Tag: ಧ್ವಜಾರೋಹಣ

  • 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

    79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

    ಹುಬ್ಬಳ್ಳಿ: 79ನೇ ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿಂದು (Idgah Maidan) ಧ್ವಜಾರೋಹಣ ನೆರವೇರಿಸಲಾಯಿತು.

    ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi Dharwad Municipal Corporation) ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರಿಂದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಉಪಸ್ಥಿತರಿದ್ದ ಶಾಸಕ ಮಹೇಶ ಟೆಂಗಿನಕಾಯಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವ ಸಮರ್ಪಣೆ ಮಾಡಿದರು. ಇದನ್ನೂ ಓದಿ: 79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗ್ಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ

    ಇದಾದ ಬಳಿಕ ಸಂಗೊಳ್ಳಿ ರಾಯಣ್ಣ ಜನ್ಮದಿನದ ಹಿನ್ನೆಲೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಹೇಶ್‌ ಟೆಂಗಿನಕಾಯಿ ಗೌರವ ಅರ್ಪಿಪಿಸಿದರು. ಈ ಸಂರ್ಭದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಶಾಸಕರಿಗೆ ಸಾಥ್‌ ನೀಡಿದರು. ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

    ಮಹಾನಗರ ಪಾಲಿಕೆಯ ಮೇಯರ್ ಸೇರಿದಂತೆ ಸರ್ವ ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇದನ್ನೂ ಓದಿ: ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್‌ ಗಿಫ್ಟ್‌ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್‌ ಯೋಜನೆ

  • 76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ

    76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ

    ನವದೆಹಲಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ (Kartavya Path) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಬೆಳಗ್ಗೆ 10:30ಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.

    ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಹಾಗೆಯೇ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ (Narendra Modi), ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಹುತಾತ್ಮ ಯೋಧರಿಗೆ ಮೋದಿ ಗೌರವ
    76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.

    ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣಗೊಳ್ಳುತ್ತಿದೆ. ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, 10,000 ಗಣ್ಯರು ಪಾಲ್ಗೊಂಡಿದ್ದಾರೆ. ಅಲ್ಲದೇ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

  • Mandya| ಧ್ವಜಾರೋಹಣದ ಮೂಲಕ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

    Mandya| ಧ್ವಜಾರೋಹಣದ ಮೂಲಕ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ

    ಮಂಡ್ಯ: ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಡ್ಯದ (Mandya) ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Literary Conference) ಅದ್ಧೂರಿ ಚಾಲನೆ ದೊರತಿದೆ.

    ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆ ಮುಖ್ಯದ್ವಾರದ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಸಚಿವ ಚಲುವರಾಯಸ್ವಾಮಿ (Chaluvarayaswamy) ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದು, ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ (Mahesh Joshi) ನಾಡ ಧ್ವಜಾರೋಹಣ ಮಾಡಿದರು. ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಪರಿಷತ್ತು ಧ್ವಜ ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧ್ವಜಾರೋಹಣದ ವೇಳೆ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ್, ಸಿಇಓ ಶೇಕ್ ತನ್ವೀರ್ ಆಸೀಫ್, ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ಉಪಸ್ಥಿತರಿದ್ದರು. ಇದನ್ನೂ ಓದಿ: ರಕ್ತ ಬರುವಂತೆ ಸಿ.ಟಿ ರವಿ ಮೇಲೆ ಹಲ್ಲೆ – ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆಂದು ಚೀರಾಡಿದ ಎಂಎಲ್‌ಸಿ

    ಇಂದಿನಿಂದ ಮೂರು ದಿನ ಮಂಡ್ಯದಲ್ಲಿ ನುಡಿಹಬ್ಬದ ಕಲರವ ನಡೆಯಲಿದ್ದು, ಸಕ್ಕರೆ ನಗರಿ ಸಂಪೂರ್ಣ ಸಜ್ಜಾಗಿದೆ. ಮೂರು ದಶಕಗಳ ಬಳಿಕ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ ಹಾಗೂ ಎರಡು ಸಮಾನಂತರ ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂ ಮಾದರಿಯಲ್ಲಿ ಪ್ರಧಾನ ವೇದಿಕೆ ನಿರ್ಮಾಣಗೊಂಡಿದೆ. ವೇದಿಕೆ ಸೇರಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕನ್ನಡ ಬಾವುಟ ರಾರಾಜಿಸುತ್ತಿದೆ. ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದ್ದು, 11 ಗಂಟೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿಕೆಶಿ, ಉಸ್ತುವಾರಿ ಸಚಿವ ಸೇರಿ ಸಚಿವರು, ಶಾಸಕರು, ಸಾಹಿತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ನೂಕಾಟದಿಂದ ಬಿಜೆಪಿಯ ಇಬ್ಬರು ಸಂಸದರಿಗೆ ಗಾಯ – ರಾಹುಲ್‌ ಗಾಂಧಿ ವಿರುದ್ಧ FIR

    ಮಧ್ಯಾಹ್ನ 2 ಗಂಟೆಯಿಂದ ಗೋಷ್ಠಿಗಳು ಆರಂಭಗೊಳ್ಳಲಿದೆ. ಸಂಜೆ 7:30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇಂದು ಸಾಧುಕೋಕಿಲ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಾಹಿತ್ಯಾಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ನಿರ್ಮಾಣಗೊಂಡಿದ್ದು, 350ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಶಿವಮೊಗ್ಗ| ರೈಸ್‌ ಮಿಲ್‌ನಲ್ಲಿ ಬಾಯ್ಲರ್‌ ಸ್ಫೋಟ; 7 ಮಂದಿಗೆ ಗಾಯ

  • ಸ್ವಾತಂತ್ರ್ಯೋತ್ಸವ ಹಬ್ಬ – ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

    ಸ್ವಾತಂತ್ರ್ಯೋತ್ಸವ ಹಬ್ಬ – ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ (78th Independence Day) ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.

    ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಇದನ್ನೂ ಓದಿ: Independence Day: ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

    ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ (Flag Hoisting) ಕಾರ್ಯಕ್ರಮ ನೆರವೇರಿತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ: Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

    ಕೆಪಿಸಿಸಿ ಕಚೇರಿಯಲ್ಲಿ ದ್ಜಜಾರೋಹಣ ನೆರವೇರಿಸಿದ ಬಳಿಕ ಡಿಸಿಎಂ ಚನ್ನಪಟ್ಟಣಕ್ಕೆ ತೆರಳಿದರು. ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

  • ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ – ನೂರಾರು ಜನರು ಪೊಲೀಸ್ ವಶಕ್ಕೆ

    ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ – ನೂರಾರು ಜನರು ಪೊಲೀಸ್ ವಶಕ್ಕೆ

    ಕಲಬುರಗಿ: ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಬೇಕೆಂದು ಕಲ್ಯಾಣ ಕರ್ನಾಟಕ (Kalyana Karnataka) ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಪ್ರತ್ಯೇಕ ಧ್ವಜಾರೋಹಣ (Flag) ಮಾಡಲು ಯತ್ನಿಸಿದೆ.

    ಕಲಬುರಗಿಯ (Kalaburagi) ಸರ್ಧಾರ್‌ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾದ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಚಿವ ದಿ. ಉಮೇಶ ಕತ್ತಿ ಹಾಗೂ ವೈಜನಾಥ ಪಾಟೀಲ್‌ರ ಭಾವಚಿತ್ರ ಮತ್ತು ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಎಂ‌.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ನೂರಾರು ಜನ ಸೇರಿ ಹೋರಾಟ ನಡೆಸಿದ್ದರು.‌ ಕೋರ್ಟ್ ಮಾರ್ಗವಾಗಿ ಪಟೇಲ್ ವೃತ್ತಕ್ಕೆ ಧ್ವಜಾರೋಹಣ ಮಾಡಲು ಬರುವಾಗ ಮಾರ್ಗ ಮಧ್ಯೆ ಅಡ್ಡಗಟ್ಟಿದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದರು. ಇದನ್ನೂ ಓದಿ: ಗಡಿಜಿಲ್ಲೆಯಲ್ಲಿ ಮಧ್ಯರಾತ್ರಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

    ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ 371 ಜೆ ವಿದೇಯಕ ಜಾರಿಗೊಳಿಸಿದ್ದರೂ ರಾಜಕೀಯ ಇಚ್ಛಾಶಕ್ತಿ ಕೊರತೆ, ರಾಜ್ಯ ಸರ್ಕಾರದ ಮಲತಾಯಿ ಧೋರಣೆಯಿಂದ ಈ ಭಾಗದ ಪ್ರತಿಯೊಂದು ಕ್ಷೇತ್ರಕ್ಕೂ ಅನ್ಯಾಯ ಮುಂದುವರಿದಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿಟ್ಟ ಹಣ ಪಕ್ಕದ ಜಿಲ್ಲೆಗಳಿಗೆ ಬಳಕೆ ಮಾಡಲಾಗ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

    ಉದ್ಯೊಗ ನೇಮಕಾತಿ, ಮೀಸಲಾತಿ, ಮುಂಬಡ್ತಿ ವಿಷಯದಲ್ಲಿ ಕಡೆಗಣನೆ ಮಾಡಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನದಲ್ಲಿಯೂ ಈ ಭಾಗಕ್ಕೆ ಅನ್ಯಾಯವಾಗಿದೆ. ಪದೇಪದೆ ಈ ಭಾಗಕ್ಕೆ ರಾಜ್ಯ ಸರ್ಕಾರ ದ್ರೋಹ ಬಗೆಯುತ್ತಿದೆ. ನಮ್ಮ ಭಾಗದ ಸಮಗ್ರ ಅಭಿವೃದ್ಧಿಗಾಗಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ 9ನೇ ರತ್ನ ಪುನೀತ್ ರಾಜ್ ಕುಮಾರ್

    Live Tv
    [brid partner=56869869 player=32851 video=960834 autoplay=true]

  • ಧ್ವಜಾರೋಹಣ ಮುಗಿಸಿ ಬರುವಷ್ಟರಲ್ಲಿ ಮನೆಯಲ್ಲಿ ಕಳ್ಳತನ – 45 ನಿಮಿಷದ ಗ್ಯಾಪ್‍ನಲ್ಲಿ ಖದೀಮರು ಎಸ್ಕೇಪ್

    ಧ್ವಜಾರೋಹಣ ಮುಗಿಸಿ ಬರುವಷ್ಟರಲ್ಲಿ ಮನೆಯಲ್ಲಿ ಕಳ್ಳತನ – 45 ನಿಮಿಷದ ಗ್ಯಾಪ್‍ನಲ್ಲಿ ಖದೀಮರು ಎಸ್ಕೇಪ್

    ಗದಗ: ಇಂದು ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಇತ್ತ ಎಲ್ಲರೂ ಧ್ವಜಾರೋಹಣಕ್ಕೆಂದು ಹೋಗಿದ್ದ ವೇಳೆ ಜಿಲ್ಲೆಯ ಮನೆಯೊಂದರಲ್ಲಿ ಹಾಡ ಹಗಲೇ ಕಳ್ಳತನ ನಡೆದಿದೆ.

    ನಗರದ ಸಿದ್ಧಲಿಂಗ ನಗರದ ಬಸವರಾಜ ರಾಯಪೂರ ಎಂಬುವರ ಮನೆಯಲ್ಲಿ ಹಾಡ ಹಗಲೇ ಕಳ್ಳತನವಾಗಿದೆ. ಮನೆಯ ದಂಪತಿ ಬೆಳಗ್ಗೆ 8 ಗಂಟೆ ನಂತರ ಪಕ್ಕದ ಬೀದಿಯ ಸಾರ್ವಜನಿಕ ಉದ್ಯಾನವನದಲ್ಲಿ ಧ್ವಜಾರೋಹಣಕ್ಕೆಂದು ಹೋಗಿದ್ದರು. ಧ್ವಜಾರೋಹಣ ಮುಗಿಸಿ 9 ಗಂಟೆ ಒಳಗೆ ವಾಪಾಸ್ ಬಂದಿದ್ದಾರೆ. ಆ 45 ನಿಮಿಷದ ಗ್ಯಾಪ್‍ನಲ್ಲಿ ಖದೀಮರು ಮನೆ ದೋಚಿ ಎಸ್ಕೇಪ್ ಆಗಿದ್ದಾರೆ. ಹಿಂದಿನ ಬಾಗಿಲಿನ ಕೊಂಡಿ ಮುರಿದು ಸುಮಾರು 5 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದೆ. ಇದನ್ನೂ ಓದಿ: ಯೋಧರಿಂದ್ಲೇ ಧ್ವಜಾರೋಹಣ ಮಾಡಿಸಿ ಸಂಭ್ರಮಿಸಿದ ಇಡೀ ಗ್ರಾಮ

    ಚಿನ್ನದ ಬಳೆ, ಮಾಂಗಲ್ಯ ಸರ, ಕಿವಿಯೋಲೆ, ಲಾಂಗ್ ಚೈನ್, ಉಂಗುರ ಹೀಗೆ ಅನೇಕ ಚಿನ್ನಾಭರಣಗಳನ್ನು ದೋಚಿದ್ದಾರೆ. ಬೆಳ್ಳಿಯ ಸಾಮಾನುಗಳನ್ನು ಮುಟ್ಟದೇ ಕೇವಲ ಬಂಗಾರ ಹಾಗೂ ಹಣ ಮಾತ್ರ ಕಳ್ಳತನವಾಗಿದೆ. ಮನೆಯ ಸಿ.ಸಿ ಕ್ಯಾಮೆರಾ ಆಫ್ ಆಗಿದೆ. ಧ್ವಜಾರೋಹಣ ಮುಗಿಸಿ 45 ನಿಮಿಷದಲ್ಲಿ ಮನೆಗೆ ಮರಳಿ ಬಂದು ನೋಡಿದಾಗ ಹಿಂದಿನ ಬಾಗಿಲು ತೆರದಿದ್ದು ನೋಡಿ ಶಾಕ್ ಆಗಿದೆ. ಬೆಡ್ ರೂಮ್, ಮಹಡಿ ಮನೆಯ ಬೆಡ್ ರೂಮ್ ಕಪಾಟು ತೆರದಿದ್ದು, ವಸ್ತುಗಳು ಚೆಲ್ಲಾಪಿಲ್ಲಿಯಾಗಿತ್ತು. ಸ್ಥಳಕ್ಕೆ ಶಹರ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಡ ಹಗಲೇ ನಗರದ ಹೃದಯ ಭಾಗದ ಮುಖ್ಯ ಬೀದಿಯ ಮನೆ ಕಳ್ಳತನ ಆಗಿರುವುದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ‍್ಯ ದಿನದಂದೇ ರೈತರ ಪ್ರತಿಭಟನೆ – ದರದರನೆ ಎಳೆದೊಯ್ದ ಪೊಲೀಸರು

    Live Tv

    [brid partner=56869869 player=32851 video=960834 autoplay=true]

  • ಧ್ವಜಾರೋಹಣ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ನಿವೃತ್ತ ಸೈನಿಕ

    ಧ್ವಜಾರೋಹಣ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ನಿವೃತ್ತ ಸೈನಿಕ

    ಮಂಗಳೂರು: ಧ್ವಜಾರೋಹಣ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

    ಗಂಗಾಧರ ಗೌಡ ಮೃತ ನಿವೃತ್ತ ಸೈನಿಕ. ಕಡಬದ ಕುಟ್ರುಪಾಡಿ ಗ್ರಾ.ಪಂನ ಸ್ವಾತಂತ್ರ್ಯ ಧ್ವಜಾರೋಹಣ ವೇಳೆ ಈ ಘಟನೆ ನಡೆದಿದೆ. ಧ್ವಜಾರೋಹಣಕ್ಕೆ ಸಿದ್ಧತೆ ನಡೆಸುತ್ತಿದ್ದಾಗ ಗಂಗಾಧರ ಗೌಡ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 5 ಹೊಸ ಯೋಜನೆಗಳನ್ನು ಘೋಷಣೆ ಮಾಡಿದ ಸಿಎಂ

    ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ನಿವೃತ್ತ ಸೈನಿಕ ಗಂಗಾಧರ್ ಕುಸಿದು ಬಿಳುತ್ತಿರುವ ದೃಶ್ಯ ಮೊಬೈಲ್‍ನಲ್ಲಿ ಸೆರೆ ಆಗಿದೆ. ಇದನ್ನೂ ಓದಿ: ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು- ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ

    Live Tv

  • ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಅಧಿಕೃತ ಆದೇಶ

    ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಅಧಿಕೃತ ಆದೇಶ

    ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಾದಿತ ಚಾಮರಾಜಪೇಟೆ ಆಟದ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ಮಾಡುವ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.

    ಸರ್ವೇ ನಂಬರ್ 40, ಗುಟ್ಟಹಳ್ಳಿ, ಚಾಮರಾಜಪೇಟೆ ಬಡಾವಣೆ ಸ್ವತ್ತಿನ ಸಂಖ್ಯೆ 147ರ ಆಟದ ಮೈದಾನದಲ್ಲಿ ಧ್ವಜಾರೋಹಣ ನೆರೆವೇರಿಸಲಾಗುವುದು ಎಂದು ಬೆಂಗಳೂರು ಉತ್ತರ ಉಪವಿಭಾಗದ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ಚಾಮರಾಜಪೇಟೆ ಮೈದಾನವನ್ನು ಈದ್ಗಾ ಮೈದಾನ ಎಂದು ಸರ್ಕಾರ ಎಲ್ಲಿಯೂ ಉಲ್ಲೇಖಿಸಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಶುರುವಾಯ್ತು ಹರ್ ಘರ್ ತಿರಂಗಾ ಹವಾ – ತಿರಂಗಾ ನಡೆಗೆ ಚಾಲನೆ ನೀಡಿದ ಪ್ರಹ್ಲಾದ್ ಜೋಶಿ

    ಪ್ರಸ್ತುತ ದಿನಗಳಲ್ಲಿ ಈದ್ಗಾ ಮೈದಾನ ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಮೈದಾನ ತಮಗೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ವಾದಿಸುತ್ತಿದೆ. ಆದರೆ ಇದು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಹೇಳುತ್ತಿದೆ.

    ಈದ್ಗಾ ಮೈದಾನ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಹಿಂದೂಪರ ಸಂಘಟನೆಗಳು, ಮೈದಾನದಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಪಟ್ಟು ಹಿಡಿದಿವೆ. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ ವೇಳೆಯೂ ಧ್ವಜಾರೋಹಣಕ್ಕೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇತ್ತ ಮುಸ್ಲಿಮರು ಕೂಡ ನಾವು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದ್ದರು. ಇದಕ್ಕೆ ಅವಕಾಶ ಕಲ್ಪಿಸಿದರೆ ಶಾಂತಿಭಂಗವಾಗುವ ಭೀತಿಯಿಂದಾಗಿ ಸರ್ಕಾರದ ನೇತೃತ್ವದಲ್ಲೇ ಧ್ವಜಾರೋಹಣ ನಡೆಸಲು ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯರಿಂದ ನಾವು ರಾಷ್ಟ್ರಭಕ್ತಿ ಪಾಠ ಕಲಿಯೋ ಅವಶ್ಯಕತೆ ಇಲ್ಲ: ಆರಗ ಜ್ಞಾನೇಂದ್ರ

    ವಿವಾದಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೋ ಮಾತೆ ಎಂಟ್ರಿ

    ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೋ ಮಾತೆ ಎಂಟ್ರಿ

    ಗದಗ: 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಆಕಳು ಪಾಲ್ಗೊಂಡು ನೆರೆದಿದ್ದ ಜನರನ್ನು ಆಶ್ಚರ್ಯಚಕಿತಗೊಳಿಸಿರುವ ಘಟನೆ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದಿದೆ.

    ಮುಳಗುಂದ ಪಟ್ಟಣದ ಗಾಂಧೀಜಿ ಕಟ್ಟೆ ಬಳಿ ಧ್ವಜಾರೋಹಣ ನಡೆಯುತ್ತಿತ್ತು. ಮುಳಗುಂದ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಪಟ್ಟಣ ಪಂಚಾಯತ್ ಅಧಿಕಾರಿ, ಸಿಬ್ಬಂದಿ ಹಾಗೂ ನೂರಾರು ಜನ ಸಾರ್ವಜನಿಕರು ಪಾಲ್ಗೊಂಡಿದ್ದರು. ಅವರ ಮಧ್ಯೆಯೇ ನುಗ್ಗಿ ಧ್ವಜದ ಗಾಂಧೀಜಿ ಕಟ್ಟೆಗೆ ಆಕಳು ಬಂದಿದೆ. ಅಲ್ಲಿದ್ದ ಜವರು ಈ ಆಕಳು ಓಡಿಸಲು ಎಷ್ಟೇ ಪ್ರಯತ್ನ ಪಟ್ಟರು ಅಲ್ಲಿಂದ ಕದಲಲಿಲ್ಲ. ಸುಮಾರು ಅರ್ಧ ಗಂಟೆ ಆಕಳು ಓಡಿಸಲು ನೆರೆದವರು ಹರಸಾಹಸ ಪಟ್ಟರು. ಆದರೂ ಗೋ ಮಾತೆ ಮಾತ್ರ ಧ್ವಜಾರೋಹಣ ಮುಗಿಯುವವರೆಗೂ ಅಲ್ಲಿಂದ ಹೋಗಲಿಲ್ಲ. ಇದನ್ನೂ ಓದಿ: ಹರಿದ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನಿಸಿದ ಕಾರವಾರದ ನೌಕಾದಳ

    ಗೋ ಮಾತೆ ಕೂಡಾ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರನ್ನು ಮಂತ್ರ ಮುಗ್ಧರನ್ನಾಗಿಸಿತು. ನೆರೆದವರನ್ನು ಗೋವಿನ ದೇಶ ಭಕ್ತಿ ಕಂಡು ಆಶ್ಚರ್ಯಚಕಿತರನ್ನಾಗಿ ಮಾಡಿತು. ನಂತರ ಎಲ್ಲರೂ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸುವುದರ ಜೊತೆಗೆ ಗೋವಿಗೆ ನಮಸ್ಕರಿಸಿ ಹೊರಟರು.

  • ಹರಿದ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನಿಸಿದ ಕಾರವಾರದ ನೌಕಾದಳ

    ಹರಿದ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನಿಸಿದ ಕಾರವಾರದ ನೌಕಾದಳ

    ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾರವಾರ ಕದಂಬ ನೌಕಾದಳವು ನಿರ್ಬಂಧಿತ ಅಂಜುದೀವ್ ನಲ್ಲಿ ಹಾರಿಸಿದ್ದ ಧ್ವಜವು ಹರಿದುಹೋಗಿದ್ದರೂ ಗಮನಿಸದೇ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ನೌಕಾದಳವು ರಾಷ್ಟ್ರಧ್ವಜಕ್ಕೆ ಅವಮಾನಿಸಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಅಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಇದೇ ಮೊದಲ ಬಾರಿಗೆ ಪೋರ್ಚುಗೀಸರಿಂದ ಸ್ವತಂತ್ರ್ಯ ಬಂದ ನಂತರ ವಶಪಡಿಸಿಕೊಂಡಿದ್ದ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿ ಕರ್ನಾಟಕ ನೌಕಾ ವಲಯದ ಪ್ಲಾಗ್ ಆಫೀಸರ್ ಮಹೇಶ್ ಸಿಂಗ್ ರಿಂದ ಶನಿವಾರ ಧ್ವಜಾರೋಹಣ ನೆರವೇರಿತ್ತು. ಆದರೆ ಧ್ವಜದ ಕೆಳಭಾಗದ ಹಸಿರು ಪಟ್ಟಿಯಲ್ಲಿ ಹರಿದು ರಂದ್ರವಾಗಿತ್ತು. ಇದನ್ನು ಗಮನಿಸದ ನೌಕಾದಳವು ಹಾಗೆಯೇ ಧ್ವಜವನ್ನು ಹಾರಿಸಿದ್ದು, ಹರಿದಿದ್ದನ್ನು ಗಮನಿಸದೇ ಇಂದೂ ಕೂಡ ದ್ವೀಪದಲ್ಲಿ ಹಾರಾಡಿದೆ. ಭಾರತೀಯ ಧ್ವಜ ನೀತಿ ಸಂಹಿತೆಗೆ ದೇಶದ ಅತ್ಯುನ್ನತ ಸಂಸ್ಥೆ ಅಗೌರವ ತೋರುವ ಮೂಲಕ ಧ್ವಜಕ್ಕೆ ಅವಮಾನ ಮಾಡಿದೆ.

    ಪೋರ್ಚುಗೀಸರ ವಶದಲ್ಲಿದ್ದ ಅಂಜು ದೀವ್
    ವಾಸ್ಕೋಡಿಗಾಮ ಮೊದಲು ಈ ಭಾಗದಲ್ಲಿ ನೆಲೆ ನಿಂತಿದ್ದ ದ್ವೀಪ ಇದಾಗಿದ್ದು, ಇಲ್ಲಿ ಪೋರ್ಚುಗೀಸರು ಸ್ವತಂತ್ರ ಪೂರ್ವದಲ್ಲಿ ತಮ್ಮ ವಸಾಹತುವನ್ನು ಸ್ಥಾಪಿಸಿದ್ದರು. ಕಾರವಾರ ತಾಲೂಕಿಗೆ ಅತೀ ಸಮೀಪವಾಗಿದ್ದರೂ ಸ್ವಾತಂತ್ರ್ಯದ ನಂತರ ಪೋರ್ಚುಗೀಸರಿಂದ ಭಾರತ ಸರ್ಕಾರ ವಶಪಡಿಸಿಕೊಂಡಿದ್ದರಿಂದ ಈ ಭಾಗವು ಗೋವಾ ರಾಜ್ಯಕ್ಕೆ ಸೇರುತ್ತದೆ. ಹಿಂದೆ ಈ ದ್ವೀಪಕ್ಕಾಗಿ ಪೋರ್ಚುಗೀಸರು, ಬ್ರಿಟೀಷರು, ಮರಾಠಿ ಹಾಗೂ ಟಿಪ್ಪು ಸುಲ್ತಾನ್ ಸಹ ಯುದ್ಧ ಮಾಡಿರುವ ಇತಿಹಾಸ ವಿದೆ.

    ಗೋವಾವನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದ ಪೋರ್ಚುಗೀಸರು, ನಂತರ ಸ್ವಾತಂತ್ರ್ಯ ಬಂದರೂ ಈ ಪ್ರದೇಶವನ್ನು ಬಿಟ್ಟುಕೊಟ್ಟಿರಲಿಲ್ಲ. ಬಳಿಕ ಭಾರತ ಸರ್ಕಾರವು ಪೋರ್ಚುಗೀಸರ ಜೊತೆ ಯುದ್ಧ ಮಾಡಿ ವಶಪಡಿಸಿಕೊಂಡಿತ್ತು. 1960 ರಲ್ಲಿ ಇದು ಭಾರತಕ್ಕೆ ಸೇರ್ಪಡೆಗೊಂಡ ದ್ವೀಪವಾಯಿತು. ಇಂದಿರಾ ಗಾಂಧಿ ಸರ್ಕಾರದ ಸಂದರ್ಭದಲ್ಲಿ ಕಾರವಾರದಲ್ಲಿ ಕದಂಬ ನೌಕಾನೆಲೆ ಸ್ಥಾಪನೆಯಾದ ನಂತರ ಈ ದ್ವೀಪದವರೆಗೆ ಬ್ರೇಕ್ ವಾಟರ್ ಅನ್ನು ನಿರ್ಮಾಣ ಮಾಡಲಾಗಿದ್ದು, ಈ ಪ್ರದೇಶಕ್ಕೆ ತೆರಳಲು ನಿರ್ಬಂಧವಿದೆ.