರ್ ಮಗ ವಿನಯ್ ರಾಜ್ ಕುಮಾರ್ ಮೂರು ಸಿನಿಮಾಗಳಲ್ಲಿ ಅಭಿನಯಸಿದ್ದು, ಇನ್ನೂ ಎರಡು-ಮೂರು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.