Tag: ‌ಧರ್ಮಸ್ಥಳ ಶವ ಹೂತಿಟ್ಟ ಕೇಸ್‌

  • ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು, ಇಲ್ಲದಿದ್ರೆ ಸದನದಲ್ಲಿ ಹೋರಾಟ: ಆರ್.ಅಶೋಕ್

    ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು, ಇಲ್ಲದಿದ್ರೆ ಸದನದಲ್ಲಿ ಹೋರಾಟ: ಆರ್.ಅಶೋಕ್

    ಬೆಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ (Dharmasthala Mass Burials) ಸಂಬಂಧ ಸರ್ಕಾರ ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು. ಇಲ್ಲದಿದ್ರೆ ಸದನದಲ್ಲಿ ಹೋರಾಟ ಮಾಡ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಎಚ್ಚರಿಕೆ ನೀಡಿದ್ದಾರೆ.

    ಎಸ್‌ಐಟಿಯು (SIT) ಉತ್ಖನನ ಕಾರ್ಯವನ್ನು ಅಂತ್ಯಗೊಳಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿದಿನ ಒಂದು ಲಕ್ಷ ಕೇಸ್ ಬರುತ್ತವೆ. ಸದನದಲ್ಲಿ ನಾವು ಗಲಾಟೆ ಮಾಡಿದ್ರು ನೀವುಗಳು ಎಸ್‌ಐಟಿ ರಚನೆ ಮಾಡಲ್ಲ. ಆದರೆ ಈ ವಿಚಾರವಾಗಿ ಅಷ್ಟು ಬೇಗ ಎಸ್‌ಐಟಿ ರಚನೆ ಮಾಡಿದ್ರಿ. ಕಾರಣ, ಸಿದ್ದರಾಮಯ್ಯ (Siddaramaiah) ಸುತ್ತ ಒಂದು ರೀತಿ ಟಿಪ್ಪು ಗ್ಯಾಂಗ್ ಸುತ್ತುವರೆದಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ಸಿಎಂ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    ಪ್ರಕರಣ ಸಂಬಂಧ ಡಿಕೆಶಿ ಅವರು ಷಡ್ಯಂತ್ರ ಅಂತಾ ಹೇಳಿದ್ದಾರೆ. ಡಿಕೆಶಿ ಹೇಳಿದ್ದಾರೆ ಎಂದು ಸರ್ಕಾರ ಒಪ್ಪಿಕೊಂಡಿದೆ. ನಾನು ಸದನದಲ್ಲಿ ಡಿಮ್ಯಾಂಡ್ ಮಾಡ್ತೇನೆ. ಎಸ್‌ಐಟಿಯ ಮಧ್ಯಂತರ ವರದಿ ಬಿಡುಗಡೆ ಮಾಡಬೇಕು. ಆ ಷಡ್ಯಂತ್ರ ಮಾಡಿದ್ದು ಯಾರು ಅಂತ ಹೇಳಬೇಕು. ಇಲ್ಲ ಅಂದರೆ ನಾವು ಸದನದಲ್ಲಿ ಗಲಾಟೆ ಮಾಡುತ್ತೇವೆ. ಆ ಅನಾಮಿಕ ಹುಚ್ಚನಾ ಅಂತಾ ನೋಡಬೇಕಿತ್ತು. ಸುಮ್ಮನೇ ಎಸ್‌ಐಟಿ ತನಿಖೆ ಮಾಡೋದಲ್ಲ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ

    ಇಂದು ವಿಶ್ವನಾಥ್ ಧರ್ಮಸ್ಥಳಕ್ಕೆ (Dharmasthala) ಹೋಗಿದ್ದಾರೆ. ನಾಳೆ ವಿಜಯೇಂದ್ರ ಅವರು ಹೋಗ್ತಿದ್ದಾರೆ. ನಾನು ಕೂಡ ಅಧಿವೇಶನ ಆದ ನಂತರ ಉಳಿದ ಶಾಸಕರನ್ನ ಕರೆದುಕೊಂಡು ಹೋಗ್ತೇನೆ. ಪಾಪಿಗಳು ದೇವರ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅವರಿಗೆ ಸೂಕ್ತ ಶಿಕ್ಷೆ ಆಗೋವರೆಗೂ ನಾವು ಬಿಡಲ್ಲ. ಯಾವುದೇ ಕಾರಣಕ್ಕೂ ಎಸ್‌ಐಟಿ ಕ್ಲೋಸ್ ಮಾಡಬಾರದು. ಇದರ ಹಿಂದೆ ಯಾರಿದ್ದಾರೆ ಅನ್ನೋ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

    ತಿರುಪತಿ ಆಯ್ತು, ಅಯ್ಯಪ್ಪ ದೇವಸ್ಥಾನ ಆಯ್ತು, ಶನಿದೇವರನ್ನ ಕೂಡ ಮುಚ್ಚಲು ಹೋಗಿದ್ದರು. ಹಿಂದೂ ದೇವಾಲಯಗಳನ್ನ ಟಾರ್ಗೆಟ್ ಮಾಡ್ತಿದ್ದಾರೆ. ಮುಸುಕುಧಾರಿ ವ್ಯಕ್ತಿ ನಮ್ಮಗೆ ಮುಖ್ಯ ಅಲ್ಲ. ಆತನನ್ನು ಕಾಸು ಕೊಟ್ಟು ಕರೆದುಕೊಂಡು ಬಂದವರು ಯಾರೆಂದು ಗೊತ್ತಾಗಬೇಕು ಎಂದು ಹೇಳಿದ್ದಾರೆ.

  • ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

    ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

    ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ (Dharmasthala Mass Burial) ಆರೋಪ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಹೇಳಿದಂತೆ ಉತ್ಖನನದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಹೀಗಾಗಿ, ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಎಸ್‌ಐಟಿ (SIT) ಚಿಂತನೆ ನಡೆಸಿದೆ.

    16 ಪಾಯಿಂಟ್‌ಗಳಲ್ಲಿ ಉತ್ಖನನ ವೈಫಲ್ಯದ ಬೆನ್ನಲ್ಲೇ ಮಂಪರು ಪರೀಕ್ಷೆಗೆ ಎಸ್‌ಐಟಿ ಮುಂದಾಗಿದೆ. ಮಂಪರು ಪರೀಕ್ಷೆಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಎಸ್‌ಐಟಿ ಚಿಂತನೆ ನಡೆಸಿದೆ. ತನಿಖೆಯ ಮುಂದುವರಿದ ಭಾಗವಾಗಿ ಈ ಕ್ರಮ ಅಗತ್ಯ ಎನ್ನಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ – 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?

    ಉತ್ಖನನ ವೈಫಲ್ಯದ ಜೊತೆ ಇತರೆ ತನಿಖೆಗಳ ಆಧಾರದಲ್ಲಿ ಅರ್ಜಿ ಸಲ್ಲಿಕೆಗೆ ಚಿಂತನೆ ನಡೆದಿದೆ. ದೂರುದಾರನ ಪ್ರಾರಂಭಿಕ ಹೇಳಿಕೆ ಹಾಗೂ ನಂತರ ನೀಡಿದ ಹೇಳಿಕೆಗಳಲ್ಲಿ ಗೊಂದಲವಿದೆಯಾ ಎಂದು ಪರಿಶೀಲನೆಗೆ ಮುಂದಾಗಿದೆ.

    ಜಾಗಗಳ ಸ್ಥಳ ವಿವರಣೆಗಳಲ್ಲಿ ಸಮಯ, ದಿನಾಂಕ ಮತ್ತು ಭಾಗವಹಿಸಿದವರ ಹೆಸರುಗಳಲ್ಲಿ ಗೊಂದಲವಿದೆಯಾ ಎಂದು ಪರಿಶೀಲಿಸಲಿದೆ. ತನಿಖೆಯಲ್ಲಿ ದೊರೆತ ತಾಂತ್ರಿಕ ಮಾಹಿತಿ, ದಾಖಲೆಗಳು, ದೂರುದಾರ ನೀಡಿದ ಮೌಖಿಕ ಹೇಳಿಕೆಗಳ ನಡುವೆ ಹೊಂದಾಣಿಕೆ ಇಲ್ಲದಿದ್ದರೆ ಅರ್ಜಿ ಸಲ್ಲಿಸಲಿದೆ. ಗೊಂದಲವಿದ್ದರೆ ತನಿಖೆಗೆ ಅಗತ್ಯವಾದ ನಿಖರ ಮಾಹಿತಿಯನ್ನು ಪಡೆಯಲು ಮಂಪರು ಪರೀಕ್ಷೆಗೆ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಇದನ್ನೂ ಓದಿ: 6 ಗಂಟೆ ಕಾರ್ಯಾಚರಣೆ – 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದರೂ ಸಿಗದ ಮೂಳೆ

    ಪಾಯಿಂಟ್ ನಂಬರ್ 13ರಲ್ಲಿ ಇಂದೂ ಉತ್ಖನನ ನಡೆಯಲಿದೆ. ಜಿಪಿಅರ್ ಸ್ಕ್ಯಾನ್‌ನಲ್ಲಿ ಪತ್ತೆಯಾಗದೇ ಇದ್ದರೂ ಉತ್ಖನನಕ್ಕೆ ದೂರುದಾರ ಪಟ್ಟು ಹಿಡಿದಿದ್ದಾನೆ. ವಿಚಾರಣೆ ವೇಳೆ ಕೊಟ್ಟ ಹೇಳಿಕೆ ಆಧಾರದಲ್ಲೇ 30 ಜಾಗ ಅಗೆಯಿರಿ ಅಂತ ಒತ್ತಾಯಿಸಿದ್ದಾನೆ. ಈಗಾಗಲೇ ಅಧಿಕೃತ 16 ಪಾಯಿಂಟ್ ಜೊತೆಗೆ ಅಕ್ಕಪಕ್ಕದ ಜಾಗ ಸೇರಿ 20ಕ್ಕೂ ಹೆಚ್ಚು ಕಡೆ ಅಗೆತ ಆಗಿದೆ. ಹೀಗಾಗಿ, 30 ಸ್ಪಾಟ್ ಉತ್ಖನನ ಆಗಲೇಬೇಕು ಅಂತ ಅನಾಮಿಕ ಪಟ್ಟು ಹಿಡಿದಿದ್ದಾನೆ.

    ಪಾಯಿಂಟ್ ನಂಬರ್ 13ರಲ್ಲಿ ಉಳಿದ 200 ಮೀ. ಜಾಗದಲ್ಲೂ ಉತ್ಖನನಕ್ಕೆ ಆಗ್ರಹ ಕೇಳಿಬಂದಿದೆ. ಜಿಪಿಆರ್‌ನಲ್ಲಿ ಅವಶೇಷ ಪತ್ತೆಯಾಗದೇ ಇದ್ದರೂ ಉತ್ಖನನಕ್ಕೆ ಪಟ್ಟು ಹಿಡಿದಿದ್ದಾನೆ. ಹೀಗಾಗಿ ಇಂದು ಕೂಡ ಉತ್ಖನನ ನಡೆಯಲಿದೆ. ಈಗ ಅಗೆದಿರುವ ಪ್ರದೇಶಕ್ಕೆ ತಾಗಿಕೊಂಡೇ ಇರುವ ಮತ್ತಷ್ಟು ಜಾಗದಲ್ಲಿ ಉತ್ಖನನ ನಡೆಯಲಿದೆ.

    ಇತ್ತ ಪಾಯಿಂಟ್ ನಂಬರ್ 6ರಲ್ಲಿ ಸಿಕ್ಕ ಮೂಳೆಗಳಿಂದ ಎಸ್‌ಐಟಿ ಟೀಂಗೆ ಮತ್ತಷ್ಟು ಸವಾಲಾಗಿದೆ. ಮೂಳೆ ತುಂಡುಗಳ ಆಧಾರವಾಗಿ ಇಡೀ ಕೇಸ್‌ನ್ನು ಮುಂದುವರಿಸಿ ತನಿಖೆ ನಡೆಸುವುದೇ ಕಷ್ಟ. ಫಾರೆನ್ಸಿಕ್ ಹಾಗೂ ಕಾನೂನು ದೃಷ್ಟಿಯಿಂದ ಎಸ್‌ಐಟಿಗೆ ತುಂಬಾ ಸವಾಲಾಗಿದೆ. ಸಂಪೂರ್ಣ ಅಸ್ಥಿಪಂಜರ ಸಿಗದೇ ಸಾವಿನ ಕಾರಣ ಪತ್ತೆ ಹಚ್ಚುವುದು ಬಹಳ ಕಷ್ಟ. ನೇರ ಸಾಕ್ಷ್ಯ ಇಲ್ಲದ ಕಾರಣ ಕೋರ್ಟ್ನಲ್ಲಿ ಪ್ರಕರಣ ನಿಲ್ಲಲು ಹಲವು ಸಾಕ್ಷ್ಯಗಳ ಕೊರತೆ ಇದೆ. ಫಾರೆನ್ಸಿಕ್ ಟೀಂಗೂ ಪಾಯಿಂಟ್ ನಂಬರ್ 6ರ ಮೂಳೆ ರಹಸ್ಯ ಪತ್ತೆ ಕಾರ್ಯ ಸವಾಲಾಗಿ ಪರಿಣಮಿಸಿದೆ. ಇದನ್ನೂ ಓದಿ: ಆ.17ಕ್ಕೆ ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಪಾಯಿಂಟ್ ನಂಬರ್ 13ರ ಮತ್ತೊಂದು ಭಾಗದಲ್ಲಿ ಇಂದು ಉತ್ಖನನ ನಡೆಯಲಿದೆ. ಅದಕ್ಕಾಗಿ ಎಲ್ಲ ತಯಾರಿ ನಡೆದಿದೆ. ಎಸ್‌ಐಟಿ ಹಾಗೂ ಉತ್ಖನನ ತಂಡಕ್ಕೆ ಕುಳಿತುಕೊಳ್ಳಲು ಚೇರು, ಶಾಮಿಯಾನ ಹಾಕಲಾಗಿದೆ. ಗ್ರಾಮ ಪಂಚಾಯಿತಿಯು ಸ್ಥಳದಲ್ಲಿ ದೊಡ್ಡ ಹಿಟಾಚಿ ತಂದು ಇರಿಸಿದೆ.

  • ಧರ್ಮಸ್ಥಳ ನಿಗೂಢ ಶವ ಕೇಸಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ

    ಧರ್ಮಸ್ಥಳ ನಿಗೂಢ ಶವ ಕೇಸಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ

    – ರಾತ್ರಿಯೆಲ್ಲಾ ಕಾರ್ಯಾಚರಣೆಯ ಮಾಹಿತಿ ಸಂಗ್ರಹ

    ಮಂಗಳೂರು: ಧರ್ಮಸ್ಥಳದಲ್ಲಿ (Dharmasthala Case) ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಅನಾಮಿಕ ವ್ಯಕ್ತಿಯ ವಿಚಾರಣೆ ನಡೆಯುತ್ತಿದೆ. ಎಸ್‌ಐಟಿ ಈಗಾಗಲೇ ಅರ್ಧ ತಿಂಗಳು ಕೆಲಸ ಮಾಡಿದೆ. ಜಿಪಿಆರ್ ಮೂಲಕ ಶೋಧಕಾರ್ಯ ನಡೆಯುತ್ತಿರುವಾಗಲೇ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ (Human Rights Commission) ಎಂಟ್ರಿ ಕೊಟ್ಟಿದೆ.

    ಎಸ್‌ಐಟಿ ಅಧಿಕಾರಿಗಳು ಬಹಳ ಮುತುವರ್ಜಿಯಿಂದ ಎಲ್ಲಾ ತನಿಖೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಪ್ರತ್ಯಕ್ಷ ಸಾಕ್ಷಿಗಳು ಮತ್ತು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ. ಪಂಚಾಯತ್ ಠಾಣೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಆ ಕಾಲಮಾನದಲ್ಲಿ ಕೆಲಸ ಮಾಡಿದ ಎಲ್ಲರ ಸಾಕ್ಷಿಗಳ ಸಂಗ್ರಹ ನಡೆಸಲಾಗುತ್ತಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಮುಗಿಯೋವರೆಗೂ ನಾನು ಮಾತನಾಡಲ್ಲ: ಜಿ.ಪರಮೇಶ್ವರ್‌

    ಕಳೆದ ಎರಡು ವಾರಗಳಿಂದ ಎಸ್‌ಐಟಿ ಕಾಲಿಗೆ ಚಕ್ರ ಕಟ್ಟಿಕೊಂಡು ಸಮಾಧಿ ಅಗೆದು ಶೋಧ ನಡೆಸಲಾಗುತ್ತಿದೆ. ಅನಾಮಿಕ ಕೊಟ್ಟ ದೂರು ಸತ್ಯನಾ ಸುಳ್ಳಾ ಎಂದು ವಿಚಾರಣೆ ಜೊತೆ ತನಿಖೆ ನಡೆಸುತ್ತಿದೆ. ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಧರ್ಮಸ್ಥಳಕ್ಕೆ ಧುಮುಕಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬೀಡು ಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿ ಓರ್ವ ಐಪಿಎಸ್ ಅಧಿಕಾರಿಯಿದ್ದಾರೆ.

    ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿದ್ದಾರೆ. ಎಸ್‌ಐಟಿ, ಪೊಲೀಸ್ ಸ್ಟೇಷನ್, ದೇವಸ್ಥಾನ, ಗ್ರಾಮ ಪಂಚಾಯತ್‌ನಿಂದ ದಾಖಲೆಗಳನ್ನು ಕೇಳಿದ ಮಾನವ ಹಕ್ಕುಗಳ ಆಯೋಗ, ಸ್ವಚ್ಛತಾ ಕಾರ್ಮಿಕರಿಂದ ಹೇಳಿಕೆಗಳನ್ನು ಸಂಗ್ರಹ ಮಾಡುತ್ತಿದೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ – 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

    ಆಯೋಗ ಗೌಪ್ಯವಾಗಿ ಹಲವರ ಭೇಟಿ ಮಾಡಿ ವಿಚಾರಣೆಗೈದಿದೆ. ಮುಂದಿನ ನಾಲ್ಕೈದು ದಿನ ಧರ್ಮಸ್ಥಳದಲ್ಲಿ ಬೀಡು ಬಿಡಲಿರುವ ಮಾನವ ಹಕ್ಕುಗಳ ಆಯೋಗ ಹಲವಾರು ಆಯಾಮಗಳಲ್ಲಿ ತನಿಖೆ ನಡೆಸಿ ವರದಿ ಸಿದ್ಧಪಡಿಸಲಿದೆ.

  • ಧರ್ಮಸ್ಥಳ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಮುಗಿಯೋವರೆಗೂ ನಾನು ಮಾತನಾಡಲ್ಲ: ಜಿ.ಪರಮೇಶ್ವರ್‌

    ಧರ್ಮಸ್ಥಳ ಕೇಸ್‌ ಬಗ್ಗೆ ಎಸ್‌ಐಟಿ ತನಿಖೆ ಮುಗಿಯೋವರೆಗೂ ನಾನು ಮಾತನಾಡಲ್ಲ: ಜಿ.ಪರಮೇಶ್ವರ್‌

    ಬೆಂಗಳೂರು: ಧರ್ಮಸ್ಥಳ ಪ್ರಕರಣದ (Dharmasthala Mass Burial) ಬಗ್ಗೆ ಎಸ್‌ಐಟಿ ತನಿಖೆ ಮುಗಿಯುವ ವರೆಗೂ ನಾನು ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwar) ಪ್ರತಿಕ್ರಿಯೆ ನೀಡಿದ್ದಾರೆ.

    ಧರ್ಮಸ್ಥಳದ ಹೆಸರು ಹಾಳಾಗೋದಕ್ಕೆ ಬಿಡೋದಿಲ್ಲ ಅಂತಾ ಮಾಜಿ ಸಂಸದ, ಕಾಂಗ್ರೆಸ್‌ನ ಹಿರಿಯ ಧುರೀಣ ಜನಾರ್ದನ ಪೂಜಾರಿ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್‌ನ ಹಲವು ಶಾಸಕರು ಸಹ ಇದಕ್ಕೆ ದನಿಗೂಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್, ಈ ಬಗ್ಗೆ ಸಾಕಷ್ಟು ಹೇಳಿಕೆಗಳನ್ನ ನಾನು ಕೂಡ ಗಮನಿಸಿದ್ದೇನೆ. ಎಸ್‌ಐಟಿ ತನಿಖೆ ಮುಗಿಯೋವರೆಗೂ ನಾವು ಮಾತಾಡೋದು ಸಮಂಜಸವಲ್ಲ. ವಾಸ್ತವಾಂಶ ಏನಿದೆ ಅಂತಾ ಗೊತ್ತಾಗೋದೆ ತನಿಖೆ ಮುಗಿದ ಮೇಲೆ ಎಂದು ತಿಳಿಸಿದ್ದಾರೆ.

    13 ಕಡೆ ಸ್ಥಳ ಗುರುತಿಸಿದ್ದರು. ಈಗ 16, 19 ಆಗಿದೆ. ಎಸ್‌ಐಟಿಯಿಂದ ಅಂತಿಮ ತನಿಖೆ ಮುಗಿಯೋವರೆಗೂ ಏನು ಮಾತಾಡಲ್ಲ. ಸದನದಲ್ಲಿ ಈ ವಿಚಾರ ಪ್ರಸ್ತಾಪವಾಗಬಹುದು. ಅಲ್ಲಿ ಉತ್ತರ ನೀಡಲಾಗುತ್ತೆ ಎಂದಿದ್ದಾರೆ. ಇದನ್ನೂ ಓದಿ: ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

  • ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

    ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

    – ಧರ್ಮಸ್ಥಳ ಹೆಸರು ಹಾಳಾಗೋದಕ್ಕೆ ಪೂಜಾರಿ ಬಿಡಲ್ಲ ಎಂದು ಪ್ರತಿಜ್ಞೆ

    ಮಂಗಳೂರು: ಮಸೀದಿ, ಚರ್ಚ್‌ಗಳಲ್ಲಿ ಶವ ಹೂತಿಡಲಿಲ್ವಾ? ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ ಎಂದು ಮಾಜಿ ಸಂಸದ ಜನಾರ್ದನ ಪೂಜಾರಿ (Janardhana Poojary) ಪ್ರಶ್ನಿಸಿದರು.

    ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ಕುರಿತು ಉಳ್ಳಾಲ ಸಮೀಪದ ತೊಕ್ಕೊಟ್ಟು ಮುದ್ದುಕೃಷ್ಣ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಹೆಸರು ಹಾಳು ಮಾಡಲಾಗುತ್ತಿದೆ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: ಧರ್ಮಸ್ಥಳದ ಧರ್ಮಾಧಿಕಾರಿಗಳು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ: ಶಿವಗಂಗಾ ಬಸವರಾಜ್

    ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ನಾವಿದ್ದೇವೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಜೊತೆ ಇಡೀ ಜಗತ್ತು ನಿಲ್ಲುತ್ತದೆ. ಇಡಿ ಕುದ್ರೋಳಿ ದೇವಸ್ಥಾನ ನಿಮ್ಮೊಂದಿಗಿದೆ ಹೆದರಬೇಡಿ. ಎಸ್‌ಐಟಿ ಧರ್ಮಸ್ಥಳದಲ್ಲಿ ಎಷ್ಟು ಅಗೆದರೂ ಏನು ಸಿಗೋದಿಲ್ಲ. ಮಸೀದಿಯಲ್ಲಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ? ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ ಎಂದು ಪ್ರಶ್ನೆ ಮಾಡಿದರು.

    ಮನುಷ್ಯ ಸತ್ತ ಕೂಡಲೇ ಅವನನ್ನ ದೇವಸ್ಥಾನದ ವಠಾರದಲ್ಲಿ ಹೂತು ಹಾಕೋದು ಒಂದು ಪದ್ಧತಿ. ಧರ್ಮಸ್ಥಳದಂತಹ ದೇವಸ್ಥಾನವನ್ನ ನಡೆಸೋದು ಎಷ್ಟು ಕಷ್ಟ ಇದೆ ಎಂದು ನನಗೆ ಗೊತ್ತು. ವೀರೇಂದ್ರ ಹೆಗ್ಗಡೆಯವರೇ ನಿಮ್ಮ ಜೊತೆ ನಾನಿದ್ದೇನೆ. ಧರ್ಮಸ್ಥಳದ ವಠಾರವನ್ನ ಎಸ್‌ಐಟಿಯವರು ಅಗೆಯುತ್ತಿದ್ದಾರೆ. ಶವಗಳನ್ನ ಹೂತ್ತಿದ್ದಾರೆ ಎನ್ನುವ ಆರೋಪದಲ್ಲಿ ಶವಗಳನ್ನ ಹುಡುಕುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಧರ್ಮಸ್ಥಳ ಗುಂಪು ಘರ್ಷಣೆ – 6 ಆರೋಪಿಗಳು ಅರೆಸ್ಟ್‌

    ಧರ್ಮಸ್ಥಳ ಕೇವಲ ಜೈನರಿಗೆ ಸೇರಿದ ಸ್ಥಳವಲ್ಲ. ಧರ್ಮಸ್ಥಳವನ್ನ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕುದ್ರೋಳಿ ದೇವಸ್ಥಾನದಲ್ಲಿ ಮಾತ್ರ ಭಕ್ತನಲ್ಲ, ನಾನು ಧರ್ಮಸ್ಥಳದ ಭಕ್ತ. ಎಸ್‌ಐಟಿಯವರು ಹುಡುಕಿದ್ರೂ ಏನು ಸಿಗುತ್ತಿಲ್ಲ. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ ನೀವು. ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಅದಕ್ಕೆ ಬಿಡೋದಿಲ್ಲ ಎಂದು ತಿಳಿಸಿದರು.

    ಧರ್ಮಸ್ಥಳದ ಹೆಸರು ಹಾಳು ಮಾಡೋದಕ್ಕೆ ಪೂಜಾರಿ ಬಿಡೋದಿಲ್ಲ. ಪ್ರಧಾನಿ ಮೋದಿಯವರು ಇಂದು ಕರ್ನಾಟಕಕ್ಕೆ ಬಂದಿದ್ದಾರೆ. ಮೋದಿಯವರೇ ನಿಮಗೆ ಧೈರ್ಯವಿದ್ದರೆ, ತಾಕತ್ತಿದ್ದರೆ ಧರ್ಮಸ್ಥಳಕ್ಕೆ ಹೋಗಿ ಭಾಷಣ ಮಾಡಿ ಎಂದು ಟಾಂಗ್‌ ಕೊಟ್ಟರು.

  • ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ – ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

    ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ – ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

    – ಎರಡು ವಾಹನಗಳು ಜಖಂ
    – ಸ್ಥಳಕ್ಕೆ ದಕ್ಷಿಣ ಕನ್ನಡ ಎಸ್‌ಪಿ ಭೇಟಿ

    ಮಂಗಳೂರು: ಧರ್ಮಸ್ಥಳ ವಿಚಾರದಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಈ ವೇಳೆ ವರದಿ ಮಾಡಲು ಹೋದ ಖಾಸಗಿ ವಾಹಿನಿ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಮೇಲೂ ಹಲ್ಲೆ ನಡೆಸಲಾಗಿದೆ.

    ಧರ್ಮಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶವಶೋಧ ವಿಚಾರದಲ್ಲಿ ಪರ-ವಿರೋಧ ಗುಂಪುಗಳ ನಡುವೆ ವಾಗ್ಯುದ್ಧ ನಡೀತಿದೆ. ಇಂದು ಸಂಜೆ ಈ ಜಟಾಪಟಿ ತಾರಕಕ್ಕೇರಿದೆ. ಇದನ್ನೂ ಓದಿ: ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

    ಈ ವೇಳೆ ವರದಿ ಮಾಡಲು ಹೋದ ಖಾಸಗಿ ವಾಹಿನಿ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಮೇಲೂ ಹಲ್ಲೆ ನಡೆಸಲಾಗಿದೆ.

    ಧರ್ಮಸ್ಥಳದ ಪಾಂಗಳದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮೂವರು ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ಸಹಿಸಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳೀಯರಿಗೆ ಧರ್ಮಸ್ಥಳದ ಭಕ್ತರು ಬೆಂಬಲ ಕೊಟ್ಟಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಪೊಲೀಸ್ ಠಾಣೆ ಮುಂದೆ ಧರಣಿ ಕೂತಿದ್ದಾರೆ. ಕ್ಷೇತ್ರದ ತೇಜೋವಧೆ ಮಾಡುವವರನ್ನು ಬಂಧಿಸಿ ಎಂದು ಒತ್ತಾಯ ಮಾಡ್ತಿದ್ದಾರೆ. ಸ್ಥಳಕ್ಕೆ ಡಿಸಿ ಬರಬೇಕು ಅಂತ ಪಟ್ಟು ಹಿಡಿದಿದ್ದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?

    ಸ್ಥಳಕ್ಕೆ ಎಸ್‌ಪಿ ಆಗಮನ
    ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ, ಧರ್ಮಸ್ಥಳ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕುಮಾರ್ ಭೇಟಿ ನೀಡಿದರು. ಧರ್ಮಸ್ಥಳದ ಗ್ರಾಮಸ್ಥರು, ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಪ್ರಮುಖರ ಜೊತೆ ಎಸ್‌ಪಿ ಮಾತುಕತೆ ನಡೆಸಿದರು.

    ಗ್ರಾಮಸ್ಥರು ಮತ್ತು ದೇವಸ್ಥಾನದ ಪ್ರಮುಖರ ಮನವೊಲಿಕೆಗೆ ಎಸ್‌ಪಿ ಮುಂದಾದರು. ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದಂತೆ ಮನವಿ ಮಾಡಿಕೊಂಡರು. ಈ ವೇಳೆ, ಸ್ಥಳ ಬಿಟ್ಟು ಕದಲಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದರು. ಮನವರಿಕೆ ಮಾಡಿ ಒಬ್ಬೊಬ್ಬರನ್ನೇ ದೇವಸ್ಥಾನದ ಕಡೆ ಪ್ರಮುಖ ಕಳುಹಿಸಿದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿದರು.

  • ಧರ್ಮಸ್ಥಳ ಕೇಸ್; ದೂರುದಾರ ಮಾನಸಿಕ ಅಸ್ವಸ್ಥನೋ, ಸ್ವಸ್ಥನೋ ಪರೀಕ್ಷಿಸಬೇಕು: ಬಿ.ಸಿ.ಪಾಟೀಲ್

    ಧರ್ಮಸ್ಥಳ ಕೇಸ್; ದೂರುದಾರ ಮಾನಸಿಕ ಅಸ್ವಸ್ಥನೋ, ಸ್ವಸ್ಥನೋ ಪರೀಕ್ಷಿಸಬೇಕು: ಬಿ.ಸಿ.ಪಾಟೀಲ್

    ಹಾವೇರಿ: ದೂರುದಾರ ಮಾನಸಿಕವಾಗಿ ಅಸ್ವಸ್ಥನೋ ಅಥವಾ ಸ್ವಸ್ಥನೋ ಎನ್ನುವುದನ್ನು ಮಾನಸಿಕ ತಜ್ಞರು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ (B C Patil) ಒತ್ತಾಯಿಸಿದ್ದಾರೆ.

    ಹಾವೇರಿ (Haveri) ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು ಮಾನಸಿಕವಾಗಿ ಸ್ವಸ್ತನಾಗಿದ್ದಾನೋ ಅಥವಾ ಅಸ್ವಸ್ಥನಾಗಿದ್ದಾನೋ ಎನ್ನುವುದನ್ನು ಮಾನಸಿಕ ತಜ್ಞರಿಂದ ಮೊದಲು ಪರೀಕ್ಷಿಸಬೇಕು. ನಂತರ ಕ್ರಮ ಜರುಗಿಸುವುದು ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಉತ್ಕನನ: 2 ಕಾರ್ಡ್‌, ಹರಿದ ರವಿಕೆ ಪತ್ತೆ

    ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ದೂರುದಾರ ಮೊದಲು ಮಾನಸಿಕವಾಗಿ ಆರೋಗ್ಯವಾಗಿದ್ದಾನಾ ಅನ್ನೋದನ್ನ ದೃಢಪಡಿಸಿಕೊಂಡ ನಂತರ ಎಸ್‌ಐಟಿ ತಂಡ ತನಿಖೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.