Tag: ಧಾರವಾಡ

  • ಕ್ರಿಕೆಟ್‌ ಆಡುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ಬಾಲಕ ಸಾವು – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

    ಕ್ರಿಕೆಟ್‌ ಆಡುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ಬಾಲಕ ಸಾವು – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

    ಧಾರವಾಡ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ (Electric Shock) 16 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಧಾರವಾಡ‌ ನಗರದ (Dharwad City) ಮದಿಹಾಳ ಸಿದ್ದರಾಮ ಕಾಲೊನಿಯಲ್ಲಿ ನಡೆದಿದೆ.

    ಶ್ರೇಯಸ್ ಸಿನ್ನೂರ (16) ಮೃತ ಬಾಲಕ. ತನ್ನ ಮನೆಯ ಹಿಂದೆ ಕ್ರಿಕೆಟ್ (Cricket) ಆಡಲು ಹೋಗಿದ್ದು, ಆಟದ ವೇಳೆ ಬಾಲ್ ಹಿಡಿಯಲು ಹೋದಾಗ ಶ್ರೇಯಸ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ಗೆ ತೆರಳಿ ಸಂತೈಸಿದ ಮೋದಿ ನಡೆಗೆ ರವಿಶಾಸ್ತ್ರಿ ಮೆಚ್ಚುಗೆ

    ಶ್ರೇಯಸ್ ತನ್ನ ಪೋಷಕರಿಗೆ ಒಬ್ಬನೇ ಮಗನಾಗಿದ್ದ. ಧಾರವಾಡ ರಾಜೀವ್‌ ಗಾಂಧಿ ಶಾಲೆಯಲ್ಲಿ SSLC ಓದುತಿದ್ದ. ಸಂಜೆ ಶಾಲೆಯಿಂದ ಬಂದ ಮಗ ಮನೆಯಲ್ಲಿ ಕುಳಿತಾಗ ಗೆಳೆಯ ಆಟಕ್ಕೆ ಕರೆದಿದ್ದಾನೆ. ತಮ್ಮ ಮನೆಯ ಹಿಂದೆ ಕಾಮಗಾರಿ ಪ್ರಗತಿಯಲ್ಲಿದ್ದ ಕಟ್ಟದ ಬಳಿ ಕ್ರಿಕೆಟ್‌ ಆಡಲು ಹೋದ ಶ್ರೇಯಸ್‌ಗೆ 10 ನಿಮಿಷದಲ್ಲಿ ಕರೆಂಟ್‌ ಶಾಕ್‌ಗೆ ತಗುಲಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ಮಗನನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಪ್ರಯೋಜನವಾಗಲಿಲ್ಲ ಎಂದು ಮೃತ ಬಾಲಕನ ತಂದೆ ಅಶೋಕ್‌ ತಿಳಿಸಿದ್ದಾರೆ.

    ಇನ್ನೂ ಶ್ರೇಯಸ್ ಉಳಿಸಲು ಹೋಗಿದ್ದ 10 ವರ್ಷದ ಮತ್ತೋರ್ವ ಬಾಲಕ ಪ್ರಣವ್‌ ಎಂಬಾತನಿಗೂ ವಿದ್ಯುತ್ ಸ್ಪರ್ಶಿಸಿ ಸುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಮೃತ ಶ್ರೇಯಸ್‌ನ ಮೃತದೇಹವನ್ನು ಇಲ್ಲಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಇತ್ತ ಮಗನನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಸಂಬಂಧ ಧಾರವಾಡದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 2 ತಿಂಗಳ ಬಳಿಕ 24 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

  • ಮಣ್ಣಿನಲ್ಲಿ ವಿಶ್ವಕಪ್ ಕಲಾಕೃತಿ ರಚಿಸಿ ಭಾರತ ತಂಡಕ್ಕೆ ಕಲಾವಿದ ವಿಶ್

    ಮಣ್ಣಿನಲ್ಲಿ ವಿಶ್ವಕಪ್ ಕಲಾಕೃತಿ ರಚಿಸಿ ಭಾರತ ತಂಡಕ್ಕೆ ಕಲಾವಿದ ವಿಶ್

    ಧಾರವಾಡ: ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ (IND Vs AUS) ತಂಡದ ನಡುವೆ 2023ರ ವಿಶ್ವಕಪ್ (World Cup 2023) ಫೈನಲ್ ಪಂದ್ಯಾವಳಿ ನಡೆಯಲಿದ್ದು, ಇದಕ್ಕಾಗಿ ಧಾರವಾಡದ ಕಲಾವಿದರೊಬ್ಬರು ಭಾರತ ತಂಡಕ್ಕೆ ವಿಶಿಷ್ಟವಾಗಿ ಶುಭ ಹಾರೈಸಿದ್ದಾರೆ.

    ಧಾರವಾಡದ ಕೆಲಗೇರಿಯ ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ ಅವರು 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್ ಅನ್ನು ಮಣ್ಣಿನಲ್ಲಿ ಸಿದ್ಧಪಡಿಸಿ ಗಮನಸೆಳೆಯುವುದರ ಮೂಲಕ ಭಾರತ ತಂಡಕ್ಕೆ ವಿಭಿನ್ನವಾಗಿ ಶುಭ ಹಾರೈಸಿದ್ದಾರೆ.

    ಥೇಟ್ ವಿಶ್ವಕಪ್‍ನಂತೆಯೇ ಮಣ್ಣಿನಲ್ಲಿ ತಯಾರಿಸಿರುವ ಕಲಾವಿದ ಮಂಜುನಾಥ್, ಗೆದ್ದು ಬಾ ಟೀಂ ಇಂಡಿಯಾ ಎಂದು ಹೇಳುವ ಮೂಲಕ ಭಾರತ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಅಹಮ್ಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಭಾನುವಾರ ನಡೆಯಲಿರುವ ವಿಶ್ವಕಪ್ 2023ರ (World Cup 2023) ಟೂರ್ನಿ ಫೈನಲ್ ಪಂದ್ಯದಲ್ಲಿ ಭಾರತ, ಆಸ್ಟ್ರೇಲಿಯಾ ತಂಡಗಳು ಸೆಣಸಲಿವೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್ ಮಾರ್ಲೆಸ್‍ ಸಾಕ್ಷಿಯಾಗಲಿದ್ದಾರೆ.

  • ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

    ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

    ಧಾರವಾಡ: ಸಚಿವ ಹೆಚ್‌ಸಿ ಮಹದೇವಪ್ಪ (HC Mahadevappa) ಅವರು ಅಂಗರಕ್ಷಕನಿಂದ (Bodyguard) ಶೂ (Shoe) ಹಾಕಿಸಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಬಳಿಕ ಸಚಿವರು ಸ್ಪಷ್ಟನೆ ನೀಡಿದ್ದಾರೆ.

    ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ ನೀಡಿದ್ದಾರೆ.

    ಈ ಬಗ್ಗೆ ವಿವರಿಸಿದ ಅವರು, ಕುಳಿತರೆ ಬೇಗ ಏಳಲು ಆಗೋದಿಲ್ಲ, ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.

    ಆಪರೇಷನ್ ಕಮಲ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮಹದೇವಪ್ಪ, ನಮ್ಮ ಅಧ್ಯಕ್ಷರಿಗೆ ಮಾಹಿತಿ ಇರುತ್ತೆ. ಹೀಗಾಗಿ ಅವರು ಹೇಳಿರುತ್ತಾರೆ. ನಾನು ಅಧಿಕಾರಿಗಳ ಸಭೆಯಲ್ಲಿದ್ದೇನೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಮಗಿಂತ ಮಾಧ್ಯಮಗಳಿಗೇ ಹೆಚ್ಚು ಮಾಹಿತಿ ಇದೆ ಎಂದರು. ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿವಿಎಸ್

    ಬಹುಮತವಿಲ್ಲದೇ ಬಿಜೆಪಿ 2 ಸಲ ಅಧಿಕಾರಕ್ಕೆ ಬಂದಿದೆ. ಅದು ಹೇಗೆ ಬಂದಿದ್ದು ಅನ್ನೋದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಇತಿಹಾಸವೇ ಹಾಗಿದೆ. ಆ ಇತಿಹಾಸವನ್ನು ಮಾಧ್ಯಮದವರೇ ಹೇಳಲಿ ಎಂದರು.

    ಇನ್ನು ಬಿಜೆಪಿ ಶಾಸಕರ ಬಗ್ಗೆ ಎಸ್‌ಟಿ ಸೋಮಶೇಖರ್ ಬರದ ಬಗ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸೋಮಶೇಖರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಆ ಬಗ್ಗೆ ಕರಾರುವಕ್ಕಾಗಿ ಹೇಳಿದ್ದಾರೆ. ಕೇಂದ್ರಕ್ಕೆ ಹೋಗಿ ಹೇಳಿ ಅಂದಿದ್ದಾರೆ. ಇನ್ನು ಬರದ ಎಲ್ಲ ವರದಿಯನ್ನು ನೀಡಲಾಗಿದೆ. ರಾಜ್ಯದ ಜನರ ಹಿತ ಕಾಯಬೇಕೆಂದಿದ್ದರೆ ಕೇಂದ್ರಕ್ಕೆ ಕೇಳಲಿ. ಸಂಕಷ್ಟದಲ್ಲಿರೋ ರೈತರಿಗೆ ಪರಿಹಾರ ಕೊಡಬೇಕೆಂದರೆ ಕೇಂದ್ರವನ್ನು ಕೇಳಲಿ. 4,000 ಕೋಟಿ ರೂ. ಹಣ ಕೇಳಲಾಗಿದೆ. ದಯವಿಟ್ಟು ಆ ಹಣವನ್ನು ನೀಡುವಂತೆ ಕೇಳಲಿ ಎಂದು ಅವರು ಹೇಳಿದರು. ಇದನ್ನೂ ಓದಿ: ನವೆಂಬರ್ ಒಳಗೆ ಜಾತಿ ಜನಗಣತಿ ಬಿಡುಗಡೆ ಮಾಡದಿದ್ರೆ ಸಿಎಂಗೆ ಸಾಧು ಸಂತರ ಶಾಪ: ಈಶ್ವರಪ್ಪ

  • ಇಂದಿನಿಂದ 9 ದಿನ ಬಲದಂಡೆ ಕಾಲುವೆಗೆ ಹರಿಯಲಿದೆ ಮಲಪ್ರಭಾ ನೀರು

    ಇಂದಿನಿಂದ 9 ದಿನ ಬಲದಂಡೆ ಕಾಲುವೆಗೆ ಹರಿಯಲಿದೆ ಮಲಪ್ರಭಾ ನೀರು

    ಧಾರವಾಡ: ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರ ಜೊತೆಗೆ ಧಾರವಾಡ (Dharwad) ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿಯೂ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ (Malaprabha) ಜಲಾಶಯದಿಂದ 1 ಟಿಎಂಸಿ ನೀರು (Water) ಧಾರವಾಡ ಜಿಲ್ಲೆಗೆ ಬಿಡುಗಡೆಯಾಗಿದ್ದು, ಇಂದಿನಿಂದ 9 ದಿನಗಳ ಕಾಲ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಯಲಿದೆ.

    ಧಾರವಾಡ ಜಿಲ್ಲೆಯ ಕುಂದಗೋಳ, ಅಣ್ಣಿಗೇರಿ, ನವಲಗುಂದ ಹಾಗೂ ಹುಬ್ಬಳ್ಳಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಸದ್ಯ ಬಿಡುಗಡೆಯಾಗುತ್ತಿರುವ 1 ಟಿಎಂಸಿ ನೀರಿನಿಂದ ಈ ನೀರಿನ ಅಭಾವ ಇರುವ ಪ್ರದೇಶಗಳಲ್ಲಿ ಕೆರೆ ತುಂಬಿಸಿಕೊಳ್ಳಲು ಅನುಕೂಲವಾಗಲಿದೆ.

    ಈ ಹಿಂದೆ ಮಲಪ್ರಭಾ ನೀರಿನಿಂದ ಜಿಲ್ಲೆಯ 81 ಕೆರೆಗಳನ್ನು ತುಂಬಿಸಲಾಗಿತ್ತು. ಅದರಲ್ಲಿ ಸುಮಾರು 50 ಕೆರೆಗಳಲ್ಲಿ ಅರ್ಧದಷ್ಟು ನೀರು ಇನ್ನೂ ಇದೆ. 32 ಕೆರೆಗಳು ಅರ್ಧಕ್ಕಿಂತಲೂ ಕಡಿಮೆ ನೀರು ಹೊಂದಿವೆ ಎಂದು ಕೆರೆಗಳಿಗೆ ನೀರು ತುಂಬಿಸಲು ಈಗ ಆದ್ಯತೆ ನೀಡಲಾಗಿದೆ. ಇದರಿಂದ 5-6 ತಿಂಗಳವರೆಗೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಇದನ್ನೂ ಓದಿ: ಆದಾಯ ಮೀರಿ ಆಸ್ತಿ – ಸಿಬಿಐ ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

    ಸದ್ಯ ಕೃಷಿಗೆ ನೀರು ಬಿಡುವುದಿಲ್ಲ. ಈಗ ಬಿಡುವ ನೀರು ಕೇವಲ ಕುಡಿಯುವುದಕ್ಕಾಗಿ ಮಾತ್ರ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕಾಲುವೆಗೆ ಹರಿದು ಬರುವ ನೀರನ್ನು ಯಾರೂ ಕೃಷಿಗೆ ಬಳಸುವಂತಿಲ್ಲ. ಇದರ ಬಗ್ಗೆ ನಿಗಾ ವಹಿಸಲು ತಂಡವನ್ನು ಕೂಡಾ ರಚನೆ ಮಾಡಲಾಗಿದೆ. ಕಂದಾಯ, ಆರ್‌ಡಿಪಿಆರ್ ಮತ್ತು ಪೊಲೀಸ್ ಇಲಾಖೆ ಈ ತಂಡದಲ್ಲಿದ್ದು, ಕುಡಿಯಲು ಬರುವ ನೀರನ್ನು ಕೃಷಿಗೆ ಬಳಸುವವರ ಮೇಲೆ ಕ್ರಮ ಕೈಗೊಳ್ಳಲಿದೆ. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ

  • ಗೋಮಾಂಸ ರಫ್ತು ಮಾಡುವುದರಲ್ಲಿ ಭಾರತಕ್ಕೆ 2ನೇ ಸ್ಥಾನ, ಇದರ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಲಾಡ್ ಟೀಕೆ

    ಗೋಮಾಂಸ ರಫ್ತು ಮಾಡುವುದರಲ್ಲಿ ಭಾರತಕ್ಕೆ 2ನೇ ಸ್ಥಾನ, ಇದರ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಲಾಡ್ ಟೀಕೆ

    ಧಾರವಾಡ: ಭಾರತ ದೇಶ ಗೋಮಾಂಸವನ್ನು ರಫ್ತು (Beef Export) ಮಾಡುವುದರಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತ ಇದೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ ಹಾಗೂ ಕರ್ನಾಟಕ ಸೇರಿ 2ನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸಲ್ಲಬೇಕು ಎಂದು ಸಚಿವ ಸಂತೋಷ್ ಲಾಡ್ (Santosh Lad) ಟೀಕಿಸಿದ್ದಾರೆ.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸುವುದು ಬೇಡ ಎಂತಾದರೆ, ದೇಶಾದ್ಯಂತ ಗೋಶಾಲೆ ತೆರೆಯಲಿ. ಗೋಮಾಂಸ ರಫ್ತು ಮಾಡುವುದನ್ನು ಬ್ಯಾನ್ ಮಾಡಲಿ ಎಂದು ಸವಾಲು ಎಸೆದರು.

    ಕೃಷಿ ವಿಶ್ವವಿದ್ಯಾಲಯ ಕೆಲವೊಂದಿಷ್ಟು ಜಾನುವಾರುಗಳನ್ನು ಹರಾಜು ಮಾಡುತ್ತಿರುವುದಕ್ಕೆ ಬಜರಂಗದಳ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಗೋವಾ ಮತ್ತು ಮಣಿಪುರದಲ್ಲಿ ಗೋಮಾಂಸಕ್ಕೆ ಅವಕಾಶ ಕೊಟ್ಟಿದ್ದಾರೆ. ಚುನಾವಣೆ ಬಂದಿರುವ ಕಾರಣ ಏನೇನೋ ವಿಚಾರ ತರುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಘೋಷಣೆ

    ಬಿಹಾರದಲ್ಲಿ ಒಂದು ವಾರದಲ್ಲಿ 8.5 ಲಕ್ಷ ಶೌಚಾಲಯ ಕಟ್ಟಿಸಿದ್ದೇವೆ ಎಂದು ಪ್ರಧಾನಿಯವರು ಹೇಳಿದ್ದಾರೆ. ಇದನ್ನು ನಂಬಲು ಸಾಧ್ಯವೇ? ಇರದೇ ಇರುವ ರೈಲ್ವೆ ನಿಲ್ದಾಣಗಳ ಪ್ರಸ್ತಾಪ ಮಾಡಿದ್ದಾರೆ. ರಾಣಿ, ದುರ್ಗಾ, ದೇವಿ ಸ್ಟೇಷನ್ ಅಂತೆಲ್ಲಾ ಹೇಳಿದ್ದಾರೆ. ಆ ಸ್ಟೇಷನ್‌ಗಳು ಭಾರತದಲ್ಲಿ ಇಲ್ಲ. ಆದರೂ ಬಿಜೆಪಿಯವರ ಪಿಚ್ಚರ್ ನಡೆಯುತ್ತಿದೆ, ನಡೆಯಲಿ ಎಂದು ಟಾಂಗ್ ನೀಡಿದರು.

    ಬಜರಂಗದಳದವರು ಎಷ್ಟು ಜನ ಗೋವು ಸಾಕಿದ್ದಾರೆ? ಇಸ್ಕಾನ್ ಬಗ್ಗೆ ಮೇನಕಾ ಗಾಂಧಿ ಆರೋಪ ಮಾಡಿದ್ದಾರೆ. ಇದರ ಬಗ್ಗೆ ಯಾರು ಉತ್ತರ ಕೊಡಬೇಕು? ಬಿಜೆಪಿಯವರು ಯಾವುದಕ್ಕೂ ಉತ್ತರ ಕೊಡುತ್ತಿಲ್ಲ. ಎಲ್ಲದಕ್ಕೂ ನಾವೇ ಉತ್ತರ ಕೊಡಬೇಕಿದೆ. ಗೋವುಗಳ ಬಗ್ಗೆ ಪ್ರೀತಿ ಇರುವವರು ತಾವೇ ಗೋಶಾಲೆ ತೆರೆದು ತೆಗೆದುಕೊಂಡು ಹೋಗಲಿ ಎಂದು ಲಾಡ್ ಹೇಳಿದರು. ಇದನ್ನೂ ಓದಿ: ಸ್ವಾಮೀಜಿ ನಕ್ಸಲೈಟ್ ಆಗ್ಬೇಕಿತ್ತು, ದುರ್ದೈವ ಖಾವಿ ಹಾಕಿದ್ದಾರೆ: ಯತ್ನಾಳ್ ಕಿಡಿ

  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ ಪ್ರಕರಣ – ಸಂಘದ ಸಿಬ್ಬಂದಿ ಸೇರಿ 10 ಕಳ್ಳರು ಅಂದರ್

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ ಪ್ರಕರಣ – ಸಂಘದ ಸಿಬ್ಬಂದಿ ಸೇರಿ 10 ಕಳ್ಳರು ಅಂದರ್

    ಧಾರವಾಡ: ನಗರದ ಹೊರವಲಯದ ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ಕಚೇರಿಯಲ್ಲಿ ಹಣ ಕಳ್ಳತನಕ್ಕೆ ಸಂಬಂಧಪಟ್ಟಂತೆ ಸಂಘದ ಮೂವರು ಸದಸ್ಯರು ಸೇರಿ 10 ಕಳ್ಳರನ್ನು ಪೊಲೀಸರು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ಕಚೇರಿಯಲ್ಲಿ ಕಳೆದ ಅಕ್ಟೋಬರ್ 24 ರಂದು ಕಳ್ಳತನವಾಗಿತ್ತು. ಕಚೇರಿಯ ಲಾಕರ್‌ನಲ್ಲಿದ್ದ 1 ಕೋಟಿ 24 ಲಕ್ಷ ರೂ. ಹಣ ಕಳುವಾಗಿತ್ತು. ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಎಲ್ಲ ವ್ಯವಹಾರ, ಕಚೇರಿ ಕೆಲಸಗಳು ಇಲ್ಲಿಯೇ ನಡೆಯುತ್ತವೆ. ಆದರೆ ಇಲ್ಲಿ ಯಾವುದೇ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿರಲಿಲ್ಲ.

    ಅಂದು ಕಚೇರಿ ಹಿಂಭಾಗದಲ್ಲಿನ ಶೌಚಾಲಯದ ಕಿಟಕಿ ಮುರಿದು ಒಳ ಬಂದಿದ್ದ ಕಳ್ಳರು ಒಟ್ಟು 4 ಲಾಕರ್‌ಗಳನ್ನು ಮುರಿದು ಅಲ್ಲಿದ್ದ ಅಷ್ಟೂ ಹಣ ದೋಚಿದ್ದರು. ಈ ಸಂಸ್ಥೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರಿಗೆ ಸೇರಿದ್ದು, ಮೇಲಾಗಿ ಅಲ್ಲಿ ಇದ್ದ ಹಣವೆಲ್ಲವೂ ವಿವಿಧ ಹಳ್ಳಿಗಳ ಸ್ವ-ಸಹಾಯ ಸಂಘಗಳಿಂದ ಸಂಗ್ರಹಿಸಿದ್ದಾಗಿತ್ತು. ಹೀಗಾಗಿ ಯಾರೋ ಸಂಘದಲ್ಲಿ ಇದ್ದವರೇ ಶಾಮೀಲಾಗಿದ್ದಾರೆ ಅನ್ನೋ ಶಂಕೆಯನ್ನಿಟ್ಟುಕೊಂಡು ತನಿಖೆ ಮಾಡಿದ ಪೊಲೀಸರು ಕೊನೆಗೂ 10 ಜನರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ – ಹಲವರ ಬಂಧನ

    ಈ ಪ್ರಕರಣ ವಿದ್ಯಾಗಿರಿ ಠಾಣೆಯಲ್ಲಿ ದಾಖಲಾಗಿದ್ದು, ಇದಕ್ಕಾಗಿಯೇ ಪೊಲೀಸ್ ಆಯುಕ್ತರು ವಿಶೇಷ ತನಿಖಾ ತಂಡ ರಚಿಸಿದ್ದರು. ಫಿಲ್ಡ್ಗಿಳಿದ ತಂಡ ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರ, ನವಲಗುಂದದವರಾದ ಬಸವರಾಜ ಶೇಖಪ್ಪ ಬಾಬಜಿ, ಜಿಲಾನಿ ಬವರಸಾಬ ಜಮಾದಾರ, ಪರಶುರಾಮ ಹನಮಂತಪ್ಪ ನೀಲಪ್ಪಗೌಡರ, ಮಹಾಂತೇಶ ಲಕ್ಷ್ಮಣ ಹಿರಗಣ್ಣವರ, ರಂಗಪ್ಪ ನಾಗಪ್ಪ ಗುಡಾರದ, ಮಂಜುನಾಥ ಯಮನಪ್ಪ ಬೋವಿ, ಕಿರಣ ಶರಣಪ್ಪ ಕುಂಬಾರ, ರಜಾಕಅಹ್ಮದ ಅಲ್ಲಾವುದ್ದೀನ್ ಮುಲ್ಲಾನವರ ಮತ್ತು ವೀರೇಶ ಸಿದ್ದಪ್ಪ ಚವಡಿ ಎಂಬುವವರನ್ನು ಬಂಧಿಸಿದೆ. ಜೊತೆಗೆ 79 ಲಕ್ಷ 89 ಸಾವಿರ ರೂ. ನಗದು ಜಪ್ತಿ ಮಾಡಲಾಗಿದೆ. ಕಳ್ಳತನಕ್ಕೆ ಬಳಸಿದ್ದ 1 ಕಾರು, 2 ಬೈಕ್ ಮತ್ತು 4 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತರ ಪೈಕಿ ಕುಶಾಲಕುಮಾರ, ಬಸವರಾಜ್ ಮತ್ತು ಮಹಾಂತೇಶ ಇದೇ ಸಂಘದ ಸಿಬ್ಬಂದಿಯೇ ಆಗಿದ್ದಾರೆ. ಈ ಮೂವರು ಸೇರಿ ಕಳ್ಳತನಕ್ಕೆ ಎಲ್ಲಿಂದ ಬರಬೇಕು, ಹೇಗೆ ಬರಬೇಕು, ಎಲ್ಲಿ ಲಾಕರ್ ಇವೆ ಎಂಬುದನ್ನೆಲ್ಲ ಸ್ಕೆಚ್ ಹಾಕಿ, ಪ್ಲ್ಯಾನ್ ಮಾಡಿದ್ದರು. ಇದನ್ನು ಕಾರ್ಯಗತಗೊಳಿಸಲು ಈಗಾಗಲೇ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನವಲಗುಂದದ ಗ್ಯಾಂಗ್‌ಗೆ ನೀಡಿದ್ದರು. ಹೀಗಾಗಿ ಸಲೀಸಾಗಿ ಬಂದು ಕದ್ದುಕೊಂಡು ಹೋಗಿದ್ದರು. ಸದ್ಯ ಪ್ರಕರಣ ಬೇಧಿಸಿ ಕಳ್ಳರನ್ನು ಜೈಲಿಗೆ ಅಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ-ಬೆಂಗಳೂರು ವಿಮಾನದಲ್ಲಿ ತಾಂತ್ರಿಕ ದೋಷ; ವಿಮಾನ ಹಾರಾಟ ರದ್ದು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

    ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್

    ಧಾರವಾಡ: ಬಿಜೆಪಿ (BJP) ಪಕ್ಷ ಕಾಂಗ್ರೆಸ್ (Congress) ಶಾಸಕರಿಗೆ 50 ಕೋಟಿ ಆಫರ್ ನೀಡುತ್ತಿದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad)  ಪ್ರತಿಕ್ರಿಯೆ ನೀಡಿದ್ದಾರೆ.

    ಧಾರವಾಡದಲ್ಲಿ (Dharwad) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಹಜವಾಗಿಯೇ ದುಡ್ಡು ಇರುವ ಪಕ್ಷ. ಕಳೆದ 10 ವರ್ಷಗಳ ಅವಧಿಯಲ್ಲಿ ದೇಶಾದ್ಯಂತ 2,500 ಶಾಸಕರನ್ನು ಖರೀದಿ ಮಾಡಿದೆ. ಬಿಜೆಪಿ ಅಧಿಕೃತವಾಗಿಯೇ ತನ್ನ ಬಳಿ 7,500 ಕೋಟಿ ಹಣ ಇದೆ ಎಂದು ಹೇಳಿಕೊಂಡಿದೆ ಎಂದರು. ಇದನ್ನೂ ಓದಿ: ಹರೀಶ್ ಪೂಂಜಾ ಇನ್ನೂ ರಾಜಕೀಯದಲ್ಲಿ ಬಚ್ಚಾ: ಸಿದ್ದರಾಮಯ್ಯ

    ಪ್ರಧಾನಮಂತ್ರಿ ಪರಿಹಾರ ನಿಧಿಗೆ 30 ಸಾವಿರ ಕೋಟಿ ರೂ. ಜಮಾ ಆಗಿದೆ. ಆ ದುಡ್ಡಲ್ಲಿ ಇದುವರೆಗೆ ಒಂದೂ ಆಸ್ಪತ್ರೆ ಕಟ್ಟಿಸಿಲ್ಲ ಎಂದು ಹರಿಹಾಯ್ದರು. ಸಚಿವ ಸತೀಶ್ ಜಾರಕಿಹೊಳಿ ಅವರು ಅಸಮಾಧಾನಿತರಾಗಿಲ್ಲ. ಅವರು ಬೇರೆ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರಬಹುದು. ಅದು ರಾಜಕೀಯ ಉದ್ದೇಶಕ್ಕಲ್ಲ. ಅವರು ಬುದ್ಧ, ಬಸವ, ಅಂಬೇಡ್ಕರ್ ತತ್ವದ ಮೇಲೆ ಕೆಲಸ ಮಾಡುತ್ತಿದ್ದಾರೆ. ಬೇರೆ ಯಾವುದಾದರೂ ಕಾರಣಕ್ಕೆ ಅವರು ಅಸಮಾಧಾನಗೊಂಡಿದ್ದರೆ ಅವರನ್ನೇ ಕೇಳಿ ತಿಳಿದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಸಿಎಂಗೆ ಮಂತ್ರಿಗಳ ಮನೆ ಮನೆಗೆ ಓಡಾಡುವ ಪರಿಸ್ಥಿತಿ ಬಂದಿದೆ: ಗೋವಿಂದ ಕಾರಜೋಳ

    ಮುಂಬರುವ ಸರ್ಕಾರಗಳು ಸಣ್ಣ ಕೈಗಾರಿಕೋದ್ಯಮಗಳ ಬಗ್ಗೆ ಕಾಳಜಿ ವಹಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಎಲ್ಲರ ಸಾಲವನ್ನೂ ಮನ್ನಾ ಮಾಡಬೇಕಂತೇನಿಲ್ಲ. ಅದಕ್ಕಾಗಿಯೇ ಕೆಲವೊಂದಿಷ್ಟು ಮಾನದಂಡಗಳನ್ನಿಟ್ಟುಕೊಳ್ಳಬೇಕು. ರೈತರು ಪಡೆದ ಸಾಲವನ್ನು ಬ್ಯಾಂಕ್‌ಗಳು ಒತ್ತಾಯದ ಮೂಲಕ ಮರುಪಾವತಿ ಮಾಡಿಸಿಕೊಳ್ಳುವುದು ಸರಿಯಲ್ಲ ಎಂದರು. ಇದನ್ನೂ ಓದಿ: Rozgar Mela: 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

    ಸಾಲ ಪಡೆದುಕೊಂಡ ರೈತರು (Farmers) ಸಾಲವನ್ನು ನಿಯತ್ತಾಗಿ ಮರುಪಾವತಿ ಮಾಡುತ್ತಾರೆ. ಈ ವಿಚಾರದಲ್ಲಿ ನಮ್ಮ ದೇಶದಲ್ಲಿ ಬೇರೆ ವ್ಯವಸ್ಥೆಯಲ್ಲಿ ನಾವಿದ್ದೇವೆ. ಕಳೆದ 30 ವರ್ಷಗಳಿಂದ ಇದೇ ರೀತಿ ಮುನ್ನಡೆದುಕೊಂಡು ಬಂದಿದೆ. ಇದರ ಬಗ್ಗೆ ಹೆಚ್ಚಿಗೆ ಮಾತನಾಡಿದರೆ ಅದು ರಾಜಕೀಯವಾಗುತ್ತದೆ. ಬಹಳಷ್ಟು ಜನ ರೈತರು ಸಾಲ ಪಡೆದುಕೊಂಡಿದ್ದಾರೆ. ಕೆಲವರಿಗೆ ಮರುಪಾವತಿ ಮಾಡಲು ಆಗಿಲ್ಲ. ಅಂತವರ ಬಗ್ಗೆ ಸರ್ಕಾರಗಳು ಮಾನವೀಯತೆ ದೃಷ್ಟಿಯಿಂದ ವಿಚಾರ ಮಾಡಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 50 ಅಲ್ಲ 100 ಕೋಟಿ ಕೊಟ್ರೂ ಕಾಂಗ್ರೆಸ್ ಶಾಸಕರು ಬಿಜೆಪಿ ಗಾಳಕ್ಕೆ ಬೀಳಲ್ಲ: ಗಣಿಗ ರವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಚೇರಿ ಲಾಕರ್‌ನಲ್ಲಿದ್ದ 1.24 ಕೋಟಿ ಕಳವು

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಚೇರಿ ಲಾಕರ್‌ನಲ್ಲಿದ್ದ 1.24 ಕೋಟಿ ಕಳವು

    ಧಾರವಾಡ: ಇಡೀ ನಾಡು ದಸರಾ ಸಂಭ್ರಮದಲ್ಲಿದೆ. ಅದರಲ್ಲಿಯೂ ಈ ಸಲದ ದಸರಾ ಭಾನುವಾರ ಹಿಡಿದುಕೊಂಡೇ ಬಂದಿದ್ದರಿಂದ ಭರ್ಜರಿ ರಜೆಯ ಆಫರನ್ನೇ ನೀಡಿತ್ತು. ಆದರೆ ಈ ರಜೆಯ ಪ್ರಯೋಜನ ಪಡೆದುಕೊಂಡ ಕಳ್ಳರು ಧಾರವಾಡದಲ್ಲಿ (Dharwad) ಭರ್ಜರಿ ಕರಾಮತ್ ತೋರಿಸಿದ್ದಾರೆ.

    ಹೌದು. ಧಾರವಾಡದ ರಾಯಾಪುರ ಬಡಾವಣೆಯಲ್ಲಿರೋ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದಾರೆ. 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ. ಇಲ್ಲಿರೋ ಒಟ್ಟು ನಾಲ್ಕೂ ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಒಂದು ಪೈಸೆಯನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್‍ಗಳು ಊಟಕ್ಕೆ ಹೋದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.

    ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್‍ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿ ಸೇರಿದಂತೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ರಾಮನಗರ ಇಬ್ಭಾಗ, ಬೆಂಗಳೂರಿಗೆ ಕನಕಪುರ – ಏನಿದು ಡಿಕೆಶಿ ಲೆಕ್ಕಾಚಾರ?

    ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಇರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಕಾರ್ಯೋನ್ಮುಖವಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಡವಟ್ಟು- ಕೆಇಎಯಿಂದ ನೂರಾರು ಅಭ್ಯರ್ಥಿಗಳಿಗೆ ಸಂಕಷ್ಟ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಡವಟ್ಟು- ಕೆಇಎಯಿಂದ ನೂರಾರು ಅಭ್ಯರ್ಥಿಗಳಿಗೆ ಸಂಕಷ್ಟ

    ಧಾರವಾಡ: ಕರ್ನಾಟಕ ರಾಜ್ಯದಲ್ಲಿನ ವಿವಿಧ ನಿಗಮಗಳಿಗೆ ಸಂಬಂಧಿಸಿದ 656 ಹುದ್ದೆಗೆ ನೇಮಕಾತಿಗಾಗಿ ಇದೇ ಅಕ್ಟೋಬರ್ 28 ಮತ್ತು 29ರಂದು ನೇಮಕಾತಿ ಪರೀಕ್ಷೆ ನಡೆಯಲಿವೆ. ಅದರಲ್ಲಿ ಆಹಾರ ನಿಗಮ, ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ, ಎಂಎಸ್‍ಐಎಲ್‍ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಆದರೆ ಈ ಪರೀಕ್ಷೆ ಆಯೋಜನೆ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೊಡ್ಡ ಎಡವಟ್ಟು ಮಾಡಿದೆ.

    ಇದರಿಂದ ಧಾರವಾಡದಲ್ಲಿ (Dharwad) ಕೊಚಿಂಗ್ ಪಡೆಯುತ್ತಿರುವ ಸಾವಿರಾರು ಅಭ್ಯರ್ಥಿಗಳು ಈ ಪರೀಕ್ಷೆಗಳಿಗೆ ಅರ್ಜಿ ಹಾಕಿದ್ದಾರೆ. ಆದರೆ ಒಂದೇ ದಿನ ಈ ಅಭ್ಯರ್ಥಿಗಳು ಒಂದು ಪರೀಕ್ಷೆ ಹಾವೇರಿ ಜಿಲ್ಲೆಯಲ್ಲಿ ಬರೆದ್ರೆ, ಅದೇ ದಿನ ಮತ್ತೊಂದು ಪರೀಕ್ಷೆ ಧಾರವಾಡ, ಬೆಂಗಳೂರಲ್ಲಿದೆ. ಒಂದೇ ನೇಮಕಾತಿಯ ಒಂದೇ ವಿಷಯದ ಎರಡೆರಡು ಪರೀಕ್ಷೆಗಳಿಗೆ ಬೇರೆ ಬೇರೆ ಕೇಂದ್ರ ಕೊಟ್ಟು ಕೆಇಎ ಎಡವಟ್ಟು ಮಾಡಿದೆ. ಇದರಿಂದ ನೂರಾರು ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಎಫ್‍ಡಿಎ, ಎಸ್‍ಡಿಎ, ಸಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟಂಟ್ ಆಗಬೇಕು ಎಂದು ಕನಸು ಹೊತ್ತು ಬಂದಿದ್ದ ಎಷ್ಟೋ ಅಭ್ಯರ್ಥಿಗಳು ಈಗ ಅತಂತ್ರ ಸ್ಥಿತಿಗೆ ಬಂದು ನಿಂತಿದ್ದಾರೆ. ಹೀಗಾಗಿ ಸರ್ಕಾರ ಇದನ್ನ ಗಮನಿಸಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕನಕಪುರ ಕ್ಷೇತ್ರದ ಶಿಕ್ಷಕರಿಗಿಲ್ಲ ವರ್ಗಾವಣೆ ಭಾಗ್ಯ- ಸಿಎಂ ಹೇಳಿದ್ರೂ ಟ್ರಾನ್ಸ್‌ಫರ್‌ಗೆ ತಡೆ

    ಇದೊಂದೇ ಎಡವಟ್ಟು ಆಗಿದ್ರೆ ಬೇರೆ. ಇದೇ ನವೆಂಬರ್ 5 ರಂದು ನಡೆಯಲಿರುವ ಕೆಪಿಎಸ್‍ಸಿ ಮತ್ತು ಕಾನ್ಸ್‍ಸ್ಟೇಬಲ್ ಪರೀಕ್ಷೆಯಲ್ಲಿಯೂ ಗೊಂದಲ ಸೃಷ್ಟಿಯಾಗಿದೆ. ನವೆಂಬರ್ 5 ರಂದು ಒಂದೇ ದಿನ ಎರಡು ಪರೀಕ್ಷೆ ಇಡಲಾಗಿದೆ. ಎರಡೂ ಪರೀಕ್ಷೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆಗೆ ಹಾಜರಾಗಬೇಕು. ಇದನ್ನ ಬೇರೆ ಬೇರೆ ದಿನಾಂಕಕ್ಕೆ ಇಟ್ಟಿದ್ರೆ ಎರಡೂ ಪರೀಕ್ಷೆ ಬರೆಯಲು ಅವಕಾಶ ಸಿಗ್ತಿತ್ತು. ಆದರೆ ಇದೀಗ ಈ ಕೆಇಎ ಎಡವಟ್ಟಿನ ಬೆನ್ನಲ್ಲೇ ಕೆಪಿಎಸ್‍ಸಿ ಹಾಗೂ ಕಾನಸ್ಟೇಬಲ್ ಪರೀಕ್ಷೆ ಕೂಡಾ ಗೊಂದಲಕ್ಕೆ ಎಡೆ ಮಾಡಿವೆ. ಸದ್ಯ ಈ ಎರಡೂ ಪರೀಕ್ಷೆ ಕೂಡಾ ಬೇರೆ ದಿನಾಂಕ ನಿಗದಿ ಮಾಡಿ ನಮಗೆ ಅವಕಾಶ ಮಾಡಿಕೊಡಿ ಎಂದು ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿವೆ.

    ಸರ್ಕಾರ ಪರೀಕ್ಷೆ ನಡೆಸಲು ಪ್ರಾಧಿಕಾರಕ್ಕೆ ಕೊಟ್ಟಿದೆ. ಆದರೆ ದಿನಾಂಕ ಹಾಗೂ ಸ್ಥಳ ನಿಗದಿ ಮಾಡಬೇಕಾದ ಪ್ರಾಧಿಕಾರ ಹಾಗೂ ಕೆಪಿಎಸ್ಸಿಯೇ ಇಂತ ಎಡವಟ್ಟು ಮಾಡಿ, ಪರೀಕ್ಷಾ ಅಭ್ಯರ್ಥಿಗಳ ಜೀವನದ ಜೊತೆ ಆಟ ಆಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಎದ್ದಿದೆ. ಇದನ್ನ ಸರಿ ಮಾಡಿ ಅಭ್ಯರ್ಥಿಗಳಿಗೆ ಎಲ್ಲಾ ಪರೀಕ್ಷೆ ಬರೆಯಲು ಅವಕಾಶ ಮಾಡಿದ್ರೆ ಸಾಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಜರುದ್ದೀನ್ ಜೊತೆ ಟೆನ್ನಿಸ್ ಆಡಿದ ಸಂತೋಷ್ ಲಾಡ್

    ಅಜರುದ್ದೀನ್ ಜೊತೆ ಟೆನ್ನಿಸ್ ಆಡಿದ ಸಂತೋಷ್ ಲಾಡ್

    ಧಾರವಾಡ: ನಗರದ ಜಿಲ್ಲಾ ಟೆನಿಸ್ (Tennis) ಕ್ರೀಡಾಂಗಣದಲ್ಲಿ ಜಿಲ್ಲಾ ಟೆನಿಸ್ ಅಸೋಸಿಯೇಶನ್ ವತಿಯಿಂದ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಪಂದ್ಯಾವಳಿಗೆ ಮಾಜಿ ಟೀಂ ಇಂಡಿಯಾ ನಾಯಕ ಮೊಹಮ್ಮದ್ ಅಜರುದ್ದೀನ್ (Mohammad Azharuddin) ಚಾಲನೆ ನೀಡಿದರು.

    ಈ ವೇಳೆ ಮಾಜಿ ಕ್ರಿಕೆಟ್ ಆಟಗಾರ ಅಜರುದ್ದೀನ್ ಅವರು ಟೆನಿಸ್ ಆಡುವ ಮೂಲಕ ಈ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಜೊತೆಯಾದರು. ಇಬ್ಬರೂ ಕೆಲ ಹೊತ್ತು ಟೆನ್ನಿಸ್ ಆಡಿ, ಅಜರುದ್ದೀನ್‌ಗೆ ಲಾಡ್ ಅವರು ಹುರಿದುಂಬಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಪ್ಯಾಲೆಸ್ತೀನ್‌ ಪರವಾಗಿ ಪ್ರತಿಭಟಿಸಿದವರ ಮೇಲೆ ಕೇಸ್‌ ದಾಖಲು

    ಈ ವೇಳೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್ ಸಾಥ್ ನೀಡಿದರು. ಇಂದಿನಿಂದ 5 ದಿನಗಳ ಕಾಲ ಈ ಟೆನಿಸ್ ಟೂರ್ನಿಮೆಂಟ್ ನಡೆಯಲಿದೆ. ವಿಶ್ವದ ಅಗ್ರಮಾನ್ಯ ಕ್ರೀಡಾಪಟುಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನೂ ಓದಿ: ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]