Tag: ಧಾರವಾಡ

  • ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕಂಪನಿಗೆ ಭಾರೀ ವಿರೋಧ!

    ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಕಂಪನಿಗೆ ಭಾರೀ ವಿರೋಧ!

    ಧಾರವಾಡ: ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ (Muttiah Muralitharan) ಈಗ ಧಾರವಾಡದಲ್ಲಿ (Dharwad) ತಮ್ಮದೇ ತಂಪು ಪಾನೀಯ ಕೈಗಾರಿಕೆ ಆರಂಭಿಸುವುದಕ್ಕೆ ಮುಂದಾಗಿರುವುದು ಎಲ್ಲರಿಗೆ ಗೊತ್ತಿರುವ ವಿಷಯ. ಅದಕ್ಕಾಗಿ ಧಾರವಾಡ ತಾಲೂಕಿನ ಬೇಲೂರು ಬಳಿಯ ಕೈಗಾರಿಕಾ ಜಮೀನನ್ನೂ ಆಯ್ಕೆ ಮಾಡಿಕೊಂಡಿದ್ದಾರೆ. ಸರ್ಕಾರ ಕೂಡ ಅದಕ್ಕೆ ಒಪ್ಪಿಗೆ ಸೂಚಿಸಿದೆ. ಆದರೆ ಮುರಳೀಧರನ್ ಇಲ್ಲಿ ಕೈಗಾರಿಕೆ ಆರಂಭಿಸುವುದಕ್ಕೆ ಹೊಸ ಸವಾಲೊಂದು ಎದುರಾಗಿದೆ.

    ಕ್ರಿಕೆಟ್ ಸ್ಪಿನ್ ಮಾಂತ್ರಿಕ ಎಂದೇ ಹೆಸರು ಪಡೆದಿರುವ ಶ್ರೀಲಂಕಾ (Srilanka) ಕ್ರಿಕೆಟ್ ನಿವೃತ್ತ ಆಟಗಾರ ಮುತ್ತಯ್ಯ ಮುರಳೀಧರನ್, ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ತಂಪು ಪಾನೀಯ ಕಂಪನಿ ಆರಂಭಕ್ಕೆ ಮುಂದಾಗಿದ್ದಾರೆ. ಈಗ ಇದಕ್ಕೆ ರಾಜ್ಯದ ಚಿತ್ರನಟ ಸುರೇಶ್ ಹೆಬ್ಳೀಕರ್ ವಿರೋಧ ವ್ಯಕ್ತಪಡಿಸಿದ್ದಾರೆ.

    ಮುರಳೀಧರನ್ ಈಗಾಗಲೇ ಈ ಕಂಪನಿ ಆರಂಭಕ್ಕೆ 900 ಕೋಟಿ ಹಣ ಹೂಡಲಿದ್ದಾರೆ. ಅಲ್ಲದೇ ಸರ್ಕಾರ ಇವರಿಗೆ ಜಮೀನನ್ನ ಕೂಡಾ ಗುರುತಿಸಿ ಕೊಟ್ಟಿದೆ. ಆದರೆ ಈ ಕಂಪನಿಗೆ ಪ್ರತಿ ದಿನ 20 ಲಕ್ಷ ಲೀಟರ್ ನೀರು ಪೂರೈಕೆ ಮಾಡಬೇಕಿದೆ. ಮೊದಲೇ ಹುಬ್ಬಳ್ಳಿ, ಧಾರವಾಡದಲ್ಲಿ ಕುಡಿಯುವ ನೀರಿನ ಸಮಸ್ಯೆ (Drinking Water Problem) ಇದೆ. ಜನತೆಗೆ ಸಕಾಲಕ್ಕೆ ಕುಡಿಯುವ ನೀರು ನೀಡಲಾಗುತ್ತಿಲ್ಲ. ಹೀಗಿರುವಾಗ ಈ ಕಂಪನಿಗೆ ಪ್ರತಿದಿನ 20 ಲಕ್ಷ ಲೀಟರ್ ನೀರು ಪೂರೈಕೆ ಮಾಡುವುದರಿಂದ ಅವಳಿನಗರದ ಜನತೆ ನೀರಿಗಾಗಿ ಪರಿತಪಿಸುವಂತಾಗುತ್ತದೆ. ಈ ಸಂಬಂಧ ಕೈಗಾರಿಕಾ ಸಚಿವರೊಂದಿಗೆ ಮಾತನಾಡುತ್ತೇನೆ ಎಂದು ಪರಿಸರವಾದಿ ಹಾಗೂ ಹಿರಿಯ ನಟ ಸುರೇಶ್ ಹೆಬ್ಳೀಕರ್ (Suresh Heblikar) ತಿಳಿಸಿದ್ದಾರೆ.

    ಕಂಪನಿಗೆ ಒಟ್ಟು ಮೂರು ಹಂತದಲ್ಲಿ ಮುರಳೀಧರನ್ ಹಣ ಹೂಡಲಿದ್ದಾರೆ. ಅಲ್ಲದೇ ಇದರಿಂದ ಈ ಭಾಗದಲ್ಲಿ ಉದ್ಯೋಗ ಕೂಡಾ ಸೃಷ್ಟಿಯಾಗಲಿವೆ. ಆದರೆ ಹೆಬ್ಳೀಕರ್ ಪ್ರಕಾರ ಉದ್ಯೋಗ ಸೃಷ್ಟಿ ಮಾಡುವುದಕ್ಕೆ, ಕೈಗಾರಿಕೆಗಳಿಗೆ ವಿರೋಧ ಮಾಡಲ್ಲ ಅಂತಾರೆ. ಸರ್ಕಾರ ಈ ಕಂಪನಿಗೆ ನೀರು ಕೊಟ್ಟರೆ ಜನರಿಗೆ ನೀರಿನ ಸಮಸ್ಯೆ ಆಗಲಿದೆ ಎಂದು ಹೆಬ್ಳೀಕರ್ ಅಭಿಪ್ರಾಯ. ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಮುರಳೀಧರನ್ ಕೈಗಾರಿಕೆ ಆರಂಭಿಸುತ್ತಿರುವ ವಿಷಯ ಗೊತ್ತಾಗಿದೆ. ಅಂತಹ ಕೈಗಾರಿಕೆಗಳನ್ನು ನಾವು ಸ್ವಾಗತಿಸಬೇಕಾಗುತ್ತದೆ. ಯಾರು ಇದಕ್ಕೆ ವಿರೋಧ ಮಾಡುತ್ತಿದ್ದಾರೆ ಎಂಬುದನ್ನು ಪರಿಶೀಲನೆ ಮಾಡಲಾಗುವುದು ಅಂತ ತಿಳಿಸಿದ್ದಾರೆ.

    ಒಟ್ಟಾರೆ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರುಳೀಧರನ್ ಆರಂಭಿಸಲು ಉದ್ದೇಶಿಸಿರುವ ಈ ಕಂಪನಿಗೆ ಇದೀಗ ಹೊಸ ಸವಾಲು ಎದುರಾಗಿದ್ದು, ಸರ್ಕಾರ ಇದನ್ನು ಯಾವ ರೀತಿ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರ ಸಾವು

    ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರ ಸಾವು

    ಧಾರವಾಡ: ಧಾರವಾಡ-ಬೆಳಗಾವಿ ಬೈಪಾಸ್ ರಸ್ತೆಯಲ್ಲಿ (Dharwad Belagavi Bypass Road) ಪ್ರತಿದಿನ ಒಂದಿಲ್ಲೊಂದು ಅಪಘಾತಗಳು (Accident) ಸಂಭವಿಸಿ ಜನ ಸಾವನ್ನಪ್ಪುತ್ತಲೇ ಇದ್ದಾರೆ. ಮೊನ್ನೆಯಷ್ಟೇ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದರು. ಘಟನೆ ಮಾಸುವ ಮುನ್ನವೇ ಇದೀಗ ಕಾರು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

    ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ದುರ್ಘಟನೆಯಲ್ಲಿ ಸಾವನ್ನಪ್ಪಿದವರು. ಊಟ ಮಾಡಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಇದನ್ನೂ ಓದಿ: 2 ವರ್ಷ ಕಳೆದ್ರೂ ಆಗದ ರಸ್ತೆ ರಿಪೇರಿ- ಗ್ರಾಮದ ಯುವಕರಿಗೆ ಹೆಣ್ಣು ಕೊಡಲು ಹಿಂದೇಟು

    ಈ ಕಾರು ಪಲ್ಟಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಷವುಣಿಸಿ 18 ಶ್ವಾನಗಳ ಹತ್ಯೆ – ಬೆಂಗ್ಳೂರಲ್ಲೊಂದು ಅಮಾನವೀಯ ಘಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೊಸ ಇನ್ನಿಂಗ್ಸ್ ಆರಂಭ – ಧಾರವಾಡದಲ್ಲಿ 900 ಕೋಟಿ ಹೂಡಿಕೆ

    ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೊಸ ಇನ್ನಿಂಗ್ಸ್ ಆರಂಭ – ಧಾರವಾಡದಲ್ಲಿ 900 ಕೋಟಿ ಹೂಡಿಕೆ

    ಧಾರವಾಡ: ಸಾಮಾನ್ಯವಾಗಿ ಕ್ರಿಕೆಟಿಗರು (Cricketer) ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಮೇಲೆ ಕೋಚ್ ಇಲ್ಲವೇ ಬೇರೆ ಬೇರೆ ಜವಾಬ್ದಾರಿಗಳನ್ನು ವಹಿಸಿಕೊಂಡು ಕ್ರಿಕೆಟ್‌ಗಾಗಿಯೇ ಜೀವನ ಮುಡಿಪಾಗಿ ಇಡುತ್ತಾರೆ. ಆದರೆ ಕೆಲವರು ಮಾತ್ರ ಬೇರೆ ಬೇರೆ ಕ್ಷೇತ್ರಗಳ ಕಡೆ ಹೋಗುತ್ತಾರೆ. ಅಂತವರಲ್ಲಿ ಶ್ರೀಲಂಕಾದ (Sri Lanka) ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್ (Muttiah Muralitharan) ಕೂಡಾ ಒಬ್ಬರು.

    ಇವರು ಇಡೀ ವಿಶ್ವವನ್ನೇ ಬೆರಗು ಮಾಡಿದಂತ ಸ್ಪಿನ್ ಮಾಂತ್ರಿಕ. ಟೆಸ್ಟ್ ಕ್ರಿಕೆಟ್‌ನಲ್ಲಿ 800 ವಿಕೆಟ್ ಪಡೆದರೆ, ಏಕ ದಿನ ಕ್ರಿಕೆಟ್‌ನಲ್ಲಿ 536 ವಿಕೆಟ್ ಪಡೆದವರು. ಮುತ್ತಯ್ಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ ಬಳಿಕ ಶ್ರೀಲಂಕಾದಲ್ಲಿ ಸಿಲೋನ್ ಬೇವರೆಜಸ್ ಕ್ಯಾನ್ ಕಂಪನಿ ಮೂಲಕ ತಂಪು ಪಾನೀಯ ಮತ್ತು ಎನರ್ಜಿ ಡ್ರಿಂಕ್ ಉತ್ಪಾದನಾ ಉದ್ಯಮಕ್ಕೆ ಕೈ ಹಾಕಿ ಯಶಸ್ವಿಯಾದವರು. ಅವರೇ ಈಗ ಧಾರವಾಡದಲ್ಲಿ (Dharwad) ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸುವುದಕ್ಕೆ ಮುಂದಾಗಿದ್ದಾರೆ.

    ಹೌದು, ತಮ್ಮ ಉದ್ಯಮಕ್ಕಾಗಿ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಬಳಿಯ ಕೈಗಾರಿಕಾ ಜಮೀನನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ವಾರವಷ್ಟೇ ಮುಮ್ಮಿಗಟ್ಟಿಗೆ ಬಂದು ಸ್ಥಳವನ್ನೂ ನೋಡಿಕೊಂಡು ಹೋಗಿದ್ದಾರೆ. ಈ ಕೈಗಾರಿಕೆ ಸ್ಥಾಪನೆಗೆ ಎಫ್‌ಎಂಸಿಜಿ ಕ್ಲಸ್ಟರ್ ಅಡಿಯಲ್ಲಿ ಸುಮಾರು 900 ಕೋಟಿ ರೂ. ಹೂಡಿಕೆ ಮಾಡಲು ಮುರಳೀಧರನ್ ಸಿದ್ಧರಾಗಿದ್ದು, ಮೊದಲ ಹಂತದಲ್ಲಿ 256.30 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ. ಈ ಮೂಲಕ 200 ಜನರಿಗೆ ಇಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ಇದನ್ನೂ ಓದಿ: ಪಾಕಿಸ್ತಾನದ ಸಂಸತ್ತು ವಿಸರ್ಜನೆ – ಸಾರ್ವತ್ರಿಕ ಚುನಾವಣೆಗೆ ಸಜ್ಜು

    ಮೊದಲ ಹಂತದಲ್ಲಿ ಮುತ್ತಯ್ಯಗೆ ಕೆಐಎಡಿಬಿ 15 ಎಕರೆ ಭೂಮಿ ಒದಗಿಸಲಾಗುತ್ತಿದ್ದು, ಒಟ್ಟು 3 ಹಂತಗಳಲ್ಲಿ ಉದ್ಯಮ ವಿಸ್ತರಿಸಲು ಕಂಪನಿ ಯೋಜಿಸಿದೆ. ಇದಕ್ಕಾಗಿ 32 ರಿಂದ 36 ಎಕರೆ ಭೂಮಿಗೆ ಬೇಡಿಕೆ ಸಲ್ಲಿಸಿದ್ದಾರೆ. ಮುರಳೀಧರನ್ ಆಗಸ್ಟ್ 5 ರಂದು ಮುಮ್ಮಿಗಟ್ಟಿ ಕೈಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಜಮೀನು ಪರಿಶೀಲಿಸಿದ್ದಾರೆ. ಸರ್ಕಾರದ ಹಂತದಲ್ಲಿ ಉದ್ಯಮ ಆರಂಭಕ್ಕೆ ಅನುಮೋದನೆ ದೊರೆತಿದ್ದು, ಮುಂಬರುವ 2-3 ವರ್ಷದಲ್ಲಿ ಕಾಮಗಾರಿ ಆರಂಭಿಸುವ ಸಾಧ್ಯತೆ ಇದೆ.

    ಒಟ್ಟಾರೆಯಾಗಿ ಉದ್ಯಮ ಕ್ಷೇತ್ರದಲ್ಲಿ ಧಾರವಾಡ ತನ್ನದೆಯಾದ ಛಾಪು ಮೂಡಿಸಿದ್ದು, ಅದೇ ಕಾರಣಕ್ಕೆ ಈಗ ದೂರದ ಶ್ರೀಲಂಕಾದಿಂದ ಮುತ್ತಯ್ಯ ಮುರಳೀಧರನ್ ಧಾರವಾಡಕ್ಕೆ ಬಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪೇಸಿಎಂಗೆ ಬಿಜೆಪಿ ಪೇಸಿಎಸ್ ತಿರುಗೇಟು- ಚಲುವರಾಯಸ್ವಾಮಿ ವಿರುದ್ಧ ಕ್ಯೂಆರ್ ಕೋಡ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

    ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

    ಧಾರವಾಡ: ಕಾಂಗ್ರೆಸ್ (Congress) ಎಲ್ಲಾ ಸಂದರ್ಭದಲ್ಲಿ ವಿರೋಧ ಮಾಡುತ್ತಿದೆ. ಸೆಂಟರ್ ವಿಸ್ತಾಗೆ ವಿರೋಧ ಮಾಡಿದ್ದರು. ಇದೀಗ ಹೊಸ ಪಾರ್ಲಿಮೆಂಟ್‌ಗೆ ವಿರೋಧ ಮಾಡುತ್ತಿದೆ. ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ನಾವು ಉದ್ಯಮಿಗಳ ಹತ್ತಾರು ಕೋಟಿ ಮನ್ನಾ ಮಾಡಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳಿದ್ದಾರೆ. ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ ಎಂದು ಕಿಡಿಕಾರಿದರು. ಇವರ ಕಾಲದಲ್ಲಿಯೇ ಅತಿ ಹೆಚ್ಚು ಸಾಲಕೊಡಿಸಿದ್ದಾರೆ. ಅವರು ಸಾಲ ವಾಪಸ್ ತುಂಬಿರಲೇ ಇಲ್ಲ. ಮೋದಿ ಬಂದ ಮೇಲೆ ಬಾಕಿ ಸಾಲ ವಾಪಸ್ ತುಂಬಿ ಎಂದಿದ್ದರು. ಆಗ ಅಂತಹ ಉದ್ಯಮಿಗಳು ಓಡಿ ಹೋಗಿದ್ದಾರೆ. ಓಡಿ ಹೋದ ಉದ್ಯಮಿ, ವಂಚಕರ ಆಸ್ತಿ ವಶಪಡಿಸಿಕೊಳ್ಳುತ್ತೇವೆ. ಇದಕ್ಕಾಗಿ ಹೊಸ ಕಾಯ್ದೆ ತಂದಿದ್ದೇವೆ. ಹೊಸ ಸಾಲ ಕೊಡುವ ಕಾರ್ಯ ಮಾಡಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡಿ: BBMPಗೆ ಡಿಕೆಶಿ ಪತ್ರ

    ಕಾಂಗ್ರೆಸ್‌ನವರು ಕಾಯ್ದೆ, ಕಾನೂನು ಬಿಟ್ಟು ಸಾಲ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ನಾವು ಉದ್ಯಮಿ ಸಾಲ ಮನ್ನಾ ಮಾಡಿದ್ದೇವೆ ಎಂದು ಸಾಬೀತುಪಡಿಸಲಿ. ಸಾಬೀತು ಮಾಡಿದರೆ ನಾವು ರಾಜಕೀಯ ನಿವೃತ್ತಿ ಪಡೆಯುತ್ತೇವೆ. ನಯಾಪೈಸೆ ಮನ್ನಾ ಮಾಡಿಲ್ಲ ಎಂದಾದರೆ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರಾ? ಎಂದು ಸವಾಲು ಹಾಕಿದರು. ಇದನ್ನೂ ಓದಿ: ನರೇಂದ್ರ ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

    30ರಿಂದ 40 ಸಾವಿರ ಕೋಟಿ ರೂ. ಸಾಲ ನಾವು ಈಗಾಗಲೇ ವಸೂಲಿ ಮಾಡಿದ್ದೇವೆ. ಓಡಿ ಹೋದವರನ್ನು ಕರೆದು ವಸೂಲಿ ಮಾಡುತ್ತೇವೆ. ಓಡಿ ಹೋದವರಿಗೆ ಸಾಲ ಕೊಟ್ಟವರೇ ಇವರು. ಓಡಿ ಹೋದವರು ಬಂದರೆ ಅದೆಲ್ಲ ಹೊರಗೆ ಬರುತ್ತದೆ. ಹೀಗಾಗಿ ಓಡಿ ಹೋದ ವಂಚಕರು ವಾಪಸ್ ಬರದಂತೆ ತಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗೆ ಮೋದಿ ಚಾಲನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧಾರವಾಡ ಜಿಲ್ಲೆಯಲ್ಲಿಯೂ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದೆ: ಪ್ರಹ್ಲಾದ್‌ ಜೋಶಿ ಬಾಂಬ್‌

    ಧಾರವಾಡ ಜಿಲ್ಲೆಯಲ್ಲಿಯೂ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದೆ: ಪ್ರಹ್ಲಾದ್‌ ಜೋಶಿ ಬಾಂಬ್‌

    ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿಯೂ ಸಹ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದ್ದು, ಅಧಿಕಾರಿಗಳು ನನಗೆ ವಯಕ್ತಿಕವಾಗಿ ಕರೆ ಮಾಡಿ ನೋವು ನೋಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಬಾಂಬ್ ಸಿಡಿಸಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ (H.D. Kumaraswamy) ವರ್ಗಾವಣೆ ಆರೋಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ. 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

    ಸುಪ್ರೀಂ ಕೋರ್ಟ್‌ ತೀರ್ಪಿನ ಕುರಿತು ಮಾತನಾಡಿ, ರಾಹುಲ್ ಗಾಂಧಿಯವರ ಶಿಕ್ಷೆಯನ್ನು ಕೋರ್ಟ್ ತಡೆದಿದೆಯೇ ಹೊರೆತು, ಅವರು ಮಾಡಿದ್ದು ಸರಿ ಅಂತ ಒಪ್ಪಿಕೊಂಡಿಲ್ಲ. ಮಾತನಾಡಿದ್ದು ತಪ್ಪು ಅಂತ ಹೇಳಿದೆ. ಕೋರ್ಟ್ ತೀರ್ಪು ಆಧರಸಿ ಸ್ಪೀಕರ್ ಅವರು ರಾಹುಲ್ ಗಾಂಧಿ ಸಂಸದ ಸ್ಥಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳತ್ತಾರೆ. ರಾಹುಲ್ ಗಾಂಧಿಯ ಅವರ ಪ್ರಕರಣದಲ್ಲಿ ಯಾವುದೇ ರಾಜಕೀಯ ಇಲ್ಲ. ಅದು‌ ನ್ಯಾಯಾಲಯದ ವಿಚಾರ ಎಂದರು.

    ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಬಂದಿದ್ದು ಕುಮ್ಮಕ್ಕು ಸಿಕ್ಕಂತಾಗಿದೆ. ನಾವು ಏನು ಮಾಡಿದರೂ ಕಾಂಗ್ರೆಸ್ ಪಾರ್ಟಿ ಸಂರಕ್ಷಣೆ ನೀಡುತ್ತೆ ಅಂತ ಇದನ್ನು ಮಾಡಲಾಗುತ್ತಿದೆ ಎಂದು ಉಡುಪಿ ಹಾಸ್ಟೆಲ್ ವೀಡಿಯೋ ಮತ್ತು ಹುಬ್ಬಳ್ಳಿ ಕಾಲೇಜು ಪೋಸ್ಟ್ ವಿಚಾರವಾಗಿ ಗರಂ ಆದರು. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

    ಆರಗ ಜ್ಞಾನೇಂದ್ರ ಅವರ ಬೇಡಿಕೆಗೆ ನಮ್ಮ ಸಮ್ಮತಿ ಇದೆ. ಆದರೆ ಅವರ ಹೇಳಿಕೆಗೆ ನಮ್ಮ ವಿರೋಧವಿದೆ. ಖರ್ಗೆಯವರ ಬಗ್ಗೆ ಜ್ಞಾನೇಂದ್ರ ಆ ರೀತಿ ಮಾತನಾಡಬಾರದಿತ್ತು. ರಾಜಕೀಯ ವಿಚಾರವಾಗಿ ಖರ್ಗೆ ಮತ್ತು ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿದೆ. ಆದರೆ ವಯಕ್ತಿಕವಾಗಿ ಖರ್ಗೆ ಅನುಭವ, ಹಿರಿತನದ ಬಗ್ಗೆ ಗೌರವವಿದೆ. ಯಾವುದೇ ವ್ಯಕ್ತಿ ಮೈ ಬಣ್ಣ, ಪ್ರದೇಶ‌ ನೋಡಿ ಮಾತನಾಡುವುದು ಸರಿಯಲ್ಲ.
    ಈ ಕುರಿತು ನಾನು ಜ್ಞಾನೇಂದ್ರಗೆ ತಿಳಿ ಹೇಳುತ್ತೇನೆ ಎಂದು ಹೇಳಿದರು.

    ಗೃಹಜ್ಯೋತಿ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿದ್ದವು. ಈಗ ಅದೇ ಮುಂದುವರಿದಿದೆ. ದಿನ ಬಳಕೆ ವಿದ್ಯುತ್ ದರ ಜಾಸ್ತಿ ಮಾಡಿ ಯೋಜನೆ ಜಾರಿ ಮಾಡಲಾಗಿದೆ. ರಾಜಸ್ಥಾನದಲ್ಲಿ ಹೀಗೆ ಫ್ರೀ ವಿದ್ಯುತ್ ಕೊಡುತ್ತೇನೆ ಅಂತ ಹೇಳಿ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಸ್ಲಿಂ ಯುವಕ, ಯುವತಿಯರನ್ನು ಬಚಾವ್ ಮಾಡಲು ಪ್ರಕರಣ ಮುಚ್ಚಿಡಲಾಗ್ತಿದ್ಯಾ – ಮುತಾಲಿಕ್ ಪ್ರಶ್ನೆ

    ಮುಸ್ಲಿಂ ಯುವಕ, ಯುವತಿಯರನ್ನು ಬಚಾವ್ ಮಾಡಲು ಪ್ರಕರಣ ಮುಚ್ಚಿಡಲಾಗ್ತಿದ್ಯಾ – ಮುತಾಲಿಕ್ ಪ್ರಶ್ನೆ

    ಧಾರವಾಡ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಉಡುಪಿ ಖಾಸಗಿ ಕಾಲೇಜಿನ (College) ವೀಡಿಯೋ ವಿವಾದದ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ತೀಕ್ಷ್ಣ ಪ್ರತಿಕ್ರಿಯೆ ನೀಡಿ ಮುಸ್ಲಿಂ ಯುವಕ, ಯುವತಿಯರನ್ನು ಬಚಾವ್ ಮಾಡಲು ಪ್ರಕರಣ ಮುಚ್ಚಡಲಾಗ್ತಿದ್ಯಾ ಎಂದು ಪ್ರಶ್ನಿಸಿದ್ದಾರೆ.

    ಧಾರವಾಡದಲ್ಲಿ (Dharwad) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 20 ರಂದು ಉಡುಪಿಯಲ್ಲಿ (Udupi) ಅತ್ಯಂತ ಹೇಯ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್ ಮಾಡಿದ್ದಾರೆ. ಅವರ ಮೇಲೆ ಕ್ರಮ ಆಗಬೇಕಿತ್ತು. ಒಂದು ವಾರದ ನಂತರ ಈ ಬಗ್ಗೆ ದೂರು ದಾಖಲು ಮಾಡಲಾಗುತ್ತಿದೆ. ಗೃಹ ಸಚಿವರು ಇದನ್ನು ಸಣ್ಣ ವಿಷಯ ಎಂದು ಹೇಳುತ್ತಾರೆ. ಅವರ ಈ ಹೇಳಿಕೆ ನೋಡಿದರೆ ಉಡುಪಿ ಎಸ್‍ಪಿಯವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂಬ ಅರ್ಥದಲ್ಲಿ ಹೇಳಿದಂತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉಡುಪಿ ವಿಡಿಯೋ ಚಿತ್ರೀಕರಣ ಕೇಸ್ – ವಿದ್ಯಾರ್ಥಿನಿಯರು, ಕಾಲೇಜ್ ವಿರುದ್ಧ ಎಫ್‌ಐಆರ್ ದಾಖಲು

    ಗೃಹ ಸಚಿವರೇ ನಿಮ್ಮ ಮಗಳೇ ಆ ಕಾಲೇಜಿನಲ್ಲಿ ಓದುತ್ತಿದ್ದಿದ್ದರೆ ಈ ರೀತಿ ಹಗುರವಾಗಿ ಮಾತಾಡುತ್ತಿದ್ದಿರಾ? ಇದು ಕೇವಲ ವಿಡಿಯೋ ಎಂದಲ್ಲ, ಇದರ ಹಿಂದೆ ದೊಡ್ಡ ಜಾಲ ಇರಬಹುದು. ಮುಸ್ಲಿಂ ಯುವಕರಿಗೆ ಇದನ್ನು ಕಳುಹಿಸುತ್ತಿರಬಹುದು. ಅಲ್ಲದೇ ಇದು ಕೇರಳ ಅಫ್ಘಾನಿಸ್ತಾನ, ಅರಬ್ ರಾಷ್ಟ್ರಗಳಿಗೂ ಫೆÇೀಟೋ ಕಳಿಸುವ ಜಾಲ ಇರಬಹುದು ಈ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    ಇದು ಸಣ್ಣ ವಿಷಯ ಎಂದು ಹೇಳುವ ಗೃಹ ಸಚಿವರಿಗೆ ಶೋಭೆ ತರುವಂತದ್ದಲ್ಲ. ಮುಸ್ಲಿಂ ಯುವಕ ಹಾಗೂ ಯುವತಿಯರು ಎಂದು ಬಚಾವ್ ಮಾಡಲು ಈ ರೀತಿ ಮುಚ್ಚಿಡುವ ಕೆಲಸ ನಡೆದಿದೆಯಾ? ಆ ಕಾಲೇಜ್‍ನ ಪ್ರಾಂಶುಪಾಲರು ಇದುವರೆಗೂ ಏಕೆ ದೂರು ಕೊಟ್ಟಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

    ಈ ಪ್ರಕರಣದಲ್ಲಿ ಪೊಲೀಸರೂ ಬಣ್ಣ ಬದಲಾಯಿಸುತ್ತಿದ್ದಾರೆ. ಅಧಿಕಾರದಲ್ಲಿರುವವರ ಪ್ರಕಾರ ನಡೆದುಕೊಳ್ಳು ತಂತ್ರ ನಡೆದಿದೆ. ಪೊಲೀಸ್ ಇಲಾಖೆಗೆ ನಾಚಿಕೆಯಾಗಬೇಕು. ನ್ಯಾಯ ನ್ಯಾಯಾನೇ, ಕಾಯ್ದೆ ಕಾಯ್ದೆನೇ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಬಿಜೆಪಿ ಬಂದಾಗ ಒಂದು ಕಾಂಗ್ರೆಸ್ ಬಂದಾಗ ಒಂದು ಎಂದು ಬಣ್ಣ ಬದಲಿಸಬಾರದು ಎಂದ ಆಕ್ರೋಶ ಹೊರಹಾಕಿದ್ದಾರೆ.

    ಕಾನೂನು ಪ್ರಕಾರ ನಡೆದುಕೊಂಡರೆ ನಿಮ್ಮ ಮೇಲೆ ನಂಬಿಕೆ ಬರುತ್ತದೆ. ಈ ರೀತಿ ನಡೆದ ಘಟನೆಯನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಇಡೀ ರಾಜ್ಯಾದ್ಯಂತ ಇದರ ಬಗ್ಗೆ ಹೋರಾಟಕ್ಕೆ ಮುಂದಾಗುತ್ತದೆ. ರಾಜಕಾರಣ ಮಾಡಬೇಡಿ ಎಂದು ಹೇಳುವವರಿಗೆ ಇದು ರಾಜಕಾರಣ ಅಲ್ಲ ಎಂದು ಹೇಳುತ್ತೇನೆ. ಇದು ಹೇಯ ಕೃತ್ಯ, ಇದನ್ನು ತಡೆಯಬೇಕು. ಇದರ ಹಿಂದೆ ಯಾರಿದ್ದಾರೆ ಅದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

    ಉಡುಪಿ ಹಿಜಾಬ್‍ನಲ್ಲಿ ಮುಸ್ಲಿಂ ಮೌಲ್ವಿ ಹಾಗೂ ಪಿಎಐಗೆ ಮುಖಭಂಗ ಆಗಿದೆ. ಹೈಕೋರ್ಟ್ ಆದೇಶ ಅದರ ಸೇಡು ತೀರಿಸಿಕೊಳ್ಳಲು ಈ ದಿನ ಹಿಂದೂ ಹುಡುಗಿಯರ ಈ ಅಶ್ಲೀಲ ಚಿತ್ರಗಳನ್ನು ತೆಗೆದುಕೊಳ್ಳುವ ಪ್ರಯತ್ನ ಮಾಡಿರಬಹುದು. ಎಲ್ಲ ಪ್ರಕಾರದ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಿಡಿಯೋ ಚಿತ್ರೀಕರಣ ಏಳೆಂಟು ತಿಂಗಳಿಂದ ನಡೆಯುತ್ತಿದೆ, ಯುವಕರು ಭಾಗಿ: ಸುರೇಶ್ ನಾಯಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧಾರಾಕಾರ ಮಳೆ – ಸೋರುತ್ತಿದ್ದ ಬಸ್‌ನಲ್ಲೂ ಕೊಡೆ ಹಿಡಿದು ಕುಳಿತ ಪ್ರಯಾಣಿಕ

    ಧಾರಾಕಾರ ಮಳೆ – ಸೋರುತ್ತಿದ್ದ ಬಸ್‌ನಲ್ಲೂ ಕೊಡೆ ಹಿಡಿದು ಕುಳಿತ ಪ್ರಯಾಣಿಕ

    ಧಾರವಾಡ: ಒಂದು ವಾರದಿಂದ ಧಾರವಾಡದಲ್ಲಿ (Dharwad) ಸುರಿಯುತ್ತಿರುವ ಮಳೆಯಿಂದಾಗಿ (Rain) ಕೇವಲ ಮನೆಗಳಷ್ಟೇ ಅಲ್ಲ ಸಾರಿಗೆ ಸಂಸ್ಥೆಯ ಬಸ್‌ಗಳೂ (Bus) ಸೋರುವ ಸ್ಥಿತಿಗೆ ತಲುಪಿದೆ.

    ಧಾರವಾಡ ನಗರ ಸಿಬಿಟಿ ಬಸ್ ನಿಲ್ದಾಣದಿಂದ ವಿವಿಧ ನಗರಗಳಿಗೆ ಹೋಗುವ ಬಸ್‌ಗಳು ಮಳೆಯಿಂದ ಸೋರುತ್ತಿವೆ. ಶ್ರೀರಾಮನಗರದಿಂದ ಸಿಬಿಟಿಗೆ ಬರುವ ಸಾರಿಗೆ ಸಂಸ್ಥೆಯ ಬಸ್ ಒಂದು ಸೋರುತ್ತಿತ್ತು. ಇದರಿಂದ ಪ್ರಯಾಣಿಕರೊಬ್ಬರು ಬಸ್‌ನಲ್ಲೇ ಕೊಡೆ (Umbrella) ಹಿಡಿದು ಕುಳಿತು ಪ್ರಯಾಣಿಸಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ – ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ

    ಸದ್ಯ ಈ ವೀಡಿಯೋ ವೈರಲ್ ಆಗಿದೆ. ಅಲ್ಲದೇ ಇದು ನಮ್ಮ ಸಾರಿಗೆ ಇಲಾಖೆಯ ಸ್ಥಿತಿ ನೋಡಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: KRS ಡ್ಯಾಂ 3 ಅಡಿ ಭರ್ತಿ – 29,552 ಕ್ಯೂಸೆಕ್ ನೀರು ಒಳಹರಿವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೋಶಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೇಟ್ ಮಾಡಲು ಯುವಕರ ಹುಚ್ಚಾಟ – ಪೊಲೀಸರಿಂದ ತಕ್ಕ ಪಾಠ

    ಸೋಶಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೇಟ್ ಮಾಡಲು ಯುವಕರ ಹುಚ್ಚಾಟ – ಪೊಲೀಸರಿಂದ ತಕ್ಕ ಪಾಠ

    ಧಾರವಾಡ: ಸೋಶಿಯಲ್ ಮೀಡಿಯಾದಲ್ಲಿ (Social Media) ಲೈಕ್ಸ್ ಗಿಟ್ಟಿಸಿಕೊಳ್ಳುವ ಸಲುವಾಗಿ ಕಾಲೇಜು ಹುಡುಗಿಯರನ್ನು ಚುಡಾಯಿಸುವ ವೀಡಿಯೋ (Video) ಮಾಡಿ ಹಂಚಿಕೊಳ್ಳುತ್ತಿದ್ದ ಯುವಕರ ತಂಡಕ್ಕೆ ಧಾರವಾಡ ನಗರ ಠಾಣೆ ಪೊಲೀಸರು (Dharwad Police) ಬಿಸಿ ಮುಟ್ಟಿಸಿದ್ದಾರೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರನ್ನು ಧಾರವಾಡ ನಗರ ಠಾಣೆ ಪೊಲೀಸರು ಬಂಧಿಸಿದ್ದು, ನಂತರ ಬಿಫೋರ್, ಆಫ್ಟರ್ ವೀಡಿಯೋ ಮಾಡಿ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮಿಂಚಲು ಹೋಗಿ ಅನೇಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಅದರಲ್ಲೂ ಯುವಕರು ಏನೇನೋ ಮಾಡಲು ಹೋಗಿ ಪೊಲೀಸರಿಂದ ಹೊಡೆತ ತಿನ್ನುತ್ತಿದ್ದಾರೆ. ಅಂಥವರ ಸಾಲಿನಲ್ಲಿ ಧಾರವಾಡದ ಮೂವರು ಯುವಕರು ಸೇರ್ಪಡೆಯಾಗಿದ್ದಾರೆ.

    2 ದಿನಗಳ ಹಿಂದೆ ಧಾರವಾಡದ ಕಾಲೇಜೊಂದರ ಬಳಿ ಹೋಗುತ್ತಿದ್ದ ವಿದ್ಯಾರ್ಥಿನಿಯರ ಗುಂಪಿನ ಹಿಂದೆ ಬೈಕ್ ಮೇಲೆ ಬಂದ ಓರ್ವ ಯುವಕ ಅವರ ಸಮೀಪ ಬರುತ್ತಿದ್ದಂತೆಯೇ ಜೋರಾಗಿ ಚೀರಿ ಅವರು ಹೆದರಿದಾಗ ವಿಕೃತ ಆನಂದ ಪಡೆದಿದ್ದ. ಈ ದೃಶ್ಯವನ್ನು ಛೇಡಿಸಿದ ಯುವಕನ ಸ್ನೇಹಿತ ಮತ್ತೊಂದು ಬೈಕ್ ಮೇಲೆ ಕುಳಿತುಕೊಂಡು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಬಳಿಕ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಖುಷಿ ಪಟ್ಟಿದ್ದರು.

    ಸೋಶಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೇಟ್ ಮಾಡಲು ಇಂತಹ ಹುಚ್ಚಾಟಗಳನ್ನು ಮಾಡುತ್ತಿದ್ದ ಮೂವರ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ನಿತ್ಯವೂ ಈ ರೀತಿ ಮಾಡಿ, ವೀಡಿಯೋವನ್ನು ಟ್ವಿಟ್ಟರ್‌ಗೆ ಹಾಕಿ ವಿಕೃತ ಆನಂದ ಪಡೆಯುತ್ತಿದ್ದ ಧಾರವಾಡ ನಗರದ ಅಹ್ಮದ್ ಖಾತರ್, ಜುನೇದ್ ಸೌದಾಗರ್, ಮನ್ಸೂರ್ ಶಿರಹಟ್ಟಿ ಎಂಬುವವರನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಭೇಟಿಯಾಗಲು ಗ್ರಾಮದ ವಿದ್ಯುತ್ ಅನ್ನೇ ಕಡಿತಗೊಳಿಸ್ತಿದ್ದ ಯುವತಿ

    ಪೊಲೀಸರು ಅವರನ್ನು ಅಷ್ಟಕ್ಕೇ ಬಿಟ್ಟಿಲ್ಲ. ಕೇಸು ದಾಖಲಿಸಿದ ಬಳಿಕ ಅದೇ ಯುವಕರ ವೀಡಿಯೋ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿ ಬುದ್ಧಿ ಕಲಿಸಿದ್ದಾರೆ. ಯುವಕರ ವೀಡಿಯೋಗೆ ಪೊಲೀಸರು ಪ್ರತಿ ವೀಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಕೆಲವು ವೀಡಿಯೋಗಳು ವೈರಲ್ ಆಗುವ ರೀತಿಯಲ್ಲಿಯೇ ಪೊಲೀಸರು ಬಿಫೋರ್, ಆಫ್ಟರ್ ಎಫೆಕ್ಟ್ ಹಾಕಿ ವೀಡಿಯೋ ರಿಲೀಸ್ ಮಾಡಿದ್ದಾರೆ. ಅಷ್ಟೇ ಅಲ್ಲ, ಆ ವೀಡಿಯೋವನ್ನು ಪೊಲೀಸರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಟ್ವಿಟ್ಟರ್ ಖಾತೆ ಮೂಲಕ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ನ ನೀಲಿ ಹಕ್ಕಿಗೆ ಗುಡ್‌ಬೈ? – ಮಸ್ಕ್ ಹೊಸ ಬಾಂಬ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 530 ಜನರಿಗೆ ರೌಡಿ ಶೀಟರ್ ಪಟ್ಟದಿಂದ ಮುಕ್ತಿ ನೀಡಿದ ಹು-ಧಾ ಪೊಲೀಸ್ ಇಲಾಖೆ

    530 ಜನರಿಗೆ ರೌಡಿ ಶೀಟರ್ ಪಟ್ಟದಿಂದ ಮುಕ್ತಿ ನೀಡಿದ ಹು-ಧಾ ಪೊಲೀಸ್ ಇಲಾಖೆ

    ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಗಳಿಗೆ ಕಾರಣವಾಗುವ ರೌಡಿ ಶೀಟರ್‌ಗಳನ್ನು (Rowdy Sheeter) ಸನ್ನಡತೆ ಸೇರಿ ಇತರ ಆಧಾರದ ಮೇಲೆ ಪಟ್ಟಿಯಿಂದ ಕೈಬಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ (Hubballi – Dharwad Police Department) ವ್ಯಾಪ್ತಿಯಲ್ಲಿ ಒಟ್ಟು 530 ಮಂದಿಯ ಹೆಸರನ್ನು ರೌಡಿ ಶೀಟರ್ ಪಟ್ಟಿಯಿಂದ ಹೊರಹಾಕಲಾಗಿದೆ.

    ಕೆಲ ಮಾಹಿತಿಗಳನ್ನು ಆಧರಿಸಿ ರೌಡಿಗಳ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ. ಹು-ಧಾ ವ್ಯಾಪ್ತಿಯಲ್ಲಿ 2018ರಿಂದ 2023ರವರೆಗೆ ಬಹಳಷ್ಟು ರೌಡಿಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಹು-ಧಾ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿಗಳಿದ್ದಾರೆ. ಪ್ರತಿ ರೌಡಿ ಪಟ್ಟಿಯಲ್ಲಿ ಹಲವರ ಹೆಸರು ಸೇರ್ಪಡೆಯಾಗುತ್ತ ಹೋಗುತ್ತದೆ. ಕೊಲೆ, ಸುಲಿಗೆ, ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾದವರು ರೌಡಿ ಶೀಟರ್‌ಗೆ ಸರ್ಪಡೆಯಾಗುತ್ತಾರೆ. ಅದೂ ಒಬ್ಬರ ಮೇಲೆ ಒಂದಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾದರೆ ಮಾತ್ರ. ಇದನ್ನೂ ಓದಿ: ತಳ್ಳಾಟ ನೂಕಾಟದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಯತ್ನಾಳ್ – ಆಸ್ಪತ್ರೆಗೆ ರವಾನೆ

    ಇದೇ ಆಧಾರದಲ್ಲಿ ಪ್ರತಿ ರೌಡಿಗಳ ಹೊಸ ಪಟ್ಟಿ ಸನ್ನಡತೆ ಆಧರಿಸಿ ಬಿಡುಗಡೆ ಪ್ರಕ್ರಿಯೆ ನಡೆಯುತ್ತದೆ. ಹು-ಧಾ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 2018ರಲ್ಲಿ 13, 2019ರಲ್ಲಿ 20, 2020ರಲ್ಲಿ 11, 2021ರಲ್ಲಿ 17, 2022ರಲ್ಲಿ 9 ಹಾಗೂ 2023ರಲ್ಲಿ 480 ರೌಡಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಎಲ್ಲ ವರ್ಷಗಳಿಗಿಂತ 2023ರಲ್ಲಿಯೇ ಅತಿ ಹೆಚ್ಚು ರೌಡಿಗಳನ್ನು ಪಟ್ಟಿಯಿಂದ ವಿಮುಕ್ತಗೊಳಿಸಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದಿಂದ ಕೊನೆಗೂ ಚಾಲನೆ – ಆ್ಯಪ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಬರುತ್ತಿದ್ದಂತೆ ಉಗ್ರ ಚಟುವಟಿಕೆಗಳು ಗರಿಗೆದರಿವೆ: ಮುತಾಲಿಕ್

    ಕಾಂಗ್ರೆಸ್ ಬರುತ್ತಿದ್ದಂತೆ ಉಗ್ರ ಚಟುವಟಿಕೆಗಳು ಗರಿಗೆದರಿವೆ: ಮುತಾಲಿಕ್

    ಧಾರವಾಡ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳು ಗರಿಗೆದರಿವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದ್ದಾರೆ.

    ಧಾರವಾಡದಲ್ಲಿ (Dharwad) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ (Bengaluru) ಐವರು ಶಂಕಿತ ಉಗ್ರರ (Suspected Terrorist) ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸೆರೆ ಸಿಕ್ಕ ಶಂಕಿತ ಉಗ್ರರ ಬಳಿ ಪಿಸ್ತೂಲ್, ಸಜೀವ ಗುಂಡು, ಸ್ಯಾಟ್ಲೈಟ್ ಫೋನ್ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಕೆಟ್ಟ ಹುಳಗಳು, ಹಾವು ಹಾಗೂ ಚೇಳುಗಳು ಹೊರ ಬರುತ್ತಿವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: INDIA ಒಕ್ಕೂಟದ ಸಭೆಯೇ ಉಗ್ರರ ಟಾರ್ಗೆಟ್

    ಇವರನ್ನು ಕಾಂಗ್ರೆಸ್ ಸರ್ಕಾರ ಪೋಷಿಸುತ್ತಿದೆ. ಇದೇ ರೀತಿ ಉಗ್ರರನ್ನು ಪೋಷಣೆ ಮಾಡಿ ದೇಶದ ಲಕ್ಷಾಂತರ ಜನರನ್ನು ಕಾಂಗ್ರೆಸ್ ಕೊಂದು ಹಾಕಿದೆ. ಇವರ ಅಧಿಕಾರದಿಂದ ಈ ರೀತಿಯ ಪ್ರಕರಣಗಳು ಇನ್ನೂ ಹೆಚ್ಚುತ್ತವೆ. ಬಂಧಿತರು ಲಷ್ಕರ್ ಎ ತೊಯ್ಬಾ ಸಂಘಟನೆಯ ಸಂಪರ್ಕದಲ್ಲಿರುವಂತವರು. ಅಷ್ಟೇ ಅಲ್ಲ ಬಿಜೆಪಿ ಸರ್ಕಾರ ಇದ್ದಾಗಲೂ ಕೂಡ ಹರ್ಷನ ಕೊಲೆಗಡುಕರು ಜೈಲಿನಲ್ಲಿ ತಮ್ಮ ಕುಟುಂಬದವರ ಜೊತೆ ಮಾತನಾಡುತ್ತಿದ್ದರು ಎಂದು ಆಕ್ರೋಶ ಹೊರ ಹಾಕಿದ್ದಾರೆ.

    ಜೈಲಿನಲ್ಲಿದ್ದ ಕೊಲೆಗಡುಕರ ಸಂಪರ್ಕ ಬೆಳೆಸಿ ಅವರ ಮೂಲಕ ಕೃತ್ಯ ಎಸಗುವ ಕೆಲಸವನ್ನು ಉಗ್ರರು ಮಾಡುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಜೈಲಿನಲ್ಲಿ ಪಾಕಿಸ್ತಾನಿಗಳು, ಅಫ್ಘಾನಿಸ್ತಾನಿ ಉಗ್ರರು ಇದ್ದಾರೆ. ಅಲ್ಲದೇ ಭೂಗತ ಮುಸ್ಲಿಂ ವ್ಯಕ್ತಿಗಳಿದ್ದಾರೆ. ಇವರೆಲ್ಲರನ್ನೂ ವ್ಯವಸ್ಥಿತವಾಗಿ ಬಳಸಿಕೊಳ್ಳುವ ಕೆಲಸ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

    ಸರ್ಕಾರದ ನಿರ್ಲಕ್ಷದಿಂದ ಈ ರೀತಿಯ ಕೃತ್ಯಗಳಾಗುತ್ತಿವೆ. ಕೇವಲ ಕಾಂಗ್ರೆಸ್ ಅಷ್ಟೇ ಅಲ್ಲ. ಬಿಜೆಪಿ ಕೂಡ ಇದಕ್ಕೆ ಕಾರಣ. ತೀರ್ಥಹಳ್ಳಿ ಕ್ಷೇತ್ರದ ಹಿಂದಿನ ದಾಖಲೆಗಳನ್ನು ತೆಗೆದರೆ ಗೊತ್ತಾಗುತ್ತದೆ. ಮಲೆನಾಡಿನಲ್ಲಿ ಇವರು ಬಹಳ ದೊಡ್ಡ ಪ್ರಮಾಣದಲ್ಲಿ ಕೃತ್ಯಕ್ಕೆ ಯೋಜನೆ ಮಾಡುತ್ತಿದ್ದಾರೆ. ಸುಲ್ತಾನ್ ಪಾಳ್ಯ ಒಂದೇ ಅಲ್ಲ ಚಾಮರಾಜಪೇಟೆಯ ಕ್ಷೇತ್ರದಲ್ಲಿಯೂ ಉಗ್ರರು ಇದ್ದಾರೆ.

    ಅಫ್ಘಾನಿಸ್ತಾನಿಗಳು, ಬಾಂಗ್ಲಾ ದೇಶಿಗಳು ಕೋವಿಡ್ ಸಂದರ್ಭದಲ್ಲಿ ವೈದ್ಯರನ್ನು ಸರ್ವೆ ಮಾಡಲು ಒಳಗಡೆ ಬಿಡಲಿಲ್ಲ. ಇದಕ್ಕೆ ಇದೇ ಮೂಲ ಕಾರಣವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ, ಹುಬ್ಬಳ್ಳಿ ಗಲಭೆ ಹಾಗೂ ಮೈಸೂರು ಘಟನೆ ಇವೆಲ್ಲ ಕೂಡ ಉಗ್ರ ಕೃತ್ಯಗಳಾಗಿವೆ. ಈ ರಾಜಕಾರಣಿಗಳು ಅಧಿಕಾರ ದಾಹದಿಂದ ಜನರನ್ನು ಬಲಿ ತೆಗೆದುಕೊಳ್ಳುತ್ತಿದ್ದಾರೆ. ಮಹಿಳೆಯರನ್ನೂ ಬಂಧಿಸಿ ಸಾಕಷ್ಟು ರೀತಿಯ ವಿಚಾರಣೆ ನಡೆಸಬೇಕು. ಇತ್ತೀಚೆಗೆ ಪಾಕಿಸ್ತಾನದಿಂದ ಒಬ್ಬಳು ದೆಹಲಿಗೆ ಬಂದಿದ್ದಳು ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

    ಬೆಂಗಳೂರಿನ ಪ್ರಕರಣವನ್ನು ನಿರ್ಲಕ್ಷ ಮಾಡಬಾರದು. ಸಿಸಿಬಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಗೋಹತ್ಯೆ ವ್ಯಾಪಕವಾಗಿ ನಡೆಯುತ್ತಿದೆ. ಸರ್ಕಾರ ಇಂತವುಗಳನ್ನು ಗಂಭೀರವಾಗಿ ನೋಡದಿದ್ದರೆ ಜನರೇ ಎಚ್ಚೆತ್ತು ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬೊಮ್ಮಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]