Tag: ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

  • ನೀರಜ್ ಚೋಪ್ರಾ ಸೇರಿದಂತೆ ಖೇಲ್ ರತ್ನಗೆ 11 ಸಾಧಕರ ಹೆಸರು ಶಿಫಾರಸು

    ನೀರಜ್ ಚೋಪ್ರಾ ಸೇರಿದಂತೆ ಖೇಲ್ ರತ್ನಗೆ 11 ಸಾಧಕರ ಹೆಸರು ಶಿಫಾರಸು

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ, ಅವನಿ ಲೇಖರಾ ಮತ್ತು ಮಹಿಳಾ ಕ್ರಿಕೆಟ್‍ನಲ್ಲಿ ಸಾಧನೆ ಮಾಡಿದ ಮಿಥಾಲಿ ರಾಜ್ ಸಹಿತ 11 ಕ್ರೀಡಾಪಟುಗಳ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

    ಇಂದು ಪ್ರಕಟಗೊಂಡ ಪ್ರಶಸ್ತಿ ಶಿಫಾರಸು ಪಟ್ಟಿಯಲ್ಲಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ, ಪ್ಯಾರಾಲಂಪಿಕ್ಸ್ ಶೂಟಿಂಗ್‍ನಲ್ಲಿ ಚಿನ್ನದ ಪದಕ ಗೆದ್ದ ಅವನಿ ಲೇಖರಾ, ಮಹಿಳಾ ಕ್ರಿಕೆಟ್‍ನಲ್ಲಿ ಅತೀ ಹೆಚ್ಚು ರನ್ ಸಿಡಿಸಿ ವಿಶ್ವದಾಖಲೆ ಬರೆದಿರುವ ಮಿಥಾಲಿ ರಾಜ್ ಮತ್ತು ಫುಟ್‍ಬಾಲ್‍ನಲ್ಲಿ ಭಾರತದ ಪರ ಅತೀ ಹೆಚ್ಚು ಗೋಲ್ ಬಾರಿಸಿರುವ ಸುನೀಲ್ ಚೆಟ್ರಿ ಅವರ ಹೆಸರನ್ನೂ ಶಿಫಾರಸು ಮಾಡಲಾಗಿದೆ.  ಇದನ್ನೂ ಓದಿ: ಕೋವಿಡ್‍ನಿಂದ 41 ಗರ್ಭಿಣಿಯರು ಸಾವು, 149 ಮಂದಿ ಆತ್ಮಹತ್ಯೆ- ಕೇರಳ ಆರೋಗ್ಯ ಸಚಿವೆ

    ಈ ವರ್ಷ ವಿಶೇಷವಾಗಿ ಬದಲಾದ ಪ್ರಶಸ್ತಿಯ ಹೆಸರಿನ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪಡೆಯಲಿದ್ದಾರೆ. ಈ ಹಿಂದೆ ರಾಜೀವ್ ಗಾಂಧಿ ಖೇಲ್ ರತ್ನ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲಾಗಿತ್ತು. ಆಗಸ್ಟ್ 6 ರಂದು ಪ್ರಧಾನಿ ನರೇಂದ್ರ ಮೋದಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಘೋಷಿಸಿದ್ದರು. ಇದನ್ನೂ ಓದಿ: ಮಂಡಿಯೂರಲು ಒಪ್ಪದ ಡಿ ಕಾಕ್ ಆಫ್ರಿಕಾ ತಂಡದಿಂದ ಔಟ್?

    ಖೇಲ್ ರತ್ನಗೆ ಶಿಫಾರಸುಗೊಂಡ ಕ್ರೀಡಾಪಟುಗಳು:
    ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿಕುಮಾರ್ ದಹಿಯಾ (ಕುಸ್ತಿ), ಶ್ರೀಜೇಶ್ (ಹಾಕಿ) ಲವ್ಲಿನಾ (ಬಾಕ್ಸಿಂಗ್), ಅವನಿ ಲೆಖರಾ (ಶೂಟಿಂಗ್), ಸುನೀಲ್ ಚೆಟ್ರಿ (ಫುಟ್‍ಬಾಲ್), ಪ್ರಮೋದ್ ಭಗತ್ (ಬ್ಯಾಡ್ಮಿಂಟನ್), ಎಂ.ನರ್ವಾಲ್ (ಶೂಟಿಂಗ್), ಕೃಷ್ಣನಗರ್ (ಬ್ಯಾಡ್ಮಿಂಟನ್), ಮಿಥಾಲಿ ರಾಜ್(ಕ್ರಿಕೆಟ್) ಸುಮಿತ್ (ಅಥ್ಲೆಟಿಕ್ಸ್)

  • ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾವಣೆ ಹಿಂದೆ ಮೋದಿ ಸೇಡಿನ ರಾಜಕಾರಣ: ಎಸ್. ಮನೋಹರ್

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾವಣೆ ಹಿಂದೆ ಮೋದಿ ಸೇಡಿನ ರಾಜಕಾರಣ: ಎಸ್. ಮನೋಹರ್

    ಬೆಂಗಳೂರು: ಭಾರತದ ಮಾಜಿ ಪ್ರಧಾನಿಗಳಾದ ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ನೀಡಲಾಗುತ್ತಿದ್ದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನಾ ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದ್ದು ಇಬ್ಬರು ಗಣ್ಯಮಹನೀಯರುಗಳನ್ನು ಅಪಮಾನ ಮಾಡುವ ಸಲುವಾಗಿ ಬದಲಾವಣೆಯನ್ನು ಮಾಡಿ ಪ್ರಧಾನಿ ನರೇಂದ್ರ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಕ.ವಿ.ಕಾ.ಅಧ್ಯಕ್ಷರಾದ ಎಸ್.ಮನೋಹರ್ ಕಿಡಿಕಾರಿದ್ದಾರೆ.

    ನರೇಂದ್ರ ಮೋದಿರವರ ಆಡಳಿತ ವೈಖರಿ ಖಂಡಿಸಿ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಮನೋಹರ್ ಅವರು, ಹಾಕಿ ಮಾಂತ್ರಿಕ ಧ್ಯಾನ್ ಚಂದ್ ರವರು ಮತ್ತು ಮಾಹಿತಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ದೇಶಕ್ಕೆ ಅಪೂರ್ವ ಕೊಡುಗೆ ಮತ್ತು ದೇಶಕ್ಕಾಗಿ ಬಲಿದಾನ ಕೊಟ್ಟ ಮಾಜಿ ಪ್ರಧಾನಿ ರಾಜೀವ್ ಗಾಂಧಿರವರು ಸ್ಮರಣೀಯ ಮಹನೀಯರು. ಒಂದು ಪ್ರಶಸ್ತಿಗೆ ಇಟ್ಟ ಹೆಸರನ್ನು ಬದಲಾಯಿಸಿ, ಇನ್ನೂಬ್ಬ ಮಹನೀಯರ ಹೆಸರು ಇಡುವುದು ಇಬ್ಬರಿಗೂ ಅಪಮಾನ ಮಾಡಿದಂತೆ. ನರೇಂದ್ರ ಮೋದಿರವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಗುಜರಾತ್ ನ ಮೊಟೇರಾ ಕ್ರಿಕೆಟ್ ಸ್ಟೇಡಿಯಂ ಅನ್ನು ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಎಂದು ಬದಲಾಯಿಸಿದ್ದು ಮೋದಿಯವರೇನು ಕ್ರಿಕೆಟ್ ಆಟಗಾರರೇ ಎಂಬ ಪ್ರಶ್ನೆ ದೇಶದ ಜನರಿಗೆ ಕಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಹೆಸರು ಬದಲಾವಣೆ ಮಾಡುವುದೇ ಜೀವನದ ಏಕೈಕ ಸಾಧನೆ ಎಂದುಕೊಂಡಿರುವ ಮೋದಿಯವರು ಇಂತಹ ಹುಸಿ ಪ್ರಚಾರ ತಂತ್ರಗಳನ್ನು ಬದಿಗೊತ್ತಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಆಹಾರ ಸಾಮಾಗ್ರಿಗಳ ಬೆಲೆಯನ್ನು ತಗ್ಗಿಸಿ ತಮ್ಮ ದೇಶಭಕ್ತಿಯನ್ನು ಸಾಬೀತುಪಡಿಸಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದರು. ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ

    ಈ ವೇಳೆ ಪ್ರಚಾರ ಸಮಿತಿ ಅಧ್ಯಕ್ಷರುಗಳಾದ ಜನಾರ್ದನ್, ಆನಂದ್ ಮತ್ತು ಕೆಪಿಸಿಸಿ ವಕ್ತಾರರಾದ ಸಲೀಂ, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರುಗಳಾದ ಇ.ಶೇಖರ್, ಪ್ರಕಾಶ್, ಪುಟ್ಟರಾಜು, ಚಂದ್ರಶೇಖರ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.