Tag: ಧಾರವಾಡ

  • ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: ಸಿದ್ದರಾಮಯ್ಯ

    ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: ಸಿದ್ದರಾಮಯ್ಯ

    ಬೆಂಗಳೂರು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ತಿಳಿಸಿದರು.

    ರಾಜ್ಯ ಎನ್‌ಎಸ್‌ಎಸ್ (NSS) ಕೋಶ, ಯುವ ಸಬಲೀಕರಣ, ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧದ ಬಾಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜಲಾಶಯ ಭರ್ತಿಗೆ ಅಧಿಕಾರಿಗಳ ಹಿಂದೇಟು

    ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು. ಇದನ್ನೂ ಓದಿ: ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಹೆಬ್ಬಾಳ್ಕರ್

    ವಿಶ್ವ ಆರೋಗ್ಯ ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದು ಹೇಳಿದರು. ಇದನ್ನೂ ಓದಿ: Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು (Bengaluru), ಮಂಗಳೂರು(Mangaluru) , ಮೈಸೂರು (Mysuru), ಹುಬ್ಬಳ್ಳಿ ಧಾರವಾಡದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು. ಇದನ್ನೂ ಓದಿ: 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

    ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: ಕೋಲಾರ| ಮಳೆ, ಚಳಿಯನ್ನೂ ಲೆಕ್ಕಿಸದೇ ಚಿಕನ್ ಬಿರಿಯಾನಿಗಾಗಿ ಮುಗಿಬಿದ್ದ ಜನ

  • ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಹೆಬ್ಬಾಳ್ಕರ್

    ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಹೆಬ್ಬಾಳ್ಕರ್

    ಬೆಳಗಾವಿ: ಉತ್ತಮ ಮಳೆಯಿಂದ ಮಲಪ್ರಭಾ ಜಲಾಶಯ ಮಟ್ಟ ಸಂಪೂರ್ಣ ಭರ್ತಿಯಾಗಿದ್ದು, ಪ್ರತಿವರ್ಷದಂತೆ ಹುಬ್ಬಳ್ಳಿ (Hubballi), ಧಾರವಾಡ (Dharawada) ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar ) ಅವರು ಹೇಳಿದರು.

    ಮಲಪ್ರಭಾ ನೀರಾವರಿ ಸಲಹಾ ಸಮಿತಿ ವತಿಯಿಂದ ನವಿಲುತೀರ್ಥ ಅಣೆಕಟ್ಟು ಸ್ಥಳದಲ್ಲಿ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವಿಲುತೀರ್ಥ ಡ್ಯಾಂ ಉತ್ತರ ಕರ್ನಾಟಕದ ರೈತರ ಜೀವವಾಗಿರುವ ‘ಮಲಪ್ರಭಾ ಜಲಾಶಯ’ ಭರ್ತಿಯಾಗಿದೆ. ಈ ಶುಭ ಸಂದರ್ಭದಲ್ಲಿ ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ ‘ಬಾಗಿನ ಅರ್ಪಣೆ’ ಸಲ್ಲಿಸುವುದು ನಮ್ಮ ಭಾಗ್ಯ ಎಂದು ಹೇಳಿದರು. ಇದನ್ನೂ ಓದಿ: Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

    ವರುಣನ ಕೃಪೆ, ತಾಯಿ ರೇಣುಕಾ ಯಲ್ಲಮ್ಮ ಅನುಗ್ರಹದಿಂದ ಮಲಪ್ರಭಾ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೆವು. ಆದರೂ ಶಕ್ತಿ ಮೀರಿ ರೈತರನ್ನು ಕಾಪಾಡುವ ಕೆಲಸ ಮಾಡಿದ್ದೇವೆ. ಈಗ ಮಲಪ್ರಭಾ ತಾಯಿಯ ಕೃಪೆ ನಮಗೆ ಸಿಕ್ಕಿದೆ. ಬೇಸಿಗೆ ಕಾಲದಲ್ಲಿ ಬಾದಾಮಿ, ರಾಮದುರ್ಗ, ನವಲಗುಂದ ತಾಲೂಕುಗಳ ಜೊತೆಗೆ ಮಲಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೂ ನೀರು ಬಿಡುಗಡೆಗೆ ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡಲಾಗಿದೆ. ಈ ಭಾಗದ ಶಾಸಕರ ಆಶಯದಂತೆ ಮುಂದಿನ ದಿನಗಳಲ್ಲಿ ಉದ್ಯಾನವನ, ವೀಕ್ಷಕರಿಗೆ ಆಸನ ಸೇರಿದಂತೆ ಜಲಾಶಯ ಅಭಿವೃದ್ಧಿಪಡಿಸಿ ಕೆಆರ್‌ಎಸ್ ಮಾದರಿಯಲ್ಲಿ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

    ಕೆಆರ್‌ಎಸ್, ಆಲಮಟ್ಟಿ ಅಣೆಕಟ್ಟುಗಳು ಮಾದರಿಯಲ್ಲಿ ಮಲಪ್ರಭಾ ಜಲಾಶಯದ ಸುತ್ತಮುತ್ತ ಪ್ರದೇಶವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲ ಶಾಸಕರು, ಜನಪ್ರತಿನಿಧಿಗಳು ಶ್ರಮ ವಹಿಸಲಿದ್ದಾರೆ. ನಾಲ್ಕು ಜಿಲ್ಲೆಯ 13 ತಾಲೂಕುಗಳ ಜನರು ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ಈ ಜಲಾಶಯದ ಅವಲಂಬಿತರಾಗಿದ್ದಾರೆ. ಈಗ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜನರು ಸಂತಸದಲ್ಲಿದ್ದಾರೆ ಎಂದು ನವಲಗುಂದ ಶಾಸಕ ಎನ್.ಹೆಚ್. ಕೋನರೆಡ್ಡಿ ಅವರು ಹೇಳಿದರು. ಇದನ್ನೂ ಓದಿ: ಕೋಲಾರ| ಮಳೆ, ಚಳಿಯನ್ನೂ ಲೆಕ್ಕಿಸದೇ ಚಿಕನ್ ಬಿರಿಯಾನಿಗಾಗಿ ಮುಗಿಬಿದ್ದ ಜನ

    ಮಲಪ್ರಭೆಯ ಇಂದಿರಾ ಗಾಂಧಿ ಜಲಾಶಯ ತುಂಬಿ ಹರಿಯುತ್ತಿದ್ದು, ಇದು ಎಲ್ಲರೂ ಸಂತಸ ಪಡುವ ವಿಷಯವಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಭಾಗದ ರೈತರಿಗೆ, ದನಕರುಗಳಿಗೆ ಕುಡಿಯುವ ನೀರಿನ ಯಾವುದೇ ಅಡೆತಡೆ ಇಲ್ಲ. ಸರ್ಕಾರದಿಂದ ಜಲಾಶಯದ ಇನ್ನಷ್ಟು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಸವದತ್ತಿ ವಿಧಾನಸಭಾ ಮತಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಅವರು ತಿಳಿಸಿದರು. ಇದನ್ನೂ ಓದಿ: ಭ್ರಷ್ಟ ಸರ್ಕಾರವನ್ನ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

    ಬಾದಾಮಿ ಶಾಸಕ ಚಿಮ್ಮನಕಟ್ಟಿ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸಭೆಯ ಸದಸ್ಯರು, ಮಲಪ್ರಭಾ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ನವಿಲುತೀರ್ಥ ವೃತ್ತದ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ, ನೀರಾವರಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹಾಡಹಗಲೇ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ

  • ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ

    ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದು ಸರಿಯಾಗಿದೆ: ಮಧು ಬಂಗಾರಪ್ಪ

    ಧಾರವಾಡ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ಸರ್ಕಾರದ ನಿರ್ಧಾರ ಸರಿಯಾಗಿದೆ. ಈ ಕೇಸ್‌ನ್ನು ವಾಪಸ್ ಪಡೆದಿದ್ದು ನಮ್ಮ ಸರ್ಕಾರ. ನಮ್ಮ ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ ಎಂದು ನಾವು ಹೇಳಬೇಕು. ಬಿಜೆಪಿಯವರು (BJP) ಬೇಕಾದರೆ ಪ್ರತಿಭಟನೆ ಮಾಡಿಕೊಳ್ಳಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು.

    ಧಾರವಾಡದಲ್ಲಿ (Dharawada) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಸ್ ವಾಪಸ್ ಪಡೆದಿರುವುದಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡಲಿ ಬೇಡ ಎಂದವರಾರು? ವಕೀಲರು ಕೋರ್ಟ್‌ಗೆ ಹೋಗಲಿ. ಕೋರ್ಟ್ ಇರುವುದೇ ವಿಚಾರಣೆ ಮಾಡುವುದಕ್ಕೆ ಎಂದರು. ಮುಡಾ ವಿಚಾರವಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರು. ಇದೇ ಬಿಜೆಪಿಯವರ ಮೇಲೆ ಎಷ್ಟು ಎಫ್‌ಐಆರ್ ಆಗಿದೆ ನೋಡಿಕೊಳ್ಳಲಿ. ಕೇಂದ್ರ ಸಚಿವರುಗಳ ಮೇಲೆ ಶೇ.39 ರಷ್ಟು ಕೇಸ್‌ಗಳು ಇವೆ. ಅವರನ್ನು ಒಳಗೆ ಹಾಕಬೇಕಿತ್ತು. ಅವರಿಂದ ರಾಜೀನಾಮೆ ಕೇಳಬೇಕಿತ್ತು ಎಂದರು. ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಕ್ರಮ: ಸಿದ್ದರಾಮಯ್ಯ

    ಯಾರು ಮುಡಾ ವಿಚಾರವಾಗಿ ಪಾದಯಾತ್ರೆ ಮಾಡಿದ್ದಾರೋ ಅವರು ತಮ್ಮ ಎಲೆಕ್ಷನ್ ಅಫಿಡವಿಟ್ ತೆರೆದು ನೋಡಿಕೊಳ್ಳಲಿ ಎಂದ ಅವರು, ನಮ್ಮ ದೇಶದಲ್ಲಿ ಕಾನೂನು ಇದೆ. ಕಾನೂನು ರಕ್ಷಣೆ ಪಡೆಯುವ ಅಧಿಕಾರ ಎಲ್ಲರಿಗೂ ಇದೆ. ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಇರಲಿ ಯಾವುದೇ ಇರಲಿ ನಮ್ಮ ದೇಶದಲ್ಲಿ ಕಾನೂನು ಗೆಲ್ಲಬೇಕು. ಅದಕ್ಕೆ ಅವಕಾಶ ಕೊಡಬೇಕು ಹಾಗೂ ಅವಕಾಶ ತೆಗೆದುಕೊಳ್ಳಬೇಕು ಎಂದು ನುಡಿದರು. ಇದನ್ನೂ ಓದಿ: ಕಾಡುಗೊಲ್ಲ ಸಮುದಾಯ ಎಸ್ಟಿಗೆ ಸೇರ್ಪಡೆ ವಿಚಾರ – ವಿ.ಸೋಮಣ್ಣ ಭೇಟಿಯಾದ ಟಿಬಿ ಜಯಚಂದ್ರ

    ಎಷ್ಟೋ ಕೇಸ್‌ಗಳಲ್ಲಿ ಅಮಾಯಕರನ್ನು ಒಳಗೆ ಹಾಕಲಾಗಿತ್ತು. ಮನೆ ಹುಡುಕಿಕೊಂಡು ಬಂದು ಕೇಸ್ ಹಾಕಿರುವ ಉದಾಹರಣೆ ಕೂಡ ಇದೆ. ಖರ್ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರೆ ಅದು ಅವರ ದೊಡ್ಡ ಗುಣ. ಅದಕ್ಕೆ ಬಿಜೆಪಿಯವರು ಖುಷಿಯಾಗಬೇಕು. ಅದಕ್ಕೆ ಯಾಕೆ ರಾಜೀನಾಮೆ ಕೇಳಬೇಕು? ಪ್ರೇರಣಾ ಟ್ರಸ್ಟ್ಗೆ ದುಡ್ಡು ಬಂದ ಮೇಲೆಯೇ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದರು. ಯಾಕೆ ಮಾಡಿದ್ದು ಎಂದರೆ ಅವರ ಬಳಿ ವಾಷಿಂಗ್ ಮಶಿನ್ ಇದೆ ಅದರಲ್ಲಿ ಹಾಕಿದ ತಕ್ಷಣ ಎಲ್ಲರೂ ಬೆಳ್ಳಗೆ ಆಗುತ್ತಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: 3 ಕ್ಷೇತ್ರಗಳ ಉಪಚುನಾವಣೆಯನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ: ಸಿಎಂ

    ಅತಿಥಿ ಶಿಕ್ಷಕರು ಹಾಗೂ ಅಡುಗೆ ಸಹಾಯಕರ ವೇತನ ಹೆಚ್ಚಳ ಮಾಡಬೇಕಿದೆ. ಸಿಎಂ (CM Siddaramaiah) ಜೊತೆ ಮಾತನಾಡಿದ್ದೇನೆ. ಶಿಕ್ಷಕರು ಶ್ರಮಪಟ್ಟು ಕೆಲಸ ಮಾಡುತ್ತಾರೆ. ಅವರ ವೇತನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಬರುವ ಉಪಚುನಾವಣೆಯಲ್ಲಿ ಹೈಕಮಾಂಡ್ ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತದೆ. ನಾವು ಹೋಗಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದರು. ಇದನ್ನೂ ಓದಿ: ಮಹಿಷಾಸುರನ ರೀತಿ ನೀವು ಸಂಹಾರ ಆಗ್ತೀರಾ: ಸಿಎಂ ವಿರುದ್ಧ ಈಶ್ವರಪ್ಪ ಕಿಡಿ

  • ವಿನಯ್ ಕುಲಕರ್ಣಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ: ಏಗನಗೌಡರ

    ವಿನಯ್ ಕುಲಕರ್ಣಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ: ಏಗನಗೌಡರ

    ಧಾರವಾಡ: 2022ರ ಕೇಸ್‌ನ್ನು ಈಗ ತೆಗೆದು ಆ ಮೂಲಕ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ (Aravind Eganagoudara) ಹೇಳಿದರು.

    ಈ ಬಗ್ಗೆ ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರು ಧಾರವಾಡ (Dharawada) ಗ್ರಾಮೀಣ ಕ್ಷೇತ್ರದಲ್ಲಿ ಚಕ್ಕಡಿ ರಸ್ತೆ ನಿರ್ಮಿಸುವ ಮೂಲಕ ಮಾದರಿಯಾಗಿದ್ದಾರೆ. ಅವರು ಕ್ಷೇತ್ರದಲ್ಲಿ ಇಲ್ಲದೇ ಹೋದರೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ ಎಂದರು. ಇದನ್ನೂ ಓದಿ: Valmiki Scam | ನಾಗೇಂದ್ರಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರು

    ಮುನಿರತ್ನ ಹಾಗೂ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಬೇರೆ ಬೇರೆಯಾಗಿದೆ. ವಿನಯ್ ಕುಲಕರ್ಣಿ ಅವರ ಅತ್ಯಾಚಾರ ಕೇಸ್ ಬೇರೆಯಾಗಿದೆ. ಇಲ್ಲಿ ಮೊದಲು ವಿನಯ್ ಅವರೇ ತಮಗೆ ಸಾಕಷ್ಟು ತೊಂದರೆ ಕೊಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ. ಈಗಾಗಲೇ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಶಾಸಕ ಅರವಿಂದ ಬೆಲ್ಲದ ಮತ್ತು ಮಾಜಿ ಶಾಸಕ ಅಮೃತ ದೇಸಾಯಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸುತ್ತಿದ್ದಾರೆ. ನಮ್ಮ ನಾಡಿನ ಕಾನೂನಿನ ಬಗ್ಗೆ ಅವರಿಗೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಸಿಎಂ ಅತಿಶಿ

    ಬಿಜೆಪಿಯವರು(BJP) ಸಣ್ಣ ಮಕ್ಕಳು ಜಗಳವಾಡಿದರೂ ಅದನ್ನು ಸಿಬಿಐಗೆ ಕೊಡಿ ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ. ಈಗ ವಿನಯ್ ವಿರುದ್ಧ ಜೀವ ಬೆದರಿಕೆ, ಅತ್ಯಾಚಾರ ಆರೋಪದಡಿ ಪ್ರಕರಣ ರೈತ ಮಹಿಳೆ ನೀಡಿರುವ ದೂರು ದಾಖಲಾಗಿದ್ದು, ಅದರ ಬಗ್ಗೆ ಸಿಐಡಿ ತನಿಖೆ ನಡೆಸುತ್ತದೆ. ಪದೇ ಪದೇ ಈ ರೀತಿಯ ಆರೋಪಗಳನ್ನು ವಿನಯ್ ಕುಲಕರ್ಣಿ ಅವರ ಮೇಲೆ ಮಾಡುತ್ತಲೇ ಬರಲಾಗುತ್ತಿದೆ. ಇದೊಂದು ವ್ಯವಸ್ಥಿತ ಹುನ್ನಾರ. ವಿನಯ್ ಅವರ ಜೊತೆ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಇದ್ದಾರೆ. ಅವರು ಈ ಎಲ್ಲ ಪ್ರಕರಣಗಳಿಂದ ಆರೋಪ ಮುಕ್ತರಾಗಿ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ದರ್ಶನ್‌, ಪವಿತ್ರಾಗೆ ಜೈಲೇಗತಿ – ಜಾಮೀನು ಅರ್ಜಿ ವಜಾ

  • ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್

    ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್

    – ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ನಾಶ

    ಗದಗ/ಧಾರವಾಡ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಬೆಣ್ಣೆಹಳ್ಳ (Bennehalla) ಭೋರ್ಗರೆಯುತ್ತಿದೆ. ರೋಣ ತಾಲೂಕಿನ ಯಾವಗಲ್ ಬಳಿ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಪ್ರವಾಹದಿಂದ (Flood) ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.

    ನರಗುಂದನಿಂದ ಯಾವಗಲ್ ಮಾರ್ಗವಾಗಿ ರೋಣ, ಗಜೇಂದ್ರಗಡ, ಕುಷ್ಟಗಿ ಮಾರ್ಗವಾಗಿ ಸಿಂಧನೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಸೇತುವೆ ಮೇಲ್ಭಾಗದಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದೆ. ಇದರಿಂದ ಕಳೆದ ಮೂರು-ನಾಲ್ಕು ದಿನಗಳಿಂದ ಪ್ರಯಾಣಿಕರು, ರೈತರು ಪರದಾಡುವಂತಾಗಿದೆ. ಜನರು ಹಳ್ಳ ದಾಟದಂತೆ ಭದ್ರತಾ ಸಿಬ್ಬಂದಿಗಳನ್ನು ಸಹ ನೇಮಿಸಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

    1971-72ರಲ್ಲಿ ನಿರ್ಮಾಣವಾದ ಈ ಕಿರಿದಾದ ಸೇತುವೆ ಮೇಲ್ದರ್ಜೆಗೆ ಏರಿಸಬೇಕು. ಬೆಣ್ಣೆಹಳ್ಳ ಒತ್ತುವರಿ ತೆರವುಗೊಳಿಸಬೇಕು. ಪದೇಪದೆ ಪ್ರವಾಹ ಹಾಗೂ ಬೆಳೆ ಹಾನಿ ಆಗುವುದನ್ನು ತಪ್ಪಿಸಬೇಕು ಎಂಬುದು ಈ ಭಾಗದ ಜನರ ಕೂಗಾಗಿದೆ. ಬೆಣ್ಣೆಹಳ್ಳ ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ವೈದ್ಯೆಯ ಯಡವಟ್ಟಿಗೆ ಬಾಣಂತಿ ಬಲಿ!

  • ಗೂಂಡಾಗಿರಿ ಮಾಡಿದವರ ಕೇಸ್‌ನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ: ಜಗದೀಶ್ ಶೆಟ್ಟರ್

    ಗೂಂಡಾಗಿರಿ ಮಾಡಿದವರ ಕೇಸ್‌ನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ: ಜಗದೀಶ್ ಶೆಟ್ಟರ್

    ಧಾರವಾಡ: ಯಾವ ಪ್ರಕರಣ ವಾಪಸ್ ಪಡೆಯಬೇಕು, ಯಾವ ಪ್ರಕರಣ ವಾಪಸ್ ಪಡೆಯಬಾರದು ಎಂಬುದು ಸರ್ಕಾರಕ್ಕೆ ತಿಳಿಯಬೇಕಿತ್ತು. ಗೂಂಡಾಗಿರಿ ಮಾಡಿದವರ ಕೇಸನ್ನು ಈ ಸರ್ಕಾರ ವಾಪಸ್ ಪಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ (Jagadish Shettar) ವಾಗ್ದಾಳಿ ನಡೆಸಿದರು.

    ಹುಬ್ಬಳ್ಳಿ (Hubballi) ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಕೇಸ್ ವಾಪಸ್ ಪಡೆಯುವುದು ಸಹಜ. ರೈತರ ಹೋರಾಟದ ಕೇಸ್‌ಗಳನ್ನು ವಾಪಸ್ ಪಡೆದರೆ ಸರಿ. ಆದರೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದವರ ಕೇಸುಗಳನ್ನು ವಾಪಸ್ ಪಡೆದಿದ್ದು ಸರಿಯಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಬೆಂಬಲ ನೀಡಿದಂತಾಗುತ್ತದೆ ಎಂದರು. ಇದನ್ನೂ ಓದಿ: PUBLiC TV Impact | ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ

    ಈ ಬಗ್ಗೆ ‘ಕೈ’ ಸರ್ಕಾರ ಯೋಚಿಸಬೇಕಿತ್ತು. ಅವರಿಗೆ ಮತ್ತಷ್ಟು ಪ್ರೋತ್ಸಾಹ ಕೊಡಲು ಈ ರೀತಿ ಮಾಡಲಾಗುತ್ತಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಹದಗೆಡುತ್ತದೆ. ಈ ನಿರ್ಧಾರ ಕಾನೂನಿನಡಿ ಎಷ್ಟು ನಿಲ್ಲುತ್ತದೆಯೋ ಗೊತ್ತಿಲ್ಲ. ಕೇಸಿನ ಫೈಲ್ ನೋಡಿದರೆ ಆ ಕೇಸನ್ನು ವಾಪಸ್ ಪಡೆಯಲು ಬರುವುದಿಲ್ಲ. ಆದರೂ ಕ್ಯಾಬಿನೆಟ್‌ನಲ್ಲಿ ಕೇಸ್ ವಾಪಸ್ ಪಡೆಯಲು ಒಪ್ಪಿಗೆ ನೀಡಲಾಗಿದೆ. ಇದು ಕಾನೂನು ಬಾಹಿರ. ಕೋರ್ಟ್‌ನಲ್ಲಿ ಯಾರಾದರೂ ಇದನ್ನು ಪ್ರಶ್ನಿಸಿದರೆ ಸರ್ಕಾರದ ನಿರ್ಧಾರ ಕೋರ್ಟ್‌ನಲ್ಲಿ ನಿಲ್ಲೋದಿಲ್ಲ. ಇದು ಅಲ್ಪಸಂಖ್ಯಾತರ ತುಷ್ಟೀಕರಣ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಎರಡನೇ ದಸರಾ ಖ್ಯಾತಿಯ ಶಿವಮೊಗ್ಗ ದಸರಾಕ್ಕೆ 44ರ ಸಂಭ್ರಮ

    ಈ ಸರ್ಕಾರ ಇಡೀ ಸಮಾಜವನ್ನು ಒಂದಾಗಿ ನೋಡಬೇಕು. ವ್ಯವಸ್ಥೆ ಹದಗೆಡಿಸುವ ರೀತಿಗೆ ಪ್ರೋತ್ಸಾಹ ಕೊಡಬಾರದು. ಈ ಕೆಲಸವನ್ನು ಕಾಂಗ್ರೆಸ್ (Congress) ಮಾಡುತ್ತಿದೆ. ತನ್ನ ರಾಜಕೀಯ ಲಾಭಕ್ಕಾಗಿ ಸರ್ಕಾರ ಈ ರೀತಿ ಮಾಡುತ್ತಿದೆ. ಇದರಿಂದ ಒಳ್ಳೆಯದಾಗುವುದಿಲ್ಲ. ಈ ಪ್ರಕರಣದಲ್ಲಿ ಎಷ್ಟೋ ರೌಡಿಶೀಟರ್‌ಗಳು ಇದ್ದಾರೆ. ಅಮಾಯಕರ ಮೇಲೆ ಹಾಕಲಾಗಿರುವ ರೌಡಿಶೀಟರ್ ಬೇಕಾದರೆ ತೆಗೆಯಲಿ. ಆದರೆ ಗೂಂಡಾಗಿರಿ ಮಾಡಿದವರ ಕೇಸ್ ವಾಪಸ್ ಪಡೆದಿದ್ದು ಸರಿಯಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ – ನಾಳೆ ಏನೆಲ್ಲಾ ವಿಶೇಷತೆ ಇರುತ್ತೆ?

  • ಧಾರವಾಡ| 24 ಗಂಟೆಯಾದ್ರೂ ಬೈಪಾಸ್ ರಸ್ತೆಯಲ್ಲಿ ಕಡಿಮೆಯಾಗದ ನೀರಿನ ಹರಿವು- ಪ್ರಯಾಣಿಕರ ಪರದಾಟ

    ಧಾರವಾಡ| 24 ಗಂಟೆಯಾದ್ರೂ ಬೈಪಾಸ್ ರಸ್ತೆಯಲ್ಲಿ ಕಡಿಮೆಯಾಗದ ನೀರಿನ ಹರಿವು- ಪ್ರಯಾಣಿಕರ ಪರದಾಟ

    ಧಾರವಾಡ: ಧಾರವಾಡದಲ್ಲಿ (Dharawada) ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದ್ದು, ಹುಬ್ಬಳ್ಳಿ (Hubballi) ಧಾರವಾಡ ಬೈಪಾಸ್ ರಸ್ತೆಯಲ್ಲಿ 24 ಗಂಟೆಯಾದರೂ ನೀರಿನ ಪ್ರಮಾಣ ಕಡಿಮೆಯಾಗಲಿಲ್ಲ.

    ರಸ್ತೆ ಮೇಲೆ ನೀರು ಹರಿದು ಬಂದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ಹುಬ್ಬಳ್ಳಿ-ಧಾರವಾಡ ಯರಿಕೊಪ್ಪ ಗ್ರಾಮದ ಬಳಿಯ ಮನಸೂರ ಹಳ್ಳಕ್ಕೆ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ನೀರು ಬಂದಿದೆ. ಇದನ್ನೂ ಓದಿ: ದಲಿತ ನಾಯಕನನ್ನ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಮಾಡಲಿ- ಕಾಂಗ್ರೆಸ್‌ಗೆ ಜೆಡಿಎಸ್ ಸವಾಲ್

    ರಸ್ತೆ ಮೇಲೆಯೇ ನೀರು ಹರಿಯುತ್ತಿರುವ ಹಿನ್ನೆಲೆ, ರಾತ್ರಿ ಎಲ್ಲಾ ಬೈಪಾಸ್ ರಸ್ತೆ ಸ್ಥಗಿತಗೊಂಡಿತ್ತು. ಬೆಳಿಗ್ಗೆ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಲಾರಿಗಳು ಮಾತ್ರ ದಾಟಲು ಅವಕಾಶ ನೀಡಲಾಗಿದೆ. ಮತ್ತೆ ಮಳೆಯಾದರೆ ರಸ್ತೆ ಕಡಿತ ಆಗುವ ಸಾಧ್ಯತೆ ಇದೆ. ನಗರದ ಬಹುತೇಕ ನೀರು ಬೈಪಾಸ್ ರಸ್ತೆಯಿಂದ ಮನಸೂರ ಹಳ್ಳಕ್ಕೆ ಬರುತ್ತಿರುವುದರಿಂದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಇದನ್ನೂ ಓದಿ: ಟಾಟಾ ಅವರ ಅಂತ್ಯಕ್ರಿಯೆ ವೇಳೆ ಅಂತಿಮ ನಮನ ಸಲ್ಲಿಸಿದ ʻಗೋವಾʼ!

  • ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

    ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

    – ಧಾರವಾಡದ 1.15 ಲಕ್ಷ ರೈತರ ಖಾತೆಗೆ 23.09 ಕೋಟಿ ರೂ. ಜಮೆ

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಕಿಸಾನ್ ಸಮ್ಮಾನ್ ಯೋಜನೆ (PM Kisan Yojana) ರೈತರ ಸಂಜೀವಿನಿ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

    ಕೇಂದ್ರ ಸರ್ಕಾರ (Union Government) ಪಿಎಂ ಕಿಸಾನ್ ಸಮ್ಮಾನ್ 18ನೇ ಕಂತಿನ ನಿಧಿ ರೈತರ ಖಾತೆಗೆ ನೇರ ವರ್ಗಾವಣೆಯಾದ ಬಳಿಕ ಪ್ರತಿಕ್ರಿಯಿಸಿರುವ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ ಎಂದಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 6,000 ರೂ. ಧನಸಹಾಯ ನೀಡುವ ಮೂಲಕ ದೇಶದ 11 ಕೋಟಿ ರೈತರಿಗೆ ಸಂಜೀವಿನಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ 3 ಮಕ್ಕಳು ಸೇರಿ 7 ಜನ ಸಜೀವ ದಹನ

    ಈ ಯೋಜನೆಯಿಂದಾಗಿ ದೇಶದಲ್ಲಿ ಕೃಷಿಗೆ (Agriculture) ಅಪೂರ್ವ ಉತ್ತೇಜನ ದೊರಕಿದೆ. ರೈತರ ಸಾಲವನ್ನು ಕಡಿಮೆ ಮಾಡಿದೆ. ಅಲ್ಲದೇ, ಗ್ರಾಮೀಣ ಪ್ರದೇಶದ ಸಮುದಾಯಗಳನ್ನು ಸಶಕ್ತರನ್ನಾಗಿಸಿದೆ. ಅಲ್ಲದೇ ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯು ಭಾರತದ ಕೃಷಿಕರನ್ನು ಮಾತ್ರವಲ್ಲ ದೇಶವನ್ನೇ ಸ್ವಾವಲಂಬಿ ಮಾಡುವತ್ತ ಒಂದು ಮಹತ್ತರ ಹೆಜ್ಜೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

    ಕಿಸಾನ್ ಸಮ್ಮಾನ್ ಯೋಜನೆಯಡಿ 18ನೇ ಕಂತಿನಲ್ಲಿ ಒಟ್ಟು 9.4 ಕೋಟಿ ರೈತರಿಗೆ 20,000 ಕೋಟಿ ರೂ. ನೇರ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ 47.12 ಲಕ್ಷ ರೈತರು 942 ಕೋಟಿ ರೂ. ಪಡೆದಿದ್ದಾರೆ ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್

    ಧಾರವಾಡದ 1.15 ಲಕ್ಷ ರೈತರಿಗೆ ಸಮ್ಮಾನ್ ನಿಧಿ:
    ಧಾರವಾಡ ಲೋಕಸಭಾ ಕ್ಷೇತ್ರದ 1.15 ಲಕ್ಷ ರೈತರು ಇದರ ಪ್ರಯೋಜನ ಪಡೆದಿದ್ದಾರೆ. 23.09 ಕೋಟಿ ರೂ. ಧಾರವಾಡ ರೈತರ ಖಾತೆಗೆ ಜಮೆಯಾಗಿದ್ದು, ದಸರಾ ಹಬ್ಬದ ವೇಳೆ ರೈತರಲ್ಲಿ ಖುಷಿ ತಂದಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ. ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

  • ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು: ಜಿ.ಪರಮೇಶ್ವರ್

    ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು: ಜಿ.ಪರಮೇಶ್ವರ್

    ಧಾರವಾಡ: ಯಾರ ಸರ್ಕಾರ ಇದ್ರೇನು, ದೇಶ ಸುಭದ್ರವಾಗಿರಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ.

    ರಾಹುಲ್ ಗಾಂಧಿಯಂತೆ (Rahul Gandhi) ಮಾತನಾಡಬೇಡಿ ಎಂದು ಪರಮೇಶ್ವರ್‌ರವರಿಗೆ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಅವರು, ಅದು ಚೀಪ್ ಟಾಕ್ ಆಗಿದೆ. ನಾನೇನು ಅವರ ಮೇಲೆ ದೂಷಣೆ ಮಾಡಿಲ್ಲ ಎಂದರು. ನಾವು ಮಾಡಿದ್ದು,ಅವರು ಮಾಡಿದ್ರು ಅಂತಾ ಹೇಳಿಕೊಂಡು ತಿರುಗೋಣ. ಯಾರ ಸರ್ಕಾರ ಇದ್ರೇನು, ದೇಶದ ಭದ್ರತೆ ಮುಖ್ಯ. ಯಾವ ಸರ್ಕಾರ ಇದ್ದರೂ ದೇಶ ಭದ್ರವಾಗಿರಬೇಕು ಎಂದರು.  ಇದನ್ನೂ ಓದಿ: ರಾಜ್ಯದಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ: ಡಿಕೆಶಿ

    545 ಪಿಎಸ್‌ಐ ನೇಮಕಾತಿ ವಿಚಾರವಾಗಿ ಮಾತನಾಡಿ, ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ಶರಣಪ್ರಕಾಶ್ ಅವರ ಬೇಡಿಕೆಯೂ ಒಂದಿದೆ. 371ಜೆ ಗೆ ಶೇ. 8ರಷ್ಟು ಮೀಸಲಾತಿ ಕೇಳಿದ್ದಾರೆ. 2023ರಲ್ಲಿ ಈ ಸಂಬಂಧ ಆದೇಶವಾಗಿದ್ದು, ಈ ಆದೇಶ ಪಾಲಿಸಿ ಎಂದು ಒತ್ತಾಯಿಸುತ್ತಿದ್ದಾರೆ. 545 ಪಿಎಸ್‌ಐ ನೇಮಕ ಪ್ರಾರಂಭವಾಗಿದ್ದು 2020ರಲ್ಲಿ. ನೋಟಿಫಿಕೇಷನ್‌ನಲ್ಲೂ ಅದೇ ಆಗಬೇಕು ಅನ್ನೋದು ಇನ್ನೊಂದು ವಾದ. ಇದನ್ನೇ ಈಗ ಕೋರ್ಟ್ ತೀರ್ಮಾನಿಸಬೇಕಿದೆ. ಕೋರ್ಟ್ ತೀರ್ಪು ಆಧರಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿಎಂಗೆ ಸಿ.ಟಿ.ರವಿ ಟಾಂಗ್‌

    ಸಿದ್ದರಾಮಯ್ಯ (CM Siddaramaiah) ಪರ ಜಿ.ಟಿ. ದೇವೇಗೌಡರು ಹೇಳಿಕೆ ನೀಡಿದ ಬಗ್ಗೆ ಮಾತನಾಡಿ, ಜಿ.ಟಿ. ದೇವೇಗೌಡರು ವಾಸ್ತವಾಂಶ ಮಾತನಾಡಿದ್ದಾರೆ, ಅವರು ಕಾಂಗ್ರೆಸ್‌ಗೆ ಬಂದ್ರೆ ಶಕ್ತಿ ಬರುತ್ತೆ ಅನೋದಿದ್ರೆ ತಗೋತೀವಿ. ಯಾರೇ ಬಂದ್ರು ಕಾಂಗ್ರೆಸ್‌ಗೆ ತಗೋತೆವಿ ಎಂದರು. ಸಿಎಂ ಸ್ಥಾನಕ್ಕೆ ಪರಮೇಶ್ವರ್ ಹೆಸರು ಕೇಳಿ ಬಂದಿರುವ ವಿಚಾರವಾಗಿ ಮಾತನಾಡಿ, ಅದು ನನಗೆ ಕೇಳಿಸಿಲ್ಲ. ಅದು ಮಾಧ್ಯಮಗಳಿಗೆ ಹೇಗೆ ಕೇಳಿಸುತ್ತೆ? ನನಗೆ ಕೇಳಿಸಿದಾಗ ನೋಡೋಣ ಬಿಡಿ ಎಂದರು. ಇದನ್ನೂ ಓದಿ: ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

  • ಕೇಂದ್ರದ ಗುಪ್ತಚರ ಸಂಸ್ಥೆಗಳು ಏನ್‌ ಮಾಡ್ತಿವೆ – RAW, IB ವಿದೇಶಿಗರನ್ನು ಹಿಡಿದು ಹಾಕ್ಬೇಕು: ‌ಪರಮೇಶ್ವರ್‌

    ಕೇಂದ್ರದ ಗುಪ್ತಚರ ಸಂಸ್ಥೆಗಳು ಏನ್‌ ಮಾಡ್ತಿವೆ – RAW, IB ವಿದೇಶಿಗರನ್ನು ಹಿಡಿದು ಹಾಕ್ಬೇಕು: ‌ಪರಮೇಶ್ವರ್‌

    ಧಾರವಾಡ: ಮಾದಕ ವಸ್ತುಗಳ ವಿರುದ್ಧ ವಿರುದ್ಧ ನಾವು ಸಮರ ಸಾರಿದ್ದೇವೆ. ಕರ್ನಾಟಕದಲ್ಲಿ 10,000ಕ್ಕೂ ಹೆಚ್ಚು ಜನ ವಿದೇಶಿಗರಿದ್ದಾರೆ. ಅದರಲ್ಲಿ ಅನೇಕರು ಡ್ರಗ್ಸ್‌ ಜಾಲಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G Parameshwara) ಹೇಳಿದರು.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ವಿದೇಶಿಗರನ್ನ ಫರ್ಮನೆಂಟ್ ಆಗಿ‌ ಮಾನಿಟರ್ ಮಾಡುತ್ತಿದ್ದೇವೆ. ನೂರಕ್ಕೂ ಹೆಚ್ಚು ಜನರನ್ನ ಆಯಾ ದೇಶಕ್ಕೆ ವಾಪಸ್ ಕಳುಹಿಸುತ್ತೇವೆ. ಕೆಲವರನ್ನ ಡಿಟೆಸೆನ್ಸ್ ಕೇಂದ್ರಗಳಲ್ಲಿ ಇಟ್ಟುಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಧಾರವಾಡ| ಖಾಸಗಿ ಬಸ್‌ನಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 98 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ

    ಆಯಾ ದೇಶಗಳ ರಾಯಭಾರ ಕಚೇರಿಯವರ ಕ್ಲಿಯರೆನ್ಸ್ ಕೇಳಿ ವಾಪಸ್‌ ಕಳುಹಿಸುತ್ತೇವೆ ಎಂದ ಗೃಹಸಚಿವರು ಕೇಂದ್ರ ಸರ್ಕಾರದ ಗುಪ್ತಚರ ಸಂಸ್ಥೆಗಳು ಏನು ಮಾಡುತ್ತಿವೆ? RAW, IB ದವರು ವಿದೇಶಿಗರನ್ನು ಹಿಡಿದು ಹಾಕಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಇಂಡಿಗೋ ಏರ್‌ಲೈನ್ಸ್‌ನಲ್ಲಿ ಸರ್ವರ್‌ ಸಮಸ್ಯೆ; ಚೆಕ್-ಇನ್‌, ಫ್ಲೈಟ್ ಕಾರ್ಯಾಚರಣೆಯಲ್ಲಿ ತೊಂದರೆ

    ಆನೇಕಲ್ ಬಳಿ ನಾಲ್ಕು ಜನರನ್ನು ಹಿಡಿದಿದ್ವಿ, ನಾಲ್ಕು ಜನ ನಮ್ಮ ರಾಜ್ಯಕ್ಕೆ ಬಂದು ಒಂದು ವರ್ಷ ಆಯ್ತು. ಆದರೆ ಅವರು ದೇಶಕ್ಕೆ ಬಂದು 10 ವರ್ಷ ಆಗಿದೆ. ನಮ್ಮ ಪೊಲೀಸರೇ ಅವರನ್ನು ಹಿಡಿದು IB ದವರಿಗೆ ಮಾಹಿತಿ ಕೊಟ್ಟಿದ್ದಾರೆ. ಹಿಂದೆ ಸಹ ಒಬ್ಬ ಹಾಗೆಯೇ ಮಾಡಿದ್ದ, ಅಂಗಡಿಗಳ ಮಧ್ಯೆ ಅಂಗಡಿ ಇಟ್ಟುಕೊಂಡಿದ್ದ, ಆತನನ್ನು ಪತ್ತೆ ಮಾಡಿದ್ವಿ. ಇಂತಹ ವಿಚಾರಗಳ ಬಗ್ಗೆ ಕರ್ನಾಟಕ ಪೊಲೀಸರಿಗೆ IB ದವರು ಮಾಹಿತಿ ಕೊಡಬೇಕು ಎಂದು ಹೇಳಿದ್ದಾರೆ.