Tag: ಧಾರವಾಡ

  • ಜ. 12ರಂದು ಹುಬ್ಬಳ್ಳಿಗೆ ಮೋದಿ- ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ: ಬೊಮ್ಮಾಯಿ

    ಜ. 12ರಂದು ಹುಬ್ಬಳ್ಳಿಗೆ ಮೋದಿ- ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ: ಬೊಮ್ಮಾಯಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜ. 12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ (Hubballi) ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು‌, 7 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.

    ಜ. 19ರಂದು ಪ್ರಧಾನಿ ಮೋದಿಯವರು ನಾರಾಯಣಪುರಕ್ಕೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ಎಲ್‌ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೆಂಡ್ತಿ ಸಹಾಯದಿಂದ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

    ಹೆಂಡ್ತಿ ಸಹಾಯದಿಂದ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

    ಧಾರವಾಡ: ತನ್ನ ಹೆಂಡತಿ ಸಹಾಯದಿಂದಲೇ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನ ಬಾವಿ ಗ್ರಾಮದಲ್ಲಿ ನಡೆದಿದೆ.

    ಕಾಮುಕ ಮೈಲಾರಪ್ಪ ಚಿಕ್ಕುಂಬಿ ಅದೇ ಗ್ರಾಮದ ತನ್ನ ಪಕ್ಕದ ಮನೆಯ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕೃತ್ಯಕ್ಕೆ ಅವನ ಹೆಂಡತಿ ಲಕ್ಷ್ಮೀ ಕೂಡ ಸಹಾಯ ಮಾಡಿದ್ದಾಳೆ ಎಂದು ಆರೋಪಿಸಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Dharwad Rural Police) ಪೋಕ್ಸೊ ಕಾಯ್ದೆಯಡಿ (POCSO Act) ಕೇಸ್ ದಾಖಲಾಗಿದೆ. ಇದನ್ನೂ ಓದಿ: ಸಾಹಿತ್ಯ ಸಮ್ಮೇಳನ ವಿರೋಧಿಸಿ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ: ಪ್ರೊ.ಪುರುಷೋತ್ತಮ್‌ ಬಿಳಿಮಲೆ

    ಮೈಲಾರಪ್ಪ ಚಿಕ್ಕುಂಬಿ ತನ್ನ ಪಕ್ಕದ ಮನೆಯಲ್ಲಿದ್ದ 17ರ ಬಾಲಕಿ ಮೇಲೆ ಲೈಂಗಿಕ ತೃಷೆ ತೀರಿಸಿಕೊಳ್ಳಲು ತನ್ನ ಮನೆಗೆ ಕರೆದುಕೊಂಡು ಬರುವಂತೆ ಪತ್ನಿ ಲಕ್ಷ್ಮೀಗೆ ಹೇಳಿದ್ದಾನೆ. ನಂತರ ಲಕ್ಷ್ಮೀ ಆ ಬಾಲಕಿಯನ್ನ ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಲು ಸಹಾಯ ಮಾಡಿದ್ದಾಳೆ. ಇದನ್ನೂ ಓದಿ: ಶೀಘ್ರವೇ ಸಂಪುಟ ವಿಸ್ತರಣೆ – ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿಎಂ ಸ್ಪಷ್ಟನೆ

    ಈ ವಿಷಯ ತಿಳಿದ ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಸದ್ಯ ಪತಿ-ಪತ್ನಿ ಇಬ್ಬರೂ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕುಮಾರಸ್ವಾಮಿ ಪಾರ್ಟಿ ಫಾರ್ ದಿ ಫ್ಯಾಮಿಲಿ, ಆಫ್ ದಿ ಫ್ಯಾಮಿಲಿ, ಬೈ ದಿ ಫ್ಯಾಮಿಲಿ ಥರ: ಪ್ರಹ್ಲಾದ್ ಜೋಶಿ

    ಕುಮಾರಸ್ವಾಮಿ ಪಾರ್ಟಿ ಫಾರ್ ದಿ ಫ್ಯಾಮಿಲಿ, ಆಫ್ ದಿ ಫ್ಯಾಮಿಲಿ, ಬೈ ದಿ ಫ್ಯಾಮಿಲಿ ಥರ: ಪ್ರಹ್ಲಾದ್ ಜೋಶಿ

    ಧಾರವಾಡ: ಕುಮಾರಸ್ವಾಮಿ (H.D Kumaraswamy) ಪಾರ್ಟಿ ಎಂದರೆ ಅದು ಫಾರ್ ದಿ ಫ್ಯಾಮಿಲಿ, ಆಫ್ ದಿ ಫ್ಯಾಮಿಲಿ ಮತ್ತು ಬೈ ದಿ ಫ್ಯಾಮಿಲಿ ಥರ. ಒಂದು ರಸ್ತೆಗೆ ಹೆಚ್‌.ಡಿ ದೇವೇಗೌಡರ (H.D DeveGowda) ಹೆಸರಿಡಬೇಕೆಂಬ ಮನವಿ ಬಂದಿದೆ ಈ ಬಗ್ಗೆ ಯೋಚಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ರಸ್ತೆಗೆ ದೇವೇಗೌಡರ ಹೆಸರಿಡಬೇಕು ಎಂದು ಯಾರೋ ಹೇಳಿದ್ದಾರೆ. ಅದಕ್ಕೆ ಕಾಮೆಂಟ್ ಕೂಡ ಬಂದಿದೆ ಸರ್ವಿಸ್ ರಸ್ತೆಗೆ ಕುಮಾರಸ್ವಾಮಿ, ರೇವಣ್ಣ ಹೆಸರಿಡಬೇಕು, ಸೇತುವೆಗೆ ಪ್ರಜ್ವಲ್‌ ರೇವಣ್ಣ ಹೆಸರು, ಅಂಡರ್ ಪಾಸ್‍ಗೆ ನಿಖಿಲ್ ಹೆಸರು, ಫ್ಲೈಓವರ್‌ಗೆ ಅನಿತಾ ಕುಮಾರಸ್ವಾಮಿ ಎಂದು ಹೆಸರಿಡಿ ಎಂದು ಕಾಮೆಂಟ್ ಬಂದಿವೆ. ಇವರ ಪಕ್ಷಕ್ಕೆ ಜನ ಯಾವ ರೀತಿ ಕಾಮೆಂಟ್ ಮಾಡುತ್ತಾರೆ ಎಂಬುದನ್ನು ತಿಳಿದುಕೊಳ್ಳಿ ಎಂದು ಜೋಶಿ ಲೇವಡಿ ಮಾಡಿದರು. ಇದನ್ನೂ ಓದಿ: ಪಕ್ಷ ತೊರೆದಿದ್ದ ಘಟಾನುಘಟಿ ಕಾಶ್ಮೀರ ನಾಯಕರು ಮತ್ತೆ ಕಾಂಗ್ರೆಸ್ ಸೇರ್ಪಡೆ

    ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಮೀಸಲಾತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ ಸಿಗುವಂತೆ ಸಿಎಂ ದೃಢ ಹೆಜ್ಜೆಯನ್ನಿಡುತ್ತಿದ್ದಾರೆ. ಈ ಸಂಬಂಧ ಸಿಎಂ ಕ್ಯಾಬಿನೆಟ್‍ನಲ್ಲಿ ನಿರ್ಧಾರ ಮಾಡಿದ್ದಾರೆ. ಮೀಸಲಾತಿಗೆ ಬೇಡಿಕೆ ಬಂದಿರುವ ಬಗ್ಗೆ ಎಲ್ಲ ವಿಸ್ತೃತ ವರದಿ ಮಾಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಅದಕ್ಕೆ ತಕ್ಕಂತೆ ಅವರು ಮುಂದುವರಿಯುತ್ತಾರೆ. ಸಿಎಂ ಮೇಲೆ ವಿಶ್ವಾಸ ಇಟ್ಟು ಮುಂದುವರಿಯಬೇಕು ಎಂದು ಜೋಶಿ ಮನವಿ ಮಾಡಿದರು. ಇದನ್ನೂ ಓದಿ: ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳೇ – ಸಿದ್ದುಗೆ ಸಿ.ಟಿ ರವಿ ಗುದ್ದು

    ಐಐಟಿ (IIT) ಉದ್ಘಾಟನೆ ಜನವರಿ ತಿಂಗಳಲ್ಲಿ ಆಗಬೇಕಿತ್ತು. ಆದರೆ, ಕಟ್ಟಡ ಕಾಮಗಾರಿ ಇನ್ನೂ ಬಾಕಿ ಇರುವುದರಿಂದ ಅದು ಆಗುವುದಿಲ್ಲ. ಇದನ್ನು ಪ್ರಧಾನಿಗಳ ಗಮನಕ್ಕೆ ತಂದಿದ್ದೇನೆ. ಐಐಟಿ ಉದ್ಘಾಟನೆಗೆ ಒಂದು ದಿನ ಬರುವ ಭರವಸೆಯನ್ನು ಮೋದಿ (Narendra Modi) ಅವರು ಕೊಟ್ಟಿದ್ದಾರೆ ಎಂದರು.

    ಸ್ಯಾಂಟ್ರೋ ರವಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸ್ಯಾಂಟ್ರೋ ರವಿ ಯಾರು, ಏನು ಎಂಬುದನ್ನು ಈಗಾಗಲೇ ಸಿಎಂ ಹೇಳಿದ್ದಾರೆ. ಅವರ ಜೊತೆ ಯಾರ ಸಂಪರ್ಕ ಇದೆ ಎಂಬುದನ್ನೂ ಅವರು ಹೇಳಿದ್ದಾರೆ. ಯಾವುದೇ ಆಧಾರ ಇಲ್ಲದೆ ಈ ರೀತಿ ಒಬ್ಬರಿಗೆ ನಾಯಿ ಮರಿ ಎನ್ನುವುದು, ಒಬ್ಬರು ಸ್ಯಾಂಟ್ರೋ ರವಿ ಎಂದು ಮಾತನಾಡುವುದು ಸರಿಯಲ್ಲ. ಈಗ ಚುನಾವಣೆ ಬಂದಿದೆ ಎಂಬ ಕಾರಣಕ್ಕೆ ಚಿಲ್ಲರೆ ಹಂತಕ್ಕೆ ಇಳಿಯಬಾರದು ಎಂದು ಅಭಿಪ್ರಾಯ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಯ್ಯಪ್ಪನ ದರ್ಶನ ಪಡೆದು ಹಿಂದಿರುಗುವಾಗ ಅಪಘಾತ – ಬಾಲಕ ದುರ್ಮರಣ

    ಅಯ್ಯಪ್ಪನ ದರ್ಶನ ಪಡೆದು ಹಿಂದಿರುಗುವಾಗ ಅಪಘಾತ – ಬಾಲಕ ದುರ್ಮರಣ

    ಧಾರವಾಡ: ಸ್ವಾಮಿ ಅಯ್ಯಪ್ಪನ (Ayappa) ದರ್ಶನಕ್ಕೆಂದು ಕೇರಳಕ್ಕೆ ತೆರಳಿದ್ದ ಧಾರವಾಡದ (Dharwada) ಹತ್ತರ ಹರೆಯದ ಬಾಲಕನೋರ್ವ (Boy) ರಸ್ತೆ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾನೆ.

    ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10) ಅಪಘಾತದಲ್ಲಿ ಮೃತಪಟ್ಟ ಬಾಲಕ. ಜ.1 ರಂದು ಸೈದಾಪುರದಿಂದ ಶಬರಿಮಲೆಗೆ ಟಾಟಾ ಏಸ್‌ ವಾಹನದಲ್ಲಿ ಅಯ್ಯಪ್ಪ ಮಾಲೆಧಾರಿಗಳು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಕೇರಳದ ಮನಪುರಂನ ಯಡಪ್ಪಾಲ ಎಂಬಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಇದನ್ನೂ ಓದಿ: ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

    ಸೂರಜ್ ಪಾಂಡೆ, ನಿಖಿಲ್ ಪಾಂಡೆ ಹಾಗೂ ಸುಶಾಂತ್ ಪಾಂಡೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಸುಮಿತ್ ಪಾಂಡೆ ಪಾರ್ಥಿವ ಶರೀರವನ್ನು ಧಾರವಾಡಕ್ಕೆ ತರುವ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನೂ ಓದಿ: ದೆಹಲಿಯಲ್ಲಿ ಇನ್ನೊಂದು ಆಘಾತ – ಸ್ನೇಹ ಕೊನೆಗೊಳಿಸಲು ಬಯಸಿದ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ

    Live Tv
    [brid partner=56869869 player=32851 video=960834 autoplay=true]

  • ಮಣ್ಣಿನಲ್ಲಿ ಮೂಡಿದ ಸರಳತೆಯ ಸಾಕಾರ ಮೂರ್ತಿ

    ಮಣ್ಣಿನಲ್ಲಿ ಮೂಡಿದ ಸರಳತೆಯ ಸಾಕಾರ ಮೂರ್ತಿ

    ಧಾರವಾಡ: ಸರಳತೆಯ ಸಾಕಾರ ಮೂರ್ತಿ, ನಡೆದಾಡುವ ದೇವರು, ನಿತ್ಯ ಸಂತ ಎಂದೆಲ್ಲ ಖ್ಯಾತರಾಗಿ ನಾಡಿನ ಜನತೆಗೆ ತಮ್ಮ ಪ್ರವಚನದ ಮೂಲಕವೇ ಹತ್ತಿರವಾಗಿದ್ದ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (Siddeshwar Swamiji) ಪರಮಾತ್ಮನಲ್ಲಿ ಲೀನರಾಗಿದ್ದಾರೆ. ಶ್ರೀಗಳಿಗೆ ಕಲಾವಿದ ಮಂಜುನಾಥ್ ಹಿರೇಮಠ ಅವರು ಕಲಾನಮನ ಸಲ್ಲಿಸಿದ್ದಾರೆ.

    ಸಿದ್ದೇಶ್ವರ ಶ್ರೀಗಳ ನೆನಪಿನಲ್ಲಿ ಧಾರವಾಡದ (Dharawada) ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ, 11 ಕೆಜಿ ಜೇಡಿ ಮಣ್ಣಿನಲ್ಲಿ ಎರಡು ಅಡಿ ಎತ್ತರದ ಸಿದ್ದೇಶ್ವರ ಶ್ರೀಗಳ ಕಲಾಕೃತಿಯನ್ನು (Clay) ರಚಿಸಿ ಶ್ರೀಗಳಿಗೆ ಕಲಾನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಭರದ ಸಿದ್ಧತೆ- ಸಂಜೆ 5 ಗಂಟೆ ವೇಳೆಗೆ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ

    ಸೋಮವಾರ ಸಂಜೆ ಶ್ರೀಗಳ ನಿಧನ ಸುದ್ದಿ ತಿಳಿದ ನಂತರ ಕಲಾವಿದ ಮಂಜುನಾಥ್ ಹಿರೇಮಠ ಮಣ್ಣಿನಲ್ಲಿ ಈ ಕಲಾಕೃತಿ ರಚಿಸುವ ಮೂಲಕ ಸರಳತೆಯ ಸಾಕಾರ ಮೂರ್ತಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಥೇಟ್ ಸಿದ್ದೇಶ್ವರ ಶ್ರೀಗಳಂತೆಯೇ ಈ ಮಣ್ಣಿನ ಮೂರ್ತಿಯನ್ನು ಕಲಾವಿದ ಮಂಜುನಾಥ್ ಸಿದ್ಧಪಡಿಸಿದ್ದು ಎಲ್ಲರ ಗಮನಸೆಳೆಯುತ್ತಿದೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!

    Live Tv
    [brid partner=56869869 player=32851 video=960834 autoplay=true]

  • ಜೊಲ್ಲೆ ಒಡೆತನದ ಬ್ಯಾಂಕ್‌ಗೆ ಕನ್ನ – 20 ಲಕ್ಷ ನಗದು, 40 ಲಕ್ಷ ಚಿನ್ನಾಭರಣ ಕಳವು

    ಜೊಲ್ಲೆ ಒಡೆತನದ ಬ್ಯಾಂಕ್‌ಗೆ ಕನ್ನ – 20 ಲಕ್ಷ ನಗದು, 40 ಲಕ್ಷ ಚಿನ್ನಾಭರಣ ಕಳವು

    ಧಾರವಾಡ: ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ಶ್ರೀ ಬೀರೇಶ್ವರ ಸಹಕಾರಿ ಬ್ಯಾಂಕ್‌ನಲ್ಲಿ (Shri Beereshwar Co-Op Credit Society) ಜನವರಿ 1ರ ತಡರಾತ್ರಿ ಕಳ್ಳತನವಾಗಿದೆ.

    ಧಾರವಾಡದ (Dharwad) ಕೋರ್ಟ್ ವೃತ್ತದ ಬಳಿ ಇರುವ ಬ್ಯಾಂಕ್‌ಗೆ ಖದೀಮರು ನಿನ್ನೆ ಕನ್ನ ಹಾಕಿದ್ದಾರೆ. ಬ್ಯಾಂಕ್‌ನಲ್ಲಿದ್ದ ಸುಮಾರು 20 ಲಕ್ಷ ನಗದು ಹಾಗೂ 40 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾರೆ. ಇದನ್ನೂ ಓದಿ: ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಮನೆ ಸಮೀಪ ಬಾಂಬ್‌ ಪತ್ತೆ – ಸ್ಥಳಕ್ಕೆ ದೌಡಾಯಿಸಿದ ಬಾಂಬ್‌ ನಿಷ್ಕ್ರಿಯ ದಳ 

    ಖದೀಮರು ತಮ್ಮ ಗುರುತು ಪತ್ತೆಯಾಗಬಾರದು ಎಂದು ಸಿಸಿಟಿವಿ (CCTV) ಹಾಗೂ ಬ್ಯಾಂಕ್‌ನಲ್ಲಿದ್ದ ದಾಖಲೆಗಳನ್ನೂ ಸುಟ್ಟು ಹಾಕಿದ್ದಾರೆ. ಸಿಸಿಟಿವಿಯ ಡಿವಿಆರ್ ಅನ್ನೂ ಹೊತ್ತೊಯ್ದಿದ್ದಾರೆ. ಇದನ್ನೂ ಓದಿ: ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ಧಾರವಾಡದ ಶಹರ ಠಾಣೆ ಪೊಲೀಸರು ಹಾಗೂ ಎಸಿಪಿ ವಿಜಯಕುಮಾರ ತಳವಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ. ಕಳ್ಳರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿಮ್ಮಪ್ಪನಿಂದಲೂ ಬಾಬರ್ ಮಸೀದಿ ಕಟ್ಟಲು ಸಾಧ್ಯವಿಲ್ಲ- ರಶೀದಿಗೆ ಎಚ್ಚರಿಕೆ ಕೊಟ್ಟ ಮುತಾಲಿಕ್

    ನಿಮ್ಮಪ್ಪನಿಂದಲೂ ಬಾಬರ್ ಮಸೀದಿ ಕಟ್ಟಲು ಸಾಧ್ಯವಿಲ್ಲ- ರಶೀದಿಗೆ ಎಚ್ಚರಿಕೆ ಕೊಟ್ಟ ಮುತಾಲಿಕ್

    ಧಾರವಾಡ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು (Ram Mandir) ಕೆಡವಿ ಮುಂದೊಂದು ದಿನ ಮತ್ತೆ ಬಾಬರ್ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ಕೊಟ್ಟಿರುವ ಇಮಾಮ್ ಅಸೋಸಿಯೇಶನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ (Maulana Sajid Rashidi) ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಗುಡುಗಿದ್ದಾರೆ.

    ಮುಂದೆ 50-100 ವರ್ಷ ಆದ ಮೇಲೆ ನಮ್ಮ ದೊರೆ ಬರುತ್ತಾನೆ. ಆಗ ರಾಮ ಮಂದಿರ ಕೆಡವಿ ಮತ್ತೆ ಬಾಬರ್ ಮಸೀದಿ ಕಟ್ಟುತ್ತೇವೆ ಎಂದು ರಶೀದಿ ಹೇಳಿಕೆ ನೀಡಿದ್ದಾರೆ. ಇನ್ನು 100 ವರ್ಷ ಅಲ್ಲ, ಸಾವಿರ ವರ್ಷವಾದರೂ ರಾಮ ಮಂದಿರ ಕೆಡವಿ ಬಾಬರ್ ಮಸೀದಿ ಕಟ್ಟಲು ನಿಮ್ಮಪ್ಪನಿಂದಲೂ ಸಾಧ್ಯವಿಲ್ಲ ಎಂದು ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಸೊಕ್ಕಿನ ಮಾತನ್ನು ರಶೀದಿ ಹೇಳಿದ್ದಾರೆ. ಇಂತವರು ಈ ದೇಶದ ಅನ್ನ ತಿಂದ ನಮಕ್ ಹರಾಮಿಗಳು. ಈ ದೇಶದ ಮುಸ್ಲಿಮರಿಗೆ ಬಾಬರ್ ಯಾವುದೇ ಸಂಬಂಧ ಇಲ್ಲದಿದ್ದರೂ ಇಸ್ಲಾಂ ಪ್ರತಿಷ್ಠಾಪನೆಯ ಮೂಲ ಉದ್ದೇಶ ಹೊಂದಿದ್ದಾರೆ. ಇದು ಮೌಲಾನಾ ರಶೀದಿ ಬಾಯಿಂದ ಹೊರ ಬಂದಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪಾದಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡೋಕ್ಕಾಗಲ್ಲ: ನಿಯಮ ಉಲ್ಲಂಘನೆ ಆರೋಪಕ್ಕೆ ರಾಗಾ ತಿರುಗೇಟು

    ಈ ದೇಶದ ಹಿಂದೂಗಳು ಜಾಗೃತಗೊಂಡಿದ್ದಾರೆ. ರಶೀದಿಯಂತಹ ಮಾನಸಿಕತೆ ಇರುವ ಮುಸ್ಲಿಮರಿಗೆ ಎಚ್ಚರಿಕೆ ಕೊಡುವ ಉದ್ದೇಶದಿಂದಲೇ 100 ವರ್ಷಗಳಿಂದ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಭಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ ಕೆಲಸ ಮಾಡುತ್ತಿವೆ. ನಿಮ್ಮ ಸೊಕ್ಕು ಅಡಗಿಸಲು ನಾವು ಸಿದ್ಧರಿದ್ದೇವೆ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯೇ ಇರುತ್ತದೆ ಹೊರತು, ಬಾಬರ್, ಔರಂಗಜೇಬನ ಮೂರ್ತಿಯಲ್ಲ. ಅಲ್ಲಿ ಯಾವುದೇ ಇಸ್ಲಾಂ ಧರ್ಮ ಗುರು ಇರಲು ಬಿಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: 73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    Live Tv
    [brid partner=56869869 player=32851 video=960834 autoplay=true]

  • ಕಳಸಾ ಬಂಡೂರಿ ಯೋಜನೆಗೆ ಗ್ರೀನ್ ಸಿಗ್ನಲ್ – ಡಿಪಿಆರ್ ಚುನಾವಣೆಗೆ ಮಾತ್ರ ಮೀಸಲಾಗಬಾರದು: ರೈತರ ಆಗ್ರಹ

    ಕಳಸಾ ಬಂಡೂರಿ ಯೋಜನೆಗೆ ಗ್ರೀನ್ ಸಿಗ್ನಲ್ – ಡಿಪಿಆರ್ ಚುನಾವಣೆಗೆ ಮಾತ್ರ ಮೀಸಲಾಗಬಾರದು: ರೈತರ ಆಗ್ರಹ

    ಧಾರವಾಡ: ಉತ್ತರ ಕರ್ನಾಟಕ ಭಾಗದ ಅದರಲ್ಲೂ ಧಾರವಾಡ ಜಿಲ್ಲೆಯ ನವಲಗುಂದ ಹಾಗೂ ಗದಗ ಜಿಲ್ಲೆಯ ನರಗುಂದ ರೈತರ (Farmers) ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ ಬಂಡೂರಿ (Kalasa-Banduri) ನಾಲಾ ಜೋಡಣೆ ಯೋಜನೆಗೆ ಕೇಂದ್ರ ಸರ್ಕಾರದ ಡಿಪಿಆರ್ (DPR) ಅನುಮೋದನೆ ನೀಡಿದೆ.

    ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದನ್ನು ಸ್ವತಃ ಕೇಂದ್ರ ಸಚಿವರೂ ಆಗಿರುವ ಧಾರವಾಡ ಜಿಲ್ಲೆಯ ಸಂಸದರಾದ ಪ್ರಹ್ಲಾದ್ ಜೋಶಿ (Pralhad Joshi) ಅವರೇ ಹೇಳಿಕೊಂಡಿದ್ದು, ಇದು ಈ ಭಾಗದ ರೈತರಲ್ಲಿ ಹರ್ಷವನ್ನುಂಟು ಮಾಡಿದೆ. ವೀಡಿಯೋ ಮೂಲಕ ಮಾಹಿತಿ ಹಂಚಿಕೊಂಡ ಪ್ರಹ್ಲಾದ್ ಜೋಶಿ, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (AmitShah) ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಬಸವರಾಜ ಬೊಮ್ಮಾಯಿ (Basavaraj Bommai), ಬಿ.ಎಸ್‌ ಯಡಿಯೂರಪ್ಪ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಧನ್ಯವಾದಗಳು ತಿಳಿಸುವುದಾಗಿ ಹೇಳಿದರು. ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಜಲ ಆಯೋಗ ಅನುಮತಿ: ಪ್ರಹ್ಲಾದ್ ಜೋಶಿ ಮಾಹಿತಿ

    ಈ ಯೋಜನೆ ಅನುಷ್ಠಾನಕ್ಕಾಗಿ ಆಗ್ರಹಿಸಿ ಸದಾ ಹೋರಾಟ ಮಾಡುತ್ತ ಬಂದ ರೈತ ಮುಖಂಡ ಶಂಕರ ಅಂಬಲಿ ಹರ್ಷ ವ್ಯಕ್ತಪಡಿಸಿದ್ದು, ಡಿಪಿಆರ್ ಕೇವಲ ಚುನಾವಣೆಗೆ ಮಾತ್ರ ಮೀಸಲಾಗಬಾರದು. ಕೂಡಲೇ ಕಾಮಗಾರಿ ಆರಂಭಿಸಿ ನಮ್ಮ ಪಾಲಿನ ನೀರನ್ನು ನಮಗೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಳೆ ಮಂಡ್ಯಕ್ಕೆ ಅಮಿತ್ ಶಾ ಗ್ರ್ಯಾಂಡ್ ಎಂಟ್ರಿ – ಅನ್ನದಾತರ ಕಿಚ್ಚಿಗೆ ಬೆದರಿ ಕಾರ್ಯಕ್ರಮ ದಿಢೀರ್ ಬದಲಾವಣೆ

    Live Tv
    [brid partner=56869869 player=32851 video=960834 autoplay=true]

  • ನನ್ನ ಜೊತೆ ಜನಾರ್ದನ ರೆಡ್ಡಿ ಮಾತನಾಡಿಲ್ಲ : ಜಗದೀಶ್‌ ಶೆಟ್ಟರ್

    ನನ್ನ ಜೊತೆ ಜನಾರ್ದನ ರೆಡ್ಡಿ ಮಾತನಾಡಿಲ್ಲ : ಜಗದೀಶ್‌ ಶೆಟ್ಟರ್

    ಧಾರವಾಡ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರ ಜೊತೆ ಮಾತನಾಡುತ್ತೇನೆ. ಈ ಬಗ್ಗೆ ನನ್ನ ಜೊತೆ ರೆಡ್ಡಿ ಮತ್ತು ಯಾರೂ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ತಿಳಿಸಿದರು.

    ಧಾರವಾಡದಲ್ಲಿ ಮಾತನಾಡಿರುವ ಅವರು, ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಾಯಕರ ಜೊತೆ ಮಾತನಾಡುತ್ತೇವೆ. ಕೆಜೆಪಿ ರೀತಿಯಲ್ಲಿ ಪರಿಣಾಮ ಬೀರಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ. ನಮ್ಮ ಜೊತೆ ರೆಡ್ಡಿ ಮತ್ತು ಯಾರೂ ಮಾತನಾಡಿಲ್ಲ. ಇತ್ತೀಚೆಗೆ ರೆಡ್ಡಿ ಅವರು ನನ್ನ ಜೊತೆ ವೈಯಕ್ತಿಕ ಸಂಪರ್ಕದಲ್ಲಿಲ್ಲ ಎಂದರು.

    ಇಂದು ಬೆಂಗಳೂರಿನ (Bengaluru) ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದಾರೆ. ಬಸವಣ್ಣ ಹಾದಿಯಲ್ಲಿ ನಡೆಯಲು ಸಂಕಲ್ಪ ಮಾಡಿದ್ದೇನೆ. ಜಾತಿ,‌ ಮತ, ಬೇಧ, ಭಾವ ಇಲ್ಲದೇ ಮೇಲು ಕೇಳು ಇಲ್ಲದ ಹಾಗೆ ಕೆಲಸ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇನೆ. ಬಸವಣ್ಣನವರ ಸ್ಮರಣೆ ಮಾಡುತ್ತಾ ಸಾರ್ವಜನಿಕ ಬದುಕಿಗೆ ಬರುತ್ತಿದ್ದೇನೆ. ಬಿಜೆಪಿ ‌ಜೊತೆ ನಾನು ಬಾಂಧವ್ಯವನ್ನು ಕಡಿದುಕೊಳ್ಳುತ್ತಿದ್ದೇನೆ. ಈ ಕಾರಣಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಮಾಣ ಮಾಡ್ತಿದ್ದೇನೆ ಎಂದು ತಿಳಿಸಿದ್ದರು.  ಇದನ್ನೂ ಓದಿ: ನಾನು ಕಷ್ಟದಲ್ಲಿ ಇದ್ದಾಗ ಬಿಎಸ್‌ವೈ, ಜಗದೀಶ್ ಶೆಟ್ಟರ್ ಬಿಟ್ಟು ಇನ್ಯಾರು ನನ್ನ ಮನೆಗೆ ಬಂದಿರಲಿಲ್ಲ: ಜನಾರ್ದನ ರೆಡ್ಡಿ

    ಇದೇ ವೇಳೆ ತಮ್ಮ ರಾಜಕೀಯ ಜೀವನ ಹಾಗೂ ಕಷ್ಟದ ದಿನಗಳನ್ನು ನೆನಸಿಕೊಂಡ ಅವರು, ಬಿ.ಎಸ್‌ ಯಡಿಯೂರಪ್ಪ ಹಾಗೂ ಜಗದೀಶ್‌ ಶೆಟ್ಟರ್‌ ಅವರನ್ನು ಪ್ರಶಂಸಿಸಿದ್ದರು. ಈ ಬಗ್ಗೆ ಮಾತನಾಡಿ, ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ಹಾಗೂ ಜಗದೀಶ್‌ ಶೆಟ್ಟರ್‌ (Jagadish Shettar) ಇಬ್ಬರು ನನ್ನ ಕಷ್ಟದ ದಿನಗಳಲ್ಲಿ ಬಂದು ನನಗೆ ಧೈರ್ಯ ತುಂಬಿದ್ದರು. ಅದಕ್ಕಾಗಿ ನಾನು ಅವರನ್ನು ನೆನಪು ಮಾಡಿಕೊಳ್ಳುತ್ತೇನೆ. ಆದರೆ ನನ್ನವರೇ ಅಂತ ನಾನು ಎಲ್ಲರನ್ನು ಮೆರೆಸಿ ಮೋಸ ಹೋದೆ. ಇದನ್ನ ನನ್ನ ಸ್ನೇಹಿತರು ಈಗಲೂ ಹೇಳ್ತಾರೆ. ನನ್ನ ಜೊತೆ ಕಷ್ಟದಲ್ಲಿ ಯಾರು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿದ ರೆಡ್ಡಿ

    Live Tv
    [brid partner=56869869 player=32851 video=960834 autoplay=true]

  • ಮತ್ತೊಮ್ಮೆ ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ

    ಮತ್ತೊಮ್ಮೆ ಪರಿಷತ್ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಅಭ್ಯರ್ಥಿ

    ಧಾರವಾಡ: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇದೇ 21 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ (BJP) ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ (Basavaraj Horatti) ಆಯ್ಕೆ ಬಹುತೇಕ ಖಚಿತವಾಗಿದೆ. ಹೊರಟ್ಟಿಯವರನ್ನು ಅಭ್ಯರ್ಥಿ ಎಂದು ಇಂದು ಸಂಜೆಯೇ ಅಂತಿಮವಾಗಿ ಬಿಜೆಪಿ ಘೋಷಿಸುವ ಸಾಧ್ಯತೆ ಇದೆ.

    ಚುನಾವಣೆಯಲ್ಲಿ (Election) ಹೊರಟ್ಟಿ ಅವರು ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೀಗಾಗಿ ಇಂದು ಸಂಜೆ ಅವರ ಹೆಸರನ್ನು ಅಂತಿಮ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಮತ್ತೆ ಮುನ್ನೆಲೆಗೆ ಬಂದ ‘ಹಿಂದೂ’ ವರ್ಡ್ ವಾರ್

    ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು, ಇಂದು ಬೆಳಿಗ್ಗೆ ರವಿಕುಮಾರ್ ಅವರು ನನಗೆ ದೂರವಾಣಿ ಕರೆ ಮಾಡಿ ನೀವು ಅಭ್ಯರ್ಥಿಗಳಾಗಿದ್ದೀರಿ, ಅಧಿಕೃತವಾಗಿ ಘೋಷಣೆ ಮಾಡುತ್ತೇನೆ ಅಂದಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹನಿಮೂನ್‌ನಿಂದ ಬರುವಾಗ ಟೆಕ್ಕಿ ದಂಪತಿಗೆ ಅಪಘಾತ – ಪತಿಯನ್ನು ಕಳೆದುಕೊಂಡ ನವವಿವಾಹಿತೆ

    v

    ಬೆಳಗಾವಿಯಲ್ಲಿ (Belagavi) ಅಧಿವೇಶನ ನಡೆಯುವಾಗ, ಅಧಿವೇಶನದಲ್ಲಿ ಧರಣಿ ಮಾಡೋದು ಬೇಡ ಎಂದು ನಾನು ಪ್ರತಿ ಬಾರಿಯೂ ಹೇಳುತ್ತಾ ಬಂದಿದ್ದೇನೆ. ನಾನು ಸಭಾಪತಿಯಾಗಿದ್ದಾಗ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದೇ ಎರಡು ದಿನ ಮೀಸಲಿಟ್ಟಿದ್ದೆ ಎಂದು ಹೇಳಿದ್ದಾರೆ.

    ಈ ಭಾಗದ ಸಮಸ್ಯೆಗಳಿಗೆ ಪ್ರತಿಫಲ ಸಿಗಬೇಕು. ನಮ್ಮದು ಸಮಗ್ರ ಕರ್ನಾಟಕ. ಈ ಬಗ್ಗೆ ಬೇರೆ ಮಾತೇ ಇಲ್ಲ. ಆದರೆ ಪ್ರಮುಖವಾಗಿ ಉತ್ತರ ಕರ್ನಾಟಕ (Uttar Karnataka) ಭಾಗದ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಸರ್ಕಾರ, ಸದಸ್ಯರು ಮುಂದಾಗಬೇಕು. ಬರುವ ಡಿ.19 ರಿಂದ 30ರ ವರೆಗೆ ನಡೆಯುವ ಸದನದಲ್ಲಿ ಈ ಭಾಗದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಮೀಸಲಾತಿ (Reservation) ವಿಚಾರಕ್ಕೆ ಹಲವರು ಹೋರಾಟ ಮಾಡುತ್ತಾರೆ. ಹೋರಾಟ ಮಾಡುವುದು ಅವರ ಹಕ್ಕು. ಆದರೆ ಹೋರಾಟವನ್ನು ಶಾಂತಿಯುತವಾಗಿ ಮಾಡಬೇಕು ಎಂದು ಹೊರಟ್ಟಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]