Tag: ಧಾರವಾಡ

  • ಧಾರವಾಡ | ಹಿಟ್ & ರನ್‌ಗೆ ಎಎಸ್ಐ ಬಲಿ

    ಧಾರವಾಡ | ಹಿಟ್ & ರನ್‌ಗೆ ಎಎಸ್ಐ ಬಲಿ

    ಧಾರವಾಡ: ಬೈಕ್ ಅಪಘಾತ (Bike Accident) ಸಂಭವಿಸಿ ಡಿಆರ್‌ ಎಎಸ್‌ಐ (DR ASI) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

    D.R ASI ಎಲ್ಲಪ್ಪ ಕುಂಬಾರ್ ಎಂಬುವವರೇ ಮೃತ ದುರ್ದೈವಿ. ಧಾರವಾಡ ಕಡೆಯಿಂದ ಹುಬ್ಬಳ್ಳಿ (Hubballi) ಕಡೆಗೆ ಬೈಕ್‌ನಲ್ಲಿ ಹೊರಟಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಹೆಲ್ಪ್‌ಲೈನ್‌ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್‌ಐಆರ್

    ಈ ವೇಳೆ ಬೈಕ್ ಮೇಲಿದ್ದ ಯಲ್ಲಪ್ಪ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಹಣ ಪಡೆದಿದ್ದು ನಿಜ, ಅದು ಟ್ಯಾಕ್ಸ್, ಅಭಿವೃದ್ಧಿ ಹಣ: ಲಂಚ ಆರೋಪಕ್ಕೆ ಕಮಲನಗರ ಪಿಡಿಓ ಸ್ಪಷ್ಟನೆ

  • ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

    ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

    ಧಾರವಾಡ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ, ಬೆಣ್ಣಿಹಳ್ಳ ತುಂಬಿ ಹರಿಯುತ್ತಿದೆ. ಇದೀಗ ಕುಟುಂಬವೊಂದು ಬೆಣ್ಣಿ ಹಳ್ಳದಲ್ಲಿ (Bennihalli) ಸಿಲುಕಿಕೊಂಡಿದೆ.

    ಧಾರವಾಡ (Dharwad) ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದ ಬಳಿಯ ತೋಟದ ಮನೆಯಲ್ಲಿ ಕುಟುಂಬ ಸಿಲುಕಿಕೊಂಡಿದೆ. ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳಿರುವ ತೋಟದ ಮನೆಯು ಸಂಪೂರ್ಣ ಜಲಾವೃತವಾಗಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

    ಯಮನೂರ (Yamanuru) ಗ್ರಾಮದ ಪಕ್ಕದಲ್ಲೇ ಇರುವ ತೋಟದ ಮನೆಯಲ್ಲಿ ಕುಟುಂಬದ ಜೊತೆ ನಾಯಿ ಕೂಡ ಇದೆ. ಸದ್ಯ ಮನೆಯ ಕೆಳಗಡೆ ನೀರು ಬಂದಿದ್ದರಿಂದ, ಕುಟುಂಬಸ್ಥರು ಮೇಲಿನ ಮನೆಯಲ್ಲಿದ್ದಾರೆ. ಇದೀಗ ಮನೆ ಸಂಪೂರ್ಣ ಜಲಾವೃತವಾಗಿರುವುದರಿಂದ ಮನೆಯಿಂದ ಹೊರಬರಲಾರದೇ ಕುಟುಂಬ ಪರದಾಡುತ್ತಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

    ರಾತ್ರಿಯಿಡೀ ಸುರಿದ ಭಾರಿ ಮಳೆಯ ಪರಿಣಾಮ ಬೆಣ್ಣಿಹಳ್ಳ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇದೀಗ ಮಳೆಯ ಅವಾಂತರಕ್ಕೆ ನವಲಗುಂದ ತಾಲೂಕಿನ ಜನ ಜೀವನ ಅಸ್ತವ್ಯಸ್ತಗೊಂಡಿದೆ.

  • ಶುಕ್ರವಾರ ಶರಣಾಗುತ್ತೇನೆ – ವಿನಯ್ ಕುಲಕರ್ಣಿ ಸಭೆಯಲ್ಲಿ ಪತ್ನಿ ಹಾಜರ್‌

    ಶುಕ್ರವಾರ ಶರಣಾಗುತ್ತೇನೆ – ವಿನಯ್ ಕುಲಕರ್ಣಿ ಸಭೆಯಲ್ಲಿ ಪತ್ನಿ ಹಾಜರ್‌

    ಬೆಳಗಾವಿ: ಸುಪ್ರೀಂ ಕೋರ್ಟ್‌ (Suprme Court) ಸೂಚನೆಯಂತೆ ಶುಕ್ರವಾರ ನ್ಯಾಯಾಲಯಕ್ಕೆ (Court) ಶರಣಾಗುವುದಾಗಿ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಹೇಳಿದ್ದಾರೆ.

    ಇಂದು ವಿನಯ್ ಕುಲಕರ್ಣಿ ಬೆಳಗಾವಿಯ ಪ್ರವಾಸಿ ಮಂದಿರಲ್ಲಿ ಧಾರವಾಡ ಜಿಲ್ಲೆಯ ಅಧಿಕಾರಿಗಳ ಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಅಚ್ಚರಿ ಎಂಬಂತೆ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಜರಾಗಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಸರ್ಕಾರದ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಿಸಿದ್ದೇನೆ – ಸಿದ್ದರಾಮಯ್ಯ

     

    ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರಿಗೆ ತೊಂದರೆ ಆಗುವುದು ಬೇಡ ಎಂಬ ಕಾರಣಕ್ಕೆ ಇಲ್ಲಿ ಸಭೆ ಮಾಡುತ್ತಿದ್ದೇನೆ. ಅಧಿಕಾರಿಗಳು ನನ್ನ ಪತ್ನಿಗೆ ಸಾಥ್ ನೀಡಿ ಎಂದು ಮನವಿ ಮಾಡಿಕೊಂಡರು.

    ಕ್ಷೇತ್ರದ ಜನರು ಯಾರು ಆತಂಕ ಪಡಬೇಕಿಲ್ಲ. ಇನ್ನು ಮುಂದೆ ಕ್ಷೇತ್ರವನ್ನು ನನ್ನ ಪತ್ನಿ ಮಗಳು ನೋಡಿಕೊಳ್ಳುತ್ತಾರೆ. ಅವರಿಗೆ ನಿಮ್ಮ ಸಹಕಾರ ನೀಡಬೇಕು. ಬುಧವಾರ ಕಿತ್ತೂರಿನಲ್ಲಿ ಸಭೆ ಮಾಡಿದ ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದು ತಿಳಿಸಿದರು.

  • ಮೊದಲ ನಿಧನದ ಬಳಿಕವೂ ಕಾರ್ಯಕ್ರಮ ಮಾಡಿದ್ದಾರೆ, ಸಿಎಂ, ಡಿಸಿಎಂಗೆ ನಾಚಿಕೆ ಆಗೋದಿಲ್ವಾ? – ಜೋಶಿ ಕಿಡಿ

    ಮೊದಲ ನಿಧನದ ಬಳಿಕವೂ ಕಾರ್ಯಕ್ರಮ ಮಾಡಿದ್ದಾರೆ, ಸಿಎಂ, ಡಿಸಿಎಂಗೆ ನಾಚಿಕೆ ಆಗೋದಿಲ್ವಾ? – ಜೋಶಿ ಕಿಡಿ

    -ತಮ್ಮ ಮೇಲಿನ ಆರೋಪ ತಳ್ಳಿಹಾಕಲು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಎಂದ ಕೇಂದ್ರ ಸಚಿವ

    ಧಾರವಾಡ: ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೊದಲ ನಿಧನದ ಬಳಿಕವೂ ಕಾರ್ಯಕ್ರಮ ಮಾಡಿದ್ದಾರೆ. ಸಿಎಂ, ಡಿಸಿಎಂಗೆ ನಾಚಿಕೆ ಆಗೋದಿಲ್ವಾ? ಈ ಪ್ರಕರಣದಲ್ಲಿ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಕಿಡಿಕಾರಿದ್ದಾರೆ.

    ಜಿಲ್ಲೆಯಲ್ಲಿ ಮಾತನಾಡಿದ ಅವರು, ಆರ್‌ಸಿಬಿ (RCB) ವಿಜಯೋತ್ಸವಕ್ಕೂ ಮೊದಲೇ ಪೊಲೀಸ್ ಆಯುಕ್ತ ಬಿ.ದಯಾನಂದ್ (B Dayanand) ಅವರು ಒಂದೇ ದಿನದಲ್ಲಿ ಭದ್ರತೆ ವ್ಯವಸ್ಥೆ ಆಗುವುದಿಲ್ಲ ಎಂದು ಅನುಮತಿ ನಿರಾಕರಿಸಿದ್ದರು. ಹಿಂದಿನ ದಿನ ರಾತ್ರಿ ಆರ್‌ಸಿಬಿ ಅಭಿಮಾನಿಗಳು ದೊಡ್ಡಮಟ್ಟದಲ್ಲಿ ಕುಣಿದು ಕುಪ್ಪಳಿಸಿದ್ದರು. ಪೊಲೀಸರಿಗೆ ಅದನ್ನು ನಿರ್ವಹಿಸುವುದೇ ಕಷ್ಟವಾಗಿತ್ತು. ಅವರು ಬೆಳಗ್ಗೆ ಅದರ ಬ್ರೀಫಿಂಗ್‌ಗೂ ಹೋಗಿರಲಿಲ್ಲ. ಪೆಂಡಾಲ್ ಹಾಕುವುದನ್ನು ನೋಡಿಯೇ ಭದ್ರತೆ ಒದಗಿಸುವುದು ಕಷ್ಟವಾಗುತ್ತದೆ ಎಂದು ಸಿಎಂಗೆ ತಿಳಿಸಿದ್ದರು ಎಂದು ಹೇಳಿದರು.ಇದನ್ನೂ ಓದಿ: ಬಿಎಂಟಿಸಿ ಬಸ್ಸು ಡಿಕ್ಕಿ- ದ್ವಿಚಕ್ರ ವಾಹನ ಸವಾರ ಸಾವು

    ಇನ್ನೂ ವಿಜಯೋತ್ಸವಕ್ಕೆ ಅನುಮತಿ ಕೊಡುವ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ಮಧ್ಯೆಯೇ ಪೈಪೋಟಿ ಇತ್ತು. ಹೀಗಾಗಿ ಅನುಮತಿ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. ತಮ್ಮ ಮೇಲಿನ ಆರೋಪ ತಳ್ಳಿ ಹಾಕಲು ಅಧಿಕಾರಿಗಳ ಅಮಾನತು ಮಾಡಿದ್ದಾರೆ. ಇದೊಂದು ತಪ್ಪಿಸಿಕೊಳ್ಳುವ ತಂತ್ರ. ಇದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದರು.

    ಸಿಎಂ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ತೆಗೆದಿದ್ದು ಯಾಕೆ? ಅವರು ಏನಾದರೂ ತಪ್ಪು ಮಾಡಿರಬೇಕಲ್ಲ? ಅವರ ಮೇಲೆ ಎಫ್‌ಐಆರ್ ಯಾಕೆ ಆಗಿಲ್ಲ? ಕೆಲವರನ್ನು ಅಮಾನತು ಮಾಡಿ, ಜನರು ಈ ಕೇಸ್ ಮರೆಯಬೇಕೆಂದು ಹೀಗೆ ಮಾಡುತ್ತಿದ್ದಾರೆ. ವಿಧಾನಸೌಧದಲ್ಲಿ ಈ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟಿದ್ದು ಯಾರು? ಇನ್ನೂ ಸಿಎಂ, ಸಚಿವರ ಮಕ್ಕಳು ವಿಧಾನಸೌಧದ ಎದುರು ಸೆಲ್ಫಿ ತೆಗೆದುಕೊಂಡರು. ನೂರಾರು ಜನ ವೇದಿಕೆಯಲ್ಲಿದ್ದರು. ಸಿಎಂ ಹುದ್ದೆ ಬಗ್ಗೆ ನಮಗೆ ಗೌರವವಿದೆ. ಅವರು ನಮ್ಮ ರಾಜ್ಯದ ನಾಯಕರು, ಸಿಎಂ ಇರುವ ವೇದಿಕೆಯಲ್ಲಿ ಹೀಗೆಲ್ಲ ಮಾಡಿದ್ದು ಎಷ್ಟು ಸರಿ? ಇದಕ್ಕೆ ಯಾರು ಹೊಣೆ? ಕಾಲ್ತುಳಿತದ ಬಳಿಕ ಮಧ್ಯಾಹ್ನ 3:10ಕ್ಕೆ ಬೌರಿಂಗ್ ಆಸ್ಪತ್ರೆಯಲ್ಲಿ ಮೊದಲ ನಿಧನ ಆಯಿತು. ಅದಾದ ಬಳಿಕವೂ ಕಾರ್ಯಕ್ರಮ ಮಾಡಿದ್ದಾರೆ. ಸಿಎಂ, ಡಿಸಿಎಂಗೆ ನಾಚಿಕೆ ಆಗೋದಿಲ್ವಾ? ಇದಕ್ಕೆಲ್ಲ ಕೋರ್ಟ್ ಕಠಿಣ ಕ್ರಮ ಕೈಗೊಳ್ಳಲಿದೆ. ಇವರು ಸರ್ಕಾರದಲ್ಲಿ ಮುಂದುವರೆಯೋಕೆ ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ವರದಕ್ಷಿಣೆ ದುರಾಸೆಗೆ 2ನೇ ಮದುವೆಗೆ ರೆಡಿಯಾಗಿದ್ದ ವ್ಯಕ್ತಿಗೆ ಪತ್ನಿಯಿಂದ ಚಪ್ಪಲಿ ಏಟು

  • ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

    ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

    – ಇನ್ನೊಂದು ವಾರದಲ್ಲಿ ಶರಣಾಗುವಂತೆ ಸುಪ್ರೀಂ ಕೋರ್ಟ್‌ ಸೂಚನೆ

    ಧಾರವಾಡ: ಜಿಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ (Supreme Court) ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಜಾಮೀನು ರದ್ದುಗೊಳಿಸಿದೆ.

    ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಇದನ್ನೂ ಓದಿ: ಬೆಂಗ್ಳೂರು ಕಾಲ್ತುಳಿತ ಕೇಸ್‌ – ಕೊಹ್ಲಿ ವಿರುದ್ಧ ದೂರು ದಾಖಲು

    ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌, ಇನ್ನೊಂದು ವಾರದಲ್ಲಿ ಸಿಬಿಐ ಮುಂದೆ ಶರಣಾಗುವಂತೆ ವಿನಯ್‌ ಕುಲಕರ್ಣಿಗೆ ಸೂಚನೆ ನೀಡಿದೆ.

    ಶಾಸಕ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಈಗ ಮತ್ತೆ ಜೈಲು ಸೇರುವ ಭೀತಿ ಎದುರಾಗಿದೆ. ಇದನ್ನೂ ಓದಿ: ಬೆಂಗ್ಳೂರು ಕಾಲ್ತುಳಿತ ಪ್ರಕರಣ – ನಾಲ್ವರಿಗೆ 14 ದಿನ ನ್ಯಾಯಾಂಗ ಬಂಧನ

  • ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

    ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಜಮೀನು ಖರೀದಿಗೆ ತೆರಳಿದ್ದ ಮೂವರು ಸ್ಥಳದಲ್ಲೇ ಸಾವು

    ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಧಾರವಾಡ (Dharwad) ಜಿಲ್ಲೆಯ ಅಣ್ಣಿಗೇರಿ (Annigeri) ಬಳಿಯ ರಾಷ್ಟ್ರೀಯ ಹೆದ್ದಾರಿಯ ಭದ್ರಾಪುರ ಗ್ರಾಮದ ಬಳಿ ನಡೆದಿದೆ.

    ಅಪಘಾತದಲ್ಲಿ ಸಾವನ್ನಪ್ಪಿದ ಮೂವರನ್ನು ಮದನ್, ಸುರೇಶ್, ಹಾಗೂ ಎಲ್.ಎನ್ ವೇಣುಗೋಪಾಲ್ ಎಂದು ಗುರುತಿಸಲಾಗಿದೆ. ಮೃತರು ಮೂಲತಃ ಮೈಸೂರು ಹಾಗೂ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕನ್ನಡಕ್ಕೆ ಅಪಮಾನ ಮಾಡಿದಾಗ ಶಿವರಾಜ್ ಕುಮಾರ್ ಮಾತಾಡಬೇಕು – ರವಿ ಗಣಿಗ

    ಮೂವರು ಗದಗ ಜಿಲ್ಲೆಯ ಮುಂಡರಗಿಯಿಂದ ಬೆಂಗಳೂರು ಕಡೆಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಗದಗ ಮುಂಡರಗಿಯಲ್ಲಿ ತೋಟ ಖರೀದಿ ಮಾಡಲು ಮೂವರು ಕಾರಿನಲ್ಲಿ ತೆರಳಿದ್ದರು. ತೋಟ ನೋಡಿಕೊಂಡು ಮರಳಿ ಬೆಂಗಳೂರಿಗೆ ಹೋಗುವಾಗ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

    ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ, ಕಾರಿನಲ್ಲಿ ಕೆಳಗೆ ಸಿಲುಕಿದ್ದ ಮೂವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಧಾರವಾಡ | ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಬ್ಯಾಂಕ್ ಮ್ಯಾನೇಜರ್ ಸಾವು

    ಧಾರವಾಡ | ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಬ್ಯಾಂಕ್ ಮ್ಯಾನೇಜರ್ ಸಾವು

    ಧಾರವಾಡ: ಇಲ್ಲಿನ ತೇಗೂರು(Tegur) ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬ್ಯಾಂಕ್ ಮ್ಯಾನೇಜರ್(Bank Manager) ಒಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

    ಮಧ್ಯಪ್ರದೇಶ ಮೂಲದ ಬೆಳಗಾವಿ ಕೆನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ರಾಹುಲ್ ಶುಕ್ಲಾ (40) ಮೃತ ದುರ್ದೈವಿ. ಇದನ್ನೂ ಓದಿ: ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

    ಧಾರವಾಡ ಕಡೆಯಿಂದ ವಾಪಸ್ ಬೆಳಗಾವಿ ಕಡೆಗೆ ತೆರಳುತ್ತಿದ್ದ ಸಂದರ್ಭ ಎದುರು ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಾಹುಲ್ ಶುಕ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

    ಪತ್ನಿ ಶ್ರೇಯಾ ಶುಕ್ಲಾ (35) ಹಾಗೂ ಮೂರು ವರ್ಷದ ಮಗಳು ಕಿಯಾನಾ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

    ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ನಿಲ್ಲಿಸದ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

    ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

    ಹುಬ್ಬಳ್ಳಿ/ಧಾರವಾಡ: ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಹುಬ್ಬಳ್ಳಿ-ಧಾರವಾಡ (Hubballi-Dharwad) ಮಹಾನಗರದ ಕೆಲ ಮಸೀದಿಗಳಲ್ಲಿ ಓಡಾಟ ನಡೆಸುತ್ತಿದ್ದು, ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಶಾಸಕ ಅರವಿಂದ್ ಬೆಲ್ಲದ್ (Aravind Bellad) ಪತ್ರ ಬರೆದಿದ್ದಾರೆ.

    ಅಪರಿಚಿತರ ಓಡಾಟ ಪರಿಶೀಲಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಬೆಲ್ಲದ್ ಪತ್ರ ಬರೆದಿದ್ದಾರೆ. ಮೇ 17ರಂದು ಬೆಲ್ಲದ್ ಪತ್ರ ಬರೆದಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್‌ ಅಖ್ತರ್‌

    ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ. ಅವಳಿ ನಗರದ ವಿವಿಧ ಕೊಳಚೆ ಪ್ರದೇಶದಲ್ಲಿ (ಜನ್ನತ್ ನಗರ ಧಾರವಾಡ ಸೇರಿದಂತೆ) ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 8 ಮಂದಿ ಸಜೀವ ದಹನ

    ಅವಳಿ ನಗರದಲ್ಲಿರುವ ಅಪರಿಚಿತ, ಹೊಸಮುಖದ ವ್ಯಕ್ತಿಗಳನ್ನು ವಿಚಾರಿಸಿ ಸೂಕ್ತ ಕ್ರಮ ಜರುಗಿಸಬೇಕು. ಇದರಿಂದ ಮಹಾನಗರದಲ್ಲಿ ಅಹಿತಕರ ಘಟನೆ ಆಗದಂತೆ ತಡೆಯುವ ಕೆಲಸ ಮಾಡಬೇಕೆಂದು ಶಾಸಕ ಬೆಲ್ಲದ್ ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ – ನಿಷೇಧವಿದ್ದರೂ ಖಾಸಗಿ ಕಾರ್ಯಕ್ಕೆ ಬಳಸಿಕೊಂಡು ನಿಯಮ ಉಲ್ಲಂಘನೆ

  • ಅಬ್ಬಬ್ಬಾ ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ!

    ಅಬ್ಬಬ್ಬಾ ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ!

    ಧಾರವಾಡ: ಏಪ್ರಿಲ್, ಮೇ ತಿಂಗಳು ಬಂತೆಂದರೆ ಸಾಕು ಹಣ್ಣುಗಳ ರಾಜನ ದರ್ಬಾರ್ ಶುರುವಾಗೇ ಬಿಡುತ್ತೆ. ಮಾರುಕಟ್ಟೆಯಲ್ಲಿ 1 ಬಾಕ್ಸ್ ಮಾವಿನ ಹಣ್ಣಿಗೆ 300, 350 ಅಥವಾ 400 ರೂ. ಇರುತ್ತದೆ. ಆದರೆ ಇಲ್ಲೊಂದು ಮಾವಿನ ಹಣ್ಣಿನ ಕೆಜಿಗೆ ಬರೋಬ್ಬರಿ 2.7 ಲಕ್ಷ ರೂ. ಆಗಿದ್ದು, 1 ಮಾವಿನ ಹಣ್ಣಿಗೆ 10 ಸಾವಿರ ರೂ. ಬೆಲೆಯಿದೆ.

    ಹೌದು, ಈ ಮಾವಿನ ಹಣ್ಣಿನ ಹೆಸರು ಮಿಯಾ ಜಾಕಿ(Miyazaki), ಇದು ಜಪಾನ್ ದೇಶದ ಮಾವಿನ ಹಣ್ಣಿನ(Mango) ತಳಿಯಾಗಿದೆ. ಈ ಹಣ್ಣನ್ನು ಧಾರವಾಡದ(Dharwad) ರೈತ ಪ್ರಮೋದ ಗಾಂವಕರ ಕಲಕೇರಿಯ ತಮ್ಮ ತೋಟದಲ್ಲಿ ಬೆಳೆದಿದ್ದಾರೆ. ಪ್ರತಿವರ್ಷ ಏಳೆಂಟು ಹಣ್ಣು ಬಿಡುತ್ತಿದ್ದ ಮಿಯಾ ಜಾಕಿ ಮರಗಳು, ಈ ವರ್ಷ 25-26 ಹಣ್ಣುಗಳನ್ನು ಬಿಟ್ಟಿವೆ. ಧಾರವಾಡದಲ್ಲಿ ನಡೆದ ಮಾವಿನ ಮೇಳದಲ್ಲೂ ಈ ಮಿಯಾ ಜಾಕಿ ಮಾವಿನ ಹಣ್ಣು ಎಲ್ಲರ ಗಮನ ಸೆಳೆಯಿತು. ಇದನ್ನೂ ಓದಿ: ತಡವಾಗಿ ಆಮೀರ್ ಖಾನ್ ಪ್ರಶಂಸೆ- ಈಗ ಎಚ್ಚರವಾದ್ರಾ ಎಂದು ಪ್ರಶ್ನಿಸಿದ ನೆಟ್ಟಿಗರು

    ಮಿಯಾ ಜಾಕಿ ಎಂಬುದು ಜಪಾನ್ ದೇಶದ ಓರ್ವ ರೈತನ ಹೆಸರು. ಮಿಯಾ ಜಾಕಿ ಎಂಬ ರೈತ ಅಲ್ಲಿ ಈ ಮಾವಿನ ಹಣ್ಣು ಬೆಳೆದಿದ್ದ. ಹೀಗಾಗಿ ಆ ಹಣ್ಣಿಗೆ ಮಿಯಾಜಾಕಿ ಎಂಬ ರೈತನ ಹೆಸರಿಡಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ಗೆ ಪಾಕ್‌ ವಾಯುಪಡೆ ಮುಖ್ಯ ತಂತ್ರಜ್ಞ ಸೇರಿ 11 ಸೈನಿಕರು ಸಾವು

    ಪ್ರಮೋದ್ ಅವರು ಜಪಾನ್‌ಗೆ ತೆರಳಿದ್ದ ವೇಳೆ ಅಲ್ಲಿಂದ ಈ ಹಣ್ಣಿನ ಎರಡು ಸಸಿಗಳನ್ನು ತಂದು, ತಮ್ಮ ತೋಟದಲ್ಲಿ ನೆಟ್ಟಿದ್ದರು. ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡ ಎರಡೂ ಸಸಿಗಳು ಬೆಳೆದು ಇದೀಗ ಫಲ ಕೊಡಲಾರಂಭಿಸಿವೆ. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 15 ಮಂದಿಗೆ ಗಾಯ

    ಮಾವಿನ ಮೇಳದಲ್ಲಿ ಮಿಯಾ ಜಾಕಿ ಕಂಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಈ ಮಿಯಾ ಜಾಕಿ ಹಣ್ಣನ್ನು ಯಾವ ರೈತರೂ ಬೆಳೆಯುತ್ತಿಲ್ಲ. ಆ ಹಣ್ಣಿನ ಉತ್ಪಾದನೆ ಹೆಚ್ಚಾದರೆ ಅದರ ದರವೂ ಕಡಿಮೆಯಾಗುತ್ತದೆ. ತೋಟಗಾರಿಕಾ ಇಲಾಖೆ ಅಧಿಕಾರಿಗಳು ಮಿಯಾ ಜಾಕಿ ಹಣ್ಣಿನ ತಳಿಯ ಸಸಿಗಳನ್ನು ತರಿಸಿ, ಇತರ ರೈತರೂ ಅದನ್ನು ಬೆಳೆಯುವಂತೆ ಪ್ರೋತ್ಸಾಹಿಸಬೇಕಿದೆ. ಒಂದು ಹಣ್ಣಿಗೆ 10 ಸಾವಿರ ಎಂದರೆ ಅದು ದುಬಾರಿಯಾಗುತ್ತದೆ. ಆದ್ದರಿಂದ ಆ ಹಣ್ಣಿನ ಉತ್ಪಾದನೆ ಹೆಚ್ಚಳ ಮಾಡಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ಲೋಕಾ ರೇಡ್ – ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓ

    ಪ್ರವೋದ್ ಗಾಂವಕರ ಅವರು ತಮ್ಮ ತೋಟದಲ್ಲಿ ಇಸ್ರೇಲ್, ಅಮೆರಿಕ, ಜಪಾನ್, ಇಟಲಿ, ಥೈಲ್ಯಾಂಡ್ ಸೇರಿ ವಿವಿಧ ದೇಶಗಳ ಸುಮಾರು 25 ಜಾತಿಯ ಮಾವಿನ ಹಣ್ಣಿನ ಸಸಿಗಳನ್ನು ಬೆಳೆದಿದ್ದಾರೆ. ಸದ್ಯ ಮಾವಿನ ಮೇಳದಲ್ಲಿ(Mango Fest) ಪ್ರಮೋದ್ ಗಾಂವಕರ ಅವರು ಬೆಳೆದ ಮಿಯಾಜಾಕಿ ಎಲ್ಲರ ಗಮನ ಸೆಳೆದಿದೆ.

  • ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಾಯ

    ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಾಯ

    – ಮತ್ತೊಂದೆಡೆ ಲಾರಿಗಳ ಮಧ್ಯೆ ಸರಣಿ ಅಪಘಾತ, ತಪ್ಪಿದ ಅನಾಹುತ

    ಧಾರವಾಡ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಧಾರವಾಡ (Dharwad) ಪಿಬಿ ರಸ್ತೆ ಬಳಿ ನಡೆದಿದೆ. ಜಿಲ್ಲೆಯ ಕೆಲಗೇರಿ ನಿವಾಸಿ ಶಿವಾನಂದ ಅಡಿವೆಪ್ಪ ಮಾಳಗಿ(38) ಮೃತ ದುರ್ದೈವಿ.

    ಶಿವಾನಂದ ಹಾಗೂ ಮಂಜುನಾಥ ಹುಬ್ಬಳ್ಳಿಯಿಂದ ಧಾರವಾಡದತ್ತ ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಧಾರವಾಡದ ಮಾಡರ್ನ್ ಹಾಲ್ ಎದುರು ಬರುತ್ತಿದ್ದಂತೆ ಧಾರವಾಡಿದಿಂದ ಹುಬ್ಬಳ್ಳಿ (Hubballi) ಮಾರ್ಗವಾಗಿ ಗದಗಕ್ಕೆ ಹೊರಟಿದ್ದ ಇನ್ನೋವಾ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಕಾಶ್ಮೀರದ ವಿಚಾರದಲ್ಲಿ ಪ್ರಧಾನಿಗಳು ಬಿಗಿ ಕ್ರಮ ತೆಗೆದುಕೊಂಡಿದ್ದಾರೆ: ಹೆಚ್.ಡಿ ದೇವೇಗೌಡ

    ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಶಿವಾನಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರು ಚಾಲಕ ಮಂಜುನಾಥ್‌ಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಕಾರಿನಲ್ಲಿದ್ದ ಗದಗ ಮೂಲದ ಮನೀಶರೆಡ್ಡಿ, ಬಸವರೆಡ್ಡಿ ಹುಚ್ಚಣ್ಣವರ ಹಾಗೂ ಮಂಜುನಾಥರೆಡ್ಡಿ ಸಾಸಿವೆಹಳ್ಳಿ ಎಂಬುವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕ್ಸತೆ ನೀಡಲಾಗಿದೆ. ಇದನ್ನೂ ಓದಿ: ಡೋಂಟ್ವರಿ ಸಿಎಸ್‌ಕೆ ಬೇಬಿಮಾ – ಸಿಎಸ್‌ಕೆ ಅಭಿಮಾನಿಗಳನ್ನ ರೊಚ್ಚಿಗೆದ್ದು ಕಿಚಾಯಿಸಿದ ಆರ್‌ಸಿಬಿ ಫ್ಯಾನ್ಸ್‌

    ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆಯ ಪೊಲೀಸರು (Dharwad) ಭೇಟಿ ನೀಡಿದ್ದು, ಅಪಘಾತಗೊಂಡ ಎರಡು ಕಾರುಗಳನ್ನು ಕ್ರೇನ್ ಸಹಾಯದಿಂದ ಸ್ಥಳಾಂತರಿಸುವ ಕಾರ್ಯ ನಡೆಸಿದರು. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೇಸ್:2 – ಬೈಪಾಸ್ ರಸ್ತೆಯಲ್ಲಿ ಲಾರಿಗಳ ಮಧ್ಯೆ ಸರಣಿ ಅಪಘಾತ
    ಮೂರು ಲಾರಿಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ತುಂಬಿದ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ (Cylinder Lorry) ರಸ್ತೆ ಪಕ್ಕಕ್ಕೆ ಪಲ್ಟಿಯಾಗಿರುವ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಇದನ್ನೂ ಓದಿ: ಮತ್ತೆ ವಿಜಯ್ ದೇವರಕೊಂಡಗೆ ರಶ್ಮಿಕಾ ಮಂದಣ್ಣ ಜೋಡಿ?

    ಟೈಲ್ಸ್ ಹೊತ್ತೊಯ್ಯುತ್ತಿದ್ದ ಲಾರಿ, ಕಾಂಕ್ರೀಟ್ ಮಿಕ್ಸ್ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಗಳ ಮಧ್ಯೆ ಸರಣಿ ಅಪಘಾತವಾಗಿದೆ. ಟೈಲ್ಸ್ ಹಾಗೂ ಕಾಂಕ್ರೀಟ್ ಮಿಕ್ಸ್ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಹಿಂದೆ ಬರುತ್ತಿದ್ದ ಸಿಲಿಂಡರ್ ಲಾರಿಯು ಟೈಲ್ಸ್ ಲಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಇದನ್ನೂ ಓದಿ: ರೋಚಕ ಪಂದ್ಯದಲ್ಲಿ ಕೆಕೆಆರ್‌ಗೆ 1 ರನ್‌ ಜಯ, ಪ್ಲೇ ಆಫ್‌ ಕನಸು ಜೀವಂತ – ಹೋರಾಡಿ ಸೋತ ರಾಜಸ್ಥಾನ್‌

    ಲಾರಿಯಲ್ಲಿ ಗ್ಯಾಸ್ ತುಂಬಿದ ಸಿಲಿಂಡರ್ ಇದ್ದ ಕಾರಣ ಸ್ಥಳದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಲಾರಿಯನ್ನು ಮೇಲೆತ್ತುವ ಕೆಲಸ ಮಾಡಿದರು. ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.