Tag: ಧಾರ್ಮಿಕ ದತ್ತಿ ಇಲಾಖೆ

  • ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಡೆಗಣನೆ: ಕೋಟ ಶ್ರೀನಿವಾಸ ಪೂಜಾರಿ

    ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಡೆಗಣನೆ: ಕೋಟ ಶ್ರೀನಿವಾಸ ಪೂಜಾರಿ

    ಬೆಂಗಳೂರು: ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆಗೆ (Department of Religious Endowments) ನಮ್ಮ ಸರ್ಕಾರ 250 ಕೋಟಿ ರೂ. ನೀಡಿದೆ. ಆದರೆ ಕಾಂಗ್ರೆಸ್ (Congress) ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆಯನ್ನು ಕಡೆಗಣಿಸಿದ್ದು, 50 ಕೋಟಿಯನ್ನೂ ಕೊಟ್ಟಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಬೇಸರಿಸಿದ್ದಾರೆ.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಚಕರಿಗೆ ತಪ್ಪು ಮಾಹಿತಿ ಕೊಡಲಾಗಿದೆ. ಅವರು ಪತ್ರಿಕಾಗೋಷ್ಠಿ ಮಾಡುವಂತಾಗಿದೆ. ಅರ್ಚಕರಿಗೆ ಮನೆ ಕೊಟ್ಟದ್ದು ನಮ್ಮ ಸರ್ಕಾರ. ತಸ್ತೀಕ್ ತಂದದ್ದು ನಮ್ಮ ಸರ್ಕಾರ. ಅದನ್ನು 48 ಸಾವಿರಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಇದೆಲ್ಲವನ್ನು ಜನರು ಅರ್ಥ ಮಾಡಿಕೊಳ್ಳಬೇಕು. ದೇವಸ್ಥಾನದ ಒಟ್ಟು ಆದಾಯದಿಂದ ಶೇ.10 ಪಡೆಯುವ ಮಸೂದೆ ಜಾರಿಗೆ ಮುಂದಾದುದರಿಂದ ದೇವಸ್ಥಾನದ ಒಟ್ಟು ಆರ್ಥಿಕ ವ್ಯವಸ್ಥೆ ಕುಸಿಯಬಾರದೆಂಬ ಕಾರಣಕ್ಕೆ ವಿರೋಧಿಸಿದ್ದೇವೆ. ಆದರೆ, ಬಿಜೆಪಿಯವರ (BJP) ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್‌ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

    ತುಂಬಾ ದೇವಸ್ಥಾನಗಳಲ್ಲಿ ಶಾಲೆ, ಗೋಶಾಲೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ಅನ್ನ ಪ್ರಸಾದ, ಸಪ್ತಪದಿ (ಮದುವೆ) ವ್ಯವಸ್ಥೆ ಇದೆ. ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿ ಮೊನ್ನೆ ದೇಗುಲಗಳ ಮಸೂದೆಯನ್ನು ಬಿಜೆಪಿ- ಜೆಡಿಎಸ್ ಸದಸ್ಯರು ವಿರೋಧಿಸಿದ್ದಾರೆ. ನಾವು ಅರ್ಚಕರಿಗೆ- ದೇವಾಲಯಗಳಿಗೆ ಒಳ್ಳೆಯದು ಮಾಡಲು ಹೊರಟಿದ್ದೆವು. ಆದರೆ ಬಿಜೆಪಿ ಇದನ್ನು ವಿರೋಧಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ವಿಶೇಷವಾಗಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಹಿರಿಯ ಸಚಿವ ಹೆಚ್.ಕೆ.ಪಾಟೀಲ್, ಧಾರ್ಮಿಕ ದತ್ತಿ ಸಚಿವ ರಾಮಲಿಂಗಾರೆಡ್ಡಿ ಅವರು ಆರೋಪಿಸುತ್ತಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ವಾಸ್ತವಿಕವಾಗಿ ದೇವಾಲಯಗಳ ಅಭಿವೃದ್ಧಿಗಾಗಿ ತಿದ್ದುಪಡಿ ತಂದು 33,500 ದೇವಸ್ಥಾನಗಳಿಗೆ ತಸ್ತೀಕ್ ಕೊಡುವ ಯೋಜನೆ ರೂಪಿಸಿದ್ದೇ ಬಿಜೆಪಿ ಎಂದು ವಿವರಿಸಿದರು. ಇದನ್ನೂ ಓದಿ: ರಾಜ್ಯ ಶಿಕ್ಷಣ ನೀತಿ ಸಮಿತಿ ಅವಧಿ ಆಗಸ್ಟ್ ವರೆಗೂ ವಿಸ್ತರಣೆ: ಡಾ.ಸುಧಾಕರ್

    ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದು, ನಾಗರಾಜ ಶೆಟ್ಟಿಯವರು ಸಚಿವರಾಗಿದ್ದಾಗ ತಸ್ತೀಕ್ ಎಂಬ ಯೋಜನೆಯನ್ನು ನಮ್ಮ ಸರಕಾರ ಜಾರಿಗೊಳಿಸಿತ್ತು. ಆಗ ತಸ್ತೀಕ್ 6,500 ರೂ ಇತ್ತು. 33,500 ದೇವಸ್ಥಾನಗಳಿಗೂ ಅದನ್ನು ಕೊಡುತ್ತಿದ್ದೆವು. ವಿ.ಎಸ್.ಆಚಾರ್ಯರು ಸಚಿವರಿದ್ದಾಗ ಅದನ್ನು 12 ಸಾವಿರ ಮಾಡಿದ್ದು, ನಾನು ಧಾರ್ಮಿಕ ದತ್ತಿ ಸಚಿವನಾದಾಗ 24 ಸಾವಿರಕ್ಕೆ ಏರಿಸಿದ್ದೆ. ನಮ್ಮದೇ ಸರಕಾರ ಇದ್ದಾಗ 48 ಸಾವಿರಕ್ಕೆ ಏರಿಸಿದ್ದು, ಈಗ ಅದು 60 ಸಾವಿರ ಆಗಿದೆ ಎಂದು ವಿವರ ನೀಡಿದರು. ಬಡ ದೇವಸ್ಥಾನಗಳಿಗೆ ಅನುಕೂಲ ಆಗಲಿ ಎಂದು ಅದನ್ನು 1 ಲಕ್ಷಕ್ಕೆ ಏರಿಸಲು ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಧ್ರುವ್‌ ರಥೀ ವಿಡಿಯೋ ಪೋಸ್ಟ್‌ ಮಾಡಿ ತಪ್ಪು ಮಾಡಿದ್ದೇನೆ – ಸುಪ್ರೀಂನಲ್ಲಿ ಕೇಜ್ರಿವಾಲ್‌ ತಪ್ಪೊಪ್ಪಿಗೆ

    ನಾನು ಸಚಿವನಾಗಿದ್ದಾಗ ಅರ್ಚಕರಿಗೆ ಪಿಂಚಣಿ, ಆರೋಗ್ಯ ವಿಮೆ, ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿವೇತನ, ಅರ್ಚಕರ ಮನೆ ಪ್ರಸ್ತಾಪ ಮುಂದಿಟ್ಟಿದ್ದು, ಅರ್ಚಕರ ಮನೆ ಮಂಜೂರು ಮಾಡಿದ್ದೇವೆ. ಭಕ್ತರು ಹುಂಡಿಗೆ ಹಾಕಿದ ಹಣ, ಭಕ್ತರ ಸೇವೆಯಿಂದ 1 ಕೋಟಿ ಆದಾಯದಿಂದ 90 ಲಕ್ಷ ದೇವಾಲಯಕ್ಕೆ ಖರ್ಚು ಮಾಡಿ, ಉಳಿದ 10 ಲಕ್ಷದಲ್ಲಿ 10% ಎಂದರೆ 1 ಲಕ್ಷ ಸರ್ಕಾರಕ್ಕೆ ಬರುತ್ತಿತ್ತು. ಈಗ ತಿದ್ದುಪಡಿಯಲ್ಲಿ ಮೂಲ ಆದಾಯದಲ್ಲಿ 10% (10 ಲಕ್ಷ) ಪಡೆಯಲು ತಿದ್ದುಪಡಿ ಮಾಡಿದ್ದಾರೆ. ಇದನ್ನು ವಿರೋಧಿಸಿದ್ದೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಲ್ಲ: ಡಾ.ಎಂ.ಸಿ ಸುಧಾಕರ್

    ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 100 ಕೋಟಿ ಆದಾಯವಿದ್ದರೆ 10 ಕೋಟಿಯನ್ನು ಧಾರ್ಮಿಕ ದತ್ತಿ ಇಲಾಖೆಗೆ ಕೊಡಬೇಕಾಗುತ್ತದೆ. ನಿರ್ವಹಣಾ ವೆಚ್ಚ ತೆಗೆದ ನಂತರ ನಿವ್ವಳ ಉಳಿಕೆಯಲ್ಲಿ ಶೇ.10 ಪಡೆಯಬೇಕೆಂದು ನಮ್ಮ ಒತ್ತಾಯವಿತ್ತು. ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಅಧಿಕಾರ ಎ ದರ್ಜೆಯ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಮಾಡುತ್ತದೆ. ಬಿ ಮತ್ತು ಸಿ ದರ್ಜೆ ದೇವಸ್ಥಾನಗಳಿಗೆ ಜಿಲ್ಲಾ ಧಾರ್ಮಿಕ ಪರಿಷತ್ ಮಾಡುತ್ತದೆ. ಧಾರ್ಮಿಕ ಪರಿಷತ್ ಮೂಲಕ ಸದಸ್ಯರ ಆಯ್ಕೆ ಮಾಡಿದ ನಂತರ ಅಧ್ಯಕ್ಷರನ್ನು ಅವರೇ ಆಯ್ಕೆ ಮಾಡಬೇಕು. ರಾಮಲಿಂಗಾರೆಡ್ಡಿಯವರ ಬಿಲ್‌ನಲ್ಲಿ ಧಾರ್ಮಿಕ ಪರಿಷತ್ತಿನ ಮೂಲಕ ವ್ಯವಸ್ಥಾಪನ ಸಮಿತಿ, ಅಧ್ಯಕ್ಷರನ್ನು ಸರ್ಕಾರವೇ ಆಯ್ಕೆ ಮಾಡುತ್ತದೆ. ಇದನ್ನು ವಿರೋಧಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಬಿಜೆಪಿ, ಟಿಕೆಟ್ ಬಗ್ಗೆ ಡೌಟೇ ಇಲ್ಲ: ಸುಮಲತಾ

    ಡಿ.ಕೆ.ಶಿವಕುಮಾರರು ನಾವು ಅರ್ಚಕರಿಗೆ ಒಳ್ಳೆಯದು ಮಾಡಲು ಹೋದೆವು. ಆದರೆ, ಬಿಜೆಪಿಯವರು ಅಡ್ಡ ಹಾಕಿದ್ದಾರೆ. ಮೇಲ್ಮನೆಯಲ್ಲಿ 3 ತಿಂಗಳಲ್ಲಿ ಬಹುಮತ ಬರಲಿದೆ. ಆಗ ನಾವು ತರುತ್ತೇವೆ ಎಂದು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರು ಬಿಜೆಪಿಯವರು ತಪ್ಪು ಮಾಡುತ್ತಿದ್ದಾರೆ. ನಾವು ಒಳ್ಳೆಯದು ಮಾಡಿದರೆ ಇವರು ಕೆಟ್ಟದು ಮಾಡುತ್ತಾರೆ ಎಂದು ಪ್ರಥಮ ಬಾರಿಗೆ ದೇವರ ಪರ ಮಾತನಾಡಿದ್ದಾರೆ. ಚರ್ಚೆ ಮಾಡಿ ಅನುಮೋದಿಸಲು ಒತ್ತಾಯಿಸಿದ್ದೇವೆ. ಆದರೆ ಡಿಕೆಶಿ ಅವರು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    ನಿವ್ವಳ ಉಳಿಕೆಯಲ್ಲಿ ಹಣ ಪಡೆಯಲು ತಿಳಿಸಿದೆವು. ವ್ಯವಸ್ಥಾಪನಾ ಸಮಿತಿಯಲ್ಲಿ ಅಧ್ಯಕ್ಷರ ಆಯ್ಕೆ ಸರಿಯಲ್ಲ ಎಂದಿದ್ದೇವೆ. ರಾಮಲಿಂಗಾರೆಡ್ಡಿ, ಹೆಚ್.ಕೆ.ಪಾಟೀಲ್ ಅವರಂಥ ಹಿರಿಯರು ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳ ಒಳ್ಳೆಯ ಸಲಹೆಗೆ ಬೆಲೆ ಕೊಡುತ್ತಾರೆಂದು ಭಾವಿಸಿದ್ದೆವು. ಆದರೆ, ಸರಕಾರ ಹಠಮಾರಿತನದ ಧೋರಣೆ ಅನುಸರಿಸಿದೆ. ತಿದ್ದುಪಡಿಯನ್ನು ಮತ್ತೊಮ್ಮೆ ಚರ್ಚೆ ಮಾಡಿ ಎಂದು ತಿರಸ್ಕಾರ ಮಾಡಿದ್ದೇವೆ. ಅರ್ಚಕರ ಪರವಾಗಿರುವ ನಮ್ಮ ಒಟ್ಟು ನಿಲುವಿನ ಕುರಿತು ದಾರಿ ತಪ್ಪಿಸುವ ಕೆಲಸವನ್ನು ಸಿದ್ದರಾಮಯ್ಯ, ಡಿಕೆಶಿ ಮತ್ತು ಇತರರು ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗಂಡಸರಿಗೆ ಅಧಿಕಾರ ನಮ್ಮಲ್ಲೇ ಇರಬೇಕು ಅನ್ನೋ ಭಾವನೆ- ಅಭಿಯಾನದ ವಿರುದ್ಧ ಶೋಭಾ ರೆಬೆಲ್

    ವಿಧಾನಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಮಾತನಾಡಿ, 35 ಸಾವಿರ ಅರ್ಚಕರ ಮನೆಗೆ 15 ಕೋಟಿ, ಸ್ಕಾಲರ್‌ಶಿಪ್‌ಗೆ 5 ಕೋಟಿ, 5 ಕೋಟಿಯಲ್ಲಿ ವಿಮೆ ಮಾಡಿಸುವುದಾಗಿ ಹೇಳಿದ್ದಾರೆ. ನೀವು ಕ್ರಿಶ್ಚಿಯನ್ನರು, ಮುಸ್ಲಿಮರಿಗೆ 300 ಕೋಟಿ ಕೊಟ್ಟಿದ್ದೀರಿ. 35 ಸಾವಿರ ದೇವಸ್ಥಾನಗಳಿಗೆ 300 ಕೋಟಿ ಕೊಡಬೇಕಿತ್ತು ಎಂದು ಹೇಳಿದರು. ಹಿಂದೂ ದೇವಾಲಯ ಎಂದರೆ ಇಷ್ಟು ಕನಿಷ್ಠವೇ ಎಂದು ಪ್ರಶ್ನಿಸಿದರು. ಹಿಂದೂಗಳ ವಿಚಾರ ಬಂದಾಗ ಶ್ರೀಮಂತ ದೇವಾಲಯದಿಂದ ಕಿತ್ತುಕೊಂಡು ಬೇರೆ ದೇವಾಲಯಕ್ಕೆ ಕೊಡಲು ನೀವೇ ಬೇಕೇ? ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಎಂದು ಘೋಷಿಸುವ ಸರ್ಕಾರ, ಅಲ್ಪಸಂಖ್ಯಾತರ ಅಭಿವೃದ್ಧಿಗೆ 1 ಸಾವಿರ ಕೋಟಿ ಎಂದು ಆದೇಶ ನೀಡಿದ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದುಳಿದ, ಅತಿ ಕೆಳ ಸ್ಥಿತಿಯಲ್ಲಿರುವ ದೇವಸ್ಥಾನಗಳಿಗೆ 300 ಕೋಟಿ ಕೊಡಲು ಸಾಧ್ಯವಿಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಈ ವೇಳೆ ವಿಧಾನಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಪ್ರತಾಪಸಿಂಹ ನಾಯಕ್, ಅವರು ಹಾಜರಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯನವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯೋದಿಲ್ಲ – ಸಿಎಂ ವಿರುದ್ಧ ಹರಿಹಾಯ್ದ ಜೋಶಿ

  • ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

    ರಾಜ್ಯ ಬಜೆಟ್‌ನಲ್ಲಿ ಮಠಗಳಿಗಿಲ್ಲ ನೇರ ಅನುದಾನ

    ಬೆಂಗಳೂರು: ಈ ಬಾರಿ ರಾಜ್ಯ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಯಾವುದೇ ಮಠಮಾನ್ಯಗಳಿಗೆ ನೇರ ಅನುದಾನ ನೀಡಿಲ್ಲ. ಬದಲಾಗಿ ಧಾರ್ಮಿಕ ದತ್ತಿ ಇಲಾಖೆಯಡಿ 1,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

    ಧಾರ್ಮಿಕ ದತ್ತಿ ಇಲಾಖೆಯಡಿ 2022-23ನೇ ಸಾಲಿಗೆ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿತ್ತು. ಅಂತೆಯೇ ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

    ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು 48,000 ರೂ.ನಿಂದ 60,000 ರೂ.ಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಧಾರ್ಮಿಕ ದತ್ತಿ ಇಲಾಖೆ ಬ್ರಾಹ್ಮಣರ ನಡುವೆ ಹುಳಿ ಹಿಂಡುವ ಕೆಲಸ ಮಾಡುತ್ತಿದೆ – ಮಾಧ್ವ ವಿದ್ವಾಂಸರು ಗರಂ

    ಧಾರ್ಮಿಕ ದತ್ತಿ ಇಲಾಖೆ ಬ್ರಾಹ್ಮಣರ ನಡುವೆ ಹುಳಿ ಹಿಂಡುವ ಕೆಲಸ ಮಾಡುತ್ತಿದೆ – ಮಾಧ್ವ ವಿದ್ವಾಂಸರು ಗರಂ

    ಉಡುಪಿ: ಧಾರ್ಮಿಕ ದತ್ತಿ ಇಲಾಖೆಯ (Muzrai Department) ದೇಗುಲದಲ್ಲಿ (Temple) ವೈಷ್ಣವರು ತಪ್ತ ಮುದ್ರಾಧಾರಣೆ (Tapta Mudra Dharana), ಫೋಟೋ ಇಟ್ಟು ಸಾರ್ವಜನಿಕ ಪೂಜೆ ಮಾಡಬಾರದು ಎಂಬ ಆದೇಶಕ್ಕೆ ಉಡುಪಿಯ (Udupi) ಮಾಧ್ವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದ್ರೆ ಇದೇನಾ ಅಂತ ವಿದ್ವಾಂಸರು ಇಲಾಖೆಯ ಆದೇಶವನ್ನು ಕಟುವಾಗಿ ಟೀಕಿಸಿದ್ದಾರೆ.

    ಉಡುಪಿ ಕೃಷ್ಣಮಠ (Udupi Mutt) ಸೇರಿದಂತೆ ಅಷ್ಟಮಠಗಳಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಮಾಧ್ವ ಪಂಡಿತರು ಆದೇಶಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜನಪ್ರತಿನಿಧಿಗಳ ಜೊತೆ ಮಾತನಾಡಿ ವಿವರಿಸಿದ್ದಾರೆ. ಒಂದಿಬ್ಬರು ಸಂಕುಚಿತ ಮನಸ್ಸಿನವರು ತ್ರಿಮತಸ್ಥರ ನಡುವೆ ಹುಳಿ ಹಿಂಡುವ ಕೆಲಸ ಮಾಡಿದ್ದಾರೆ. ಕ್ಷುಲ್ಲಕ ಮಾತುಗಳಿಗೆ ಕಿವಿ ಕೊಟ್ಟರೆ ಎಲ್ಲರನ್ನು ಜೊತೆಗೆ ತೆಗೆದುಕೊಂಡು ಹೋಗಲು ಸಾಧ್ಯವೇ? ದೇವಸ್ಥಾನದ ಚಾವಡಿ 10 ಮನಸ್ಸಿನ ಸದ್ವಿಚಾರಗಳನ್ನು ಇಡೀ ಸಮಾಜಕ್ಕೆ ಕೊಡಬೇಕು. ಆಚಾರ ವಿಚಾರದಲ್ಲಿ ತಪ್ಪು ಹುಡುಕಿ ಹುಡುಕಿ ಹುಡುಕಿ ರಾಡಿ ಎಬ್ಬಿಸುವ ಕೆಲಸವನ್ನು ಬಿಟ್ಟುಬಿಡಿ ಎಂದು ಧಾರ್ಮಿಕ ವಿದ್ವಾಂಸ ವಾಸುದೇವ ಭಟ್ ಪೆರಂಪಳ್ಳಿ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಸರ್ಕಾರಿ ದೇಗುಲದಲ್ಲಿ ತಪ್ತಮುದ್ರಾಧಾರಣೆಗೆ ಬ್ರೇಕ್ – ಸತ್ಯನಾರಾಯಣ ಪೂಜೆ, ಶನಿಕಥೆಗೆ ಅಡ್ಡಿ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಾಸುದೇವ ಭಟ್, ಸುತ್ತೋಲೆಯನ್ನು ತಂದಿರುವ ರಾಜ್ಯ ಸರ್ಕಾರದ ನಡೆಯ ಬಗ್ಗೆ ನಮಗೆ ಆಶ್ಚರ್ಯವಾಗಿದೆ. ಸರ್ಕಾರದ ಸುತ್ತೋಲೆ ಬಹಳ ಅಸಂಗತವಾಗಿದೆ. ಧಾರ್ಮಿಕ ವಿದ್ವಾಂಸರು ವಿಮರ್ಶೆ ಮಾಡಬೇಕಾದ ಸ್ಥಿತಿಯಿದೆ. ಆದೇಶ ಹೊರಡಿಸುವ ಮೊದಲು ಅವಲೋಕಿಸುವ ಕೆಲಸವನ್ನು ಮಾಡಿಲ್ಲ. ಯಾರದೋ ಒತ್ತಾಯ ಮತ್ತು ವೈಯಕ್ತಿಕ ಹಿತಾಸಕ್ತಿಯಿಂದ ಈ ಆದೇಶ ಹೊರಡಿಸುವ ರೀತಿಯಲ್ಲಿ ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಸುತ್ತೋಲೆಯನ್ನು ತರಾತುರಿಯಿಂದ ತಂದ ಹಾಗೆ ಕಾಣಿಸುತ್ತಿದೆ. ಕೆಲವು ಸಂಪ್ರದಾಯಗಳನ್ನು ಉದಾಹರಣೆಗೆ ತಪ್ತ ಮುದ್ರಾಧಾರಣೆಯನ್ನು ಸರ್ಕಾರಿ ದೇವಸ್ಥಾನಗಳಲ್ಲಿ ಮಾಡಬಾರದು ತಪ್ತ ಮುತ್ರಧಾರಣೆ ಮಾಡುವುದರಿಂದ ಒಂದು ದೇವಸ್ಥಾನದ ಆಚಾರ ವಿಚಾರಕ್ಕೆ ಯಾವುದೇ ಸಮಸ್ಯೆಗಳು ಬರುವುದಿಲ್ಲ. ತಪ್ತ ಮುದ್ರಾಧಾರಣೆಯನ್ನು ಮಠಾಧೀಶರುಗಳು ಮನೆ ಮನೆಗಳಲ್ಲಿ ಮಾಡುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮಠಾಧೀಶರುಗಳು ಈ ವಿಧಿ ನೆರವೇರಿಸಬೇಕು. ಮುದ್ರಾಧಾರಣೆ ಯಾರಿಗೆ ಆಸಕ್ತಿ ಇದೆ ಅವರು ಅದರಲ್ಲಿ ಭಾಗವಹಿಸಬಹುದು. ಯಾರಿಗೂ ಒತ್ತಾಯ ಮಾಡಿ ಮುದ್ರೆ ಹಾಕುವುದಿಲ್ಲ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದೆ ಎಂದು ಹೇಳಿದರು.

    ಆಷಾಢ ಶುದ್ಧ ಏಕಾದಶಿ ಮತ್ತು ಕಾರ್ತಿಕ ಶುದ್ಧ ಏಕಾದಶಿಯ ದಿನ ಮುದ್ರಾಧಾರಣೆಗೆ ಮಹತ್ವವಿದೆ. ಮಾಧ್ವ ಸಂಪ್ರದಾಯದ ಮಠಾಧೀಶರುಗಳು ಮುದ್ರಾಧಾರಣೆ ಮಾಡುತ್ತಾರೆ. ಆ ದಿನಗಳಲ್ಲಿ ತಪ್ತ ಮುತ್ರಾಧಾರಣೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಭಕ್ತರಿಗೆ ಗ್ರಾಮದ ದೇವಸ್ಥಾನ ಅಥವಾ ಊರಿನ ದೇವಸ್ಥಾನದಲ್ಲಿ ಮುದ್ರೆ ಹಾಕಲಾಗುತ್ತದೆ. ಈಶ್ವರ ದೇವಸ್ಥಾನ, ದುರ್ಗಾದೇವಿ ದೇವಸ್ಥಾನಗಳು ಸುಬ್ರಮಣ್ಯ ದೇವಸ್ಥಾನಗಳಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೀಗೆ ಮುಜರಾಯಿ ವ್ಯಾಪ್ತಿಯ ಹಲವಾರು ದೇವಸ್ಥಾನಗಳಲ್ಲಿ ಅನುಕೂಲಕ್ಕೆ ತಕ್ಕಂತೆ ಮುದ್ರಾಧಾರಣೆ, ಸತ್ಯನಾರಾಯಣ ಕಥೆ ಮಾಡಿಕೊಂಡು ಹೋಗಲಾಗುತ್ತಿದೆ. ದೇವಸ್ಥಾನಗಳು ಇರುವುದೇ ಆಧ್ಯಾತ್ಮಿಕವಾದ ಧಾರ್ಮಿಕವಾದ ಕಾರ್ಯಕ್ರಮಗಳನ್ನು ಮಾಡಲು. ಹಲವಾರು ವರ್ಷಗಳಿಂದ ಸರ್ಕಾರಿ ದೇವಸ್ಥಾನಗಳಲ್ಲಿ ನಡೆದುಕೊಂಡು ಹೋಗ್ತಾ ಇದೆ. ಏಕಾಏಕಿ ಇದಕ್ಕೆ ಯಾಕೆ ವಿರೋಧ ಬಂತು ಎಂಬುದು ಅರ್ಥವಾಗುತ್ತಿಲ್ಲ. ಸರ್ಕಾರ ಸುತ್ತೋಲೆಯನ್ನು ವಾಪಸ್ ತೆಗೆದುಕೊಳ್ಳಬೇಕು. ಶತಮಾನಗಳಿಂದ ನಡೆದುಕೊಂಡು ಬಂದ ಆಗಮೊಕ್ತ ವಿಧಿ ವಿಧಾನಗಳು ಪರಂಪರೆಗಳು ಕಾಲಾವಧಿ ಪ್ರಕ್ರಿಯೆಗಳು ಪೂರಕವಾಗಿ ನಡೆಯುತ್ತಿದೆ. ಇದನ್ನೂ ಓದಿ: ಕೆಂಪೇಗೌಡ ಪೇಟದಲ್ಲಿ ಕಂಗೊಳಿಸಿದ ಪ್ರಧಾನಿ ಮೋದಿ

    ದೇವಸ್ಥಾನಗಳ ಭಕ್ತರಿಂದ ದೂರುಗಳು ಬಂದರೆ ವಿರೋಧಗಳು ವ್ಯಕ್ತವಾದರೆ ಸರ್ಕಾರ ಪರಾಮರ್ಶೆ ನಡೆಸಿ ಈ ಆದೇಶವನ್ನು ಹೊರಡಿಸಬೇಕಿತ್ತು. ದೂರೆಲ್ಲಿದೆ ಯಾರಿಂದ ಬಂದಿದೆ ಎಂಬುದೀಗ ಇರುವ ಪ್ರಶ್ನೆ. ಏಕಾಏಕಿ ಇಂತಹ ಎಡವಟ್ಟುಗಳನ್ನು ಯಾಕೆ ಮಾಡುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ. ತ್ರಿಮತಸ್ಥ ಬ್ರಾಹ್ಮಣರ ನಡುವೆ ಒಡಕು ತಂದಿಡುವ ಕೆಲಸವನ್ನು ಯಾರೋ ಮಾಡುತ್ತಿದ್ದಾರೆ. ಹಿಂದೂ ಸಮುದಾಯದ ನಡುವೆ ಕೆಲವು ಕ್ಷುಲ್ಲಕ ಕಾರಣಗಳನ್ನು ತಂದಿಟ್ಟು ಚಂದ ನೋಡುತ್ತಿದ್ದಾರೆ. ಯಾರ ಮೇಲೆಯೂ ಹಾನಿ ಮಾಡದ ಯಾರ ಮೇಲೆಯೂ ಸವಾರಿ ಮಾಡದ ಆಚರಣೆಗಳನ್ನು ದೇವಸ್ಥಾನಗಳಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ನಡೆಸಿದರೆ ತಪ್ಪೇನು? ದುರುದ್ದೇಶ ಇಲ್ಲದ ಆಚರಣೆಗಳು ಧಾರ್ಮಿಕ ಕೇಂದ್ರಗಳಲ್ಲಿ ನಡೆದರೆ ತಪ್ಪೇನು? ಮುದ್ರಾಧಾರಣೆಯಲ್ಲಿ ಪಾಲ್ಗೊಳ್ಳುವುದು ವೈಷ್ಣವ ಭಕ್ತರು ಮಾತ್ರ. ಹಲವಾರು ದೇವಸ್ಥಾನಗಳಲ್ಲಿ ವೈಷ್ಣವರೇ ಪೂಜೆಯನ್ನು ನೆರವೇರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಅತಿ ಹೆಚ್ಚು ಸಂಖ್ಯೆಯಲ್ಲಿ ಶೈವರಿರುವ ಪ್ರದೇಶಗಳಲ್ಲಿ ಯಾವ ವೈಷ್ಣವರು ಕೂಡ ತಪ್ತ ಮುದ್ರಾಧಾರಣೆಯನ್ನು ಮಾಡುವುದಿಲ್ಲ. ಅಲ್ಲಿ ಯಾವುದೇ ಗೊಂದಲಗಳು ಆಗಿಲ್ಲ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆ ಈ ಸಂಪ್ರದಾಯ ಆಚರಣೆಯಲ್ಲಿ ಇದೆ ಎಂದು ವಾಸುದೇವ ಭಟ್ ವಿವರಿಸಿದರು. ಇದನ್ನೂ ಓದಿ: ಮೋದಿಯಿಂದಾಗಿ ನಳಿನ್ ಕುಮಾರ್ ಕಟೀಲ್ ಡಾಲರ್ ಪದ ಕೇಳಿದರೆ ಬೆಚ್ಚಿ ಬೀಳುತ್ತಾರೆ: ಕಾಂಗ್ರೆಸ್

    ಹಲವಾರು ಶೈವ ದೇವಸ್ಥಾನಗಳಲ್ಲಿ ವೈಷ್ಣವರೇ ಪೂಜೆ ಮಾಡಿಕೊಂಡು ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈಶ್ವರ ದೇವಸ್ಥಾನಗಳಲ್ಲಿ ವಿಷ್ಣು ಸಹಸ್ರನಾಮ ಬಹಳ ಕಾಲಗಳಿಂದ ನಡೆದುಕೊಂಡು ಬರುತ್ತಿದೆ. ದೇವಸ್ಥಾನದ ಚಾವಡಿಗಳಲ್ಲಿ ಧಾರ್ಮಿಕ ಕಾರ್ಯಗಳು ನಡೀತಾ ಇರಬೇಕು. ವಿಷ್ಣು ದೇವಸ್ಥಾನಗಳಲ್ಲಿ ರುದ್ರಯಾಗ ನಡೆಯುತ್ತದೆ. ದುರ್ಗಾ ದೇವಸ್ಥಾನಗಳಲ್ಲಿ ಸತ್ಯನಾರಾಯಣ ಪೂಜೆ, ಶನಿ ಪೂಜೆಗಳು ನಡೆದುಕೊಂಡು ಬರುತ್ತಿವೆ. ಯಾವುದೇ ದೇವರ ಭಾವಚಿತ್ರಗಳನ್ನು ದೇವಸ್ಥಾನದಲ್ಲಿ ಇಟ್ಟು ಪೂಜೆ ಮಾಡುತ್ತಿದ್ದೀರಿ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಶಿವ ದುರ್ಗೆ ವಿಷ್ಣುವಿನ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಇದು ತಪ್ಪು ಅಂತ ನೀವು ಹೇಳ್ತೀರಾ? ವರಮಹಾಲಕ್ಷ್ಮಿ, ಶನಿ ಪೂಜೆಗಳು ದೇವಸ್ಥಾನಗಳಲ್ಲಿ ನಡೆಯುತ್ತದೆ ಇದು ತಪ್ಪಾ ಎಂದು ಧಾರ್ಮಿಕ ದತ್ತಿ ಇಲಾಖೆಗೆ ಪ್ರಶ್ನೆ ಮಾಡಿದರು.

    ದೇವಸ್ಥಾನದ ಪದ್ಧತಿಗಳಿಗೆ ಇಂತಹ ಬೆಳವಣಿಗೆಗಳಿಂದ ಯಾವ ತೊಂದರೆ ಆಗಿದೆ ಎಂದು ಸ್ಪಷ್ಟಪಡಿಸಬೇಕು. ಅನಗತ್ಯವಾದ ಚರ್ಚೆಗೆ ಸರ್ಕಾರ ಎಡೆ ಮಾಡಿಕೊಟ್ಟಿದೆ. ಯಾವುದೋ ಕಲ್ಯಾಣ ಮಂಟಪಗಳು ಯುವಕ ಮಂಡಲ ಸಾರ್ವಜನಿಕ ಸಭಾಂಗಣದಲ್ಲಿ ನಡೆಯುವ ಬದಲು ಧಾರ್ಮಿಕ ಕೆಲಸಗಳು ದೇವಸ್ಥಾನಗಳಲ್ಲಿ ನಡೆದರೆ ಏನು ತಪ್ಪು? ದೇವಸ್ಥಾನಗಳಲ್ಲಿ ಋಷಿಮುನಿಗಳು ಆಚಾರತ್ರಯರ ಜಯಂತಿ ಮಾಡದೆ ಹೋದರೆ ಇದನ್ನೆಲ್ಲಾ ಸಾರ್ವಜನಿಕ ಕಟ್ಟೆಗಳಲ್ಲಿ ರಸ್ತೆ ಬದಿಗಳಲ್ಲಿ ಮಾಡಲು ಸಾಧ್ಯವೇ? ಧಾರ್ಮಿಕ ಸನಾತನ ಧರ್ಮದ ಚೌಕಟ್ಟಿನಲ್ಲಿ ಇಂಥ ಆಚರಣೆಗಳು ಆಗದಿದ್ದರೆ ಏನು ಪ್ರಯೋಜನ? ರಾಮಾನುಜಾಚಾರ್ಯರು ಶಂಕರಾಚಾರ್ಯರು ಮಧ್ವಾಚಾರ್ಯ ಜಯಂತಿ ಜಯಂತಿಗಳು ಒಂದು ದೇವಸ್ಥಾನಗಳಲ್ಲಿ ನಡೆಯುತ್ತಿದೆ ಎಂದರೆ ಖುಷಿ ಪಡಬೇಕು ಅದಕ್ಕೆ ವಿರೋಧ ವ್ಯಕ್ತಪಡಿಸುವುದಲ್ಲ. ಸನಾತನ ಧರ್ಮಕ್ಕೆ ಯಾರೆಲ್ಲ ಕೊಡುಗೆಗಳನ್ನು ಕೊಟ್ಟಿದ್ದಾರೆ ಅವರನ್ನು ದೇವಸ್ಥಾನಗಳಲ್ಲಿ ಆಚರಣೆ ಮಾಡಿದರೆ ಏನು ನಷ್ಟ. ಯಾರಿಗೆ ಏನು ಸಮಸ್ಯೆ. ಹಾಗಾದರೆ ಸಮಾಜಕ್ಕೆ ಕೊಡುವ ಸಂದೇಶಗಳಾದರೂ ಏನು ಸಮಾಜವನ್ನು ಒಗ್ಗೂಡಿಸುವ ಕೆಲಸ ಬಿಟ್ಟು ಅದರಲ್ಲಿ ಹುಳಿ ಹಿಂಡುವ ಕೆಲಸವನ್ನು ಮಾಡಬೇಡಿ. ಕೆಲಸದಲ್ಲಿ ಹುಳುಕು ಅನ್ನು ಹುಡುಕುವ ಪ್ರಯತ್ನ ಮಾಡಬಾರದು. ತಪ್ತ ಮುದ್ರಾಧಾರಣೆಯಿಂದ ದೈಹಿಕ ಕ್ಷಮತೆ. ವೈಜ್ಞಾನಿಕವಾಗಿ ದೇಹಕ್ಕೆ ಬೇಕಾಗುವಂತಹ ಕ್ಷಮತೆಯನ್ನು ತಪ್ತ ಮುದ್ರಾಧಾರಣೆ ಕೊಡುತ್ತದೆ. ಎಲ್ಲಾ ಸಮುದಾಯದವರು ಮುದ್ರಾಧಾರಣೆಯನ್ನು ಮಾಡಿಸಿಕೊಂಡು ಬರುತ್ತಾರೆ. ದೇಹದಲ್ಲಿ ಪ್ರತಿರೋಧ ಶಕ್ತಿಯನ್ನು ಹೆಚ್ಚಿಸುತ್ತದೆ. ಚೆನ್ನೈನಲ್ಲಿ ಅನೇಕ ಸಂಖ್ಯೆಯಲ್ಲಿ ಬ್ರಾಹ್ಮಣರೇತರರು ಮುದ್ರಾ ಆಧಾರಣೆಯನ್ನು ಮಾಡಿಕೊಂಡು ಬರುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇವಾಲಯಗಳಲ್ಲಿ ಮುದ್ರಾಧಾರಣೆ ಮಾಡುವಂತಿಲ್ಲ: ವಿವಾದಕ್ಕೆ ಕಾರಣವಾಯ್ತು ಮುಜರಾಯಿ ಇಲಾಖೆ ಆದೇಶ

    ದೇವಾಲಯಗಳಲ್ಲಿ ಮುದ್ರಾಧಾರಣೆ ಮಾಡುವಂತಿಲ್ಲ: ವಿವಾದಕ್ಕೆ ಕಾರಣವಾಯ್ತು ಮುಜರಾಯಿ ಇಲಾಖೆ ಆದೇಶ

    ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ ಆದೇಶವೊಂದು ಈಗ ವಿವಾದಕ್ಕೆ ಕಾರಣವಾಗಿದೆ.

    ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಮುದ್ರಾಧಾರಣೆ, ಜಯಂತಿ ಆಚರಣೆ ಮಾಡುವುದು, ಭಾವಚಿತ್ರಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ನವೆಂಬರ್ 2ರಂದು ಆದೇಶ ಹೊರಡಿಸಲಾಗಿದೆ.

    ಇವುಗಳೆಲ್ಲಾ ಆಗಮ ಶಾಸ್ತ್ರಕ್ಕೆ ವಿರುದ್ಧವಾಗಿದ್ದು, ಇವುಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ತಪ್ಪಿದಲ್ಲಿ ಅಂಥವರ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಈ ಆದೇಶಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದು ಅಸಂಬದ್ಧ ಆದೇಶ. ಇದನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಮಾಧ್ವ ತತ್ವದ ಅನುಯಾಯಿಗಳು ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೋದಿ ಬೆಂಗಳೂರು ಡೈರಿ: ಎಷ್ಟು ಗಂಟೆಗೆ ಏನು ಕಾರ್ಯಕ್ರಮ? ಯಾವೆಲ್ಲ ರಸ್ತೆಗಳು ಬಂದ್‌?

     

     

    ತ್ರಿಮತಸ್ಥ ಬ್ರಾಹ್ಮಣ ಪಂಗಡಗಳ ನಡುವೆ ಒಡಕು ಮೂಡಿಸುವ ಪಿತೂರಿ ನಡೆಯುತ್ತಿದೆ. ದೇಗುಲಗಳಲ್ಲಿ ಆಚಾರ್ಯರ ಜಯಂತಿ ನಡೆಸಿದರೆ ತಪ್ಪೇನು ಎಂದು ಪ್ರಶ್ನೆ ಮಾಡುತ್ತಿದ್ದಾರೆ. ವಿಶೇಷವಾಗಿ ಕರಾವಳಿ ಭಾಗದ ದೇವಾಲಯಗಳಲ್ಲಿ ಈ ಆದೇಶದಿಂದ ಸಮಸ್ಯೆ ಆಗುತ್ತದೆ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಈ ಬಗ್ಗೆ ಕೇಳಿದರೆ ನನಗೆ ಈ ಆದೇಶದ ಬಗ್ಗೆ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೇಲೂರು ದೇವಾಲಯದಲ್ಲಿ ಗಳಿಗೆ ತೇರಿನ ದಿನ ಕುರಾನ್ ಪಠಣೆ ನಡೆಯುತ್ತೆ

    ಬೇಲೂರು ದೇವಾಲಯದಲ್ಲಿ ಗಳಿಗೆ ತೇರಿನ ದಿನ ಕುರಾನ್ ಪಠಣೆ ನಡೆಯುತ್ತೆ

    ಹಾಸನ: ದೇವಾಲಯದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ರೂಢಿ, ಸಂಪ್ರದಾಯ, ಪದ್ಧತಿಗಳನ್ನು ಮೀರಲು ಅಧಿಕಾರವಿರುವುದಿಲ್ಲ ಎಂದು ಧಾರ್ಮಿಕದತ್ತಿ ಇಲಾಖೆ ಸ್ಪಷ್ಟಪಡಿಸಿದೆ.

    ಬೇಲೂರು ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವದ ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರವಾಗಿ ಎದ್ದಿರುವ ವಿವಾದಕ್ಕೆ ಇಲಾಖೆ ಸ್ಪಷ್ಟನೆ ನೀಡಿದೆ. ಚನ್ನಕೇಶವಸ್ವಾಮಿಗೆ ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರವಾಗಿ ವಿವಾದವಾಗಿತ್ತು. ಈ ವಿಷಯವನ್ನು ರಾಜ್ಯ ಮುಜರಾಯಿ ಇಲಾಖೆ ಆಯುಕ್ತರಾದ ರೋಹಿಣಿ ಸಿಂಧೂರಿ ಅವರ ಗಮನಕ್ಕೆ ತರಲಾಗಿದ್ದು, ಅವರ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ವಿದ್ಯುಲ್ಲತಾ ತಿಳಿಸಿದ್ದರು. ಇದನ್ನೂ ಓದಿ: ಬೇಲೂರು ಗಳಿಗೆ ತೇರಿನ ದಿನ ಕುರಾನ್ ಪಠಣೆ ನಮ್ಮ ಕೈಪಿಡಿಯಲ್ಲೇ ಇದೆ: ಸಿಇಒ ವಿದ್ಯುಲ್ಲತಾ

    ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರ ನಮ್ಮ ಕೈಪಿಡಿಯಲ್ಲೇ ಇದೆ. ಗಳಿಗೆ ತೇರಿನ ದಿನ ದೇವಾಲಯದ ಬಳಿ ನಿಂತು ಕುರಾನ್ ಪಠಣೆ ಮಾಡಲಾಗುತ್ತದೆ. ಪ್ರತಿ ವರ್ಷವೂ ಅದು ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಸ್ವಲ್ಪ ಚರ್ಚೆಗಳಾಗುತ್ತಿವೆ. ಹೀಗಾಗಿ ಗಳಿಗೆ ತೇರಿನ ದಿನ (ಚಿಕ್ಕತೇರು) ಕುರಾನ್ ಪಠಣೆ ನಡೆಯುವುದರ ಬಗ್ಗೆ ಆಯುಕ್ತರಾದ ರೋಹಿಣಿ ಸಿಂಧೂರಿಯವರ ಗಮನಕ್ಕೆ ತಂದಿದ್ದೇನೆ. ಅವರ ನಿರ್ದೇಶನದ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದರು.

    ಇದೀಗ ಈ ಬಗ್ಗೆ ಧಾರ್ಮಿಕದತ್ತಿ ಇಲಾಖೆ ಸ್ಪಷ್ಟನೆ ನೀಡಿದೆ. ದೇವಾಲಯದಲ್ಲಿ ಹಿಂದಿನಿಂದ ಬಂದಿರುವ ರೂಢಿ, ಸಂಪ್ರದಾಯ, ಪದ್ಧತಿಯನ್ನು ಮೀರಲು ಅಧಿಕಾರ ಇರುವುದಿಲ್ಲ. ಈ ಕಾರಣ ಸದರಿ ದೇವಾಲಯದಲ್ಲಿ ವಾರ್ಷಿಕ ಬ್ರಹ್ಮರಥೋತ್ಸವವನ್ನು ಆಗಮಶಾಸ್ತ್ರ ರೀತಿ ಹಾಗೂ ಹಿಂದಿನಿಂದ ನಡೆದುಬರುತ್ತಿರುವ ರೂಢಿಯಲ್ಲಿರುವ ಸಂಪ್ರದಾಯ ಪದ್ಧತಿಯಂತೆ ನಡೆಸಲು ಸೂಚಿಸಬಹುದಾಗಿರುತ್ತದೆ ಎಂದು ಆಯುಕ್ತರ ಪರವಾಗಿ ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ. ಇದನ್ನೂ ಓದಿ: ತಿರುಪತಿ ದೇಗುಲದಲ್ಲಿ ಕಾಲ್ತುಳಿತ – ವೆಂಕಟೇಶ್ವರನ ದರ್ಶನಕ್ಕೆ ಭಕ್ತಾದಿಗಳ ನೂಕುನುಗ್ಗಲು

  • ರಾಜ್ಯದಲ್ಲಿ ಯುಗಾದಿಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಶಶಿಕಲಾ ಜೊಲ್ಲೆ ಸೂಚನೆ

    ರಾಜ್ಯದಲ್ಲಿ ಯುಗಾದಿಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಶಶಿಕಲಾ ಜೊಲ್ಲೆ ಸೂಚನೆ

    ಬೆಂಗಳೂರು: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿ ಹಬ್ಬದ ದಿನವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚಿಸಿದ್ದಾರೆ.

    ರಾಜ್ಯದಲ್ಲಿ ಅನೇಕ ಇಲಾಖೆಗಳು ತಮ್ಮ ಇಲಾಖೆಯ ಧ್ಯೇಯೋದ್ದೇಶಗಳನ್ನು ಹೊಂದುವ ಹೆಸರಿನಲ್ಲಿ ವರ್ಷದ ಒಂದು ದಿನದಲ್ಲಿ ಇಲಾಖೆಯ ದಿನಾಚರಣೆಯನ್ನು ಆಚರಿಸುತ್ತಿವೆ. ಹಾಗೆಯೇ ಧಾರ್ಮಿಕ ದತ್ತಿ ಇಲಾಖೆಯೂ ಧಾರ್ಮಿಕ ಹಿನ್ನೆಲೆ ಮತ್ತು ಮನೋಭಾವ ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು `ಧಾರ್ಮಿಕ ದಿನ’ವೆಂಬ ಹೆಸರಿನಿಂದ ಆಚರಣೆ ಮಾಡುವುದು ಸೂಕ್ತ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹೆಡ್‌ಫೋನ್ ತೆಗೆದ ಯಡಿಯೂರಪ್ಪ – ಸಿದ್ದುಗೆ ಶಾಕ್!

    ರಾಜ್ಯದ ಕೆಲವು ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಕೆಲ ಭಾಗಗಳಲ್ಲಿ ಸೌರಮಾನ ಯುಗಾದಿಯಂದೇ ಆಚರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಿಂದಲೇ ಯುಗಾದಿಯ ದಿನದಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿಯೂ ಧಾರ್ಮಿಕ ದಿನ ಆಚರಣೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ಅಂದು ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿಯ ಬಗ್ಗೆ ಸಾರ್ವಜನಿಕರ ಗಮನ ಸೆಳೆಯುವ ನಿಟ್ಟಿನಲ್ಲಿ ವಿಶೇಷ ಪಂಚಾಂಗ ಶ್ರವಣ, ಹೊಸ ಸಂವತ್ಸರದ ಶುಭಾಶುಭ ಫಲಗಳು, ಆದಾಯ ವ್ಯಯಗಳು, ನಕ್ಷತ್ರಗಳ ಫಲಗಳು ಮುಂತಾದವುಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಲ್ಲದೆ ಚಾಂದ್ರಮಾನ ಯುಗಾದಿ ದಿನದಂದು, ಜೀವನದಲ್ಲಿ ಕಷ್ಟ ಸುಖಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂಬ ಸಮಚಿತ್ತ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ರೂಢಿಯಲ್ಲಿರುವಂತೆ ದೇವಾಲಯಗಳಲ್ಲಿ ಬೇವು ಮತ್ತು ಬೆಲ್ಲ ವಿತರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವರು ಸೂಚಿಸಿದ್ದಾರೆ. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

    ಈ ದಿನದಂದು ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

    ಧಾರ್ಮಿಕ ದಿನಾಚರಣೆಯ ವಿಶೇಷತೆಗಳೇನು?
    1. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಯುಗಾದಿಯನ್ನು `ಧಾರ್ಮಿಕ ದಿನ’ವನ್ನಾಗಿ ಆಚರಿಸುವುದು
    2. ದೇವಾಲಯಗಳಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಕೈಗೊಳ್ಳುವುದು
    3. ದೇವಾಲಯಗಳಲ್ಲಿ ಸಕ್ರೀಯವಾಗಿರುವ ಸ್ವಯಂ ಸೇವಕ ತಂಡಗಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ
    5. ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಯಪಡಿಸುವ ರೀತಿಯಲ್ಲಿ ಕ್ರಿಯಾತ್ಮಕ ಆಚರಣೆ

  • ಮಂಗಳೂರು, ಉಡುಪಿ ಬಳಿಕ ಬೆಂಗಳೂರಿಗೂ ವ್ಯಾಪಿಸಿದ ಧರ್ಮ ಸಂಘರ್ಷ

    ಮಂಗಳೂರು, ಉಡುಪಿ ಬಳಿಕ ಬೆಂಗಳೂರಿಗೂ ವ್ಯಾಪಿಸಿದ ಧರ್ಮ ಸಂಘರ್ಷ

    ಬೆಂಗಳೂರು: ಮಂಗಳೂರು, ಉಡುಪಿ ಬಳಿಕ ಬೆಂಗಳೂರಿಗೂ ಧರ್ಮ ಸಂಘರ್ಷ ವ್ಯಾಪಿಸಿದೆ. ನಗರದ ಬನಶಂಕರಿ ದೇಗುಲ ಸೇರಿದಂತೆ ಬೆಂಗಳೂರಿನ ಮುಜರಾಯಿ ದೇಗುಲದಲ್ಲಿಯೂ ಜಾತ್ರಮಹೋತ್ಸವ ಸೇರಿದಂತೆ ದೇಗುಲದ ಅವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧಕ್ಕೆ ಆಗ್ರಹ ಕೇಳಿಬಂದಿದೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಧಾರ್ಮಿಕ ದತ್ತಿ ಇಲಾಖೆಯ ಬೆಂಗಳೂರು ನಗರ ಸದಸ್ಯ ವೆಂಕಟೇಶ್ ಮೂರ್ತಿ, ಬನಶಂಕರಿ ದೇಗುಲ ಸೇರಿದಂತೆ ಬೆಂಗಳೂರಿನ ಮುಜರಾಯಿ ದೇಗುಲದಲ್ಲಿಯೂ ಜಾತ್ರಮಹೋತ್ಸವ ಸೇರಿದಂತೆ ದೇಗುಲದ ಅವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡದಂತೆ ಪತ್ರ ಬರೆಯುತ್ತೇನೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. 2002ರ ಇಲಾಖೆಯ ಕಾಯ್ದೆಯ ಜಾರಿಗೆ ಕ್ರಮ ಕೈಗೊಳ್ಳಬೇಕು. ಇತ್ತೀಚೆಗೆ ರಾಮೇಶ್ವರ ದೇಗುಲದ ಬ್ರಹ್ಮರಥೋತ್ಸವ ಆಹ್ವಾನ ಪತ್ರಿಕೆಯ ಮುಖಪುಟದಲ್ಲಿ ದೇಗುಲದ ಹೆಸರು ಹಾಕದೇ ಸ್ಥಳೀಯ ಮುಸ್ಲಿಂ ಶಾಸಕ ಜಮೀರ್ ಅಹ್ಮದ್ ಹೆಸರನ್ನೇ ದೊಡ್ಡದಾಗಿ ಅಚ್ಚು ಹಾಕಿದ್ದಾರೆ. ಇದು ಸರಿಯಲ್ಲ. ಮಸೀದಿ ಚರ್ಚ್‍ಗಳಲ್ಲಿ ಹಿಂದೂಗಳಿಗೆ ವ್ಯಾಪಾರಕ್ಕೆ ಅನುವು ಮಾಡಿಕೊಡಲ್ಲ. ಹೀಗಾಗಿ ಬನಶಂಕರಿ ದೇಗುಲದಲ್ಲಿ ಸೇರಿದಂತೆ ಬೆಂಗಳೂರು ನಗರದ ಪ್ರಮುಖ ದೇಗುಲದಲ್ಲಿ ಅನ್ಯ ಧರ್ಮಿಯ ವ್ಯಾಪಾರಿಗಳಿಗೆ ಅವಕಾಶ ಕೊಡದಂತೆ ಪತ್ರ ಬರೆಯುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವ್ಯಾಪಾರಿಗಳಿಗೆ ನಿಷೇಧ: ನಿಯಮ ಏನಿದೆ?

    ಮುಂದಿನ ತಿಂಗಳು ನಡೆಯಲಿರುವ ಬೆಂಗಳೂರು ಕರಗ ಮಹೋತ್ಸದಲ್ಲಿಯೂ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡಬೇಕಾ ಬೇಡ್ವ ಎನ್ನುವುದರ ಬಗ್ಗೆ ಹಿಂದೂ ಸಂಘಟನೆಗಳಿಂದ ಇಂದು ಸಭೆ ನಡೆಯಲಿದೆ. ಧರ್ಮರಾಯ ದೇಗುಲದ ಆಡಳಿತ ಮಂಡಳಿಯ ಜೊತೆ ಕೆಲ ಹಿಂದೂ ಮುಖಂಡರ ಸಭೆ ಕರೆದಿದ್ದು, ಸಭೆಯ ಬಳಿಕ ಅಂತಿಮ ನಿರ್ಧಾರ ಪ್ರಕಟ ಸಾಧ್ಯತೆ ಇದೆ. ಇದನ್ನೂ ಓದಿ: ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ

    ನಿಯಮ ಏನಿದೆ?
    ಮುಸ್ಲಿಮರಿಗೆ ಅಂಗಡಿ ಹಾಕಲು ಅವಕಾಶ ನಿರಾಕರಿಸುತ್ತಿರುವ ದೇಗುಲದ ಆಡಳಿತ ಮಂಡಳಿಗಳು, 2002ರಲ್ಲಿ ರೂಪಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಯ ನಿಯಮವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿ ಪುಸ್ತಕದ ಪುಟ ಸಂಖ್ಯೆ 446ರಲ್ಲಿರುವ 12 ನಿಯಮದಲ್ಲಿ, ಸಂಸ್ಥೆಯ ಸಮೀಪದ ಜಮೀನು ಕಟ್ಟಡ ಮತ್ತು ನಿವೇಶನಗಳೂ ಸೇರಿದಂತೆ ಯಾವುದೇ ಸವತ್ತನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡತಕ್ಕದಲ್ಲ ಎಂದು ಉಲ್ಲೇಖಿಸಲಾಗಿದೆ.

    ಇದೀಗ ಇದೇ ನಿಯಮವನ್ನು ನಾವು ಜಾರಿ ಮಾಡಿದ್ದೇವೆ ಎಂದು ಕಾಪು ಮಾರಿಗುಡಿ ಆಡಳಿತ ಮಂಡಳಿ ಹೇಳುತ್ತಿದೆ. ಹಿಂದೂ ಸಂಘಟನೆಗಳಿಗೂ ಈ ನಿಯಮವನ್ನು ಮುಂದಿಟ್ಟುಕೊಂಡು ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿ ಹಿಂದೂಯೇತರ ವ್ಯಕ್ತಿಗಳಿಗೆ ಅನುಮತಿ ನೀಡದಂತೆ ಮನವಿ ಮಾಡುತ್ತಿದೆ.

    ಈ ನಿಯಮ ಜಾರಿಯಾಗಿದ್ದು 2002ರಲ್ಲಿ. ಈ ವೇಳೆ ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇದ್ದಿದ್ದು ಎಸ್‍ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ. ಇಂದು ಅದೇ ಕಾಂಗ್ರೆಸ್ಸಿಗರು ಇದು ಸರಿಯಲ್ಲ ಎನ್ನುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ಮೌನವಾಗಿದೆ, ಒಳಗೊಳಗೆ ಖುಷಿ ಪಡುತ್ತಿದೆಯಾ?: ಯು.ಟಿ ಖಾದರ್

    ಹಿಜಬ್ ವಿವಾದ ಸೃಷ್ಟಿಯಾಗುವರೆಗೂ ಈ ನಿಯಮ ಇದೆ ಎನ್ನುವದು ಬಹುತೇಕ ಮಂದಿಗೆ ತಿಳಿದಿರಲಿಲ್ಲ. ಅಷ್ಟೇ ಅಲ್ಲದೇ ಕರಾವಳಿ ಭಾಗದಲ್ಲಿ ಹಿಂದೂ ದೇವಾಲಯಗಳಲ್ಲಿ ಇಲ್ಲಿಯವರೆಗೂ ಮುಸ್ಲಿಮ್ ವ್ಯಾಪಾರಿಗಳು ಅಂಗಡಿಗಳನ್ನು ತೆರೆಯುತ್ತಿದ್ದರು. ಆದರೆ ಹಿಜಬ್ ವಿವಾದ, ಕರ್ನಾಟಕ ಬಂದ್ ಬಳಿ ಈ ನಿಯಮ ಮುನ್ನೆಲೆಗೆ ಬಂದಿದೆ.

  • ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ ಎಂದು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

    GOVU

    ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೆನಡಾ ರಕ್ಷಣಾ ಸಚಿವರಾಗಿ ಭಾರತ ಮೂಲದ ಅನಿತಾ ಆನಂದ್ ಆಯ್ಕೆ

    ಆ ದಿನ ಗೋವುಗಳನ್ನು ದೇವಾಲಯಕ್ಕೆ ಕರೆತಂದು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಬೇಕು. ನಂತರ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಬೇಕು ಎಂದು ತಿಳಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.

    GOVU POOJA

    ಅನಾದಿಕಾಲದಿಂದಲೂ ನಮ್ಮ ಪೂರ್ವಿಕರು ಗೋವಿನ ಪೂಜೆ ಮಾಡುತ್ತಿದ್ದರು. ಇದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಕರ್ನಾಟಕದಲ್ಲೂ ಹಿಂದಿನಿಂದಲೂ ಗೋಪೂಜೆ ಮಾಡುವ ಪದ್ಧತಿ ಇತ್ತು. ಆದರೆ ಆಧುನಿಕ ಕಾಲದಲ್ಲಿ ನಮ್ಮ ಜನತೆ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಅಧಿಕೃತ ಅರ್ಜಿ ಸಲ್ಲಿಕೆ

    ಬಲಿಪಾಡ್ಯಮಿ ದಿನ ಗೋಪೂಜೆ ಮಾಡುವುದು ಶ್ರೇಷ್ಠ. ಈ ಪದ್ಧತಿಯನ್ನು ನಾಡಿನ ಜನತೆ ಮರೆಯಬಾರದು ಎಂದು ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

  • ಹಿಂದೂ ಧಾರ್ಮಿಕ ದತ್ತಿ ಇಲಾಖೆ, ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ

    ಹಿಂದೂ ಧಾರ್ಮಿಕ ದತ್ತಿ ಇಲಾಖೆ, ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ

    – ಸರ್ಕಾರದಿಂದ ಅಧಿಕೃತ ಆದೇಶ

    ಮಂಗಳೂರು: ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ.

    ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸೂಚನೆಯಂತೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಕೊಡುವ ಹಕ್ಕಿದೆ: ಸಚಿವ ಕೋಟ

    ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡಬೇಕು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾಧರಿಸಿ ಸರ್ಕಾರ ಆದೇಶ ನೀಡಿದೆ.

  • ಸಂಕಷ್ಟದಲ್ಲಿ ಅರ್ಚಕ ಸಮುದಾಯ- ಸರ್ಕಾರದಿಂದ ಪರಿಹಾರಕ್ಕಾಗಿ ಮನವಿ

    ಸಂಕಷ್ಟದಲ್ಲಿ ಅರ್ಚಕ ಸಮುದಾಯ- ಸರ್ಕಾರದಿಂದ ಪರಿಹಾರಕ್ಕಾಗಿ ಮನವಿ

    – ಹಲವರ ಮನೆಗಳಲ್ಲಿ ಅನಾರೋಗ್ಯದಿಂದ ಔಷಧಿ ಕೊಳ್ಳಲು ಹಣವಿಲ್ಲ

    ಬೆಂಗಳೂರು: ಕೊರೊನಾದಿಂದಾಗಿ ಅರ್ಚಕರ ಸಮುದಾಯ ಸಹ ಸಂಕಷ್ಟಕ್ಕೆ ಸಿಲುಕಿದ್ದು, ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ 35 ಸಾವಿರಕ್ಕೂ ಅಧಿಕ ದೇವಾಲಯಗಳ ಅರ್ಚಕರಿಗೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಅರ್ಚಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್.ದೀಕ್ಷಿತ್ ಮನವಿ ಮಾಡಿದ್ದಾರೆ.

    ವೀಡಿಯೋ ಮೂಲಕ ಕೇಳಿಕೊಂಡಿರುವ ಅವರು, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ 35 ಸಾವಿರಕ್ಕೂ ಅಧಿಕ ದೇವಾಲಯಗಳ ಅರ್ಚಕರು ತುಂಬಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನಾರೋಗ್ಯದಿಂದ ಕೆಲವರು ತುಂಬಾ ಕಷ್ಟಪಡುತ್ತಿದ್ದಾರೆ. ಔಷಧಿ, ಚಿಕಿತ್ಸೆಗಾಗಿ ಹಣವಿಲ್ಲ. ಹೀಗಾಗಿ ಎಲ್ಲ ಅರ್ಚಕರಿಗೂ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

    ಗ್ರಾಮಾಂತರ ಪ್ರದೇಶದಲ್ಲಿರುವ ಮುಜರಾಯಿ ದೇವಾಲಯಗಳಿಗೆ ಪೂಜೆಯ ಸಾಮಗ್ರಿಗಳನ್ನು ಕೊಳ್ಳಲು ಹಾಗೂ ಪೂಜೆ ನಡೆಸುವ ಅರ್ಚಕರ ಸಂಭಾವನೆ ಎರಡೂ ಸೇರಿ ದಿನಕ್ಕೆ 135 ರೂ. ನೀಡಲಾಗುತ್ತಿದೆ. ಆದರೆ ಇದೀಗ ವಸ್ತುಗಳ ಬೆಲೆ ಗಗನಕ್ಕೆ ಮುಟ್ಟಿದ್ದು, ದೇವಸ್ಥಾನಗಳಲ್ಲಿ ನಿತ್ಯ ಪೂಜೆ ನಡೆಸಲು ತುಂಬಾ ತೊಂದರೆಯಾಗುತ್ತಿದೆ. ಹೀಗಾಗಿ ಭತ್ಯೆಯನ್ನು ಇಂದಿನ ಬೆಲೆಗಳಿಗೆ ಅನುಗುಣವಾಗಿ ಪ್ರತಿ ದಿನಕ್ಕೆ 250 ರೂ.ಗೆ ಹೆಚ್ಚಿಸಬೇಕು ಎಂದು ದೀಕ್ಷಿತ್ ಮನವಿ ಮಾಡಿದ್ದಾರೆ.

    ದೇವಸ್ಥಾನಗಳಿಗೆ ನೀಡುವ ಅನುದಾನ ಈಗಲೂ 1, 2 ರೂ ಇದೆ. ಅಲ್ಲದೆ ನಗದು ಅನುದಾನ ವಾರ್ಷಿಕ 6 ಸಾವಿರ ರೂ. ಮಾತ್ರ ಇದೆ. ಇದನ್ನೂ ಹೆಚ್ಚಿಸಬೇಕು ಎಂದು ಒಕ್ಕೂಟ ತಿಳಿಸಿದೆ.