Tag: ಧರ್ಮದಂಗಲ್

  • ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

    ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

    ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ.

    ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ವ್ಯಾಪಾರ ಧರ್ಮದಂಗಲ್ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂವಿಧಾನದ ಪ್ರಕಾರ ದೇಶ ನಡೆಯಬೇಕು, ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು ಎಂದರು. ಇದನ್ನೂ ಓದಿ: ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    ಅವರು (ವಿಹೆಚ್‍ಪಿ, ಬಜರಂಗದಳ) ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ. ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆ ಇಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    – ಹಿಂದೂ ಅಂಗಡಿಗಳ ಮುಂದೆ ಭಗವಾಧ್ವಜ

    ಮಂಗಳೂರು: ಮಂಗಳಾದೇವಿ ದೇವಸ್ಥಾನದ (Mangaladevi Temple) ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್ ಆರಂಭವಾಗಿದೆ.

    ಹಿಂದೂ ಸಂಘಟನೆಗಳ ವಿರೋಧದ ನಡುವೆಯೂ ಮುಸ್ಲಿಂ ವ್ಯಾಪಾರಿಗಳಿಗೆ ದ.ಕ ಜಿಲ್ಲಾಡಳಿತ ಅವಕಾಶ ನೀಡಿದೆ. ಹೀಗಾಗಿ ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡುವಂತೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಇದನ್ನೂ ಓದಿ: ಒರಿಜಿನಲ್ ಅಂತ ಸಿಎಂ ಇಬ್ರಾಹಿಂ ಬೋರ್ಡ್ ಹಾಕಿಕೊಳ್ಳಲಿ: ಹೆಚ್‍ಡಿಕೆ

    ಜಾತ್ರೋತ್ಸವದಲ್ಲಿ ವಿಶ್ವಹಿಂದೂಪರಿಷತ್-ಬಜರಂಗದಳ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ಭಗವಾಧ್ವಜ ಅಳವಡಿಸಿದ್ದಾರೆ. ವಿಎಚ್‍ಪಿ ಮುಖಂಡ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿ ಗುರುತುಗಾಗಿ ಭಗವಾಧ್ವಜ ಹಾಕಿದ್ದಾರೆ.

    ದೇವಸ್ಥಾನದ ಆಸು-ಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು. ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಅವಕಾಶ ಇಲ್ಲ. ನಮ್ಮ ದೇವಸ್ಥಾನದಲ್ಲಿ ವ್ಯಾಪಾರ ಮಾಡೋದು ಹಿಂದೂ ವ್ಯಾಪಾರಿಗಳ ಹಕ್ಕು. ಮುಸ್ಲಿಂ ವ್ಯಾಪಾರಿಗಳೂ ಈಗ ಕೈಗೆ ನೂಲು, ಶಾಲು ಹಾಕಿ ವ್ಯಾಪಾರ ಮಾಡುತ್ತಾರೆ. ಅದಕ್ಕಾಗಿ ಗುರುತಿಗಾಗಿ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮುಂದೆ ಭಗವಾಧ್ವಜ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾವು ಧರ್ಮದ ಅಫೀಮು ತಿಂದಿದ್ದೇವೆ, ಅದರ ನಶೆ ದಾರಿತಪ್ಪಿಸುತ್ತಿದೆ: ಶ್ರೀನಿವಾಸಪ್ರಸಾದ್

    ನಾವು ಧರ್ಮದ ಅಫೀಮು ತಿಂದಿದ್ದೇವೆ, ಅದರ ನಶೆ ದಾರಿತಪ್ಪಿಸುತ್ತಿದೆ: ಶ್ರೀನಿವಾಸಪ್ರಸಾದ್

    ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಸಂಸದ ವಿ.ಶ್ರೀನಿವಾಸಪ್ರಸಾದ್, ನಾವೆಲ್ಲರೂ ಧರ್ಮದ ಅಫೀಮು ತಿಂದಿದ್ದೇವೆ. ಅದರ ನಶೆ ನಮ್ಮನ್ನು ಹೇಗೇಗೋ ಆಡಿಸುತ್ತಾ ದಾರಿ ತಪ್ಪಿಸುತ್ತಿದೆ ಎಂದು ಹೇಳಿದ್ದಾರೆ.

    ಚಾಮರಾಜನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಧರ್ಮವನ್ನು ಮನುಷ್ಯನ ಒಳಿತಿಗಾಗಿ ಉಪಯೋಗಿಸಬೇಕು. ಆದರೆ ಇಂದು ಧರ್ಮದ ವೈಭವೀಕರಣ ಆಗುತ್ತಿದೆಯೇ ಹೊರತು ಒಳಿತಿಗಾಗಿ ಉಪಯೋಗ ಆಗುತ್ತಿಲ್ಲ. ಎಲ್ಲರಿಗೂ ಈ ಕೊರಗು ಇದ್ದೇ ಇದೆ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ಕೋಮು ಗಲಭೆಗೆ ಕಾಂಗ್ರೆಸ್, ಬಿಜೆಪಿನೇ ನೇರ ಕಾರಣ: ಹೆಚ್.ಡಿ. ದೇವೇಗೌಡ

    Shirinivas prasad (1)

    ನಮ್ಮ ಧರ್ಮ ಹಾಗಿದೆ, ಹೀಗಿದೆ ಎನ್ನುವುದು ಬಿಟ್ಟು, ಅದರ ಒಳಿತನ್ನು ಸಮಾಜಕ್ಕೆ ಹಂಚಬೇಕು. ಆದರೆ ನಾವು ಧರ್ಮದ ಅಫೀಮನ್ನು ತಿಂದಿದ್ದೇವೆ. ಅದರ ನಶೆ ನಮ್ಮ ದಾರಿ ತಪ್ಪಿಸುತ್ತಿದೆ. ಸಮಾಜದ ಇತ್ತೀಚಿನ ಬೆಳವಣಿಗೆಗಳು ನೋವುಂಟುಮಾಡಿವೆ ಎಂದು ವಿಷಾದ ವ್ಯಕ್ತಪಡಿಸಿದರು.

    ಬಿಜೆಪಿಯ 150 ಸ್ಥಾನ ಬಂದೇ ಬರುತ್ತದೆ ಎನ್ನುವ ಕುರಿತು ಪ್ರತಿಕ್ರಿಯಿಸಿ, ಆಡಳಿತ ವಿರೋಧಿ ಸನ್ನಿವೇಶವಿದ್ದರೂ ನಾಲ್ಕು ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅದೇ ರೀತಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಏಕೆಂದರೆ ಬಿಜೆಪಿ ಶಕ್ತಿಯುತವಾಗಿ ಹೋರಾಟ ನಡೆಸಿದ್ದು, ಜನರೂ ಪಕ್ಷದ ಆಡಳಿತವನ್ನು ಮೆಚ್ಚಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    Yogi Adityanath

    ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಆಡಳಿತ ಉತ್ತಮವಾಗಿದೆ, ಗೂಂಡಾಗಿರಿ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲಿನ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಅಗತ್ಯ ವಸ್ತುಗಳು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಕೋವಿಡ್ ಏರಿಕೆ ಈ ಎಲ್ಲ ಸಂಕಷ್ಟ ನಡುವೆಯೂ ಜನರು ಬಿಜೆಪಿ ಗೆಲ್ಲಿಸಿದ್ದಾರೆ. ಇದರಿಂದ ಬಿಜೆಪಿ ಒಂದು ಸಂಘಟಿತ ಪಕ್ಷವಾಗಿದೆ ಎಂಬುದು ತಿಳಿಯುತ್ತದೆ ಎಂದು ಶ್ಲಾಘಿಸಿದರು.