Tag: ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ

  • ಸುಜಾತಾ ಭಟ್‌ಗೆ ಮಗಳೇ ಇರಲಿಲ್ಲ ಎಂದ ನೆರೆಹೊರೆಯವರು

    ಸುಜಾತಾ ಭಟ್‌ಗೆ ಮಗಳೇ ಇರಲಿಲ್ಲ ಎಂದ ನೆರೆಹೊರೆಯವರು

    – ಧರ್ಮಸ್ಥಳ ಶವ ಅಗೆತ ಪ್ರಕರಣಕ್ಕೆ ಟ್ವಿಸ್ಟ್; ರಿಪ್ಪನ್‌ಪೇಟೆಯ ವ್ಯಕ್ತಿಯ ಜೊತೆ ವಾಸವಿದ್ದ ಸುಜಾತಾ ಭಟ್?
    – ನೆರೆಹೊರೆಯವರು ಹೇಳಿದ್ದೇನು?

    ಶಿವಮೊಗ್ಗ: ಧರ್ಮಸ್ಥಳದ ಅನನ್ಯಾ ಭಟ್ ಪ್ರಕರಣ ರಾಜ್ಯಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೂ ರಿಪ್ಪನ್‌ಪೇಟೆಗೂ ಲಿಂಕ್ ಇರುವ ಬಗ್ಗೆ ಹಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬಂದಿವೆ.

    ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ (Dharmasthala Mass Burial Case) ಎಸ್‌ಐಟಿ ಕಾರ್ಯಾಚರಣೆಯ ಶೋಧದಲ್ಲಿ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಈ ನಡುವೆ ಅನನ್ಯಾ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ತಾಯಿ ಸುಜಾತಾ ಭಟ್ (Sujatha Bhat) ಎಸ್‌ಐಟಿಗೆ ದೂರು ನೀಡಿದ್ದರು. ಅದರೆ, ಸುಜಾತಾ ಭಟ್ ಶಿವಮೊಗ್ಗದಲ್ಲಿಯೂ ಕೆಲ ವರ್ಷ ವಾಸವಾಗಿದ್ದರು. ಈ ವೇಳೆ ಸುಜಾತಾ ಭಟ್ ಪುತ್ರಿ ಅನನ್ಯಾ ಭಟ್ ಬಗ್ಗೆ ಸ್ಥಳೀಯರಿಗೆ ಮಾಹಿತಿಯೇ ಇದ್ದಿಲ್ಲವೆಂಬ ಅಂಶ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

    1999 ರಿಂದ 2007 ರವರೆಗೆ ರಿಪ್ಪನ್ ಪೇಟೆಯಲ್ಲಿ ವಾಸವಿದ್ದ ಪ್ರಭಾಕರ್ ಬಾಳಿಗ ಅವರ ಜೊತೆ ಸುಜಾತಾ ಭಟ್ 18 ವರ್ಷವಾಸವಿದ್ದರು. ದಂಪತಿ, ನಾಯಿಗಳನ್ನು ಮಕ್ಕಳು ಎಂದು ಸಾಕುತ್ತಿದ್ದರು. ಸ್ಥಳೀಯರ ಪ್ರಕಾರ, ಸುಜಾತಾ ಭಟ್ ಹಾಗೂ ಪ್ರಭಾಕರ್ ಬಾಳಿಗ ಅವರಿಗೆ ಮಕ್ಕಳೇ ಇರಲಿಲ್ಲವಂತೆ. ಅಲ್ಲದೆ, ಸುಜಾತಾ ಇರುವಷ್ಟು ದಿನ ಅಕ್ಕಪಕ್ಕದ ಜನರೊಂದಿಗೆ ಹಾಗೂ ಬ್ರಾಹ್ಮಣ ಸಮಾಜ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿಲ್ಲ.

    ಸುಜಾತಾ ಅವರು ಲಿವಿಂಗ್-ಟುಗೆದರ್ ರಿಲೇಷನ್‌ಶಿಪ್‌ನಲ್ಲಿದ್ದರು ಎಂದು ನೆರೆಹೊರೆಯವರು ಹೇಳಿದ್ದಾರೆ. ನಾವು ಮಾತ್ರ ಸುಜಾತಾ ಭಟ್ ಅವರಿಗೆ ಮಗಳು ಇರುವುದನ್ನು ನೋಡಿಲ್ಲವೆನ್ನುತ್ತಾರೆ ನೆರೆಹೊರೆಯವರಾದ ಹರೀಶ್ ಪ್ರಭು. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    ಧರ್ಮಸ್ಥಳ ಶವ ಅಗೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗೆದ ಸ್ಥಳಗಳಲ್ಲಿ ಯಾವುದೇ ಕುರುಹುಗಳು ಪತ್ತೆಯಾಗದಿರುವ ಅಂಶ ಒಂದೆಡೆಯಾದರೆ. ಇತ್ತ ನಾಪತ್ತೆಯಾದವರ ಬಗ್ಗೆ ಎಸ್‌ಐಟಿಗೆ ದೂರು ನೀಡಿದವರ ಬಗ್ಗೆ ಬಗೆದಷ್ಟು ಅಂಶಗಳು ಬಯಲಾಗುತ್ತಿವೆ.

  • ಅನಾಮಿಕ ಮುಸುಕುಧಾರಿಗೆ ಪ್ರಶ್ನೆಗಳ ಸುರಿಮಳೆ – ಮಾಸ್ಕ್ ಮ್ಯಾನ್ ಉತ್ತರಕ್ಕೆ ಎಸ್‌ಐಟಿ ಪೊಲೀಸರು ತಬ್ಬಿಬ್ಬು

    ಅನಾಮಿಕ ಮುಸುಕುಧಾರಿಗೆ ಪ್ರಶ್ನೆಗಳ ಸುರಿಮಳೆ – ಮಾಸ್ಕ್ ಮ್ಯಾನ್ ಉತ್ತರಕ್ಕೆ ಎಸ್‌ಐಟಿ ಪೊಲೀಸರು ತಬ್ಬಿಬ್ಬು

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಸಮಾಧಿ ಶೋಧವನ್ನು (Dharmasthala Mass Burials) ಎಸ್‌ಐಟಿ (SIT) ಅಧಿಕಾರಿಗಳು ಸ್ಥಗಿತ ಮಾಡಿದ್ದಾರೆ. ಇಂದು ಎಸ್‌ಐಟಿ ಪೊಲೀಸರು ಸುಮಾರು 6 ಗಂಟೆಗಳ ಕಾಲ ಅನಾಮಿಕ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ಮಾಡಿದ್ದಾರೆ.

    ಬೆಳಗ್ಗೆ 10 ಗಂಟೆಯಿಂದ ನಿರಂತರವಾಗಿ ಎಸ್‌ಐಟಿ ಪೊಲೀಸರು ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದಾರೆ. ಅನಾಮಿಕ ದೂರುದಾರನ ಮುಂದೆ ವೀಡಿಯೋ ಪ್ರದರ್ಶನ ಮಾಡಿ ತನಿಖೆ ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ

    ಕೋರ್ಟ್‌ಗೆ ಪ್ರೊಡ್ಯೂಸ್ ಮಾಡಿದ ತಲೆಬುರುಡೆ ತಂದದ್ದೆಲ್ಲಿದ? ಬುರುಡೆ ತಂದಾಗ ಸ್ಥಳದಲ್ಲಿ ಇದ್ದವರು ಯಾರು? ಕತ್ತಿಯಲ್ಲಿ ಬುರುಡೆ ಎತ್ತಿದವರು ಯಾರು? ಸಮಾಧಿಯೊಳಗಿಂದ ನೀನು ಬುರುಡೆ ಅಗೆದು ತಂದಿರುವೆಯಾ? ಕಾಡಿನೊಳಗಿಂದ ಬುರುಡೆ ಎತ್ತಿದ ವೀಡಿಯೋದಲ್ಲಿ ಇರುವವರು ಯಾರು? ಕಾಡಿನ ಒಳಗೆ ಬುರುಡೆ ಸಿಕ್ಕಿದ್ದರೆ ಅದು ಅಸಹಜ ಸಾವಿನ ಪ್ರಕರಣವೋ? ಸಮಾಧಿಯಿಂದ ಬುರುಡೆ ಆಗಿದ್ದು ತಂದದ್ದು ಹೌದಾ? ಅನಾಮಿಕನ ಜೊತೆ ಕೈ ಜೋಡಿಸಿದವರು ಯಾರು ಎಂಬೆಲ್ಲಾ ಪ್ರಶ್ನೆಗಳನ್ನು ತನಿಖಾಧಿಕಾರಿ ಜಿತೇಂದ್ರ ದಯಾಮಾ ಅನಾಮಿಕನಿಗೆ ಕೇಳಿದ್ದಾರೆ. ಇದನ್ನೂ ಓದಿ: ದಾವಣಗೆರೆ| ಬೀದಿ ನಾಯಿ ದಾಳಿಯಿಂದ ರೇಬಿಸ್; 4 ತಿಂಗಳಿಂದ ಆಸ್ಪತ್ರೆಯಲ್ಲಿದ್ದ ಬಾಲಕಿ ಸಾವು

    ಈ ಎಲ್ಲಾ ಪ್ರಶ್ನೆಗಳಿಗೆ ಎಸ್‌ಐಟಿ ಪೊಲೀಸರ ನಿರೀಕ್ಷೆಯಂತೆ ಯಾವುದೇ ಉತ್ತರಗಳು ಅನಾಮಿಕನಿಂದ ಬಂದಿಲ್ಲ. ಬದಲಾಗಿ ಕೋರ್ಟ್‌ಗೆ ಪ್ರೊಡ್ಯೂಸ್ ಮಾಡಿದ ಬುರುಡೆ ಯಾವ ಭಾಗದಿಂದ ತೆಗೆದು ತಂದದ್ದು ಎಂಬ ಪ್ರಶ್ನೆಗೂ ಸರಿಯಾದ ಉತ್ತರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಬಂಗ್ಲೆ ಗುಡ್ಡೆ, ಕಲ್ಲೇರಿ, ರತ್ನಗಿರಿ, ಬೊಳಿಯಾರು ಎಂಬ ಉತ್ತರವನ್ನು ಹೇಳಿದ್ದಾನೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ: ಪರಮೇಶ್ವರ್ ಘೋಷಣೆ

    ಸ್‌ಐಟಿ ಪೊಲೀಸರು ಆರಂಭದಲ್ಲಿ ಮಾಡಬೇಕಾಗಿದ್ದ ತನಿಖೆಯನ್ನು ಈಗ ಶುರು ಮಾಡಿದ್ದಾರೆ. ಕಾಡು ಮೇಡು ಅಲೆಸಿ ಗುಂಡಿ ತೋಡಿಸಿ ಈಗ ಹೊಸ ಕಥೆ ಶುರು ಮಾಡಿದ ಅನಾಮಿಕನ ತನಿಖೆ ಇನ್ನೆತ್ತ ಸಾಗುತ್ತದೆ ಎಂಬ ಕುತೂಹಲ ಎಲ್ಲರಲ್ಲಿ ಮನೆಮಾಡಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ಅನಾಮಿಕನ ಮಂಪರು ಪರೀಕ್ಷೆ ಮಾಡಿ: ಕಿಶೋರ್ ಕುಮಾರ್ ಪುತ್ತೂರು

  • ಧರ್ಮಸ್ಥಳದ ಹೆಸರು ಹಾಳು ಮಾಡೋಕೆ ನೋಡಿದವರು ಯಾರು ಅಂತ ಗೊತ್ತಾಗ್ಬೇಕು: ಬೇಳೂರು ಗೋಪಾಲಕೃಷ್ಣ

    ಧರ್ಮಸ್ಥಳದ ಹೆಸರು ಹಾಳು ಮಾಡೋಕೆ ನೋಡಿದವರು ಯಾರು ಅಂತ ಗೊತ್ತಾಗ್ಬೇಕು: ಬೇಳೂರು ಗೋಪಾಲಕೃಷ್ಣ

    ಬೆಂಗಳೂರು: ಧರ್ಮಸ್ಥಳವನ್ನು(Dharmasthala) ದಕ್ಷಿಣ ಕಾಶಿ ಎಂದು ಕರೆಯುತ್ತೇವೆ. ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ನೋಡಿದವರು ಯಾರು ಎಂಬುದು ಗೊತ್ತಾಗಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalkrishna) ಹೇಳಿದ್ದಾರೆ.

    ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣಕ್ಕ ಸಂಬಂಧಿಸಿದಂತೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಯಾರೋ ಒಬ್ಬ ಅನಾಮಿಕ ಧರ್ಮಸ್ಥಳದಲ್ಲಿ ನೂರಾರು ಹೆಣ ಹೂತಿದ್ದೇನೆ ಎಂದು ಹೈಕೋರ್ಟ್‌ಗೆ ಹೋಗಿದ್ದ. ಕೋರ್ಟ್ ಸೂಚನೆ ಕಾರಣಕ್ಕೆ ಎಸ್‌ಐಟಿ (SIT) ರಚನೆ ಆಗಿದೆ. ಅದು ಸರ್ಕಾರ ಮಾಡಿದ್ದಲ್ಲ. ಈ ವಿಚಾರದಲ್ಲಿ ಬಿಜೆಪಿಯವರು ಹಿಂದುತ್ವದ ಹೆಸರಲ್ಲಿ ರಾಜಕಾರಣ ಮಾಡಬಾರದು. ಮಂಗಳವಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಮಾತನಾಡಿದ್ದೇನೆ. ಅದಕ್ಕೆ ಸಿಎಂ ಸಹ ಸ್ಪಷ್ಟನೆ ನೀಡಿದ್ದಾರೆ. ಯಾರು ಸಹ ಧರ್ಮಸ್ಥಳದ ಹೆಸರು ಹಾಳು ಮಾಡಬಾರದು ಎಂದರು. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ | ರಾಜ್ಯಾದ್ಯಂತ ಪ್ರತಿಭಟನೆ – ವಿಧಾನಸೌಧದಲ್ಲಿ ಹೆಣ ಇದೆ ಅಂದ್ರೆ ಅಗೆಯುತ್ತಾರಾ? ಭಕ್ತರ ಆಕ್ರೋಶ

    ಎಸ್‌ಐಟಿ ಇಂದ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ. 13 ಪಾಯಿಂಟ್ ಕೂಡ ನೋಡಿದ್ದಾರೆ. ಆದರೆ ಅನಾಮಿಕನ ಉದ್ದೇಶ ಏನು? ಅವನು ಯಾಕೆ ಕೋರ್ಟ್‌ಗೆ ಹೋದ? ಹಿಂದೆ ಯಾರಿದ್ದಾರೆ ಎಲ್ಲವೂ ತನಿಖೆ ಆಗಬೇಕು. ಅಲ್ಲಿ ಏನೂ ಸಿಗಲಿಲ್ಲ ಅಂದರೆ ಅವನ ವಿರುದ್ಧವೂ ತನಿಖೆ ಆಗಬೇಕು. ಅವನ ಉದ್ದೇಶ ಏನು ಎಂಬುದು ಬಹಿರಂಗವಾಗಬೇಕು. ಯಾರು ಧರ್ಮಸ್ಥಳ ಹಾಳು ಮಾಡೋಕೆ ನೋಡಿದರು? ಯಾರು ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರೋಕೆ ನೋಡಿದರು ಎಲ್ಲವೂ ಬಹಿರಂಗವಾಗಬೇಕು. ಬಿಜೆಪಿಯವರು ಈ ವಿಚಾರದಲ್ಲೂ ರಾಜಕೀಯ ಮಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ಎಲ್‌ಓಸಿಯಲ್ಲಿ ಪಾಕ್ ಒಳನುಸುಳುಕೋರರ ತಡೆದ ಸೇನೆ; ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮ

  • 11ನೇ ದಿನವೂ ಎಸ್‌ಐಟಿಗೆ ಸಿಗಲಿಲ್ಲ ಕುರುಹು – ಸೋಮವಾರವೂ ಮುಂದುವರಿಯಲಿದೆ ಕಾರ್ಯಾಚರಣೆ

    11ನೇ ದಿನವೂ ಎಸ್‌ಐಟಿಗೆ ಸಿಗಲಿಲ್ಲ ಕುರುಹು – ಸೋಮವಾರವೂ ಮುಂದುವರಿಯಲಿದೆ ಕಾರ್ಯಾಚರಣೆ

    ಮಂಗಳೂರು: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ (Dharmasthala Mass Burials) 11 ದಿನದಿಂದ ದೂರುದಾರ ನಿತ್ಯ ಒಂದೊಂದು ಜಾಗ ತೋರಿಸುತ್ತಾ ಇದಲ್ಲ ಅದು, ಅದಲ್ಲ ಮತ್ತೊಂದು ಎಂದು ಅಧಿಕಾರಿಗಳಿಗೆ ದಾರಿ ತಪ್ಪಿಸುತ್ತಿದ್ದಾನೋ ಗೊತ್ತಿಲ್ಲ. ಎಸ್‌ಐಟಿ (SIT) ಅವರು ದೂರುದಾರ ಹೇಳಿದ ಎಲ್ಲಾ ಸ್ಥಳಗಳನ್ನ ಅಗೆದರೂ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಆದರೂ ದೂರುದಾರ ತೋರಿಸುವ ಎಲ್ಲಾ ಸ್ಥಳಗಳನ್ನು ಪರೀಶೀಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಭಾನುವಾರ ಕಾರ್ಯಾಚರಣೆ ಸ್ಥಗಿತ ಮಾಡಲಿರುವ ಎಸ್‌ಐಟಿ ಸೋಮವಾರ ಕಾರ್ಯಾಚರಣೆ ಮುಂದುವರಿಸಲಿದೆ.

    11 ದಿನದಲ್ಲಿ 16ಕ್ಕೂ ಹೆಚ್ಚು ಜಾಗ ತೋರಿಸಿದ ಸ್ಥಳಗಳಲ್ಲಿ ಕಳೇಬರ ಬಿಟ್ಟು ಸಿಕ್ಕಿದ್ದು ಕಲ್ಲು-ಮಣ್ಣು-ಬಂಡೆ ಬಿಟ್ರೆ ಬೇರೇನೂ ಅಲ್ಲ. ಶನಿವಾರ ಸಹ ಮಳೆ ಮಧ್ಯೆ ಕಾಡಿಗೆ ಊಟ ತರಿಸಿಕೊಂಡು 7 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಲಾಯಿತು. ಪಾಯಿಂಟ್ 16 ಹಾಗೂ 16(ಎ) ಎಂದು 2 ಜಾಗ ಸೇರಿ 20 ಅಡಿ ಅಗಲ 10 ಅಡಿ ಆಳ ತೋಡಿದರೂ ಕೂಡ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಇದರ ಮಧ್ಯೆ ಅನಾಮಿಕ ಜಾಗ ಬದಲಿಸುತ್ತಿರುವುದು ಕೂಡ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಡುತ್ತಿದೆ. ಇದನ್ನೂ ಓದಿ: ಇಂದು ‌ತಾತ್ಕಾಲಿಕವಾಗಿ ಬಂದ್‌ ಆಗಲಿದೆ ಹಸಿರು ಮಾರ್ಗದ 4 ನಿಲ್ದಾಣಗಳು

    ಇನ್ನು ಆ ಅನಾಮಿಕ ಶನಿವಾರ ತೋರಿಸಿದ ಜಾಗ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಧರ್ಮಸ್ಥಳದ ಧಾರ್ಮಿಕ ಕ್ಷೇತ್ರದ ದ್ವಾರಬಾಗಿಲಿನ ಪಕ್ಕದ ಬಾಹುಬಲಿ ಬೆಟ್ಟದ ರಸ್ತೆ ಪಕ್ಕದಲ್ಲೇ ಹೆಣ ಹೂತಿರೋದಾಗಿ ಲೊಕೇಶನ್ ಮಾರ್ಕ್ ಮಾಡಿದ್ದಾನೆ. ಹಾವು-ಬಳುಕಿನ ಮೈಕಟ್ಟು ರಸ್ತೆಯಲ್ಲಿ ದಶಕಗಳ ಹಿಂದೆ ಹೂತ ಹೆಣದ ಜಾಗವನ್ನ ಅದೇ ಮರ ನಿಲ್ಸಿ ಅಂತ ತಟ್ಟನೇ ಗಾಡಿ ನಿಲ್ಲಿಸಿದ್ದಾನೆ. ಮೊದಲ 10 ದಿನದ 15 ಜಾಗವೂ ಕಾಡಿನ ಪ್ರದೇಶ. ಆದರೆ ಮೊದಲ ಬಾರಿಗೆ ನಿತ್ಯ ಹಗಲಿರುಳು ನೂರಾರು ಗಾಡಿ ಓಡಾಡುವ ರೋಡ್ ಪಕ್ಕವೇ ಜಾಗ ತೋರಿಸಿದ್ದ. ಆದರೆ ಅಲ್ಲೂ ಏನು ಸಿಗಲಿಲ್ಲ. ಇದನ್ನೂ ಓದಿ: ಪಬ್ಲಿಕ್ ಟಿವಿ ʻವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ – ಇಂದು ಕೊನೆಯ ದಿನ

    ಒಟ್ಟಾರೆ, 11 ದಿನದಲ್ಲಿ 16 ಜಾಗ ಅಗೆದಿರೋ ಅಧಿಕಾರಿಗಳಿಗೆ ಅನಾಮಿಕ ಹೇಳಿದ ರೀತಿ ಒಂದು ತಲೆಗೂದಲೂ ಸಿಕ್ಕಿಲ್ಲ. ಹೀಗಾಗಿ, ಈತನ ನಡೆ ಮೇಲೆ ಅನುಮಾನ ಮೂಡಿದಂತಿದೆ. ಭಾನುವಾರವಾದ ಕಾರಣ ಎಸ್‌ಐಟಿ ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ. ಸೋಮವಾರವಾದರೂ ಏನಾದರೂ ಸಿಗುತ್ತಾ ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ʻಇದು ಯುದ್ಧದ ಯುಗವಲ್ಲʼ – ಮೋದಿ ಸಂದೇಶ ಉಲ್ಲೇಖಿಸಿ ಅಮೆರಿಕ-ರಷ್ಯಾ ಮಾತುಕತೆಗೆ ಭಾರತ ಬೆಂಬಲ

  • Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

    Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

    – ದೂರು ಸ್ವೀಕರಿಸಿ ಎನ್‌ಸಿಆರ್ ನೀಡಿದ ಪೊಲೀಸರು
    – ನಾನು ಮೃತದೇಹ ಹೂತಿಲ್ಲ, ಆದರೆ ನೋಡಿದ್ದೇನೆ ಎಂದ ದೂರುದಾರ

    ಮಂಗಳೂರು: ಅನಾಮಿಕ ವ್ಯಕ್ತಿ ಕೊಟ್ಟಿರುವ ದೂರಿನಂತೆ 11 ಸ್ಥಳಗಳಲ್ಲಿ ಎಸ್‌ಐಟಿ (SIT) ಶೋಧ ನಡೆಸುತ್ತಿರುವಾಗಲೇ ಈ ಪ್ರಕರಣದಲ್ಲಿ ಮತ್ತೊಬ್ಬ ದೂರುದಾರ ಎಂಟ್ರಿ ಕೊಟ್ಟಿದ್ದಾರೆ. ನಾನು ಮೃತದೇಹ ಹೂತಿಲ್ಲ, ಆದರೆ ನೋಡಿದ್ದೇನೆ. ನನ್ನ ಜೊತೆ ಸಾಕ್ಷಿಗಳು ಇದ್ದಾರೆ ಎಂದು ದೂರುದಾರ ಜಯಂತ್ (Jayanth T) ಹೇಳಿದ್ದಾರೆ.

    ಮೂವರು ವ್ಯಕ್ತಿಗಳ ಜೊತೆ ಬೆಳ್ತಂಗಡಿಯ ಎಸ್‌ಐಟಿಗೆ ಆಗಮಿಸಿದ್ದ ತಂಗಪ್ಪನ್ ಜಯಂತ್, 2002-03ರ ಅವಧಿಯಲ್ಲಿ ರಾಜ್ಯ ಹೆದ್ದಾರಿ 37ರ ಅರಣ್ಯದಲ್ಲಿ ಮೃತದೇಹವೊಂದನ್ನು ಎಸೆದು ಹೋಗಲಾಗಿತ್ತು. ಈ ವಿಷಯವನ್ನು ಸ್ಥಳೀಯ ನಿವಾಸಿಯೊಬ್ಬರು ಬೆಳ್ತಂಗಡಿ ಇನ್ಸ್‌ಪೆಕ್ಟರ್‌ಗೆ ತಿಳಿಸಿದ್ದರು. ಘಟನೆ ನಡೆದು ಒಂದು ವಾರದ ನಂತರ ಪೊಲೀಸ್ ಅಧಿಕಾರಿ ಸ್ಥಳಕ್ಕೆ ಬಂದಿದ್ದಾರೆ. ಅದು 35 ರಿಂದ 40 ವರ್ಷ ಹೆಂಗಸಿನ ಶವ. ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಿ, 2 ಅಡಿ ಆಳದ ಹೊಂಡ ತೆಗೆದು ಹೂತು ಹಾಕಿದ್ದಾರೆ. ಆದರೆ ಮೃತಪಟ್ಟಿದ್ದವರ ವಯಸ್ಸು ಸುಮಾರು 13 ರಿಂದ 15 ವರ್ಷದ ಹೆಣ್ಣು ಮಗು ಅಂತ ಜಯಂತ್ ದೂರಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್

    ಅಲ್ಲದೇ ನಾನು ಮೃತದೇಹ ಹೂತಿಲ್ಲ. ಆದರೆ, ನೋಡಿದ್ದೇನೆ. ನನ್ನ ಜೊತೆ ಸಾಕ್ಷಿಗಳು ಇದ್ದಾರೆ. 15 ವರ್ಷಗಳಿಂದ ಒಬ್ಬ ಒಳ್ಳೆಯ ಅಧಿಕಾರಿಗಾಗಿ ಕಾಯುತ್ತಿದ್ದೆ ಎಂದು ಜಯಂತ್ ಹೇಳಿದ್ದಾರೆ. ಜಯಂತ್ ದೂರಿನ ಅರ್ಜಿಗೆ ಹಿಂಬರಹ ನೀಡಿದ ಎಸ್‌ಐಟಿ, ದೂರನ್ನು ಪರಿಶೀಲಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ಸೂಚಿಸಿದೆ. ಎನ್‌ಸಿಆರ್ ನೀಡಿದ ಪೊಲೀಸರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ದೂರುದಾರ ಜಯಂತ್, ಈ ಘಟನೆಗೆ ನಾನೇ ಪ್ರತ್ಯಕ್ಷ ಸಾಕ್ಷಿ. ನನ್ನ ಜೊತೆ ನಾಲ್ಕೈದು ಮಂದಿ ಪ್ರತ್ಯಕ್ಷ ಸಾಕ್ಷಿ ಇದ್ದಾರೆ. ಗೌಪ್ಯತೆ ಕಾಪಾಡೋದಕ್ಕೆ ದೂರು ಅರ್ಜಿಯಲ್ಲಿ ಕೆಲ ಬದಲಾವಣೆ ಮಾಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ. ಈಗಲೂ ಆ ಪೊಲೀಸ್ ವ್ಯಕ್ತಿ ಬದುಕಿದ್ದಾರೆ. ಈ ದೂರಿನ ಬಗ್ಗೆ ಎಫ್‌ಐಆರ್ ದಾಖಲಿಸಿಕೊಳ್ಳಬೇಕು. ಎಸ್‌ಐಟಿ ಸಂಪೂರ್ಣವಾಗಿ ತನಿಖೆ ಮಾಡಬೇಕು. 1986ರಿಂದ ಕರ್ನಾಟಕದಲ್ಲಿ ಒಳ್ಳೆಯ ಪೊಲೀಸರೇ ನನಗೆ ಸಿಗಲಿಲ್ಲ. ಪದ್ಮಲತಾ ಕೊಲೆ ಪ್ರಕರಣದ ತನಿಖೆ ಆಗಬೇಕು. ಚಾರ್ಮಾಡಿಯಲ್ಲಿ ನಡೆದ ಕೊಲೆ ಪ್ರಕರಣವೂ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಿಜವಾದ ಭಾರತೀಯರಾಗಿದ್ದರೆ ಈ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್‌ಗೆ ಸುಪ್ರೀಂ ಛೀಮಾರಿ

    ಜಯಂತ್ ಆರೋಪ ಏನು?
    *ಅರಣ್ಯ ಪ್ರದೇಶದಲ್ಲಿ ಸಿಕ್ಕ ಮೃತದೇಹದ ಬಗ್ಗೆ ನಿರ್ಲಕ್ಷ್ಯ.
    *ಈ ಘಟನೆ ಬಗ್ಗೆ ಯಾವುದೇ ಪ್ರಕರಣ ದಾಖಲಿಸಿಲ್ಲ
    *ಮೃತದೇಹ ಸಿಕ್ಕ ಸ್ಥಳದ ಮಹಜರು ಮಾಡಿಲ್ಲ
    *ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿಲ್ಲ
    *ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿಲ್ಲ

  • ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

    ಧರ್ಮಸ್ಥಳದ ಅರಣ್ಯದಲ್ಲಿ ಮತ್ತೊಂದು ಅಸ್ಥಿಪಂಜರ ಪತ್ತೆ

    – 11ನೇ ಪಾಯಿಂಟ್‌ನ ಮೇಲ್ಭಾಗದ ಗುಡ್ಡದಲ್ಲಿ ಕಳೇಬರ ಪತ್ತೆ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟ ಶವಗಳ (Dharmasthala Mass Burials) ಜಾಡು ಬೆನ್ನತ್ತಿರುವ ಎಸ್‌ಐಟಿಗೆ (SIT) ಇಂದು ಮತ್ತೊಂದು ಅಸ್ಥಿಪಂಜರ ಪತ್ತೆಯಾಗಿದೆ. 11ನೇ ಪಾಯಿಂಟ್‌ನ ಮೇಲ್ಭಾಗದ ಗುಡ್ಡದಲ್ಲಿ ಕಳೇಬರ ಪತ್ತೆಯಾಗಿದೆ. 5 ಅಡಿ ಆಳದಲ್ಲಿ ಅಸ್ಥಿಪಂಜರದ ಅವಶೇಷ ಸಿಕ್ಕಿದೆ.

    ಅನಾಮಿಕ ದೂರುದಾರ ಗುರುತಿಸಿದ ಪಾಯಿಂಟ್ ನಂಬರ್ 11ರಲ್ಲಿ ಉತ್ಖನನಕ್ಕೆ ಎಸ್‌ಐಟಿ ಮುಂದಾಗಿದ್ದಾಗ ದೂರುದಾರ ಏಕಾಏಕಿ ಪಾಯಿಂಟ್ 11ರ ಸ್ಥಳ ಬದಲಾವಣೆ ಮಾಡಿಸಿದ್ದಾನೆ. ಈ ಜಾಗ ಅಲ್ಲ ಸ್ವಲ್ಪ ಮೇಲ್ಭಾಗಕ್ಕೆ ಬನ್ನಿ ಅಂತ ಗುಡ್ಡಕ್ಕೆ ಕರೆದೊಯ್ದು ಗುಂಡಿ ತೋಡಿಸಿದ್ದಾನೆ. ಈ ಗುಂಡಿಯಲ್ಲಿ ಅಸ್ಥಿಪಂಜರದ ಕುರುಹುಗಳು ಲಭ್ಯವಾಗಿರೋದಾಗಿ ಎಸ್‌ಐಟಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸ್ಯಾನ್‌ಫ್ರ್ಯಾನ್ಸಿಸ್ಕೋ-ಮುಂಬೈ ವಿಮಾನದಲ್ಲಿ ಜಿರಳೆ ಪತ್ತೆ – ಕ್ಷಮೆಯಾಚಿಸಿದ ಏರ್‌ಇಂಡಿಯಾ

    ವಿಶೇಷ ತನಿಖಾ ತಂಡ ಇಂದು ಪಾಯಿಂಟ್ 11 ರಲ್ಲಿ ಉತ್ಕನನ ನಡೆಸಬೇಕಿತ್ತು. ಆದರೆ ಈ ಜಾಗವನ್ನು ಅಗೆಯದೇ ದೂರುದಾರ ಎಸ್‌ಐಟಿ ತಂಡವನ್ನು ಮೇಲ್ಭಾಗಕ್ಕೆ ಕರೆದುಕೊಂಡು ಹೋಗಿದ್ದಾನೆ. 8, 9, 10, 11, 12 ಈ ಸ್ಥಳಗಳಲ್ಲಿ ಅತಿ ಹೆಚ್ಚು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರ ದೂರು ನೀಡಿದ್ದ. ಈ ದೂರಿನಂತೆ ಪಾಯಿಂಟ್ ನಂಬರ್ 8, 9, 10 ರಲ್ಲಿ ಸ್ಥಳ ಅಗೆದು ಎಸ್‌ಐಟಿ ತಂಡ ಉತ್ಕನನ ನಡೆಸಿತ್ತು. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನ ಟಿಪ್ಪು ಸುಲ್ತಾನ್ ಸಾಗರ ಮಾಡಲು ಕಾಂಗ್ರೆಸ್ ಹುನ್ನಾರ: ಅಶೋಕ್

    ಈ ಮೂರು ಜಾಗದಲ್ಲಿ 5 ರಿಂದ 6 ಅಡಿ ಅಗೆದರೂ ಯಾವುದೇ ಅಸ್ಥಿ ಪತ್ತೆಯಾಗಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಪಾಯಿಂಟ್ 11ರಿಂದ ಉತ್ಕನನ ನಡೆಯಬೇಕಿತ್ತು. ಪಾಯಿಂಟ್ ನಂಬರ್ 11,12 ರಲ್ಲಿ ಉತ್ಖನನಕ್ಕೆ ಎಸ್‌ಐಟಿ ಸಕಲ ಸಿದ್ದತೆ ಮಾಡಿತ್ತು. ಇಂದು ಬೆಳಗ್ಗೆ ದೂರುದಾರನನ್ನು ಪಾಯಿಂಟ್ 11ಕ್ಕೆ ಪೊಲೀಸರು ಕರೆ ತಂದಿದ್ದರು. ಆದರೆ ಇಲ್ಲಿ ಯಾವುದೇ ಉತ್ಕನನ ನಡೆಸದೇ ದೂರುದಾರ ಪಾಯಿಂಟ್ ನಂ 11 ಮೇಲಿರುವ ಗುಡ್ಡವನ್ನು ತೋರಿಸಿದ್ದಾನೆ. ಹೀಗಾಗಿ ಎಸ್‌ಐಟಿ ತಂಡ ಅನಾಮಿಕ ತೋರಿಸಿದ ಗುಡ್ಡವನ್ನು ಹತ್ತಿ ಪರಿಶೀಲನೆ ನಡೆಸಿದೆ. ದೂರುದಾರ ವ್ಯಕ್ತಿ ಹೊಸ ಜಾಗವನ್ನು ಪತ್ತೆ ಮಾಡಿರುವ ಸಾಧ್ಯತೆ ಇದ್ದು, ಕಾರ್ಮಿಕರು ಒಂದು ಮೂಟೆ ಉಪ್ಪು ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಗ್ರಾ.ಪಂ ಸದಸ್ಯನ ಕಿಡ್ನ್ಯಾಪ್‌ಗೆ ಯತ್ನಿಸಿ ವಿಫಲ – ಚಾಕು ಇರಿದು ದುಷ್ಕರ್ಮಿಗಳು ಎಸ್ಕೇಪ್

    ಈ ಹಿಂದೆ ಪಾಯಿಂಟ್ 6ರಲ್ಲಿ ಮಾತ್ರ ಕಳೇಬರ ಸಿಕ್ಕಿದ್ದರೆ, ಪಾಯಿಂಟ್ 1ರಲ್ಲಿ ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್‌ಗಳು ಸಿಕ್ಕಿದ್ದವು. ಉತ್ಖನನ ಕಾರ್ಯದ ಸ್ಥಳದಲ್ಲಿ ಜನ ಜಮಾಯಿಸಿದ್ದರು. ತಪ್ಪಿತಸ್ಥರಿಗೆ ಶಿಕ್ಷೆ ಆಗ್ಲಿ, ಆದರೆ, ಪವಿತ್ರ ಕ್ಷೇತ್ರದ ಹೆಸರು ಕೆಡಿಸಬೇಡಿ ಅಂತ ಸ್ಥಳೀಯ ನಿವಾಸಿ ಆರಿಶ್ ಮೊಹಮ್ಮದ್ ಹೇಳಿದ್ದಾರೆ. ಇದನ್ನೂ ಓದಿ: ರಾಯರ 354ನೇ ಆರಾಧನಾ ಮಹೋತ್ಸವ ಆಗಸ್ಟ್ 8ರಿಂದ ಆರಂಭ: ಮಂತ್ರಾಲಯ ಶ್ರೀ

    ಈ ಮಧ್ಯೆ ದೂರುದಾರನ ಪರ ವಕೀಲರು ಮತ್ತಷ್ಟು ಪಾಯಿಂಟ್ ಗುರುತಿಸಲು ಅವಕಾಶ ಕೊಡಿ ಎಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್‌ಗೆ ಒತ್ತಾಯ ಮಾಡಿದ್ದಾರೆ. ಆದರೆ, ವಕೀಲರ ಮನವಿಯನ್ನು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ತಿರಸ್ಕರಿಸಿದ್ದಾರೆ. ಸದ್ಯಕ್ಕೆ 13 ಸ್ಥಳಗಳಲ್ಲಿ ಮಾತ್ರ ಶೋಧಿಸುತ್ತೇವೆ. ಎಸ್‌ಐಟಿ ಸೂಚಿಸಿದಲ್ಲಿ ಮಾತ್ರ ನಾವು ಪರಿಶೀಲನೆ ಮಾಡುತ್ತೇವೆ ಎಂದು ಎಸಿ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಎಡ ಸಮುದಾಯಕ್ಕೆ 7% ಒಳಮೀಸಲಾತಿ ಕೊಡಬೇಕು – ಆಂಜನೇಯ

  • ಅನಾಮಿಕ ವ್ಯಕ್ತಿ ನಟೋರಿಯಸ್ ಕೆಲಸ ಮಾಡಿ ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ: ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ

    ಅನಾಮಿಕ ವ್ಯಕ್ತಿ ನಟೋರಿಯಸ್ ಕೆಲಸ ಮಾಡಿ ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ: ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ

    ಮಂಗಳೂರು: ಅನಾಮಿಕ ವ್ಯಕ್ತಿ ಯಾರು ಅಂತ ಇಡೀ ಧರ್ಮಸ್ಥಳದವರಿಗೆ (Dharmasthala) ಈಗ ಗೊತ್ತಾಗಿದೆ. ಆತ ನಟೋರಿಯಸ್ ಕೆಲಸ ಮಾಡಿದ ಕ್ಷೇತ್ರದಿಂದ ಉಚ್ಚಾಟನೆ ಆಗಿದ್ದ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ವಕೀಲ ಕೇಶವ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿ (Dharmasthala Mass Burials) ಪ್ರಕರಣ ಸಂಬಂಧ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಪ್ರತಿದಿನ 30 ಸಾವಿರದಷ್ಟು ಪ್ರವಾಸಿಗರು ಧರ್ಮಸ್ಥಳಕ್ಕೆ ಬರುತ್ತಾರೆ. ಅನೇಕ ಸಮಸ್ಯೆಗಳಿಂದ ಬಂದು ಜೀವನವನ್ನು ಅಂತ್ಯ ಮಾಡುತ್ತಿದ್ದರು. ಪ್ರವಾಸಿಗರು ಮೃತಪಟ್ಟರೆ ಅಂತ್ಯಸಂಸ್ಕಾರ ಮಾಡುವುದೇ ದೊಡ್ಡ ಸಾಹಸವಾಗಿತ್ತು. ಅನಾಮಿಕ ವ್ಯಕ್ತಿ ಹೆಣದ ಮೇಲೆ ಇದ್ದ ಚಿನ್ನ, ಹಣ ಕದಿಯುತ್ತಿದ್ದ. ಈ ಕಾರಣಕ್ಕೆ ಆತನನ್ನು 2014ರಲ್ಲಿ ಕೆಲಸದಿಂದ ತೆಗೆದು ಹಾಕಲಾಗಿತ್ತು. ಈ ಬೆಳವಣಿಗೆ ಹಿಂದೆ ಇರುವ ಷಡ್ಯಂತ್ರ ಯಾರದ್ದು ಎಂದು ಗೊತ್ತಿದೆ. ಕ್ಷೇತ್ರದ ಮೇಲೆ ಆರೋಪ ಮಾಡುವವರಿಗೆ ದೇವರು ತಕ್ಕ ಬುದ್ಧಿ ಕೊಡಲಿ ಎಂದರು. ಇದನ್ನೂ ಓದಿ: ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

    ಅನಾಮಿಕ ವ್ಯಕ್ತಿಯ ಹಿಂದೆ ಯಾರಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಈ ವ್ಯಕ್ತಿಯನ್ನು ವಿಚಾರಣೆ ಮಾಡಬೇಕು, ಮಂಪರು ಪರೀಕ್ಷೆ ಮಾಡಬೇಕು. ಆತನ ಹಿನ್ನೆಲೆಯಲ್ಲಿರುವವರ ಬ್ರೈನ್ ಮ್ಯಾಪಿಂಗ್ ಮಾಡಬೇಕು. ಅನಾಮಿಕ ಹೇಳಿದ ಹಾಗೆ ಕೊಲೆ, ಅತ್ಯಾಚಾರ, ಅನ್ಯಾಯ ಪ್ರಕರಣ ನಡೆದಿಲ್ಲ. ಉತ್ಖನನ ಸಂದರ್ಭ ಒಂದೆರಡು ಮೃತ ದೇಹ ಸಿಕ್ಕರೂ ಅಚ್ಚರಿಯಿಲ್ಲ. ಎಸ್‌ಐಟಿ (SIT) ಮೂಲಕ ಎಲ್ಲಾ ರೀತಿಯ ಸಮಗ್ರ ತನಿಖೆಯಾಗಲಿ ಎಂದು ತಿಳಿಸಿದರು. ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

    ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ರಾಜೀನಾಮೆ ಕೊಡಲು ಒತ್ತಾಯಿಸುತ್ತಾರೆ. ರಾಜೀನಾಮೆ ಕೊಡಲು ಮುಖ್ಯಮಂತ್ರಿ ಅಥವಾ ಶಾಸಕರಲ್ಲ, ಅವರು ಕ್ಷೇತ್ರದ ಧರ್ಮಾಧಿಕಾರಿಗಳು. ವಕೀಲರು ಹತ್ತಾರು ಹೆಣಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ, ಇಂತಹ ಬಣ್ಣದ ಕಾಗೆಗಳನ್ನು ಹಾರಿಸುತ್ತಾರೆ. ಎಲ್ಲರ ತನಿಖೆ ಆಗಬೇಕು, ಎಲ್ಲಾ ಸತ್ಯಗಳು ಹೊರಬರಬೇಕು ಎಂದು ಹೇಳಿದರು. ಇದನ್ನೂ ಓದಿ: ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದ್ರೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ – ಸಿಎಂ

  • ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ | ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರು ತಳುಕು

    ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ | ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರು ತಳುಕು

    – ಹೆಣ ಹೂಳಲು ಪೊಲೀಸ್ ಅಧಿಕಾರಿ ಕೂಡ ಸಾಥ್ ನೀಡಿದ್ದಾಗಿ ತಿಳಿಸಿದ ದೂರುದಾರ
    – ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯದಲ್ಲಿ ಇಂದು ಉತ್ಖನನ ಕಾರ್ಯ

    ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ವ್ಯಕ್ತಿ ನನಗೆ ಹೆಣ ಹೂಳಲು ಓರ್ವ ಪೊಲೀಸ್ ಅಧಿಕಾರಿ ಸಾಥ್ ನೀಡಿರುವುದಾಗಿ ತಿಳಿಸಿದ್ದಾನೆ.

    ಎಸ್‌ಐಟಿ (SIT) ವಿಚಾರಣೆ ವೇಳೆ ದೂರುದಾರ ವ್ಯಕ್ತಿ ಓರ್ವ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರನ್ನು ಬಾಯ್ಬಿಟ್ಟಿದ್ದಾನೆ. ನಾನು ಹೆಣ ಹೂಳುವಾಗ ಈ ಅಧಿಕಾರಿ ಕೂಡ ನನಗೆ ಸಾಥ್ ನೀಡಿರುವುದಾಗಿ ತಿಳಿಸಿದ್ದಾನೆ. ದೂರುದಾರನ ಮಾಹಿತಿ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು 1995ರಿಂದ ಧರ್ಮಸ್ಥಳ ಔಟ್ ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದವರ ಲಿಸ್ಟ್ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಮನವಿ ಪತ್ರ ಕಳುಹಿಸಿದ್ದಾರೆ.ಇದನ್ನೂ ಓದಿ: ದಾವಣಗೆರೆ | ಕಡಿಮೆ ಬೆಲೆಗೆ 250 ಗ್ರಾಂ ಚಿನ್ನದ ನಾಣ್ಯ ನೀಡುವುದಾಗಿ 5 ಲಕ್ಷ ವಂಚಿಸಿ ಪರಾರಿ

    ಇನ್ನೂ ಇಂದು ಎರಡನೇ ದಿನದ ಉತ್ಖನನ ಪ್ರಕ್ರಿಯೆ ಆರಂಭವಾಗಿದ್ದು, ಎಸಿ ಸ್ಟೆಲ್ಲಾ ವರ್ಗೀಸ್, ಡಿಐಜಿ ಅನುಚೇತ್, ತನಿಖಾಧಿಕಾರಿ ಜಿತೇಂದ್ರ ದಯಾಮ ಅವರ ಸಮ್ಮುಖದಲ್ಲೇ ಒಟ್ಟು 20 ಕಾರ್ಮಿಕರಿಂದ ಉತ್ಖನನ ಕಾರ್ಯ ನಡೆಯುತ್ತಿದೆ ಇಂದು ಒಂದೇ ಸಮಯದಲ್ಲಿ ಎರಡು ಪಾಯಿಂಟ್‌ನಲ್ಲಿ ಅಗೆಯುತ್ತಿದ್ದು, ಉತ್ಖನನ ಪ್ರಕ್ರಿಯೆ ಬೇಗ ಮುಗಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ 2 ರಿಂದ 8 ಸಂಖ್ಯೆಯವರೆಗೆ ಅರಣ್ಯ ಪ್ರದೇಶದಲ್ಲಿ ಗುರುತಿಸಲಾಗಿದ್ದು, ಈ ಜಾಗದಲ್ಲಿ ಹಿಟಾಟಿ ಹೋಗೋದು ಕಷ್ಟವಾಗಿದೆ. ಒಂದು ವೇಳೆ ಹೋದರೂ ಕೂಡ ಅರಣ್ಯ ಇಲಾಖೆ ಹೋಗದಂತೆ ನಿರ್ಬಂಧ ಹೇರಿದೆ. ಹೀಗಾಗಿ ಇಂದಿನ ಉತ್ಖನನ ಕಾರ್ಯ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ.

    ಸೋಮವಾರ ದೂರುದಾರ (ಜು.28) 13 ಜಾಗಗಳನ್ನು ಗುರುತಿಸಿದ್ದ. ಅದಾದ ಬಳಿಕ ಮಂಗಳವಾರ ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಎಸ್‌ಐಟಿ ಅಗೆಯುವ ಕೆಲಸ ಆರಂಭಿಸಿತ್ತು, 12 ಜನ ಕಾರ್ಮಿಕರು, ನಾಲ್ವರು ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಸಮ್ಮುಖದಲ್ಲೇ ಬೆಳಿಗ್ಗೆ 11 ಗಂಟೆಗೆ ಶುರುವಾದ ಶೋಧ ಕಾರ್ಯ 7 ತಾಸು ನಡೆದಿತ್ತು. ಆದರೆ 15 ಅಡಿ ಅಗಲ, 8 ಅಡಿ ಆಳ ಅಗೆದರೂ ಯಾವುದೇ ಕುರುಹು ಸಿಕ್ಕಿರಲಿಲ್ಲ. ಬಳಿಕ ಎಸ್‌ಐಟಿ ಅಧಿಕಾರಿಗಳು, ಆಳಕ್ಕೆ ಹೋದಷ್ಟು ಅಸ್ಥಿಪಂಜರ ಸಿಗಬಹುದು ಎನ್ನುವ ಕಾರಣಕ್ಕಾಗಿ ಹಿಟಾಚಿಯಿಂದಲೂ ಕಾರ್ಯಾಚರಣೆ ನಡೆಸಿದ್ದರು. ಆದರೂ ಕೂಡ ಯಾವುದೇ ಕಳೇಬರ ಸಿಕ್ಕಿರಲಿಲ್ಲ.

    ಸೋಮವಾರ ಗುರುತಿಸಿರೋ ಎಲ್ಲಾ 13 ಜಾಗಗಳಿಗೂ ಎಸ್‌ಐಟಿ ವಿಶೇಷ ಭದ್ರತೆ ಕಲ್ಪಿಸಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ 2 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನ ನೇಮಕ ಮಾಡಿದ್ದು, ದಟ್ಟ ಅರಣ್ಯದಲ್ಲಿ ರಾತ್ರಿ ಹಗಲು ಸರ್ಪಗಾವಲು ಹಾಕಿದೆ. ಗುರುತಿಸಿದ ಜಾಗಗಳಿಗೆ ಟೇಪ್ ಹಾಕಿ, ಎಲ್ಲದಕ್ಕೂ ನಂಬರ್ ನೀಡಲಾಗಿದೆ.ಇದನ್ನೂ ಓದಿ: ಬೆಂಗಳೂರು | ಅಲ್-ಖೈದಾ ಜೊತೆ ನಂಟು – ಜಾರ್ಖಂಡ್ ಮೂಲದ ಮಹಿಳೆ ಬಂಧನ

  • ಧರ್ಮಸ್ಥಳ ಫೈಲ್ಸ್‌ | ನಿಗೂಢ ಸತ್ಯದ ಬೆನ್ನತ್ತಿದ SIT – ನೇತ್ರಾವತಿ ಸ್ನಾನಘಟ್ಟ ಬಳಿ ಶವಗಳ ಉತ್ಖನನ ಕಾರ್ಯ ಶುರು

    ಧರ್ಮಸ್ಥಳ ಫೈಲ್ಸ್‌ | ನಿಗೂಢ ಸತ್ಯದ ಬೆನ್ನತ್ತಿದ SIT – ನೇತ್ರಾವತಿ ಸ್ನಾನಘಟ್ಟ ಬಳಿ ಶವಗಳ ಉತ್ಖನನ ಕಾರ್ಯ ಶುರು

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ (Dharmasthala Burials Case) ತನಿಖೆ ನಿರ್ಣಾಯಕ ಹಂತ ತಲುಪಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದು, ಇಂದಿನಿಂದ ಶವಗಳನ್ನು ಹೊರತೆಯುವ ಕಾರ್ಯ ಶುರು ಮಾಡಲಾಗುತ್ತಿದೆ.

    ನಿನ್ನೆ (ಸೋಮವಾರ) ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಸಮಾಧಿ ಅಗೆಯುವ ಕೆಲಸಕ್ಕೆ ಎಸ್‌ಐಟಿ (SIT) ಮುಂದಾಗಿದೆ. ಅದಕ್ಕಾಗಿ 12 ಕಾರ್ಮಿಕರನ್ನು ನಿಯೋಜನೆ ಮಾಡಿಕೊಂಡಿದೆ ವಿಶೇಷ ತನಿಖಾ ತಂಡ. ಗ್ರಾಮ ಪಂಚಾಯಿತಿಯಿಂದ 12 ಕಾರ್ಮಿಕರನ್ನ ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಧರ್ಮಸ್ಥಳ ಗ್ರಾಪಂ ನಿಂದ ಉತ್ಖನನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಸ್ಟೆಲ್ಲಾ ವರ್ಗೀಸ್, ಕಂದಾಯ ಇಲಾಖೆ ಇತರ ಸಿಬ್ಬಂದಿಗಳೂ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇಂದಿನಿಂದ ಸಮಾಧಿ ಅಗೆಯುವ ಕಾರ್ಯ ಶುರುವಾಗಲಿದೆ.

    ನೇತ್ರಾವತಿ ಸ್ನಾನಘಟ್ಟದ ಬಳಿ ಈಗಾಗಲೇ ಸಿಬ್ಬಂದಿಗಳು ‌ಬಂದಿದ್ದು, 12 ಕಾರ್ಮಿಕರ ತಂಡ ಆರೆ, ಪಿಕಾಸಿ, ಗುದ್ದಲಿ ಜೊತೆಗೆ ಸಮಾಧಿ ಅಗೆಯಲು ಬೇಕಾದ ಎಲ್ಲ ಸಾಮಗ್ರಿಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲದೇ ನಾಲ್ವರು ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಕೆಲವೇ ಕ್ಷಣಗಳಲ್ಲಿ ಇವರೆಲ್ಲರ ಸಮಕ್ಷಮದಲ್ಲಿ ಸಮಾಧಿ ಅಗೆಯುವ ಕೆಲಸ ಶುರುವಾಗಲಿದೆ.

    ಸೋಮವಾರ ಧರ್ಮಸ್ಥಳ ಗ್ರಾಮದ ಬೇರೆ ಬೇರೆ ಕಡೆಗಳಲ್ಲಿ ಶವ ಹೂತಿಟ್ಟ 13 ಜಾಗಗಳನ್ನ ಗುರುತು ಮಾಡಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಆತನನ್ನು ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದ ಬಳಿ ಕರೆ ತಂದು, ಸ್ನಾನಘಟ್ಟದ ಎಡ ಬದಿಯಲ್ಲಿ ಎರಡು ಗಂಟೆಗಳ ಕಾಲ ಒಂದು ಕಿಲೋಮೀಟರ್ ಸಾಗಿ ಒಟ್ಟು 8 ಸ್ಥಳಗಳನ್ನ ಗುರುತಿಸಲಾಗಿತ್ತು. ಬಳಿಕ ನೇತ್ರಾವತಿ ಸ್ನಾನಘಟ್ಟ ಹಾಗೂ ನೇತ್ರಾವತಿ ಸೇತುವೆಯ ಮಧ್ಯಭಾಗದ ಅರಣ್ಯ ಪ್ರದೇಶದಲ್ಲಿ ನಾಲ್ಕು ಜಾಗಗಳನ್ನ ಗುರುತಿಸಲಾಗಿದೆ. ಬಳಿಕ ನೇತ್ರಾವತಿ ಸ್ನಾನಘಟ್ಟದ ಬಲ ಬದಿಯಲ್ಲಿದ್ದ ಅಜಿಕುರಿ ರಸ್ತೆ ಬದಿಯ ಜಾಗದಲ್ಲೂ ಶವ ಹೂತಿಟ್ಟಿರೋದಾಗಿ ಅನಾಮಿಕ ವ್ಯಕ್ತಿ ಗುರುತಿಸಿದ್ದಾರೆ. ಸೋಮವಾರ ಒಟ್ಟು 15 ಸ್ಥಳಗಳನ್ನು ಗುರುತಿಸುವ ತಯಾರಿ ಎಸ್‌ಐಟಿ ನಡೆಸಿದ್ದರೂ ಕತ್ತಲಾದ ಹಿನ್ನೆಲೆಯಲ್ಲಿ 13 ಸ್ಥಳಗಳನ್ನ ಮಾತ್ರ ಗುರುತಿಸಲಾಗಿತ್ತು.

    ಸೋಮವಾರ ಗುರುತಿಸಿರೋ ಎಲ್ಲಾ 13 ಜಾಗಗಳಿಗೂ ಎಸ್‌ಐಟಿ ವಿಶೇಷ ಭದ್ರತೆ ಕಲ್ಪಿಸಿದೆ. ಮಹಜರಿನ ಮೊದಲ ದಿನ 13 ಸ್ಥಳಗಳನ್ನು ಗುರುತಿಸಿದ ಸ್ಥಳಗಳ ದಾಖಲೀಕರಣ ಮಾಡಿದ ಎಸ್‌ಐಟಿ ಟೀಮ್ ಗುರುತಿಸಿದ ಎಲ್ಲಾ ಸ್ಥಳಗಳಲ್ಲಿ ಬಿಗಿ ಭದ್ರತೆ ಮಾಡಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ 2 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನ ನೇಮಕ ಮಾಡಿದ್ದು, ದಟ್ಟ ಅರಣ್ಯದಲ್ಲಿ ರಾತ್ರಿ ಹಗಲು ಸರ್ಪಗಾವಲು ಹಾಕಿದೆ. ಗುರುತಿಸಿದ ಜಾಗಗಳಿಗೆ ಟೇಪ್ ಹಾಕಿ, ಎಲ್ಲದಕ್ಕೂ ನಂಬರ್ ನೀಡಲಾಗಿದೆ. ಇಂದು ಮತ್ತೆ ಉಳಿದಿರೋ ಜಾಗಗಳ ಗುರುತಿಸುವ ಕೆಲಸ ನಡೆಯಲಿದ್ದು, ಬಳಿಕ ಎಲ್ಲವನ್ನ ಅಗೆಯುವ ತೀರ್ಮಾನವನ್ನು ಎಸ್‌ಐಟಿ ಮಾಡಿದೆ.

  • ಧರ್ಮಸ್ಥಳ ಫೈಲ್ಸ್; ಪ್ರಮುಖ ಘಟ್ಟ ತಲುಪಿದ ತನಿಖೆ – ಇಂದು ಮತ್ತಷ್ಟು ಜಾಗಗಳ ಗುರುತು

    ಧರ್ಮಸ್ಥಳ ಫೈಲ್ಸ್; ಪ್ರಮುಖ ಘಟ್ಟ ತಲುಪಿದ ತನಿಖೆ – ಇಂದು ಮತ್ತಷ್ಟು ಜಾಗಗಳ ಗುರುತು

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ (Dharmasthala Mass Burials) ತನಿಖೆ ಪ್ರಮುಖ ಘಟ್ಟ ತಲುಪಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದಾರೆ. ಇನ್ನುಳಿದ ಜಾಗಗಳನ್ನೂ ಇಂದು ಗುರುತಿಸಲಿದ್ದು, ಬಳಿಕ ಗುರುತಿಸಿರೋ ಜಾಗಗಳನ್ನು ಅಗೆಯಲು ಎಸ್‌ಐಟಿ (SIT) ತೀರ್ಮಾನಿಸಿದೆ.

    ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನ ಹೂತಿಟ್ಟಿದ್ದೇನೆ ಎಂದು ಅನಾಮಿಕ ವ್ಯಕ್ತಿ ದೂರು ನೀಡಿದ್ದ. ಆ ಬಳಿಕ ತನಿಖೆಗೆ ರಚನೆಯಾಗಿದ್ದ ಎಸ್‌ಐಟಿ, ದೂರುದಾರ ವ್ಯಕ್ತಿಯನ್ನ ಎರಡು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಎಲ್ಲೆಲ್ಲಿ ಶವಗಳನ್ನ ಹೂತಿಟ್ಟಿದ್ದೇನೆ ಎಂದು ಆತ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮದ ಬೇರೆ ಬೇರೆ ಕಡೆಗಳಲ್ಲಿ ಶವ ಹೂತಿಟ್ಟ ಜಾಗಗಳನ್ನ ಗುರುತು ಮಾಡಲಾಗಿದೆ. ಇದನ್ನೂ ಓದಿ: ‘ನಾಗ ದೇವರ’ ಮಹಿಮೆ ಸಾರುವ ಕನ್ನಡದ ಸಿನಿಮಾಗಳು

    ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಆತನನ್ನು ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದ ಬಳಿ ಕರೆ ತಂದು, ಸ್ನಾನಘಟ್ಟದ ಎಡ ಬದಿಯಲ್ಲಿ ಎರಡು ಗಂಟೆಗಳ ಕಾಲ ಒಂದು ಕಿಲೋಮೀಟರ್ ಸಾಗಿ ಒಟ್ಟು 8 ಸ್ಥಳಗಳನ್ನ ಗುರುತಿಸಲಾಗಿತ್ತು. ಬಳಿಕ ನೇತ್ರಾವತಿ ಸ್ನಾನಘಟ್ಟ ಹಾಗೂ ನೇತ್ರಾವತಿ ಸೇತುವೆಯ ಮಧ್ಯಭಾಗದ ಅರಣ್ಯ ಪ್ರದೇಶದಲ್ಲಿ ನಾಲ್ಕು ಜಾಗಗಳನ್ನ ಗುರುತಿಸಲಾಗಿದೆ. ಬಳಿಕ ನೇತ್ರಾವತಿ ಸ್ನಾನಘಟ್ಟದ ಬಲ ಬದಿಯಲ್ಲಿದ್ದ ಅಜಿಕುರಿ ರಸ್ತೆ ಬದಿಯ ಜಾಗದಲ್ಲೂ ಶವ ಹೂತಿಟ್ಟಿರೋದಾಗಿ ಅನಾಮಿಕ ವ್ಯಕ್ತಿ ಗುರುತಿಸಿದ್ದಾರೆ. ಸೋಮವಾರ ಒಟ್ಟು 15 ಸ್ಥಳಗಳನ್ನು ಗುರುತಿಸುವ ತಯಾರಿ ಎಸ್‌ಐಟಿ ನಡೆಸಿದ್ದರೂ ಕತ್ತಲಾದ ಹಿನ್ನೆಲೆಯಲ್ಲಿ 13 ಸ್ಥಳಗಳನ್ನ ಮಾತ್ರ ಗುರುತಿಸಲಾಗಿದೆ. ಇಂದು ಮತ್ತಷ್ಟು ಜಾಗಗಳ ಗುರುತಿಸೋ ಕೆಲಸ ಮುಂದುವರಿಯಲಿದೆ. ಇದನ್ನೂ ಓದಿ: ಅಸಾಮಾನ್ಯ ಶಕ್ತಿಯ ʻನಾಗʼತಾಣಗಳ ಬಗ್ಗೆ ನಿಮಗೆ ಗೊತ್ತೇ? ಇಲ್ಲಿ ನಂಬಿಕೆ ಸುಳ್ಳಾಗಿಲ್ಲ ಅಂತಾರೆ ಭಕ್ತರು!

    ಸೋಮವಾರ ಗುರುತಿಸಿರೋ ಎಲ್ಲಾ 13 ಜಾಗಗಳಿಗೂ ಎಸ್‌ಐಟಿ ವಿಶೇಷ ಭದ್ರತೆ ಕಲ್ಪಿಸಿದೆ. ಮಹಜರಿನ ಮೊದಲ ದಿನ 13 ಸ್ಥಳಗಳನ್ನು ಗುರುತಿಸಿದ ಸ್ಥಳಗಳ ದಾಖಲೀಕರಣ ಮಾಡಿದ ಎಸ್‌ಐಟಿ ಟೀಮ್ ಗುರುತಿಸಿದ ಎಲ್ಲಾ ಸ್ಥಳಗಳಲ್ಲಿ ಬಿಗಿ ಭದ್ರತೆ ಮಾಡಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ 2 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನ ನೇಮಕ ಮಾಡಿದ್ದು, ದಟ್ಟ ಅರಣ್ಯದಲ್ಲಿ ರಾತ್ರಿ ಹಗಲು ಸರ್ಪಗಾವಲು ಹಾಕಿದೆ. ಗುರುತಿಸಿದ ಜಾಗಗಳಿಗೆ ಟೇಪ್ ಹಾಕಿ, ಎಲ್ಲದಕ್ಕೂ ನಂಬರ್ ನೀಡಲಾಗಿದೆ. ಇಂದು ಮತ್ತೆ ಉಳಿದಿರೋ ಜಾಗಗಳ ಗುರುತಿಸುವ ಕೆಲಸ ನಡೆಯಲಿದ್ದು, ಬಳಿಕ ಎಲ್ಲವನ್ನ ಅಗೆಯುವ ತೀರ್ಮಾನವನ್ನು ಎಸ್‌ಐಟಿ ಮಾಡಿದೆ. ಇದನ್ನೂ ಓದಿ: ಜೋಕಾಲಿ ಆಡಿ, ಕೊಬ್ಬರಿ ಕುಬುಸ ಕೊಡೋದೆ ಉತ್ತರ ಕರ್ನಾಟಕದ ನಾಗರ ಪಂಚಮಿ