Tag: ಧಾರವಾಡ

  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಯುವಪೀಳಿಗೆ ಭವಿಷ್ಯ ಉಜ್ವಲ – ಗೆಹ್ಲೋಟ್

    ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಯುವಪೀಳಿಗೆ ಭವಿಷ್ಯ ಉಜ್ವಲ – ಗೆಹ್ಲೋಟ್

    ಧಾರವಾಡ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು (New National Education Policy) ಯುವ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತವಾಗಿಸುತ್ತದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅಭಿಪ್ರಾಯಪಟ್ಟರು.

    ಧಾರವಾಡದ (Dharwad) ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ(ಕರ್ನಾಟಕ)ದ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ನೀತಿಯ ಗುರಿಯು ಪ್ರತಿಯೊಬ್ಬರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು, ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ನೆಚ್ಚಿನ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುತ್ತದೆ. ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸಲು ಮತ್ತು ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿ ಮಾಡುವ ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಲು ಯುವಪೀಳಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಮಳೆ ಕಾರಣ ಪಂಚರತ್ನ ರಥಯಾತ್ರೆ 4 ದಿನ ಮುಂದೂಡಿಕೆ – ಹೆಚ್‌ಡಿಕೆ

    1918 ರಲ್ಲಿ ಮಹಾತ್ಮಾ ಗಾಂಧಿಯವರು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಗೆ ಅಡಿಪಾಯ ಹಾಕಿದರು. ಅವರು ಈ ಸಂಸ್ಥೆಯ ಅಧ್ಯಕ್ಷರಾಗಿ ಜೀವನದುದ್ದಕ್ಕೂ ಇದ್ದರು. 1964 ರಲ್ಲಿ, ಸಂಸ್ಥೆಯನ್ನು ಭಾರತ ಸರ್ಕಾರವು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳಲ್ಲಿ ಒಂದೆಂದು ಗುರುತಿಸಿತು. 1935 ರಲ್ಲಿ ಸ್ಥಾಪನೆಯಾದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ (ಕರ್ನಾಟಕ) ಧಾರವಾಡ, ಕರ್ನಾಟಕ ರಾಜ್ಯದ ಅನೇಕ ಸಂಸ್ಥೆಗಳ ಮೂಲಕ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಕೆಲಸ ಮಾಡುತ್ತಿದೆ ಎಂದು ಹೇಳಿದರು.

    ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ರಾಜ್ಯಪಾಲರು, ಸಮಾಜದಲ್ಲಿ ಶಾಂತಿ ಸಮಾನತೆ ಕಾಪಾಡಲು ಮುಂದಾಗಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಮಾಜಿ ಸಚಿವ ವಿಶ್ವನಾಥ್ ಕಾಂಗ್ರೆಸ್ ಸೇರದಂತೆ ಮನವೊಲಿಸಲು ನಾನು ಮುಂದಾಳತ್ವ ವಹಿಸಲ್ಲ: ಹೆಬ್ಬಾರ್

    ಸಲಹಾ ಸಮಿತಿಯ ಸದಸ್ಯರಾದ ಅರುಣ್ ಡಿ. ಜೋಶಿ, ಎಂ.ಆರ್. ಪಾಟೀಲ್, ವಿಶೇಷ ಕಾರ್ಯದರ್ಶಿ ಡಾ.ಎಸ್.ಬಿ. ಹಿಂಚಿಗೇರಿ, ಕಾರ್ಯದರ್ಶಿ ಎಸ್. ರಾಧಾಕೃಷ್ಣನ್, ಧಾರವಾಡದ ಗುತ್ತಲ ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಟಿ. ಹೊಂಬಳ, ಡಾ.ಬಿ.ಡಿ. ವೈಷ್ಣವಿ ಸತೀಶ್ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಆಡಳಿತದಲ್ಲಿ ಗುಜರಾತ್ ಮಾದರಿ, ಟಿಕೆಟ್ ಹಂಚಿಕೆಯಲ್ಲಿ ಪಕ್ಷ ನಿಷ್ಠೆ ಗೆಲುವಿಗೆ ಮಾನದಂಡವಾಗುತ್ತೆ: ಪ್ರಹ್ಲಾದ್‌ ಜೋಶಿ

    ಆಡಳಿತದಲ್ಲಿ ಗುಜರಾತ್ ಮಾದರಿ, ಟಿಕೆಟ್ ಹಂಚಿಕೆಯಲ್ಲಿ ಪಕ್ಷ ನಿಷ್ಠೆ ಗೆಲುವಿಗೆ ಮಾನದಂಡವಾಗುತ್ತೆ: ಪ್ರಹ್ಲಾದ್‌ ಜೋಶಿ

    ಧಾರವಾಡ: ಮುಂಬರುವ ಕರ್ನಾಟಕ ವಿಧಾನಸಭೆ (Karnataka Election) ಚುನಾವಣೆಗೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ (BJP) ಗುಜರಾತ್ ಮಾಡೆಲ್ (Gujarat Model) ಅನುಸರಿಸಲಿದೆ ಅಂತಾ ಈಗಲೇ ಲೆಕ್ಕಾಚಾರ ಹಾಕುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ‌

    ಧಾರವಾಡದಲ್ಲಿ (Dharwad) ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಪಕ್ಷ ನಿಷ್ಠೆ, ಗೆಲುವು ಹಾಗೂ ಪಕ್ಷದ ಸಿದ್ಧಾಂತಕ್ಕೆ ಬದ್ಧತೆಯೇ ಮುಖ್ಯ ಮಾನದಂಡವಾಗಲಿದೆ ಎಂದರು. ಇದನ್ನೂ ಓದಿ: ಜನವರಿಯಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ 4 ಬಾರಿ ಬರಲಿದ್ದಾರೆ: ಪ್ರಹ್ಲಾದ್ ಜೋಶಿ

    ಆಡಳಿತ ವಿಚಾರದಲ್ಲಿ ಗುಜರಾತ್ ಮಾಡೆಲ್ ಅನುಸರಿಸುವುದು ಉತ್ತಮ. ಕಳೆದ 8 ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಾನು ಕೆಲಸ ಮಾಡ್ತಿದ್ದೇನೆ. ಒಳ್ಳೆಯ ಸಂಗತಿಗಳು ಎಲ್ಲಿಯೇ ನಡೆದರೂ ಅದನ್ನ ತೆಗೆದುಕೊಳ್ಳಬೇಕು. ಕರ್ನಾಟಕದ ಆಡಳಿತದಲ್ಲೂ ಅಂತಹ ಮಾದರಿಯನ್ನ ಅನುಸರಿಸಲಾಗುವುದು ಎಂದು ಜೋಶಿ ಹೇಳಿದರು.

    ಜನವರಿ 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ತಯಾರಿ ಮಾಡುವಂತೆ ಜೋಶಿ ಸೂಚನೆ
    ಧಾರವಾಡದಲ್ಲಿ ನಿರ್ಮಾಣವಾಗುತ್ತಿರುವ ಐಐಟಿ ಕಟ್ಟಡ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವೀಕ್ಷಿಸಿದರು. ಜನವರಿ 1 ರೊಳಗೆ ನೂತನ ಕಟ್ಟಡ ಕಾಮಗಾರಿ ಮುಗಿಸುವಂತೆ ಪ್ರಹ್ಲಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ನಾನೂ ಗೂಂಡಾಗಿರಿ ಮಾಡ್ತಿದ್ದೆ, ಜೀನ್ಸ್ ಪ್ಯಾಂಟ್ ಹಾಕ್ಕೊಂಡ್ರೆ ಹುಡ್ಗೀರೆಲ್ಲಾ ನನ್ನೇ ನೋಡ್ತಿದ್ರು: ಶ್ರೀರಾಮುಲು

    Live Tv
    [brid partner=56869869 player=32851 video=960834 autoplay=true]

  • ಜನವರಿಯಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ 4 ಬಾರಿ ಬರಲಿದ್ದಾರೆ: ಪ್ರಹ್ಲಾದ್ ಜೋಶಿ

    ಜನವರಿಯಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ 4 ಬಾರಿ ಬರಲಿದ್ದಾರೆ: ಪ್ರಹ್ಲಾದ್ ಜೋಶಿ

    ಧಾರವಾಡ: ಮುಂದಿನ ವರ್ಷ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) 3-4 ಬಾರಿ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

    ಧಾರವಾಡ (Dharwad) ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಹಿಂದೆ ನಿರ್ಮಾಣವಾಗುತ್ತಿರುವ ಐಐಟಿ ಕ್ಯಾಂಪಸ್‌ಗೆ ಭೇಟಿ ನೀಡಿದ ಜೋಶಿ ಪರಿಶೀಲನೆ ನಡೆಸಿ, ಕಟ್ಟಡ ಕಾಮಗಾರಿ ಮುಕ್ತಾಯದ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆಗೆ ಬರಲಿದ್ದಾರೆ. ಜನವರಿ 1ನೇ ತಾರೀಖಿಗೆ ಉದ್ಘಾಟನೆ ಮಾಡಬೇಕು ಎಂಬ ಯೋಜನೆಯಿದೆ. ಕಟ್ಟಡ ತಯಾರಾದರೆ ಅದೇ ದಿನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾನೂ ಗೂಂಡಾಗಿರಿ ಮಾಡ್ತಿದ್ದೆ, ಜೀನ್ಸ್ ಪ್ಯಾಂಟ್ ಹಾಕ್ಕೊಂಡ್ರೆ ಹುಡ್ಗೀರೆಲ್ಲಾ ನನ್ನೇ ನೋಡ್ತಿದ್ರು: ಶ್ರೀರಾಮುಲು

    ಲೋಕೋಪಯೋಗಿ ಹಾಗೂ ಗುತ್ತಿಗೆದಾರರಿಗೆ ಜನವರಿ 1ನೇ ತಾರೀಖಿಗೆ ಕಟ್ಟಡ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ. ಕೋವಿಡ್ ಹಿನ್ನೆಲೆ ಕಟ್ಟಡ ಕಾಮಗಾರಿ ತಡವಾಗಿದೆ. ಡಿಸೆಂಬರ್‌ನಲ್ಲೇ ಉದ್ಘಾಟನೆ ಮಾಡಬೇಕು ಎಂದು ನಾನು ಪ್ರಧಾನಿ ಜೊತೆ ಮಾತನಾಡಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಪುಟ್ಟರಾಜು ಎಚ್ಚರಿಕೆಯ ಬೆನ್ನಲ್ಲೇ ಪ್ರತಾಪ್ ಸಿಂಹ ರಸ್ತೆ ವೀಕ್ಷಣೆ

    ಜನವರಿ ತಿಂಗಳಿನಲ್ಲಿ ಪ್ರಧಾನಿ ಮೋದಿ 3-4 ಬಾರಿ ರಾಜ್ಯಕ್ಕೆ ಬರಲಿದ್ದಾರೆ. ಅದೇ ವೇಳೆ ಈ ಕಾರ್ಯಕ್ರಮ ಇಡಲಾಗಿದೆ. ಮುಂದಿನ ವಾರ ನಾನು ಮತ್ತೆ ಐಐಟಿಗೆ ಭೇಟಿ ನೀಡಿ ತೀರ್ಮಾನ ಮಾಡುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಮತದಾರ ಪಟ್ಟಿಯಿಂದ ಪಾಲಿಕೆ ನಿವೃತ್ತ ಆಯುಕ್ತರ ಹೆಸರೇ ಮಾಯ – ಬದುಕಿದ್ರೂ ಸತ್ತಿದ್ದಾರೆಂದು ದಾಖಲು

    ಮತದಾರ ಪಟ್ಟಿಯಿಂದ ಪಾಲಿಕೆ ನಿವೃತ್ತ ಆಯುಕ್ತರ ಹೆಸರೇ ಮಾಯ – ಬದುಕಿದ್ರೂ ಸತ್ತಿದ್ದಾರೆಂದು ದಾಖಲು

    ಧಾರವಾಡ: ಮತದಾರ ಪಟ್ಟಿಯಲ್ಲಿ (Voter Id Scam) ಬಳ್ಳಾರಿ ಮಹಾನಗರ ಪಾಲಿಕೆಯ ನಿವೃತ್ತ ಆಯುಕ್ತರ ಹೆಸರನ್ನೇ ಕೈಬಿಟ್ಟಿರುವ ಅಚ್ಚರಿದಾಯಕ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಅಷ್ಟೇ ಅಲ್ಲ ಅವರನ್ನು ಸತ್ತಿದ್ದಾರೆಂದು ದಾಖಲಿಸಲಾಗಿದೆ.

    ಡಾ.ಚೆನ್ನಬಸವರಾಜ ಶಿರಗುಪ್ಪಿ (Chennabasavaraja Shiraguppi) ಎಂಬವರ ಹೆಸರೇ ಇದೀಗ ಮತದಾರ ಪಟ್ಟಿಯಿಂದ ಡಿಲೀಟ್ ಆಗಿದೆ. ಶಿರಗುಪ್ಪಿ ಅವರು ಬಳ್ಳಾರಿಯ ಮಹಾನಗರ ಪಾಲಿಕೆ ಆಯುಕ್ತರಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದವರು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ಹೋದ ಶಿರಗುಪ್ಪಿ ಅವರಿಗೆ, ಮಹಾನಗರ ಪಾಲಿಕೆ ಸಿಬ್ಬಂದಿ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರೇ ಇಲ್ಲ ಎಂದು ಹೇಳಿದ್ದಾರಂತೆ. ಸರ್ವೆ ಮಾಡಲು ಬಂದಾಗ ಶಿರಗುಪ್ಪಿ ಅವರು ಇಲ್ಲ ಎಂದು ಹೇಳಿದ ಒಂದೇ ಒಂದು ಕಾರಣಕ್ಕೆ ಅವರ ಹೆಸರನ್ನೇ ಮತದಾರ ಪಟ್ಟಿಯಿಂದ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: PFI ಸೇರಿ ಪೋಸ್ಟರ್ – ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಬೊಮ್ಮಾಯಿ

    ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಸದ್ಯ 15 ಸಾವಿರ ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಇದರಲ್ಲಿ ಶಾಸಕ ಅರವಿಂದ ಬೆಲ್ಲದ ಅವರೂ ಶಾಮೀಲಾಗಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅವರಿಗೆ ಸರ್ವೇ ಮಾಡಿಸಲು ಅಧಿಕಾರ ಕೊಟ್ಟವರಾದರೂ ಯಾರು? ಕಾಂಗ್ರೆಸ್ ಕಾರ್ಪೊರೇಟರ್‌ ಇರುವ ಏರಿಯಾದಲ್ಲೇ ಮತದಾರರ ಹೆಸರು ಡಿಲೀಟ್ ಆಗುತ್ತಿವೆ ಎಂಬ ಆರೋಪವನ್ನು ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಮಾಡಿದ್ದಾರೆ.

    ಮತದಾರ ಪಟ್ಟಿಯಲ್ಲಿ ಇತ್ತೀಚೆಗೆ ಸಾಕಷ್ಟು ಗೋಲ್‌ಮಾಲ್ ನಡೆಯುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ (Congress) ಮಾಡುತ್ತಲೇ ಬಂದಿದೆ. ಅಷ್ಟೇ ಏಕೆ ಆಡಳಿತಾರೂಢ ಬಿಜೆಪಿ (BJP) ಪಕ್ಷದ ಶಾಸಕರೇ ಆದ ಅರವಿಂದ ಬೆಲ್ಲದ (Arvind Bellad) ಅವರೇ ಮತದಾರ ಪಟ್ಟಿಯಲ್ಲಿ ಹೆಸರುಗಳು ಡಿಲೀಟ್ ಆಗಿವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಡಿಲೀಟ್ ಆಗುವುದು ಒತ್ತೊಟ್ಟಿಗಿರಲಿ. ಆದರೆ ಜೀವಂತವಾಗಿರುವವರನ್ನೇ ಅವರು ಜೀವಂತವಾಗಿಲ್ಲ ಎಂದು ಮತದಾರರ ಪಟ್ಟಿಯಿಂದ ಹೆಸರನ್ನೇ ತೆಗೆದು ಹಾಕಿರುವ ಪ್ರಕರಣ ಧಾರವಾಡದಲ್ಲಿ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿವಾದ- ಮುನಿಯಪ್ಪ, ರಮೇಶ್ ಕುಮಾರ್ ವಿರುದ್ಧ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • 6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು

    6ನೇ ತರಗತಿಯ ಬಾಲಕ ಹೃದಯಾಘಾತದಿಂದ ಸಾವು

    ಹುಬ್ಬಳ್ಳಿ: 6ನೇ ತರಗತಿಯ ಬಾಲಕನೊಬ್ಬ (Boy) ಶಾಲೆಯಲ್ಲಿಯೇ (School) ಕುಸಿದುಬಿದ್ದಿದ್ದು, ಹೃದಯಾಘಾದಿಂದ (Heart Attack) ಸಾವನ್ನಪ್ಪಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

    ಕಲಘಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ (Student) ಮಕ್ತುಮ್ ಮಹ್ಮದ್ ರಫಿ ಮನಿಯಾರ್ (13) ಮೃತ ಬಾಲಕನಾಗಿದ್ದು, ಆತ ಕೆಲ ವರ್ಷಗಳಿಂದಲೇ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌

    ಶಾಲೆಯಲ್ಲಿ ಬಾಲಕ ಕುಸಿದುಬಿದ್ದ ತಕ್ಷಣವೇ ಆತನನ್ನು ಶಿಕ್ಷಕರು ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

    Live Tv
    [brid partner=56869869 player=32851 video=960834 autoplay=true]

  • ಪ್ರಮೋದ್ ಮುತಾಲಿಕ್‍ಗೆ ಜೀವ ಬೆದರಿಕೆ- ದೂರು ದಾಖಲು

    ಪ್ರಮೋದ್ ಮುತಾಲಿಕ್‍ಗೆ ಜೀವ ಬೆದರಿಕೆ- ದೂರು ದಾಖಲು

    ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಪರವಾನಗಿ ಕೊಡಲು ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.

    ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ವಾಯ್ಸ್ ಮೆಸೇಜ್‍ವೊಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ (Dharwad) ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು

    ವಾಯ್ಸ್ ಮೆಸೆಜ್‍ನಲ್ಲಿ ಏನಿದೆ?: ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನೂ ಮೇಲಾದ್ರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್‍ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ರಾಜಕಾರಣದಿಂದ ಹಣ ಗಳಿಸಲು ಐಎಎಸ್ ಅಧಿಕಾರಿಗಳು, ರೌಡಿಗಳು ಬರ್ತಾ ಇದ್ದಾರೆ: ಸಂತೋಷ ಹೆಗ್ಡೆ

    Live Tv
    [brid partner=56869869 player=32851 video=960834 autoplay=true]

  • ಶಬರಿಮಲೆಗೆ ಭಕ್ತರ ಜೊತೆ ಹೆಜ್ಜೆ ಹಾಕುತ್ತಿದೆ ಶ್ವಾನ

    ಶಬರಿಮಲೆಗೆ ಭಕ್ತರ ಜೊತೆ ಹೆಜ್ಜೆ ಹಾಕುತ್ತಿದೆ ಶ್ವಾನ

    ಧಾರವಾಡ: ಶಬರಿಮಲೆಗೆ(Sabarimala) ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಿಂದ ಪಾದಯಾತ್ರೆಗೆ ಹೊರಟ ಮೂವರು ಭಕ್ತರ(Devotees) ಜೊತೆ ಒಂದು ಶ್ವಾನ ಕೂಡಾ ಸೇರಿಕೊಂಡಿದೆ.

    ನವೆಂಬರ್ 20 ರಂದು ಗ್ರಾಮದಿಂದ ಹೊರಟ ಮಂಜು ಕಮ್ಮಾರ, ರವಿ ಹಾಗೂ ನಾಗನಗೌಡ ಅವರಿಗೆ ಶ್ವಾನ ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಿಕ್ಕಿದೆ. ಈ ಮೂವರು ಊಟಕ್ಕೆ ಕುಳಿತಾಗ ಶ್ವಾನಕ್ಕೂ ಆಹಾರ ಹಾಕಿದ್ದಾರೆ. ನಂತರ ಇವರು ಅಲ್ಲಿಂದ ಪಾದಯಾತ್ರೆ(Padayatra) ಮುಂದುವರಿಸಿದಾಗ ಅವರ ಹಿಂದೆಯೇ ಶ್ವಾನ ಹೆಜ್ಜೆ ಹಾಕಿದೆ. ಇದನ್ನೂ ಓದಿ: ತನ್ನ ಕೂದಲನ್ನೇ ತಿಂದ ಬಾಲಕಿ – ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ದಂಗಾದ ವೈದ್ಯರು

    ಮೂವರು ಭಕ್ತರು ಉತ್ತರ ಕನ್ನಡ ಜಿಲ್ಲೆ ದಾಟಿ ಮುಂದಕ್ಕೆ‌‌ ಹೊರಟಿದ್ದಾರೆ. ಶ್ವಾನವನ್ನು ವಾಪಸ್ ಒಡಿಸಲು ಪ್ರಯತ್ನ ಮಾಡಿದ್ದಾರೆ.‌ ಆದರೆ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು ನಾಯಿ ಇವರ ಜೊತೆ ಹೆಜ್ಜೆ ಹಾಕುವುದನ್ನು ಮಾತ್ರ ಬಿಡಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಇವರೆಲ್ಲ‌‌ರೂ ಶ್ವಾನವನ್ನು ಶಬರಿ‌‌ಮಲೆಯವರೆಗೆ ಕರೆದುಕೊಂಡು ಹೋಗುವ ನಿರ್ಧಾರ ಮಾಡಿದ್ದಾರೆ.

    ಈಗಾಗಲೇ ರಾಜ್ಯದಲ್ಲಿ 500 ಕಿಲೋ ಮೀಟರ್ ಪಾದಯಾತ್ರೆ ಪೂರ್ಣಗೊಂಡಿದ್ದು, ಕರ್ನಾಟಕ ದಾಟಿದ ಮೇಲೆ‌‌ ಕೇರಳಕ್ಕೆ ಹೋಗಬೇಕಿದೆ.‌ ಅಲ್ಲಿಯವರೆಗೆ ಹೋಗಲು‌ ಇನ್ನು 500 ಕಿಲೋ ಮೀಟರ್ ಯಾತ್ರೆ ಮಾಡಬೇಕಿದೆ.‌

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಹೋಗೋದಿಲ್ಲ: ಜೋಶಿ

    ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಹೋಗೋದಿಲ್ಲ: ಜೋಶಿ

    ಧಾರವಾಡ: ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರ (Maharastra) ಕ್ಕೆ ಹೋಗುವುದಿಲ್ಲ. ಅದೇ ರೀತಿ ಮಹಾರಾಷ್ಟ್ರದ ಒಂದಿಂಚೂ ಜಾಗ ಕರ್ನಾಟಕಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಗಡಿ ವಿಚಾರ ಮುಗಿದು ಹೋದ ಅಧ್ಯಾಯ. ಮಹಾರಾಷ್ಟ್ರದವರು ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳನ್ನು ಕೊಡದಂತೆ ಮಹಾರಾಷ್ಟ್ರದ ನಮ್ಮ ಪಕ್ಷದ ಶಾಸಕರಿಗೆ ಹೇಳಿದ್ದೇನೆ. ನಮ್ಮ ರಾಜ್ಯದಲ್ಲಿ ಮರಾಠಿಗರು ಕನ್ನಡಿಗರ ಜೊತೆ ಹೊಂದಾಣಿಕೆಯಿಂದ ಇದ್ದಾರೆ. ಇಲ್ಲಿ ಯಾರಿಗೂ ತೊಂದರೆ ಇಲ್ಲ ಎಂದರು.

    ಮಹಾರಾಷ್ಟ್ರ, ಸೊಲ್ಲಾಪುರ, ಸಾಂಗ್ಲಿ, ಕೊಲ್ಲಾಪುರದಲ್ಲಿ ಕನ್ನಡಿಗರು ಸಂತೋಷದಿಂದ ಇದ್ದಾರೆ ಎಂದ ಅವರು, ಸಮಸ್ಯೆಗಳಿದ್ದರೆ ಆಯಾ ರಾಜ್ಯ ಸರ್ಕಾರಗಳ ಜೊತೆ ಮಾತನಾಡಿಕೊಳ್ಳಬೇಕು. ನಮ್ಮ ದೇಶ ಒಂದೇ. ನಾವು ಚೀನಾ, ಪಾಕಿಸ್ತಾನದ ಹೊತೆ ಹೋರಾಡಬೇಕು. ಅದರ ಬದಲಾಗಿ ಕರ್ನಾಟಕ, ಮಹಾರಾಷ್ಟ್ರ ಎಂದು ಬಡಿದಾಡುತ್ತಿರುವುದು ದೌರ್ಭಾಗ್ಯ ಎಂದರು.

    ಈ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ. ಎರಡೂ ರಾಜ್ಯಗಳಿಗೆ ನ್ಯಾಯಯುತವಾಗಿ ನ್ಯಾಯಾಲಯ ತೀರ್ಪು ಕೊಡುತ್ತದೆ ಎಂದು ಜೋಶಿ ಹೇಳಿದರು. ಇದನ್ನೂ ಓದಿ: ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ- ಬಿಜೆಪಿಗೆ ಸುಮಲತಾ ಆಪ್ತ ಸಚ್ಚಿದಾನಂದ ಸೇರ್ಪಡೆ

    ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯದಲ್ಲಿ ಮತ್ತೆ ಹಿಂದೂಗಳ ಹತ್ಯೆ ಹೆಚ್ಚಾಗುತ್ತದೆ ಎಂಬ ಸಿ.ಟಿ.ರವಿ (C.T Ravi) ಹೇಳಿಕೆಯನ್ನು ಸಮರ್ಥಿಸಿಕೊಂಡ ಜೋಶಿ, ಸಿದ್ದರಾಮಯ್ಯನವರ ಕಾಲದಲ್ಲೇ ಹಿಂದೂಗಳ ಹತ್ಯೆ ಹೆಚ್ಚಾಗಿವೆ. ಆ ಸಮಯದಲ್ಲಿ ಪಿಎಫ್‍ಐ (PFI) ಅದನ್ನು ಬಿಡುಗಡೆ ಮಾಡಿದ್ದ ಸಾಕ್ಷಿಗಳಿವೆ. ಸಿ.ಟಿ ರವಿ ಅವರ ಮನೆಗೆ ಮುತ್ತಿಗೆ ಹಾಕಿದ್ರೆ ನಾವು ಕಾಂಗ್ರೆಸ್‍ನವರ ಮನೆಗೆ ಮುತ್ತಿಗೆ ಹಾಕುತ್ತೇವೆ. ನಮ್ಮ ಸಂಸ್ಕೃತಿ ಅಂತದ್ದಲ್ಲ. ಸಿದ್ದರಾಮಯ್ಯನವರು ಎಚ್ಚರಿಕೆಯಿಂದ ಇರಬೇಕು ಎಂದರು.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯನವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ – ಯತ್ನಾಳ್‌ ಲೇವಡಿ

    ಸಿದ್ದರಾಮಯ್ಯನವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ – ಯತ್ನಾಳ್‌ ಲೇವಡಿ

    ಧಾರವಾಡ: ರಾಜ್ಯದಲ್ಲಿ 160 ಸಾಮಾನ್ಯ ವಿಧಾನಸಭಾ ಕ್ಷೇತ್ರಗಳಿವೆ. ಸಿದ್ದರಾಮಯ್ಯನವರಿಗೆ (Siddaramaiah) ಒಂದೂ ಕ್ಷೇತ್ರ ಸಿಗದಂತಾಗಿದೆ. ಇದರಿಂದ ಅವರ ಸ್ಥಿತಿ ಅಂಡು ಸುಟ್ಟ ಬೆಕ್ಕಿನಂತಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ (Basanagouda Patil Yatnal) ಲೇವಡಿ ಮಾಡಿದರು.

    ಧಾರವಾಡದಲ್ಲಿ (Dharawada) ಮಾತನಾಡಿದ ಅವರು, ಸಿದ್ದರಾಮಯ್ಯನವರು ಕ್ಷೇತ್ರಕ್ಕಾಗಿ ಓಡಾಡುತ್ತಿದ್ದಾರೆ. ಒಮ್ಮೆ ಕೋಲಾರಕ್ಕೆ ಹೋಗುತ್ತಾರೆ, ಒಮ್ಮೆ ಚಾಮರಾಜನಗರಕ್ಕೆ ಹೋಗುತ್ತಾರೆ. ಸಿದ್ದರಾಮಯ್ಯ ಒಬ್ಬ ಸ್ವಯಂ ಘೋಷಿತ ಸಿಎಂ ಎಂದರು. ಇದನ್ನೂ ಓದಿ: ಡಿಸೆಂಬರ್‌ನಲ್ಲಿ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಸಮಾವೇಶ – ಏನಿದು ವಿನಯ ಸಾಮರಸ್ಯ ಯೋಜನೆ

    ಸಿದ್ದರಾಮಯ್ಯ ಹಾಗೂ ಡಿಕೆಶಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷದ ವಿಚಾರ. ಸಿದ್ದರಾಮಯ್ಯ ಹಾಗೂ ಡಿಕೆಶಿ ಚುನಾವಣೆಯಲ್ಲಿ ಸೋಲಬಹುದು ಎಂಬ ಕಾರಣಕ್ಕೆ ಲಾಡ್ ಹಾಗೆ ಹೇಳಿರಬಹುದು ಎಂದು ತಿಳಿಸಿದರು.

    ಮಂಗಳೂರು ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಸಂಬಂಧದ ತನಿಖೆಯಲ್ಲಿ ಯಾವುದೇ ವೈಫಲ್ಯ ಆಗಿಲ್ಲ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಅವರ ಮೇಲೆ ಕ್ರಮ ಆಗುತ್ತದೆ. ಪರೇಶ್ ಮೇಸ್ತಾ ಕೇಸ್ ಇನ್ನೊಮ್ಮೆ ತನಿಖೆ ಮಾಡಿಸುವ ಚಿಂತನೆ ನಡೆದಿದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಶಾಸಕ ಮಹೇಶ್‌ ಕುಮಟಳ್ಳಿಗೆ ಒಳ್ಳೆ ಬುದ್ಧಿ ಬರಲಿ – ಗ್ರಾಮಸ್ಥರಿಂದ ರಸ್ತೆ ಮಧ್ಯೆ ಹೋಮ ಮಾಡಿ ವಿನೂತನ ಪ್ರತಿಭಟನೆ

    Live Tv
    [brid partner=56869869 player=32851 video=960834 autoplay=true]

  • ರಮೇಶ್ ಜಾರಕಿಹೊಳಿ ಪಕ್ಷ ಬಿಡಲ್ಲ, ಭವಿಷ್ಯ ಬಿಜೆಪಿಯಲ್ಲೇ ಇದೆ: ಯತ್ನಾಳ್

    ರಮೇಶ್ ಜಾರಕಿಹೊಳಿ ಪಕ್ಷ ಬಿಡಲ್ಲ, ಭವಿಷ್ಯ ಬಿಜೆಪಿಯಲ್ಲೇ ಇದೆ: ಯತ್ನಾಳ್

    ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಪಕ್ಷ ಬಿಟ್ಟು ಹೋಗುವುದಿಲ್ಲ. ಆದಷ್ಟು ಬೇಗ ಅವರು ಮಂತ್ರಿ ಆಗುತ್ತಾರೆ. ಅವರಿಗೆ ಎಲ್ಲ ಭವಿಷ್ಯ ಬಿಜೆಪಿಯಲ್ಲಿಯೇ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagauda Patil Yatnal) ಹೇಳಿದ್ದಾರೆ.

    ಜಾರಕಿಹೊಳಿ ಜೆಡಿಎಸ್ (JDS) ಸೇರುತ್ತಾರೆಂಬ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಬಿಟ್ಟರೆ ಜೆಡಿಎಸ್‍ನಿಂದ ಏನು ಆಗುವುದಿದೆ?. ಮಂತ್ರಿ ಮಂಡಲ ಈಗಲೂ ಪುನರ್ ರಚನೆ ಆಗಬಹುದು. ನಾನು ಆಕಾಂಕ್ಷಿ ಅಲ್ಲ. ಆದರೆ ಜಾರಕಿಹೊಳಿಯವರದ್ದೇ ಮೊದಲ ಹೆಸರು ಇದೆ ಎಂದರು.

    ಪರೇಶ್ ಮೇಸ್ತಾ (Paresh Mestha) ಕೇಸ್ ಬಿ ರಿಪೋರ್ಟ್ ವಿಚಾರದ ಕುರಿತು ಮಾತನಾಡಿ, ಇನ್ನೊಮ್ಮೆ ತನಿಖೆ ಮಾಡಿಸುವ ಚಿಂತನೆ ನಡೆದಿದೆ. ಇನ್ನೊಮ್ಮೆ ಪುನರ್ ತನಿಖೆ ಆಗಬೇಕಿದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ. ಪರಿಶೀಲನೆ ಮಾಡುವಂತೆ ಸರ್ಕಾರ ಈಗಾಗಲೇ ಸಿಬಿಐಗೆ ಕೇಳಿಕೊಂಡಿದ್ದೇನೆ ಎಂದು ಹೆಳಿದರು. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್‌ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

    5 years after BJP claimed Paresh Mesta was tortured and killed, CBI says  not a murder | The News Minute

    ಧಾರವಾಡ (Dharwad) ಕ್ಕೆ ಬಂದರೆ ನೋಡಿಕೊಳ್ಳುತ್ತೇವೆಂದು ಸವಾಲುಗಳು ಬರುತ್ತಿರೋ ವಿಚಾರದ ಬಗ್ಗೆ ಮಾತನಾಡಿ, ಎಲ್ಲ ಸವಾಲುಗಳಿಗೂ ಉತ್ತರ ಕೊಡುತ್ತಿದ್ದೇನೆ. ಧಾರವಾಡದಲ್ಲಿಯೂ ಒಬ್ಬ ಹೇಳಿದ್ದ. ಇನ್ನು ಕೆಲವರು ದಿನಗಳಲ್ಲಿ ಧಾರವಾಡಕ್ಕೂ ಬರುತ್ತೀನಿ. ಅಗರ್ ತುಮ್ಹಾರೆ ಪಾಸ್ ದಮ್ ಹೈತೋ ಆಯಾರೆ ಚಿ… ಅಂತಾ ಹೇಳಿ ಹೋಗುವೆ. ಆ ಸವಾಲು ತೆಗದುಕೊಂಡೇ ಇಂದು ಧಾರವಾಡಕ್ಕೆ ಬಂದಿದ್ದೇನೆ. ಮುಂದಿನ ಸಲ ಧಾರವಾಡ ನಗರಕ್ಕೆ ಬರುವೆ ಎಂದು ತಿರುಗೇಟು ನೀಡಿದರು.

    ಮೊನ್ನೆ ಗೋಕಾಕ್‍ನಲ್ಲಿಯೂ ಹಾಗೆ ಮಾಡ್ತೀವಿ, ಹೀಗೆ ಮಾಡ್ತೀವಿ ಅಂದಿದ್ರು. ಈಗ ಧಾರವಾಡಕ್ಕೆ ಬರುತ್ತೀನಿ. ಇದೇನು ಪಾಕಿಸ್ತಾನ (Pakistan) ಅಲ್ಲ. ಇದು ಹಿಂದೂಸ್ತಾನ ಇದೆ. ಧಾರವಾಡದಲ್ಲಿ ಯಾವ ಚೌಕ್ ಹೇಳ್ತಿಯೋ ಅಲ್ಲಿ ಪೆಂಡಾಲ್ ಹಾಕಿ ಮಾತನಾಡುವೆ ಪ್ರತಿ ಸವಾಲೆಸೆದರು.

    Live Tv
    [brid partner=56869869 player=32851 video=960834 autoplay=true]