Tag: ಧಾರವಾಡ

  • ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

    ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

    ಧಾರವಾಡ: ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು (Future) ಮಣ್ಣಿನ ಬೊಂಬೆ (Puppet) ತೋರಿಸಿಕೊಟ್ಟಿದೆ.

    ಧಾರವಾಡ (Dharwad) ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಹನುಮನಕೊಪ್ಪ ಗ್ರಾಮಸ್ಥರು ಪ್ರತಿವರ್ಷ ಯುಗಾದಿಯಂದು (Ugadi) ಒಂದು ಸಂಪ್ರದಾಯ ನಡೆಸಿಕೊಂಡು ಬಂದಿದ್ದಾರೆ. ಅಮವಾಸ್ಯೆಯಂದು ತಮ್ಮ ಗ್ರಾಮದ ಹಳ್ಳದ ದಂಡೆಯ ಮೇಲೆ ಒಂದು ಸಮತಟ್ಟಾದ ಕಲಾಕೃತಿ ಮಾಡಿ ಅದರ ನಾಲ್ಕೂ ದಿಕ್ಕಿಗೆ ರಾಜಕಾರಣದ ಬೊಂಬೆಗಳನ್ನು ಮಾಡಿಡುತ್ತಾರೆ. ಒಳಗಡೆ ರೈತರು, ಸೈನಿಕರು, ಕಾಳುಗಳನ್ನು ಇಡುತ್ತಾರೆ.

    ಅಮವಾಸ್ಯೆ ದಿನ ಈ ಆಕೃತಿ ಮಾಡಿಟ್ಟು, ಮಾರನೆ ದಿನ ಅದನ್ನು ನೋಡಲು ಹೋಗುತ್ತಾರೆ. ಈ ಆಕೃತಿಯ ಯಾವ್ಯಾವ ಭಾಗಕ್ಕೆ ಪೆಟ್ಟಾಗಿದೆ ಎಂಬುದನ್ನು ನೋಡಿ ಅದರ ಮೇಲೆ ಆ ಭಾಗದ ಭವಿಷ್ಯವನ್ನು ಇವರು ನಿರ್ಧರಿಸುತ್ತಾರೆ. ಮಳೆ ಹೇಗಿದೆ ಹಾಗೂ ಯಾವ ಬೆಲೆ ಸಿಗುತ್ತದೆ ಎಂಬುದನ್ನೂ ಇವರು ನಿರ್ಧರಿಸುತ್ತಾರೆ.

    ಪ್ರಸಕ್ತ ವರ್ಷ ಕರ್ನಾಟಕ ದಿಕ್ಕಿನ ರಾಜಕೀಯ ಬೊಂಬೆಯ ಬಲಗಾಲಿಗೆ ಪೆಟ್ಟಾಗಿದ್ದು, ನಮ್ಮ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬಹುದು ಎಂದು ಊಹಿಸಲಾಗಿದೆ. ಸದ್ಯ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಈ ಬಾರಿ ನಾಯಕತ್ವ ಬದಲಾಗಬಹುದು ಎಂದು ಬೊಂಬೆ ಭವಿಷ್ಯ ನುಡಿದಿದೆ.

    ಯಡಿಯೂರಪ್ಪನವರು ಸಿಎಂ ಆಗಿದ್ದ ಸಂದರ್ಭದಲ್ಲಿ ನಮ್ಮ ರಾಜ್ಯದ ನಾಯಕತ್ವ ಬದಲಾಗಬಹುದು ಎಂಬುದನ್ನು ಈ ಬೊಂಬೆ ಹಿಂದೆ ಭವಿಷ್ಯ ನುಡಿದಿತ್ತು. ಆ ಪ್ರಕಾರ ಯಡಿಯೂರಪ್ಪನವರು ಕೆಳಗಿಳಿದ ಪ್ರಸಂಗ ಎಲ್ಲರಿಗೂ ಗೊತ್ತೇ ಇದೆ. ಇದನ್ನೂ ಓದಿ: ಮೀಮ್ಸ್ ರಚನಾಕಾರರಿಗೆ ತಿಂಗಳಿಗೆ ಒಂದು ಲಕ್ಷ ಸಂಬಳ – ಬೆಂಗ್ಳೂರು ಕಂಪನಿಯಿಂದ ಆಫರ್

    ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ಹನುಮನಕೊಪ್ಪ ಗ್ರಾಮಸ್ಥರು ಮಾಡಿದ್ದ ಈ ಆಚರಣೆಯಲ್ಲಿ ರಾಷ್ಟ್ರನಾಯಕರ ಬೊಂಬೆಯೊಂದು ಉರುಳಿ ಬಿದ್ದಿತ್ತು. ರಾಷ್ಟ್ರನಾಯಕರಿಗೆ ಆಪತ್ತು ಎದುರಾಗಬಹದು ಎಂಬುದನ್ನು ಆ ಮೂಲಕ ಬೊಂಬೆ ಹೇಳಿತ್ತು. ಅದರ ತರುವಾಯ ಇಂದಿರಾ ಗಾಂಧಿ ಹತ್ಯೆ ಕೂಡಾ ಆಯಿತು.

    ಸದ್ಯ ರಾಜ್ಯ ರಾಜಕಾರಣದ ಬೊಂಬೆಯ ಬಲಗಾಲಿಗೆ ಪೆಟ್ಟಾಗಿದ್ದು, ಇದು ನಾಯಕತ್ವ ಬದಲಾವಣೆಯ ಮುನ್ಸೂಚನೆಯನ್ನು ನೀಡಿದೆ. ಈ ಗ್ರಾಮಸ್ಥರು ಅನೇಕ ವರ್ಷಗಳಿಂದ ಈ ಆಚರಣೆ ಮಾಡುತ್ತ ಬಂದಿದ್ದು, ಅನೇಕ ಸಂಗತಿಗಳು ನಿಜ ಕೂಡಾ ಆಗಿವೆ. ಇದನ್ನೂ ಓದಿ: ಮಾರ್ಚ್ 26ಕ್ಕೆ ಜೆಡಿಎಸ್ 2ನೇ ಪಟ್ಟಿ ರಿಲೀಸ್: ಹೆಚ್‌ಡಿ ಕುಮಾರಸ್ವಾಮಿ

  • ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ – ಮಂಡ್ಯ, ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

    ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ – ಮಂಡ್ಯ, ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಇಂದು) ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯ (Mandya) ಮತ್ತು ಧಾರವಾಡದಲ್ಲಿ (Dharwad) ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

    ಮಧ್ಯಾಹ್ನ 11:10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಮಂಡ್ಯಗೆ ತೆರಳಿ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru-Mysuru Expressway) ಉದ್ಘಾಟನೆ ಮಾಡಲಿದ್ದಾರೆ. ಮಂಡ್ಯದ ಅಮರಾವತಿ ಹೋಟೆಲ್‌ ಬಳಿ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಮಧ್ಯಾಹ್ನ 11:40ಕ್ಕೆ ಹೆದ್ದಾರಿ ಲೋಕಾರ್ಪಣೆಗೊಳ್ಳಲಿದೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಕ್ಷಣಗಣನೆ; ಕನ್ನಡದಲ್ಲೇ ಟ್ವೀಟ್‌ ಮಾಡಿ ಮೋದಿ ಬಣ್ಣನೆ

    ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಬಳಿಕ ಮೋದಿ ಅವರು ಮಂಡ್ಯದಲ್ಲಿ 1.8 ಕಿಮೀ ರೋಡ್‌ ಶೋ ನಡೆಸಲಿದ್ದಾರೆ. ಮಧ್ಯಾಹ್ನ 12:15ರಿಂದ 1:15ರವರೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮದ್ದೂರಿನ ಗೆಜ್ಜಲಗೆರೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ 5,700 ಕೋಟಿ ವೆಚ್ಚದ ಮಂಡ್ಯ-ಕುಶಾಲನಗರ ಹೆದ್ದಾರಿಗೆ ಭೂಮಿ ಪೂಜೆ ಮಾಡಲಿದ್ದಾರೆ. ಜೊತೆಗೆ ಹಲವು ಕೇಂದ್ರ ಸರ್ಕಾರದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಪಿಇಎಸ್‌ ಎಂಜಿನಿಯರಿಂಗ್‌ ಕಾಲೇಜು ಹೆಲಿಪ್ಯಾಡ್‌ನಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಮಧ್ಯಾಹ್ನ 1:30ಕ್ಕೆ ಹುಬ್ಬಳಿಗೆ ತೆರಳಲಿದ್ದಾರೆ.

    ಮಧ್ಯಾಹ್ನ 2:45ಕ್ಕೆ ಮೋದಿ ಹುಬ್ಬಳ್ಳಿ ತಲುಪಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಧಾರವಾಡದ ಚಿಕ್ಕಮಲ್ಲಿಗ ವಾಡದಲ್ಲಿರುವ ‘ಐಐಟಿ ಧಾರವಾಡ’ದ ನೂತನ ಕ್ಯಾಂಪಸ್‌ಗೆ ಭೇಟಿ ನೀಡಿ, ಸಂಜೆ 4ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ‘ಐಐಟಿ ಧಾರವಾಡ’ದ ಕ್ಯಾಂಪಸ್, ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಅತಿ ಉದ್ದನೆಯ ಪ್ಲಾಟ್‌ಫಾರ್ಮ್ ಉದ್ಘಾಟಿಸಲಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಗೆ ಶಂಕುಸ್ಥಾಪನೆ ಹಾಗೂ ವಿವಿಧ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 5ಕ್ಕೆ ದೆಹಲಿಗೆ ವಾಪಸ್‌ ಆಗಲಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರ್ಪಡೆ

    ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಡ್ಯ ಹಾಗೂ ಧಾರವಾಡದಲ್ಲಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಭದ್ರತಾ ದೃಷ್ಟಿಯಿಂದ ಪೊಲೀಸ್‌ ಇಲಾಖೆ ಸಹ ಬಿಗಿ ಬಂದೋಬಸ್ತ್‌ ಕಲ್ಪಿಸಿದೆ.

  • ಧಾರವಾಡ ಐಐಟಿ ಆಗಲು ಕಾಂಗ್ರೆಸ್ ಕಾರಣ: ಮಾಜಿ ಸಚಿವ ವಿನಯ್ ಕುಲಕರ್ಣಿ

    ಧಾರವಾಡ ಐಐಟಿ ಆಗಲು ಕಾಂಗ್ರೆಸ್ ಕಾರಣ: ಮಾಜಿ ಸಚಿವ ವಿನಯ್ ಕುಲಕರ್ಣಿ

    ಧಾರವಾಡ: ಧಾರವಾಡದಲ್ಲಿ ಐಐಟಿ (IIT) ಆಗಲು ಕಾರಣವೇ ಕಾಂಗ್ರೆಸ್ (Congress) ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ವೀಡಿಯೋ ಮೂಲಕ ಹೇಳಿದ್ದಾರೆ.

    ಧಾರವಾಡದಲ್ಲಿ (Dharwad) ಐಐಟಿ ಉದ್ಘಾಟನೆ ಆಗುತ್ತಿರುವುದು ಖುಷಿ ತಂದಿದೆ. ಯಾಕೆಂದರೆ ಧಾರವಾಡ ವಿದ್ಯಾಕಾಶಿ ಎಂದೇ ಖ್ಯಾತಿಯಾಗಿದೆ. ಹಿಂದಿನಿಂದಲೂ ಧಾರವಾಡ ಎಂದರೆ ವಿದ್ಯಾರ್ಥಿಗಳ ಶಿಕ್ಷಣದ ಕೇಂದ್ರ. ಇದು ಉದ್ಘಾಟನೆ ಆಗುತ್ತಿರುವ ಹಿಂದೆ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರ (Siddaramaiah) ದೊಡ್ಡ ಪಾತ್ರವಿದೆ. ಕರ್ನಾಟಕದಲ್ಲಿ ಐಐಟಿ ಸ್ಥಾಪನೆ ವೇಳೆ ರಾಯಚೂರಿಗೆ (Raichur) ಹೋಗಬೇಕು ಎಂದು ಸರ್ಕಾರ ನಿರ್ಧಾರ ಮಾಡಿತ್ತು. ಆಗ ನಾವೆಲ್ಲಾ ಮುಖಂಡರು ಹೋಗಿ ಧಾರವಾಡಕ್ಕೆ ಐಐಟಿ ಬರಬೇಕೆಂದು ಸಿದ್ದರಾಮಯ್ಯನವರ ಬಳಿ ಮನವಿ ಮಾಡಿದಾಗ ಸಿದ್ದರಾಮಯ್ಯನವರು ಅದನ್ನು ಮೈಸೂರಿಗೆ (Mysuru) ಶಿಫ್ಟ್ ಮಾಡಿದರು. ಅದನ್ನು ಮೈಸೂರಿನಿಂದ ಧಾರವಾಡಕ್ಕೆ ಬರುವಂತೆ ಮಾಡಲು ನಾವು ಬಹಳ ದೊಡ್ಡ ಹೋರಾಟ ಮಾಡಬೇಕಾಯಿತು. ಈ ಹೋರಾಟದ ಪ್ರತಿಫಲ ಧಾರವಾಡದಲ್ಲಿ ಐಐಟಿ ಉದ್ಘಾಟನೆಗೊಳ್ಳಲಿದೆ. ಇದು ನಮಗೆಲ್ಲರಿಗೂ ಸಂತಸವನ್ನು ತಂದಿದೆ ಎಂದರು. ಇದನ್ನೂ ಓದಿ: ವಧುದಕ್ಷಿಣೆ ಕಡಿಮೆ ಆಯ್ತು ಅಂತಾ ಮದುವೆ ಬೇಡವೆಂದ ಯುವತಿ – ಪ್ರಕರಣ ದಾಖಲಿಸದ ಪೊಲೀಸರು

    ನಂತರ ಅದರ ಸ್ಥಾಪನೆಗಾಗಿ ಐದೂವರೆ ಎಕರೆ ಜಮೀನನ್ನು ಕೇಳಿದರು. ಇದಕ್ಕಾಗಿ ನಾವು ಅವತ್ತಿನ ಕೈಗಾರಿಕಾ ಸಚಿವರಾದ ಆರ್.ವಿ.ದೇಶಪಾಂಡೆ (R.V.Deshpande) ಬಳಿ ಹೋದೆವು. ಅವರ ಜೊತೆಗೆ ಸಿದ್ದರಾಮಯ್ಯನವರು ಕೂಡಾ ನಮ್ಮ ಜೊತೆ ಬೆಂಬಲವಾಗಿ ನಿಂತರು. ಐದೂವರೆ ಎಕರೆ ಜಮೀನನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ನಮಗೆ ನೀಡಿತು. ನಂತರದ ದಿನಗಳಲ್ಲಿ ಉನ್ನತ ಶಿಕ್ಷಣ ಸಚಿವರಾದ ಬಸವರಾಜ್ ರಾಯರೆಡ್ಡಿ (Basavaraj Rayareddy) ಅವರು ಕೂಡಾ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ಇದರಲ್ಲಿ ಹಲವಾರು ಬಿಜೆಪಿ (BJP) ನಾಯಕರು ಕೂಡಾ ಕೈಜೋಡಿಸಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಖ್ಯಾತ ನಟ ಸತೀಶ್ ಕೌಶಿಕ್ ಸಾವು: ತನಿಖೆ ಕೈಗೊಂಡ ಪೊಲೀಸ್

    ವಿನಯ್ ಕುಲಕರ್ಣಿ

    ಈ ಐಐಟಿ ಫೌಂಡೇಶನ್ ವೇಳೆ ಇದರಲ್ಲಿ ಶೇ.25ರಷ್ಟು ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದೆವು. ಅಷ್ಟೇ ಅಲ್ಲದೇ ಐದೂವರೆ ಎಕರೆ ಭೂಮಿ ನೀಡಿದ ರೈತರ ಮಕ್ಕಳಿಗೆ ಇದರಲ್ಲಿ ಉದ್ಯೋಗ ನೀಡಬೇಕಾಗಿ ಕೇಳಿದ್ದೆವು. ಇವೆರಡೂ ಕೂಡಾ ಯಶಸ್ವಿಯಾಗಲಿಲ್ಲ. ನಾಳೆ ನಡೆಯುವ ಉದ್ಘಾಟನೆ ವೇಳೆ ಇದನ್ನು ಘೋಷಿಸಿ ತಾವು ನೀಡಿದ ವಚನವನ್ನು ಉಳಿಸಿಕೊಳ್ಳಬೇಕು. ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಡಿ ದರ್ಜೆಯ ಶಾಶ್ವತ ಕೆಲಸವನ್ನು ಮಾಡಿಕೊಡಬೇಕು ಎಂದು ಎಲ್ಲಾ ಮುಖಂಡರಲ್ಲಿ ವಿನಂತಿ ಮಾಡಿಕೊಂಡರು. ಇದನ್ನೂ ಓದಿ: ಮಿಥುನ್ ರೈ ವಿವಾದ : ಬಕೆಟ್ ಅಲ್ಲ, ಟ್ಯಾಂಕ್ ಹಿಡೀತಿನಿ ಎಂದ ರಕ್ಷಿತ್ ಶೆಟ್ಟಿ

  • ಧಾರವಾಡ ಜಿಲ್ಲಾಡಳಿತದಿಂದ ಪ್ರಧಾನಿ ಮೋದಿಗೆ ತೊಟ್ಟಿಲು ಗಿಫ್ಟ್

    ಧಾರವಾಡ ಜಿಲ್ಲಾಡಳಿತದಿಂದ ಪ್ರಧಾನಿ ಮೋದಿಗೆ ತೊಟ್ಟಿಲು ಗಿಫ್ಟ್

    ಧಾರವಾಡ: ಪ್ರಧಾನಿ ಮೋದಿ (Narendra Modi) ಪ್ರತಿ ಬಾರಿ ರಾಜ್ಯಕ್ಕೆ ಬಂದಾಗ ಹೊಸದೊಂದು ಉಡುಗೊರೆ ತಯಾರಾಗಿರುತ್ತದೆ. ಈ ಬಾರಿ ಧಾರವಾಡಕ್ಕೆ ಐಐಟಿ (IIT) ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಮಕ್ಕಳನ್ನು ಆಡಿಸುವ ತೊಟ್ಟಿಲನ್ನು ಉಡುಗೊರೆಯಾಗಿ ನೀಡಲು ಧಾರವಾಡ (Dharwad) ಜಿಲ್ಲಾಡಳಿತ ಸಿದ್ಧವಾಗಿದೆ.

    ಜಿಲ್ಲೆಯ ಕಲಘಟಗಿ ತೊಟ್ಟಿಲು (Kalaghatgi cradle) ಎಂದರೆ ಬಹಳ ಫೇಮಸ್. ತೊಟ್ಟಿಲಿನ ಮೇಲೆ ಹಚ್ಚಿದ ಬಣ್ಣ ಕೂಡಾ ಅಳಿಸುವುದಿಲ್ಲ. ಸಾಗುವಾನಿ ಕಟ್ಟಿಗೆಯಿಂದ ತಯಾರಾಗಿರುವ ಈ ಚಿಕ್ಕ ತೊಟ್ಟಿಲಿನ ಮೇಲೆ ದಶಾವತಾರ (Ten Incarnations) ಚಿತ್ರ ಬಿಡಿಸಲಾಗಿದೆ. ಇದರೊಂದಿಗೆ ಸಿದ್ಧಾರೂಢರ (Siddharoodha) ಚಿಕ್ಕ ಮೂರ್ತಿಯನ್ನೂ ಸಹ ಕೊಡಲಾಗುತ್ತಿದೆ. ಇದನ್ನೂ ಓದಿ: ಕುಂಕುಮ ಎಂದರೆ ಬೆಚ್ಚಿ ಬೀಳುತ್ತಿದ್ದ ಸಿದ್ದರಾಮಯ್ಯ ಇಂದು ದೇವಸ್ಥಾನ ಬಿಟ್ಟು ಬದುಕುತ್ತಿಲ್ಲ: ಈಶ್ವರಪ್ಪ

    ತೊಟ್ಟಿಲು ತಯಾರಿಸಲು ಸುಮಾರು 15 ದಿನಗಳಾದರೂ ಬೇಕು. ಆದರೆ ಪ್ರಧಾನಿ ಮೋದಿಗೆ ಗಿಫ್ಟ್ ಕೊಡುತ್ತಿರುವ ಹಿನ್ನೆಲೆಯಲ್ಲಿ ಕಲಘಟಗಿಯ ಶ್ರೀಧನ ಸಾಹುಕಾರ ಎನ್ನುವ ಕಲಾವಿದ 8 ದಿನಗಳಲ್ಲಿ ಈ ಉಡುಗೊರೆ ತಯಾರಿಸಿದ್ದಾರೆ.

    ಏಲಕ್ಕಿ ಹಾರ ಹಾಗೂ ಪೇಟ ಹಾಕಿ ಪ್ರಧಾನಿಗೆ ಜಿಲ್ಲಾಡಳಿತ ಸನ್ಮಾನಿಸಿ ಉಡುಗೊರೆಯನ್ನು ನೀಡಿ ಗೌರವಿಸಲಿದೆ. ಇದನ್ನೂ ಓದಿ: ಯಾರಿಗೋ ಹುಟ್ಟಿದ ಮಗುವನ್ನು ಜೆಡಿಎಸ್-ಕಾಂಗ್ರೆಸ್‍ನವರು ತಮ್ಮದೆನ್ನುತ್ತಾರೆ: ಈಶ್ವರಪ್ಪ ವಾಗ್ದಾಳಿ

  • ಮೋದಿ ಭದ್ರತೆಗೆ 2,000 ಪೊಲೀಸರ ನಿಯೋಜನೆ – ಐವರು ಎಸ್‌ಪಿಗಳು ಸ್ಥಳದಲ್ಲೇ ಮೊಕ್ಕಾಂ

    ಮೋದಿ ಭದ್ರತೆಗೆ 2,000 ಪೊಲೀಸರ ನಿಯೋಜನೆ – ಐವರು ಎಸ್‌ಪಿಗಳು ಸ್ಥಳದಲ್ಲೇ ಮೊಕ್ಕಾಂ

    ಧಾರವಾಡ: ರಾಜ್ಯದ ಮೊದಲ ಐಐಟಿ ಕೇಂದ್ರ ಉದ್ಘಾಟನೆಗಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಧಾರವಾಡಕ್ಕೆ (Dharwad) ಆಗಮಿಸಲಿದ್ದು, ಅವರ ಭದ್ರತೆಗಾಗಿ ಪೊಲೀಸ್ (Police) ಸರ್ಪಗಾವಲು ಹೆಣೆಯಲಾಗಿದೆ.

    ಐವರು ಎಸ್‌ಪಿಗಳನ್ನೊಳಗೊಂಡು ಒಟ್ಟು 2 ಸಾವಿರ ಪೊಲೀಸರನ್ನು ಕರ್ತವ್ಯಕ್ಕಾಗಿ ನಿಯೋಜನೆ ಮಾಡಲಾಗಿದೆ. ಧಾರವಾಡ ಹೊರವಲಯದ ಚಿಕ್ಕಮಲ್ಲಿಗವಾಡ ಬಳಿ ಐಐಟಿ ನೂತನ ಕ್ಯಾಂಪಸ್ ನಿರ್ಮಾಣವಾಗಿದ್ದು, ನಾಳೆ ಇದನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ವೇಳೆ 5 ಎಸ್‌ಪಿ, 8 ಜನ ಅಡಿಷನಲ್ ಎಸ್‌ಪಿ, 28 ಡಿವೈಎಸ್‌ಪಿ, 63 ಸಿಪಿಐಗಳು, 125 ಪಿಎಸ್ಐಗಳು, 158 ಎಎಸ್‌ಐಗಳು, 1,484 ಕಾನ್ಸ್‌ಟೇಬಲ್‌ಗಳು, 10 ಡಿಆರ್ ತುಕಡಿಗಳು, 15 ಕೆಎಸ್‌ಆರ್‌ಪಿ ತುಕಡಿಗಳನ್ನು ಇಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬಿರುಬೇಸಿಗೆಯಲ್ಲೂ ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿದೆ ಶರಾವತಿ ಜಲಧಾರೆ

    ಮೋದಿ ಅವರ ಈ ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಆಸನದ ವ್ಯವಸ್ಥೆ ಮಾಡಲಾಗಿದೆ. ಐಐಟಿ ಕಟ್ಟಡದ ಮುಂಭಾಗದಲ್ಲೇ ಬೃಹತ್ ವೇದಿಕೆ ನಿರ್ಮಿಸಲಾಗಿದೆ. 4 ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, 200ಕ್ಕೂ ಹೆಚ್ಚು ಊಟದ ಕೌಂಟರ್‌ಗಳನ್ನು ತೆರೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಐಐಟಿ ಕ್ಯಾಂಪಸ್‌ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ಅದಕ್ಕಾಗಿ ಐಐಟಿ ಕ್ಯಾಂಪಸ್‌ ಒಳಗಡೆಯೇ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಯಾರಿಗೋ ಹುಟ್ಟಿದ ಮಗುವನ್ನು ಜೆಡಿಎಸ್-ಕಾಂಗ್ರೆಸ್‍ನವರು ತಮ್ಮದೆನ್ನುತ್ತಾರೆ: ಈಶ್ವರಪ್ಪ ವಾಗ್ದಾಳಿ

  • ವಯಸ್ಸಾದ ಶಾಸಕರಿಗೆ ಕೊಕ್ ಕೊಡುತ್ತಾ ಬಿಜೆಪಿ?: ಸುಳಿವು ಕೊಟ್ಟ ಶಾಸಕ ಬೆಲ್ಲದ್

    ವಯಸ್ಸಾದ ಶಾಸಕರಿಗೆ ಕೊಕ್ ಕೊಡುತ್ತಾ ಬಿಜೆಪಿ?: ಸುಳಿವು ಕೊಟ್ಟ ಶಾಸಕ ಬೆಲ್ಲದ್

    ಧಾರವಾಡ: ನಾಲ್ಕೈದು ಜನ ಶಾಸಕರಿಗೆ ಈ ಬಾರಿ ವಿಧಾನಸಭೆ ಚುನಾವಣೆಯ ಟಿಕೆಟ್ ತಪ್ಪಬಹುದು ಎಂಬ ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ನವರ ಹೇಳಿಕೆಗೆ ಶಾಸಕ ಅರವಿಂದ್ ಬೆಲ್ಲದ್ (Aravind Bellad) ಕೂಡ ಪುಷ್ಠಿ ನೀಡಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಹಳೆಯ ಹಾಗೂ ವಯಸ್ಸಾದ ಶಾಸಕರು ಕೂಡ ಇದ್ದಾರೆ. ವಯಸ್ಸಾದ ಕಾರಣ ಅವರು ಟಿಕೆಟ್ (Vidhanasabha Election Ticket) ಬೇಡ ಎನ್ನಬಹುದು ಅಥವಾ ಪಕ್ಷ ಅವರಿಗೆ ಟಿಕೆಟ್ ನೀಡದೇ ಇರಬಹುದು. ಹೀಗಾಗಿ ತಾವಾಗಿಯೇ ಅವರು ಟಿಕೆಟ್ ಬೇಡ ಎನ್ನಬಹುದು. ಅಂತವರು 121 ಕ್ಷೇತ್ರದಲ್ಲಿ ನಾಲ್ಕೈದು ಜನ ಇದ್ದೇ ಇರುತ್ತಾರೆ. ಅದನ್ನೇ ಯಡಿಯೂರಪ್ಪನವರು ಹೇಳಿರಬಹುದು. ಅದರಲ್ಲಿ ತಪ್ಪೇನಿದೆ? ಎಂದರು.

    ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಹಳಬರಿಗೆ ಟಿಕೆಟ್ ತಪ್ಪಬಹುದು ಎಂಬರ್ಥದಲ್ಲಿ ಯಡಿಯೂರಪ್ಪನವರು ಹೇಳಿದ್ದಾರೆ ಎಂದು ಬೆಲ್ಲದ್ ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹರಕೆಯ ಕುರಿ, ಕಾಂಗ್ರೆಸ್‍ಗೆ ದಮ್ಮಿದ್ರೆ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ: ಶ್ರೀರಾಮುಲು ಸವಾಲು

  • ಧಾರವಾಡದ IITಯಲ್ಲೂ ಕ್ರೆಡಿಟ್ ವಾರ್ – ಬಿಜೆಪಿ, ಕಾಂಗ್ರೆಸ್ ಕಿತ್ತಾಟ

    ಧಾರವಾಡದ IITಯಲ್ಲೂ ಕ್ರೆಡಿಟ್ ವಾರ್ – ಬಿಜೆಪಿ, ಕಾಂಗ್ರೆಸ್ ಕಿತ್ತಾಟ

    ಧಾರವಾಡ: ವಿದ್ಯಾಕಾಶಿ ಧಾರವಾಡ (Dharwad) ಹೊರವಲಯದ ಚಿಕ್ಕಮಲ್ಲಿಗವಾಡ ಗ್ರಾಮದ ಬಳಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಕ್ಯಾಂಪಸ್ ಇದೇ ಮಾರ್ಚ್ 12ಕ್ಕೆ ಉದ್ಘಾಟನೆ ಆಗಲಿದೆ. ಈ ಉದ್ಘಾಟನೆಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ಆಗಮಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ನಾಯಕರ ನಡುವೆ ಇದೀಗ ಕ್ರೆಡಿಟ್ ವಾರ್ (Credit War) ಆರಂಭವಾಗಿದೆ.

    ಕಾಂಗ್ರೆಸ್ ನಾಯಕರ ಪ್ರಕಾರ ಈ ಐಐಟಿಗೆ ಧಾರವಾಡದಲ್ಲಿ ಜಾಗ ಕೊಟ್ಟಿದ್ದು ಸಿದ್ದರಾಮಯ್ಯ ಸರ್ಕಾರ. ಬಿಜೆಪಿಯ ಜಗದೀಶ್ ಶೆಟ್ಟರ್ ಸಿಎಂ ಇದ್ದಾಗ ಇದೇ ಐಐಟಿ ರಾಯಚೂರಿಗೆ ಕೊಡಬೇಕು ಎಂದು ಬರೆದಿದ್ದರು. ಆದರೆ ಸಿದ್ದರಾಮಯ್ಯ ಸಿಎಂ ಆದ ಮೇಲೆ ಅದನ್ನು ಧಾರವಾಡಕ್ಕೆ ತಂದಿದ್ದಷ್ಟೇ ಅಲ್ಲಾ, ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಇದನ್ನು ಮಾಡಲು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಹಾಗೂ ಆಗಿನ ಕೈಗಾರಿಕಾ ಸಚಿವ ಆರ್‌ವಿ ದೇಶಪಾಂಡೆ ಎಂದು ವಾದಿಸಿದ್ದಾರೆ.

    ಇದೇ ಸಮಯದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿನಯ್ ಕುಲಕರ್ಣಿ ಹಾಗೂ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಕೂಡಾ ಕಾರಣ ಎಂದು ಕಾಂಗ್ರೆಸ್ ನಾಯಕ ದೀಪಕ್ ಚಿಂಚೋರೆ ಹೇಳಿದ್ದಾರೆ. ಅಲ್ಲದೇ ಈ ಕ್ರೆಡಿಟ್ ಪಡೆಯಲು ಸ್ಥಳೀಯ ಬಿಜೆಪಿ ಶಾಸಕರು ಹಾಗೂ ಸಂಸದರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

    ಇದಕ್ಕೆ ಬಿಜೆಪಿ ಉತ್ತರ ನೀಡಿದ್ದು, ಐಐಟಿ ಧಾರವಾಡಕ್ಕೆ ತಪ್ಪಿಸಲು ಇದೇ ಸಿದ್ದರಾಮಯ್ಯ ಸಿಎಂ ಇದ್ದಾಗ ಪ್ರಯತ್ನ ಮಾಡಿದ್ದರು. ಮೋದಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಐಐಟಿ ಕೊಟ್ಟಾಗ 3 ಜಿಲ್ಲೆಗಳನ್ನು ಆಯ್ಕೆ ಮಾಡಿದ್ದರು. ಅದರಲ್ಲಿ ಮೈಸೂರು, ಧಾರವಾಡ ಹಾಗೂ ರಾಯಚೂರು ಎಂದಿತ್ತು. ಕೇಂದ್ರದ ಐಐಟಿ ತಂಡ ಬಂದಾಗ ಮೈಸೂರಿನಲ್ಲಿ 2 ದಿನ ಆ ತಂಡಕ್ಕೆ ಇಟ್ಟುಕೊಂಡಿದ್ದ ಸಿದ್ದರಾಮಯ್ಯ ಸರ್ಕಾರ ಹೇಗಾದ್ರೂ ಮಾಡಿ ಧಾರವಾಡಕ್ಕೆ ಐಐಟಿ ತಪ್ಪಿಸಲು ನೋಡಿತ್ತು ಎಂದು ಧಾರವಾಡ ಶಾಸಕ ಅರವಿಂದ್ ಬೆಲ್ಲದ ಆರೋಪ ಮಾಡಿದ್ದಾರೆ.

    ನಾವು ಕೇಂದ್ರದ ತಂಡಕ್ಕೆ ಇಲ್ಲಿಯ ಸೂಕ್ತ ಜಾಗ ಹಾಗೂ ಇಲ್ಲಿಯ ಅನುಕೂಲತೆ ತಿಳಿಸಿದಾಗ ಇಲ್ಲಿಗೆ ಮೋದಿ ಸರ್ಕಾರ ಐಐಟಿ ಕೊಟ್ಟಿದ್ದು, ಇದರ ಕ್ರೆಡಿಟ್ ಏನಿದ್ರು ಬಿಜೆಪಿಗೆ ಸಲ್ಲಬೇಕು. ಅಲ್ಲದೇ ಇದಕ್ಕಾಗಿ ನಾವು ಹೋರಾಟ ಮಾಡಿದ್ದೇವೆ, ನಮಗೆ ಇದರ ಕ್ರೆಡಿಟ್ ಸಿಗಬೇಕು ಎಂದು ಬೆಲ್ಲದ ಹೇಳಿದ್ದಾರೆ. ಇದನ್ನೂ ಓದಿ: ನನಗೆ ರಾಜಕೀಯ ಅನಿವಾರ್ಯ ಅಲ್ಲ ಆಕಸ್ಮಿಕ: ಸುಮಲತಾ

  • ಧಾರವಾಡದಲ್ಲಿ ನಡುಬೀದಿಯಲ್ಲಿಯೇ ಹೊಡೆದಾಡಿಕೊಂಡ ಯುವತಿಯರು!

    ಧಾರವಾಡದಲ್ಲಿ ನಡುಬೀದಿಯಲ್ಲಿಯೇ ಹೊಡೆದಾಡಿಕೊಂಡ ಯುವತಿಯರು!

    ಧಾರವಾಡ: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day). ಆದರೆ ಇಂದೇ ಯುವತಿಯರು ಬೀದಿ ಬದಿಯಲ್ಲಿ ಹೊಡೆದಾಡಿಕೊಂಡ ಪ್ರಸಂಗವೊಂದು ನಡೆದಿದೆ.

    ಹೌದು. ಧಾರವಾಡ (Dharwad) ದ ಓಲ್ಡ್ ಡಿಎಸ್ಪಿ ಸರ್ಕಲ್ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಜೊತೆಯಾಗಿ ಬಂದಿದ್ದ ಯುವತಿಯರು, ಆರಂಭದಲ್ಲಿ ಕಾರಿನೊಳಗೆ ಕಾದಾಟ ನಡೆಸಿದ್ದಾರೆ. ಬಳಿಕ ಕಾರಿನಿಂದ ಇಳಿದು ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ- 2018ರ ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಯಾರು?, ಸೋತವರೆಷ್ಟು?

    ಯುವತಿಯರು ಜುಟ್ಟು ಜುಟ್ಟು ಹಿಡಿದು ಹೊಡೆದಾಡಿಕೊಂಡ ವೀಡಿಯೋವನ್ನು ಅಲ್ಲೇ ಇದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

  • 5ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ನಗ್ನವಾಗಿಸಿದ್ದನ್ನು ನೋಡಿ ಕಾಮುಕನನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

    5ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ನಗ್ನವಾಗಿಸಿದ್ದನ್ನು ನೋಡಿ ಕಾಮುಕನನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

    ಧಾರವಾಡ: 5 ವರ್ಷದ ಬಾಲಕಿ (Girl) ಮೇಲೆ ನೀಚ ಕಾಮುಕನೊಬ್ಬ ಅತ್ಯಾಚಾರ (Rape) ಮಾಡಲು ಯತ್ನಿಸಿದ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.

    ಮೊಹ್ಮದ್ ಡಂಬಳ (45) ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ. ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕೆಯನ್ನು ಮೊಹ್ಮದ್ ಎಳೆದುಕೊಂಡು ಹೋಗಿ ಧಾರವಾಡದ ಜನ್ನತನಗರದ ಸ್ಮಶಾನ ಬಳಿಯ ಪಾಳು ಬಿದ್ದ ಹಾಸ್ಟೆಲ್ ಒಂದರಲ್ಲಿ ಇರಿಸಿದ್ದ. ಇದನ್ನೂ ಓದಿ: ವಿಧಾನಸೌಧದ ಒಳಗೆ ಎಣ್ಣೆ ಬಾಟ್ಲಿ ತಂದ ಪೊಲೀಸ್ ಪೇದೆ- ಕೈ ಜಾರಿ ಬಿದ್ದು ಪೀಸ್, ಪೀಸ್

    ಬಾಲಕಿಯನ್ನು ಎಳೆದುಕೊಂಡು ಹೋಗುತ್ತಿದ್ದುದನ್ನು ಕಂಡ ಸ್ಥಳೀಯರು ಆತನನ್ನು ಹಿಂಬಾಲಿಸಿದ್ದರು. ಆಗ ಕಾಮುಕ ಬಾಲಕಿಯನ್ನು ನಗ್ನವಾಗಿಸಿದ್ದನ್ನು ಕಂಡು ಕೂಡಲೇ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಸದ್ಯ ವಿದ್ಯಾಗಿರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಕಾಮುಕನನ್ನು ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಿಯಕರನಿಂದ ನಟಿ ಮೇಲೆ ಮಾರಣಾಂತಿಕ ಹಲ್ಲೆ: ಫೋಟೋ ಶೇರ್ ಮಾಡಿದ ಅನಿಕಾ

  • ಬರ್ಮುಡಾ ಧರಿಸಿ ರೇಣುಕಾಚಾರ್ಯ ಜಯಂತಿ ಆಚರಿಸಿದ ಸಿಬ್ಬಂದಿ – ಸ್ವಾಮೀಜಿ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆ

    ಬರ್ಮುಡಾ ಧರಿಸಿ ರೇಣುಕಾಚಾರ್ಯ ಜಯಂತಿ ಆಚರಿಸಿದ ಸಿಬ್ಬಂದಿ – ಸ್ವಾಮೀಜಿ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆ

    ಹುಬ್ಬಳಿ: ಧಾರವಾಡ (Dharwad) ಜಿಲ್ಲೆಯ ಕಲಘಟಗಿ ತಾಲೂಕು ಆಡಳಿತದಿಂದ ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು (Renukacharya Jayanti) ಆಚರಣೆ ಮಾಡಲಾಗಿದೆ ಎಂದು ಆರೋಪಿಸಿ ವೀರಶೈವ ಜಂಗಮ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಪ್ಪಿನ ಅರಿವಾಗಿ ತಹಶೀಲ್ದಾರ್ (Tehsildar) ಬಹಿರಂಗವಾಗಿ ಪ್ರತಿಭಟನಾ ನಿರತ ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾರೆ.

    ಕಲಘಟಗಿ ತಾಲೂಕು ಆಡಳಿತದಿಂದ ಯಾವುದೇ ಪೂರ್ವಭಾವಿ ಸಭೆ ಕರೆಯದೇ ಹಾಗೂ ಕಚೇರಿ ಸಿಬ್ಬಂದಿ ಬರ್ಮುಡಾ (Shorts) ಧರಿಸಿ ಕಚೇರಿಯಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದರು. ಈ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದನ್ನೂ ಓದಿ: ಮಾಡಾಳ್‌ ವಿರೂಪಾಕ್ಷಪ್ಪ ಮಿಸ್ಸಿಂಗ್‌.. ಕಂಡಲ್ಲಿ 100 ನಂಬರ್‌ಗೆ ಕರೆ ಮಾಡಿ – ಪೋಸ್ಟರ್‌ ಅಂಟಿಸಿ ಕಾಂಗ್ರೆಸ್‌ ಅಭಿಯಾನ

    ಇದರಿಂದ ಆಕ್ರೋಶಗೊಂಡ ವೀರಶೈವ ಸಮಾಜದ ಮುಖಂಡರು, ಜಗದ್ಗುರುಗಳಿಗೆ ಅಪಮಾನ ಮಾಡಲಾಗಿದೆ ಎಂದು ಹನ್ನೆರಡು ಎತ್ತಿನ ಮಠದ ಪೀಠಾಧಿಪತಿ ರೇಣುಕಾಚಾರ್ಯರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದ್ದರು.

    ತಹಶೀಲ್ದಾರ್ ಯಲ್ಲಪ್ಪ ಗೋಣೆನ್ನನವರನ್ನು ಪ್ರತಿಭಟನಾನಿರತರು ತರಾಟೆಗೆ ತಗೆದುಕೊಂಡಿದ್ದರು. ಸಮಾಜದ ಆಕ್ರೋಶದಿಂದ ತಪ್ಪಿನ ಅರಿವಾಗಿ ತಹಶೀಲ್ದಾರ್ ಶ್ರೀಗಳ ಕಾಲಿಗೆ ಬಿದ್ದು, ಕ್ಷಮೆಯಾಚನೆ ಮಾಡಿದ್ದಾರೆ. ಮತ್ತೊಮ್ಮೆ ರೇಣುಕಾಚಾರ್ಯ ಜಯಂತಿಯನ್ನು ಅದ್ದೂರಿಯಾಗಿ ಮಾಡುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸೊಳ್ಳೆ ಔಷಧಿ ಸಿಂಪಡಿಸಿದವರಿಗೆ ಬಿಲ್ ಬಾಕಿ ಆರೋಪ – ಬಿಬಿಎಂಪಿ ವಿರುದ್ಧ ಪೊಲೀಸ್ ಠಾಣೆಗೆ ದೂರು