Tag: ಧಾರವಾಡ

  • ಮತ್ತೆ ಸುದ್ದಿಯಲ್ಲಿದೆ ಧಾರವಾಡ ಕರ್ನಾಟಕ ವಿವಿ- ಸುಳ್ಳು ಲೆಕ್ಕ ತೋರಿಸಿದ್ರಾ ಕುಲಪತಿ ಕೆ.ಬಿ ಗುಡಸಿ..?

    ಮತ್ತೆ ಸುದ್ದಿಯಲ್ಲಿದೆ ಧಾರವಾಡ ಕರ್ನಾಟಕ ವಿವಿ- ಸುಳ್ಳು ಲೆಕ್ಕ ತೋರಿಸಿದ್ರಾ ಕುಲಪತಿ ಕೆ.ಬಿ ಗುಡಸಿ..?

    ಧಾರವಾಡ: ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳು ಮಾಡಿದ್ದೇ ದರ್ಬಾರ್ ಆಗಿದೆ. ಇಂಥದ್ದೇ ಒಂದು ಕಾಂಡ ಧಾರವಾಡದ ಕರ್ನಾಟಕ ವಿವಿಯಲ್ಲಿ ನಡೆದಿದೆ. ಈ ವಿವಿಯ ಕುಲಪತಿಗಳು ಇಲ್ಲಿಗೆ ಬಂದ ನಂತರ ಬೇಕಾಬಿಟ್ಟಿ ಬಿಲ್ ಹಚ್ಚಿ ಹಣ ಹೊಡೆಯುತ್ತಿರುವುದು ಬೆಳಕಿಗೆ ಬಂದಿದೆ.

    ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ವಿರುದ್ಧ ದುಂದುವೆಚ್ಚ ಆರೋಪ ಕೇಳಿಬಂದಿದೆ. ಆರ್‍ಟಿಐ ಮಾಹಿತಿ ಪ್ರಕಾರ ಕುಲಪತಿ ಕೆ.ಬಿ ಗುಡಸಿ ಅಧಿಕಾರಕ್ಕೆ ಬಂದು ವರ್ಷವಾಗ್ತಿದೆ. ಅಷ್ಟರಲ್ಲೇ ಕರ್ನಾಟಕ ವಿವಿಯ ಬಂಗಲೆಗೂ ಶಿಫ್ಟ್ ಆಗಿದ್ದಾರೆ. ಆದರೆ ಅಲ್ಲಿಗೆ ಬಂದ್ಮೇಲೆ ಅವರು ಆ ಮನೆಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಇದನು ಟೆಂಡರ್ ಕರೆಯದೇ ತುಂಡು ಗುತ್ತಿಗೆ ನೀಡಿದ್ದಾರೆ. ಕಾಮಗಾರಿಯಲ್ಲಿ ಕಿಟಕಿಯ ಕರ್ಟನ್, ಹೊಸ ಕಾಟು, ತಲೆದಿಂಬು ಸೇರಿ ಬರೋಬ್ಬರಿ 33 ಲಕ್ಷ ಖರ್ಚು ಮಾಡಿರುವುದಾಗಿ ಮಾಹಿತಿ ಸಿಕ್ಕಿದೆ. ಅದು ಹೇಗೆ ಎಂದು ಗೊತ್ತಾಗಬೇಕು. ಈ ಹಣದಲ್ಲಿ ಹೊಸ ಬಂಗಲೆಯನ್ನೇ ಕಟ್ಟಬಹುದಿತ್ತು ಎಂದು ಆರೋಪಿಸಲಾಗ್ತಿದೆ. ಇದನ್ನೂ ಓದಿ: ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಈ ವಿಚಾರ ರಾಜ್ಯಪಾಲರ ಗಮನಕ್ಕೂ ತರಲಾಗಿದೆ. ಇನ್ನು ಈ ಹಿಂದೆ ಇದ್ದ ಕುಲಪತಿ ವಾಲಿಕಾರ್ 7 ಲಕ್ಷ ರೂಪಾಯಿನಷ್ಟು ಖರ್ಚು ಮಾಡಿದ್ದಾರೆ. ತದನಂತರ ಪ್ರಮೋದ್ ಗಾಯ್ ಇದ್ದಾಗಲೂ 9 ಲಕ್ಷ ಖರ್ಚು ಮಾಡಿದ್ದಾರೆ. ಈ ಲೆಕ್ಕದಂತೆಯೇ ಹೋದರೆ ಈ ಬಂಗಲೆಗೆ 10 ವರ್ಷಗಳಲ್ಲಿ 60 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಲಾಗಿದೆ. ಆದರೆ ಸರ್ಕಾರದ ಉನ್ನತ ಶಿಕ್ಷಣ ಸಚಿವರಿಗೆ ಈ ಬಗ್ಗೆ ಕೇಳಿದರೆ, ನನ್ನ ವ್ಯಾಪ್ತಿಗೆ ಬರಲ್ಲ ಅಂತಾರೆ. 10 ಕೋಟಿ ಟೆಂಡರ್ ಮಾತ್ರ ಇವರಿಗೆ ಸಂಬಂಧ ಅಂತೆ.

    ಒಟ್ಟಿನಲ್ಲಿ ಇಲ್ಲಿ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತಾಗಿದೆ. ಸರ್ಕಾರಕ್ಕೆ ಜನರ ದುಡ್ಡಿನ ಮೇಲೆ ಅಷ್ಟೇ ಕಾಳಜಿ ಇದ್ದರೆ, ಇಂಥವರಿಗೆ ಮೂಗುದಾರ ಹಾಕಬೇಕು. ಇಲ್ಲದಿದ್ದರೆ ಜನರ ದುಡ್ಡು ನೀರಿನಲ್ಲಿ ಹೋಮದಂತೆ ಖರ್ಚಾಗುವುದರಲ್ಲಿ ಅನುಮಾನ ಇಲ್ಲ.

  • ಹೋಳಿ ಹಬ್ಬ – ಧಾರವಾಡದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ

    ಹೋಳಿ ಹಬ್ಬ – ಧಾರವಾಡದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ

    ಧಾರವಾಡ: ಜಿಲ್ಲೆಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಮಾರ್ಚ್ 17 ರಿಂದ 21 ರವರೆಗೆ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

    ನಗರದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್ 17 ರಿಂದ 20 ರವರೆಗೆ ಧಾರವಾಡ ಗ್ರಾಮೀಣ ತಾಲ್ಲೂಕು, ಹುಬ್ಬಳ್ಳಿ ಗ್ರಾಮೀಣ ತಾಲೂಕು, ನವಲಗುಂದ ತಾಲ್ಲೂಕು, ಅಣ್ಣಿಗೇರಿ ತಾಲ್ಲೂಕು, ಅಳ್ನಾವರ, ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮಗಳಲ್ಲಿ ನಿಷೇಧಿಲಾಗಿದೆ. ಇದನ್ನೂ ಓದಿ: ನಾಯಕರಷ್ಟೇ ನಮಗೂ ಸಮಾನ ಅವಕಾಶ ಬೇಕು: ಕೃತಿ ಸನೋನ್

    ಮಾರ್ಚ್ 16 ರಿಂದ 19 ರವರೆಗೆ ಕುಂದಗೋಳ ತಾಲೂಕು, ಅಳ್ನಾವರ ತಾಲೂಕು, ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಗ್ರಾಮಗಳಾದ ಸುಳ್ಳ ಮತ್ತು ಕಿರೇಸೂರು ಗ್ರಾಮಗಳಲ್ಲಿ, ಮಾರ್ಚ್ 19 ರಿಂದ 22 ರವರೆಗೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಮಿಸ್ ವರ್ಲ್ಡ್ 2021: ಭಾರತೀಯ ಮೂಲದ ಶ್ರೀಸೈನಿ ರನ್ನರ್ ಅಪ್, ಕರೋಲಿನಾ ಬಿಲಾವ್ಸ್ಕಾಗೆ ‘ವಿಶ್ವ ಸುಂದರಿ’ ಕಿರೀಟ

  • ಮದುವೆಯಾಗುವಂತೆ ಗ್ರಾಮ ಪಂಚಾಯ್ತಿ ಸದಸ್ಯನ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಮದುವೆಯಾಗುವಂತೆ ಗ್ರಾಮ ಪಂಚಾಯ್ತಿ ಸದಸ್ಯನ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಧಾರವಾಡ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಗ್ರಾಮ ಪಂಚಾಯತಿ ಸದಸ್ಯನೋರ್ವ ಕಿರುಕುಳ ನೀಡಿದ್ದನು. ಈ ಹಿನ್ನೆಲೆ ಯುವತಿ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಬೊಗೂರ ಗ್ರಾಮದಲ್ಲಿ ನಡೆದಿದೆ.

    ಸರಸ್ವತಿ ಅಜ್ಜನರ(20) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಮಲ್ಲಪ್ಪ ಮಾಳವಾಡ ಕಿರುಕುಳ ಕೊಟ್ಟ ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು, ಮುಂದಿನ ಒಂದು ತಿಂಗಳಲ್ಲಿ ಸರಸ್ವತಿ ಮದುವೆ ನಡೆಯಬೇಕಿತ್ತು. ಆದರೆ ತನ್ನನ್ನು ಮದುವೆಯಾಗುವಂತೆ ಗ್ರಾಪಂ ಮಲ್ಲಪ್ಪ, ಸರಸ್ವತಿಗೆ ಕಿರುಕುಳ ನೀಡುತ್ತಿದ್ದ. ಇದನ್ನೂ ಓದಿ: ನರಬಲಿಗಾಗಿ 7 ವರ್ಷದ ಕಂದಮ್ಮ ಅಪಹರಣ – ಇಬ್ಬರು ಅರೆಸ್ಟ್

    ಕಿರುಕುಳದಿಂದ ಬೇಸತ್ತ ಸರಸ್ವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಸ್ತುತ ಯುವತಿಯನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬದವರು ನಿರ್ಧಾರ ಮಾಡಿದ್ದಾರೆ.

    ಯುವತಿ ಆತ್ಮಹತ್ಯೆಗೆ ಯತ್ನಿಸಿದ ನಂತರ ಪೊಲೀಸರು ದೂರು ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ಪೆÇೀಷಕರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: CFI ಅಧ್ಯಕ್ಷ ಅತಾವುಲ್ಲಾ ಮೇಲೆ ಕೇಸ್ ದಾಖಲಿಸಲು AG ಅನುಮತಿ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

  • CFI ಅಧ್ಯಕ್ಷ ಅತಾವುಲ್ಲಾ ಮೇಲೆ ಕೇಸ್ ದಾಖಲಿಸಲು AG ಅನುಮತಿ ಕೇಳಿದ್ದೇನೆ: ಮುತಾಲಿಕ್

    CFI ಅಧ್ಯಕ್ಷ ಅತಾವುಲ್ಲಾ ಮೇಲೆ ಕೇಸ್ ದಾಖಲಿಸಲು AG ಅನುಮತಿ ಕೇಳಿದ್ದೇನೆ: ಮುತಾಲಿಕ್

    ಧಾರವಾಡ: ನಿನ್ನೆ ಹಿಜಬ್ ಕುರಿತು ನ್ಯಾಯಾಲಯ ಐತಿಹಾಸಿಕ ತೀರ್ಪನ್ನು ನೀಡಿತು. ಆದರೆ ಈ ತೀರ್ಪಿನ ಕುರಿತು ಕೆಲವರು ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ನಿನ್ನೆ 6 ವಿದ್ಯಾರ್ಥಿನಿಯರು ಹೈ-ಕೋರ್ಟ್ ಆದೇಶವನ್ನು ಗೌರವಿಸದೇ ಅಗೌರವವಾಗಿ ನಡೆದುಕೊಂಡಿದ್ದಾರೆ. ಸಿಎಫ್‍ಐ ಅಧ್ಯಕ್ಷ ಅತಾವುಲ್ಲಾ ನಿನ್ನೆಯ ಹಿಜಬ್ ಹೈಕೋರ್ಟ್ ಆದೇಶವನ್ನು ಅಸಂವಿಧಾನಿಕ ಎಂದು ಹೇಳುವ ಮೂಲಕ ಕೊರ್ಟ್‍ಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ನ್ಯಾಯಾಲಯ ಇರುವುದೇ ಸಂವಿಧಾನದ ಮೇಲೆ. ಈ ರೀತಿಯ ಹೇಳಿಕೆ ಸರಿಯಲ್ಲ. ನಾವು ಅತಾವುಲ್ಲಾ ಅವರ ಮೇಲೆ ನ್ಯಾಯಾಂಗ ನಿಂದನೆ ಕೇಸ್ ಹಾಕಲು ಎಜಿ ಅವರಿಗೆ ಅನುಮತಿ ಕೇಳಿದ್ದೇವೆ. ಧಾರವಾಡ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಎಜಿ(ಸಹಾಯಕ ನಿರ್ದೇಶಕಿ) ವಿದ್ಯಾವತಿ ಅವರಿಗೆ ಮನವಿ ನೀಡಿದ್ದೇವೆ ಎಂದ ಅವರು, ಮೇಲಾಧಿಕಾರಿ ಕೇಳಿ ಕೇಸ್ ಬಗ್ಗೆ ತಿಳಿಸ್ತಾರೆ ಎಂದು ವಿವರಿದರು.

    ಅರ್ಜಿದಾರರು ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ಅದಕ್ಕೆ ಈ ರೀತಿ ಮಾತನಾಡಿದವರ ಮೇಲೆ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಬೇಕು. ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಅನುಮತಿ ಬೇಕು ಎಂದು ಕೇಳಿದರು. ಇದನ್ನೂ ಓದಿ: ಕರೀನಾ ಕಪೂರ್ ಕಮ್ ಬ್ಯಾಕ್ – ಜಪಾನಿ ಲೇಖಕನ ಕೃತಿಗೆ ಮಿಲ್ಕಿ ಬ್ಯೂಟಿ ಹೀರೋಯಿನ್

  • ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು

    ಧಾರವಾಡ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಎಫ್‍ಐಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.

    ಏನಿದು ಪ್ರಕರಣ:
    ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ವಾಲ್ಮೀಕಿ ಮಹಾಸಭಾ ನಡುವೆ ಇರುವ ವಿವಾದಕ್ಕೆ ಸಂಬಂಧಿಸಿದಂತೆ ಮುಗದ ಗ್ರಾಮದಲ್ಲಿ ಗಲಾಟೆಯೊಂದು ನಡೆದಿತ್ತು. ಈ ಸಂಬಂಧ ಮೋಹನ್ ಗುಡಸಲಮನಿ ಎನ್ನುವವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಶಿಕ್ಷಕರ ಜೊತೆ ಹೊರಟ್ಟಿಯವರನ್ನು 5ನೇ ಆರೋಪಿಯನ್ನಾಗಿ ಮಾಡಿ ಜನವರಿ 25 ರಂದು ಸತಾರೆ ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಸದನ ಬೀಗರ ಮನೆಯಲ್ಲ – ಸಚಿವರ ಗೈರಿಗೆ ಸಭಾಪತಿಗಳು ಗರಂ

    ಹೊರಟ್ಟಿ ಗಲಾಟೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು. ಆ ಬಳಿಕ ಕಳೆದ ಎರಡು ದಿನಗಳ ಹಿಂದೆ ಮೇಲ್ಮನೆಯಲ್ಲಿ ಈ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಇದೀಗ ಹೊರಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತುಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ- ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಕೇಳಿಬಂದಿತ್ತು. ಈ ವೇಳೆ ಎಸ್‍ಪಿ ಹಾಗೂ ಇನ್ಸ್‌ಪೆಕ್ಟರ್‌ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಗ್ರಹಿಸಿದ್ದರು. ಅಲ್ಲದೆ ಗೃಹ ಸಚಿವ ಆರಗ ಜ್ಞಾನೇಂದ್ರ ಎರಡು ಮೂರು ದಿನದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನೆಲೆ ಇಂದು ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.

  • ಕೋವಿಡ್ ರೋಗಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಮರು ಪಾವತಿಗೆ ಜಿಲ್ಲಾಧಿಕಾರಿ ಆದೇಶ

    ಕೋವಿಡ್ ರೋಗಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಮರು ಪಾವತಿಗೆ ಜಿಲ್ಲಾಧಿಕಾರಿ ಆದೇಶ

    ಧಾರವಾಡ: ಕೋವಿಡ್-19 ಸೋಂಕಿತರಾಗಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದ ಶುಲ್ಕವನ್ನು ಮರುಪಾವತಿಸಲು ಧಾರವಾಡ ಜಿಲ್ಲಾಧಿಕಾರಿ ನಿತೆಶ್ ಪಾಟೀಲ್ ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ.

    ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದ ಶುಲ್ಕದ ಬಗ್ಗೆ ನಿತೇಶ್ ಪಾಟೀಲ್ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ವಿಚಾರಣೆ ನಡೆಸಿ, ವಿವಿಧ ಪ್ರಕರಣಗಳಲ್ಲಿ ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದಿದ್ದ 19 ಲಕ್ಷ ರೂ. ಅನ್ನು ಮರು ಪಾವತಿಸಲು ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಿದ್ದಾರೆ.

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಸಹಾಯವಾಣಿ ಕೇಂದ್ರ ಹಾಗೂ ಲಿಖಿತ ದೂರುಗಳ ಮೂಲಕ ದಾಖಲಾಗಿದ್ದ 80 ಪ್ರಕರಣಗಳನ್ನು ದೂರುದಾರರು ಹಾಗೂ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಸಿ, ಈ ಆದೇಶ ನೀಡಿದರು. ಇದನ್ನೂ ಓದಿ: ಉಕ್ರೇನ್‍ನ ಮರಿಯುಪೋಲ್‍ನಲ್ಲಿ ಅರ್ಧ ಗಂಟೆಗೊಂದು ಬಾಂಬ್ ಸ್ಫೋಟ

    ಕೋವಿಡ್ ಮೊದಲ ಹಾಗೂ ಎರಡನೇ ಅಲೆಗಳ ಸಂದರ್ಭದಲ್ಲಿ ಚಿಕಿತ್ಸೆಗೆ ಸರ್ಕಾರ ನಿಗದಿ ಪಡಿಸಿದ ಪ್ರಮಾಣದಲ್ಲಿ ಶುಲ್ಕ ವಿಧಿಸಲು ಸೂಚಿಸಲಾಗಿತ್ತು. ಕೋವಿಡ್ ರೋಗಿ ದಾಖಲಾದ ಬಳಿಕ ಅವರಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ನಿರ್ದೇಶನ ನೀಡಲಾಗಿತ್ತು. ಕೆಲವು ಆಸ್ಪತ್ರೆಗಳಲ್ಲಿ ಎರಡೂ ಕಡೆಗಳಿಂದಲೂ ಹಣ ಪಡೆಯಲಾಗಿದೆ. ಇದನ್ನೂ ಓದಿ: ಬ್ರಿಟಿಷ್ ಕೌನ್ಸಿಲ್ ಜೊತೆ 3 ವರ್ಷಗಳ ಒಪ್ಪಂದಕ್ಕೆ ಉನ್ನತ ಶಿಕ್ಷಣ ಇಲಾಖೆ ಅಂಕಿತ

    ಈ ಪ್ರಕರಣಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಹುಬ್ಬಳ್ಳಿಯ ರೋಗಿಯೊಬ್ಬರಿಗೆ 4 ಲಕ್ಷ ರೂ., ಸವದತ್ತಿಯ ವ್ಯಕ್ತಿಯೊಬ್ಬರಿಗೆ 92,125 ರೂ. ಹಾಗೂ ಮತ್ತೊಂದು ಪ್ರಕರಣದಲ್ಲಿ 25 ಸಾವಿರ ರೂ. ಅನ್ನು ಮರು ಪಾವತಿಸಲು ಸೂಚಿಸಿದರು. ಖಾಸಗಿ ಆಸ್ಪತ್ರೆಯೊಂದು ಸ್ವಯಂಪ್ರೇರಿತವಾಗಿ 43 ಪ್ರಕರಣಗಳಲ್ಲಿ 14 ಲಕ್ಷ ರೂ. ಪಾವತಿಸಿರುವುದಾಗಿ ಸಭೆಗೆ ಮಾಹಿತಿ ನೀಡಿದಾಗ ಜಿಲ್ಲಾಧಿಕಾರಿಗಳು ಅವರ ಕಾರ್ಯವನ್ನು ಅಭಿನಂದಿಸಿದರು.

  • ಕಾರ್ ಪಾರ್ಕಿಂಗ್ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ

    ಕಾರ್ ಪಾರ್ಕಿಂಗ್ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ

    ಧಾರವಾಡ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಹತ್ತಿರ ನಡೆದಿದೆ.

    ಕಳೆದ ಸುಮಾರು ದಿನಗಳಿಂದ ಉಣಕಲ್ ಭಾಗದಲ್ಲಿ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಜನರು ದಿನವೂ ಹೊಡೆದಾಡುವ ಪ್ರಸಂಗಗಳು ಗೋಚರಿಸುತ್ತವೆ. ಸಾರ್ವಜನಿಕರೊಬ್ಬರು ರಸ್ತೆ ಮುಂದಿನ ಮನೆಯ ಮುಂದೆ ಕಾರ್ ಪಾರ್ಕ್ ಮಾಡಿ ಹೋಟೆಲ್‌ಗೆ ಹೋಗಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ಈ ವೇಳೆ ಇದಕ್ಕೆ ಕೋಪಗೊಂಡ ಮನೆಯವರು ಕಾರಿನ ಗ್ಲಾಸ್ ಒಡೆದು ಕಾರ್ ಚಾಲಕನಿಗೆ ಹೊಡೆದಿದ್ದಾರೆ. ಬಳಿಕ ಕಾರ್ ಚಾಲಕ ಪುನಃ ತನ್ನ ಸ್ನೇಹಿತರ ಜೊತೆಗೆ ಬಂದು ಜಗಳ ತಗೆದಿದ್ದಾನೆ. ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ ದೊಣ್ಣೆಯಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ

  • ರಾಡ್‍ನಿಂದ ಹೊಡೆದು ಪತ್ನಿಯ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು

    ರಾಡ್‍ನಿಂದ ಹೊಡೆದು ಪತ್ನಿಯ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು

    ಧಾರವಾಡ: ಪತ್ನಿಯನ್ನು ಕೊಲೆ ಮಾಡಿ ಪತಿ ಕೂಡ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ.

    ನಗರದ ಹೊರವಲಯದ ಗಣೇಶನಗರದಲ್ಲಿ ಈ ಘಟನೆ ನಡೆದಿದ್ದು, ಚಟ್ಟು ತನ್ನ ಪತ್ನಿ ಮನಿಷಾಳನ್ನು ಹತ್ಯೆಗೈದು ನೇಣಿಗೆ ಶರಣಾಗಿದ್ದಾನೆ. ಕಳೆದ ರಾತ್ರಿ ಇದೇ ಬಡಾವಣೆಯ ತನ್ನ ತಾಯಿಯ ಮನೆಯಲ್ಲಿ ಇದ್ದ ಮನಿಷಾ, ಪತಿಗೆ ಊಟ ಕೊಡಲು ಬಂದು, ಪತಿಯ ಮನೆಯಲ್ಲಿಯೇ ಮಲಗಿದ್ದಳು. ರಾತ್ರಿ ಕುಡಿದು ಪತ್ನಿಯ ಜೊತೆ ಜಗಳ ಮಾಡಿದ ಚಟ್ಟು, ಪತ್ನಿ ಮಲಗಿದ್ದಾಗ ಕಬ್ಬಿಣದ ರಾಡ್‍ನಿಂದ ಹೊಡೆದು ಕೊಲೆ ಮಾಡಿ, ನಂತರ ತಾನು ಕೂಡ ನೇಣು ಹಾಕಿಕೊಂಡಿದ್ದಾನೆ. ಇದನ್ನೂ ಓದಿ: ಯುಪಿ ಚುನಾವಣಾ ಫಲಿತಾಂಶ ನಮಗೊಂದು ಪಾಠ: ಮಾಯಾವತಿ

    POLICE JEEP

    ಕಳೆದ ಮೂರು ದಿನಗಳ ಹಿಂದೆ ಕೂಡಾ ಚಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಆದರೆ ಪತ್ನಿ ಇದನ್ನು ತಡೆದಿದ್ದಳು. ಗೋವಾದಲ್ಲಿ ಪೈಪ್ ಲೈನ್ ಕೆಲಸ ಮಾಡುತಿದ್ದ ಚಟ್ಟು ಕಳೆದ ವಾರವಷ್ಟೇ ಧಾರವಾಡಕ್ಕೆ ಬಂದಿದ್ದ. ಈ ದಂಪತಿಗೆ ಇಬ್ಬರು ಮಕ್ಕಳು ಕೂಡಾ ಇದ್ದಾರೆ. ಸದ್ಯ ಉಪನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಶ್ವ ಮಹಿಳಾ ದಿನಾಚರಣೆ – ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕರಿಗೆ ಗೌರವ


    Husband, wife, policeman, Dharwad

  • ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಧಾರವಾಡ: ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು.

    ಪಂಚ ರಾಜ್ಯ ಚುನಾವಣೆಯ ಮತ ಏಣಿಕೆಯಲ್ಲಿ ಪಂಜಾಬ್‍ನಲ್ಲಿ ಆಮ್ ಆದ್ಮಿ ಮುನ್ನಡೆ ಸಾಧಿಸಿದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ದೆಹಲಿಯಂತಹ ಸಿಟಿಯಲ್ಲಿ ರಾಜಕೀಯ ಮಾಡಿದೆ. ಅದು ಕೂಡಾ ನಮ್ಮ ರಾಜಧಾನಿ ಬೆಂಗಳೂರಿನಂತಹ ಸಿಟಿ ಇದ್ದ ಹಾಗೇ ಎಂದು ಹೇಳಿದರು.

    ಉಚಿತ ವಿದ್ಯುತ್, ಶಾಲೆ, ಮೌಲಾ ಕ್ಲಿನ್ ಮಾಡಿದ್ದೇವೆ ಎಂದು ಆಪ್ ನವರು ಹೇಳುತ್ತಾರೆ. ಅದೆಲ್ಲವೂ ನಗರ ಪ್ರದೇಶದಲ್ಲಿ ನಡೆದಿರುವುದು. ಪಂಜಾಬ್‍ದಂತಹ ರಾಜ್ಯದಲ್ಲಿ ಅವರಿಗೆ ಪ್ರಾರಂಭ ಅಷ್ಟೇ. ಸರ್ಕಾರ ಬಂದರೂ ಅದು ಒಂದೇ ಸರ್ಕಾರದಲ್ಲಿ ಕೊನೆಯಾಗುತ್ತದೆ. ಪ್ರಾರಂಭವೇ ಅವರಿಗೆ ಕೊನೆ ಆಗುತ್ತದೆ ಎಂದರು.

    ಆಮ್ ಆದ್ಮಿ ಅಂತ ಪಕ್ಷಗಳು ಅಲ್ಲಿ ನೆಲ ಊರಲು ಸಾಧ್ಯವಿಲ್ಲ. ಇಂತಹ ಪಕ್ಷಗಳು ಬರುತ್ತವೆ, ಹೋಗುತ್ತವೆ, ಆ ಪಕ್ಷಕ್ಕೆ ಮಾನ್ಯತೆ ಕೊಡುವ ಅವಶ್ಯಕತೆ ಇಲ್ಲ. ಈ ಪಕ್ಷಕ್ಕೆ ಭವಿಷ್ಯವಿಲ್ಲ, ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ, ಸಣ್ಣ ಮಟ್ಟದಲ್ಲಿ ನಗರದ ಪ್ರದೇಶದಲ್ಲಿ ಕೆಲಸ ಮಾಡಿದೆಯಷ್ಟೇ ಎಂದು ವ್ಯಂಗ್ಯವಾಡಿದರು.

  • ಪಂಚರಾಜ್ಯ ಚುನಾವಣೆಯಲ್ಲಿ ನಾವು ಫೋರ್ ಹೊಡೆಯುತ್ತೇವೆ: ಅಶ್ವಥ್ ನಾರಾಯಣ

    ಪಂಚರಾಜ್ಯ ಚುನಾವಣೆಯಲ್ಲಿ ನಾವು ಫೋರ್ ಹೊಡೆಯುತ್ತೇವೆ: ಅಶ್ವಥ್ ನಾರಾಯಣ

    ಧಾರವಾಡ: ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ನಾವು ಖಂಡಿತ ಫೋರ್ ಹೊಡೆಯುತ್ತೆವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ರಾಜ್ಯದಲ್ಲಿ ನಾಲ್ಕು ರಾಜ್ಯದ ಫಲಿತಾಂಶದ ಭರವಸೆ ಇದೆ. ನಾಲ್ಕು ರಾಜ್ಯದಲ್ಲಿ ನಮ್ಮ ಸರ್ಕಾರ ಆಗುತ್ತದೆ. ಒಂದು ರಾಜ್ಯದಲ್ಲಿ ಮಾತ್ರ ಹಿನ್ನೆಡೆ ಇದೆ. ಪ್ರತಿಪಕ್ಷ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಲ್ಲರಿಗೂ ಗೊತ್ತಿದೆ. ಅದು ರಾಷ್ಟ್ರೀಯ ಪಕ್ಷದ ಸ್ವರೂಪವನ್ನೇ ಕಳೆದುಕೊಂಡಿದೆ ಎಂದರು. ಇದನ್ನೂ ಓದಿ: ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್‌, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ

    ಜನ ಸಹ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿಲ್ಲ. ನಮ್ಮ ರಾಜ್ಯದಲ್ಲಿಯೂ ಕಾಂಗ್ರೆಸ್ ಇರುವುದಿಲ್ಲ. 2023ಕ್ಕೆ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಪಂಜಾಬ್‍ನಲ್ಲಿ ನಮ್ಮದು ಪಾಲ್ಗೊಳ್ಳುವಿಕೆ ಹೆಚ್ಚಿರಲಿಲ್ಲ, ಅಲ್ಲಿನ ಜನಾಭಿಪ್ರಾಯ ಸ್ವೀಕರಿಸುತ್ತೇವೆ. ಮುಂದಿನ ದಿನಗಳಲ್ಲಿಯೂ ಪಂಜಾಬ್ ಸಹ ಪಡೆಯುತ್ತೇವೆ ಎಂದು ಹೇಳಿದರು ಇದನ್ನೂ ಓದಿ: ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ