Tag: ಧರ್ಮಸ್ಥಳ ಕೇಸ್‌

  • ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ: ಆರ್.ಅಶೋಕ್

    ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ: ಆರ್.ಅಶೋಕ್

    – ನಗರ ನಕ್ಸಲರ ಗ್ಯಾಂಗ್ ಧರ್ಮಸ್ಥಳ ಪ್ರಕರಣದ ಹಿಂದಿದೆ; ವಿಪಕ್ಷ ನಾಯಕ

    ಹುಬ್ಬಳ್ಳಿ: ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಸವಾಲ್ ಹಾಕಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ನಕ್ಸಲರು ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ದಂಡುಪಾಳ್ಯ ರೀತಿ ನಗರ ನಕ್ಸಲರ ಗ್ಯಾಂಗ್ ಧರ್ಮಸ್ಥಳ ಪ್ರಕರಣದ (Dharmasthala Case) ಹಿಂದಿದೆ. ಕಾಂಗ್ರೆಸ್‌ನಲ್ಲಿ ಹಿಂದೂ ವಿರೋಧಿ ಮತ್ತು ಹಿಂದೂ ಪರ ಎಂಬ ಎರಡು ಗ್ಯಾಂಗ್ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌

    ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ. ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಮತಾಂದರು ಮತ್ತು ನಗರ ನಕ್ಸಲರು ಬಂದಿದ್ದಾರೆ. ಟಿಪ್ಪು ಪ್ರೇರಿತ ಗ್ಯಾಂಗ್‌ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ. ಸಮೀರ್, ಪಿಎಫ್‌ಐ, ಎಸ್‌ಡಿಪಿ ಕಾರ್ಯಕರ್ತರಿಂದಲೇ ಸಿಎಂ ಆಫೀಸ್ ಸುತ್ತುವರಿದಿದೆ ಎಂದಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಿಸೋಕೆ ನಿಮ್ಮ ಜೊತೆ ನಾವಿದ್ದೇವೆ – ಅಭಿಮಾನಿಗಳೊಂದಿಗೆ ನಿಂತ ನಟ ಅನಿರುದ್ಧ

    ಷಡ್ಯಂತ್ರ ಇದೆ ಅಂತ ಡಿಕೆ ಶಿವಕುಮಾರ್ ಹೇಳ್ತಿದ್ದಾರೆ. ಆದ್ರೆ ಸಿದ್ದರಾಮಯ್ಯನವರ ಬಾಯಲ್ಲಿ ಒಂದು ಮಾತು ಬಂದಿದ್ಯಾ? ಡಿ.ಕೆ ಶಿವಕುಮಾರ್ (DK Shivakumar) ಮ್ಯಾನೇಜ್ ಮಾಡ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಈ ಬಗ್ಗೆ ಒಡಕಿದೆ. ಪೊಲೀಸರೇ ಕೋರ್ಟ್ಗೆ ಅರ್ಜಿ ಹಾಕಿದ್ದಾರೆ. ಎಲ್ಲಾ ಕೇಸ್‌ಗೂ ಇದೇ ರೀತಿ ಮಾಡ್ತಾರಾ? ಒಂದೇ ಸಲ ನೂರು ಅಡಿ ಹೋಗಿ ತನಿಖೆ ಮಾಡಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗರ ರ‍್ಯಾಲಿ ಧರ್ಮಸ್ಥಳದ ಪರ, ನ್ಯಾಯದ ಪರ ಅಲ್ಲ – ಡಿಕೆಶಿ

    ಧರ್ಮಸ್ಥಳ ವಿಚಾರದಲ್ಲಿ ನಾವು ರಾಜಕಾರಣ ಮಾಡಿಲ್ಲ. ಈ ಪ್ರಕರಣದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್, ಇದರ ಹಿಂದೆ ದೊಡ್ಡ ಖತರ್ನಾಕ್ ಗ್ಯಾಂಗ್ ಇದೆ. ಯೂಟ್ಯೂಬ್ ಚಾನಲ್ ಮಾಡಲು ಎಲ್ಲಿಂದ ದುಡ್ಡು ಬಂದಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

    ಹಿಂದೂ ಧರ್ಮ ಬಿಜೆಪಿ ಸ್ವತ್ತಲ್ಲ ಅನ್ನೋ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಫಸ್ಟ್ ನಿಮ್ಮ ಸ್ವತ್ತು ಅಂತ ಡಿಕೆಶಿ ಹೇಳಲಿ. ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ, ನೀವು ತನಿಖೆಗೆ ಕೊಡ್ತಿದ್ರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಸವಾಲ್ ಹಾಕಿದರು.

  • ಧರ್ಮಸ್ಥಳ ಕೇಸ್‌ನಲ್ಲಿ ಸಿಎಂ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    ಧರ್ಮಸ್ಥಳ ಕೇಸ್‌ನಲ್ಲಿ ಸಿಎಂ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Case) ಸಿಎಂ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದರು.

    ಬಿಜೆಪಿ (BJP) ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್‌ಸಿಬಿ ಕಪ್ ಗೆದ್ದಾಗ ಮುಂದಾಲೋಚನೆ ಇಲ್ಲದೆ ಕಾರ್ಯಕ್ರಮ ಮಾಡಿದ ತಪ್ಪಿಗೆ 11 ಜನರ ಸಾವಾಯ್ತು. ಇಂತಹ ತಪ್ಪು ಮಾಡಿದ ಸರ್ಕಾರ ಈಗ ಇನ್ನೊಂದು ಎಡವಟ್ಟು ಮಾಡಿಕೊಂಡಿದೆ. ಧರ್ಮಸ್ಥಳ ಧರ್ಮದ ದೇವಸ್ಥಾನ, ಪವಿತ್ರ ಸ್ಥಳವಾಗಿದೆ. ಸಾಮಾನ್ಯ ಜನರೂ ಭಕ್ತಿಯಿಂದ ಬೇಡಿಕೊಳ್ತಾರೆ. ಈ ಕೇಸ್‌ನಲ್ಲಿ ಧಾರ್ಮಿಕ ಸ್ಥಳದ ವಿಚಾರ ತಪ್ಪು, ಅಪಮಾನ ಮಾಡೋ ರೀತಿ ಅಪಪ್ರಚಾರ ಮಾಡಿದ್ರು. ಮೊದಲು ಈ ಗುಂಪು ಶಬರಿಮಲೆಯಲ್ಲಿ ಕೆಲಸ ಮಾಡಿತು. ಆಗ ಏನು ಪ್ರಯೋಜನ ಆಗಲಿಲ್ಲ. ಶಬರಿಮಲೆಗೆ ಇನ್ನಷ್ಟು ಭಕ್ತರು ಜಾಸ್ತಿ ಆದರು. ಈಗ ಅದೇ ಗುಂಪು ಧರ್ಮಸ್ಥಳಕ್ಕೆ ಬಂದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಭೂಸ್ಪರ್ಶ; ತಪ್ಪಿದ ದುರಂತ

    ಧರ್ಮಸ್ಥಳ ಕೇಸ್‌ನಲ್ಲಿ ಕೆಲವರು ಕಮ್ಯೂನಿಸ್ಟ್ ಇದ್ದಾರೆ. ಕಾಂಗ್ರೆಸ್ (Congress) ಇವತ್ತು ಕಮ್ಯೂನಿಸ್ಟ್ ಕಾಂಗ್ರೆಸ್ ಆಗಿದೆ. ಸಿಎಂ ಸುತ್ತಲೂ ಕಮ್ಯೂನಿಸ್ಟ್ ತುಂಬಿದ್ದಾರೆ. ಕಾಂಗ್ರೆಸ್ ಕಮ್ಯೂನಿಸ್ಟರ ಮೂಲಕ ಅವರ ಐಡಿಯಾಲಜಿ ಮಾಡಿಸ್ತಾ ಇದ್ದಾರೆ. ಅನಾಮಿಕ ವ್ಯಕ್ತಿ ಅಂತ 13 ಸ್ಥಳ ಗುರುತು ಮಾಡಿದ್ರು ಏನು ಸಿಗಲಿಲ್ಲ. ಕಾನೂನು ಪ್ರಕಾರ ಇಂತಹ ಕೇಸ್‌ನಲ್ಲಿ ಅನಾಮಿಕ ಹೇಳಿಕೆ ಕೊಟ್ಟರೆ ಮೊದಲು ಅರೆಸ್ಟ್ ಮಾಡಿ ಎಫ್‌ಐಆರ್ ಹಾಕಿ ಜೈಲಿಗೆ ಹಾಕಬೇಕು. ಅಮೇಲೆ ತನಿಖೆ ಮಾಡಬೇಕಿತ್ತು. ಆದರೆ ಈ ಸರ್ಕಾರ ಅನಾಮಿಕನನ್ನ ಚಾಂಪಿಯನ್ ಮಾಡಿದ್ದಾರೆ. ಎಸ್‌ಐಟಿಗೆ ಆ ಅನಾಮಿಕನೇ ಮುಖ್ಯಸ್ಥ. ಎಸ್‌ಐಟಿ ಅವರು ಅನಾಮಿಕನ ಕೈ ಕೆಳಗೆ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಾಸನದಲ್ಲಿ ಧರ್ಮಸ್ಥಳ ಚಲೋ ರ‍್ಯಾಲಿಗೆ ಅದ್ದೂರಿ ಸ್ವಾಗತ

    ಧರ್ಮಸ್ಥಳ ಕೇಸ್‌ನಲ್ಲಿ ಈಗ ಕಾಂಗ್ರೆಸ್‌ಗೆ ಏನು ಸಿಕ್ಕಿಲ್ಲ. ಈಗ ಅವರು ಸಿಕ್ಕಿ ಹಾಕಿಕೊಂಡಿದ್ದಾರೆ. ಅದಕ್ಕಾಗಿ ಡಿ.ಕೆ ಶಿವಕುಮಾರ್ (DK Shivakumar), ಡಿ.ಕೆ ಸುರೇಶ್ ನಿರೀಕ್ಷಣಾ ಜಾಮೀನು ಹಾಕಿದ್ದಾರೆ. ದಿನೇಶ್ ಗುಂಡೂರಾವ್ ಕೂಡಾ ಕಮ್ಯೂನಿಸ್ಟರ ಒತ್ತಡಕ್ಕೆ ತನಿಖೆ ಮಾಡಿಸಿದ್ವಿ ಅಂತ ಈಗ ಹೇಳ್ತಿದ್ದಾರೆ. ಧರ್ಮಸ್ಥಳದಲ್ಲಿ ಏನು ಸಿಗದಿದ್ದಕ್ಕೆ ಈ ಸರ್ಕಾರ ಯೂಟರ್ನ್ ಹೊಡೆದಿದೆ. ಈ ಸರ್ಕಾರ ರಾಜ್ಯದ ಜನರ ಕ್ಷಮೆ ಕೇಳಿ ಸಿಎಂ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

    ಬಿಜೆಪಿ ಅವರು ಎಸ್‌ಐಟಿ (SIT) ಮಾಡಿದಾಗ ಯಾಕೆ ವಿರೋಧ ಮಾಡಿಲ್ಲ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅವರೇ ಇದರ ಹಿಂದೆ ಷಡ್ಯಂತ್ರ ಅಂತ ಹೇಳಿದ್ದಾರೆ. ಎಸ್‌ಐಟಿ ರಚನೆ ಮಾಡಿದಾಗಲೇ ನಾವು ಹೇಳಿದ್ವಿ. ಇದು ಷಡ್ಯಂತ್ರ ಅಂತ. ಮೊದಲು ಸಿಎಂ ತನಿಖೆಗೆ ಕೊಡೊಲ್ಲ ಅಂತ ಹೇಳಿದ್ರು. ಅಮೇಲೆ ಸಿಎಂ ಅವರೇ ತನಿಖೆಗೆ ಕೊಟ್ರು. ರಾತ್ರೋರಾತ್ರಿ ಸಿಎಂ ಮನ ಪರಿವರ್ತನೆ ಮಾಡಿದ್ದು ಯಾರು? ಸಿಎಂ ಮನಸು ಪರಿವರ್ತನೆ ಮಾಡಿದ್ದು ಯಾರೆಂದು ರಾಜ್ಯದ ಜನರಿಗೆ ಸಿಎಂ ಹೇಳಬೇಕು. ಇದು ಕಾಂಗ್ರೆಸ್‌ನ ಡಬಲ್ ಸ್ಟ್ಯಾಂಡ್ ಕಾಂಗ್ರೆಸ್ ನೀತಿ ಎಂದು ತಿರುಗೇಟು ನೀಡಿದರು.

  • ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಸಲು ಸಾಧ್ಯವಿಲ್ಲ: ಹೆಚ್.ಕೆ ಪಾಟೀಲ್

    ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಸಲು ಸಾಧ್ಯವಿಲ್ಲ: ಹೆಚ್.ಕೆ ಪಾಟೀಲ್

    ಗದಗ: ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಅಂತ ನೋಡಲು ಪ್ರಯತ್ನ ಮಾಡ್ತಿದ್ದಾರೆ. ಅಂತವರಿಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕಾನೂನು, ನ್ಯಾಯ ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದ್ದಾರೆ.

    ಗದಗದಲ್ಲಿ (Gadag) ಮಾಧ್ಯಮಗಳೊಂದಿಗೆ ಮಾತನಾತನಾಡಿದ ಅವರು, ಧರ್ಮಸ್ಥಳದ (Dharmasthala Case) ವಿಷಯ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ ತನಿಖೆ ನಡೆದಿದೆ. ತನಿಖೆಯು ಯಾವ ಹಂತದಲ್ಲಿದೆ ಎಂಬ ಕೆಲವು ಭಾಗ ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಈ ಬಗ್ಗೆ ಬಹುಶಃ ಸೋಮವಾರ ಇನ್ನು ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರು ನೀಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್‌ ವಶಕ್ಕೆ

    ಶಾಸನ ಸಭೆಯಲ್ಲಿ ಚರ್ಚೆ ಮಾಡಿದ್ದರಿಂದ ಸೋಮವಾರ ಸರ್ಕಾರ ತನ್ನ ಉತ್ತರ ನೀಡಲಿದೆ. ನಾವು ಧರ್ಮಸ್ಥಳ ಮಂಜುನಾಥನ ಸನ್ನಿಧಾನ ಬಗ್ಗೆ ವಿಶೇಷ ಭಕ್ತಿ, ಗೌರವ, ಅಭಿಮಾನ ಹೊಂದಿದವರು. ಆದ್ದರಿಂದ ಸರ್ಕಾರದ ಬಗ್ಗೆ ಯಾರು ಅನುಮಾನದ ಮಾತುಗಳನ್ನಾಡುತ್ತಿದ್ದಾರೆ. ಅವರು ಕೇವಲ ರಾಜಕೀಯಕ್ಕಾಗಿ ಮಾತನಾಡುತ್ತಿದ್ದಾರೆ. ಇವತ್ತು ಮಾತನಾಡುವವರು 10 ದಿನಗಳ ಹಿಂದೆ ಯಾಕೆ ಮಾತನಾಡಲಿಲ್ಲ.? ಸಮಯದ ಉಪಯೋಗ ಮಾಡಿಕೊಂಡು ಏನಾದ್ರು ಮಾಡುವ ಪ್ರಯತ್ನಿಸಿದರೆ ಅದರಿಂದ ಏನು ಲಾಭ ಆಗುವುದಿಲ್ಲ ಎಂದು ಧರ್ಮಸ್ಥಳ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ

    ಇನ್ನು ಒಳಮೀಸಲಾತಿ ಕುರಿತು ಮಾತನಾಡಿದ ಅವರು, ಒಳಮೀಸಲಾತಿಗೆ ಸಂಬಂಧಪಟ್ಟಂತೆ ಆ.16 ರಂದು ವಿಶೇಷ ಸಚಿವ ಸಂಪುಟ ಕರೆಯಲಾಗಿತ್ತು. ಆದರೆ ಈ ಬಗ್ಗೆ ಕೆಲವು ಸಚಿವರು, ಸಿಎಂ ಅವರನ್ನು ಭೇಟಿಯಾಗಿ ಕೆಲವು ವಿಚಾರಗಳನ್ನು ಚರ್ಚೆ ಮಾಡ್ತಿದ್ದಾರೆ. ಅದಕ್ಕೆ ಒಂದೆರಡು ದಿನ ಹೆಚ್ಚಿಗೆ ಸಮಯ ತೆಗೆದುಕೊಂಡಿದ್ದಾರೆ. ಆದ್ದರಿಂದ ಆ.19ರಂದು ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ. ಅದರೊಳಗೆ ನಾಗಮೋಹನ್‌ದಾಸ್ ವರದಿ ಬಗ್ಗೆ ಅಂತಿಮವಾಗಿ ಚರ್ಚೆ ಹಾಗೂ ನಿರ್ಣಯ ಆಗುತ್ತದೆ ಎಂದು ತಿಳಿಸಿದ್ದಾರೆ.

  • ಶೀಘ್ರವೇ ಧರ್ಮಸ್ಥಳ ಪ್ರಕರಣಗಳ ತನಿಖೆ ಆರಂಭ; ಎಸ್‌ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ: ಪರಮೇಶ್ವರ್

    ಶೀಘ್ರವೇ ಧರ್ಮಸ್ಥಳ ಪ್ರಕರಣಗಳ ತನಿಖೆ ಆರಂಭ; ಎಸ್‌ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ: ಪರಮೇಶ್ವರ್

    – ತನಿಖೆ ಬಗ್ಗೆ ಬಿಜೆಪಿಯಿಂದ ಗೊಂದಲ ಸೃಷ್ಟಿ

    ಬೆಂಗಳೂರು: ಧರ್ಮಸ್ಥಳ ಪ್ರಕರಣಗಳಲ್ಲಿ ಎಸ್‌ಐಟಿ ತಂಡಕ್ಕೆ ತನಿಖೆ ಆರಂಭಿಸಲು ಸೂಚನೆ ಕೊಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೂಡಲೇ ಧರ್ಮಸ್ಥಳಕ್ಕೆ (Dharmasthala) ಹೋಗಿ ತನಿಖಾ ಪ್ರಕ್ರಿಯೆ ಶುರು ಮಾಡಲು ಎಸ್‌ಐಟಿ (SIT) ತಂಡಕ್ಕೆ ತಿಳಿಸಲಾಗಿದೆ. ಇಂದು ಅಥವಾ ನಾಳೆ ಎಸ್‌ಐಟಿ ತಂಡ ಧರ್ಮಸ್ಥಳಕ್ಕೆ ಹೋಗಲಿದೆ. ಇನ್ನು ಧರ್ಮಸ್ಥಳದ ಪೊಲೀಸರಿಗೂ ಪ್ರಕರಣದ ಮಾಹಿತಿ, ದಾಖಲೆ ಕೊಡಲು ಸೂಚನೆ ಕೊಡಲಾಗಿದೆ ಎಂದರು. ಇದನ್ನೂ ಓದಿ: GST ನೋಟಿಸ್‌ ಕೊಟ್ಟ ಕೋತಿ ಕೆಲಸ ರಾಜ್ಯ ಸರ್ಕಾರದ್ದು- ನೋಟಿಸ್ ವಾಪಸ್ ಪಡೆಯಬೇಕು: ಸಿ.ಟಿ.ರವಿ

    ಇನ್ನು ಎಸ್‌ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ. ಯಾರಾದ್ರೂ ಹೊರಗೆ ಉಳಿಯುವುದಾದರೆ ನಮಗೆ ತಿಳಿಸಲಿ. ಆ ಬಗ್ಗೆ ಕ್ರಮ ಆಗಲಿದೆ. ಬದಲಾವಣೆ ಮಾಡಲಾಗುತ್ತದೆ. ಆದರೆ ಈವರೆಗೆ ಯಾರೂ ಈ ವಿಚಾರದಲ್ಲಿ ಮಾಹಿತಿ ಕೊಟ್ಟಿಲ್ಲ. ಇಲಾಖೆಗೂ ತಿಳಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಇ-ಖಾತೆದಾರರಿಗೆ ಬಿಗ್ ಶಾಕ್ – ಬಿಬಿಎಂಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಎಸ್‌ಐಟಿಗೆ ಕೆಲ ಬಿಜೆಪಿರ ಆಕ್ಷೇಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಎಸ್‌ಐಟಿಗೆ ಯಾಕೆ ಆಕ್ಷೇಪ ಮಾಡ್ತಿದ್ದಾರೆ? ಈಗಿಂದಲೇ ಯಾಕೆ ಅವರು ಏನೇನೋ ಫ್ರೇಮ್ ಮಾಡ್ತಿದ್ದಾರೆ. ಎಸ್‌ಐಟಿ ರಚನೆಯಲ್ಲಿ ರಾಜಕೀಯ ಉದ್ದೇಶ ಇದೆ ಅಂತ ಈಗಲೇ ಅವರು ಹೇಗೆ ಹೇಳ್ತಾರೆ. ಅವರ ಮನಸಲ್ಲಿ ಏನೋ ಇದೆ ಅಂತ ಆಯ್ತಲ್ಲ. ಸರ್ಕಾರ ಸತ್ಯ ಹೊರಗೆಳೆಯಲು ಎಸ್‌ಐಟಿ ರಚಿಸಿದೆ. ಈಗಲೇ ಬಿಜೆಪಿಯವರು ಅದೂ ಇದೂ ಹೇಳಿದ್ರೆ ಹೇಗೆ? ಸತ್ಯ ಹೊರಗೆ ಬರಲಿ ಅಂತ ಎಸ್‌ಐಟಿ ಮಾಡಿದ್ದೇವೆ. ಅಷ್ಟಕ್ಕೇ ಎಲ್ಲರೂ ಸೀಮಿತ ಆದ್ರೆ ಸಾಕು ಎಂದು ಹೇಳಿದರು.