Tag: ಧೈರ್ಯಂ ಸರ್ವತ್ರ ಸಾಧನಂ

  • ಕನ್ನಡದ ಚಿತ್ರವನ್ನು ಬೆಂಬಲಿಸಿದ ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್

    ಕನ್ನಡದ ಚಿತ್ರವನ್ನು ಬೆಂಬಲಿಸಿದ ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್

    ಎ.ಆರ್.ಸಾಯಿರಾಮ್ ಕಥೆ,ಚಿತ್ರಕಥೆ, ಸಂಭಾಷಣೆ ಹಾಗೂ ಗೀತರಚನೆ ಮಾಡಿ ಆಕ್ಷನ್ ಕಟ್ ಹೇಳಿರುವ ವಿನೂತನ ಶೀರ್ಷಿಕೆ ಹೊಂದಿರುವ ’ಧೈರ್ಯಂ ಸರ್ವತ್ರ ಸಾಧನಂ’ (ಡಿಎಸ್‌ಎಸ್)  (Dariyam Sarvatra Sadhanam) ಚಿತ್ರದ ಟೀಸರ್‌ ಅನ್ನು ನಟ ವಸಿಷ್ಠ ಸಿಂಹ (Vasishtha Simha)ಅನಾವರಣಗೊಳಿಸಿ ಶುಭ ಹಾರೈಸಿದ್ದಾರೆ. ನಂತರ ಮಾತನಾಡಿದ ಅವರು ಒಂದು ದೃಶ್ಯದಲ್ಲಿ ಮಲಗಿರುವ ವ್ಯಕ್ತಿಯ ಮೇಲೆ, ಒಬ್ಬರ ಮೇಲೊಬ್ಬರು ಒಟ್ಟು ಮೂರು ಜನ ನಿಂತಿರುವುದು ಕುತೂಹಲ ಕೆರಳಿಸಿದೆ. ಇದನ್ನು ತಿಳಿಯಲು ಚಿತ್ರಮಂದಿರಕ್ಕೆ ತಾವುಗಳು ಬರಬೇಕು. ಒಳ್ಳೆ ಸಂದೇಶದೊಂದಿಗೆ ಸಮಾಜದಲ್ಲಿ ನಡೆದಿರುವ ವಿಷಯಗಳನ್ನು ಪರದೆ ಮೇಲೆ ತೋರಿಸಿರುವುದು ಕಂಡು ಬಂದಿದೆ. ಇಂತಹ ಸಿನಿಮಾಗಳು ಜನರಿಗೆ ತಲುಪಬೇಕು ಎಂದರು. ಅಲ್ಲದೆ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ನಿರ್ದೇಶನ ಮಾಡಿರುವ ಪಾ.ರಂಜಿತ್ (Pa. Ranjith) ಡಿಜಿಟಲ್‌ನಲ್ಲಿ ಟೀಸರ್ ಬಿಡುಗಡೆ ಮಾಡಿ, ಚಿತ್ರ ನೋಡಲು ನಾನು ಉತ್ಸುಕನಾಗಿದ್ದೇನೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ಟೀಸರ್ ಹೊರಬಂದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿ ಸಂಚಲನ ಮೂಡಿಸಿರುವುದು ತಂಡಕ್ಕೆ ಸಂತಸ ತಂದಿದೆ. ಎಲ್ಲಿಯೂ ಗ್ರಾಫಿಕ್ಸ್ ಬಳಸದೆ ನೈಜತೆಯಲ್ಲಿ ಶೂಟ್ ಮಾಡಿರುವುದು ವಿಶೇಷ. ತುಣುಕುಗಳಲ್ಲಿ ಕೆಲವೊಂದು ಅಂಶಗಳನ್ನು ಗಮನಿಸಿದಾಗ ಇದೊಂದು  ಶೋಷಿತರ ಸಿನಿಮಾ, ಬಡವ ಶ್ರೀಮಂತ, ಅಪ್ಪ ಮಗನ ಬಾಂಧ್ಯವ, ಅಸ್ತಿತ್ವ, ಜ್ಞಾನ ಶಕ್ತಿ ಹೀಗೆ ಎಲ್ಲದರ ಸಂಕೇತ ಇರಲಿದೆಯಾ ಎನ್ನುವ ಬಗ್ಗೆ ಪ್ರಶ್ನೆ ಮೂಡುತ್ತದೆ.

    ಎ.ಪಿ.ಪ್ರೊಡಕ್ಷನ್ ಅಡಿಯಲ್ಲಿ ಉದ್ಯಮಿ ಆನಂದ್ ಬಾಬು.ಜಿ ನಿರ್ಮಾಣ ಮಾಡಿದ್ದಾರೆ. ನಾಯಕನಾಗಿ ವಿವಾನ್.ಕೆ.ಕೆ. ನಾಯಕಿಯಾಗಿ ಅನುಷಾ ರೈ. ವಿಶಿಷ್ಟ ಪಾತ್ರಗಳಲ್ಲಿ ಯಶ್‌ ಶೆಟ್ಟಿ, ಬಲರಾಜ ವಾಡಿ, ಚಕ್ರವರ್ತಿ ಚಂದ್ರಚೂಡ್, ವರ್ಧನ್, ಪ್ರದೀಪ್‌ ಪೂಜಾರಿ ರಾಮ್‌ ಪವನ್. ಉಳಿದಂತೆ ಪದ್ಮಿನಿ ಶೆಟ್ಟಿ, ಅರ್ಜುನ್‌ ಪಾಳೆಗಾರ, ರಾಮ್‌ ನಾಯಕ್, ಹೊಂಗಿರಣ ಚಂದ್ರು ಮತ್ತು ರಂಗಭೂಮಿ ಕಲಾವಿದರುಗಳಿಗೆ ಅವಕಾಶ ಮಾಡಿಕೊಡಲಾಗಿದೆ.

     

    ಹೃದಯಶಿವ, ಕಿನ್ನಾಳ್‌ ರಾಜ್, ಅರಸು ಅಂತಾರೆ ಸಾಹಿತ್ಯದ ಐದು ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದಾರೆ. ಭಾರತದ ಎಲ್ಲಾ ಭಾಷೆಯ ಸೂಪರ್ ಹಿಟ್ ಚಿತ್ರಗಳಿಗೆ ಕೆಲಸ ಮಾಡಿರುವ ರವಿಕುಮಾರ್ ಸನಾ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ಕುಂಗುಫು ಚಂದ್ರು ಸಾಹಸ, ಕ್ಯಾಪ್ಟನ್ ಕಿಶೋರ್ ನೃತ್ಯ ಇರಲಿದೆ. ತುಮಕೂರು, ಕೊರಟಗೆರೆ, ದೇವರಾಯನದುರ್ಗ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ತಾಂತ್ರಿಕತೆಯಲ್ಲಿ  ಅದ್ದೂರಿತನ ಇರಲಿದ್ದು, ಈಗಾಗಲೇ ಪ್ರಚಾರ ಕಾರ್ಯ ಶುರು ಮಾಡಿಕೊಂಡಿದೆ. ಮುಂದಿನ ತಿಂಗಳು ತೆರೆಗೆ ತರಲು ತಂಡವು ಯೋಜನೆ ರೂಪಿಸಿಕೊಂಡಿದೆ.

  • ‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರದ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ

    ‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರದ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ

    ಧೈರ್ಯಂ ಸರ್ವತ್ರ ಸಾಧನಂ’..ಸ್ಯಾಂಡಲ್ ವುಡ್ ಸಿನಿ ಪ್ರೇಕ್ಷರನ್ನು ರಂಜಿಸಲು ಸಿದ್ದವಾಗಿರುವ ನೂತನ ಚಿತ್ರ. ಪವರ್ ಫುಲ್ ಟೈಟಲ್ ಮೂಲಕ ಸುದ್ದಿಯಲ್ಲಿರುವ ಸಿನಿಮಾ ತಂಡವೀಗ ಚಿತ್ರದ ಮೊಟ್ಟ ಮೊದಲ ಹಾಡು ಬಿಡುಗಡೆ ಮಾಡಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ, ಡೈಲಾಗ್ ರೈಟರ್ ಆಗಿ, ತಾಂತ್ರಿಕ ವಿಭಾಗದಲ್ಲಿ ದುಡಿದು ಅನುಭವ ಇರುವ ಎ. ಆರ್. ಸಾಯಿರಾಮ್ ಚೊಚ್ಚಲ ನಿರ್ದೇಶನದಲ್ಲಿ ಅರಳಿದ ಸಿನಿಮಾ ಧೈರ್ಯಂ ಸರ್ವತ್ರ ಸಾಧನಂ.

    ‘ಹೆಂಡವೇ ನಮ್ಮ ಮನೆ ದ್ಯಾವರು’ ಎಂಬ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಮಾಡಿ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ಹಳ್ಳಿ ಸೊಗಡಿರೋ ಈ ಹಾಡಿಗೆ ನಿರ್ದೇಶಕ ಎ.ಆರ್. ಸಾಯಿರಾಮ್ ಮತ್ತು ಹೃದಯ ಶಿವ ಸಾಹಿತ್ಯ ಬರೆದಿದ್ದು, ದೇವಾನಂದ್ ವರ ಪ್ರಸಾದ್ ಹಾಡಿಗೆ ದನಿಯಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಈ ಹಾಡಿಗಿದೆ. ಚಿತ್ರದಲ್ಲಿ ಹೊಸ ಪ್ರತಿಭೆ ವಿವನ್ ಕೆ.ಕೆ ನಾಯಕ ನಟನಾಗಿ ಅಭಿನಯಿಸಿದ್ದು, ಅನುಷಾ ರೈ ನಾಯಕಿಯಾಗಿ ನಟಿಸಿದ್ದಾರೆ. ಯಶ್ ಶೆಟ್ಟಿ, ಬಾಲ ರಾಜವಾಡಿ, ಪ್ರದೀಪ್ ಪೂಜಾರಿ, ರಾಮ್ ಪವನ್, ವರ್ಧನ್ ತೀರ್ಥಹಳ್ಳಿ, ಚಕ್ರವರ್ತಿ ಚಂದ್ರಚೂಡ್, ಹೊಂಗಿರಣ ಚಂದ್ರು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಚಿತ್ರೀಕರಣ ಕಂಪ್ಲೀಟ್ ಆಗಿ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಸೆನ್ಸಾರ್ ಗೆ ರೆಡಿಯಾಗಿರುವ ಚಿತ್ರತಂಡ ಹಾಡು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದೆ. ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲು  ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಎ. ಪಿ. ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು.ಜಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಐದು ಹಾಡು, ಐದು ಆಕ್ಷನ್ ಸೀನ್ ಗಳಿದ್ದು, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ, ರವಿಕುಮಾರ್ ಸನ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕಿನ್ನಲ್ ರಾಜ್, ಅರಸು ಅಂತಾರೆ, ಹೃದಯ ಶಿವ, ಎ. ಆರ್.ಸಾಯಿರಾಮ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]