ಧಾರವಾಡ: ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ (RSS March) ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದ ಸರ್ಕಾರಕ್ಕೆ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಧಾರವಾಡ ವಿಭಾಗೀಯ ಪೀಠ ತಡೆ ನೀಡಿದೆ.
ಸರ್ಕಾರಿ ಆವರಣದಲ್ಲಿ ಖಾಸಗಿ ಸಂಘಟನೆಗಳು ಅನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಧಾರವಾಡ ವಿಭಾಗೀಯ ಪೀಠಕ್ಕೆ ಪುನಶ್ಚೇತನ ಸೇವಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠವು ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ನ.17ಕ್ಕೆ ವಿಚಾರಣೆಯನ್ನು ಮುಂದೂಡಿ ಪೀಠ ಆದೇಶ ಹೊರಡಿಸಿದೆ. ಸರ್ಕಾರದ ಪರ ವಕೀಲರಿಗೆ ನಾಳೆ ತಕರಾರು ಸಲ್ಲಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ಕೋಲಾರದ ಮಾಲೂರಿನಲ್ಲಿ ಯಶಸ್ವಿ RSS ಶತಾಬ್ದಿ ಪಥಸಂಚಲನ – ಮಹಿಳೆಯರಿಂದ ಗಣ ವೇಷಧಾರಿಗಳ ಮೇಲೆ ಪುಷ್ಪಾರ್ಚನೆ

ವಿಚಾರಣೆ ವೇಳೆ ಪುನಶ್ಚೇತನ ಸಂಸ್ಥೆಯ ವಕೀಲರಿಂದ ವಾದ ಮಂಡಿಸಿ, ಯಾವುದೇ ಪಾರ್ಕ್ ಮತ್ತು ಸರ್ಕಾರದ ಆಸ್ತಿಯಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಕ್ರಮ ನಡೆಸುವಂತಿಲ್ಲ. ಇದಕ್ಕೆ ಅಧಿಕಾರಿಗಳ ಅನುಮತಿ ಪಡೆಯಬೇಕು ಎಂದು ಇದೆ. ಸರ್ಕಾರದ ಆಸ್ತಿ ಎಂದರೆ ರೋಡ್ ಅಂತಾನಾ? 10 ಕ್ಕೂ ಹೆಚ್ಚು ಜನರು ಸೇರಿದರೆ ಅದು ತಪ್ಪಾ ಎಂದು ಕರ್ನಾಟಕ ಪೊಲೀಸ್ ಕಾಯ್ದೆಯ ಬಗ್ಗೆ ಪ್ರಶ್ನಿಸಿದರು.
ಸ್ಥಳೀಯ ಸಂಸ್ಥೆ ಇದನ್ನ ನೋಡಬೇಕು, ಸರ್ಕಾರ ಅಲ್ಲ. ಯಾರು ಇದನ್ನ ಆದೇಶ ಮಾಡಿದ್ದು ಎಂದ ನ್ಯಾಯಮೂರ್ತಿ ಕೇಳಿದರು. ‘ಕ್ಯಾಬಿನೆಟ್ ಆದೇಶ ಮಾಡಿದೆ. ಸರ್ಕಾರ ಶಾಲಾ-ಕಾಲೇಜು, ಉದ್ಯಾನ ಮತ್ತು ಇತರ ಕಡೆ ಸಾರ್ವಜನಿಕರು ಬಳಸಲು ಇದೆ. ರಾಜ್ಯದ ಹಲವು ಸಂಸ್ಥೆ ಪ್ರಚಾರ ತರಬೇತಿ ಉದ್ದೇಶದಿಂದ ಸರ್ಕಾರದ ಆಸ್ತಿ ಅನುಮತಿ ಪಡೆಯದೇ ಮಾಡೋದು ಅಕ್ರಮ ಎಂದು ಹೇಳ್ತಾರೆ’ ಎಂದು ವಕೀಲರು ವಾದಿಸಿದರು. ಇದನ್ನೂ ಓದಿ: ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ







