Tag: ಧ್ವನಿವರ್ಧಕಗಳು

  • ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ದ ನಿಯಂತ್ರಣಕ್ಕೆ ಕ್ರಮ: ಯೋಗಿ ಆದಿತ್ಯನಾಥ್‌

    ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ದ ನಿಯಂತ್ರಣಕ್ಕೆ ಕ್ರಮ: ಯೋಗಿ ಆದಿತ್ಯನಾಥ್‌

    ಲಕ್ನೋ: ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಲಾದ ಧ್ವನಿವರ್ಧಕಗಳಿಗೆ ಶಾಶ್ವತ ಶಬ್ದ ನಿಯಂತ್ರಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿಳಿಸಿದ್ದಾರೆ.

    ಸರ್ಕ್ಯೂಟ್ ಹೌಸ್‌ನಲ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸುತ್ತಾ, ಹೋಳಿ ಆಚರಣೆಯ ಸಮಯದಲ್ಲಿ ಹೆಚ್ಚಿನ ಪ್ರಮಾಣದ ಡಿಜೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ನನಗೆ 7ರಿಂದ 8 ಭಾಷೆಗಳು ಗೊತ್ತು: ತ್ರಿಭಾಷಾ ಸೂತ್ರಕ್ಕೆ ಸುಧಾ ಮೂರ್ತಿ ಬೆಂಬಲ

    mosque-loudspeakers

    ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು, ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಂತಹ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ದನಗಳ ಕಳ್ಳಸಾಗಣೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ಸಿಎಂ ಆದೇಶಿಸಿದ್ದಾರೆ. ಕಳ್ಳಸಾಗಾಣಿಕೆದಾರರು, ವಾಹನ ಮಾಲೀಕರು ಮತ್ತು ಯಾವುದೇ ಸಹಾಯಕ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಯಾರಾದ್ರೂ ಬಣ್ಣ ಹಚ್ಚಿದ್ರೆ ʻಹೋಳಿ ಮುಬಾರಕ್ʼ ಹೇಳಿ – ಮುಸ್ಲಿಮರಿಗೆ ಅಯೋಧ್ಯೆಯ ಮೌಲ್ವಿ ಸಲಹೆ

    ರಾಜ್ಯದಲ್ಲಿ ಜಾನುವಾರು ಕಳ್ಳಸಾಗಣೆ ಮೇಲಿನ ಸಂಪೂರ್ಣ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾವಾರು ಪರಿಶೀಲನೆಗಳನ್ನು ನಡೆಸುವಂತೆ ವಲಯದ ಎಡಿಜಿ ಪಿಯೂಷ್ ಮೊರ್ಡಿಯಾ ಅವರಿಗೆ ಸಿಎಂ ನಿರ್ದೇಶಿಸಿದ್ದಾರೆ.

    ಅಭಿವೃದ್ಧಿ ಯೋಜನೆಗಳನ್ನು ಚುರುಕುಗೊಳಿಸುವುದು, ವಿಳಂಬದ ವಿರುದ್ಧ ಎಚ್ಚರಿಕೆ ನೀಡುವುದು ಮತ್ತು ನಿರ್ಮಾಣ ಹಂತದಲ್ಲಿರುವ ಪ್ರತಿಯೊಂದು ಯೋಜನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲು, ಸಾಪ್ತಾಹಿಕ ತಪಾಸಣೆ ನಡೆಸಲು ಮತ್ತು ಪ್ರಗತಿ ವರದಿಗಳನ್ನು ಸಲ್ಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದರತ್ತ ಗಮನಹರಿಸಿದ್ದಾರೆ.

  • ಧ್ವನಿವರ್ಧಕ ನಿಯಮ ಉಲ್ಲಂಘನೆಯಾದ್ರೆ ಸಮಿತಿಯಲ್ಲಿರುವವರ ವಿರುದ್ಧ ಕ್ರಮ: ಆನಂದ್ ಸಿಂಗ್

    ಧ್ವನಿವರ್ಧಕ ನಿಯಮ ಉಲ್ಲಂಘನೆಯಾದ್ರೆ ಸಮಿತಿಯಲ್ಲಿರುವವರ ವಿರುದ್ಧ ಕ್ರಮ: ಆನಂದ್ ಸಿಂಗ್

    ಬೆಂಗಳೂರು: ಎಲ್ಲ ಧಾರ್ಮಿಕ ಕೇಂದ್ರಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆಯಬೇಕು. ಇಲ್ಲದಿದ್ದರೆ ಮಸೀದಿ, ದೇವಸ್ಥಾನ, ಚರ್ಚ್ ಸದಸ್ಯರ ಮೇಲೆಯೇ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

    ಧ್ವನಿವರ್ಧಕಗಳಿಗೆ ನಿಯಮ ವಿಚಾರವಾಗಿ ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಜೊತೆ ಸಭೆ ಆಗಿದೆ. ಧ್ವನಿವರ್ಧಕಗಳ ಬಳಕೆ ಬಗ್ಗೆ ಮೊದಲಿನಿಂದಲೂ ನಿಯಮಗಳಿವೆ. ಆದರೆ ಆ ನಿಯಮಗಳ ಪಾಲನೆ ಆಗುತ್ತಿಲ್ಲ ಎನ್ನುವ ಆರೋಪವೂ ಇದೆ. ಸುಪ್ರೀಂಕೋರ್ಟ್ ಈ ಸಂಬಂಧ ಆದೇಶಗಳನ್ನು ಮಾಡಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿಯಮ ಜಾರಿ ಕೆಲಸ ಆಗುತ್ತಿದೆ. ಎಲ್ಲ ಧಾರ್ಮಿಕ ಕೇಂದ್ರಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆದು, ನಿಯಮ ಪಾಲನೆ ಮಾಡಬೇಕು. ನಿಯಮ ಪಾಲಿಸದಿದ್ದರೆ, ಸ್ಥಳೀಯರು ದೂರು ಕೊಟ್ಟರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಕೈಗಾರಿಕೆ ಪ್ರದೇಶಗಳಲ್ಲಿ ಹಗಲಿನಲ್ಲಿ 75 ಡೆಸಿಬಲ್, ರಾತ್ರಿ ವೇಳೆ 70 ಡೆಸಿಬಲ್ ಇರಬೇಕು. ಕಮರ್ಷಿಯಲ್ ಪ್ರದೇಶಗಳಲ್ಲಿ ಹಗಲು 65 ಡೆಸಿಬಲ್, ರಾತ್ರಿ 60 ಡೆಸಿಬಲ್ ಇರಬೇಕು. ಜನವಸತಿ ಪ್ರದೇಶಗಳಲ್ಲಿ ಹಗಲು 55 ಡೆಸಿಬಲ್, ರಾತ್ರಿ 50 ಡೆಸಿಬಲ್ ಇರಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಫ್ಲೋಟಿಂಗ್ ಬ್ರಿಡ್ಜ್ ಮುರಿಯಲು ತಾಂತ್ರಿಕ ಕಾರಣ ಇರಬೇಕು: ಆನಂದ್ ಸಿಂಗ್

    loudspeakers

    ಇದೇ ವೇಳೆ ಬೆಳಗ್ಗೆ 6 ಗಂಟೆಗೂ ಮುಂಚೆಯೇ ನಮಾಜ್ ಮಾಡಲು ಆಜಾನ್ ಮೈಕ್ ಬಳಸಿರುವ ಬಗ್ಗೆ ವಿರೋಧ ವ್ಯಕ್ತವಾಗಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಸುಪ್ರೀಂಕೋರ್ಟ್ ಆದೇಶ ಪ್ರಕಾರ ನಿಯಮ ಉಲ್ಲಂಘನೆಯಾಗಿದೆ. ಇದರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ. ಆ ಹೊತ್ತಿನಲ್ಲಿ ಧ್ವನಿ ವರ್ಧಕಗಳ ಬಳಕೆಗೆ ಅವಕಾಶ ಇಲ್ಲ ಎಂದರು. ಇದನ್ನೂ ಓದಿ: ಅಸನಿ ಚಂಡಮಾರುತದ ಎಫೆಕ್ಟ್ – ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಳೆ

    ದೇವಸ್ಥಾನ, ಚರ್ಚ್, ಮಸೀದಿ ಗಳ ಕಮಿಟಿ ಯಾರು ಇರುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಶಬ್ದ ಮಾಲಿನ್ಯ ಸೆಕ್ಷನ್ ಮೇಲೆ ಕೇಸ್ ದಾಖಲಿಸಲಾಗುತ್ತದೆ. ಯುಪಿ ಮಾದರಿ ಅಲ್ಲ ಇಡೀ ದೇಶಕ್ಕೆ ಇರುವ ಕಾನೂನು ಜಾರಿ ಮಾಡಲಾಗುತ್ತದೆ. ಸಿಎಂ ಯುಪಿ ಮಾದರಿ ಅಂತ ಹೇಳಿದ್ದಾರೆ. ಎಲ್ಲರಿಗೂ ಸೂಚನೆ ಕೊಟ್ಟಿದ್ದಾರೆ. ಒಂದು ವಾರ 10 ದಿನಗಳಲ್ಲಿ ಈ ವಿಚಾರವಾಗಿ ನಿಯಮ ಜಾರಿ ಮಾಡುತ್ತೇವೆ. ಗೃಹ ಇಲಾಖೆಗೆ ಈ ಬಗ್ಗೆ ಜವಾಬ್ದಾರಿ ಇದೆ. ನಾವು ಮಾಹಿತಿ ನೀಡುತ್ತೇವೆ. ಗೃಹ ಇಲಾಖೆ ಸಹಕಾರ ಕೊಡುತ್ತವೆ ಎಂದು ಸ್ಪಷ್ಟನೆ ನೀಡಿದರು.