Tag: ಧ್ವಜ

  • ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಯುವಕರು – ನಾಲ್ವರು ವಶಕ್ಕೆ

    ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಯುವಕರು – ನಾಲ್ವರು ವಶಕ್ಕೆ

    ಕೋಲ್ಕತ್ತಾ: ಮಂಗಳವಾರ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ (Eden Gardens Stadium) ನಡೆದ ಪಾಕಿಸ್ತಾನ-ಬಾಂಗ್ಲಾದೇಶ ವಿಶ್ವಕಪ್ (World Cup) ಕ್ರಿಕೆಟ್ ಪಂದ್ಯದ ವೇಳೆ ಪ್ಯಾಲೆಸ್ತೀನ್ (Palestinian) ಧ್ವಜ (Flag) ಹಾರಿಸಿದ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಶಕ್ಕೆ ಪಡೆದವರಲ್ಲಿ ಇಬ್ಬರು ಜಾರ್ಖಂಡ್‌ನ ನಿವಾಸಿಗಳಾಗಿದ್ದು, ಇನ್ನಿಬ್ಬರು ಕೋಲ್ಕತ್ತಾದ ಎಕ್ಬಾಲ್‌ಪೋರ್ ಮತ್ತು ನೆರೆಯ ಹೌರಾದಿಂದ ಬಂದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರನ್ನು ಗೇಟ್ ಸಂಖ್ಯೆ 6ರ ಬಳಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದಕ್ಕಾಗಿ ವಶಕ್ಕೆ ಪಡೆದಿದ್ದು, ಮತ್ತಿಬ್ಬರನ್ನು ಬ್ಲಾಕ್ ಜಿ1 ನಲ್ಲಿ ವಶಕ್ಕೆ ಪಡೆಯಲಾಗಿದೆ. ನಾವು ಅವರ ಉದ್ದೇಶವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ 100 ರೂ. ಏರಿಕೆ!

    ಮೈದಾನ ಪೊಲೀಸ್ ಠಾಣೆಯಿಂದ ನಾಲ್ವರನ್ನು ಕಾನೂನು ಪರಿಪಾಲಕರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೊದಲಿಗೆ ಅಲ್ಲಿ ಪೋಸ್ಟಿಂಗ್ ಮಾಡಿದ ಪೊಲೀಸರಿಗೆ ಪ್ರತಿಭಟನಾಕಾರರು ಏನು ಮಾಡುತ್ತಿದ್ದಾರೆ ಎಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಂತರ ಅವರು ಪ್ಯಾಲೆಸ್ತೀನ್ ಧ್ವಜವನ್ನು ಹಾರಿಸುತ್ತಿರುವುದನ್ನು ಗಮನಿಸಿದ ಬಳಿಕ ಅವರನ್ನು ವಶಕ್ಕೆ ಪಡೆಯಲಾಯಿತು. ಆದರೆ ಅವರು ಯಾವುದೇ ಘೋಷಣೆಯನ್ನು ಕೂಗಲಿಲ್ಲ ಎಂದು ಐಪಿಎಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಗೆ ಕೇಜ್ರಿವಾಲ್‌ ಕಂಡರೆ ಭಯ, ಶ್ರೀಘ್ರವೇ ಬಂಧನ ಸಾಧ್ಯತೆ – ಸಚಿವೆ ಅತಿಶಿ

    ಆರಂಭಿಕ ತನಿಖೆಯಲ್ಲಿ ಇಪ್ಪತ್ತು ವಯಸ್ಸಿನ ನಾಲ್ವರು ಯುವಕರು ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷವನ್ನು ಪ್ರತಿಭಟಿಸುತ್ತಿದ್ದು, ಜನರಲ್ಲಿ ಸಂಚಲನ ಮೂಡಿಸುವ ಸಲುವಾಗಿ ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಕೋಲ್ಕತ್ತಾ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್ (Congress) ಭರ್ಜರಿಯಾಗಿ ಜಯಗಳಿಸಿದ್ದು, ಇದರ ಬೆನ್ನಲ್ಲೇ ಕೇಸರಿ ಬಾವುಟದ ಪಕ್ಕ ಇಸ್ಲಾಂ ಬಾವುಟ ಹಾರಿಸಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkala) ನಡೆದಿದೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದ್ದು, ಅಭ್ಯರ್ಥಿ ಮಂಕಾಳು ವೈದ್ಯರಿಗೆ ಗೆಲುವಾಗಿದೆ. ಹೀಗಾಗಿ ಭಟ್ಕಳದ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ನಗರದ ಬೀದಿಯಲ್ಲಿ ಸಂಭ್ರಮಿಸಿದ್ದಲ್ಲದೇ ಭಟ್ಕಳ ಸಂಶುದ್ದೀನ್ ಸರ್ಕಲ್ ಮೇಲೆ ನಿಂತು ಕೇಸರಿ ಬಾವುಟದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಿಡಿದು ಸಂಭ್ರಮಾಚರಣೆ ನಡೆಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಅವರು ಬಿಜೆಪಿಯ ಸುನಿಲ್ ನಾಯಕ್ ವಿರುದ್ಧ 32 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮಂಕಾಳು ವೈದ್ಯರ ಗೆಲುವನ್ನು ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ: ಬೊಮ್ಮಾಯಿ

    ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜ ಪ್ರದರ್ಶನ ಮಾಡಿ ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದ ಪಕ್ಷದಲ್ಲೇ ಮುಸ್ಲಿಂ ಧ್ವಜ ಹಾಕಿದ್ದಾರೆ. ಸದ್ಯ ಇದರ ವೀಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

    ಹಿಂದೂಗಳ ಹೆಣ ಎತ್ತಲೂ ಯಾರು ಇರಬಾರದು:
    ಕಾಂಗ್ರೆಸ್‌ಗೆ ಬಹುಮತ ಬರುತ್ತಿದ್ದಂತೆ ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಯಿತು. ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್ ಎಂದು ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್‌ನ ಸ್ಕ್ರೀನ್ ಶಾಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

  • ಬ್ರಿಟಿಷರ ಕಾಲದ ಚಿನ್ಹೆಗೆ ಕೊಕ್ – ನೌಕಾಪಡೆಗೆ ಶಿವಾಜಿಯ ಧ್ವಜ ಸೇರ್ಪಡೆ

    ಬ್ರಿಟಿಷರ ಕಾಲದ ಚಿನ್ಹೆಗೆ ಕೊಕ್ – ನೌಕಾಪಡೆಗೆ ಶಿವಾಜಿಯ ಧ್ವಜ ಸೇರ್ಪಡೆ

    ನವದೆಹಲಿ: ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ `IAC ವಿಕ್ರಾಂತ್’ ಅನ್ನು ಇಂದು ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಗಿದೆ. ಇದೇ ವೇಳೆ ಭಾರತೀಯ ನೌಕಾಪಡೆಯು ಹೊಸ ಧ್ವಜವನ್ನು ಪರಿಚಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಧ್ವಜವನ್ನೂ ಅನಾವರಣಗೊಳಿಸಿದ್ದಾರೆ.

    ಮರಾಠ ಸಾಮ್ರಾಜ್ಯದ ಚಕ್ರವರ್ತಿ ಶಿವಾಜಿಗೆ ಗೌರವ ಸೂಚಿಸುವ ಈ ಧ್ವಜವು ತಮ್ಮ ಆಳ್ವಿಕೆಯ ಕಾಲದಲ್ಲಿ ನೌಕಾಪಡೆಯನ್ನು ಹೊಂದಿದ್ದರು ಎಂಬುದನ್ನು ನೆಪಿಸುತ್ತದೆ. ಈ ನಿಟ್ಟಿನಲ್ಲಿಂದು ಭಾರತೀಯ ನೌಕಾಪಡೆಯು ಹೊಸ ಹೆಜ್ಜೆಯನ್ನಿರಿಸಿದೆ. ಇದನ್ನೂ ಓದಿ: ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್‌ಗೆ ಮೋದಿ ಚಾಲನೆ

    ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದರೂ, ಭಾರತೀಯ ನೌಕಾಪಡೆಯ ಧ್ವಜದಲ್ಲಿ ಇನ್ನೂ ಉಳಿದುಕೊಂಡಿದ್ದ ವಸಾಹತುಶಾಹಿ ನೆನಪಿಸುವ ಅಂಶಗಳಿಗೆ ಇಂದು ತೆರೆ ಎಳೆಯಲಾಗಿದೆ. ಹೊಸ ಧ್ವಜ ಪರಿಚಯಿಸುವ ಮೂಲಕ ಗುಲಾಮಗಿರಿಯ ಸಂಕೇತ, ವಸಾಹತುಶಾಹಿಯ ಕುರುಹುಗಳನ್ನು ತೆಗೆದುಹಾಕಲಾಗಿದೆ.

    ಭಾರತೀಯ ಕಡಲ ಪರಂಪರೆಗೆ ಅನುಗುಣವಾಗಿ ಈ ನೌಕಾಧ್ವಜ ನಿರ್ಮಾಣಗೊಂಡಿದ್ದು, `ನಿಶಾನ್’ ಎಂದು ಹೆಸರಿಡಲಾಗಿದೆ. ಇದು ರಕ್ಷಣಾ ವಲಯದಲ್ಲಿ ಆತ್ಮ ನಿರ್ಭರಕ್ಕೆ ಮತ್ತಷ್ಟು ಪುಷ್ಠಿ ನೀಡುವ ಉದ್ದೇಶವನ್ನೂ ಹೊಂದಿದೆ.

    ಈ ಹಿಂದಿನ ಧ್ವಜವು ಬಿಳಿಯ ಬಣ್ಣದಲ್ಲಿದ್ದು, ಲಂಬ ಮತ್ತು ಅಡ್ಡವಾಗಿ ಕೆಂಪು ಪಟ್ಟಿಗಳನ್ನು ಒಳಗೊಂಡಿತ್ತು. ಅದನ್ನು ಸೇಂಟ್ ಜಾರ್ಜ್ ಕ್ರಾಸ್ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷ್ ಆಡಳಿತಗಾರರು ಅದನ್ನು ಹಾಕಿದ್ದರು. ಇದೀಗ ಸೇಂಟ್ ಜಾರ್ಜ್ ಶಿಲುಬೆಯನ್ನ ಹೊಸ ಭಾರತೀಯ ನೌಕಾ ಧ್ವಜದಿಂದ ತೆಗೆದುಹಾಕಲಾಗಿದೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ: ಮುಂಬೈ ಕೋರ್ಟ್

    ಹೊಸ ಧ್ವಜದ ಬಲಭಾಗದ ಮೂಲೆಯಲ್ಲಿ ಭಾರತೀಯ ನೌಕಾಪಡೆಯ ಹೊಸ ಚಿನ್ಹೆಯನ್ನೂ ಒಳಗೊಂಡಿದೆ. ದೇವನಾಗರಿ ಲಿಪಿಯಲ್ಲಿ `ಸತ್ಯ ಮೇವ ಜಯತೆ’ ಎಂಬ ರಾಷ್ಟ್ರೀಯ ಧ್ಯೇಯವಾಕ್ಯದೊಂದಿಗೆ ಭಾರತೀಯ ರಾಷ್ಟ್ರೀಯ ಲಾಂಚನವೂ ಇದರಲ್ಲಿದೆ. ಇದರ ಅಷ್ಟಭುಜಾಕೃತಿಯು 8 ದಿಕ್ಕುಗಳನ್ನು ಸೂಚಿಸುತ್ತದೆ. ಜೊತೆಗೆ ಶಿವಾಜಿಯ ರಾಜಮುದ್ರೆಯನ್ನೂ ಪರಿಚಯಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ

    ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ

    ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯದಲ್ಲೂ ಸಕಲ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ, ಸರ್ಕಾರಿ, ಖಾಸಗಿ ಕಟ್ಟಡಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಇಟ್ಟುಕೊಳ್ಳಲಾಗಿದೆ.

    ಈಗಾಗಲೇ ಧ್ವಜ ಮಾರಾಟ, ವಿತರಣೆ ಕಾರ್ಯ ಬಹುತೇಕ‌ ಮುಗಿದಿದೆ.‌ ಇಂದಿನಿಂದ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣ ಆಗಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ ಮೂರು ದಿನಗಳಂದು ಪ್ರತಿ ದಿನ ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಹಾಗೂ ಮನೆಗಳಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣ ಮಾಡಿ 15ರವರೆಗೆ ಇರಿಸಬಹುದಾಗಿದೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಡಿಪಿ ಹಾಕಿದ ಆರ್‌ಎಸ್‌ಎಸ್‌

    ಹರ್ ಘರ್ ತಿರಂಗಾ ಯಶಸ್ವಿಗೊಳಿಸುವ ಸಂಬಂಧ ಮುಖ್ಯಮಂತ್ರಿಗಳು ಹಲವು ಸುತ್ತಿನ ಸಭೆಗಳನ್ನು ನಡೆಸಿ ಎಲ್ಲ ಜಿಲ್ಲಾಡಳಿತಗಳಿಗೂ ಅಗತ್ಯ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಗಳು ರಾಜ್ಯದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಂಗಳೂರಿನಲ್ಲಿಂದು ಬೆಳಗ್ಗೆಯಿಂದಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಸಚಿವರು, ಸಂಸದರು, ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ ಮತ್ತು ಬೈಕ್ ರ‍್ಯಾಲಿಗಳನ್ನು ನಡೆಸಲಾಗುತ್ತದೆ. ಜಿಲ್ಲೆಗಳಲ್ಲೂ ತಿರಂಗಾ ಯಾತ್ರೆಗಳನ್ನು ಕೈಗೊಳ್ಳಲಾಗುತ್ತದೆ.‌

    Live Tv
    [brid partner=56869869 player=32851 video=960834 autoplay=true]

  • ಧ್ವಜ ಖರೀದಿಗೆ ವೇತನದಲ್ಲಿ 38 ರೂ. ಖಡಿತಗೊಳಿಸಿದ ರೈಲ್ವೆ ಇಲಾಖೆ- ನೌಕರರಿಂದ ಅಸಮಾಧಾನ

    ಧ್ವಜ ಖರೀದಿಗೆ ವೇತನದಲ್ಲಿ 38 ರೂ. ಖಡಿತಗೊಳಿಸಿದ ರೈಲ್ವೆ ಇಲಾಖೆ- ನೌಕರರಿಂದ ಅಸಮಾಧಾನ

    ನವದೆಹಲಿ: ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ರೈಲ್ವೆ ತನ್ನ ಎಲ್ಲಾ ಉದ್ಯೋಗಿಗಳಿಗೆ ನೀಡಿರುವ ರಾಷ್ಟ್ರ ಧ್ವಜದ ವೆಚ್ಚವನ್ನು ಅವರ ಸಂಬಳದಿಂದ ವಸೂಲಿ ಮಾಡುತ್ತಿದ್ದು, ಇಲಾಖೆಯ ಈ ಕ್ರಮಕ್ಕೆ ರೈಲ್ವೆ ನೌಕರರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

    75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಕೇಂದ್ರವು ಹರ್ ಘರ್ ತಿರಂಗಾ ಅಭಿಯಾನವನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಏಜೆನ್ಸಿಯಿಂದ ರೈಲ್ವೆ ನೌಕರರಿಗೆ ರಾಷ್ಟ್ರಧ್ವಜವನ್ನು ನೀಡಿದ್ದಾರೆ. ಆದರೆ ಈ ಧ್ವಜದ ಬೆಲೆಯನ್ನು 38 ರೂ.ಗಳಲ್ಲಿ ಇರಿಸಲಾಗಿದೆ. ರೈಲ್ವೆ ನೌಕರರು ಹಣವನ್ನು ಪಾವತಿಸಿ ಈ ರಾಷ್ಟ್ರ ಧ್ವಜವನ್ನು ಖರೀದಿಸಬೇಕಿಲ್ಲ. ಆದರೆ ಅವರ ಸಂಬಳದಿಂದ ಈ ಹಣ ಕಡಿತಗೊಳ್ಳುತ್ತದೆ. ಇದಕ್ಕೆ ಉತ್ತರ ಮಧ್ಯ ರೈಲ್ವೆ ನೌಕರರ ಸಂಘ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ.

    ವಿಭಾಗೀಯ ಸಚಿವ ಚಂದನ್ ಸಿಂಗ್ ಮಾತನಾಡಿ, ಈ ಧ್ವಜವನ್ನು ಸಿಬ್ಬಂದಿಗೆ ನೌಕರರ ಪ್ರಯೋಜನ ನಿಧಿಯಿಂದ ನೀಡಲಾಗುತ್ತಿದೆ. ನಂತರ ಅವರ ಸಂಬಳದಿಂದ ಕಡಿತಗೊಳಿಸಿದ ಹಣವನ್ನು ನೌಕರರ ಲಾಭ ನಿಧಿಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ತಗ್ಗಿದ ಮಳೆ – ರೆಡ್‌ನಿಂದ ಆರೆಂಜ್ ಅಲರ್ಟ್‌ನತ್ತ ಕರಾವಳಿ

    ಈ ಧ್ವಜಗಳು ಬಿಜೆಪಿ ಕಚೇರಿಯಲ್ಲಿ 20 ರೂ.ಗೆ ಲಭ್ಯವಿದ್ದು, ಪ್ರಧಾನ ಅಂಚೆ ಕಚೇರಿಯಲ್ಲಿ 25 ರೂ.ಗೆ ಖರೀದಿಸಬಹುದು. ಸ್ವಸಹಾಯ ಸಂಘಗಳು ಸಹ 20 ರೂ.ಗೆ ಧ್ವಜವನ್ನು ನೀಡುತ್ತಿವೆ. ಇದನ್ನೂ ಓದಿ: ಕುಟುಂಬ ಕಲಹ – ವಿದ್ಯುತ್ ಹೈಟೆನ್ಷನ್ ಟವರ್ ಏರಿ ವ್ಯಕ್ತಿ ಹೈಡ್ರಾಮಾ

    Live Tv
    [brid partner=56869869 player=32851 video=960834 autoplay=true]

  • ಹರಿದ ಧ್ವಜಗಳನ್ನು ಹಾರಿಸಬೇಕಾ? ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ವಾ?: ಮುತಾಲಿಕ್

    ಹರಿದ ಧ್ವಜಗಳನ್ನು ಹಾರಿಸಬೇಕಾ? ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ವಾ?: ಮುತಾಲಿಕ್

    ಧಾರವಾಡ: ಕೇಂದ್ರ ಬಿಜೆಪಿ ಸರ್ಕಾರ ಸಂಪ್ರದಾಯ ಬದ್ಧವಾದ ಖಾದಿ ರಾಷ್ಟ್ರಧ್ವಜದ ಬದಲಿಗೆ ಪಾಲಿಸ್ಟರ್ ಬಟ್ಟೆಯ ರಾಷ್ಟ್ರಧ್ವಜ ಮಾರಾಟಕ್ಕೆ ಅನುಮತಿ ನೀಡಿದ್ದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಸರ್ಕಾರ ಕೋಟಿಗಟ್ಟಲೇ ಧ್ವಜ ಹಾರಿಸುವ ಅಭಿಯಾನ ಆರಂಭ ಮಾಡಿದೆ. ಆದರೆ, ಅದಕ್ಕೆ ಪೂರ್ವ ಸಿದ್ಧತೆ ಮಾಡಿಕೊಂಡಿಲ್ಲ. ಖಾದಿ ಬಟ್ಟೆ ಬಿಟ್ಟು ಪಾಲಿಸ್ಟರ್ ಬಟ್ಟೆಯ ಧ್ವಜ ಮಾರಾಟಕ್ಕೆ ಅನುಮತಿ ಕೊಟ್ಟಿದೆ. ಇಂದು ಮಾರುಕಟ್ಟೆಯಲ್ಲಿ ಹರಿದ ಪಾಲಿಸ್ಟರ್ ಬಟ್ಟೆಯ ಧ್ವಜಗಳು ಮಾರಾಟವಾಗುತ್ತಿದೆ. ಹರಿದ ಧ್ವಜಗಳನ್ನು ಹಾರಿಸಬೇಕಾ? ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ವಾ? ಈ ಪಾಲಿಸ್ಟರ್ ಧ್ವಜಗಳಿಗೆ ಅಳತೆಗಳೇ ಇಲ್ಲ. ಅಶೋಕ ಚಕ್ರ ವಕ್ರವಾಗಿದೆ, ಮೊಟ್ಟೆಯಾಕಾರದಲ್ಲಿ ಅಶೋಕ ಚಕ್ರ ಹಾಕಲಾಗಿದೆ. ರಾಷ್ಟ್ರಧ್ವಜಕ್ಕೆ ಮರ್ಯಾದೆ ಇಲ್ವಾ? ಬಿಜೆಪಿಯವರೇ ಇದನ್ನು ಗಮನಿಸಿ ಎಂದು ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗಣೇಶ ಕೂರಿಸಲು ಅನುಮತಿ ತೆಗೆದುಕೊಳ್ಳಬೇಡಿ: ಪೊಲೀಸರು, ಸರ್ಕಾರಕ್ಕೆ ಮುತಾಲಿಕ್‌ ಸವಾಲು

    ಖಾದಿ ಭಂಡಾರದಲ್ಲಿ ಅಳತೆ ಪ್ರಕಾರವೇ ಇರುವ ಧ್ವಜಗಳನ್ನು ಮಾರಾಟ ಮಾಡುತ್ತಾರೆ. ಖಾದಿ ಬಟ್ಟೆಗೆ ತನ್ನದೇ ಆದ ವೈಶಿಷ್ಟ್ಯವಿದೆ. ನಾವು ಕೂಡ ಅಮೃತ ಮಹೋತ್ಸವದ ಅಂಗವಾಗಿ ಸಾವಿರ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುತ್ತೇವೆ. ನಾವು ಖಾದಿ ಧ್ವಜಗಳನ್ನೇ ಹಾರಿಸುತ್ತೇವೆ. ಪಾಲಿಸ್ಟರ್ ಬಟ್ಟೆಯ ಧ್ವಜ ಬಿಟ್ಟು ಖಾದಿ ಬಟ್ಟೆಯ ರಾಷ್ಟ್ರಧ್ವಜಕ್ಕೆ ಸರ್ಕಾರ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹಮಾರೆ ಪಾರ್ಟಿ ಮೆ ಕ್ಯಾ ಚಲ್ ರಹಾಹೈ ಬೊಮ್ಮಾಯಿ ಜೀ?- CMಗೆ ಅಮಿತ್ ಶಾ ಫುಲ್ ಕ್ಲಾಸ್

    Live Tv
    [brid partner=56869869 player=32851 video=960834 autoplay=true]

  • ಖಾದಿ ಧ್ವಜಕ್ಕೆ ಬೆಲೆ ಜಾಸ್ತಿ, 10 ಕೋಟಿ ಧ್ವಜ ತಯಾರಿಸುವುದು ಅಸಾಧ್ಯ: ಪ್ರಹ್ಲಾದ್ ಜೋಶಿ

    ಖಾದಿ ಧ್ವಜಕ್ಕೆ ಬೆಲೆ ಜಾಸ್ತಿ, 10 ಕೋಟಿ ಧ್ವಜ ತಯಾರಿಸುವುದು ಅಸಾಧ್ಯ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ನಮಗೆ 10 ಕೋಟಿ ಧ್ವಜ ಬೇಕು, ಅದನ್ನು ಪೂರೈಕೆ ಮಾಡಲು ಖಾದಿ ಗ್ರಾಮೋದ್ಯೋಗ ಘಟಕಕ್ಕೆ ಆಗುವುದಿಲ್ಲ. ಹೀಗಾಗಿ ಧ್ವಜ ನೀತಿಗೆ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾದಿ ಧ್ವಜಕ್ಕೆ ಹೆಚ್ಚು ದುಡ್ಡು ಕೊಡಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಧ್ವಜ ನೀತಿಗೆ ತಿದ್ದುಪಡಿ ಮಾಡಲಾಗಿದೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆಯಿಲ್ಲ ಎಂದು ಹೇಳಿಕೆ ನೀಡಿದರು.

    ರಾಹುಲ್ ಗಾಂಧಿ ಅವರಿಗೆ ಮಾಡಲು ಬೇರೆ ಒಳ್ಳೆಯ ಕೆಲಸ ಇದೆ. ಅವರು ಅದನ್ನು ಮಾಡಲಿ. ಅವರು ಹುಬ್ಬಳ್ಳಿ ಬೆಂಗೇರಿಯ ಖಾದಿ ಗ್ರಾಮೋದ್ಯೋಗಕ್ಕೆ ಭೇಟಿ ನೀಡುವ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಸಾಧನೆ ಶಿಖರವೇರಿದ ಸಂಕೇತ್ – ಪಾನ್ ಮಾರುತ್ತಿದ್ದ ಹುಡುಗನ `ಬೆಳ್ಳಿ’ ಸಾಧನೆ

     

    75 ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ಆಗಸ್ಟ್ 13 ರಿಂದ ಆಗಸ್ಟ್ 15 ರ ವರೆಗೆ ಜನರು ರಾಷ್ಟ್ರ ಧ್ವಜವನ್ನು ಅವರ ಮನೆಗಳ ಮೇಲೆ ಹಾರಿಸಬಹುದು. ಒಂದು ಧ್ವಜಕ್ಕೆ 20 ರೂ. ಕೊಟ್ಟು ಸಾರ್ವಜನಿಕರು ಖರೀದಿ ಮಾಡಬೇಕು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಂಬೈ ವಿವಾದ – ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ ಒಪ್ಪಲ್ಲ ಎಂದ ಸಿಎಂ ಶಿಂದೆ

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಭಾರತ ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕಿ 75 ವರ್ಷ ಆಗಿದೆ. ಆದರೆ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ ಎಂದು ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ಪ್ರತಿಯೊಂದನ್ನು ರಾಜಕೀಯವಾಗಿ ನೋಡಲು ಬರಲ್ಲ. 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ರಾಜಕಾರಣದಿಂದ ನೋಡುವುದಿಲ್ಲ. ರಾಜಕೀಯೇತರವಾಗಿ ನೋಡುತ್ತೇನೆ. ರಾಷ್ಟ್ರಪತಿಯಾಗಿ ದಲಿತ ಮಹಿಳೆ ಗೆದ್ದಿದ್ದಾರೆ. ವಿಶ್ವದ ಅತ್ಯಂತ ಬಲಿಷ್ಠ ಪ್ರಜಾಪ್ರಭುತ್ವ ದೇಶದ ಪ್ರಥಮ ಪ್ರಜೆ ಆಗಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದರು. ಇದನ್ನೂ ಓದಿ: ಮೋದಿ-ಯೋಗಿಗೆ ಕುಟುಂಬವಿಲ್ಲ, ಆದರೆ ನಮಗಿದೆ: ಉಮೇಶ್ ಕತ್ತಿ

    ಸಿದ್ದರಾಮೋತ್ಸವದ ಬಗ್ಗೆ ಮಾತನಾಡಿದ ಹೆಬ್ಬಾಳ್ಕರ್, ಇದು ರಾಜಕೀಯ ಕಾರ್ಯಕ್ರಮ ಎನ್ನುವುದಕ್ಕಿಂತ ಪಕ್ಷದ ಅಭಿಮಾನಿಗಳು, ಸಿದ್ದರಾಮಯ್ಯನವರ ಅಭಿಮಾನಿಗಳು ಸೇರಿಕೊಂಡು ಮಾಡುತ್ತಿರುವ ಕಾರ್ಯಕ್ರಮ. ಸಿದ್ದರಾಮಯ್ಯ ಅಮೃತ ಮಹೋತ್ಸವ ರಾಜಕಾರಣ ಮಾಡೋದಕ್ಕಲ್ಲ. ಸಿದ್ದರಾಮಯ್ಯ ಸಾಹೇಬರಿಗೆ 75 ವರ್ಷ ಆಗಿದೆ. ಅದರಲ್ಲಿ 40 ವರ್ಷ ರಾಜಕಾರಣದಲ್ಲೇ ಕಳೆದಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಬೆಳಗಾವಿಯಿಂದ 50 ಸಾವಿರ ಜನರು ಹೋಗುತ್ತಾರೆ ಎಂದರು. ಇದನ್ನೂ ಓದಿ: ಟಾಕಳೆ ವಿರುದ್ಧ ಕೈ ಕಾರ್ಯಕರ್ತೆ ಅತ್ಯಾಚಾರ ಆರೋಪ – ನವ್ಯಶ್ರೀ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಪೊಲೀಸ್

    Live Tv
    [brid partner=56869869 player=32851 video=960834 autoplay=true]

  • ಈಶ್ವರಪ್ಪಗೆ ಮತ್ತೆ ಧ್ವಜ ಉರುಳು – ದೆಹಲಿಯಲ್ಲಿ ದೂರು ದಾಖಲು

    ಈಶ್ವರಪ್ಪಗೆ ಮತ್ತೆ ಧ್ವಜ ಉರುಳು – ದೆಹಲಿಯಲ್ಲಿ ದೂರು ದಾಖಲು

    ಶಿವಮೊಗ್ಗ: ಮುಂದೊಂದು ದಿನ ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸುತ್ತೇವೆ ಎಂದಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಆಪ್ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ದೆಹಲಿಯಲ್ಲಿ ದೂರು ದಾಖಲಿಸಿದ್ದಾರೆ.

    ಈಶ್ವರಪ್ಪ ಬಂಧಿಸಬೇಕು ಅಂತ ನಾರ್ಥ್ ಅವೆನ್ಯೂ ಠಾಣೆಯಲ್ಲಿ ಕಂಪ್ಲೆಂಟ್ ಮಾಡಿ ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಯಾರೋ ಪ್ರಚಾರಕ್ಕಾಗಿ ದೂರು ನೀಡಿದ್ದಾರೆ ಅಷ್ಟೇ. ಇದ್ರಿಂದ ಏನು ಪ್ರಯೋಜನ ಇಲ್ಲ. ನನ್ನನ್ನು ಬಂಧಿಸೊಕೆ ಆಗಲ್ಲ. ಇಂಥಾ ನೂರು ಕೇಸ್ ದಾಖಲಾದ್ರೂ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಬ್ಯಾನ್ ಆಗುತ್ತಾ ಪಿಎಫ್‍ಐ? – ಇಡಿಯಿಂದ 23 ಬ್ಯಾಂಕ್ ಖಾತೆ ಫ್ರೀಜ್

    ನೂರೋ, ಇನ್ನೂರೋ, ಐನೂರೋ ವರ್ಷ ಬಿಟ್ಟು ಕೆಂಪು ಕೋಟೆ ಮೇಲೆ ಹಾರಿಸಬಹುದು ಎಂದು ನಾನು ಹೇಳಿದ್ದು ನಿಜ. ಅದು ಈಗ ಬಿದ್ದು ಹೋಗಿರುವ ಕಥೆ. ಈಗ ಯಾರೋ ಹೊಸಬರು ಪಾಪ ಅವರ ಹೆಸರು ಮಾಧ್ಯಮಗಳಲ್ಲಿ ಬರಲಿ ಎಂದು ಕೇಸ್ ಹಾಕಿದ್ದಾರೆ. ಇಂತಹ ನೂರು ಕೇಸ್ ಹಾಕಿದರು ನಾನು ಎದುರಿಸುತ್ತೇನೆ. ನನ್ನನ್ನ ಪುಕ್ಸಟೆ ಬಂಧಿಸೋಕೆ ನಾನೇನು ಕುರಿ, ಕೋಳಿ, ಎಮ್ಮೆನಾ? ಹಾಗೆಲ್ಲಾ ಬಂಧಿಸೋಕೆ ಆಗಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಅನಂತ ರಾಜು ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್- ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ ರೇಖಾ..?

    ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ದೇಶದಲ್ಲಿ ಹಿಂದುತ್ವದ ಬಗ್ಗೆ ಹಿಂದೂ ಧರ್ಮದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಅಸೆಂಬ್ಲಿಯಲ್ಲೂ ಚರ್ಚೆಯಾಗಿದೆ. ಯಾವುದು ಕೂಡ ಕಾನೂನು ವಿರುದ್ಧವಾಗಿ ಈಶ್ವರಪ್ಪ ಮಾತನಾಡಿಲ್ಲ ಎಂದು ಸಿಎಂ ಹೇಳಿದ್ದರು. ಅದೇ ರೀತಿ ಸ್ಪೀಕರ್ ಹಾಗೂ ಕಾನೂನು ಸಚಿವರು ಕೂಡ ಹೇಳಿದ್ದಾರೆ. ಅದು ಈಗ ಬಿದ್ದು ಹೋಗಿರುವ ಕಥೆ ಎಂದರು.

  • ರಂಜಾನ್ ಮುನ್ನಾ ದಿನವೇ ಎರಡು ಗುಂಪುಗಳ ಮಧ್ಯೆ ಗಲಾಟೆ – ಇಂಟರ್ನೆಟ್ ಸ್ಥಗಿತ

    ರಂಜಾನ್ ಮುನ್ನಾ ದಿನವೇ ಎರಡು ಗುಂಪುಗಳ ಮಧ್ಯೆ ಗಲಾಟೆ – ಇಂಟರ್ನೆಟ್ ಸ್ಥಗಿತ

    ಜೈಪುರ: ಪವಿತ್ರ ರಂಜಾನ್ `ಈದ್ ಉಲ್ ಫ್ರಿತ್’ ಆಚರಣೆಗೂ ಮುನ್ನಾದಿನವೇ ರಾಜಾಸ್ಥಾನದ ಜೋದ್‌ಪುರದ ಜಲೋರಿ ಗೇಟ್ ಬಳಿ ಮುಸ್ಲಿಂ ಧ್ವಜ ಹಾಗೂ ಧ್ವನಿವರ್ಧಕಗಳನ್ನು ಅಳವಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದಿದೆ.

    police (1)

    ಇಲ್ಲಿನ ಜಲೋರಿ ಗೇಟ್ ಬಳಿಯಿದ್ದ ಹಿಂದೂ ಧ್ವಜವನ್ನು ತೆರವುಗೊಳಿಸಿ ಮುಸ್ಲಿಂ ಧ್ವಜ ಹಾಗೂ ಬ್ಯಾನರ್‌ಗಳನ್ನು ಅಳವಡಿಸುವ ವಿಚಾರಕ್ಕೆ ವಿವಾದ ಏರ್ಪಟ್ಟಿದ್ದು, ಪರಿಸ್ಥಿತಿ ತಿಳಿಗೊಳಿಸಲು ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ; PSI ನೇಮಕಾತಿಯಲ್ಲಿ ಅಕ್ರಮ – ಬೆಂಗ್ಳೂರಿನ 7 ಪರೀಕ್ಷಾ ಕೇಂದ್ರಗಳ ಮೇಲೆ ಕಣ್ಣು

    ಇಲ್ಲಿನ ಸ್ವಾತಂತ್ರ‍್ಯ ಹೋರಾಟಗಾರ ಬಾಲ್ ಮುಕುಂದ್ ಬಿಸ್ಸಾ ಅವರ ಪ್ರತಿಮೆಯ ಮೇಲೆ ಮುಸ್ಲಿಂ ಧ್ವಜವನ್ನು ಹಾಕಲಾಗಿತ್ತು. ಜಲೋರಿ ವೃತ್ತದಲ್ಲಿ ಈದ್‌ಗೆ ಸಂಬಂಧಿಸಿದ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಮತ್ತೊಂದು ಸಮುದಾಯ ಇದರ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸುತ್ತಿದ್ದಂತೆ ಇತರ ಪ್ರತಿಭಟನಾಕಾರರು ಆಕ್ರೋಶಗೊಂಡು ಪ್ರತಿಭಟನೆಗಿಳಿದಿದ್ದಾರೆ.

    _Jodhpur

    ಎರಡೂ ಸಮಯದಾಯದ ಜನರಿಂದಲೂ ಕಲ್ಲು ತೂರಾಟ ನಡೆದಿದ್ದು, ವಾಹನಗಳಿಗೆ ಹಾನಿಯಾಗಿದೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು, ಧ್ವನಿವರ್ಧಕವನ್ನು ಕಿತ್ತೆಸೆಯಲಾಗಿದೆ. ನಂತರ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಈ ವೇಳೆ ಪತ್ರಕರ್ತರ ಮೇಲೂ ಲಾಠಿಚಾರ್ಜ್ ನಡೆದಿದ್ದು, 11 ಮಂದಿಗೆ ಗಾಯಗಳಾಗಿವೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು – ಪರಿಸ್ಥಿತಿ ಗಂಭೀರ

    ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಈ ಘಟನೆ ಸಂಭವಿಸಿರುವುದು ದುರದೃಷ್ಟಕರ. ಜೋದ್ ಪುರದದಲ್ಲಿ ಸಂಪ್ರದಾಯವನ್ನು ಗೌರವಿಸಿ, ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಎಲ್ಲ ಪಕ್ಷದ ನಾಯಕರಲ್ಲಿಮನವಿ ಮಾಡುತ್ತೇನೆ’ ಟ್ವೀಟ್ ಮಾಡಿದ್ದಾರೆ.