Tag: ಧಾರವಾಡ ಹೈಕೋರ್ಟ್

  • ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

    – ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯ

    ನವದೆಹಲಿ: ಆರ್‌ಎಸ್‌ಎಸ್ (RSS) ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಚಾಟಿ ಬೀಸಿದ್ದಾರೆ.

    ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ಯತೀಂದ್ರ ಸಿದ್ದರಾಮಯ್ಯ

    ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹಪೀಡಿತವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಸಿಕೊಂಡು ಸರ್ಕಾರದ ಆಸ್ತಿ ನೆಪದಲ್ಲಿ ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರೇತರ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಖಂಡಿಸಿದರು. ಇದನ್ನೂ ಓದಿ: ದೆಹಲಿ ವಿವಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್‌ಗೆ ಟ್ವಿಸ್ಟ್ – ಸುಳ್ಳು ಕಥೆ ಕಟ್ಟಿದ ತಂದೆ ಅರೆಸ್ಟ್

    ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ. ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

  • ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

    ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ

    ಬೆಂಗಳೂರು: ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಅನುಮತಿ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಧಾರವಾಡ ಹೈಕೋರ್ಟ್ (Dharwad High Court) ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಡೆಯಾಜ್ಞೆ ತೆರವಿಗೆ ಕಾನೂನು ಹೋರಾಟ ನಡೆಸೋದಾಗಿ ಹೇಳಿದ್ದಾರೆ. ಇದನ್ನೂ ಓದಿ: ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್

    ಇದೇ ವೇಳೆ ಮಾತನಾಡಿದ ಗೃಹಸಚಿವ ಪರಮೇಶ್ವರ್, ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದೆ. ಸಿಎಂ ಕೂಡಾ ಹೇಳಿದ್ದಾರೆ, ಇದು ಸರ್ಕಾರಕ್ಕೆ ಹಿನ್ನಡೆ ಅಲ್ಲ. ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ತಂತಿ ತಗುಲಿ ಹೊತ್ತಿ ಉರಿದ ಬಸ್ – ಮೂವರು ಕಾರ್ಮಿಕರು ಸಾವು

  • ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ – ಬಂಧನ ಭೀತಿಯಿಂದ ಪಾರು

    ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ – ಬಂಧನ ಭೀತಿಯಿಂದ ಪಾರು

    ಬೆಂಗಳೂರು/ಧಾರವಾಡ: ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ (BS Yediyurappa) ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧ ಸದ್ಯ ಯಾವುದೇ ಕ್ರಮ ಕೈಗೊಳ್ಳದಂತೆ ಧಾರವಾಡ ಹೈಕೋರ್ಟ್ (Dharwad High Court) ಆದೇಶಿಸಿದೆ.

    ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದ್ದು, ಬಂಧನ ಭೀತಿಯಿಂದ ಬಿಎಸ್‌ವೈ ಪಾರಾಗಿದ್ದಾರೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ

    ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು (POCSO Case) ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಜನವರಿ 17ರಂದು ವಿಚಾರಣೆ ಪೂರ್ಣಗೊಳಿಸಿದ್ದ ಕೋರ್ಟ್ ಇಂದು ತೀರ್ಪು ಕಾಯ್ದಿರಿಸಿತ್ತು.

    ಈ ವೇಳೆ ಕೇಸ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್ ಯಡಿಯೂರಪ್ಪ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸೂಚಿಸಿದೆ. ಇದನ್ನೂ ಓದಿ: Aeroindia 2025 | ಏರ್ ಶೋ ಹಿನ್ನೆಲೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆಗೆ ನಿಷೇಧ

  • ಮುಡಾ ಕೇಸಲ್ಲಿ ಸಿದ್ದರಾಮಯ್ಯ‍ ‍& ಕುಟುಂಬ ನಿರಪರಾಧಿ ಅಂತ ಕೋರ್ಟ್‌ ಹೇಳಿಲ್ಲ: ವಿಜಯೇಂದ್ರ

    ಮುಡಾ ಕೇಸಲ್ಲಿ ಸಿದ್ದರಾಮಯ್ಯ‍ ‍& ಕುಟುಂಬ ನಿರಪರಾಧಿ ಅಂತ ಕೋರ್ಟ್‌ ಹೇಳಿಲ್ಲ: ವಿಜಯೇಂದ್ರ

    ಬೆಂಗಳೂರು: ಮುಡಾ ಕೇಸ್ (MUDA Case) ತನಿಖೆಯನ್ನ ಹೈಕೋರ್ಟ್, ಸಿಬಿಐಗೆ ಕೊಡೋದು ಬೇಡ ಅಂತ ಹೇಳಿದೆಯೇ ಹೊರತು ಸಿದ್ದರಾಮಯ್ಯ ಮತ್ತು ಅವರ ಕುಟುಂಬ ನಿರಪರಾಧಿ ಅಂತ ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಮಾತನಾಡಿದರು.

    ಮುಡಾ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು ಎಂಬ ಅರ್ಜಿಯನ್ನ ಹೈಕೋರ್ಟ್ ವಜಾ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಅಂತ ಅರ್ಜಿ ಹಾಕಿದ್ರು. ಕೋರ್ಟ್ ಅವರ ಅರ್ಜಿ ವಜಾ ಮಾಡಿದೆ. ಸಿಬಿಐಗೆ ಕೊಡೋ ಅರ್ಜಿ ಮಾತ್ರ ಕೋರ್ಟ್ ವಜಾ ಮಾಡಿದೆ. ಆದರೆ, ಸಿದ್ದರಾಮಯ್ಯ (Siddaramaiah) ನಿರಪರಾಧಿ ಅಂತ ಹೇಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಬಿಜೆಪಿ ಮುಡಾ ಅಕ್ರಮದ ವಿರುದ್ದ ಹೋರಾಟ ಮಾಡಿತ್ತು. ಪಾದಯಾತ್ರೆ ಕೂಡಾ ಮಾಡಿತ್ತು. ಇವತ್ತಿನ ಕೋರ್ಟ್ ತೀರ್ಪಿನಿಂದ ನಮ್ಮ ಹೋರಾಟಕ್ಕೆ ಹಿನ್ನಡೆ ಆಗಿಲ್ಲ. ಮುಡಾ ಅಕ್ರಮದ ಬಗ್ಗೆ ಇಡಿ, ಲೋಕಾಯುಕ್ತ ತನಿಖೆ ಆಗ್ತಿದೆ. ಮುಂದೆ ಎನ್ ಆಗುತ್ತೋ ನೋಡೋಣ ಎಂದರು.

    ನಮ್ಮ ಹೋರಾಟಕ್ಕೆ ಹಿನ್ನಡೆ ಆಗಿಲ್ಲ. ಸಿದ್ದರಾಮಯ್ಯ ಮತ್ತು ಅವರ ಕುಟುಂಬವನ್ನ ನಿರಪರಾಧಿ ಅಂತ ಹೈಕೋರ್ಟ್‌ ಏನು ಹೇಳಿಲ್ಲ. ನಾವು ಹೋರಾಟ ಮಾಡಿದ್ದು ಸಿಎಂ ಮತ್ತು ಅವರ ಕುಟುಂಬ ಮುಡಾ ಅಕ್ರಮದಲ್ಲಿ ಭಾಗಿಯಾಗಿದೆ ಅಂತ. ನಮ್ಮ ಆರೋಪಕ್ಕೆ ನಾವು ಈಗಲೂ ಬದ್ಧ. ನೋಡೋಣ ಲೋಕಾಯುಕ್ತ ತನಿಖೆ ಆಗ್ತಿದೆ. ತನಿಖಾ ವರದಿ ಹೊರಗೆ ಬರಲಿ. ಅಮೇಲೆ ಮಾತಾಡ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: MUDA Case | ಸಿಎಂ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ – ಸ್ನೇಹಮಯಿ ಕೃಷ್ಣ

  • MUDA Case | ಸಿಎಂ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ – ಸ್ನೇಹಮಯಿ ಕೃಷ್ಣ

    MUDA Case | ಸಿಎಂ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ – ಸ್ನೇಹಮಯಿ ಕೃಷ್ಣ

    ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.

    ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ (MUDA Case) ತನಿಖೆಯನ್ನು ಸಿಬಿಐಗೆ ವಹಿಸಲು ಧಾರವಾಡ ಹೈಕೋರ್ಟ್‌ (Dahrwad High Court) ನಿರಾಕರಿಸಿದ್ದರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ. ಆದ್ರೆ ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಹೇಳಿದ್ದಾರೆ.

    ನ್ಯಾಯಾಲಯ ಯಾವ ವಿಚಾರವನ್ನಿಟ್ಟುಕೊಂಡು ಸಿಬಿಐ ತನಿಖೆಗೆ ಕೊಡಲು ನಿರಾಕರಿಸಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಬಳಿಕ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡ್ತೀವಿ. ಮುಂದಿನ ವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಈ ಪ್ರಕರಣವನ್ನ ಸಿಬಿಐಗೆ ನೀಡುವಂತೆ ಹೋರಾಟ ಮಾಡ್ತೀವಿ ಎಂದು ತಿಳಿಸಿದ್ದಾರೆ.

    ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ದೆವು, ಈಗ ಸಣ್ಣ ಹಿನ್ನಡೆಯಾಗಿದೆ ಅಷ್ಟೇ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್‌ ಮುಡಾ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುತ್ತದೆ ಎಂಬ ನಂಬಿಕೆಯಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬ್ರ್ಯಾಂಡ್‌ ನೇಮ್‌ ಚೇಂಜ್‌; ‘ಎಟರ್ನಲ್‌’ ಎಂದು ಹೆಸರು ಬದಲಿಸಿಕೊಂಡ Zomato

    ಇನ್ನೂ ಕೋರ್ಟ್‌ ತೀರ್ಪಿನ ಕುರಿತು ಸ್ನೇಹಮಹಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ ರಾವ್‌ ಕುಲಕರ್ಣಿ, ವಕೀಲೆ ಪೂಜಾ ಸವದತ್ತಿ ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್‌ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ

    ತೀರ್ಪು ನಮ್ಮ ಪರವಾಗಿ ಭರವಸೆ ಇತ್ತು, ನಾವು ಕೂಡ ಸಾಕಷ್ಟು ತಯಾರಿ ಮಾಡಿಕೊಂಡೇ ವಾದ ಮಂಡನೆ ಮಾಡಿದ್ದೆವು. ಆದರೆ ಅರ್ಜಿ ಯಾಕೆ ವಜಾ ಆಗಿದೆ ಎನ್ನುವ ಸಂಪೂರ್ಣ ಮಾಹಿತಿ ಇನ್ನೂ ಗೊತ್ತಾಗಿಲ್ಲ. ತೀರ್ಪಿನ ಆದೇಶ ಪ್ರತಿ ಅಧಿಕೃತವಾಗಿ ನಮ್ಮ ಕೈಗೆ ಸಿಕ್ಕಿಲ್ಲ. ಆದೇಶ ಪ್ರತಿಗಾಗಿ ಮನವಿ ಸಲ್ಲಿಕೆ ಮಾಡಿದ್ದೇವೆ. ಇಂದು ಸಂಜೆ ಸಿಗುವ ಭರವಸೆಯಿದೆ. ಸದ್ಯ ಹೈಕೋರ್ಟ್‌ ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ಹೇಳಿದ್ದಾರೆ. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

  • ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಬೆಂಗಳೂರು/ಧಾರವಾಡ: ಮುಡಾ ಹಗರಣ (MUDA Case) ಪ್ರಕರಣದಲ್ಲಿ ಸಿಬಿಐ ತನಿಖೆ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ (Siddaramaiah) ಪಾರಾಗಿದ್ದಾರೆ. ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್‌ (Dahrwad High Court) ನಿರಾಕರಿಸಿದೆ.

    ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಜಾ ಮಾಡಿದೆ. ಸ್ನೇಹಮಯಿ ಕೃಷ್ಣ ಪರ ಮಣಿಂದರಸಿಂಗ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್‌ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ

    ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಆಗಲ್ಲ. ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿ ತಾರತಮ್ಯ ಇದೆ‌ ಎಂದು ಹೇಳಲು ಆಧಾರ ಇಲ್ಲ. ಅದೊಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾ ತನಿಖೆ ಅಸಮರ್ಪಕ ಅಲ್ಲ ಎಂದು ಹೇಳಲು ಆಗಲ್ಲ. ಹೀಗಾಗಿ, ಸಿಬಿಐಗೆ ಇದನ್ನ ಕೊಡಲು ಹೈಕೋರ್ಟ್‌ ನಕಾರ ವ್ಯಕ್ತಪಡಿಸಿದೆ.

    ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪಕ್ಷಾತೀತ, ನಿಷ್ಪಕ್ಷಪಾತ ಅಥವಾ ಸಿಬಿಐ ತನಿಖೆಗೆ ನಿರ್ದೇಶಿಸಲು ಕಳಪೆಯಾಗಿದೆ ಎಂದು ದಾಖಲೆಯಲ್ಲಿರುವ ವಸ್ತು ವಿಷಯ ಸೂಚಿಸುವುದಿಲ್ಲ. ಪರಿಣಾಮವಾಗಿ ಸಿಬಿಐ ತನಿಖೆಯ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಏಕಸದಸ್ಯ ಪೀಠದ ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಶುಕ್ರವಾರ ಸಿದ್ದರಾಮಯ್ಯ, ಬಿಎಸ್‌ವೈಗೆ ಬಿಗ್‌ ಡೇ!

  • ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರೋ ನೋಟಿಸ್ ರಾಜಕೀಯ ಪ್ರೇರಿತ – ಸಿಎಂ

    ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರೋ ನೋಟಿಸ್ ರಾಜಕೀಯ ಪ್ರೇರಿತ – ಸಿಎಂ

    ಬೆಂಗಳೂರು: ಮುಡಾದಲ್ಲಿ (MUDA) ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

    ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ ನನ್ನ ಪತ್ನಿಗೆ ಇಡಿಯವರು ನೋಟಿಸ್ ಕೊಟ್ಟಿದ್ದರು. ಅದಕ್ಕೆ ಹೈಕೋರ್ಟ್ ತಡೆ ನೀಡಿದೆ. ಯಾಕೆ ಇಷ್ಟು ಆತುರ ಮಾಡ್ತಿದ್ದೀರಾ? ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗ್ತಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಹೀಗಾಗಿ ಬಗ್ಗೆ ಆದೇಶ ಕಾಯ್ದಿರಿಸಿದೆ. ಈ ಹಂತದಲ್ಲಿ ನೀವು ಆತುರ ಮಾಡುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಕೋರ್ಟ್ ತಡೆ ಕೊಟ್ಟಿದೆ ಎಂದರು.ಇದನ್ನೂ ಓದಿ: 2ನೇ ಮದುವೆಗೆ ಸಜ್ಜಾದ ಚೈತ್ರಾ ವಾಸುದೇವನ್

    ಇಡಿ ನೋಟಿಸ್ ರಾಜಕೀಯ ಪ್ರೇರಿತನಾ ಎಂಬ ಪ್ರಶ್ನೆಗೆ ಉತ್ತರಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.

    ಇನ್ನೂ ಮುಡಾ ಕೇಸ್ ಸಿಬಿಐಗೆ ತನಿಖೆ ಕೊಡುವ ಬಗ್ಗೆ ಆತಂಕ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧೀಶರು ಏನು ಮಾಡುತ್ತಾರೆ ಎಂದು ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ. ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತೆ ಎಂದು ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನೂ ಓದಿ: ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

  • ಸಚಿವ ಡಿ.ಸುಧಾಕರ್‌ಗೆ ರಿಲೀಫ್ – ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ತಡೆ

    ಸಚಿವ ಡಿ.ಸುಧಾಕರ್‌ಗೆ ರಿಲೀಫ್ – ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ತಡೆ

    ಧಾರವಾಡ: ಸಚಿವ ಡಿ.ಸುಧಾಕರ್ (D.Sudhakar) ವಿರುದ್ಧದ ದಲಿತ ದೌರ್ಜನ್ಯ ಮತ್ತು ಭೂಹಗರಣ ಆರೋಪ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ (Dharwad High Court) ತಡೆ ನೀಡಿದೆ. ಸಚಿವ ಸುಧಾಕರ್‌ಗೆ ಸದ್ಯ ರಿಲೀಫ್ ಸಿಕ್ಕಿದೆ.

    ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋಪ ಹೊತ್ತಿದ್ದ ಸಚಿವ ಸುಧಾಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಇಂದು (ಶುಕ್ರವಾರ) ವಿಚಾರಣೆ ನಡೆಯಿತು. ಪ್ರಕರಣಕ್ಕೆ ಕೋರ್ಟ್ ತಡೆ ನೀಡಿದೆ. ಅಲ್ಲದೇ ದೂರು ದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿ

    ದಲಿತ ದೌರ್ಜನ್ಯ, ಭೂಹಗರಣ ಆರೋಪದಲ್ಲಿ ಸಚಿವ ಡಿ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದರು. ಅಲ್ಲದೇ ಸಚಿವ ಸುಧಾಕರ್ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು.

    ಮುನಿಯಮ್ಮ ಎಂಬುವವರ ಜಾಗ ಕಬಳಿಕೆ ಮಾಡಿಕೊಂಡು ಸಚಿವ ಹಾಗೂ ಬೆಂಬಲಿಗರಿಂದ ಅವರ ಮೇಲೆ ಜಾತಿ ನಿಂದನೆ ಮಾಡಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ವಿಚಾರವಾಗಿ ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಮಹಜರು ಮಾಡಿದ್ದರು. ಈ ಸಂಬಂಧ ತನಿಖೆ ಮುಂದುವರಿದಿತ್ತು. ಇದನ್ನೂ ಓದಿ: ಏಕಕಾಲದಲ್ಲಿ ವಿಶ್ವಾದ್ಯಂತ ಸಂವಿಧಾನ ಪೀಠಿಕೆ ವಾಚನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿ, ಸ್ವಂತ ಮಕ್ಕಳು ಸೇರಿ ಐವರನ್ನ ಕೊಂದಿದ್ದ ಆರೋಪಿಗೆ ಮರಣದಂಡನೆ ಶಿಕ್ಷೆ

    ಪತ್ನಿ, ಸ್ವಂತ ಮಕ್ಕಳು ಸೇರಿ ಐವರನ್ನ ಕೊಂದಿದ್ದ ಆರೋಪಿಗೆ ಮರಣದಂಡನೆ ಶಿಕ್ಷೆ

    ಬಳ್ಳಾರಿ: ಹೆಂಡತಿಯ ಶೀಲ ಶಂಕಿಸಿ ಐವರನ್ನು ಕೊಚ್ಚಿ ಕೊಲೆ ಮಾಡಿದ್ದ, ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಧಾರವಾಡ ಹೈಕೋರ್ಟ್‌ (Dharwad High Court) ಆದೇಶ ಹೊರಡಿಸಿದೆ.

    ಗಣಿ ನಾಡು ಬಳ್ಳಾರಿ (Bellari) ಜಿಲ್ಲೆ ಕಂಪ್ಲಿ ತಾಲ್ಲೂಕಿನ ಚಪ್ಪರದಳ್ಳಿ ನಿವಾಸಿ ವಡ್ಡರ ತಿಪ್ಪಯ್ಯಾ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಬಳ್ಳಾರಿ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಮರಣದಂಡನೆ ಶಿಕ್ಷೆ ಆದೇಶವನ್ನು ಧಾರವಾಡ ಹೈಕೋರ್ಟ್‌ ಈಗ ಎತ್ತಿ ಹಿಡಿದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

    ಪ್ರಕರಣ ಏನು?
    2017ರ ಫೆಬ್ರವರಿ 25 ರಂದು ಕೊಲೆ ನಡೆದಿತ್ತು. ಪತ್ನಿಯ ಶೀಲ ಶಂಕಿಸಿ ಪತ್ನಿ, ಆಕೆಯ ತಂಗಿ, ಹೆತ್ತ ಮೂರು ಮಕ್ಕಳು ಸೇರಿ ಒಟ್ಟು ಐವರನ್ನ ತಿಪ್ಪಯ್ಯ‌ ಕೊಲೆ ಮಾಡಿದ್ದ. ಪತ್ನಿ ಪಕ್ಕೀರಮ್ಮ (36), ಪತ್ನಿಯ ತಂಗಿ ಗಂಗಮ್ಮ (30), ಮಕ್ಕಳಾದ ಬಸಮ್ಮ (9), ರಾಜಪ್ಪ (8), ಪವಿತ್ರ (6) ಹತ್ಯೆಯಾಗಿದ್ದ ದುರ್ದೈವಿಗಳು. ಈ ಸಂಬಂಧ ಕಂಪ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ್ದ, ನ್ಯಾಯಾಲಯವು ತಿಪ್ಪಯ್ಯನಿಗೆ 2019ರ ಡಿಸೆಂಬರ್ 3ರಂದು ಬಳ್ಳಾರಿ ಸೆಷನ್ಸ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಆದರೆ ಬಳ್ಳಾರಿ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನೆ ಮಾಡಿದ್ದ ತಿಪ್ಪಯ್ಯ, ಧಾರವಾಡ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ ನ್ಯಾಯಾಲಯವು ಬಳ್ಳಾರಿ ಸೆಷನ್ಸ್ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದೆ. ಕೆಳ ನ್ಯಾಯಾಲಯ ನೀಡಿದ ಆದೇಶದಂತೆ ಮರಣದಂಡನೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪತ್ನಿಯೊಂದಿಗೆ ಜಗಳ – ಬೀದಿಗಳಲ್ಲಿ ಆಕೆಯ ನಂಬರ್‌ನೊಂದಿಗೆ ಅಶ್ಲೀಲ ಪೋಸ್ಟರ್ ಹಚ್ಚಿದ ಆಸಾಮಿ

  • ಸಚಿವ ಬೈರತಿ ಬಸವರಾಜ್‌ಗೆ ಧಾರವಾಡ ಹೈಕೋರ್ಟ್‌ನಿಂದ ಬಿಗ್ ರಿಲೀಫ್‌ – ಸಮನ್ಸ್‌ಗೆ ಮಧ್ಯಂತರ ತಡೆ

    ಸಚಿವ ಬೈರತಿ ಬಸವರಾಜ್‌ಗೆ ಧಾರವಾಡ ಹೈಕೋರ್ಟ್‌ನಿಂದ ಬಿಗ್ ರಿಲೀಫ್‌ – ಸಮನ್ಸ್‌ಗೆ ಮಧ್ಯಂತರ ತಡೆ

    ಧಾರವಾಡ: ಭೂ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಬಸವರಾಜ್‌ಗೆ ಧಾರವಾಡ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸಚಿವರಿಗೆ ಜಾರಿಗೊಳಿಸಿದ್ದ ಸಮನ್ಸ್‌ಗೆ ಧಾರವಾಡ ಹೈಕೋರ್ಟ್‌ ತಡೆ ನೀಡಿದೆ.

    2003ರಲ್ಲಿ ಬೈರತಿ ಬಸವರಾಜ್ ಬೆಂಗಳೂರಿನ ಕೆ.ಆರ್‌.ಪುರಂ ಹೋಬಳಿಯ ಕಲ್ಕೆರೆಯಲ್ಲಿ ಅಣ್ಣಯ್ಯಪ್ಪ ಎಂಬವರಿಂದ 22 ಏಕರೆ ಜಮೀನನ್ನು ಖರೀದಿಸಿ ಖಾಲಿ ಕಾಗದದ‌‌ ಮೇಲೆ ಸಹಿ ಪಡೆದು ವಂಚಿಸಿದ್ದರು ಎಂದು ಗಂಭೀರ ಆರೋಪ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಮಾದಪ್ಪ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ʻಬಿʼ ರಿಪೋರ್ಟ್ ಹಾಕಿ ಪ್ರಕರಣ ಮುಚ್ಚಿಹಾಕಿದ್ದರು. ‌ಇದನ್ನು ಪ್ರಶ್ನಿಸಿ ಮಾದಪ್ಪ, ನ್ಯಾಯಾಲಯದ‌‌ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ನಕಲಿ ನಂದಿನಿ ತುಪ್ಪದ ಜಾಲದ ಮೇಲೆ ಅಧಿಕಾರಿಗಳ ದಾಳಿ

    ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಬೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿತ್ತು. ಬೆಂಗಳೂರು ಜನಪ್ರತಿನಿಧಿಗಳ‌‌ ವಿಶೇಷ ನ್ಯಾಯಾಲಯ ಬೈರತಿ ಬಸವರಾಜ್‌ಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ‌ ಮಾಡಿತ್ತು. ಇದನ್ನು ಪ್ರಶ್ನಿಸಿ ಬೈರತಿ ಬಸವರಾಜ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಇದರ‌‌‌ ವಿಚಾರಣೆ ಕೈಗೆ ಎತ್ತಿಕೊಂಡು ಧಾರವಾಡ ಹೈಕೋರ್ಟ್ ಏಕ‌ಸದಸ್ಯ ಪೀಠ, ಸಮನ್ಸ್ ಜಾರಿ‌ ಮಾಡಿದ್ದಕ್ಕೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯನ್ನು ಜನವರಿ ಎರಡನೇ ವಾರಕ್ಕೆ ಮುಂದೂಡಿದೆ. ಇದನ್ನೂ ಓದಿ: ಜೂಜಾಡುತ್ತಿದ್ದ ಎಎಸ್‌ಐ, ಕಾನ್‌ಸ್ಟೇಬಲ್, ತಹಸೀಲ್ದಾರ್ ಚಾಲಕ ಸೇರಿದಂತೆ 20 ಮಂದಿ ಅರೆಸ್ಟ್