ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ (Dharmasthala Case) ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ (Chinnayya) ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ.
ಎಸ್ಐಟಿ ತನಿಖೆ ವೇಳೆ 6ನೇ ಸ್ಪಾಟ್‌ನಲ್ಲಿ ಸಿಕ್ಕಿದ್ದು 35 ವರ್ಷ ಪುರುಷನ ಬುರುಡೆ. ಸ್ಪಾಟ್ ನಂ.11 ರಲ್ಲಿ ಬುರುಡೆಯೊಂದು ಭೂಮಿಯ ಮೇಲೆ ಪತ್ತೆಯಾಗಿತ್ತು. ಈ ಬುರುಡೆಯೂ ಪುರುಷನದ್ದು ಎಂದು ಸಾಬೀತಾಗಿದ್ದು, ಈ ಬುರುಡೆಯು ಒಂದು ವರ್ಷ ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯದ್ದು ಎಂದು ಶಂಕಿಸಲಾಗಿದೆ.
ಎಸ್‌ಐಟಿ ಅಧಿಕಾರಿಗಳು ಮೂರು ಬುರುಡೆಗೂ ಪ್ರತ್ಯೇಕ ಎಫ್‌ಐಆರ್ ದಾಖಲು ಮಾಡಿದ್ದಾರೆ.
ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ (SIT) ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಮೋಸ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ (Congress) ಮಾಡಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್‌ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು: ಡಿಕೆಶಿ ಬಾಂಬ್
ಡಿಕೆ ಶಿವಕುಮಾರ್ ಅವರು ಸದನದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದರು. ಆದರೆ ಷಡ್ಯಂತ್ರ ಮಾಡಿದವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್
ಮಂಗಳೂರು: ಹಣದ ಆಸೆಗಾಗಿ ಷಡ್ಯಂತ್ರಕ್ಕೆ ಒಳಗಾದೆ ಎಂದು ಚಿನ್ನಯ್ಯ (Chinnaiah) ಎಸ್‌ಐಟಿ (SIT) ಕಚೇರಿಯಲ್ಲೇ ನನ್ನ ಕಾಲಿಗೆ ಬಿದ್ದಿದ್ದ ಎಂದು ನೇತ್ರಾವತಿ ಸ್ನಾನಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕರಾಗಿದ್ದ ಸುಂದರ ಗೌಡ (Sundar Gowda) ಬಜಿಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಾನು 1996ರಿಂದ 2000ದ ತನಕ ನೇತ್ರಾವತಿ ಸ್ನಾನ ಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕನಾಗಿದ್ದೆ. ಆ ಸಂದರ್ಭದಲ್ಲಿ ಚಿನ್ನಯ್ಯ, ಅಕ್ಕ, ಅಣ್ಣ, ಬಾವ, ಅತ್ತಿಗೆ ಎಲ್ಲರೂ ಶುಚಿತ್ವದ ಕೆಲಸ ಮಾಡುತ್ತಿದ್ದರು. ಶುಚಿತ್ವ ಕೆಲಸಕ್ಕೆಂದೇ ಆತನನ್ನು ನೇಮಕ ಮಾಡಿದ್ದು, ಅದನ್ನೇ ಮಾಡುತ್ತಿದ್ದ. ಚಿನ್ನಯ್ಯ ಹೇಳಿದ್ದು ಎಲ್ಲವೂ ಸತ್ಯಕ್ಕೆ ದೂರವಾದ ವಿಚಾರ. ಕ್ಷೇತ್ರದ ಹೆಸರು ಹಾಳು ಮಾಡಬೇಕು, ಷಡ್ಯಂತ್ರ ಮಾಡಬೇಕು ಎಂಬುದೇ ಆತನ ಉದ್ದೇಶವಾಗಿತ್ತು ಎಂದು ಕಿಡಿಕಾರಿದರು. ಇದನ್ನೂ ಓದಿ: ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ
ನೇತ್ರಾವತಿ ನದಿಯಲ್ಲಿ ಶವ ತೇಲುತ್ತಾ ಬಂದರೆ ನಾವು ಅದನ್ನ ಹೂತು ಹಾಕುವ ಕೆಲಸ ಮಾಡೋದಿಲ್ಲ. ಏನಿದ್ರೂ ಪೊಲೀಸರಿಗೆ ತಿಳಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದೆವು. ಆತ ಮೃತದೇಹವನ್ನ ಕಾರಿಗೆ ಶಿಫ್ಟ್ ಮಾಡುವ, ಪೊಲೀಸರ ಜೊತೆ ಆಸ್ಪತ್ರೆಗೆ ಹೋಗುವ ಕೆಲಸ ಮಾಡುತ್ತಿದ್ದ. ಒಂದೇ ಒಂದು ಶವ ಹೂತಾಕುವ ಕೆಲಸ ಆತ ಮಾಡಿಲ್ಲ. ಎಸ್‌ಐಟಿ ಅಧಿಕಾರಿಗಳು ನನ್ನನ್ನು ಕರೆದಿದ್ದರು. ನಿಮ್ಮ ಮೇಲೆ ಆರೋಪಿ ಚಿನ್ನಯ್ಯ ಅಪವಾದ ಹಾಕಿದ್ದಾನೆ ಎಂದಿದ್ದರು. ಆತ ಶವ ಹೂತಿಟ್ಟ ವಿಚಾರದಲ್ಲಿ ನನ್ನ ಮೇಲೆ ಅಪವಾದ ಹಾಕಿದ್ದ. ಎರಡನೇ ಬಾರಿ ವಿಚಾರಣೆಗೆ ಚಿನ್ನಯ್ಯ ಹಾಗೂ ನನ್ನನ್ನು ಒಟ್ಟಿಗೆ ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ ನಾನು ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ, ನಾನು ದುಡ್ಡಿನ ಆಸೆಗೆ ಇದೆಲ್ಲವನ್ನೂ ಮಾಡಿದ್ದು, ನನ್ನದು ತಪ್ಪಾಯ್ತು, ನನ್ನನ್ನು ಬಚಾವ್ ಮಾಡಿ ಎಂದು ಕಾಲಿಗೆ ಬಿದ್ದಿದ್ದ ಎಂದರು. ಇದನ್ನೂ ಓದಿ: ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ
ಎಲ್ಲ ಕೆಲಸ ಚೆನ್ನಾಗಿ ಮಾಡುತ್ತಿದ್ದ, ಆತನಿಗೆ ಎಲ್ಲವೂ ಕ್ಷೇತ್ರದಿಂದ ಕೊಡಲಾಗಿತ್ತು. ಊಟ, ವಸತಿ, ಸಂಬಳ ಎಲ್ಲವೂ ಆತನಿಗೆ ನೀಡಲಾಗುತ್ತಿತ್ತು. ಊರಿಗೆ ಹೋಗುವ ಖರ್ಚನ್ನು ಕೂಡ ಕ್ಷೇತ್ರ ನೀಡುತ್ತಿತ್ತು. ಕ್ಷೇತ್ರವನ್ನು ಮಲಿನ ಮಾಡಬೇಕು, ಪೂಜ್ಯರಿಗೆ ಕಳಂಕ ತರುವ ಉದ್ದೇಶದಿಂದ ಗ್ಯಾಂಗ್ ಮಾಡಿದ ಷಡ್ಯಂತ್ರಕ್ಕೆ ಆತ ಬಲಿಯಾಗಿದ್ದಾನೆ. ಈಗ ಸತ್ಯ ದರ್ಶನ ಹೊರಗೆ ಬರುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ (Dharmasthala Case) ರಾಜ್ಯ ಸರ್ಕಾರ (Congress) ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕ, ಎಂಎಲ್‌ಸಿ ರವಿಕುಮಾರ್ (N Ravikumar) ಆಗ್ರಹ ಮಾಡಿದ್ದಾರೆ.
ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಸುಳ್ಳು ಹೇಳಿದ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ ಮಾಡಿರುವ ಎಲ್ಲರೂ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದರು. ಸುಪ್ರೀಂಕೋರ್ಟ್ ಅವರ ಅರ್ಜಿ ವಜಾ ಮಾಡಿತ್ತು. ಕೋರ್ಟ್‌ಗೆ ಅರ್ಜಿ ಹಾಕಿರೋರಿಗೆ ಸುಪ್ರೀಂಕೋರ್ಟ್ ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಬುರುಡೆ ಗ್ಯಾಂಗ್ ಅರ್ಜಿ ವಜಾ ಮಾಡಿದ್ರೂ ರಾಜ್ಯ ಸರ್ಕಾರ ಇಲ್ಲಿ ಎಸ್‌ಐಟಿ ರಚನೆ ಮಾಡಿತ್ತು. ಸುಪ್ರೀಂಕೋರ್ಟ್ ತೀರ್ಪಿಗೆ ಸರ್ಕಾರ ಹೀಗೆ ಮಾಡೋದಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ: ವೀರೇಂದ್ರ ಹೆಗ್ಗಡೆ
ಎಸ್‌ಐಟಿ ತನಿಖೆ ಮಾಡಿದರೂ ಏನೂ ಸಿಕ್ಕಿಲ್ಲ. ಸುಪ್ರೀಂಕೋರ್ಟ್ ಆದೇಶವೇ ಗೊತ್ತಿಲ್ಲ ಅಂತ ಜಾಣ ನಡೆ ಸರ್ಕಾರ ತೋರಿಸಿದೆ. ಸರ್ಕಾರ ಜನರ ಮುಂದೆ ಬೆತ್ತಲೆ ಆಗಿದೆ. ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ಕೊಡಬೇಕು. ಸುಪ್ರೀಂಕೋರ್ಟ್ ತೀರ್ಪು ಇದ್ದರೂ ಹೇಗೆ ತನಿಖೆ ಮಾಡಿದ್ರಿ ಅಂತ ಸರ್ಕಾರ ಉತ್ತರ ಕೊಡಬೇಕು. ಸಿದ್ದರಾಮಯ್ಯ ಸರ್ಕಾರಕ್ಕೆ ಬುದ್ಧಿ ಭ್ರಮಣೆ ಆಗಿದೆ. ಸಿದ್ದರಾಮಯ್ಯ ಸರ್ಕಾರ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ
ಮಂಗಳೂರು: ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ (SIT) ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Veerendra Heggade) ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ ಪುಸ್ತಕಗಳನ್ನು ನಾನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕ ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ, ಆದರೆ ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತ ಇದೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು. ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಇಷ್ಟು ಹಗೆತನ, ಅಪವಾದ ಯಾಕೆ ಬಂತು ಅಂತ ಗೊತ್ತಿಲ್ಲ. ನಾವು ಸೇವೆ ಮಾಡುತ್ತೇವೆ, ಆದರೆ ಸೇವೆ ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ ನಿಮಿತ್ತ ಮಾತ್ರ, ಆದರೆ ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ರು, ಇವರು ಹಾಗೆ ಟೀಕೆ ಮಾಡಿಲ್ಲ. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ ಎಂದರು. ಇದನ್ನೂ ಓದಿ: MiG-21 Retires | 6 ದಶಗಳ ಸೇವೆಗೆ ವಿದಾಯ – ʻಹಾರುವ ಶವಪೆಟ್ಟಿಗೆʼ ಮಿಗ್-21ಗೆ ಗುಡ್‌ಬೈ ಹೇಳಿದ ಭಾರತ
ಧರ್ಮಸ್ಥಳ (Dharmasthala) ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ. ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಅಂತ ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ. ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿ. ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ. ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಅಂತ ಬೇಕು. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಹೇಳಿದರು. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ
ಬೆಂಗಳೂರು ಅಥವ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲೋರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಣುಮಕ್ಕಳಿಗೂ ನಾನು ಆಭಾರಿ. ಎಸ್‌ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡುತ್ತಿದ್ದೇನೆ. ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ನೋಡಿಕೊಳ್ಳುತ್ತಾರೆ. ನಾವು ಸತ್ಯದಿಂದ ಇದ್ದೇವೆ, ಹಾಗೆಯೇ ಮುಂದೆಯೂ ಇರುತ್ತೇವೆ. ಮುಂದಿನ ದಿನಗಳು ಉತ್ತಮವಾಗಿರಲಿ, ಎಲ್ಲರಿಗೂ ಧನ್ಯವಾದಗಳು ಎಂದು ನುಡಿದರು. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಭೈರಪ್ಪ – ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
– ಸುಪ್ರೀಂನಲ್ಲಿ ಬುರುಡೆ ಗ್ಯಾಂಗ್ ಪಿಐಎಲ್ ವಜಾ – ವಿಷಯ ತಿಳಿಯದೇ ಇದ್ದರೆ ಇದೊಂದು ಬೇಜವಾಬ್ದಾರಿ ಸರ್ಕಾರ
ಬೆಂಗಳೂರು: ಬುರುಡೆ ಗ್ಯಾಂಗ್‌ನ ಮುಖವಾಡ ಮತ್ತೊಮ್ಮೆ ಬಯಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ (Supreme Court) ಛೀಮಾರಿ ಹಾಕಿಸಿಕೊಂಡಿದ್ದ ವಿಚಾರವನ್ನು ಮುಚ್ಚಿಟ್ಟು ಸರ್ಕಾರವನ್ನೇ ಯಾಮಾರಿಸಿದ್ದ ಬುರುಡೆ ಗ್ಯಾಂಗ್ ಹಾಗೂ ಸುಪ್ರೀಂಕೋರ್ಟ್ ವಕೀಲ ಧನಂಜಯ್ ಇಡೀ ಸಮಾಜದ ಮುಂದೆ ಕ್ಷಮೆ ಕೇಳಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಆಗ್ರಹಿಸಿದ್ದಾರೆ.
ಈ ವಿಚಾರವಾಗಿ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಬುರುಡೆ ಗ್ಯಾಂಗ್ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಹಾಕಿತ್ತು. ಅದನ್ನು ಕೋರ್ಟ್ ವಜಾಗೊಳಿಸಿತ್ತು. ಅಷ್ಟು ಮಾತ್ರವಲ್ಲದೇ, ಇದು ವೈಯಕ್ತಿಕ ಹಿತಾಸಕ್ತಿಯ ಅರ್ಜಿ ಎಂದು ಛೀಮಾರಿ ಹಾಕಿತ್ತು. ಈ ವಿಚಾರವನ್ನು ಮುಚ್ಚಿಟ್ಟು ಬುರುಡೆ ಗ್ಯಾಂಗ್ ಸರ್ಕಾರವನ್ನೇ ಯಾಮಾರಿಸಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಿಕ್ಕ ಅಸ್ಥಿಪಂಜರ ಗುಬ್ಬಿ ಮೂಲದ ವ್ಯಕ್ತಿಯದ್ದು!
ಈ ಬುರುಡೆ ಗ್ಯಾಂಗ್ ಮೊದಲ ದಿನದಿಂದಲೇ ಸತ್ಯವನ್ನು ಮುಚ್ಚಿಕೊಂಡು ಸುಳ್ಳಿನ ಸರಮಾಲೆಯನ್ನೇ ಕಟ್ಟಿಕೊಂಡು ಬಂದಿದೆ. ಮಾಧ್ಯಮಗಳೆಲ್ಲವು ಈ ವಿಚಾರವನ್ನು ಪ್ರಸಾರ ಮಾಡದೇ ಇರುತ್ತಿದ್ದರೆ, ಬುರುಡೆ ಗ್ಯಾಂಗ್‌ನ ನಿಜಬಣ್ಣ ಬಯಲಾಗುತ್ತಿರಲಿಲ್ಲ. ಸುಪ್ರೀಂ ಕೋರ್ಟ್‌ಯೇ ಬುರುಡೆ ಗ್ಯಾಂಗ್ ಅನ್ನು ಪೈಸಾ ಇಂಟರೆಸ್ಟ್ ಲಿಟಿಗೇಷನ್ ಎಂದು ಛೀಮಾರಿ ಹಾಕಿದ್ರೂ, ಇವರು ಸುಳ್ಳು ಹೇಳಿಕೊಂಡು ಇಲ್ಲಿವರೆಗೆ ಬಂದಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ
ಧರ್ಮಸ್ಥಳ ವಿಚಾರದಲ್ಲಿ ಈ ಗ್ಯಾಂಗ್ ಷಡ್ಯಂತ್ರ ರೂಪಿಸಿತ್ತು. ಇದರಲ್ಲಿ ಕರ್ನಾಟಕ ಸರ್ಕಾರವೇ ಭಾಗಿಯಾಗಿದೆ ಎಂಬ ಅನುಮಾನ ಮೂಡುತ್ತಿದೆ. ಸುಪ್ರೀಂಗೆ ಪಿಐಎಲ್ ಹೋಗಿದೆ. ಅದು ಕರ್ನಾಟಕಕ್ಕೆ ಸಂಬಂಧಪಟ್ಟಿದ್ದು ಗಮನಿಸಬೇಕು ಅಂತ ಗೊತ್ತಿಲ್ಲ ಅಂದ್ರೆ ಇದು ಬೇಜಾವಾಬ್ದಾರಿ ಸರ್ಕಾರವಾಗಿದೆ. ಏನಾದ್ರೂ ನಡೆಯಲಿ, ನನ್ನ ಪಾಡಿಗೆ ನಾನು ಉಂಡ್ಕೊಂಡು, ತಿಂದ್ಕೊಂಡು ಹಾಯಾಗಿ ಇರುವಂತದ್ದ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವ್ರು ಹಾಗೆ ಮಾಡ್ತಾರೆ ಅಂದ್ರೆ ಅವ್ರು ಸಿಎಂ ಕುರ್ಚಿಯಿಂದ ಕೆಳಗಿಳಿದು ಬೇರೆ ಕೆಲಸ ಮಾಡಬೇಕು. ತಿಂದು, ಉಂಡು ಹಾಯಾಗಿ ಇರಬೇಕು ಅಂದ್ರೆ ಅವ್ರು ಬೇರೆ ಕೆಲಸಕ್ಕೆ ಹೋಗಬೇಕು. ಎಡಪಂಥೀಯ ಸಂಘಟನೆಗಳ ಒತ್ತಾಯಕ್ಕೆ ಎಸ್‌ಐಟಿ ರಚನೆ ಮಾಡುವಂತಾಯ್ತು ಅಂತ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ರು. ಆದ್ರೆ ಯಾವ ಸಂಘಟನೆಗಳು ಅಂತ ಬಹಿರಂಗಪಡಿಸಲಿಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕೆ ಛೀಮಾರಿ ಹಾಕಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರಕ್ಕೆ ಧರ್ಮಸ್ಥಳದ ವಿರುದ್ಧ ಒಂದಾದ್ರೂ ದಾಖಲೆ ಹುಡುಕಬೇಕು ಎಂದಿತ್ತು. ಆದ್ರೆ ಯಾವ ಸಾಕ್ಷ್ಯಗಳು ಸಿಗಲಿಲ್ಲ. ಸರ್ಕಾರ ಎಸ್‌ಐಟಿ ಬಳಿ ಮಧ್ಯಂತರ ವರದಿಯನ್ನು ಕೇಳಬೇಕಿತ್ತು. ತನಿಖೆಯ ವಿವರವನ್ನ ಸಮಾಜದ ಮುಂದಿಡಬೇಕಿತ್ತು. ಮಾಧ್ಯಮಗಳು ಬುರುಡೆ ಗ್ಯಾಂಗ್ ಹಿಂದೆ ಬೀಳದಿದ್ರೆ, ಅವರನ್ನು ಸರ್ಕಾರವೇ ರಕ್ಷಣೆ ಮಾಡ್ತಿತ್ತು ಎಂದು ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಸೋತ ವಕೀಲ ಧನಂಜಯ್ ಒಂದು ಕಡೆಯೂ ಸೋತೆ ಅಂತ ಹೇಳಲಿಲ್ಲ. ಇದು ಬಹಳ ದುರಂತದ ವಿಚಾರ ಹಾಗೂ ಇದು ನೀವು ನಿಮ್ಮ ವೃತ್ತಿಗೆ ಮಾಡಿದ ಅವಮಾನ. ಸುಪ್ರೀಂನಿಂದ ಛೀಮಾರಿ ಹಾಕಿಸಿಕೊಂಡು, ಸುಳ್ಳುಗಳ ಮೇಲೆ ಸುಳ್ಳು ಹೇಳಿಕೊಂಡು ಬಂದಿದ್ದೀರಿ. ಧನಂಜಯ್ ಇಡೀ ಸಮಾಜದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ತನಿಖೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬುರುಡೆ ಗ್ಯಾಂಗ್‌ಗೆ ಫಂಡಿಂಗ್ ಮಾಡಿದ್ದ 11 ಮಂದಿಗೆ ಎಸ್‌ಐಟಿ (SIT) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಹೌದು, ಷಡ್ಯಂತ್ರದ ಹಿಂದಿನ ಕಾಣದ ಕೈಗಳ ಬೆನ್ನುಬಿದ್ದ ಎಸ್‌ಐಟಿ, ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದವರ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಯ ಡಿಟೇಲ್ ಪಡೆದು ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಪ್ರಕರಣ – ಇಂದು ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾನೆ ಚಿನ್ನಯ್ಯ
ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ಬೆಂಬಲಿಗರು ಸೇರಿದಂತೆ 11 ಜನರಿಗೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಈಗಾಗಲೇ 6 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಗಿರೀಶ್ ಮಟ್ಟಣ್ಣವರ್ ಪತ್ನಿಯ ಖಾತೆಯಿಂದಲೂ ಚಿನ್ನಯ್ಯನಿಗೆ ಹಣ ವರ್ಗಾವಣೆಯಾಗಿರುವುದು ತನಿಖೆಯಲ್ಲಿ ಬಯಲಾಗಿದೆ.
ಎಸ್‌ಐಟಿ ಅಧಿಕಾರಿಗಳು 6 ತಿಂಗಳ ಹಿಂದೆ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಫಂಡಿಂಗ್ ಮಾಡಿರುವ ಬಗ್ಗೆಯೂ ಮಾಹಿತಿ ಪಡೆದಿದ್ದು, ಅವರಿಗೂ ಎಸ್‌ಐಟಿ ನೋಟಿಸ್ ನೀಡುವ ಸಾಧ್ಯತೆಗಳಿವೆ.
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ (Dharmasthala Mass Burials) ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸರಣಿ ವೀಡಿಯೋಗಳನ್ನು ಬಿಡುಗಡೆ ಮಾಡುತ್ತಿರುವುದರ ನಡುವೆ, ಬುರುಡೆ ಚಿನ್ನಯ್ಯನನ್ನು (Mask Man Chinnaiah) ಇಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್‌ಐಟಿ (SIT) ಹಾಜರುಪಡಿಸಲಿದೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿಗೆ ಪೊಲೀಸರು ಮೂರನೇ ನೋಟಿಸ್ ಸರ್ವ್ ಮಾಡಲು ಸಿದ್ಧತೆ ನಡೆಸಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ತಿಮರೋಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳದ ಬುರುಡೆ ಗ್ಯಾಂಗ್‌ನ ಎಸ್‌ಐಟಿ ತನಿಖೆ ಸಾವಧಾನವಾಗಿ ಸಾಗಿದೆ. ಪಿನ್ ಟು ಪಿನ್ ಮಾಹಿತಿಗಳನ್ನು ಕಲೆ ಹಾಕುತ್ತಿರುವ ಪೊಲೀಸರು, ಬುರುಡೆ ಚಿನ್ನಯ್ಯನನ್ನು ಮತ್ತೆ ಕೋರ್ಟ್‌ಗೆ ಇಂದು ಹಾಜರುಪಡಿಸಲಿದ್ದಾರೆ. ಹೆಚ್ಚುವರಿ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸುವ ಕಾರ್ಯ ನಡೆಯಲಿದೆ. ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಈಗಾಗಲೇ ಒಂದು ಬಾರಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಕರೆ ತಂದಿದ್ದು, ಇಂದು ಹೇಳಿಕೆ ದಾಖಲಿಸಲು ನ್ಯಾಯಾಧೀಶರು ಅನುಮತಿ ನೀಡಿದ್ದರು. ಹೀಗಾಗಿ ಮತ್ತೆ ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ನನ್ನು ಕರೆ ತಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಚಿನ್ನದ ಮಾಂಗಲ್ಯ ಸರದ ಆಸೆಗೆ ಮಾವನ ಮಗಳ ಕೊಲೆ – ಸತ್ಯ ಹೊರಬರುತ್ತಿದ್ದಂತೆ ಆರೋಪಿ ಆತ್ಮಹತ್ಯೆ
ಇನ್ನು ಬುರುಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆಗುಡ್ಡ ತಲೆಬುರೆಡೆ, ಮೂಳೆಗಳು ಪತ್ತೆ ಕೇಸ್ ಎಸ್‌ಐಟಿ ತನಿಖೆ ಬದಲು ಸಿಐಡಿ ತನಿಖೆಗೆ ಹಸ್ತಾಂತರಿಸಲು ಸರ್ಕಾರ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇದೇ ಗುರುವಾರ ರಾಜ್ಯ ಸರ್ಕಾರದಿಂದ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಶವಗಳ ಹೂತಿಟ್ಟ ಪ್ರಕರಣಗಳು ಮಾತ್ರ ಎಸ್‌ಐಟಿ ತನಿಖೆ ವ್ಯಾಪ್ತಿಯಲ್ಲಿ ಇರಲಿದೆ. ಷಡ್ಯಂತ್ರ ನಡೆದಿದೆ ಎಂದು ಕ್ರಿಮಿನಲ್ ಪಿತೂರಿ ನಡೆದಿರುವ ಬಗ್ಗೆ ಸರ್ಕಾರಕ್ಕೆ ಮೌಖಿಕ ವರದಿ ಕೊಟ್ಟಿದೆ ಎನ್ನಲಾಗಿದೆ. ಇನ್ನು ಎಸ್‌ಐಟಿ ಮಾಹಿತಿ ಮೇರೆಗೆ ಉಳಿದ ತನಿಖೆಯನ್ನ ಸಿಐಡಿಗೆ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮಿ – ಸಿ ರಿಪೋರ್ಟ್ ಸಲ್ಲಿಕೆಗೆ ಪೊಲೀಸರ ಚಿಂತನೆ
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಪಾಸಣೆ ನಡೆಸಿದಾಗ ಪೊಲೀಸರು ತಲ್ವಾರ್ ಬಂದೂಕು ಸೇರಿದಂತೆ ಹಲವಾರು ವಸ್ತುಗಳು ವಶಕ್ಕೆ ಪಡೆದಿದ್ದರು. ಈ ವಿಚಾರಣೆಗೆ ಈಗಾಗಲೇ ಎರಡು ಬಾರಿ ನೋಟಿಸನ್ನು ಕೊಡಲಾಗಿದೆ. ಎರಡು ನೋಟಿಸ್‌ಗೆ ಕ್ಯಾರೇ ಎನ್ನದ ತಿಮರೋಡಿ ಬೇಲ್‌ಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಪೊಲೀಸರು 3ನೇ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೂರನೇ ನೋಟಿಸ್‌ಗೆ ಉತ್ತರಿಸದಿದ್ದರೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ಮತ್ತೆ ಬಂಧನವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ
ಧರ್ಮಸ್ಥಳ: ಧರ್ಮಸ್ಥಳದ (Dharmasthala) ಬಂಗ್ಲೆಗುಡ್ಡ (Banglegudde) ರಹಸ್ಯ ಬೇಧಿಸಲು ಹೊರಟ ಎಸ್‌ಐಟಿ (SIT) ಇಂದು ಎರಡನೇ ದಿನದ ಶೋಧ ಕಾರ್ಯ ನಡೆಸಿದೆ. ಬುಧವಾರ ಶೋಧ ನಡೆಸಿದ ವೇಳೆ ಐದು ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ತಲೆ ಬುರುಡೆ ತಂದಿದ್ದ ಸೌಜನ್ಯಳ ಮಾವ ವಿಠಲ ಗೌಡನನ್ನು ಎರಡು ಬಾರಿ ಬಂಗ್ಲೆಗುಡ್ಡಕ್ಕೆ ಕರೆತಂದ ಎಸ್‌ಐಟಿ ಅಧಿಕಾರಿಗಳು ಮಹಜರು ನಡೆಸಿದ್ದರು. ಮಹಜರು ನಡೆದ ಬಳಿಕ ವಿಠಲ ಗೌಡ ಬಂಗ್ಲೆಗುಡ್ಡದಲ್ಲಿ ಹತ್ತಾರು ಅಸ್ಥಿಪಂಜರಗಳನ್ನ ನೋಡಿದ್ದೇನೆಂದು ವೀಡಿಯೋ ಮಾಡಿ ಹೇಳಿಕೆ ನೀಡಿದ್ದ. ಇದಾದ ಬಳಿಕ ಬಂಗ್ಲೆಗುಡ್ಡದಲ್ಲಿ ಏನೋ ರಹಸ್ಯ ಅಡಗಿದೆ ಎಂದು ಎಲ್ಲೆಡೆ ಸುದ್ದಿ ಹಬ್ಬಿತ್ತು. ಈ ರಹಸ್ಯ ಬೇಧಿಸಲು ನಿರ್ಧರಿಸಿದ ಎಸ್‌ಐಟಿ 13 ಎಕರೆ ವಿಸ್ತೀರ್ಣದಲ್ಲಿರುವ ಇಡೀ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸರ್ಚ್ ನಡೆಸಲು ತೀರ್ಮಾನಿಸಿದ್ದರು. ಅದರಂತೆ ಬುಧವಾರ ದಿನಪೂರ್ತಿ ಶೋಧ ನಡೆಸಿದ್ದ ವೇಳೆ ಐದು ಕಡೆಗಳಲ್ಲಿ ಭೂಮಿಯ ಮೇಲ್ಭಾಗದಲ್ಲಿ ಹರಡಿಕೊಂಡಿದ್ದ ಐದು ತಲೆ ಬುರುಡೆ ಹಾಗೂ ನೂರಕ್ಕೂ ಅಧಿಕ ಮೂಳೆಗಳು ಪತ್ತೆಯಾಗಿದೆ. ಎಲ್ಲವನ್ನು ವಶಕ್ಕೆ ಪಡೆದು ಮಹಜರು ನಡೆಸಿದ ಎಸ್‌ಐಟಿ ಅಧಿಕಾರಿಗಳು ಎಲ್ಲವನ್ನ ಎಫ್‌ಎಸ್‌ಎಲ್‌ಗೆ ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಸೌಜನ್ಯ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು
ಮಹಜರು ವೇಳೆ ಸ್ಥಳದಲ್ಲಿದ್ದ ತಜ್ಞ ವೈದ್ಯರು ಎಲ್ಲವೂ ಪುರುಷರ ತಲೆ ಬುರುಡೆ ಹಾಗೂ ಮೂಳೆಗಳು ಎಂದು ಮೇಲ್ನೋಟಕ್ಕೆ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಅದೇ ಸ್ಥಳದ ಮರವೊಂದರಲ್ಲಿ ಎರಡು ಹಗ್ಗ ಒಂದು ಸೀರೆ ನೇತಾಡುವ ಸ್ಥಿತಿಯಲ್ಲಿದ್ದು ಅದರ ಅಡಿಭಾಗದ ಭೂಮಿಯ ಮೇಲ್ಭಾಗದಲ್ಲೇ ಕಳೇಬರ ಪತ್ತೆಯಾಗಿದೆ. ಹೀಗಾಗಿ ಇದು ಆತ್ಮಹತ್ಯೆ ಮಾಡಿಕೊಂಡವರ ಕಳೇಬರ ಎಂದು ಎಸ್‌ಐಟಿ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ
ಸೌಜನ್ಯಳ ಮಾವ ವಿಠಲ ಗೌಡ ತಲೆ ಬುರುಡೆ ತಂದ ಹಿನ್ನೆಲೆಯಲ್ಲಿ ಮಹಜರು ನಡೆಸಿದ್ದರಿಂದ ಬಂಗ್ಲೆಗುಡ್ಡ ಅರಣ್ಯದಲ್ಲಿ ಈ ಅಸ್ಥಿಪಂಜರಗಳೂ ಸಿಕ್ಕಿದೆ. ಈ ನಡುವೆ ಇದೇ ವಿಠಲ ಗೌಡ ವಿರುದ್ಧ ಎಸ್‌ಐಟಿಯಲ್ಲಿ ಇಂದು ದೂರೊಂದು ದಾಖಲಾಗಿದೆ. ವಿಠಲಗೌಡ ಮಹಜರು ನಡೆಸಿದ ಬಳಿಕ ಎಸ್‌ಐಟಿ ತನಿಖೆ ಬಗ್ಗೆ ವೀಡಿಯೋ ಮಾಡಿ ಹೇಳಿಕೆ ನೀಡಿ ತನಿಖೆಯ ಹಾದಿತಪ್ಪಿಸಲು ಹಾಗೂ ಸಾಕ್ಷ÷್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಧರ್ಮಸ್ಥಳದ ಗ್ರಾಮಸ್ಥ ಸಂದೀಪ್ ರೈ ಎಂಬವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ದೂರು ನೀಡಿದ್ದು, ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್‌ಐಟಿ ತನಿಖೆ ದಾರಿ ತಪ್ಪಿಸೋ ಪ್ರಯತ್ನ ನಡೆದಿದೆ. ಎಸ್‌ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಠಲ್ ಗೌಡ ವೀಡಿಯೋ ಹರಿ ಬಿಟ್ಟು ತನಿಖೆ ಹಾದಿ ತಪ್ಪಿಸಿದ್ದಾನೆ. ವಿಠಲ ಗೌಡ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ವಿಠಲ್ ಗೌಡ ವಿರುದ್ಧ ತನಿಖೆ ನಡೆಸುವಂತೆ ಎಸ್‌ಐಟಿಗೆ ದೂರು ನೀಡಲಾಗಿದೆ. ಎಸ್‌ಐಟಿ ಅಧಿಕಾರಿಗಳು ದೂರು ಸ್ವೀಕರಿಸಿ ಸ್ವೀಕೃತಿ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ
ಈ ನಡುವೆ ಶವ ಹೂತಿಟ್ಟ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ನ್ಯಾಯಾಧೀಶರ ಮುಂದೆ ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆಯನ್ನು ಮಾಡಲಾಗಿದೆ. ಕಳೆದ ಸೆ.6ರಂದು ಬೆಳ್ತಂಗಡಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದ್ದು, ಇಂದು ಅಲ್ಲಿಂದ ಕರೆ ತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದನ್ನೂ ಓದಿ: ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್ ದಾಖಲು